Tag: crime

  • ಪತ್ನಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ!

    ಪತ್ನಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ!

    ಜೈಪುರ್: ಮಹಿಳೆಯೊಬ್ಬರಿಗೆ (Woman) ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ (Rajasthan) ಪ್ರತಾಪ್‍ಗಢ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.

    ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಈ ಘಟನೆಯನ್ನು ಖಂಡಿಸಿದ್ದಾರೆ. ಅಪರಾಧ ವಿಭಾಗದ ಎಡಿಜಿ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹವರಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಕೃತ್ಯ ಎಸಗಿದವರನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ಆದಷ್ಟು ಬೇಗ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲ್ಲಿನಿಂದ ಹೊಡೆದು ಯುವಕನ ಹತ್ಯೆಗೈದ ದುಷ್ಕರ್ಮಿಗಳು – ಸಿಸಿ ಟಿವಿಯಲ್ಲಿ ಕೃತ್ಯ ಸೆರೆ

    ಕಲ್ಲಿನಿಂದ ಹೊಡೆದು ಯುವಕನ ಹತ್ಯೆಗೈದ ದುಷ್ಕರ್ಮಿಗಳು – ಸಿಸಿ ಟಿವಿಯಲ್ಲಿ ಕೃತ್ಯ ಸೆರೆ

    ಬೆಳಗಾವಿ: ನಡು ರಸ್ತೆಯಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಪ್ರಕರಣ ಶಿವಬಸವನಗರದಲ್ಲಿ ತಡರಾತ್ರಿ ನಡೆದಿದೆ.

    ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬೈಕ್ (Bike) ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಹತ್ಯೆಗೈಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃತ್ಯದಲ್ಲಿ ಮೂರು ಜನ ಭಾಗಿಯಾಗಿರುವ ಶಂಕೆ ಇದೆ. ಹತ್ಯೆ ಬಳಿಕ ಕಿಡಿಗೇಡಿಗಳು ಪರಾರಿಯಾಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    ಯುವಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಯುವಕನನ್ನು ಸಂಚು ರೂಪಿಸಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಡಿತ ಬಿಡದವನ ಕೈಕಾಲು ಕಟ್ಟಿ ಥಳಿಸಿ ಹತ್ಯೆ – ಆರೋಪಿಗಳು ಅರೆಸ್ಟ್

    ಕುಡಿತ ಬಿಡದವನ ಕೈಕಾಲು ಕಟ್ಟಿ ಥಳಿಸಿ ಹತ್ಯೆ – ಆರೋಪಿಗಳು ಅರೆಸ್ಟ್

    ಹಾಸನ: ಮದ್ಯ ವ್ಯಸನ ಬಿಡಲು ಒಪ್ಪದ ವ್ಯಕ್ತಿಗೆ ಥಳಿಸಿ ಆತನ ಸಾವಿಗೆ ಕಾರಣರಾದ ಆರು ಜನ ಆರೋಪಿಗಳನ್ನು ಹಾಸನ (Hassan) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಶಶಿಕುಮಾರ್, ವಿಜಯ್‍ಕುಮಾರ್, ವೆಂಕಟೇಶ್, ಕ್ರಿಸ್ಟೋಫರ್, ಎಂ.ಕಿರಣ್ ಕುಮಾರ್ ಮತ್ತು ರವಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ವಿನಯ್‍ಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಶಂಕಿತ ಉಗ್ರ ಜುನೈದ್ ಸಹಚರನ ಬಂಧನ

    ಪದ್ಮೇಗೌಡ ಎಂಬುವವರನ್ನು ಕುಡಿತದ ವ್ಯಸನದಿಂದ ಬಿಡಿಸುವಂತೆ ವಿಜಯನಗರದ ವ್ಯಸನ ಮುಕ್ತ ಕೇಂದ್ರಕ್ಕೆ ಆತನ ತಂದೆ ತೋಪೇಗೌಡ ಸೇರಿಸಿದ್ದರು. ಆದರೆ ಪದ್ಮೇಗೌಡ ಕುಡಿತ ಚಟ ಬಿಡಲು ಸಹಕರಿಸಿರಲಿಲ್ಲ. ಅಲ್ಲದೇ ಪ್ರತಿರೋಧ ವ್ಯಕ್ತಪಡಿಸಿದ್ದ ಎಂಬ ಕಾರಣಕ್ಕೆ ಕೈಕಾಲು ಕಟ್ಟಿ, ಹಲ್ಲೆ ಮಾಡಿದ್ದಾರೆ. ಇದರಿಂದ ಆತ ಮೃತಪಟ್ಟಿದ್ದಾನೆ ಎಂಬ ವಿಚಾರ ಬೆಳಕಿಗೆ ಬಂದಿದೆ.

    ಮೃತ ದೇಹವನ್ನು ಅಂತ್ಯಸಂಸ್ಕಾರ ನಡೆಸಲು ಸ್ನಾನ ಮಾಡಿಸುವ ವೇಳೆ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿತ್ತು. ಇದರಿಂದ ಅನುಮಾನಗೊಂಡು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಗೆ ತೋಪೇಗೌಡ ದೂರು ನೀಡಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಗಂಭೀರವಾಗಿ ಹಲ್ಲೆ ನಡೆಸಿದ್ದರಿಂದ ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತನಗಿಂತ 2 ವರ್ಷ ಕಿರಿಯವನನ್ನ ಪ್ರೀತಿಸಿ ಮದ್ವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ

    ತನಗಿಂತ 2 ವರ್ಷ ಕಿರಿಯವನನ್ನ ಪ್ರೀತಿಸಿ ಮದ್ವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಕುಟುಂಬದವರ ವಿರೋಧದ ನಡುವೆಯೂ ತನಗಿಂತ ಎರಡು ವರ್ಷ ಕಿರಿಯವನನ್ನ ಪ್ರೀತಿಸಿ ಮದುವೆಯಾಗಿದ್ದ (Marriage) ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.

    ಶಿಡ್ಲಘಟ್ಟ ನಗರದ (Sidlaghatta City) ಮಯೂರ ವೃತ್ತದ ಬಳಿ ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ವಿವಾಹಿತೆ ನಾಗಮಣಿ (23) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಬಿಜೆಪಿಗರು ಪ್ರಾಮಾಣಿಕರಾಗಿದ್ದರೆ ನ್ಯಾಯಾಂಗ ತನಿಖೆ ಬಗ್ಗೆ ಭಯವೇಕೆ? – ಡಿಕೆಶಿ ಪ್ರಶ್ನೆ

    ಖಾಸಗಿ ಕ್ಲಿನಿಕ್ ಒಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಜಾತವಾರಹೊಸಹಳ್ಳಿ ಗ್ರಾಮದ ನಾಗಮಣಿ, ಕಳೆದ ಒಂದೂವರೆ ವರ್ಷದ ಹಿಂದೆ ತಾತಹಳ್ಳಿ ಗ್ರಾಮದ ಪವನ್ (21) ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಪವನ್ ಕುಟುಂಬದವರು ಯುವತಿ ಬೇರೆ ಸಮುದಾಯ ಎಂಬ ಕಾರಣಕ್ಕೆ ಮನೆಗೆ ಸೇರಿಸಿರಲಿಲ್ಲ. ಹೀಗಾಗಿ ಇಬ್ಬರು ಶಿಡ್ಲಘಟ್ಟ ಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು, ಇಂದು ಮಹಿಳೆ ನೇಣಿಗೆ ಶರಣಾಗಿದ್ದಾಳೆ.

    ಶಿಡ್ಲಘಟ್ಟ ಪೊಲೀಸರು ಮೃತದೇಹವನ್ನ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಆದ್ರೆ ಯುವತಿ ಹಾಗೂ ಯುವಕನ ಕಡೆಯವರು ರಾಜೀ ಪಂಚಾಯತಿಗೆ ಮಾತುಕತೆ ನಡೆಸಿದ್ದಾರೆ. ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಲಕ್ಷ್ಮಿ ಹೆಬ್ಬಾಳ್ಕರ್

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವತಿ ಪ್ರಕರಣ ವಾಪಸ್ ಪಡೆಯದ್ದಕ್ಕೆ ಆಕೆಯ ತಾಯಿಯನ್ನೇ ವಿವಸ್ತ್ರಗೊಳಿಸಿ ಥಳಿಸಿದ್ರು!

    ಯುವತಿ ಪ್ರಕರಣ ವಾಪಸ್ ಪಡೆಯದ್ದಕ್ಕೆ ಆಕೆಯ ತಾಯಿಯನ್ನೇ ವಿವಸ್ತ್ರಗೊಳಿಸಿ ಥಳಿಸಿದ್ರು!

    ಭೋಪಾಲ್: ಯುವತಿಯೊಬ್ಬಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ವಿಚಾರಕ್ಕೆ ನೂರಾರು ಜನರ ಗುಂಪು ಆಕೆಯ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ (Madhya Pradesh) ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಈ ವೇಳೆ ಯುವತಿಯ ಸಹೋದರನ ಮೇಲೂ ಹಲ್ಲೆ ನಡೆಸಲಾಗಿದ್ದು ಆತ ಸಾವನ್ನಪ್ಪಿದ್ದಾನೆ.

    18ರ ದಲಿತ ಯುವತಿಯೊಬ್ಬಳು ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಕೆಲವರು ಒತ್ತಡ ಹೇರಿದ್ದಾರೆ. ಆದರೆ ಯುವತಿ ದೂರು ವಾಪಸ್ ಪಡೆಯಲು ಒಪ್ಪದಿದ್ದಾಗ ಈ ದಾಳಿ ನಡೆದಿದೆ. ಈ ಪ್ರಕರಣದಲ್ಲಿ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ. ಮೂವರ ವಿರುದ್ಧ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಲ್ಲಿಯವರೆಗೂ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲಿಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ವೈದ್ಯನನ್ನು 50 ಮೀಟರ್ ಎಳೆದೊಯ್ದ!

    ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಯುವತಿಯ ತಾಯಿ, ಜನರ ಗುಂಪು ನಮ್ಮ ಮನೆಯನ್ನು ಧ್ವಂಸಗೊಳಿಸಿತು. ಮನೆಯ ಯಾವ ಸಾಮಾಗ್ರಿಯನ್ನೂ ಬಿಡದೆ ನಾಶ ಮಾಡಿದ್ದಾರೆ. ಮನೆಯ ಚಾವಣಿಯನ್ನು ಹಾಳು ಮಾಡಿದ್ದಾರೆ. ಬಳಿಕ ಇಬ್ಬರು ಮಕ್ಕಳನ್ನು ಹುಡುಕಿಕೊಂಡು ಮತ್ತೊಂದು ಮನೆಗೆ ಹೋದರು. ಅಲ್ಲಿ ಪತಿ ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದಿದ್ದಾರೆ.

    ಘಟನೆಯ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳುವುದಾಗಿ ಮಹಿಳೆಗೆ ಭರವಸೆ ನೀಡಿದೆ.

    2019 ರಲ್ಲಿ ನಾಲ್ಕು ಪುರುಷರ ವಿರುದ್ಧ ಮಹಿಳೆಯ ಮಗಳು ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು. ಇದೇ ವಿಚಾರಕ್ಕೆ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ದೂರಿನಲ್ಲಿ ಉಲ್ಲೇಖಿಸಲಾದ ಎಲ್ಲರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ಅತ್ಯಾಚಾರ – ಸ್ವಯಂ ದೂರು ದಾಖಲಿಸಿಕೊಂಡ ದೆಹಲಿ ಹೈಕೋರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳ್ಳತನದ ಆರೋಪ – ನಾಲ್ವರನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ ಗುಂಪು

    ಕಳ್ಳತನದ ಆರೋಪ – ನಾಲ್ವರನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ ಗುಂಪು

    ಮುಂಬೈ: ಮೇಕೆ ಹಾಗೂ ಪಾರಿವಾಳಗಳನ್ನು ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ನಾಲ್ವರು ದಲಿತ ಯುವಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ದೊಣ್ಣೆಗಳಿಂದ ಥಳಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಹರೇಗಾಂವ್ ಎಂಬಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ದಾಳಿಗೆ ಸಂಬಂಧಿಸಿದಂತೆ ಓರ್ವ ಅರೋಪಿಯನ್ನು ಬಂಧಿಸಿದ್ದು, ಐವರು ತಲೆಮರೆಸಿಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಯುವರಾಜ್ ಗಲಾಂಡೆ, ಮನೋಜ್ ಬೋಡಕೆ, ಪಪ್ಪು ಪರ್ಖೆ, ದೀಪಕ್ ಗಾಯಕವಾಡ, ದುರ್ಗೇಶ್ ವೈದ್ಯ ಮತ್ತು ರಾಜು ಬೋರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ಓರ್ವ ದಾಳಿಯ ವೀಡಿಯೋವನ್ನು ಚಿತ್ರೀಕರಿಸಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿತ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡು ಯುವಕ ಸಾವು

    ನಾಲ್ವರು ದಲಿತ ಯುವಕರು 20ರ ವಯಸ್ಸಿನ ಆಸುಪಾಸಿನವರಾಗಿದ್ದಾರೆ. ಅವರನ್ನು ಆ.25 ರಂದು ಆರು ಜನರ ಯುವಕರ ಗುಂಪು ಮನೆಯಿಂದ ಅಪಹರಿಸಿತ್ತು. ಸಂತ್ರಸ್ತರಲ್ಲಿ ಒಬ್ಬರಾದ ಶುಭಂ ಮಗಡೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

    ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆಗೆ ಯತ್ನ), 364 (ಅಪಹರಣ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ ಭಯೋತ್ಪಾದಕರು ತಲುಪದಂತೆ ನೋಡಿಕೊಳ್ಳಿ: ಚಕ್ರಪಾಣಿ ಮಹಾರಾಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಲಿಕೆ ಸದಸ್ಯನಿಂದ ಸ್ನೇಹಿತನಿಗೆ ಜೀವ ಬೆದರಿಕೆ – ಆತ್ಮಹತ್ಯೆಗೆ ಯತ್ನ

    ಪಾಲಿಕೆ ಸದಸ್ಯನಿಂದ ಸ್ನೇಹಿತನಿಗೆ ಜೀವ ಬೆದರಿಕೆ – ಆತ್ಮಹತ್ಯೆಗೆ ಯತ್ನ

    ಬಳ್ಳಾರಿ: ಪಾಲಿಕೆ (Mahanagara Palike) ಸದಸ್ಯನೊಬ್ಬ ಸ್ನೇಹಿತನಿಗೆ ಜೀವ ಬೆದರಿಕೆ ಒಡ್ಡಿದ್ದು ಆತ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಳ್ಳಾರಿಯಲ್ಲಿ (Bellary) ನಡೆದಿದೆ.

    ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಆಸೀಫ್ ಭಾಷಾ ಎಂಬಾತ ಸ್ನೇಹಿತ ಅಹಮದ್ ಹುಸೇನ್‍ಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಅಲ್ಲದೇ ಕುಟುಂಬಕ್ಕೂ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾನೆ. ಇದರಿಂದ ಮನನೊಂದು ಹುಸೇನ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ!

    ಆಸೀಫ್ ಹಾಗೂ ಅಹಮದ್ ಹುಸೇನ್ ಅತ್ಮೀಯ ಸ್ನೇಹಿತರು. ಆಸೀಫ್‍ನ ಎಲ್ಲಾ ವ್ಯವಹಾರಗಳನ್ನ ಅಹಮದ್ ಹುಸೇನ್ ನೋಡಿಕೊಳ್ಳುತ್ತಿದ್ದ. ಇದರಿಂದ ಅಹಮದ್ ಹುಸೇನ್ ಮನೆಗೆ ಆಸೀಫ್ ಆಗಾಗಾ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಬಳಿಕ ಹುಸೇನ್‍ನ ಪತ್ನಿಯ ಜೊತೆ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿದೆ ಎಂದು ಆತ ಆರೋಪಿಸಿದ್ದಾನೆ.

    ಈ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಆಸೀಫ್ ಪ್ರಾಣ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಆತನ ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹುಸೆನ್ ಹೇಳಿದ್ದಾನೆ. ಈ ಸಂಬಂಧ ಕೌಲ್ ಬಜಾರ್ ಪೊಲೀಸ್‌ (Police) ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ – ಆರೋಪಿ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ!

    ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯ ಕೊಲೆಗೈದ ಪಾಪಿ ಪುತ್ರ!

    ಹಾಸನ: ಊಟಕ್ಕೆ ವಿಷ (Poison) ಬೆರೆಸಿ ತಂದೆ ಹಾಗೂ ತಾಯಿಯನ್ನು ಮಗನೇ ಹತ್ಯೆಗೈದ ಘಟನೆ ಅರಕಲಗೋಡಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪಾಪಿ ಪುತ್ರ ಈ ಕೃತ್ಯ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ.

    ಮಂಜುನಾಥ್ (27) ವಿಷ ಬೆರಸಿ ತಂದೆ ತಾಯಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ವಿಧವೆ ಒಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿಗೆ ತಂದೆ-ತಾಯಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಸಹಕಾರ ಸಂಘಗಳಲ್ಲಿ ಆತನ ತಾಯಿ ಉಮಾ (48)ಮಾಡಿದ್ದ ಸಾಲದ ಹಣವನ್ನು (Money) ಆರೋಪಿ ದುರುಪಯೋಗ ಪಡಿಸಿಕೊಂಡಿದ್ದ. ಹಣವನ್ನು ವಾಪಸ್ ಕೇಳಿದ್ದಕ್ಕೂ ಆರೋಪಿ ಪೋಷಕರ ಮೇಲೆ ಸಿಟ್ಟಾಗಿದ್ದ. ಇದರಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ಅದರಂತೆ ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ ಹಾಗೂ ತಾಯಿಯನ್ನು ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನೆಟ್ವರ್ಕ್ ಮಾರ್ಕೆಟಿಂಗ್ ವಂಚನೆ – ರಾಯಚೂರಿನಲ್ಲಿ ಕೋಟ್ಯಂತರ ರೂ. ಪಂಗನಾಮ

    ಆರೋಪಿ ತಾಯಿಗಿಂತ ಮೊದಲೇ ಪಲಾವ್ ತಿಂದು ನಂತರ ಪಲಾವ್‍ಗೆ ಕಳೆನಾಶಕ ಬೆರೆಸಿದ್ದ. ತಂದೆ ತಾಯಿ-ತಿಂಡಿ ತಿಂದ ಬಳಿಕ ಆರೋಪಿ ಔಷಧಿ ವಾಸನೆ ಬರುತ್ತಿದೆ ಎಂದು ವಾಂತಿ ಮಾಡಿ ನಾಟಕವಾಡಿದ್ದ. ಬಳಿಕ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಕರೆತಂದಿದ್ದ. ಬಳಿಕ ತಾಯಿ ಉಮಾ ಹಾಗೂ ತಂದೆ ನಂಜುಂಡಪ್ಪ (55) ಹಠಾತ್ ಆಗಿ ಸಾವಿಗೀಡಾಗಿದ್ದರು.

    ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ದಂಪತಿಯ ಕಿರಿಯ ಪುತ್ರ ಕೊಣನೂರು ಪೊಲೀಸರಿಗೆ (Police) ಮಾಹಿತಿ ನೀಡಿದ್ದ. ಬಳಿಕ ಪೊಲೀಸರು ಅಂತ್ಯಕ್ರಿಯೆ ತಡೆದು ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಿದ್ದರು. ಬಳಿಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಮಂಜುನಾಥ್‍ನನ್ನು ತನಿಖೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿ ವಿಷ ಬೆರೆಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಶಾಲಾ ಕೊಠಡಿಯಲ್ಲಿ ದಲಿತ ವಿದ್ಯಾರ್ಥಿ ನೇಣಿಗೆ ಶರಣು – ಇಬ್ಬರು ಶಿಕ್ಷಕರ ಅಮಾನತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೊಸೆಯನ್ನು ರಕ್ಷಿಸಲು ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತ್ನಿ!

    ಸೊಸೆಯನ್ನು ರಕ್ಷಿಸಲು ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತ್ನಿ!

    ಲಕ್ನೋ: ತನ್ನ ಸೊಸೆಯನ್ನು ಲೈಂಗಿಕ ದೌರ್ಜನ್ಯದಿಂದ ಕಾಪಾಡಲು ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಉತ್ತರ ಪ್ರದೇಶದ  (Uttar Pradesh) ಬದೌನ್‍ನಲ್ಲಿ ನಡೆದಿದೆ.

    ತೇಜೇಂದರ್ ಸಿಂಗ್ (43) ಹತ್ಯೆಯಾದ ವ್ಯಕ್ತಿ. ಮೊದಲಿಗೆ ಅಪರಿಚಿತರು ಆತನನ್ನು ಕೊಲೆಗೈದಿದ್ದಾರೆ ಎಂದು ಮೃತನ ಪತ್ನಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದರು. ಆದರೆ ತನಿಖೆ ವೇಳೆ ಆತನ ಪತ್ನಿಯೇ ಕೊಲೆಗೈದಿರುವುದಾಗಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ

    ತನಿಖೆ ವೇಳೆ ಹತ್ಯೆಗೊಳಗಾದವನ ಪತ್ನಿ ಮಿಥಿಲೇಶ್ ದೇವಿ (40) ತನ್ನ ಪತಿ ವಿಪರೀತ ಹೊಡೆಯುತ್ತಿದ್ದ. ಅಲ್ಲದೇ 19 ವರ್ಷದ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಆತ ಮಲಗಿದ್ದಾಗ ಕೊಡಲಿಯಿಂದ ಕತ್ತು ಸೀಳಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರಂಭದಲ್ಲಿ ಮಹಿಳೆ ತನಿಖೆಯ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾಳೆ. ಮಹಿಳೆ ವಿಚಾರಣೆ ವೇಳೆ ಪದೇ ಪದೇ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಳು. ಇದರಿಂದಾಗಿ ಪೊಲೀಸರು (Police) ಸಂಶಯಗೊಂಡು ಆಕೆಯನ್ನು ತೀವ್ರ ವಿಚಾರಣೆ ಒಳಪಡಿಸಿದಾಗ ಕೊಲೆಯ ವಿಚಾರ ಹೊರಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ – ಸದ್ದಿಲ್ಲದೆ ಅಂತ್ಯಸಂಸ್ಕಾರ ಮಾಡಿ ಸಿಕ್ಕಿಬಿದ್ದರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ – ಸದ್ದಿಲ್ಲದೆ ಅಂತ್ಯಸಂಸ್ಕಾರ ಮಾಡಿ ಸಿಕ್ಕಿಬಿದ್ದರು

    ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ – ಸದ್ದಿಲ್ಲದೆ ಅಂತ್ಯಸಂಸ್ಕಾರ ಮಾಡಿ ಸಿಕ್ಕಿಬಿದ್ದರು

    ಕೋಲಾರ: ತಂದೆಯಿಂದಲೇ ಹೆತ್ತ ಮಗಳ ಕೊಲೆಯಾಗಿರುವ ಘಟನೆ ಕೋಲಾರದ (Kolar) ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ.

    ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳನ್ನು ಕೊಲೆ ಮಾಡಲಾಗಿದೆ. ಯುವತಿಗೆ ಎಷ್ಟೇ ಬುದ್ದಿವಾದ ಹೇಳಿದರೂ ಕೇಳದೇ ಹೋಗಿದ್ದರಿಂದ ಆಕೆಯ ತಂದೆ ವೆಂಟೇಶಗೌಡ ಮಗಳ ಹತ್ಯೆ ನಡೆಸಿದ್ದಾನೆ.

    ಆಗಸ್ಟ್ 25ರಂದು ಮಗಳ ಹತ್ಯೆ ನಡೆಸಿದ ಬಳಿಕ, ಸದ್ದಿಲ್ಲದೆ ಹೆತ್ತವರು ಆಕೆಯ ಅಂತ್ಯಸಂಸ್ಕಾರ ಮುಗಿಸಿದ್ದರು. ಬಳಿಕ ಊರಿನಲ್ಲಿ ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸುದ್ದಿ ಹಬ್ಬಿದ್ದರಿಂದ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮರ್ಯಾದಾ ಹತ್ಯೆಯಾಗಿರುವುದು (Honor Killing) ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕಾಲಿಗೆ ಪೆಟ್ಟಾಗಿದ್ರೂ ಜೈಲಿನ ಗೋಡೆ ಹಾರಿ ಅತ್ಯಾಚಾರಿ ಪರಾರಿ

    ಭಾನುವಾರ ಬೆಳಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಕೊಲೆಯಾದ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಂದ್ರಯಾನ ಸಂಭ್ರಮಾಚರಣೆ ಮಾಡಿದವರ ಮೇಲೆ ಕಾಶ್ಮೀರಿ ವಿದ್ಯಾರ್ಥಿಗಳಿಂದ ಹಲ್ಲೆ