Tag: crime

  • ಅಪ್ಪನೊಂದಿಗೆ ಸೇರಿ ಹೆಂಡ್ತಿ ಮೇಲೆ ಅತ್ಯಾಚಾರ – ತಂದೆಗೆ 14, ಮಗನಿಗೆ 10 ವರ್ಷ ಜೈಲು

    ಲಕ್ನೋ: ಅಪ್ಪನೊಂದಿಗೆ ಸೇರಿ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ (Uttar Pradesh) ಚಂದಾಪುರ ವಿಶೇಷ ನ್ಯಾಯಾಲಯವು (Court) ದೋಷಿ ಎಂದು ಪರಿಗಣಿಸಿ, ಇಬ್ಬರಿಗೂ ಜೈಲು ಶಿಕ್ಷೆ ವಿಧಿಸಿದೆ.

    ಅಪರಾಧಿಗಳಾದ ಚಂದಾಪುರ ನಿವಾಸಿ ಅಮರನಾಥ್‌ಗೆ (60) 14 ವರ್ಷ ಹಾಗೂ ಅವನ ಮಗ ಚಂದ್ರರಾಜ್‌ಗೆ (35) 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೇಳಿಕೆ – ವಿವರ ಪಡೆಯಲು ರಾಗಾ ಮನೆಗೆ ಆಗಮಿಸಿದ ಪೊಲೀಸರು

    CRIME (1)

    ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್, 30 ವರ್ಷದ ಮಹಿಳೆಯ ಮೇಲೆ ಆಕೆಯ ಪತಿ ಮತ್ತು ಮಾವ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ್ದರು. ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆರೋಪ ಸಾಬೀತಾಗಿ ನ್ಯಾಯಾಲಯ ದೋಷಿ ಎಂದು ಪರಿಗಣಿಸಿದ ನಂತರ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಕೈಲಾಸ ಗಡಿಯಿಲ್ಲದ ದೇಶ – ನಿತ್ಯಾನಂದ

  • ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ – ಪೊಲೀಸರ ಮೊರೆಹೋದ ಸಂತ್ರಸ್ತೆ

    ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ – ಪೊಲೀಸರ ಮೊರೆಹೋದ ಸಂತ್ರಸ್ತೆ

    ಜೈಪುರ: ʻ10 ವರ್ಷದವಳಿದ್ದಾಗ ನನ್ನನ್ನ ಮಾರಾಟ ಮಾಡಿದ್ರು, ಅಂದಿನಿಂದ ಕಾಲ ಕಾಲಕ್ಕೆ ನನ್ನ ದೇಹವನ್ನು ಮಾರಾಟ ಮಾಡಿ ಕೋಟಿಗಟ್ಟಲೇ ಸಂಪಾದಿಸಿದ್ರು. ನಾನೀಗ ನೊಂದಿದ್ದೇನೆ, ನನಗೆ ನ್ಯಾಯ ಕೊಡಿಸಿ..ʼ ವೇಶ್ಯಾವಾಟಿಕೆ ಜಾಲಕ್ಕೆ ಸಿಕ್ಕಿ ನರಳುತ್ತಿದ್ದ ಸಂತ್ರಸ್ತೆಯೊಬ್ಬಳ ಕೂಗು ಇದಾಗಿದೆ.

    ಹೌದು. ರಾಜಸ್ಥಾನದ (Rajasthan) ಬಿಲ್ವಾರದಲ್ಲಿ 10 ವರ್ಷಗಳ ಹಿಂದೆ ಮಾರಾಟವಾಗಿ ವೇಶ್ಯಾವಾಟಿಕೆ ದಂಧೆಗೆ ಸಿಲುಕಿದ್ದ ಹುಡುಗಿಯೊಬ್ಬಳು (Girl) 8-9 ವರ್ಷಗಳ ಬಳಿಕ ತನ್ನ ಕರಾಳ ಕತೆಯನ್ನು ಹೇಳಿಕೊಂಡಿದ್ದಾಳೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ವೀಡಿಯೋ ಮಾಡಿಬಿಟ್ಟಿರುವ ಸಂತ್ರಸ್ತೆ ತನ್ನನ್ನು ರಕ್ಷಿಸುವಂತೆ ಪೊಲೀಸರಿಗೆ ಕೇಳಿಕೊಂಡಿದ್ದಾಳೆ.

    ಸಂತ್ರಸ್ತೆ ವೀಡಿಯೋದಲ್ಲಿ ಹೇಳಿರುವುದೇನು?
    ʻಹಲೋ ನಾನು ಸ್ವಂತ ಇಚ್ಛೆಯ ಮೇಲೆ ಈ ವೀಡಿಯೋ ಮಾಡುತ್ತಿದ್ದೇನೆ. ನಾನು 10 ವರ್ಷದವಳಿದ್ದಾಗ ಮಾಧೋಪುರದಲ್ಲಿ ನನ್ನನ್ನು ಮಾರಾಟ ಮಾಡಿದರು. 11ನೇ ವರ್ಷದಲ್ಲಿ ಬಲವಂತವಾಗಿ ನನ್ನನ್ನ ವೇಶ್ಯಾವಾಟಿಕೆಗೆ ತಳ್ಳಿದರು. ಒಂದೆರಡು ವರ್ಷ ಮಾಧೋಪುರದಲ್ಲಿ ಇಟ್ಟುಕೊಂಡು ನಂತರ ನನ್ನನ್ನು ಬೇರೆ ಸ್ಥಳಕ್ಕೆ ಮಾರಾಟ ಮಾಡಿದರು. ಇಲ್ಲಿನ ಡಿಯೋಲಿ ನಗರದಲ್ಲಿ ಕಿಶನ್‌ ಎಂಬ ವ್ಯಾಪಾರಿ 20 ಲಕ್ಷ ರೂ.ಗೆ ನನ್ನನ್ನು ಖರೀದಿಸಿ 8-9 ವರ್ಷಗಳ ಕಾಲ ನನ್ನನ್ನು ಬಳಸಿಕೊಂಡು ವ್ಯಾಪಾರ ಮಾಡಿಕೊಂಡ.

    ನಂತರ ಜೈಪುರ, ಮುಂಬೈಗೆ (Mumbai) ಮಾರಾಟ ಮಾಡಿದ. ಅಲ್ಲಿಯೂ ಕೋಟ್ಯಂತರ ರೂಪಾಯಿ ಸಂಪಾದಿಸಿಕೊಟ್ಟೆ. ಆದರೆ ಶಂಭು ಮತ್ತು ಪ್ರೇಮ್ ಎಂಬ ಇಬ್ಬರು ಕಾಮುಕರು ನನಗೆ ಸಾಕಷ್ಟು ಹಿಂಸೆ ನೀಡಿದರು. ನನಗಷ್ಟೇ ಅಲ್ಲದೇ ಇತರ ಹೆಣ್ಣುಮಕ್ಕಳನ್ನೂ ಹಿಂಸಿಸುತ್ತಿದ್ದರು. ಬೇರೆ ಬೇರೆ ಕಡೆ ವ್ಯಾಪಾರ ಮಾಡುವಂತೆ ಒತ್ತಾಯ ಮಾಡಿದ್ದರು. ಆದರೂ ನಾನು ಹಿಂಸೆಯನ್ನೆಲ್ಲಾ ಸಹಿಸಿಕೊಂಡು ಕೋಟ್ಯಂತರ ರೂಪಾಯಿ ಸಂಪಾದಿಸಿಕೊಟ್ಟೆ. ಆದರೀಗ ನಾನು ಇಂತಹ ದೌರ್ಜನ್ಯಗಳಿಂದ ಬೇಸತ್ತಿದ್ದೇನೆ, ತುಂಬಾ ನೊಂದಿದ್ದೇನೆ. ಅವರಿಂದ ನಾನು ತಪ್ಪಿಸಿಕೊಂಡು ಈ ವೀಡಿಯೋ ಮಾಡುತ್ತಿದ್ದೇನೆ. ನನಗೆ ನ್ಯಾಯ ಕೊಡಿಸಿ ಎಂದು ಬೇಡಿಕೊಂಡಿದ್ದಾಳೆ.

    ಮುಂದುವರಿದು ಆ ನೀಚರು ಎಷ್ಟೋ ಹೆಣ್ಣುಮಕ್ಕಳ ಜೀವನ ನಾಶ ಮಾಡಿದ್ದಾರೆ. ನಾನು ನನ್ನ ಬಾಲ್ಯವನ್ನು ಕಳೆದುಕೊಂಡಿದ್ದೇನೆ. ಆದ್ದರಿಂದ ಮತ್ತೆ ನನ್ನ ಊರಿಗೆ ವಾಪಸ್‌ ಹೋಗುವುದಿಲ್ಲ ಎಂದು ಅಲವತ್ತುಕೊಂಡಿದ್ದಾಳೆ.

    POLICE JEEP

    ವೀಡಿಯೋ ಆಧರಿಸಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (Commission for Protection of Child Rights) ಆಯುಕ್ತರು ಬಿಲ್ವಾರಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಈ ವೇಳೆ 27 ಮಕ್ಕಳು ನಾಪತ್ತೆಯಾಗಿರುವುದು ಕಂಡುಬಂದಿದೆ.

    ಇನ್ನೂ ವೀಡಿಯೋ ಆಧರಿಸಿ ಕೇಸ್‌ ದಾಖಲಿಸಿಕೊಂಡಿರುವ ಬಿಲ್ವಾರ ಎಸ್ಪಿ ಆದರ್ಶ್‌ ಸಿಧು, ಸಂತ್ರಸ್ತೆಯನ್ನು ಪತ್ತೆಮಾಡಲಾಗಿದೆ. ಬಾಲಕಿ ವೀಡಿಯೋದಲ್ಲಿ ಮಾಡಿರುವ ಆರೋಪಗಳ ಮೇರೆಗೆ ಕೇಸ್‌ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆಕೆಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದು ಹೇಳಿದ್ದಾರೆ.

  • ಹೋಳಿ ಹಬ್ಬಕ್ಕೆ ಕೋಳಿ ಸಾರು ಮಾಡಲ್ಲ ಅಂದಿದ್ದಕ್ಕೆ ಹೆಂಡತಿ ಕೈಮುರಿದ ಪತಿರಾಯ

    ಹೋಳಿ ಹಬ್ಬಕ್ಕೆ ಕೋಳಿ ಸಾರು ಮಾಡಲ್ಲ ಅಂದಿದ್ದಕ್ಕೆ ಹೆಂಡತಿ ಕೈಮುರಿದ ಪತಿರಾಯ

    ಮುಂಬೈ: ಹೋಳಿ ಹಬ್ಬದ ದಿನದಂದು ಕೋಳಿ ಸಾರು (Chicken Sambar) ಮಾಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿ, ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ (Maharashtra) ಚಂದ್ರಾಪುರದಲ್ಲಿ Chandrapura) ನಡೆದಿದೆ.

    ಪತ್ನಿ ಕೋಳಿ ಸಾರು ಮಾಡಲು ನಿರಾಕರಿಸಿದ್ದಕ್ಕೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆಕೆಯ ತಲೆಗೆ ಬಲವಾಗಿ ಹೊಡೆದಿದ್ದು, ಕೈ ಮೂಳೆ ಮೂಳೆ ಮುರಿಯುವಷ್ಟರ ಮಟ್ಟಿಗೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಆರೋಪಿ ಪತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮೊಬೈಲ್‌ ಕೊಡಿಸುವ ನೆಪದಲ್ಲಿ ಹುಬ್ಬಳ್ಳಿಗೆ ಕರೆಸಿಕೊಂಡ ಯುವಕ – ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್

    crime 1

    ಏನಿದು ಕೋಳಿ ಸಾರಿನ ಕತೆ?
    ಹೋಳಿ ಹಬ್ಬದ ದಿನದಂದು ಪತಿ ಮನೆಗೆ ಕೋಳಿ ತಂದು, ಹೆಂಡತಿಗೆ ರುಚಿ-ರುಚಿಯಾಗಿ ಸಾರು ಮಾಡುವಂತೆ ಹೇಳಿದ್ದಾನೆ. ಆದ್ರೆ ಪತ್ನಿ ಆಗಲೇ ಊಟ ರೆಡಿಯಾಗಿದೆ, ಈಗ ಕೋಳಿ ಬೇಯಿಸಲು ಸಾಧ್ಯವಿಲ್ಲ ಎಂದಿದ್ದಾಳೆ. ಇದರಿಂದ ಪತಿಯ ಕೋಪ ನೆತ್ತಿಗೇರಿ, ಮನೆಯ ಅಂಗಳದಲ್ಲೇ ಬಿದ್ದಿದ್ದ ದೊಣ್ಣೆ ತಂದು ಮನಬಂದಂತೆ ಥಳಿಸಿದ್ದಾನೆ. ಇದನ್ನೂ ಓದಿ: 1,487 ಗ್ರಾಂ ಚಿನ್ನ ಸಾಗಾಟ ಮಾಡ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

    ಪತ್ನಿಗೆ ತಲೆಗೆ ಹಲವು ಬಾರಿ ಹೊಡೆದು ತೀವ್ರ ರಕ್ತಸ್ರಾವವಾಗುವಂತೆ ಮಾಡಿದ್ದಾನೆ. ಇದರಿಂದ ತೀವ್ರ ಪೆಟ್ಟಾಗಿದ್ದು, ಆಕೆಯ ಕೈ ಮೂಳೆ ಸಹ ಮುರಿದಿದೆ. ಆಕೆಯ ಚೀರಾಟ ಕೇಳಿ ಮನೆಗೆ ದೌಡಾಯಿಸಿದ ನೆರೆಹೊರೆಯವರು ಜಗಳ ಬಿಡಿಸಿ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ಆರೋಪಿ ಪತಿಯನ್ನ ಬಂಧಿಸಿರುವ ಚಂದ್ರಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

    ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

    ಕೋಲಾರ: ತಾಲ್ಲೂಕಿನ ಮುದುವಾಡಿ ಬಳಿಯ ತೊಂಡಾಲ ಗ್ರಾಮದ ಕೆರೆಯಲ್ಲಿ ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ (Women) ಶವ ಪತ್ತೆಯಾಗಿದೆ.

    ಸುಟ್ಟುಹೋದ ಸ್ಥಿತಿಯಲ್ಲಿದ್ದ ದೇಹದಲ್ಲಿ ಮಾಂಗಲ್ಯ ಸರ ಪತ್ತೆಯಾಗಿದ್ದು, ಮೃತದೇಹ ಮಹಿಳೆಯದ್ದೇ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಧನ್ಯಾ ರಾಮ್ ಕುಮಾರ್ ನಟನೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಮೃತದೇಹ ಶ್ರೀನಿವಾಸಪುರದ ಮಹಿಳೆ ಶೋಭಾ (37) ಅವರದ್ದು, ಎಂದು ಗುರುತಿಸಲಾಗಿದೆ. ಕಿಡಿಗೇಡಿಗಳು ಮಹಿಳೆಯನ್ನ ಕೊಲೆ ಮಾಡಿ, ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸೀರೆಯೇ ಚಂದ ಎಂದಿದ್ದ ವಿದ್ಯಾ ಬಾಲನ್ ಕೈಯಲ್ಲಿ ನ್ಯೂಸ್ ಪೇಪರ್

    ಕೋಲಾರ ಗ್ರಾಮಾಂತರ ಪೊಲೀಸರು (Kolar Rural Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಹಿಳೆಯ ಗುರುತು ಪತ್ತೆಯಾಗಿದೆ. ಇಲ್ಲಿನ ನಿವಾಸಿ ವೆಂಕಟರಮಣ ಈಕೆಯನ್ನ 2ನೇ ಮದುವೆಯಾಗಿದ್ದ. ಮಹಿಳೆ ಶೋಭಾ ಶ್ರೀನಿವಾಸಪುರದಲ್ಲೇ ಬ್ಯೂಟಿಪಾರ್ಲರ್ (Beauty Parlour) ನಡೆಸುತ್ತಿದ್ದರು ಎಂದು ಹೇಳಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

  • ಬೀದಿ ಹೆಣ್ಣುನಾಯಿಯ ಮೇಲೆ ಅತ್ಯಾಚಾರ – ವಿಕೃತಕಾಮಿ ವಿರುದ್ಧ ಕೇಸ್

    ಬೀದಿ ಹೆಣ್ಣುನಾಯಿಯ ಮೇಲೆ ಅತ್ಯಾಚಾರ – ವಿಕೃತಕಾಮಿ ವಿರುದ್ಧ ಕೇಸ್

    ನವದೆಹಲಿ: ವಿಕೃತಕಾಮಿಯೊಬ್ಬ ಬೀದಿ ಹೆಣ್ಣು ನಾಯಿಯನ್ನು (Female Dog) ಎಳೆದೊಯ್ದು ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ದೆಹಲಿಯ (Delhi) ಇಂದರ್ ಪುರಿಯಲ್ಲಿ (Inder Puri) ನಡೆದಿದೆ.

    ಯುವಕನೊಬ್ಬ ಹೆಣ್ಣುನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಕೇಸ್‌- ಮೋಸ್ಟ್‌ ವಾಂಟೆಡ್‌ ಪಿಎಫ್‌ಐ ಸದಸ್ಯ ಅರೆಸ್ಟ್‌

    ಕಾಮುಕ ಯುವಕನನ್ನ ದೆಹಲಿ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಈತ ಇಂದರ್‌ಪುರಿಯ ಬಿಬ್ಲಾಕ್ ನಂ.333 ರಲ್ಲಿ ವಾಸವಾಗಿದ್ದಾನೆ. ಕೆಲ ದಿನಗಳ ಹಿಂದೆ ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದು, ಇದೀಗ ವೀಡಿಯೋ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇದನ್ನೂ ಓದಿ: ಡೋಲು ಬಡಿಯುತ್ತ ಪಬ್ ಮೇಲೆ ದಾಳಿ- ಸಂಘಟನೆ ಕಾರ್ಯಕರ್ತರು ವಶಕ್ಕೆ

    ಈ ಸಂಬಂಧ ಇಂದರ್ ಪುರಿ ಪೊಲೀಸರು ಐಪಿಸಿ (IPC) ಸೆಕ್ಷನ್ 377 (ಅನೈಸರ್ಗಿಕ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪತ್ತೆಗಾಗಿ ಶೋಧ ಆರಂಭಿಸಿದ್ದು, ನಾಯಿ ಆರೈಕೆಗಾಗಿ ಪ್ರಾಣಿ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

  • ಅಪ್ರಾಪ್ತ ಮಗಳನ್ನೇ ಅತ್ಯಾಚಾರಗೈದ ತಂದೆಗೆ ಜೀವಾವಧಿ ಶಿಕ್ಷೆ

    ಅಪ್ರಾಪ್ತ ಮಗಳನ್ನೇ ಅತ್ಯಾಚಾರಗೈದ ತಂದೆಗೆ ಜೀವಾವಧಿ ಶಿಕ್ಷೆ

    ತುಮಕೂರು: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರಿನ (Tumakuru) ವಿಶೇಷ ಮಕ್ಕಳ ಸ್ನೇಹಿ ನ್ಯಾಯಾಲಯ (Child friendly Court) ಆದೇಶಿಸಿದೆ.

    ಏನಿದು ಕೇಸ್?
    ಶಿರಾ ತಾಲೂಕಿನ ಕಸಬಾ ಹೋಬಳಿ, ಮುದಿಗೆರೆ ಗ್ರಾಮದಲ್ಲಿ, ತಂದೆ ಬಸವರಾಜು ಮಲಗಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನ ಎಬ್ಬಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದ್ರೆ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಹಣ ಕೊಡದಿದ್ದಕ್ಕೆ ಬಿಜೆಪಿ ಬಾವುಟಕ್ಕೆ ಬೆಂಕಿ – ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ಕೊಟ್ಟ ಮುಖಂಡ

    ತಂದೆಯ ದುಷ್ಕೃತ್ಯವನ್ನು ಬಾಲಕಿ ತನ್ನ ಚಿಕ್ಕಮ್ಮನಿಗೆ ತಿಳಿಸಿದ್ದಳು. ಇದರಿಂದ ಎಚ್ಚೆತ್ತುಕೊಂಡ ಸಂತ್ರಸ್ತೆ ಚಿಕ್ಕಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಅಧಿಕಾರಿಗಳು ಬಸವರಾಜು ವಿರುದ್ಧ ಶಿರಾ ಪೊಲೀಸ್ ಠಾಣೆಗೆ (Sira Police Station) ದೂರು ನೀಡಿದ್ದರು. ಅದರನ್ವಯ ಆರೋಪಿ ವಿರುದ್ಧ ಕಲಂ 04, ಪೋಕ್ಸೋ ಕಾಯ್ದೆ (POCSO Act), ಐಪಿಸಿ 504, 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಪ್ರಕರಣ ಸಂಬಂಧ ತನಿಖೆ ನಡೆಸಿದ ಶಿರಾ ಪೊಲೀಸ್ ಇನ್ಸ್‌ಪೆಕ್ಟರ್‌ ಪಿ.ಬಿ ಹನುಮಂತಪ್ಪ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದರು.

    ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಫ್‌ಟಿಎಸ್‌ಸಿ ಅಭಿಯೋಜನೆಯ ಪರ ಸಾಕ್ಷಿಗಳಿಂದ ನಡೆದ ವಿಚಾರಣೆ, ಹಾಜರುಪಡಿಸಿದ ದಾಖಲೆಗಳಿಂದ ಆರೋಪ ಸಾಬೀತಾಗಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿತು. ಇದರೊಂದಿಗೆ ನೊಂದ ಬಾಲಕಿಗೆ 10 ಲಕ್ಷ ಪರಿಹಾರ ಘೋಷಿಸಿತು. ಇದನ್ನೂ ಓದಿ: ಲೈಂಗಿಕ ಆಸಕ್ತಿ ಹೆಚ್ಚಾಗ್ತಿದೆಯೇ? – ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕಾದ ವಿಷಯಗಳಿವು..

    ಸರ್ಕಾರದ ಪರ ವಿಶೇಷ ಅಭಿಯೋಜಕರಾದ ಕೆ.ಎಸ್ ಆಶಾ ವಾದ ಮಂಡಿಸಿದರು.

  • ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್

    ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್

    -ಹುಬ್ಬಳಿ- ಧಾರವಾಡದಲ್ಲಿ ಸಿಬಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ
    -ಉದ್ಯಮಿ ರಮೇಶ್ ಬೊಣಗೇರಿ ಮನೆಯಲ್ಲಿ ಕೋಟಿ ಕೋಟಿ ಹಣ ಕಂಡು ಪೊಲೀಸರೇ ಶಾಕ್

    ಹುಬ್ಬಳಿ: ರಾಜ್ಯದಲ್ಲಿ ಬಿಜೆಪಿ (BJP) ಶಾಸಕ ವಿರೂಪಾಕ್ಷಪ್ಪನ ಮಗನ ಮನೆಯಲ್ಲಿ 8 ಕೋಟಿಗೂ ಹೆಚ್ಚು ಹಣ ಸಿಕ್ಕ ಬೆನ್ನಲ್ಲೇ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ (Hubballi) ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ.

    ಖಚಿತ ಮಾಹಿತಿ ಮೇರೆಗೆ ಹುಬ್ಬಳಿ-ಧಾರವಾಡ ಸಿಸಿಬಿ ಪೊಲೀಸರು (CCB Police), ಪ್ರತಿಷ್ಠಿತ ಉದ್ಯಮಿ ರಮೇಶ್ ಬೊಣಗೇರಿಯ ಭವಾನಿ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದು, 3 ಕೋಟಿ ಹಣ ಪತ್ತೆಯಾಗಿದೆ. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ಇಲ್ಲಿಯವರೆಗೆ ಹಣದ ಆದಾಯದ ಮೂಲ ಮಾತ್ರ ಬಯಲಿಗೆ ಬಂದಿಲ್ಲ. ಉದ್ಯಮಿ ರಮೇಶ್ ರಸಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟ ವ್ಯಾಪಾರಿಯಾಗಿದ್ದಾನೆ. ಜೊತೆಗೆ ರಾಜ್ಯ ಸರ್ಕಾರದ (Government Of Karnataka) ಕೃಷಿ ಇಲಾಖೆಗೂ ಸಹ ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕ ಸರಬರಾಜು ಮಾಡುತ್ತಿದ್ದಾನೆ. ಶನಿವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 3 ಕೋಟಿ ರೂ.ಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲಿಂಕ್ ಸಿನಿಮಾದಲ್ಲಿ ಗಾಯಕಿ ಚೈತ್ರಾ ಆಚಾರ್: ದೇವಕಿ ಝಲಕ್ ರಿಲೀಸ್

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಶೋಕ್ ನಗರ ಪೊಲೀಸರು, ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಆದಾಯ ತೆರಿಗೆ ಅಧಿಕಾರಿಗಳು ಸಿಸಿಬಿ ಪೊಲೀಸರ ಜೊತೆಗೆ ಸೇರಿ ಹಣ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಒಂದು ವೇಳೆ ಹಣದ ಮೂಲ ಅಪರಾಧದ ಹಿನ್ನೆಲೆ ಹೊಂದಿದ್ದರೆ, ಉದ್ಯಮಿ ರಮೇಶ್ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

    ಲೋಕಾಯುಕ್ತ (Lokayukta) ದಾಳಿಯ ಬೆನ್ನಲ್ಲೇ ಹುಬ್ಬಳಿ-ಧಾರವಾಡ ಸಿಸಿಬಿ ಪೊಲೀಸರು ಈ ಮಹತ್ವದ ಪ್ರಕರಣ ಬಯಲಿಗೆಳೆದಿದ್ದಾರೆ. ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ರಮಣಗುಪ್ತಾ ಅಭಿನಂದನೆ ಸಲ್ಲಿಸಿ, 25 ಸಾವಿರ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

  • ಮರ್ಮಾಂಗ ಕತ್ತರಿಸಿ ಪತಿಯನ್ನೇ ಕೊಂದ್ಳು – 5ನೇ ಹೆಂಡತಿಯಿಂದಲೇ ಗಂಡನಿಗೆ ಗಂಡಾಂತರ

    ಮರ್ಮಾಂಗ ಕತ್ತರಿಸಿ ಪತಿಯನ್ನೇ ಕೊಂದ್ಳು – 5ನೇ ಹೆಂಡತಿಯಿಂದಲೇ ಗಂಡನಿಗೆ ಗಂಡಾಂತರ

    ಭೋಪಾಲ್: 5 ಮದ್ವೆಯಾಗಿದ್ದ ವ್ಯಕ್ತಿಯೊಬ್ಬನನ್ನ ಆತನ 5ನೇ ಹೆಂಡತಿಯೇ ಕೊಡಲಿಯಿಂದ ಕೊಚ್ಚಿ ಕೊಂದು, ಬಳಿಕ ಮರ್ಮಾಂಗ ಕತ್ತರಿಸಿ ಎಸೆದಿರುವ ಘಟನೆ ಮಧ್ಯಪ್ರದೇಶದ (Madhya Pradesh) ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಬಿರೇಂದರ್ ಗುರ್ಜರ್ ಎಂದು ಗುರುತಿಸಲಾಗಿದೆ. 5 ಮದುವೆಯಾಗಿದ್ದ (Marriage) ಈತನನ್ನು 5ನೇ ಪತ್ನಿ ಕಾಂಚನಾ ಗುರ್ಜರ್ ಕೊಡಲಿಯಿಂದ ಕೊಚ್ಚಿ ಹಲ್ಲೆ ಮಾಡಿದ್ದಲ್ಲದೇ, ಮೃತದೇಹ ಎಸೆಯುವ ಮುನ್ನ ಮರ್ಮಾಂಗ ಕತ್ತರಿಸಿದ್ದಾಳೆ. ಈ ಘಟನೆ ಸಿಂಗ್ರೌಲಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: `ಪುಷ್ಪ 2′ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇಲ್ಲಿದೆ ಅಪ್‌ಡೇಟ್

    CRIME 2

    ಕೊಲೆಯಾದ ಬಿರೇಂದ್ರ ಗುರ್ಜರ್ ಶವ ಫೆಬ್ರವರಿ 21ರಂದು ಪತ್ತೆಯಾಗಿದ್ದು, ಈ ವೇಳೆ ಆತನ ಮರ್ಮಾಂಗ ಹಾಗೂ ಕುತ್ತಿಗೆಯಲ್ಲಿ ಗಾಯಗಳಿದ್ದವು. ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಇತ್ತ ಮೃತ ಬಿರೇಂದರ್ ಪತ್ನಿ ಕಾಂಚನಾ ಗುರ್ಜರ್ ತನ್ನ ಗಂಡನ ಹತ್ಯೆ ಕುರಿತಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಳು ಎಂದು ಕೊತ್ವಾಲಿ ಪೊಲೀಸ್ (Kotwali Police) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರನ್ನು ಭೇಟಿಯಾದ ಕಾನ್ರಾಡ್ ಸಂಗ್ಮಾ – ಮೇಘಾಲಯದಲ್ಲಿ ಸರ್ಕಾರ ರಚನೆಗೆ ಮನವಿ

    ಇದಾದ ಬಳಿಕ ಪ್ರಕರಣದ ಹಿಂದೆ ಬಿದ್ದ ಪೊಲೀಸರು ಮೃತ ವ್ಯಕ್ತಿಯ ಸಂಬಂಧಿಗಳು ಸ್ನೇಹಿತರು ಸೇರಿದಂತೆ ಎಲ್ಲರನ್ನು ತೀವ್ರವಾಗಿ ವಿಚಾರಣೆ ನಡೆಸಿದ್ದರು. ಈ ತನಿಖೆ ವೇಳೆ ಮೃತನ ಪತ್ನಿಯನ್ನು ಕೂಡ ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆ ಬಳಿಕ ಸತ್ಯ ಬಾಯ್ಬಿಟ್ಟ ಮಹಿಳೆ, ತನ್ನ ಗಂಡ ಮಾದಕ ವ್ಯಸನಿಯಾಗಿದ್ದ, ದಿನವೂ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಹೀಗಾಗಿ ಕೊಲೆ ಮಾಡಿದೆ ಎಂದು ಒಪ್ಪಿಕೊಂಡಿದ್ದಾಳೆ.

    police jeep 1

    ತಪ್ಪಿಸಿಕೊಳ್ಳೋಕೆ ಮಾಸ್ಟರ್ ಪ್ಲಾನ್: ಫೆಬ್ರವರಿ 21 ರಂದು ರಾತ್ರಿ ಕೊಲೆಗೂ ಮೊದಲು ಕಾಂಚನಾ 20 ನಿದ್ರೆ ಮಾತ್ರೆಯನ್ನು ಗಂಡನಿಗೆ ಕೊಡುವ ಆಹಾರದಲ್ಲಿ ಬೆರೆಸಿದ್ದಳು. ಗಂಡ ಊಟ ಮಾಡಿ ಪ್ರಜ್ಞೆ ತಪ್ಪಿದ ಬಳಿಕ ಕೊಡಲಿಯಿಂದ ಹಲ್ಲೆ ನಡೆಸಿದ್ದಾಳೆ. ನಂತರ ಅವನ ಮರ್ಮಾಂಗ ಕತ್ತರಿಸಿ, ಮೃತದೇಹವನ್ನು ಬಟ್ಟೆಯಿಂದ ಸುತ್ತಿ ಎಸೆದಿದ್ದಾಳೆ. ಸಾಕ್ಷ್ಯ ನಾಶ ಮಾಡುವ ಸಲುವಾಗಿ ಕೊಲೆಯಾದ ಗಂಡನ ಬಟ್ಟೆ, ಚಪ್ಪಲಿಗಳನ್ನ ಸುಟ್ಟುಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆಯಾದ ಬಿರೇಂದರ್‌ಗೆ ಇದು 5ನೇ ಮದುವೆಯಾಗಿತ್ತು. ಈತನ ಕಿರುಕುಳದಿಂದಾಗಿ ವಿವಾಹವಾದ ಎಲ್ಲಾ ಪತ್ನಿಯರು ಈತನನ್ನು ಬಿಟ್ಟು ಹೋಗಿದ್ದರು.

  • IAF ಮಾಜಿ ಅಧಿಕಾರಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ- ಕಾರಣ ನಿಗೂಢ

    IAF ಮಾಜಿ ಅಧಿಕಾರಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ- ಕಾರಣ ನಿಗೂಢ

    ನವದೆಹಲಿ: ಭಾರತೀಯ ವಾಯುಪಡೆಯ (IAF) ಮಾಜಿ ಅಧಿಕಾರಿ ಹಾಗೂ ಅವರ ಪತ್ನಿ ಇಬ್ಬರೂ ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    ದಕ್ಷಿಣ ದೆಹಲಿಯಲ್ಲಿರುವ (South Delhi) ತಮ್ಮ ನಿವಾಸದಲ್ಲಿ ಅಜಯ್ ಪಾಲ್ (37), ಪತ್ನಿ ಮೋನಿಕಾ (32) ಪ್ರತ್ಯೇಕ ಸಂದರ್ಭಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರ್ಕೊಂಡು ಬರಬೇಕು- ಸಿದ್ದರಾಮಯ್ಯ ಮಾತು ವೈರಲ್

    ಮೋನಿಕಾ ಪಾಲ್ ತನ್ನ ಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ, ಬಾಯಿಯಿಂದ ನೊರೆ ಹೊರಬರುತ್ತಿರುವುದನ್ನು ಕಂಡು ಆತಂಕಗೊಂಡಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅಜಯ್ ಪಾಲ್ ಮೃತಪಟ್ಟಿದ್ದರು. ಇದನ್ನೂ ಓದಿ: ತ್ರಿಪುರಾದಲ್ಲಿ ಬಿಜೆಪಿ, ನಾಗಾಲ್ಯಾಂಡ್‌ ಎನ್‌ಡಿಪಿಪಿ, ಮೇಘಾಲಯದಲ್ಲಿ ಎನ್‌ಪಿಪಿ ಮುನ್ನಡೆ

    ನಂತರ ಮನೆಗೆ ಮರಳಿದ ಮೋನಿಕಾ ಪಾಲ್ ಮಧ್ಯಾಹ್ನದ ವೇಳೆಗೆ ತಾನೂ ವಿಷ ಸೇವಿಸಿದ್ದಾರೆ. ಅಜಯ್ ಪಾಲ್ ಆತ್ಮಹತ್ಯೆ ಬಗ್ಗೆ ಪೊಲೀಸರು ಮಾಹಿತಿ ಪಡೆಯಲು ಮನೆಗೆ ಬಂದಾಗ ಯಾರೂ ಇಲ್ಲದನ್ನ ಕಂಡು ಸಂಶಯಗೊಂಡಿದ್ದಾರೆ. ನಂತರ ಬಾಗಿಲು ಒಡೆದು ನೋಡಿದಾಗ ಆಕೆಯೂ ಮೃತಪಟ್ಟಿರುವುದು ತಿಳಿದುಬಂದಿದೆ.

    ಅಜಯ್ ಪಾಲ್ ಇತ್ತೀಚೆಗಷ್ಟೇ ವಾಯುಸೇನೆ ತೊರೆದಿದ್ದರು. ವರ್ಷದ ಹಿಂದೆ ಇಬ್ಬರು ಮದುವೆಯಾಗಿದ್ದರು. ಆತ್ಮಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು (Delhi Police) ತನಿಖೆ ನಡೆಸುತ್ತಿದ್ದಾರೆ.

  • ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

    ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

    ಗಾಂಧಿನಗರ: ಮೂರು ಮಕ್ಕಳ ತಾಯಿಯಾಗಿದ್ದ ಮಹಿಳೆಯೊಬ್ಬಳು (Women) ಗಂಡನಿಂದ ಬೇರಾಗಿ ಮತ್ತೊಬ್ಬ ಯುವಕನೊಂದಿಗೆ ಲಿವ್ ಇನ್ ರಿಲೇಷನ್‌ನಲ್ಲಿ (Live In Relationship) ಇದ್ದಳು. ಈ ವೇಳೆ ಗೆಳೆಯನ ಸ್ನೇಹಿತನೊಂದಿಗೂ ದೈಹಿಕ ಸಂಪರ್ಕ ಬೆಳೆಸಿದ್ದ ಮಹಿಳೆಯನ್ನ ಸ್ಕೆಚ್ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

    ಗುಜರಾತಿನ (Gujarat) ವಡೋದರಾದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರೇಮಿಗಳ ದಿನದಂದೇ ಇಬ್ಬರು ಯುವಕರು ಮಹಿಳೆಯನ್ನ ಕತ್ತು ಹಿಸುಕಿ ಕೊಲೆ ಮಾಡಿ, ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಇದನ್ನೂ ಓದಿ: 1,000 ರೂ.ಗಾಗಿ ವೃದ್ಧನ ಕರುಳು ಹೊರಗೆ ಬರುವಂತೆ ಚಾಕುವಿನಿಂದ ಇರಿದ್ರು!

    ಮಾಹಿತಿ ಪ್ರಕಾರ, ಚಮೇಲಿ ಎಂದು ಗುರುತಿಸಲಾದ ಮಹಿಳೆ ಮೂರು ಮಕ್ಕಳ ತಾಯಿ. ಕೆಲ ತಿಂಗಳ ಹಿಂದೆ ಪತಿಯಿಂದ ದೂರಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಘಟನೆ ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕಂಠಪೂರ್ತಿ ಕುಡಿದು ಬಸ್‌ನಲ್ಲಿ ಯುವತಿಯ ಸೀಟ್ ಮೇಲೆ ಮೂತ್ರವಿಸರ್ಜನೆ ಮಾಡಿದ ಭೂಪ

    ಏನಿದು ಘಟನೆ?: ಮಹಿಳೆ ಚಮೇಲಿ ಗಂಡನಿಂದ ಪ್ರತ್ಯೇಕವಾಗಿ ರನೌಲಿ ಬಸ್ ನಿಲ್ದಾಣದ ಬಳಿ ವಾಸಿಸುತ್ತಿದ್ದಳು. ಗಂಡನಿಂದ ದೂರಾಗಿದ್ದರೂ ಮತ್ತೊಬ್ಬ ಯುವಕ ಅಜಯ್ ಯಾದವ್‌ನೊಂದಿಗೆ ಲಿವ್ ಇನ್ ರಿಲೇಷನ್‌ನಲ್ಲಿ ವಾಸಿಸುತ್ತಿದ್ದಳು. ಇಬ್ಬರ ನಡುವೆ ದೈಹಿಕ ಸಂಪರ್ಕ ಅಗಿತ್ತು. ಈ ನಡುವೆ ಅಜಯ್ ಸ್ನೇಹಿತ ಉದಯ್ ಶುಕ್ಲಾ ಎಂಬ ಮತ್ತೊಬ್ಬ ಯುವಕನ ಜೊತೆಗೂ ಚಮೇಲಿ ಸಂಪರ್ಕ ಹೊಂದಿದ್ದಳು. ಅವನನ್ನು ಸೆಕ್ಸ್‌ಗಾಗಿ ಪೀಡಿಸುತ್ತಿದ್ದಳು, ಉದಯ್ ಬೇರೆ ಮದುವೆಯಾಗಿದ್ದರೂ ತನ್ನನ್ನು ಮದುವೆಯಾಗುವಂತೆ ಆಕೆ ಒತ್ತಾಯಿಸುತ್ತಿದ್ದಳು. ಈ ವಿಚಾರಕ್ಕೆ ಉದಯ್-ಚಮೇಲಿ ನಡುವೆ ಸಾಕಷ್ಟು ಬಾರಿ ಜಗಳ ನಡೆದಿತ್ತು.

    ಕೊನೆಗೆ ಉದಯ್ ಶುಕ್ಲಾ ತನ್ನ ಸ್ನೇಹಿತ ಅಜಯ್‌ಗೆ ಈ ವಿಷಯ ತಿಳಿಸಿದಾಗ ಇಬ್ಬರೂ ಸೇರಿ ಆಕೆಯನ್ನ ಮುಗಿಸೋಕೆ ಪ್ಲಾನ್ ಮಾಡಿದರು. ಅದಕ್ಕಾಗಿ ಪ್ರೇಮಿಗಳ ದಿನವನ್ನೇ ಆಯ್ಕೆ ಮಾಡಿಕೊಂಡರು. ನಂತರ ಉದಯ್ ಶುಕ್ಲಾ ನೆಪಮಾಡಿಕೊಂಡು ಪದ್ಮಲಾ ಗ್ರಾಮದ ನದಿಯ ಬಳಿಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದ. ಆ ವೇಳೆಗಾಗಲೇ ಅಜಯ್ ಅಲ್ಲಿ ಕಾಯುತ್ತಾ ಕುಳಿತಿದ್ದ. ಇಬ್ಬರೂ ಸೇರಿ ಬಣ್ಣ-ಬಣ್ಣದ ಮಾತುಗಳನ್ನಾಡಿ ನದಿಯ ಸೇತುವೆಯ ಮೇಲೆ ಕರೆತಂದರು. ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಮೃತದೇಹವನ್ನು ಸೇತುವೆ ಕೆಳಗೆ ಎಸೆದಿದ್ದಾರೆ.

    ಇದೀಗ ಪ್ರಕರಣ ಬಯಲಾಗಿದೆ. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k