Tag: crime

  • ಉಜ್ಜಯಿನಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ಐವರು ಅರೆಸ್ಟ್

    ಭೋಪಾಲ್: ಉಜ್ಜಯಿನಿಯ (Ujjain) 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆಟೋ ಚಾಲಕ ಸೇರಿದಂತೆ ಐವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಶಂಕಿತರ ವಿಚಾರಣೆ ನಡೆಸಲಾಗುತ್ತಿದೆ ಎಂದು ಉಜ್ಜಯಿನಿಯ ಎಸ್‍ಪಿ ಸಚಿನ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಬಾಲಕಿ ಸತ್ನಾದಿಂದ ಬಂದಿದ್ದಾಳೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಪೋಷಕರನ್ನು ಗುರುತಿಸಲಾಗಿದೆ. ಅತ್ಯಾಚಾರದ ಬಳಿಕ ಬಾಲಕಿ ಸಹಾಯಕ್ಕಾಗಿ 8 ಕಿಲೋಮೀಟರ್ ದೂರ ನಡೆದಿದ್ದಾಳೆ ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದು ಬಂದಿದೆ. ಅಲ್ಲದೇ ಆಕೆ ಸಹಾಯಕ್ಕಾಗಿ ಮನೆ ಮನೆಗೆ ತೆರಳುತ್ತಿರುವುದು, ಈ ವೇಳೆ ವ್ಯಕ್ತಿಯೊಬ್ಬ ಆಕೆಯನ್ನು ಓಡಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

    ಮಧ್ಯಪ್ರದೇಶದ (Madhya Pradesh) ಉಜ್ಜಯಿನಿ ನಗರದಲ್ಲಿ ಅತ್ಯಾಚಾರಕ್ಕೊಳಗಾಗಿ ತೀವ್ರ ರಕ್ತಸ್ರಾವದಿಂದ ಬಾಲಕಿ ಸಹಾಯಕ್ಕಾಗಿ ರಸ್ತೆಯಲ್ಲಿ ಓಡಾಡಿದ್ದಳು. ಬಳಿಕ ಆಕೆಯನ್ನು ಆಶ್ರಮವೊಂದರ ಅರ್ಚಕರು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ತಜ್ಞ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನೀಡಿತ್ತು. ವೈದ್ಯರು ಆಕೆಯ ಸ್ಥಿತಿ ಗಂಭೀರವಾಗಿದೆ ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ.

    ಭಾರೀ ಜನಾಕ್ರೋಶದ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾರೆ ಕೆಲಸಕ್ಕೆ ಬಂದಿದ್ದ ಯುವಕನ ಬರ್ಬರ ಹತ್ಯೆ

    ಗಾರೆ ಕೆಲಸಕ್ಕೆ ಬಂದಿದ್ದ ಯುವಕನ ಬರ್ಬರ ಹತ್ಯೆ

    ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ (Murder) ಪ್ರಕರಣ ನಗರದ (Hubballi) ಸಿಲ್ವರ್ ಟೌನ್‍ನಲ್ಲಿ ನಡೆದಿದೆ.

    ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿ

    ಈ ಸಂಬಂಧ ಗೋಕುಲ ರಸ್ತೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂತ್ರ ವಿಸರ್ಜನೆ ವಿಚಾರಕ್ಕೆ ಗಲಾಟೆ – ಕೊಲೆಯಲ್ಲಿ ಅಂತ್ಯ!

    ಮೂತ್ರ ವಿಸರ್ಜನೆ ವಿಚಾರಕ್ಕೆ ಗಲಾಟೆ – ಕೊಲೆಯಲ್ಲಿ ಅಂತ್ಯ!

    ಕೋಲಾರ: ಸಂತೆ ಮೈದಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ ವಿಚಾರವಾಗಿ ಇಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ (Murder) ಅಂತ್ಯಗೊಂಡಿದೆ.

    ಮೃತಪಟ್ಟ ವ್ಯಕ್ತಿಯನ್ನು ವೆಂಕಟರಾಯಪ್ಪ (55) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಶಂಕರಪ್ಪ ಎಂದು ತಿಳಿದು ಬಂದಿದೆ. ಇವರಿಬ್ಬರ ನಡುವೆ ಶ್ರೀನಿವಾಸಪುರದ ಗೌನಿಪಲ್ಲಿ ಗ್ರಾಮದ ಸಂತೆ ಮೈದಾನದಲ್ಲಿ ಗಲಾಟೆ ನಡೆದಿತ್ತು. ಇವರಿಬ್ಬರನ್ನು ಸ್ಥಳೀಯರು ಸಮಾಧಾನ ಮಾಡಿ ಕಳಿಸಿದ್ದರು. ಇದನ್ನೂ ಓದಿ: ವಿದೇಶಿ ಮಹಿಳೆಯ ಬ್ಯಾಗ್‍ನಲ್ಲಿ ಲಕ್ಷ ಲಕ್ಷ ಹಣ ಪತ್ತೆ!

    ನಂತರ ಪುನಃ ಆರೋಪಿ ಶಂಕರಪ್ಪ, ವೆಂಕಟರಾಯಪ್ಪನ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾನೆ. ಈ ವೇಳೆ ತೀವ್ರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೃತನ ಮಗ ಮನೋಹರ್ ಆರೋಪಿಸಿದ್ದಾನೆ.

    ಗೌನಿಪಲ್ಲಿ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಚುನಾವಣಾಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬ್ಯಾಲೆಟ್ ಪೇಪರ್ ದೋಚಿದ ಕಿಡಿಗೇಡಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

    ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

    ಭೋಪಾಲ್: ಅತ್ಯಾಚಾರದ ಬಳಿಕ ತೀವ್ರ ರಕ್ತಸ್ರಾವದಿಂದ 12 ವರ್ಷದ ಬಾಲಕಿ ಸಹಾಯಕ್ಕಾಗಿ ಅರೆಬೆತ್ತಲಾಗಿ ಮನೆಯಿಂದ ಮನೆಗೆ ಅಲೆದಾಡಿದ ಪ್ರಕರಣ ಉಜ್ಜಯಿನಿಯಲ್ಲಿ (Ujjain) ನಡೆದಿದೆ. ಈ ವೇಳೆ ಸಂತ್ರಸ್ತೆಯನ್ನು ನೋಡಿದ ಜನ ಸಹಾಯ ಮಾಡದೆ ನಿರಾಕರಿಸಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬಳಿಕ ಬಾಲಕಿ ಆಶ್ರಮ ಒಂದಕ್ಕೆ ತೆರಳಿದ್ದಾಳೆ. ಅಲ್ಲಿನ ಅರ್ಚಕರೊಬ್ಬರು ಆಕೆಗೆ ಬಟ್ಟಿ ನೀಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಾಲಕಿಯನ್ನು ಇಂದೋರ್‌ಗೆ ರವಾನಿಸಲಾಗಿದೆ. ಆಕೆಗೆ ರಕ್ತದ ಅವಶ್ಯಕತೆ ಇದ್ದು, ಪೊಲೀಸ್ (Police) ಸಿಬ್ಬಂದಿ ರಕ್ತದಾನ ಮಾಡಿದ್ದಾರೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಸಂಬಂಧ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ಬಾಲಕಿ ಮಾತನಾಡುವ ಆಧಾರದ ಮೇಲೆ ಆಕೆಯನ್ನು ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನವಳೆಂದು ಅಂದಾಜಿಸಲಾಗಿದೆ ಎಂದು ಉಜ್ಜಯಿನಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿನ್ನದಂಗಡಿ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಆಭರಣ ದರೋಡೆ

    ಚಿನ್ನದಂಗಡಿ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಆಭರಣ ದರೋಡೆ

    ನವದೆಹಲಿ: ಚಿನ್ನದಂಗಡಿ ಒಂದರ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಚಿನ್ನಾಭರಣ (Jewellery) ದೋಚಿದ ಪ್ರಕರಣ ದೆಹಲಿಯ (Delhi) ಭೋಗಲ್ ಪ್ರದೇಶದಲ್ಲಿ ನಡೆದಿದೆ.

    ಸಂಜೀವ್ ಜೈನ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನವಾಗಿದೆ. ಅವರು ಎರಡು ದಿನಗಳಿಂದ ಅಂಗಡಿ ಮುಚ್ಚಿದ್ದರು. ಇಂದು (ಮಂಗಳವಾರ) ಅಂಗಡಿ ತೆರೆದಾಗ ಇಡೀ ಅಂಗಡಿಯಲ್ಲಿ ಧೂಳು ತುಂಬಿತ್ತು. ಅಲ್ಲದೇ ಸಿಸಿ ಕ್ಯಾಮೆರಾಗಳಿಗೆ ಹಾನಿ ಮಾಡಲಾಗಿತ್ತು. ಬಳಿಕ ಅಂಡಿಯನ್ನು ಪರೀಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಸಂಜೀವ್ ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ ಕುತ್ತಿಗೆಗೆ 30 ಬಾರಿ ಚುಚ್ಚಿ, ಕಬ್ಬಿಣದ ಬಾಣಲೆಯಲ್ಲಿ ಹೊಡೆದು ಕೊಂದ ಪಾಪಿ ಮಗಳು!

    ಸ್ಟ್ರಾಂಗ್ ರೂಮ್‍ನ ಗೋಡೆಯಲ್ಲಿ ರಂಧ್ರ ಕೊರೆದಿದ್ದಾರೆ. ಬಳಿಕ ಟೆರೇಸ್ ಮೂಲಕ ಬಂದು ಸಿಸಿಟಿವಿಗಳಿಗೆ ಹಾನಿಮಾಡಿದ್ದಾರೆ. ಬಳಿಕ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿದ್ದಾರೆ.

    ಈ ಪ್ರಕರಣದ ಬಗ್ಗೆ ಮಾತನಾಡಿರುವ ಡಿಸಿಪಿ ರಾಜೇಶ್ ಡಿಯೋ, ಪ್ರಕರಣದ ತನಿಖೆ ನಡೆಯುತ್ತಿದೆ. ಅಂಗಡಿಯನ್ನು ಎರಡು ದಿನ ಮುಚ್ಚುವ ವಿಚಾರ ತಿಳಿದವರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ – ಹೋಟೆಲ್ ತೆರೆದಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ – ವರದಕ್ಷಿಣೆಗೆ ಕೊಲೆ ಆರೋಪ

    ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ – ವರದಕ್ಷಿಣೆಗೆ ಕೊಲೆ ಆರೋಪ

    ಹುಬ್ಬಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದೆ.

    ಗೃಹಿಣಿ ಸುಮಂಗಲಾ ತಿಪ್ಪಣ್ಣವರ್ ಮೃತಪಟ್ಟವರು. ಗಂಡನ ಮನೆಯಲ್ಲಿ ಮಹಿಳೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂದು ಪತಿ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಟರ್ಪಾಲ್ ಶೆಡ್‍ನಲ್ಲಿ ವಾಸಿಸುವ ಒಂಟಿ ಮಹಿಳೆಗೆ ನೋಟಿಸ್

    ಕಳೆದ 5 ವರ್ಷಗಳ‌ ಹಿಂದೆ ಪ್ರವೀಣ್ ತಿಪ್ಪಣ್ಣವರ್ ಎಂಬವರಿಗೆ ಸುಮಂಗಲಾ ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆ ಮಾಡಿಕೊಟ್ಟರೂ ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿತ್ತು.

    ಸುಮಂಗಲಾ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ. ಸುಮಂಗಲಾ ಸಾವಿನ ಬೆನ್ನಲ್ಲೇ ಪತಿ ಪ್ರವೀಣ್ ಹಾಗೂ‌ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ‌ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ – ಪತಿ ನಾಪತ್ತೆ

    ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಟ್ಸಪ್ ಗ್ರೂಪ್‍ನಲ್ಲೇ ದರೋಡೆಗೆ ಪ್ಲಾನ್- ಡಿಫರೆಂಟ್ ಗ್ಯಾಂಗ್ ಅರೆಸ್ಟ್

    ವಾಟ್ಸಪ್ ಗ್ರೂಪ್‍ನಲ್ಲೇ ದರೋಡೆಗೆ ಪ್ಲಾನ್- ಡಿಫರೆಂಟ್ ಗ್ಯಾಂಗ್ ಅರೆಸ್ಟ್

    ಬೆಳಗಾವಿ: ವಾಟ್ಸಪ್ ಗ್ರೂಪ್ ಮಾಡಿಕೊಂಡು ಅದರಲ್ಲೇ ಚರ್ಚಿಸಿ ನಂತರ ದರೋಡೆಗೆ ಇಳಿಯುತ್ತಿದ್ದ 9 ಜನರ ಗ್ಯಾಂಗ್ ಒಂದನ್ನು ಗೋಕಾಕ್ (Gokak) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೊಪಿಗಳನ್ನು ದುರ್ಗಪ್ಪ ವಡ್ಡರ್, ನಾಗಪ್ಪ ಮಾದರ್, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪೂಜೇರಿ, ರಾಮಸಿದ್ದ ತಸ್ಪಿ, ಬೀರಸಿದ್ದ ಗುಂಡಿ, ಉದ್ದಪ್ಪ ಖಿಲಾರಿ, ಪರಶುರಾಮ್ ಗೊಂದಳಿ, ಆಕಾಶ ತಳವಾರ ಎಂದು ಗುರುತಿಸಲಾಗಿದೆ. ಗೋಕಾಕ್ ಶಹರ, ಗೋಕಾಕ್ ಗ್ರಾಮೀಣ ಹಾಗೂ ಅಂಕಲಗಿ ಪೊಲೀಸ್ ಠಾಣೆಗಳಲ್ಲಿನ ಒಟ್ಟು 9 ವಿವಿಧ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

    ಆರೋಪಿಗಳು ಬೆನಚಿನಮರಡಿ ಗ್ಯಾಂಗ್ ಹಾಗೂ ಎಸ್‍ಪಿ ಗ್ಯಾಂಗ್ ಎಂಬ ಹೆಸರಿನಲ್ಲಿ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಬಂಧಿತರಲ್ಲಿ ಬೆನಚಿನಮರಡಿ ಗ್ಯಾಂಗ್‍ನ 7 ಹಾಗೂ ಎಸ್ಪಿ ಗ್ಯಾಂಗ್‍ನ 2 ಜನ ಆರೋಪಿಗಳು ಸೇರಿದ್ದಾರೆ.

    ಬಂಧಿತರಿಂದ ಚಿನ್ನಾಭರಣ, ದ್ವಿಚಕ್ರವಾಹನ ಸೇರಿದಂತೆ 7,89,700 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವ್ಯಕ್ತಿಯ ಮೇಲೆ ಹಲ್ಲೆ ನಡೆಯುತ್ತಿದ್ದಾಗಲೇ ಎಂಟ್ರಿ ಕೊಟ್ಟ ಎಸ್ಪಿ- ಭಾರೀ ಮೆಚ್ಚುಗೆ

    ವ್ಯಕ್ತಿಯ ಮೇಲೆ ಹಲ್ಲೆ ನಡೆಯುತ್ತಿದ್ದಾಗಲೇ ಎಂಟ್ರಿ ಕೊಟ್ಟ ಎಸ್ಪಿ- ಭಾರೀ ಮೆಚ್ಚುಗೆ

    ಬೀದರ್: ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಯುತ್ತಿದ್ದ ವೇಳೆಯೇ ಎಸ್ಪಿ ಎಂಟ್ರಿ ಕೊಟ್ಟು ಆರೋಪಿಗಳನ್ನು ಅರೆಸ್ಟ್ ಮಾಡಿದ ಘಟನೆ ಬೀದರ್‌ನ ಕೌಠಾ ಗ್ರಾಮದ ಬಳಿ ನಡೆದಿದೆ.

    ವೈಯಕ್ತಿಕ ವಿಚಾರಕ್ಕೆ ಮಲ್ಲಿಕಾರ್ಜುನ ಹಾಗೂ ಮತ್ತೋರ್ವ ಆರೋಪಿ ಸೇರಿಕೊಂಡು ಸೂರ್ಯಕಾಂತ್ ಎಂಬವನ ಮೇಲೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡುತ್ತಿದ್ದರು. ಇದೇ ವೇಳೆ ಬೀದರ್‌ನಿಂದ (Bidar) ಔರಾದ್‍ಗೆ ತೆರಳುತ್ತಿದ್ದ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಇದನ್ನು ಗಮನಿಸಿದ್ದಾರೆ. ಕೂಡಲೇ ಕಾರಿನಿಂದ ಇಳಿದು ಗಲಾಟೆ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

    ಹೊಡೆದಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕ ವೀಡಿಯೋ `ಪಬ್ಲಿಕ್ ಟಿವಿ’ಗೆ ದೊರೆತಿದೆ. ಎಸ್ಪಿ ಸಮಯ ಪ್ರಜ್ಞೆಯಿಂದ ಒಂದು ಜೀವ ಉಳಿದಿದೆ ಎಂದು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    ನವದೆಹಲಿ: ಕಮಿಷನ್ ಏಜೆಂಟ್‍ನಿಂದ ಸಾಲವಾಗಿ (Loan) ಪಡೆದ 3,000 ರೂ. ಮರುಪಾವತಿಸದ ವ್ಯಕ್ತಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣ ನೋಯ್ಡಾದಲ್ಲಿ (Noida) ನಡೆದಿದೆ.

    ತಿಂಗಳ ಹಿಂದೆ ಕಮಿಷನ್ ಏಜೆಂಟ್ ಸುಂದರ್ ಎಂಬಾತನಿಂದ ವ್ಯಾಪಾರಿಯೊಬ್ಬ 5,600 ರೂ. ಸಾಲ ಪಡೆದಿದ್ದ. ಬಳಿಕ 2,500 ರೂ. ಹಿಂದಿರುಗಿಸಿದ್ದು, ಉಳಿದ ಮೊತ್ತವನ್ನು ಮರುಪಾವತಿಸಲು ಸ್ವಲ್ಪ ಸಮಯ ಕೇಳಿದ್ದ. ಆದರೆ ನಿಗದಿತ ಸಮಯದಲ್ಲಿ ಸಾಲ ಮರುಪಾವತಿಸದ ಕಾರಣ ಏಜೆಂಟರ್ ಹಾಗೂ ಆತನ ಸಹಾಯಕರು ಸೇರಿ ವ್ಯಾಪಾರಿಯ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಆತನನ್ನು ಬೆತ್ತಲೆ ಮೆರವಣಿಗೆ ಮಾಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್ ಮ್ಯಾನೇಜರ್‌ಗೆ ಬೆದರಿಸಿ 5.6 ಕೋಟಿ ರೂ. ಲೂಟಿ

    ಈ ಆಘಾತಕಾರಿ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

    ವೀಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ವೀಡಿಯೋ ಶೇರ್ ಮಾಡುವವರ ವಿರುದ್ಧ ಸಹ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

    ಪ್ರಕರಣ ಸಂಬಂಧ ಏಜೆಂಟರ್ ಸುಂದರ್ ಹಾಗೂ ಮತ್ತೋರ್ವ ಆರೋಪಿ ಭಗಂದಾಸ್‍ನನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಬ್ ಇನ್ಸ್‌ಪೆಕ್ಟರ್‌ನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ- ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಸಬ್ ಇನ್ಸ್‌ಪೆಕ್ಟರ್‌ನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ- ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಲಕ್ನೋ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಸಬ್ ಇನ್ಸ್‌ಪೆಕ್ಟರ್‌ನನ್ನು  ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಬಳಿಕ ಆತನನ್ನು ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಗ್ರಾಮಸ್ಥರು ಸಬ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿದಾಡುತ್ತಿರುವ ವೀಡಿಯೋದಲ್ಲಿ ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಘಟನೆ ನಡೆದ ಬಳಿಕ ಆಗ್ರಾದ ಪೊಲೀಸ್ ಆಯುಕ್ತರು, ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೇ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾ ಗಂಭೀರ ಆರೋಪ

    ಘಟನೆ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಲ್ಲದೇ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಆದರೆ ಆರೋಪಿ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾನೆ. ಪ್ರಕರಣವೊಂದರ ತನಿಖೆಗೆ ತೆರಳಿದ್ದಾಗ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ.

    ಆರೋಪಿ ಎರಡು ವರ್ಷಗಳ ಹಿಂದೆಯಷ್ಟೇ ಪೊಲೀಸ್ ಇಲಾಖೆಗೆ ಸೇರಿದ್ದ ಎಂದು ತಿಳಿದು ಬಂದಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ