Tag: crime

  • ವೃದ್ಧೆಯನ್ನು ಕೊಂದು, ಕಬೋರ್ಡ್‌ನಲ್ಲಿ ಸುತ್ತಿಟ್ಟು ಅನ್ಯಕೋಮಿನ ಮಹಿಳೆ ಎಸ್ಕೇಪ್

    ವೃದ್ಧೆಯನ್ನು ಕೊಂದು, ಕಬೋರ್ಡ್‌ನಲ್ಲಿ ಸುತ್ತಿಟ್ಟು ಅನ್ಯಕೋಮಿನ ಮಹಿಳೆ ಎಸ್ಕೇಪ್

    ಆನೇಕಲ್: ದೆಹಲಿಯ ಶ್ರದ್ಧಾವಾಕರ್ (Shraddha Walker) ಹತ್ಯೆ ಪ್ರಕರಣದ ಮಾದರಿಯಲ್ಲೇ ಅನ್ಯಕೋಮಿನ ಮಹಿಳೆಯೊಬ್ಬರು ವೃದ್ಧೆಯನ್ನು ಕೊಂದು, ಮೃತದೇಹವನ್ನು ಕಬೋರ್ಡ್‌ನಲ್ಲಿ ಸುತ್ತಿಟ್ಟಿದ್ದ ಘಟನೆ ಬೆಂಗಳೂರು (Bengaluru) ಹೊರಹೊಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.

    ಕೊಲೆಯ (Murder) ಆರೋಪಿಯನ್ನು ನೆರಳೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಾಯಲ್ ಖಾನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

    ಪಾಯಲ್ ಖಾನ್ ತನ್ನ ಕೆಳಮನೆಯಲ್ಲಿ ಬಾಡಿಗೆಗೆ ವಾಸವಿದ್ದ ವೃದ್ಧೆಯನ್ನು ಕೊಂದು ಎಸ್ಕೇಪ್ ಆಗಿದ್ದಾಳೆ. ಕಳೆದ ಮೂರು ದಿನಗಳ ಹಿಂದೆ ಈ ಮಹಿಳೆ ಅಜ್ಜಿಯನ್ನು ಮನೆಗೆ ಕರೆದಿದ್ದಳು. ಅನಂತರ ಎಷ್ಟು ಹುಡುಕಿದರೂ ಸಿಗಲೇ ಇಲ್ಲ. ಕೊಲೆ ಮಾಡಿ ಒಂದು ದಿನದ ನಂತರ ಮುಸ್ಲಿಂ ಮಹಿಳೆ (Muslim Women) ಎಸ್ಕೇಪ್ ಆಗಿದ್ದಳು. ಇದರಿಂದ ಅನುಮಾನಗೊಂಡ ಅಜ್ಜಿ ಮನೆಯವರು ಆಕೆಯ ಮನೆಬೀಗ ತೆಗೆಸಿ ನೋಡಿದ್ದಾರೆ. ಮನೆಯಲ್ಲಾ ಹುಡುಕಾಡಿದಾಗ ಅಜ್ಜಿಯ ಮೃತದೇಹವನ್ನು ಪ್ಯಾಕ್ ಮಾಡಿ ಕಬೋರ್ಡ್‌ನಲ್ಲಿ ಇಟ್ಟಿದ್ದನ್ನು ಕಂಡು ದಂಗಾಗಿದ್ದಾರೆ. ಬಳಿಕ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ತುಮಕೂರು ಜಿಲ್ಲೆಯ ಶಿರಾ ಮೂಲತದ ವೃದ್ಧೆ ಪಾರ್ವತಮ್ಮ ಕಳೆದ 9 ತಿಂಗಳ ಹಿಂದೆ ನೆರಳೂರಿಗೆ ಬಾಡಿಗೆಗೆ ಬಂದಿದ್ದರು. ಶುಕ್ರವಾರ ಪಾರ್ವತಮ್ಮ ಅವರ ಸೊಸೆ ಜ್ಯೋತಿ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರಲು ಹೊರಗೆ ಹೋಗಿದ್ದಾರೆ. ಈ ವೇಳೆ ಅಜ್ಜಿಯನ್ನು ಮನೆಗೆ ಕರೆದುಕೊಂಡು ಹೋದ ಮಹಿಳೆ ಕೃತ್ಯ ಎಸಗಿದ್ದಾಳೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಕ್ಷೌರಿಕನ ಮಗ 250ನೇ ಏಕದಿನ ಆಟಗಾರನಾಗಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದೇ ರೋಚಕ

    ಆರೋಪಿ ಮಹಿಳೆ ಪಾಯಲ್ ಖಾನ್ 8 ತಿಂಗಳ ಹಿಂದೆಯಷ್ಟೇ ನೆರಳೂರಿನಲ್ಲಿ ಮನೆ ಬಾಡಿಗೆ ಪಡೆದಿದ್ದರು. ತನ್ನ ಅಣ್ಣನಿಗೆ ಅಪಘಾತವಾಗಿದೆ ಎಂದು ಹೇಳಿ ಮುಸ್ಲಿಂ ಮಹಿಳೆ ಒಬ್ಬಳೇ ವಾಸವಾಗಿದ್ದಳು. ಕಳೆದ ತಿಂಗಳೂ ಬಾಡಿಗೆ ಕೊಟ್ಟಿರಲಿಲ್ಲ. ಆದ್ರೆ ಅಜ್ಜಿ ಕೊಲೆಯಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮನೆ ಮಾಲೀಕ ಅಂಬರೀಶ್ ಹೇಳಿದ್ದಾರೆ.

    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಕಳೆದ ಮೂರು ದಿನಗಳಿಂದ ಮೃತ ಅಜ್ಜಿ ಪಾರ್ವತಮ್ಮ ನಾಪತ್ತೆಯಾಗಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ನಿನ್ನೆಯಿಂದ ಮುಸ್ಲಿಂ ಮಹಿಳೆ ಪಾಯಲ್ ಖಾನ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಮನೆ ಪರಿಶೀಲಿಸಿದಾಗ ಕಬೋರ್ಡ್ನಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

    ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಮಾರಕಾಸ್ತçಗಳಿಂದ ತಲೆ ಹೊಡೆದು ಹತ್ಯೆ ಮಾಡಲಾಗಿದೆ. ಅಜ್ಜಿಯ ಮೈಮೇಲಿದ್ದ 70 ಗ್ರಾಂ ಚಿನ್ನ ಸಹ ನಾಪತ್ತೆಯಾಗಿದೆ. ಆರೋಪಿ ಮಹಿಳೆ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚಿಸಲಾಗಿದೆ, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತನ್ನಿಂದಲೇ ವಂಶ ಬೆಳೆಯಲೆಂದು ಸೊಸೆಯ ಮೇಲೆ ಕಣ್ಣಿಟ್ಟ ಮಾವನ ಕೊಲೆ

    ತನ್ನಿಂದಲೇ ವಂಶ ಬೆಳೆಯಲೆಂದು ಸೊಸೆಯ ಮೇಲೆ ಕಣ್ಣಿಟ್ಟ ಮಾವನ ಕೊಲೆ

    ಹಾಸನ: ಮಗ ಚುರುಕಿಲ್ಲ, ಹಾಗಾಗಿ ತನ್ನಿಂದಲೇ ವಂಶ ಬೆಳೆಯಲಿ ಎಂದು ಸೊಸೆಯ ಮೇಲೆ ಕಣ್ಣು ಹಾಕಿದ ಮಾವನನ್ನು ಸುಪಾರಿ ಕೊಟ್ಟು ಬೀಗರಿಂದಲೇ ಹತ್ಯೆ ಮಾಡಿಸಿರುವ ಘಟನೆ ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ತಮ್ಮೇಗೌಡ (55) ಕೊಲೆಯಾದ ವ್ಯಕ್ತಿ. ನ.13 ರಂದು ರಾಗಿಕಾವಲು ಗ್ರಾಮದ ಹೊಸಕೆರೆಯಲ್ಲಿ ತಮ್ಮೇಗೌಡನ ಶವ ಪತ್ತೆಯಾಗಿತ್ತು. ಮುಖವನ್ನು ಪ್ಲಾಸ್ಟಿಕ್ ಚೀಲದಿಂದ ಮುಚ್ಚಿ ಕೆರೆಗೆ ಶವ ಎಸೆಯಲಾಗಿತ್ತು. ಈ ಸಂಬಂಧ ಮೃತನ 3ನೇ ಮಗ ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಕೊನೆಗೂ ಕೊಲೆಯ ರಹಸ್ಯ ಭೇದಿಸುವಲ್ಲಿ ಪೊಲೀಸರು (Police) ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ – ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಬದ್ರುದ್ದೀನ್ ಸಲಹೆ

    ಸುಪಾರಿ ಕಿಲ್ಲಿಂಗ್ ನಡೆದದ್ದು ಹೇಗೆ?
    ಮಾವ ತಮ್ಮೇಗೌಡ ತನ್ನ ಸೊಸೆ ನಾಗರತ್ನಾಳಿಗೆ ಅನೇಕ ರೀತಿಯಲ್ಲಿ ತೊಂದರೆ ಕೊಡುತ್ತಿದ್ದ. ಮಗ ಬೌದ್ಧಿಕವಾಗಿ ಅಷ್ಟೇನು ಚುರುಕಿರಲಿಲ್ಲ. ಈತನಿಂದ ಮಕ್ಕಳಾಗುವುದು ಅನುಮಾನವಿತ್ತು. ಹೀಗಾಗಿ ತನ್ನಿಂದಲೇ ವಂಶ ಬೆಳೆಯಲಿ ಎಂದು ಮಾವ ಸೊಸೆಗೆ ಲೈಂಗಿಕವಾಗಿ ಕಿರುಕುಳ (Sexual Harassment) ನೀಡುತ್ತಿದ್ದ. ಮಾವನ ನೀಚ ಬುದ್ದಿ ಬಗ್ಗೆ ತನ್ನ ಪೋಷಕರ ಬಳಿ ಸೊಸೆ ಹೇಳಿಕೊಂಡ ನಂತರ ನಾಗರತ್ನಾಳ ಪೋಷಕರಾದ ಮೈಲಾರಗೌಡ ಹಾಗೂ ತಾಯಮ್ಮ 50 ಸಾವಿರಕ್ಕೆ ಕೊಲೆ ಸುಪಾರಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಅಪಘಾತ – ಕ್ಯಾಂಟರ್‌ನಲ್ಲಿ ಸಿಲುಕಿ ನರಳಾಡಿದ ಚಾಲಕ

    CRIME COURT

    ತಮ್ಮ ಮನೆಯಲ್ಲೇ ಮದ್ಯ ಕುಡಿಸಿ ರಾಡ್‌ನಿಂದ ಬಲವಾಗಿ ಹೊಡೆದು, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಶವವನ್ನ ಕೆರೆಗೆ ಬಿಸಾಡಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಹಳ್ಳಿಮೈಸೂರು ಠಾಣೆ ಪೊಲೀಸರು (HalliMysore Police) ಪ್ರಕರಣವನ್ನು ಭೇದಿಸಿ ಕೊಲೆ ಆರೋಪಿಗಳಾದ ಯೋಗೇಶ್, ಚಂದ್ರೇಗೌಡ, ಮೈಲಾರಿಗೌಡ ಆತನ ಪತ್ನಿ ತಾಯಮ್ಮ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತೋಟದ ಮನೆಗೆ ಹೋಗಲು ಅಡ್ಡಿಯಾಗಿದ್ದನೆಂದು ಗಂಡನನ್ನೇ ಕೊಲೆಗೈದ ಪತ್ನಿ

    ತೋಟದ ಮನೆಗೆ ಹೋಗಲು ಅಡ್ಡಿಯಾಗಿದ್ದನೆಂದು ಗಂಡನನ್ನೇ ಕೊಲೆಗೈದ ಪತ್ನಿ

    ರಾಮನಗರ: ಜಿಲ್ಲೆಯ ಕೆಂಪೇಗೌಡನ ದೊಡ್ಡಿ ಬಳಿ ದಶಪಥ ಹೆದ್ದಾರಿಯ (National Highway) ಸರ್ವೀಸ್ ರಸ್ತೆ  ಡ್ರೈನೇಜ್‌ ನಲ್ಲಿ ವ್ಯಕ್ತಿಯ ಶವಪತ್ತೆ ಆಗಿರೋ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಚನ್ನಪಟ್ಟಣ ತಾಲೂಕಿನ ರಾಮನರಸಿಂಹರಾಜಪುರ (ಕೃಷ್ಣಾಪುರ) ನಿವಾಸಿ ದೇಸೇಗೌಡ (45) ಶವವಾಗಿ ಪತ್ತೆಯಾಗಿದ್ದು, ಸ್ನೇಹಿತನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ, ಇಬ್ಬರನ್ನೂ ವಶಕ್ಕೆ ತೆಗದುಕೊಂಡು ಪೊಲೀಸರು (Police) ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

    ದೇಸೇಗೌಡ ನ.27ರಂದು ಕಾಣೆಯಾಗಿದ್ದಾನೆಂದು ಪತ್ನಿ ಜಯಲಕ್ಷ್ಮೀ (32) ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ದಾಸೇಗೌಡನ ಶವ ಪತ್ತೆಹಚ್ಚಿದ್ದಾರೆ. ಇದೀಗ ಡ್ರೈನೇಜ್‌ನಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಇದನ್ನೂ ಓದಿ: ಪ್ರತಿಷ್ಠಿತ ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ರಶ್ಮಿಕಾ ಔಟ್

    ಏನಿದು ಮರ್ಡರ್ ಮಿಸ್ಟ್ರಿ?
    ಮೃತ ದಾಸೇಗೌಡ ಮೂಲತಃ ಚನ್ನಪಟ್ಟಣ ತಾಲ್ಲೂಕಿನ ರಾಮನರಸಿಂಹರಾಜಪುರ ಗ್ರಾಮದ ನಿವಾಸಿ. ಚಿಕ್ಕಬಾಣಾವರ ಬಳಿಯ ಸೋಮಶೆಟ್ಟಿಹಳ್ಳಿ ಗ್ರಾಮದ ಫಾರ್ಮ್ ಹೌಸ್‌ನಲ್ಲಿ ಕೆಲಸ ಮಾಡಿಕೊಂಡು ಹೆಂಡತಿ, ಮಕ್ಕಳೊಂದಿಗೆ ವಾಸವಿದ್ದ. ಆದರೆ ಮದುವೆಯಾದಾಗಿನಿಂದಲೂ ಸಂಸಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಜಯಲಕ್ಷ್ಮೀ – ದೇಸೇಗೌಡ ಅನ್ಯೋನ್ಯವಾಗಿರಲಿಲ್ಲ. ಈ ನಡುವೆ ಸ್ನೇಹಿತ ರಾಜೇಶ್ (26) ಜೊತೆ ಅಕ್ರಮ ಸಂಬಂಧ ಹೊಂದಿದ್ದ ಜಯಲಕ್ಷ್ಮೀ ಆಗಾಗ್ಗೆ ತೋಟದ ಮನೆಗೆ ಹೋಗಿಬರುತ್ತಿದ್ದಳು. ತೋಟದ ಮನೆಗೆ ಹೋಗಲು ಪತಿ ಅಡ್ಡಿಯಾಗಿದ್ದ ಎಂದು ಸ್ನೇಹಿತನೊಂದಿಗೆ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಸೋಮಶೆಟ್ಟಿಹಳ್ಳಿ ಗ್ರಾಮದ ಫಾರ್ಮ್ ಹೌಸ್ (Farmhouse) ನಲ್ಲಿ ಕೊಲೆ ಮಾಡಿ ತಡರಾತ್ರಿ ತಂದು ಶವವನ್ನ ಮೋರಿಯಲ್ಲಿ ಬಿಸಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ಈ ಕುರಿತು ತನಿಖೆ ನಡೆಸಿದ ಪೊಲೀಸರು, ಇಂದು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಅನುಮಾನಕ್ಕೆ ಕಾರಣವಾಗಿದ್ದ ಪತ್ನಿ ಜಯಲಕ್ಷ್ಮೀ ಹಾಗೂ ಸ್ನೇಹಿತ ರಾಜೇಶ್ ವಿರುದ್ಧ ತನಿಖೆ ಮುಂದುವರಿಸಿದ್ದಾರೆ. ಪೊಲೀಸ್ ತನಿಖೆ ಬಳಿಕ ಸತ್ಯಾಂಶ ಬಯಲಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರೀತಿಸಿ ಮದ್ವೆಯಾಗಿದ್ದ ಪೊಲೀಸ್ ಪೇದೆ ಪತ್ನಿ ಅನುಮಾನಾಸ್ಪದ ಸಾವು

    ಪ್ರೀತಿಸಿ ಮದ್ವೆಯಾಗಿದ್ದ ಪೊಲೀಸ್ ಪೇದೆ ಪತ್ನಿ ಅನುಮಾನಾಸ್ಪದ ಸಾವು

    ಬಳ್ಳಾರಿ: ಕಳೆದ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ (Love Marriage) ಪೊಲೀಸ್ (Police) ಪೇದೆಯ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

    ತೆಕ್ಕಲಕೋಟೆ ಠಾಣೆಯ ಪೇದೆ ರಮೇಶ್ ಪತ್ನಿ ರಾಜೇಶ್ವರಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಕಳೆದ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಕುಟುಂಬಸ್ಥರು, ಪತಿ ರಮೇಶ್ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ ಅಕ್ಷರ ಮಿತಿ 280ರಿಂದ 1,000ಕ್ಕೆ ಏರಿಕೆ – ಸುಳಿವು ನೀಡಿದ ಮಸ್ಕ್‌

    CRIME

    ಕಳೆದ ಎರಡು ವರ್ಷಗಳ ಹಿಂದೆ ಯುವತಿ ಮನೆಯವರ ವಿರೋಧದ ನಡುವೆಯೂ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು (Love Marriage). 6 ತಿಂಗಳ ಹಿಂದೆಯಷ್ಟೇ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ನಿನ್ನೆ ಬೆಳಗಿನ ಜಾವ ಸಾವನ್ನಪ್ಪಿರುವ ಪತ್ನಿ ರಾಜೇಶ್ವರಿ ಶವವನ್ನು ಇದ್ದಕ್ಕಿದ್ದ ಹಾಗೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿರುವ ತವರು ಮನೆಗೆ ತೆಗೆದುಕೊಂಡು ಹೋಗಿದ್ದಾನೆ. ಇದನ್ನೂ ಓದಿ: 2024ರೊಳಗೆ Air India ಜೊತೆ ವಿಸ್ತಾರಾ ವಿಲೀನ – 2 ಸಾವಿರ ಕೋಟಿ ಹೂಡಿಕೆಗೆ ಟಾಟಾ ಚಿಂತನೆ

    ಸಾವು ಹೇಗಾಯ್ತು ಎಂದು ಕೇಳುತ್ತಿದ್ದಂತೆ ರಮೇಶ್ ಒಮ್ಮೆ ನೇಣಿಗೆ ಶರಣಾದಳು, ಮತ್ತೊಮ್ಮೆ ಫಿಡ್ಸ್ ಬಂತು, ಮಗದೊಮ್ಮೆ ಲೋ ಬಿಪಿಯಿಂದ ಸಾವಾಗಿದೆ ಎಂದು ವಿಚಿತ್ರವಾಗಿ ಉತ್ತರಿಸಿದ್ದಾನೆ. ಇದರಿಂದ ಅನುಮಾನಗೊಂಡ ಪತ್ನಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಪತ್ನಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ (Bellary Hospital) ರವಾನಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಜೀಪ್‌ನಿಂದ ಬಿದ್ದು ಸಾವು

    ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಜೀಪ್‌ನಿಂದ ಬಿದ್ದು ಸಾವು

    ಚಾಮರಾಜನಗರ (Chamarajanagar): ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯೊಬ್ಬ ಪೊಲೀಸ್ ಜೀಪ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕುಂತೂರು ಮೋಳೆ ಗ್ರಾಮದ ನಿಂಗರಾಜು (24) ಮೃತ ಆರೋಪಿ. ಅಪ್ರಾಪ್ತೆಯ ಕಿಡ್ನ್ಯಾಪ್ ಕೇಸ್‌ನಲ್ಲಿ (Kidnap Case) ನಿಂಗರಾಜು ಆರೋಪಿಯಾಗಿದ್ದ. ವಿಚಾರಣೆಗೆಂದು ಪೊಲೀಸ್ ಠಾಣೆಗೆ (Police Station) ಕರೆತರುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಜೀಪ್‌ನಿಂದ ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇದನ್ನೂ ಓದಿ: ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸಿದ ಅನ್ಯಕೋಮಿನ ವ್ಯಾಪಾರಸ್ಥರು

    ಜೀಪ್‌ನಿಂದ ನೆಗೆದ ಬಳಿಕ ಗಂಭೀರ ಗಾಯಗಳಾಗಿದ್ದರಿಂದ ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    Live Tv
    [brid partner=56869869 player=32851 video=960834 autoplay=true]

  • ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಮೈಸೂರು: ನಗರದಲ್ಲಿ ಇನ್ಮುಂದೆ ಬೇಕಾಬಿಟ್ಟಿಯಾಗಿ ಮನೆ, ರೂಂ ಗಳನ್ನು ಬಾಡಿಗೆ (House For Rent) ನೀಡುವಂತಿಲ್ಲ. ರೂಂ, ಮನೆ ಬಾಡಿಗೆ ಕೊಡುವ ಮುನ್ನಾ ಸ್ಥಳೀಯ ಪೊಲೀಸರಿಂದ ಕ್ಲಿಯರೆನ್ಸ್ (Police Clearance) ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ.

    ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ (Mangaluru Bomb Blast) ಮಾಡಿದ ಶಾರೀಕ್ (Shariq) ಮೈಸೂರಿನಲ್ಲಿ (Mysuru) ಮನೆ ಬಾಡಿಗೆ ಪಡೆದು ವಾಸವಿದ್ದ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸರು ಮನೆ ಬಾಡಿಗೆ ಪಡೆಯಲು ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮನೆ ಮಾಲೀಕರಿಗೂ ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ. ಇದನ್ನೂ ಓದಿ: ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ – ಇಬ್ಬರು ವೈದ್ಯ ಸಿಬ್ಬಂದಿ ಅಮಾನತು

    ಶಾರೀಕ್ ಆರೋಗ್ಯದಲ್ಲಿ ಚೇತರಿಕೆ:
    ಶಂಕಿತ ಉಗ್ರ ಶಾರೀಕ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ. ಈ ನಡುವೆ ಉಗ್ರನ ಲಿಂಕ್ ರಹಸ್ಯ ಮತ್ತಷ್ಟು ಭೇದಿಸಿರುವ ಪೊಲೀಸರಿಗೆ ಆತಂಕಕಾರಿ ಮಾಹಿತಿಗಳು ಲಭ್ಯವಾಗಿವೆ. 26/11 ಮುಂಬೈನ ದಾಳಿಯಂತೆಯೇ ಅದೇ ದಿನವಾದ ಇಂದು ಕೂಡಾ ಮಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಇದನ್ನೂ ಓದಿ: ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – ನಾಲ್ವರು ಮಾವೋವಾದಿಗಳ ಹತ್ಯೆ

    ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ:
    ವೆಂಟಿಲೇಟರ್‌ನಲ್ಲಿದ್ದ ಶಾರೀಕ್ ಇಂದು ಸ್ವಲ್ಪಮಟ್ಟಿಗೆ ಚೇತರಿಕೆ ಕಂಡಿದ್ದಾನೆ. ಈ ನಡುವೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ಆತ ಇರುವ 5ನೇ ಮಹಡಿ ಹಾಗೂ ಐಸಿಯುನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದು, ಮೂರು ಪಾಳಿಯಲ್ಲಿ ಪೊಲೀಸರು ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಸ್ಫೋಟಕ ಹ್ಯಾಂಡ್ಲರ್‌ಗಳು, ಸ್ಲೀಪರ್ ಸೆಲ್‌ಗಳನ್ನು ಆಕ್ವೀವ್ ಮಾಡಿ ಆತನನ್ನು ಮುಗಿಸುವ ಯತ್ನ ನಡೆಸಿರುವ ಶಂಕೆ ಇದ್ದು ಈ ಹಿನ್ನಲೆಯಲ್ಲೂ ಪೊಲೀಸರು ಆಕ್ಟೀವ್ ಆಗಿದ್ದಾರೆ. ಸ್ವತಃ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಿದ್ದು, ಹಿರಿಯ ಅಧಿಕಾರಿಗಳು ಆಸ್ಪತ್ತೆಯಲ್ಲೇ ಬೀಡು ಬಿಟ್ಟಿದ್ದಾರೆ.

    ಮುಂಬೈ ಸ್ಫೋಟದಂತೆ ಪ್ಲ್ಯಾನ್‌
    ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿದ್ದು, ಉಗ್ರ ಶಾರೀಕ್ ತನಿಖಾಧಿಕಾರಿಗಳ ಜೊತೆ ಮಾತನಾಡದೇ ಇದ್ರೂ ಸಾಕಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿದೆ. ಶಾರೀಕ್ 26/11ರ ಮುಂಬೈ ಸ್ಫೋಟದಂತೆಯೇ (Mumbai BombBlast) ಮಂಗಳೂರಿನಲ್ಲೂ ಅದೇ ದಿನ ಅಂದರೆ ಇಂದು ನವೆಂಬರ್ 26 ಆಗಿರೋದ್ರಿಂದ ಇಂದೇ ಮತ್ತೊಮ್ಮೆ ಸರಣಿ ಸ್ಫೋಟ ನಡೆಸಲು ತಯಾರಿ ನಡೆಸಿದ್ದನಂತೆ. ಮುಂಬೈ ಸ್ಫೋಟದ ಉಗ್ರ ಕಸಬ್‌ನಂತೆಯೇ ಹಿಂದೂ ಸೋಗಿನಲ್ಲೇ ಮಂಗಳೂರಿಗೆ ಬಂದಿದ್ದ ಶಾರೀಕ್ ಕಳೆದ ನ.19ರ ಶನಿವಾರ ಕುಕ್ಕರ್ ಬಾಂಬ್ ಸ್ಫೋಟ ಮಾಡಲು ಬಂದು ವಿಫಲನಾಗಿ ಸಿಕ್ಕಿಬಿದ್ದಿದ್ದಾನೆ. ಒಂದು ವೇಳೆ ಆತನ ಪ್ಲ್ಯಾನ್‌ ನಂತೆಯೇ ಸ್ಫೋಟಗೊಂಡಿದ್ದರೆ ಮತ್ತೆ ಮೈಸೂರಿಗೆ ತೆರಳಿ ಬಾಂಬ್ ತಯಾರಿಸಿ ಶನಿವಾರ (ನವೆಂಬರ್ 26) ಮಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಎಂದು ಹೇಳಿದ್ದಾರೆ.

    ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಮಾತನಾಡಿ, ಉಗ್ರ ಶಾರೀಕ್‌ಗೆ ಐಸಿಸ್ ಸೇರಿ ಹಲವು ಉಗ್ರರ ಸಂಪರ್ಕವಿತ್ತು ಅನ್ನೋದು ಬೆಳಕಿಗೆ ಬಂದಿದೆ. ಈತ ಮುಸ್ಲಿಂ ಭಾಷಣಕಾರ ಝಾಕೀರ್ ನಾಯ್ಕ್ನಿಂದ ಪ್ರೇರೇಪಿತನಾಗಿದ್ದ ಅನ್ನೋದು ಮತ್ತೆ ಸಾಬೀತಾಗಿದೆ. ಸ್ಫೋಟಗೊಂಡ ಒಂದೂವರೆ ಗಂಟೆಯಲ್ಲೇ ಮಲೇಶಿಯಾದಲ್ಲಿರೋ ಝಾಕೀರ್ ನಾಯ್ಕ್ ಆತನ ಟ್ವೀಟರ್‌ನಲ್ಲಿ ಇಸ್ಲಾಂನಲ್ಲಿ ಆತ್ಮಾಹುತಿ ಬಾಂಬ್‌ಗೆ ಅವಕಾಶ ಇದ್ಯಾ ಎಂದು ಟ್ವೀಟ್ ಮಾಡಿದ್ದ. ಆತ್ಮಾಹುತಿ ಬಾಂಬ್‌ನ ಬಗೆಗಿನ ತನ್ನ ವಿಡಿಯೋವನ್ನೂ ಪೋಸ್ಟ್ ಮಾಡಿದ್ದ. ಇದೆಲ್ಲವನ್ನೂ ನೋಡುವಾಗ ಉಗ್ರ ಶಾರೀಕ್‌ನ ಲಿಂಕ್ ದೊಡ್ಡ ಮಟ್ಟದಲ್ಲೇ ಇತ್ತು ಅನ್ನೋದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಶಿಕ್ಷಕ ಸೇರಿ ಇಬ್ಬರು ಕಾಮುಕರು ಅರೆಸ್ಟ್

    ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಶಿಕ್ಷಕ ಸೇರಿ ಇಬ್ಬರು ಕಾಮುಕರು ಅರೆಸ್ಟ್

    ರಾಯಚೂರು: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣ (Pocso Case) ದಾಖಲಾಗಿದ್ದು ಇಬ್ಬರು ಕಾಮುಕರನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಕನೊಬ್ಬ 13 ವರ್ಷದ ವಿದ್ಯಾರ್ಥಿನಿಯೊಂದಿಗೆ (Student) ಮೂರು ದಿನ ನಾಪತ್ತೆಯಾಗಿದ್ದ. ಇದೀಗ ಅತಿಥಿ ಶಿಕ್ಷಕ ಪಾಲೇಶ್ (32) ಸಿರವಾರ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ – ಶಾಲಾ ನಿರ್ದೇಶಕ ವಿರುದ್ಧ ದೂರು

    ಇನ್ನೂ ದೇವದುರ್ಗ ತಾಲೂಕಿನಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅಯ್ಯಪ್ಪ (45) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಗುವನ್ನು ಮನೆಗೆ ಬಿಡುವ ನೆಪದಲ್ಲಿ ಕರೆದೊಯ್ದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ಕೂಗಾಡಿ ಗಲಾಟೆ ಮಾಡಿದಾಗ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದ. ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಜಾಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸಿನಿಮಾಗಳ ಆಯ್ಕೆ, ದೇವರು ಬಗೆಗಿನ ಗ್ರಹಿಕೆ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಎರಡೂ ಪ್ರಕರಣಗಳ ಆರೋಪಿಗಳು ಸೆರೆಸಿಕ್ಕಿದ್ದು, ಬಾಲಕಿಯರ ರಕ್ಷಣೆ ಮಾಡಲಾಗಿದೆ. ಸಿರವಾರ ಹಾಗೂ ಜಾಲಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 5ರ ಬಾಲಕಿ ಮೇಲೆ ಅತ್ಯಾಚಾರ ಆರೋಪ – ಕೇವಲ 5 ಬಸ್ಕಿ ಶಿಕ್ಷೆ

    5ರ ಬಾಲಕಿ ಮೇಲೆ ಅತ್ಯಾಚಾರ ಆರೋಪ – ಕೇವಲ 5 ಬಸ್ಕಿ ಶಿಕ್ಷೆ

    ಪಾಟ್ನಾ: ಚಾಕೊಲೇಟ್ ಕೊಡಿಸುವ ನೆಪದಲ್ಲಿ 5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಅನ್ನೋ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಕೇವಲ 5 ಬಸ್ಕಿ ಶಿಕ್ಷೆ ವಿಧಿಸಿರುವ ಘಟನೆ ಬಿಹಾರದ (Bihar) ನವಾಡ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.


    ಗ್ರಾಮಸ್ಥರ ಎದುರು ಎದುರು ಆ ವ್ಯಕ್ತಿ, ತನ್ನ ಎರಡೂ ಕಿವಿ ಹಿಡಿದುಕೊಂಡು ಐದು ಸಲ ಎದ್ದು ಬಸ್ಕಿ ಹೊಡೆದ ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಇನ್ನು ಬಸ್ಕಿ ಹೊಡೆಯುತ್ತಿದ್ದ ವ್ಯಕ್ತಿಗೆ ಅಲ್ಲಿದ್ದ ಮಹಿಳೆಯರೆಲ್ಲ ನಿಂದಿಸುತ್ತಿರುವುದು ವೀಡಿಯೊದಲ್ಲಿ ಕೇಳಿಸುತ್ತದೆ. ಪ್ರಕರಣ ಇದೀಗ ಪೊಲೀಸ್ ಠಾಣೆ (Bihar Police Station) ಮೆಟ್ಟಿಲೇರಿದೆ. ಇದನ್ನೂ ಓದಿ: ಮರಾಠಿ ಸಾಂಗ್ ಹಾಕಲ್ಲ – ಹೋಟೆಲ್ ಮ್ಯಾನೇಜರ್ ಮೇಲೆ MNS ಕಾರ್ಯಕರ್ತರಿಂದ ಹಲ್ಲೆ

    ಈ ವ್ಯಕ್ತಿ ಐದು ವರ್ಷದ ಬಾಲಕಿಯನ್ನು ಏಕಾಂತಕ್ಕೆ ಕರೆದುಕೊಂಡು ಹೋಗಿ, ತನ್ನ ತೊಡೆಯ ಮೇಲೆ ಕೂರಿಸಿಕೊಂಡು, ಅವಳನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಬಳಿಕ ಆಕೆಯ ಪೋಷಕರು ಪಂಚಾಯಿತಿಗೆ ದೂರು ಕೊಟ್ಟಿದ್ದರು. ಪೊಲೀಸರಿಗೆ ದೂರು ಕೊಟ್ಟರೆ ಎಫ್‌ಐಆರ್ (FIR) ದಾಖಲಾಗುತ್ತದೆ. ವಿಷಯ ದೊಡ್ಡದಾಗಿ ಮನೆ ಮರ್ಯಾದಿ ಹಾಳಾಗುತ್ತದೆ ಎಂಬ ಕಾರಣಕ್ಕೆ ಪಂಚಾಯಿತಿಗೆ ಹೋಗಿದ್ದಾರೆ. ಅಷ್ಟೇ ಅಲ್ಲ, ಆರೋಪಿಯ ಕುಟುಂಬದವರನ್ನು ಸಂಪರ್ಕಿಸಿ, ಅವರಿಗೂ ವಿಷಯ ತಿಳಿಸಿದ್ದಾರೆ. ಬಳಿಕ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಪಂಚಾಯಿತಿ ಮುಖಂಡರು ವಿಚಾರಣೆ ನಡೆಸಿದ್ದಾರೆ. ಕೊನೆಯಲ್ಲಿ ಆರೋಪಿ ಹುಡುಗಿ ಮೇಲೆ ಅತ್ಯಾಚಾರ ಮಾಡಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆದರೆ ಹಾಗೆ ಆಕೆಯನ್ನು ಪೌಲ್ಟ್ರಿ ಫಾರ್ಮ್‌ಗೆ ಕರೆದುಕೊಂಡು ಹೋಗಿದ್ದು ತಪ್ಪು ಎಂಬ ಕಾರಣಕ್ಕೆ ಬಸ್ಕಿ ಶಿಕ್ಷೆ ನೀಡಿದ್ದಾರೆ ಎಂದು ನಾವಡಾ ಎಸ್‌ಪಿ ಡಾ. ಗೌರವ್ ಮಂಗಲ್ ತಿಳಿಸಿದ್ದಾರೆ.

    ಬಳಿಕ ಪಂಚಾಯಿತಿಯಲ್ಲಿದ್ದ ಸದಸ್ಯರೊಬ್ಬರು ಈ ವಿಷಯವನ್ನು ಪೊಲೀಸ್ ಗಮನಕ್ಕೆ ತಂದಿದ್ದಾರೆ. ಅದಾದ ಬಳಿಕ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಕೇಸ್ ದಾಖಲಿಸಿಕೊಂಡು ತನಿಖೆಯನ್ನೂ ಪ್ರಾರಂಭ ಮಾಡಿದ್ದಾರೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸುವುದಾಗಿಯೂ ಪೊಲೀಸ್ ತಿಳಿಸಿದ್ದಾರೆ. ಇದನ್ನೂ ಓದಿ: 13 ವರ್ಷದ ನಾಯಿ ನಾಪತ್ತೆ – ಹುಡುಕಿ ಕೊಟ್ಟವರಿಗೆ 25,000ರೂ. ಬಂಪರ್ ಬಹುಮಾನ

    ಈ ವೀಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟಿರುವವರು ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಟ್ಯಾಗ್ ಮಾಡಿ, ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಗುಂಡಿನ ಸುರಿಮಳೆ – 10ಕ್ಕೂ ಹೆಚ್ಚು ಮಂದಿ ಸಾವು

    ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಗುಂಡಿನ ಸುರಿಮಳೆ – 10ಕ್ಕೂ ಹೆಚ್ಚು ಮಂದಿ ಸಾವು

    ವಾಷಿಂಗ್ಟನ್: ಅಮೆರಿಕದ (US) ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ನಡೆದ ಗುಂಡಿನ ದಾಳಿಯಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಚೆಸಾಪೀಕ್‌ನ ಸ್ಯಾಮ್ಸ್ ವೃತ್ತದಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು (US Police) ತಿಳಿಸಿದ್ದಾರೆ. ಸದ್ಯ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಮೃತಪಟ್ಟವರ ಸಂಖ್ಯೆ ಹಾಗೂ ಗಾಯಗೊಂಡವರ ಸಂಖ್ಯೆ ಎಷ್ಟೆಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಕತ್ತಿಯಿಂದ ಜನರ ಶಿರಚ್ಛೇದ – 10 ದಿನಗಳಲ್ಲಿ 12 ಜನರಿಗೆ ಮರಣದಂಡನೆ

    ವಾಲ್‌ಮಾರ್ಟ್ ಉದ್ಯೋಗಿಯೇ ಶೂಟರ್ ಆಗಿದ್ದ ಎಂದು ಹೇಳಲಾಗುತ್ತಿದೆ. ಆದರೆ ಇದು ಖಚಿತವಾಗಿಲ್ಲ. ಸದ್ಯ ಹಂತಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಮೆರಿಕದ ಸಲಿಂಗಕಾಮಿಗಳ ನೈಟ್‌ಕ್ಲಬ್‌ನಲ್ಲಿ ಗುಂಡಿನ ದಾಳಿ – 5 ಸಾವು, 18 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • 15ಕ್ಕೂ ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದವನ ಮೇಲೆ ಶೂಟೌಟ್ ಮಾಡಿ ಅರೆಸ್ಟ್‌

    15ಕ್ಕೂ ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದವನ ಮೇಲೆ ಶೂಟೌಟ್ ಮಾಡಿ ಅರೆಸ್ಟ್‌

    ನೆಲಮಂಗಲ: 15ಕ್ಕೂ ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ಸರಗಳ್ಳನ ಮೇಲೆ ಗುಂಡು ಹಾರಿಸಿ (Shootout) ಪೊಲೀಸರು (Nelamangala Town Police) ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ನೆಲಮಂಗಲದ ಬಿನ್ನಮಂಗಲದ ಬಳಿ ನಡೆದಿದೆ.

    ನೆಲಮಂಗಲ ಟೌನ್ ಸಿಪಿಐ (CPI) ಶಶಿಕುಮಾರ್ ಫೈರಿಂಗ್ ಕುಖ್ಯಾತ ಸರಗಳ್ಳ ಯೋಗ ಯೋಗಾನಂದ್ (31) ಮೇಲೆ ಗುಂಡುಹಾರಿಸಿದ್ದು, ಆರೋಪಿಯನ್ನ ನೆಲಮಂಗಲ ಆಸ್ಪತ್ರೆಗೆ (Nelamangala Hospital) ದಾಖಲಿಸಲಾಗಿದೆ. ಕಾರ್ಯಾಚರಣೆ ವೇಳೆ ಗಾಯಗೊಂಡ ಕಾನ್ಸ್ಟೇಬಲ್ ಹನುಮಂತ ಹಿಪ್ಪರಗಿ ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ‘ಬೈಕಾಟ್’ ಅನ್ನುವವರು ನಿಜವಾದ ಪ್ರೇಕ್ಷಕರಲ್ಲ: ಸೈಫ್ ಅಲಿ ಖಾನ್ ಆರೋಪ

    15 ಕೇಸ್‌ಗಳಲ್ಲಿ (FIR) ವಾಂಟೆಡ್ ಆಗಿದ್ದ ಮರಸಿಂಗನಹಳ್ಳಿ ಮದ್ದೂರು ಮೂಲದ ಯೋಗಾನಂದ್ ಪೆಪ್ಪರ್ ಸ್ಪ್ರೆ ಬಳಸಿ ಸಿನಿಮೀಯ ರೀತಿಯಲ್ಲಿ ಸರಗಳನ್ನ ಕದಿಯುತ್ತಿದ್ದ. ಸಾಕಷ್ಟು ದರೋಡೆ, ಬೈಕ್ ನಲ್ಲಿ ಚೈನ್ ಸ್ನ್ಯಾಚ್‌, ಮನೆಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಪೊಲೀಸರ ಮೇಲೆ ಆರೋಪಿ ಹಾಲೋಬ್ರಿಕ್ ನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಹಿಪ್ಪರಿಗಿ ಗಾಯಗೊಂಡಿದ್ದಾರೆ. ನಂತರ ಟೌನ್ ಸಿಪಿಐ ಶಶಿಧರ್ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಇದನ್ನೂ ಓದಿ: ಜೋಡೊ ಯಾತ್ರೆಗೆ ಬರೋ ಕಲಾವಿದರಿಗೆ ಕಾಂಗ್ರೆಸ್ ಹಣ ಕೊಟ್ಟಿದೆ – BJP ಟೀಕೆಗೆ ಖಡಕ್ ಉತ್ತರ ಕೊಟ್ಟ ನಟಿ

    ಆರೋಪಿ ವಿರುದ್ಧ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]