Tag: crime

  • 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರು ಅರೆಸ್ಟ್

    15 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರು ಅರೆಸ್ಟ್

    ಭೋಪಾಲ್: 8ನೇ ತರಗತಿ ಓದುತ್ತಿದ್ದ 15 ವರ್ಷದ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಆಗಸ್ಟ್ 25ರಂದು ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಅಪ್ರಾಪ್ತನನ್ನೂ ವಶಕ್ಕೆ ಪಡೆಯಲಾಗಿದೆ. 8ನೇ ತರಗತಿ ಓದುತ್ತಿದ್ದ ಬಾಲಕಿಯು ಪರಿಚಿತ ಬಾಲಕನೊಂದಿಗೆ ಹೊರಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಇಬ್ಬರ ವಿರುದ್ಧ ಪೋಕ್ಸೋ ಹಾಗೂ ಸಂಬಂಧಪಟ್ಟ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಪ್ರಾಪ್ತನಿಂದಲೇ ಅತ್ಯಾಚಾರ: ಮತ್ತೊಂದು ಘಟನೆಯಲ್ಲಿ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತೆಯ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. 5 ವರ್ಷದ ಬಾಲಕಿಯನ್ನು ಬರ್ಫಿ ನೀಡುವ ಆಮಿಷವೊಡ್ಡಿ ಬಾಲಕ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್

    ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, ಆಕೆಯ ಕುಟುಂಬ ಸದಸ್ಯರು ಆರೋಪಿ ಮನೆಗೆ ತೆರಳಿದಾಗ, ಆರೋಪಿಯ ತಂದೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆಯ ಸಂಬಂಧ ಆರೋಪಿಯ ತಂದೆಯನ್ನೂ ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ

    STOP RAPE

    ನಗರದ ಹೆಚ್ಚುವರಿ ಎಸ್ಪಿ ರಾಹುಲ್ ಭಾಟಿ, ಆರೋಪಿಗಳ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಕ್ಯಾಂಟ್‌ನ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    ಕಾರವಾರ: ಎರಡು ಮಕ್ಕಳ ತಾಯಿಯೊಂದಿಗೆ ತಮಿಳುನಾಡಿನಿಂದ ಪರಾರಿಯಾಗಿ ಕಾರವಾರದಲ್ಲಿ ನೆಲೆಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆತನ ಪತ್ನಿಯನ್ನೂ ತಮಿಳುನಾಡು ಪೊಲೀಸರು ಬಂಧಿಸಿ, ಕರೆದೊಯ್ದಿದ್ದಾರೆ.

    ಯುವಕ ಬೀರ್ ಮೈದಿನ್ (27) ವಿವಾಹಿತ ಮಹಿಳೆ ಆಯೆಷಾ ರೆಹಮತ್‌ವುಲ್ಲಾ (24) ಬಂಧಿತ ಆರೋಪಿಗಳು.  ಇದನ್ನೂ ಓದಿ: ತನ್ನೊಂದಿಗೆ ಚಾಟ್ ಮಾಡುವುದನ್ನು ನಿಲ್ಲಿಸಿದ್ದಕ್ಕೇ ಬಾಲಕಿಗೆ ಗುಂಡು ಹಾರಿಸಿದ್ರು

    ಎರಡು ಮಕ್ಕಳ ತಾಯಿಯಾಗಿದ್ದ ಆಯೆಷಾ ಫೆ.21ರಂದು ತಮಿಳುನಾಡಿನಿಂದ ನಾಪತ್ತೆಯಾಗಿದ್ದಳು. ಈ ಕುರಿತು ಕುಟುಂಬಸ್ಥರು ತಮಿಳುನಾಡಿನಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ಟ್ರ‍್ಯಾಕಿಂಗ್ ಹಾಗೂ ಕಾರವಾರ ಪೊಲೀಸರ ನೆರವಿನೊಂದಿಗೆ ಇಬ್ಬರನ್ನೂ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕುಟುಂಬದವರು ವಿದೇಶಕ್ಕೆ ಹೋಗಬಾರದು ಅಂತ ವಿಮಾನದಲ್ಲಿ ಬಾಂಬ್ ಇದೆ ಎಂದ!

    ಬಾಲ್ಯದಲ್ಲಿ ಸ್ನೇಹಿತ ಹಾಗೂ ದೂರದ ಸಂಬಂಧಿಯೂ ಆಗಿದ್ದ ಬೀರ್ ಮೈದಿನ್ ಕಾರವಾರಕ್ಕೆ ಬಂದು ಸಂಸಾರ ನಡೆಸುತ್ತಿದ್ದರು. ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ್ದ ಮೈದಿನ್ ಕಾರವಾರದಲ್ಲೇ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಕಳೆದ 6 ತಿಂಗಳಿಂದ ಮಹಿಳೆ ಆಯೆಷಾ ರೆಹಮತ್‌ವುಲ್ಲಾ (24) ಹಾಗೂ ಪ್ರಿಯಕರ ಬೀರ್ ಮೈದಿನ್ ಕಾರವಾರದ ನಗರದ ತಾಮ್ಸೆವಾಡದಲ್ಲಿ ವಾಸವಾಗಿದ್ದರು.

    ಇದೀಗ ಮಹಿಳೆ 3 ತಿಂಗಳ ಗರ್ಭಿಣಿಯಾಗಿದ್ದು ಇಬ್ಬರನ್ನೂ ತಮಿಳುನಾಡಿನ ಪಿಎಸ್‌ಐ ವೀರಮುತ್ತು ಟೀಂ ಕರೆದೊಯ್ದಿದೆ. ಎರಡು ತಿಂಗಳ ಹಿಂದೆ ಹುಡುಕಿಕೊಂಡು ಬಂದಾಗಲೂ ಇವರು ಪತ್ತೆಯಾಗಿರಲಿಲ್ಲ. ಕೊನೆಗೂ ಯುವಕ, ವಿವಾಹಿತೆಯನ್ನ ಪತ್ತೆಮಾಡಿ ಪೊಲೀಸರು ತಮಿಳುನಾಡಿಗೆ ಕರೆದೊಯ್ದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತನ್ನೊಂದಿಗೆ ಚಾಟ್ ಮಾಡುವುದನ್ನು ನಿಲ್ಲಿಸಿದ್ದಕ್ಕೇ ಬಾಲಕಿಗೆ ಗುಂಡು ಹಾರಿಸಿದ್ರು

    ತನ್ನೊಂದಿಗೆ ಚಾಟ್ ಮಾಡುವುದನ್ನು ನಿಲ್ಲಿಸಿದ್ದಕ್ಕೇ ಬಾಲಕಿಗೆ ಗುಂಡು ಹಾರಿಸಿದ್ರು

    ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ತನ್ನೊಂದಿಗೆ ಚಾಟ್ ಮಾಡುವುದನ್ನು ನಿಲ್ಲಿಸಿದ್ದಕ್ಕಾಗಿ ಮೂವರು ಯುವಕರು ಪ್ಲ್ಯಾನ್‌ ಮಾಡಿ 16 ವರ್ಷದ ಬಾಲಕಿಗೆ ಗುಂಡು ಹಾರಿಸಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    ಘಟನೆ ನಡೆದ ಎರಡು ದಿನಗಳ ನಂತರ ಮೂವರನ್ನು ಬಂಧಿಸಲಾಗಿದೆ. ತನ್ನೊಂದಿಗೆ ಸ್ನೇಹ ಬೆಳೆಸಿದ್ದ ಒಬ್ಬನ ಸಂದೇಶಗಳಿಗೆ ಬಾಲಕಿ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾಳೆ. ಅದಕ್ಕಾಗಿ ಆಕೆಯ ಮೇಲೆ ಹಲ್ಲೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮಹಿಳಾ ಮೀನು ವ್ಯಾಪಾರಿಗಳ ಶೆಡ್ ಧ್ವಂಸ – ಸ್ಥಳೀಯರ ಆಕ್ರೋಶ

    ಬಾಲಕಿ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ನಂತರ ಆರೋಪಿ ಅರ್ಮಾನ್ ಅಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದಾನೆ ಎಂದು ಮತ್ತಿಬ್ಬರು ಆರೋಪಿಗಳಾದ ಬಾಬಿ ಹಾಗೂ ಪವನ್ ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅರ್ಮಾನ್ ಅಲಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ವಿಜಯ್ ದೇವರಕೊಂಡ ವಿರುದ್ಧ ಹಳೆಯ ಸೇಡು ತೀರಿಸಿಕೊಂಡ ನಿರೂಪಕಿ ಅನಸೂಯ

    ಅರ್ಮಾನ್ ಅಲಿ ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಮಾಧ್ಯಮದ ಮೂಲಕ ಹುಡುಗಿಯೊಂದಿಗೆ ಸಂಪರ್ಕದಲ್ಲಿದ್ದನು. 6 ತಿಂಗಳ ಹಿಂದೆ ಹುಡುಗಿ ತನ್ನ ಸಂದೇಶಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ ನಂತರ ಅವನು ದಾಳಿಗೆ ಸಂಚು ರೂಪಿಸಿದ್ದಾನೆ. 11ನೇ ತರಗತಿ ಓದುತ್ತಿದ್ದ 16 ವರ್ಷದ ಬಾಲಕಿ ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಸಂತ್ರಸ್ತೆಯ ಭುಜಕ್ಕೆ ಗುಂಡು ತಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳು ಬಾಲಕಿಗೆ ಹಿಂದಿನಿಂದ ಗುಂಡು ಹಾರಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಯತ್ನ ಆರೋಪ ಹೊರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಠಾಣೆಯ ಸಮೀಪದಲ್ಲೇ ಸಾಮೂಹಿಕ ಅತ್ಯಾಚಾರ

    ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಠಾಣೆಯ ಸಮೀಪದಲ್ಲೇ ಸಾಮೂಹಿಕ ಅತ್ಯಾಚಾರ

    ಜೈಪುರ: ಪೊಲೀಸ್ ಠಾಣೆಯಿಂದ 200 ಮೀಟರ್ ದೂರದಲ್ಲೇ ರೈಲಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೃದಯ ವಿದ್ರಾವಕ ಘಟನೆ ರಾಜಾಸ್ಥಾನದ ಜೈಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

    ರಾತ್ರಿ 10 ರಿಂದ 12 ಗಂಟೆಯ ನಡುವೆ 35 ವರ್ಷದ ಮಹಿಳೆ ತನ್ನ ಪತ್ನಿಯೊಂದಿಗೆ ದೆಹಲಿಗೆ ಹೋಗುವ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಐವರು ಅತ್ಯಾಚಾರ ಎಸಗಿದ್ದಾರೆ. ಘಟನೆ ಬಳಿಕ ಮಹಿಳೆ ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಾಕ್ ಬೆಂಬಲಕ್ಕೆ ಸೌದಿ ಅರೇಬಿಯಾ – 8 ಸಾವಿರ ಕೋಟಿ ಹೂಡಿಕೆ ಮಾಡೋದಾಗಿ ಘೋಷಣೆ

    STOP RAPE

    ಘಟನೆ ನಡೆದಿದ್ದು ಹೇಗೆ?
    ಜೈಪುರ ರೈಲ್ವೆ ಜಂಕ್ಷನ್‌ನಲ್ಲಿ ದೆಹಲಿಗೆ ಹೋಗುವ ರೈಲಿಗಾಗಿ ಕಾಯುತ್ತಿದ್ದರು. ದೆಹಲಿಯಿಂದ ತ್ರಿಪುರಾಗೆ ಮತ್ತೊಂದು ರೈಲಿನಲ್ಲಿ ತೆರಳಬೇಕಿತ್ತು. ಪತಿ ಕುಡಿದ ಅಮಲಿನಲ್ಲಿದ್ದ. ಈ ವೇಳೆ ಹಸಿವಿನಲ್ಲಿದ್ದ ಮಹಿಳೆ ರೆಸ್ಟೋರೆಂಟ್‌ನಲ್ಲಿ ಆಹಾರ ತೆಗೆದುಕೊಳ್ಳಲು ಹೋಗಿದ್ದಳು. ಅಲ್ಲಿಂದ ವಾಪಸ್ ಬರುವಾಗ ಐವರು ಯುವಕರು ರೈಲ್ವೆ ಜಂಕ್ಷನ್ ಬಳಿ ಡ್ರಾಪ್ ಮಾಡುವುದಾಗಿ ಹೇಳಿದ್ದಾರೆ. ಆದರೆ ಆಕೆ ಒಪ್ಪದೇ ಇದ್ದಾಗ ಆಕೆಯ ಬಾಯಿ ಬಿಗಿದು, ಅಪಹರಿಸಿ ರೈಲಿನ ಬೇಲಿಯಿಂದ ಅಳಿಯ ಪಕ್ಕಕ್ಕೆ ಎಸೆದಿದ್ದಾರೆ. ನಂತರ ಅತ್ಯಾಚಾರ ಎಸಗಿ, ಕಾಮುಕರು ಪರಾರಿಯಾಗಿದ್ದಾರೆ ಎಂದು ಜಿಆರ್‌ಪಿ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶನ್ ಸಿಂಗ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಮುನಿಸು – 80 ಅಡಿ ಎತ್ತರದ ತಾಳೆ ಮರದಲ್ಲಿ 1 ತಿಂಗಳು ಕಳೆದ ವ್ಯಕ್ತಿ

    ಇದು ಜೈಪುರದ ಜಿಪಿಆರ್ ಠಾಣೆಯ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲೇ ನಡೆದಿದೆ. ಮಹಿಳೆ ಘಟನೆಯ ಬಗ್ಗೆ ಪತಿಗೆ ತಿಳಿಸಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾಸ್ಟೆಲ್ ಬಾಲಕಿಯರಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ – ಮೂವರು ಅರೆಸ್ಟ್

    ಹಾಸ್ಟೆಲ್ ಬಾಲಕಿಯರಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ – ಮೂವರು ಅರೆಸ್ಟ್

    ತಿರುವನಂತಪುರಂ: ಕೇರಳದ ವಲಿಯತುರಾ ಪ್ರದೇಶದ ಕಾನ್ವೆಂಟ್ ಹಾಸ್ಟೆಲ್‌ನಲ್ಲಿ ಅಪ್ರಾಪ್ತೆಯರಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಅಕ್ರಮವಾಗಿ ಹಾಸ್ಟೆಲ್ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಮರ್ಸನ್, ಅರುಣ್ ಮತ್ತು ರೆಂಜಿತ್ ಆರೋಪಿಗಳನ್ನು ಬಂಧಿಸಿರುವ ಕಡಿನಾಂಕುಲಂ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮ್ಮನ ಮಗಳು, ಸ್ವಂತ ಅಜ್ಜಿಯ ಮೇಲೆಯೇ ಅತ್ಯಾಚಾರ – ಇಬ್ಬರು ಸಹೋದರರು ಅರೆಸ್ಟ್

    ಪೊಲೀಸರು ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಆರೋಪಿಗಳು ಅಕ್ರಮವಾಗಿ ಕಾನ್ವೆಂಟ್ ಹಾಸ್ಟೆಲ್ ಪ್ರವೇಶಿಸುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ಹಾಸ್ಟೆಲ್ ಬಾಲಕಿಯರ ಹೇಳಿಕೆಯಂತೆ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಈ ಕೃತ್ಯದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದೇಶದ್ರೋಹದ ಪಾಠ ಮಾಡಿದ್ರೆ ನಾವೇ ಮದರಸಾ ಬ್ಯಾನ್ ಮಾಡ್ತೀವಿ – ವಕ್ಫ್ ಅಧ್ಯಕ್ಷ

    ಘಟನೆ ನಡೆದಿದ್ದು ಹೇಗೆ?
    ಆರೋಪಿಗಳಲ್ಲಿ ಒಬ್ಬ ಕಾನ್ವೆಂಟ್ ಹುಡುಗಿಯೊಬ್ಬಳ ಸ್ನೇಹಿತನಾಗಿದ್ದ. ಇಬ್ಬರೂ ಆಗಾಗ್ಗೆ ಹಾಸ್ಟೆಲ್‌ನಲ್ಲಿ ರಹಸ್ಯವಾಗಿ ಭೇಟಿಯಾಗುತ್ತಿದ್ದರು. ನಂತರ ತನ್ನ ಇಬ್ಬರು ಸ್ನೇಹಿತರನ್ನು ಹಾಸ್ಟೆಲ್‌ಗೆ ಕರೆದುಕೊಂಡು ಹೋಗಿದ್ದಾನೆ. ಆರಂಭದಲ್ಲಿ ಮೂವರು ಇತರ ಹುಡುಗಿಯರೊಂದಿಗೆ ಸ್ನೇಹ ಬೆಳೆಸಿದ್ದಾರೆ. ನಂತರ ಹಾಸ್ಟೆಲ್‌ಗೆ ಮದ್ಯ ತರಲು ಪ್ರಾರಂಭಿಸಿದ್ದರು. ಬಾಲಕಿಯರಿಗೂ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗಿರುವುದಾಗಿ ಕಡಿನಾಂಕುಲಂ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೊನಾಲಿ ಫೋಗಟ್ ಆತ್ಮಹತ್ಯೆ ಪ್ರಕರಣ- ಇಬ್ಬರು ಸಹಚರರ ವಿರುದ್ಧ ಕೇಸ್

    ಸೊನಾಲಿ ಫೋಗಟ್ ಆತ್ಮಹತ್ಯೆ ಪ್ರಕರಣ- ಇಬ್ಬರು ಸಹಚರರ ವಿರುದ್ಧ ಕೇಸ್

    ನವದೆಹಲಿ: ಇತ್ತೀಚೆಗೆ ನಿಧನರಾದ ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ ಅವರ ದೇಹದಲ್ಲಿ ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆ ವೇಳೆ ಗೊತ್ತಾಗಿದೆ. ಹೀಗಾಗಿ ಅವರ ಇಬ್ಬರು ಸಹಚರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ ಅಪರಾಧಕ್ಕೆ ದಂಡನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆಗಸ್ಟ್ 22ರಂದು ಫೋಗಟ್ ಗೋವಾಕ್ಕೆ ಬಂದಾಗ ಅವರ ಜತೆ ಸುಧೀರ್ ಸಾಂಗ್ವಾನ್ ಹಾಗೂ ಸುಖ್ವಿಂದರ್ ವಾಸಿ ಎಂಬವರು ಇದ್ದರು. ಈ ಹಿನ್ನೆಲೆಯಲ್ಲಿ ಫೋಗಟ್ ಸಹೋದರ ರಿಂಕು ಧಾಕ ಅವರು ಅಂಜುನಾ ಪೊಲೀಸ್ ಠಾಣೆಯಲ್ಲಿ ಈ ಇಬ್ಬರ ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಇವರಿಬ್ಬರನ್ನು ಆರೋಪಿಗಳೆಂದು ಪರಿಗಣಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಪತಿಗೆ ತಿಳಿಸದೇ ಮಾಡಿದ್ದ 8 ಲಕ್ಷ ಸಾಲ ತೀರಿಸಲು ತಂದೆ-ತಾಯಿಗೆ ಟೀಯಲ್ಲಿ ಇಲಿ ಪಾಷಾಣ ಹಾಕಿದ್ಲು

    ಅಲ್ಲದೇ ಸುಧೀರ್, ಸೋನಾಲಿಗೆ ತನ್ನ ರಾಜಕೀಯ ಹಾಗೂ ನಟನಾ ವೃತ್ತಿಯನ್ನು ನಾಶಮಾಡುವುದಾಗಿ ಬೆದರಿಕೆ ಹಾಕಿದ್ದನು. ಸೋನಾಲಿ ಸಾವಿನ ನಂತರ ಅವರ ಫಾರ್ಮ್ಹೌಸ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಲ್ಯಾಪ್‌ಟಾಪ್‌ಗಳು ಹಾಗೂ ಇತರ ಗ್ಯಾಜೆಟ್‌ಗಳೂ ಕಾಣೆಯಾಗಿವೆ ಎಂದೂ ರಿಂಕು ಧಾಕಾ ಆರೋಪಿಸಿದ್ದಾರೆ. ಇದನ್ನೂ ಓದಿ: ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಕುಟುಂಬದವರು ದೆಹಲಿಯ ಏಮ್ಸ್ನಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೋರಿದ್ದರು. ಆದರೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ ನಂತರ ಗೋವಾದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

    42 ವರ್ಷ ವಯಸ್ಸಿನ ಫೋಗಟ್ ಸೋಮವಾರ ರಾತ್ರಿ ಗೋವಾದಲ್ಲಿ ಮೃತಪಟ್ಟಿದ್ದರು. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಆರಂಭದಲ್ಲಿ ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ತಿಳಿಸಿದ್ದರು. ಬಳಿಕ ಫೋಗಟ್ ಅವರ ಕುಟುಂಬದವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

    ಸೊನಾಲಿ ಫೋಗಟ್ 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‌ದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಅವರು, 14ನೇ ಆವೃತ್ತಿಯ `ಬಿಗ್‌ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ವಾಷಿಂಗ್ಟನ್: ಒಪ್ಪಿಗೆಯಿಲ್ಲದೇ 9 ವರ್ಷದ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯೊಬ್ಬನಿಗೆ ಅಮೆರಿಕದ ಗ್ಯಾಲಿಟಿನ್ ಕೌಂಟಿ ಜಿಲ್ಲಾ ನ್ಯಾಯಾಲಯವು 100 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    2018ರ ಅಕ್ಟೋಬರ್ ಹಾಗೂ 2019ರ ಡಿಸೆಂಬರ್ ಅವಧಿಯಲ್ಲಿ 9 ವರ್ಷದ ಬಾಲಕಿಯೊಂದಿಗೆ ಒಪ್ಪಿಗೆಯಿಲ್ಲದೇ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ಜೇರೆಡ್ ಜೇಮ್ಸ್ ಫೀಲ್ಡ್ (33) ಎಂಬಾತನಿಗೆ ನ್ಯಾಯಾಲಯವು 100 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಆದರೆ ಆರೋಪಿಯು ತನ್ನ ಅಪರಾಧಗಳ ತಪ್ಪೊಪ್ಪಿಕೊಂಡಿದ್ದು, ಆಲ್ಫೋರ್ಡ್ ಮನವಿ (ಲೈಂಗಿಕ ಅಪರಾಧಗಳನ್ನು ಮನ್ನಿಸುವಂತೆ ಮನವಿ) ಸಲ್ಲಿಸಿದ್ದಕ್ಕಾಗಿ ಆತನಿಗೆ 75 ವರ್ಷಗಳನ್ನು ತೆಗೆದುಹಾಕಿ, 25 ವರ್ಷ ಜೈಲು ಶಿಕ್ಷೆಗೆ ನ್ಯಾಯಾಲಯವು ಒಳಪಡಿಸಿದೆ.

    ಇದರೊಂದಿಗೆ ಕಂಫರ್ಟ್ ಇನ್ ಸ್ಟ್ಯಾಂಡ್‌ಆಫ್‌ನಲ್ಲಿ ಭಾಗಿಯಾಗಿದ್ದ ಎರಡು ಅಪರಾಧ ಪ್ರಕರಣಗಳಿಗೆ ತಲಾ 5 ವರ್ಷ ಹೆಚ್ಚುವರಿ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಹಣದಾಸೆಗೆ ಮದುವೆ – ಅನಾರೋಗ್ಯದ ನೆಪ ಹೇಳಿ, ಹಣ ದೋಚಿಕೊಂಡು ಸೊಸೆ ಎಸ್ಕೇಪ್

    ಹಣದಾಸೆಗೆ ಮದುವೆ – ಅನಾರೋಗ್ಯದ ನೆಪ ಹೇಳಿ, ಹಣ ದೋಚಿಕೊಂಡು ಸೊಸೆ ಎಸ್ಕೇಪ್

    ಬೆಂಗಳೂರು: ಹಣದಾಸೆಗೆ ಮದುವೆಯಾಗಿ ಬಳಿಕ ಅನಾರೋಗ್ಯದ ನೆಪ ಹೇಳಿ ಸೊಸೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಸೊಸೆ ಗೌತಮಿ ವಿರುದ್ಧ ಪತಿ ಕುಟುಂಬಸ್ಥರು ದೂರು ನೀಡಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಮದುವೆ ಬಳಿಕ ದಂಪತಿ ಅಮೆರಿಕಾಗೆ ಹೋಗಲು ಸಿದ್ಧತೆ ನಡೆಸಲಾಗಿತ್ತು. ಆದ್ರೆ ಅಮೆರಿಕಾಗೆ ತೆರಳಲು ಎತ್ತಿಟ್ಟಿದ್ದ 1.25 ಲಕ್ಷ ನಗದು, ಚಿನ್ನಾಭರಣ ಸಮೇತ ಸೊಸೆ ಎಸ್ಕೇಪ್ ಆಗಿದ್ದಾಳೆ.

    ಗೌತಮಿಗೆ 18 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, 3 ಲಕ್ಷಕ್ಕೂ ಅಧಿಕ ಮೌಲ್ಯದ ಬಟ್ಟೆ ಕೊಡಿಸಲಾಗಿತ್ತು. ಅಷ್ಟೇ ಅಲ್ಲ ಸೊಸೆಯ ವಿದ್ಯಾಭ್ಯಾಸ ಸಲುವಾಗಿ 40 ಲಕ್ಷ ವರ್ಗಾವಣೆ ಮಾಡಲಾಗಿತ್ತು. ಇಷ್ಟೆಲ್ಲಾ ತೆಗೆದುಕೊಂಡಿದ್ದ ಸೊಸೆ ಅನಾರೋಗ್ಯದ ನೆಪ ಹೇಳಿ ಹೈಡ್ರಾಮಾ ಶುರುಮಾಡಿದ್ಲು. ಇನ್ನು ಸೊಸೆ ಗೌತಮಿ ತಾಯಿ ಮನೆಗೆ ಹೋಗಿ ನಾನು ಯಾವುದೇ ಕಾರಣಕ್ಕೂ ವಾಪಸ್ ಬರಲ್ಲ. ನೀವೇನಾದ್ರೂ ಬಂದ್ರೆ ಕಿರುಕುಳ ಕೊಡ್ತಿದ್ದೀರಾ ಅಂತ ಕೇಸ್ ಹಾಕ್ತೀನಿ ಅಂತ ಆವಾಜ್ ಹಾಕ್ತಿದ್ದಾರೆ.

    crime

    ಸದ್ಯ ಗೌತಮಿಯನ್ನು ತೋರಿಸಿ ಮದುವೆ ಮಾಡಿಸಿದ್ದ ವರಲಕ್ಷ್ಮೀ, ರವಿಚಂದ್ರನ್, ಹರೀಶ್ ಎಂಬುವರಿಗೂ ದುಡ್ಡು ನೀಡಲಾಗಿತ್ತು. ಹೀಗಾಗಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬನಶಂಕರಿ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಅಸಭ್ಯ ವರ್ತನೆ: ಪೋಷಕರಿಗೆ ತಿಳಿಸಿದ್ದಕ್ಕೆ ಚಾಕುವಿನಿಂದ ಇರಿದು 11ರ ಬಾಲಕಿ ಕೊಲೆ

    ಅಸಭ್ಯ ವರ್ತನೆ: ಪೋಷಕರಿಗೆ ತಿಳಿಸಿದ್ದಕ್ಕೆ ಚಾಕುವಿನಿಂದ ಇರಿದು 11ರ ಬಾಲಕಿ ಕೊಲೆ

    ಬೆಂಗಳೂರು: ಅಸಭ್ಯ ವರ್ತನೆ ತೋರಿದ ವ್ಯಕ್ತಿ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೇ 11 ವರ್ಷದ ಬಾಲಕಿಯನ್ನು ಚಾಕು ಇರಿದು ಕೊಲೆ ಮಾಡಿರುವ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ಜಿಂದಾಲ್ ಕ್ವಾಟ್ರಸ್‌ನಲ್ಲಿ ನಡೆದಿದೆ.

    ತನ್ನ ಮುಂದೆ ಹರಿಯಾಣ ಮೂಲದ ನಂದ ಕಿಶೋರ್ ಅಸಭ್ಯ ವರ್ತನೆ ಮಾಡುತ್ತಿರುವುದನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ನಂದ ಕಿಶೋರ್ ಉತ್ತರಾಖಂಡ್ ಮೂಲದ ಬಾಲಕಿಗೆ ಚಾಕುವಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂದ ಕಿಶೋರ್‌ನನ್ನು ತಕ್ಷಣ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ನದಿ, ಕೆರೆಗಳಲ್ಲಿ ಸ್ನಾನ ಮಾಡೋ ಮುನ್ನ ಹುಷಾರ್ – ವಿದೇಶದಲ್ಲಿ ಪತ್ತೆಯಾಗಿದೆ ಮೆದುಳು ತಿನ್ನುವ ಡೆಡ್ಲಿ ವೈರಸ್

    ಮೃತ ಬಾಲಕಿ ತಂದೆ ಹಾಗೂ ಮೃತ ಆರೋಪಿ ಇಬ್ಬರೂ ಜಿಂದಾಲ್ ಕಂಪನಿಯ ನೌಕರರಾಗಿದ್ದು, ಬಾಲಕಿಯ ಆರೋಪದಿಂದ ಕ್ವಾಟ್ರಸ್ ಖಾಲಿ ಮಾಡಲು ಕಂಪನಿಯಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಇದರಿಂದಾಗಿಯೇ ನಂದಕಿಶೋರ್ ಅಪ್ರಾಪ್ತೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಲ್ಕು ಗೋಡೆ ಮ‌ಧ್ಯೆ ಜಗಳವಾಡಿರೋದು, ಬೀದಿಗೆ ತರಬಾರದು: ಅನಿರುದ್ಧ್

    ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿಯ ಪೊಲೀಸ್ ಅಧಿಕಾರಿ ಮಂಜುನಾಥ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡೆ ಅವರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]