Tag: crime

  • ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

    ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಮೊಬೈಲ್ (Mobile) ಗೀಳು ಎಲ್ಲ ವಯಸ್ಕರಲ್ಲೂ ಹೆಚ್ಚಾಗಿದೆ. ಯಾವುದೇ ವಿಷಯಕ್ಕೂ ಮೊಬೈಲ್ ತೆಗೆದು ನೋಡುವಂತಾಗಿದ್ದು, ನಮ್ಮ ಜೀವನದ ಒಂದು ಭಾಗವೇ ಆಗಿಬಿಟ್ಟಿದೆ. ಮೊಬೈಲ್ ಇಲ್ಲದ ದಿನವನ್ನು ಕಲ್ಪಿಸಿಕೊಳ್ಳೋದಕ್ಕೂ ಸಾಧ್ಯವಾಗದಷ್ಟು ಗೀಳು ಹೆಚ್ಚಾಗಿದೆ.

    ಇದೇ ರೀತಿ ಮೊಬೈಲ್ ಗೀಳು ಅತಿಯಾಗಿ ಅಂಟಿಸಿಕೊಂಡಿದ್ದ ಯುವತಿ, ತನ್ನ ಸಹೋದರ ಪಾಸ್‌ವರ್ಡ್ (Mobile Password) ಬದಲಾಯಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಳಗಾವಿ ಲಾಕಪ್‌ಡೆತ್ ಕೇಸ್: ಪೊಲೀಸರಿಂದ್ಲೇ ಚಿತ್ರಹಿಂಸೆ – ಮೃತನ ಪುತ್ರಿ ಆರೋಪ

    ಏನಿದು ಘಟನೆ?
    ಯುವತಿ ರುಚಿತಾ (19) ಅತಿಯಾಗಿ ಮೊಬೈಲ್ ಬಳಸುತ್ತಿದ್ದರು. ಮೊಬೈಲ್ ಬಳಕೆಯಿಂದ ಬೇಸತ್ತಿದ್ದ ಯುವತಿಯ ತಮ್ಮ ಪಾಸ್‌ವರ್ಡ್ ಬದಲಾವಣೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಅಕ್ಕ ಮೊಬೈಲ್ ಪಾಸ್ ವರ್ಡ್ ಹೇಳುವಂತೆ ತಮ್ಮನಿಗೆ ಪಿಡಿಸಿದ್ದಳು. ಆದರೆ ಸಹೋದರ ಮೊಬೈಲ್ ಬಳಕೆ ಮಾಡಬೇಡ ಎಂದು ಸಲಹೆ ನೀಡುತ್ತಲೇ ಇದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಅಷ್ಟಾದರೂ ತಮ್ಮ ಪಾರ್ಸ್ವರ್ಡ್ ಹೇಳದೇ ಇದ್ದರಿಂದ ಮೊಬೈಲ್‌ಗಾಗಿ ಹಠಹಿಡಿದಿದ್ದ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ (Doddaballapur Police Station) ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಸೀದಿಯೊಳಗೆ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ – ಓರ್ವ ಅರೆಸ್ಟ್

    ಮಸೀದಿಯೊಳಗೆ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ – ಓರ್ವ ಅರೆಸ್ಟ್

    ನವದೆಹಲಿ: 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು (Delhi Police) ಬಂಧಿಸಿರುವ ಘಟನೆ ಇಲ್ಲಿನ ಮೌಜ್‌ಪುರ ಪ್ರದೇಶದ ಮಸೀದಿಯಲ್ಲಿ (Delhi Mosque) ನಡೆದಿದೆ. ಕಳೆದ 2 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    CRIME COURT

    ಆರೋಪಿ ಮೊಹಮ್ಮದ್ ಅರ್ಮಾನ್ ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಂಧಿಸಿದ್ದು ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ (POCSO Act) ಹಾಗೂ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾವೇನಾದರೂ ಸಿಡಿದೆದ್ದರೆ ನೀವು ಉಳಿಯುವುದಿಲ್ಲ – ಕಾಂಗ್ರೆಸ್‍ಗೆ ಮುತಾಲಿಕ್ ವಾರ್ನಿಂಗ್

    ಕೆಲ ಕಿಡಿಗೇಡಿಗಳು ಮೌಜ್‌ಪುರ ಪ್ರದೇಶದಲ್ಲಿರುವ ಮಸೀದಿಗೆ ಬಂದಿದ್ದರು. ಅವರು ಮಸೀದಿಯೊಳಗೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ನವೆಂಬರ್ 9 ರಂದು, ಬಾಲಕಿ ತನ್ನ ತರಗತಿ ಮುಗಿದ ನಂತರ ಮಸೀದಿಗೆ ಭೇಟಿ ನೀಡಿದ್ದಳು. ಆಕೆ ಒಂಟಿಯಾಗಿರುವುದು ಕಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿಕ್ಕಮಗಳೂರಿನಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಕಿಡಿಗೇಡಿಗಳು – ನಾಲ್ವರು ವಶಕ್ಕೆ

    ಚಿಕ್ಕಮಗಳೂರಿನಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಕಿಡಿಗೇಡಿಗಳು – ನಾಲ್ವರು ವಶಕ್ಕೆ

    ಚಿಕ್ಕಮಗಳೂರು: ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್‌ನಲ್ಲಿ ಕಿವೀಸ್ ವಿರುದ್ಧ ಗೆದ್ದು ಪಾಕಿಸ್ತಾನ (Pakistan) ಫೈನಲ್ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

    ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರೋ ಆರೋಪವಿದೆ. ಇದನ್ನೂ ಓದಿ: ಕಿವೀಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – 3ನೇ ಬಾರಿ ಫೈನಲ್‍ಗೇರಿದ ಪಾಕ್

    ಪಾಕಿಸ್ತಾನ ಕಿವೀಸ್ (NewZealand) ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುತ್ತಿದ್ದಂತೆ ಸಂಭ್ರಮಿಸತೊಡಗಿದ್ದಾರೆ. ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಹ ಕೂಗಿದ್ದಾರೆ. ಈ ವಿಷಯವನ್ನು ಸ್ಥಳೀಯರು ಹಾಗೂ ಕಾರ್ಮಿಕರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ. ನಂತರ ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರಿಂದ ಪೊಲೀಸರಿಗೆ (Police) ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ

    ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.

    ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್‌ಗಳಿಸಿತ್ತು. ಈ ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ 3 ವಿಕೆಟ್ ನಷ್ಟಕ್ಕೆ 19.1 ಓವರ್‌ಗಳಲ್ಲೇ 153 ರನ್ ಸಿಡಿಸಿ ಗೆಲುವು ಸಾಧಿಸಿತು.

    Live Tv
    [brid partner=56869869 player=32851 video=960834 autoplay=true]

  • ಬೆಡ್‌ಶೀಟ್ ಮೇಲೆ ಕಲೆಗಳಿರುತ್ತಿತ್ತು- ಶ್ರೀಗಳ ಬೆಡ್‌ರೂಂ ರಸಹ್ಯ ಬಯಲು

    ಬೆಡ್‌ಶೀಟ್ ಮೇಲೆ ಕಲೆಗಳಿರುತ್ತಿತ್ತು- ಶ್ರೀಗಳ ಬೆಡ್‌ರೂಂ ರಸಹ್ಯ ಬಯಲು

    ಚಿತ್ರದುರ್ಗ: ಮುರುಘಾ ಮಠದ (Murugha Mutt) ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕಾಯ್ದೆ (POCSO Act) ದಾಖಲಾಗಿದ್ದು, 694 ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ. ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಹೇಳಿಕೆ ಕೇಳಿಬರುತ್ತಿದೆ. ನಿನ್ನೆಯಷ್ಟೇ ಮಠದ ವಿದ್ಯಾರ್ಥಿನಿಯೊಬ್ಬರು (Students) ಶ್ರೀಗಳು ರೂಂಗೆ ಹೋದ ನಂತರ ಬಟ್ಟೆಬಿಚ್ಚಲು ಹೇಳ್ತಿದ್ರು ಎಂಬ ಹೇಳಿಕೆ ನೀಡಿದ್ದರು. ಇದೀಗ ಮುರುಘಾ ಶ್ರೀಗಳ ಸಹಾಯಕ ಮಹಾಲಿಂಗಪ್ಪ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಕೆಲವೊಮ್ಮೆ ಬೆಡ್‌ಶೀಟ್ ಮೇಲೆ ಕಲೆಗಳು ಆಗಿರುತ್ತಿದ್ದವು, ಬೆಡ್‌ಶೀಟ್ ಅನ್ನು ಸ್ವಚ್ಛವಾಗಿ ತೊಳೆಯುವಂತೆ ಶ್ರೀಗಳು ಹೇಳುತ್ತಿದ್ದರು. ಹಗಲಿನಲ್ಲಿ ರಶ್ಮಿ (Rashmi) ಆಗಾಗ ಮಕ್ಕಳೊಂದಿಗೆ ಬರುತ್ತಿದ್ದಳು. ಕೆಲವೊಮ್ಮೆ ರಾತ್ರಿ ವೇಳೆ ಬಾಲಕಿಯರು ಹಿಂಬಾಗಿಲಿನಿಂದ ಶ್ರೀಗಳ ರೂಮ್‌ಗೆ ಹೋಗುತ್ತಿದ್ದರು. ಹೀಗೆಲ್ಲಾ ಮಠದಲ್ಲಿ ಜನರು ಮಾತನಾಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ರೂಂಗೆ ಹೋದ ನಂತ್ರ ಬಟ್ಟೆ ಬಿಚ್ಚಲು ಶ್ರೀಗಳು ಹೇಳ್ತಿದ್ದರು: ಹಳೆ ವಿದ್ಯಾರ್ಥಿನಿ ಸ್ಫೋಟಕ ಹೇಳಿಕೆ

    ಮುರುಘಾ ಶ್ರೀಗಳ (Sri Shivamurthy Murugha Sharanaru) ಅಡುಗೆಭಟ್ಟ ಕರಿಬಸಪ್ಪ ಮಾತನಾಡಿದ್ದು, ರಶ್ಮಿ ಮತ್ತು ಮಕ್ಕಳು ಶ್ರೀಗಳ ರೂಮ್‌ಗೆ ಹೋದಾಗ ನನ್ನನ್ನ ಒಳಗೆ ಬಿಟ್ಟುಕೊಳ್ಳುತ್ತಿರಲಿಲ್ಲ. ಸುಮಾರು ಗಂಟೆಗಳ ಬಳಿಕ ರಶ್ಮಿ ಮತ್ತು ಮಕ್ಕಳು ಹೊರಬರುತ್ತಿದ್ದರು. ಹಾಸ್ಟೆಲ್ ಬಾಲಕಿಯರನ್ನು ರೂಮ್‌ಗೆ ಕರೆಸಿಕೊಳ್ಳುತ್ತಾರೆಂದು ಜನ ಮಾತಾಡುತ್ತಿದ್ದರು. ನಮಗೂ ಸಹ ಕೆಲವೊಮ್ಮೆ ಅನುಮಾನ ಬರುತ್ತಿತ್ತು. ನಾವು ಬಾಯಿಬಿಟ್ಟರೆ ಕೆಲಸ ಬಿಡಿಸುತ್ತಾರೆಂಬ ಭಯವಿತ್ತು. ಹಾಸ್ಟೆಲ್‌ನ ಇಬ್ಬರು ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾರೆಂದು ಮಠದಲ್ಲಿ ಮಾತುಗಳು ಕೇಳಿಬರುತ್ತಿದೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಪೋಕ್ಸೋ ಸಂಕಷ್ಟ- ಪೊಲೀಸರಿಂದ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ

    ಶ್ರೀಗಳ ಕಚೇರಿ ಕೆಲಸಗಾರ ಪ್ರಜ್ವಲ್ ಸಹ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಡ್ ರೂಮ್‌ನಲ್ಲಿ ಕೆಲಸವಿದೆ ಎಂದು ಕೆಲ ಬಾಲಕಿಯರನ್ನು ರೂಮ್‌ಗೆ ಕರೆಸಿಕೊಳ್ಳುತ್ತಿದ್ದರು. ಆದರೆ ರೂಮ್‌ನಲ್ಲಿ ಏನು ನಡೆದಿದೆ ಅಂತ ನನಗೆ ಗೊತ್ತಿಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಲಕಿ ಮೇಲೆ 6 ಹುಡುಗರಿಂದ ಅತ್ಯಾಚಾರ – ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದು ವಿಕೃತಿ

    ಬಾಲಕಿ ಮೇಲೆ 6 ಹುಡುಗರಿಂದ ಅತ್ಯಾಚಾರ – ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದು ವಿಕೃತಿ

    ದಿಸ್ಪುರ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ 13 ರಿಂದ 15 ವರ್ಷದೊಳಗಿನ 6 ಹುಡುಗರನ್ನು ಬಂಧಿಸಿರುವ ಘಟನೆ ದಕ್ಷಿಣ ಅಸ್ಸಾಂನ ಕರೀಂಗಂಜ್‌ನಲ್ಲಿ ನಡೆದಿದೆ.

    ಪೊಲೀಸರ (Police) ಪ್ರಕಾರ, ಸಂತ್ರಸ್ತ ಬಾಲಕಿ ನವೆಂಬರ್ 1ರಂದು ಅತ್ಯಾಚಾರ ನಡೆದಿರುವುದಾಗಿ ರಾಮಕೃಷ್ಣನಗರದ ಕಾಳಿನಗರ ಪೊಲೀಸ್ ಠಾಣೆಯಲ್ಲಿ (Assam Police Station) ದೂರು ದಾಖಲಿಸಿದ್ದಳು. ಪ್ರಕರಣ (FIR) ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಜಾರಕಿಹೊಳಿಯವರು ವಾಮಾಚಾರದ ಫ್ಯಾಮಿಲಿಯವರು ಸ್ಮಶಾನ ಪ್ರೀತಿಸುವವರು: ಜಗ್ಗೇಶ್

    STOP RAPE

    ಘಟನೆ ನಡೆದಾಗ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ನಂತರ ಮನೆಗೆ ನುಗಿದ್ದ ಹುಡುಗರು ಬಲವಂತವಾಗಿ ಆಕೆಯನ್ನು ಹಿಡಿದು ಒಬ್ಬೊಬ್ಬರೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ ಕೃತ್ಯವನ್ನು ತಮ್ಮ ಮೊಬೈಲ್‌ನಲ್ಲಿ (Mobile) ಸೆರೆಹಿಡಿದಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಳಲಿ ಮಸೀದಿ ವಿವಾದ – ವಿಹೆಚ್‌ಪಿ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು

    ಸಂತ್ರಸ್ತೆ ಹೆಚ್ಚು ಆತಂಕಗೊಂಡಿದ್ದರಿಂದ ಯಾರಿಗೂ ಹೇಳಿರಲಿಲ್ಲ. ನಂತರ ಪೋಷಕರು ಸಮಾಧಾನಪಡಿಸಿ ದೂರು ಕೊಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಾರ್ಥ ಪ್ರತಿಮ್ ದಾಸ್ ಹೇಳಿದ್ದಾರೆ.

    STOP RAPE

    ಆರೋಪಿಗಳನ್ನು ಬಂಧಿಸಿದ್ದು, ಕೃತ್ಯ ಸೆರೆಹಿಡಿದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆದರೆ ಕೃತ್ಯ ಎಸಗಿರುವವರ ಪೈಕಿ ಓರ್ವ ಇತರರೊಂದಿಗೆ ವೀಡಿಯೋ ಹಂಚಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

    ಪೋಕ್ಸೋ ಕಾಯ್ದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ- ಅನ್ಯ ಕೋಮಿನ ಯುವಕನ ಪ್ರೀತಿ ಮಾಡಿದ್ದಕ್ಕೆ ತಂದೆಯಿಂದ್ಲೇ ಮಗಳ ಕೊಲೆ

    ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ- ಅನ್ಯ ಕೋಮಿನ ಯುವಕನ ಪ್ರೀತಿ ಮಾಡಿದ್ದಕ್ಕೆ ತಂದೆಯಿಂದ್ಲೇ ಮಗಳ ಕೊಲೆ

    ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿ (Love) ಮಾಡಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ (Murder) ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಘಟನೆ ಬಳಿಕ ತನ್ನ ಮಗಳನ್ನು ಹತ್ಯೆ ಮಾಡಿರುವುದಾಗಿ ತಂದೆ ಓಂಕಾರಗೌಡ ಪೊಲೀಸರ (Police) ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿಯಿಂದ ಟಿಕೆಟ್?

    ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು, ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದರೆ ಮನೆಯವರ ಮಾತಿಗೆ ಬೆಲೆ ಕೊಡದೆ, ಯುವಕನೊಂದಿಗೆ ಪ್ರೀತಿ ಒಡನಾಟ ಮುಂದುವರಿಸುತ್ತಿದ್ದಳು ಎಂದು ಶಂಕಿಸಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

    ಮಧ್ಯಾಹ್ನ ಮಗಳಿಗೆ ಸಿನಿಮಾ (Cinema) ತೋರಿಸುವುದಾಗಿ ಪುಸಲಾಯಿಸಿ ಬೈಕ್‌ನಲ್ಲಿ ಮನೆಯಿಂದ ಕರೆದುಕೊಂಡು ಹೋಗಿದ್ದ ಓಂಕಾರಗೌಡ, ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು. ಅಲ್ಲಿಂದ ಹೊಟೇಲ್‌ಗೆ (Hotel) ಕರೆದೊಯ್ದು ತಿಂಡಿ ತಿನ್ನಿಸಿ, ಬಳಿಕ ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ್ದಾನೆ. ನಂತರ ಆಭರಣದ ಅಂಗಡಿಯಲ್ಲಿ ಒಂದು ಜೊತೆ ಓಲೆ, ಉಂಗುರವನ್ನೂ ಮಗಳಿಗೆ ಕೊಡಿಸಿದ್ದಾನೆ.

    ಊರಿಗೆ ಹಿಂದಿರುಗುವ ಹೊತ್ತಿಗೆ ರಾತ್ರಿಯಾಗಿದೆ. ಈ ವೇಳೆ ಎಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳ ಕರೆತಂದು, ನೀರಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಅಕ್ಟೋಬರ್ 31 ರಂದು ನಡೆದಿದ್ದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿ ರೇಪ್ ಕೇಸ್ – ಮರಣದಂಡನೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿದ ಸುಪ್ರೀಂ

    ದೆಹಲಿ ರೇಪ್ ಕೇಸ್ – ಮರಣದಂಡನೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿದ ಸುಪ್ರೀಂ

    ನವದೆಹಲಿ: 2012ರಲ್ಲಿ ದೆಹಲಿಯ (NewDelhi) ಛಾವಾಲಾ ಪ್ರದೇಶದಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಮರಣದಂಡನೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳನ್ನು ಸುಪ್ರೀಂ ಕೋರ್ಟ್ (Supreme Court)  ಖುಲಾಸೆಗೊಳಿಸಿದೆ.

    court order law

    2012ರಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಮೂವರು ಅಪರಾಧಿಗಳಿಗೆ (Victim) ಮರಣದಂಡನೆ ವಿಧಿಸಲಾಗಿತ್ತು. ಸಂತ್ರಸ್ತೆಯ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಗದ್ದೆಯೊಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿ, ಕಾರಿನ ಉಪಕರಣಗಳು ಹಾಗೂ ಇತರ ವಸ್ತುಗಳಿಂದ ಹಲ್ಲೆ ನಡೆಸಿರುವುದು ಸಾಬೀತಾಗಿತ್ತು. ಕೇಸ್ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ (Delhi HighCourt) 2014 ಫ್ರೆಬ್ರವರಿ ನಲ್ಲಿ ಮೂವರನ್ನು ದೋಷಿ ಎಂದು ಘೋಷಿಸಿ, ವಿವಿಧ ಆರೋಪಗಳ ಅಡಿಯಲ್ಲಿ ಶಿಕ್ಷೆ ವಿಧಿಸಲು ಮುಂದಾಗಿತ್ತು. ಇದನ್ನೂ ಓದಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್

    2014ರ ಆಗಸ್ಟ್ 26ರಂದು ರಾಹುಲ್, ರವಿಕುಮಾರ್ ಹಾಗೂ ವಿನೋದ್ ಎಂಬ ಮೂವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಮರಣ ದಂಡನೆ ವಿಧಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದಿಂದ (Supreme Court Case) ಅಪರಾಧಿಗಳನ್ನು ಖುಲಾಸೆಗೊಳಿಸಿದೆ. ಇದನ್ನೂ ಓದಿ: ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    ಏನಿದು ಪ್ರಕರಣ?
    2012ರ ಫೆಬ್ರವರಿ ತಿಂಗಳಲ್ಲಿ ಹರ್ಯಾಣದಲ್ಲಿ ದೆಹಲಿ ಮೂಲದ 19 ವರ್ಷದ ಯುವತಿಯ ಶವ ಪತ್ತೆಯಾಗಿತ್ತು. ನಂತರ ಅದು ಅತ್ಯಾಚಾರ ಎಂಬುದು ಗೊತ್ತಾಯಿತು. ಅತ್ಯಾಚಾರಕ್ಕೆ ಒಳಗಾದ ನಂತರ ಆಕೆಯನ್ನು ಬರ್ಬರವಾಗಿ ಕೊಲ್ಲಲಾಗಿತ್ತು. ಈ ಸಂಬಂಧ ದೆಹಲಿಯ ಛಾವಾಲಾ (ನಜಾಫ್‌ಗಢ) ಪೊಲೀಸ್ ಠಾಣೆಯಲ್ಲಿ (Delhi Police Station) ಪ್ರಕರಣ ದಾಖಲಾಗಿತ್ತು. ಅಪರಾಧಿಗಳು ಮೊದಲು ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ. ನಂತರ ಕೊಂದು ಶವವನ್ನು ಹರಿಯಾಣದ ರೇವಾರಿ ಜಿಲ್ಲೆಯ ರೋಧೈ ಗ್ರಾಮದ ಹೊಲದಲ್ಲಿ ಎಸೆದು ವಿಕೃತಿ ಮೆರೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ (Murugha Mutt) ಶ್ರೀಗಳ ವಿರುದ್ಧ 2ನೇ ಪೋಕ್ಸೋ (POCSO Act) ಕೇಸ್ ದಾಖಲಾಗಿದೆ. ಈ ಕುರಿತು ತನಿಖೆ ನಡೆಸಿರುವ ಡಿವೈಎಸ್ಪಿ (DYSP) ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ (Court) ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

    ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ (Religious centre) ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್‌ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ (ChargeSheet) ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್- ಮಠದ ಹಾಸ್ಟೆಲ್‍ನಲ್ಲಿ ಇಬ್ಬರು ಬಾಲಕಿಯರು ಪತ್ತೆ

    ಸೇಬು ನೀಡಿ ಮಕ್ಕಳ ಮೇಲೆ ಅತ್ಯಾಚಾರ: ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು (Apple) ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ- ಸಂತ್ರಸ್ತ ಬಾಲಕಿ, ತಾಯಿ ಹೇಳಿಕೆಯಲ್ಲಿ ಗೊಂದಲ

    ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ. ಮಠದ ಹಾಸ್ಟೆಲ್ ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಮಾನದ ಸೀಟ್‌ನಲ್ಲಿ ಕುಳಿತು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು

    ವಿಮಾನದ ಸೀಟ್‌ನಲ್ಲಿ ಕುಳಿತು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು

    ಕ್ಯಾನ್ಬೆರಾ: ನ್ಯೂಜಿಲೆಂಡ್‌ನ (New Zealand) ಪ್ರಯಾಣಿಕನೊಬ್ಬ ವಿಮಾನ (Flight) ಆಸ್ಟ್ರೇಲಿಯಾಗೆ (Australia) ಬಂದಿಳಿಯುತ್ತಿದ್ದಂತೆ ತನ್ನ ಸೀಟಿನಲ್ಲಿ ಕುಳಿತುಕೊಂಡೇ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.

    72 ವರ್ಷದ ಜೇಮ್ಸ್ ಹ್ಯೂಸ್ ಎಂಬ ವ್ಯಕ್ತಿ ಬಾಲಿಯಿಂದ ಬ್ರಿಸ್ಬೇನ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಈ ವಿಕೃತಿ ಮೆರೆದಿದ್ದು, ಬ್ರಿಸ್ಬೇನ್ ನ್ಯಾಯಾಲಯ (Court) 1 ವರ್ಷ ಸಾಧಾರಣ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಬಾಲಿವುಡ್ ನಲ್ಲಿ ಆಫರ್ ಬಂದಿದ್ದು ನಿಜ ಎಂದು ಒಪ್ಪಿಕೊಂಡ ರಿಷಬ್ ಶೆಟ್ಟಿ

    ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಎಸಗಿದ ಬಳಿಕ, ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು (Australian Federal Police) ಬ್ರಿಸ್ಬೇನ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಲ್ಲಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರಯಾಣದ ವೇಳೆ ತಾನು ಸಣ್ಣ-ಸಣ್ಣ ಬಾಟಲಿಗಳ ವೈನ್ ಸೇವಿಸಿದ್ದಾನೆ. ವಿಮಾನ ಇಳಿಯುತ್ತಿದ್ದ ವೇಳೆ ವಿಸರ್ಜನೆ ಮಾಡಿದ್ದಾನೆ. ಇದರಿಂದ ವಿಮಾನ ಪ್ರಯಾಣ 6 ಗಂಟೆ ವಿಳಂಬವಾಗಿದೆ. ಹಾಗಾಗಿ ಕೃತ್ಯ ಎಸಗಿದ ವ್ಯಕ್ತಿಗೆ ನ್ಯಾಯಾಲಯ 1 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

    ಬಳಿಕ ಆಸ್ಟ್ರೇಲಿಯಾದ ಫೆಡರಲ್ ಪೋಲೀಸರು ( Australian Federal Police), ಇದು ಅಮಾನವೀಯಕರ ಘಟನೆ ಇಂತಹ ನಡವಳಿಕೆಯನ್ನು ಕ್ಷಮಿಸಲ್ಲ. ಕುಟುಂಬಸ್ಥರು ಹಾಗೂ ಇತರ ಪ್ರಯಾಣಿಕರೂ ಸುರಕ್ಷಿತವಾಗಿ ಪ್ರಯಾಣಿಸಬೇಕಾದ್ದರಿಂದ ಆಲ್ಕೋಹಾಲ್ ಸೇವಿಸುವ ಮುನ್ನ ಪ್ರಯಾಣಿಕರು ಜವಾಬ್ದಾರರಾಗಿರಬೇಕು ಎಂದು ಎಚ್ಚರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಬೀದರ್‌ನಲ್ಲಿ ಭೀಕರ ರಸ್ತೆ ಅಫಘಾತ – ಐವರು ಕೂಲಿಕಾರ್ಮಿಕ ಮಹಿಳೆಯರು ಸಾವು

    ಬೀದರ್‌ನಲ್ಲಿ ಭೀಕರ ರಸ್ತೆ ಅಫಘಾತ – ಐವರು ಕೂಲಿಕಾರ್ಮಿಕ ಮಹಿಳೆಯರು ಸಾವು

    ಬೀದರ್: ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಟ್ರಕ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಐವರು ಮಹಿಳೆಯರು (Women) ದಾರುಣವಾಗಿ ಸಾವಿಗೀಡಾದ ಘಟನೆ ಬೀದರ್‌ನಲ್ಲಿ ನಡೆದಿದೆ.

    ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಘಟನೆ ನಡೆದಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನುಳಿದ 6 ಮಂದಿ ಮಹಿಳೆಯರಿಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ತಾಯ್ನಾಡಿಗೆ ಪ್ರಿಯಾಂಕಾ ಚೋಪ್ರಾ ಕಾಲಿಟ್ಟ ಬೆನ್ನಲ್ಲೇ ನಟಿಯ ವಿರುದ್ಧ ಗಂಭೀರ ಆರೋಪ

    ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32) ಹಾಗೂ ರುಕ್ಮಿಣಿ (60) ಮೃತಪಟ್ಟ ಮಹಿಳೆಯರು. ಇದರೊಂದಿಗೆ ಚಿಕಿತ್ಸೆ ಪಡೆಯುತ್ತಿರುವ 6 ಮಂದಿ ಮಹಿಳೆಯರು ಉಡುಬಾಳು ಗ್ರಾಮದವರೇ ಆಗಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದ್ರೆ ಬಿಜೆಪಿಯವರಿಗೇನು ನೋವು?: ಡಿ.ಕೆ. ಶಿವಕುಮಾರ್

    crime

    ಕೂಲಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ಆಟೋದಲ್ಲಿ (Auto Rickshaw) ವಾಪಸಾಗುತ್ತಿದ್ದಾಗ ಬೆಮಳಖೇಡಾ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]