Tag: Crop loss

  • ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ – ಹಾನಿಯಾದ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹ

    ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ – ಹಾನಿಯಾದ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹ

    ಗದಗ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ರೈತೆರು ಎತ್ತು, ಚಕ್ಕಡಿಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆ ಮುಂಡರಗಿ (Mudaragi) ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಎತ್ತು, ಚಕ್ಕಡಿಗಳನ್ನು ನಿಲ್ಲಿಸಿ ರೈತರು ಪ್ರತಿಭಟನೆ ಮಾಡಿದರು. ಹೆಸರು, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇರಿದಂತೆ ಅನೇಕ ಬೆಳೆಗಳು ಮಳೆಯಿಂದ ನಾಶವಾಗಿವೆ. ರೈತರು (Farmers) ಸಾಕಷ್ಟು ಸಾಲ ಮಾಡಿ ಬೆಳೆದ ಬೆಳೆಗಳು ಕೈತಪ್ಪಿವೆ. ಅನ್ನದಾತರು ಬೀದಿಗೆ ಬರುವಂತಾಗಿದೆ. ಇನ್ನು ಅಲ್ಪ ಸ್ವಲ್ಪ ಬೆಳೆಗೆ ಖರೀದಿ ಕೇಂದ್ರ ಇಲ್ಲ. ಶೀಘ್ರದಲ್ಲೇ ಖರೀದಿ ಕೇಂದ್ರ ಆರಂಭಿಸಬೇಕು. ಬೆಳೆ ವಿಮೆ ಏಜೆಂಟ್‌ಗಳ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಾವೇರಿ | ಕತ್ತು ಸೀಳಿ ಡ್ಯಾನ್ಸ್ ಮಾಸ್ಟರ್ ಬರ್ಬರ ಹತ್ಯೆ – ಲಾಂಗ್‌ಡ್ರೈವ್ ಹೋಗಿ ಬರುತ್ತೇನೆ ಅಂದಾತ ಶವವಾಗಿ ಪತ್ತೆ

    ಈ ವೇಳೆ ಕೃಷಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿಗಳು ಸರಿಯಾಗಿ ರೈತರ ಬೆಳೆ ಸಮೀಕ್ಷೆ ಮಾಡುತ್ತಿಲ್ಲ. ಕಾಟಾಚಾರಕ್ಕೆ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ

    ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು. ಕೆಲಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ಪ್ರತಿಭಟನೆಯಲ್ಲಿ ರೈತ ಮುಖಂಡರು, ಮಹಿಳೆಯರು, ಸಾರ್ವಜನಿಕರು ಭಾಗಿಯಾಗಿದ್ದರು.

  • ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ: ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಗದಗ ತಾಲೂಕಿನ ಬಿಂಕದಕಟ್ಟಿ ಭಾಗದಲ್ಲಿ ಹೆಸರು ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿತ್ತು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕ್ರೆ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನು ಸ್ವಾಗತಿಸುತ್ತೇವೆ: ಅಶ್ವಥ್ ನಾರಾಯಣ್

    ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    ಗದಗ ಜಿಲ್ಲೆಯಲ್ಲಿ ಆ.1 ರಿಂದ ಆ.18 ವರೆಗೆ ವಾಡಿಕೆ ಮಳೆ 46.9 ಮೀ.ಮೀ ಆಗಬೇಕಿತ್ತು. ಆದ್ರೆ 140.2 ರಷ್ಟು ಮಳೆ ಆಗುವ ಮೂಲಕ 198.9% ರಷ್ಟು ಅಧಿಕ ಮಳೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 94,884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67,533 ಹೆಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್

    ಈ ವೇಳೆ ಎಡಿಸಿ ದುರಗೇಶ್ ಕೆ.ಆರ್, ಎಸಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

  • ಚಿತ್ರದುರ್ಗದಲ್ಲಿ ಧಾರಾಕಾರ ಮಳೆ – ಚಳ್ಳಕೆರೆ ತಾಲೂಕಿನ ವಿವಿಧೆಡೆ ಜಮೀನುಗಳು ಜಲಾವೃತ

    ಚಿತ್ರದುರ್ಗದಲ್ಲಿ ಧಾರಾಕಾರ ಮಳೆ – ಚಳ್ಳಕೆರೆ ತಾಲೂಕಿನ ವಿವಿಧೆಡೆ ಜಮೀನುಗಳು ಜಲಾವೃತ

    ಚಿತ್ರದುರ್ಗ: ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಚಳ್ಳಕೆರೆ (Challakere) ತಾಲೂಕಿನ ವಿವಿಧೆಡೆ ಜಮೀನುಗಳು (Farms) ಜಲಾವೃತಗೊಂಡಿವೆ.

    ಭಾರೀ ಮಳೆಗೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯ ರೈತ ಮಧು ಎಂಬವರ ಜಮೀನು ಜಲಾವೃತಗೊಂಡಿದೆ. ಅಡಿಕೆ, ತೆಂಗು, ಮೆಕ್ಕೆಜೋಳ, ತರಕಾರಿ ಬೆಳೆಗಳು ಜಲಾವೃತಗೊಂಡಿದ್ದು, ನಾಲ್ಕು ಎಕರೆಗೂ ಹೆಚ್ಚು ಜಮೀನು ಜಲಮಯವಾಗಿದೆ. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ

    ಇನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರೈತ ದಯಾನಂದ ಎಂಬವರಿಗೆ ಸೇರಿದ ಐದು ಎಕರೆ ಮೆಕ್ಕೆಜೋಳ ಜಮೀನು ಕೂಡ ಜಲಾವೃತವಾಗಿದೆ. ಕೈಗೆ ಬಂದಿದ್ದ ಬೆಳೆ ಮಳೆರಾಯನ ಅವಕೃಪೆಯಿಂದ ಹಾನಿಯಾಗಿದೆ. ಅತಿವೃಷ್ಟಿಯಿಂದ ಚಳ್ಳಕೆರೆ ಭಾಗದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ರಣ ಮಳೆಗೆ ಕುಸಿದ ಗೋಡೆ – ಇಬ್ಬರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು

  • ಭಾರೀ ಮಳೆಗೆ ಅವಾಂತರ ಸೃಷ್ಟಿ – ಕೋಟ್ಯಂತರ ರೂ. ಮೌಲ್ಯದ 30 ಎಕರೆ ದಾಳಿಂಬೆ ನಾಶ

    ಭಾರೀ ಮಳೆಗೆ ಅವಾಂತರ ಸೃಷ್ಟಿ – ಕೋಟ್ಯಂತರ ರೂ. ಮೌಲ್ಯದ 30 ಎಕರೆ ದಾಳಿಂಬೆ ನಾಶ

    ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿರುವ ಘಟನೆ ಸಿಂಧನೂರು (Sindhanuru) ತಾಲೂಕಿನಲ್ಲಿ ನಡೆದಿದೆ.

    ಗೊಬ್ಬರಕಲ್, ಹುಡಾ, ಸಾಲಗುಂದ ಸೇರಿ ವಿವಿಧೆಡೆ ಸುರಿದ ಭಾರೀ ಮಳೆಗೆ ಮಲ್ಲಯ್ಯ ಸ್ವಾಮಿ, ಶಿವಲಿಂಗಯ್ಯಸ್ವಾಮಿ, ಹನುಮಂತರೆಡ್ಡಿ ಅವರಿಗೆ ಸೇರಿದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿದೆ.ಇದನ್ನೂ ಓದಿ: ವಾಲ್ಮೀಕಿ ಸಮುದಾಯದ ದಯಾನಂದ್‌ ಮೇಲೆ ಏಕೆ ಸಿಎಂಗೆ ಕೋಪ – ಪ್ರತಾಪ್‌ ಸಿಂಹ ಪ್ರಶ್ನೆ

    ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ದಾಳಿಂಬೆ ಬೆಳೆ ನೆಲಕ್ಕೆ ಬಿದ್ದು ಹಾಳಾಗಿದೆ. ಎಕರೆಗೆ 3 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ ದಾಳಿಂಬೆ ಕೆಲವೇ ಕೆಲವು ದಿನಗಳಲ್ಲಿ ಮಾರುಕಟ್ಟೆ ಸೇರಬೇಕಿತ್ತು. ಆದರೆ ಇದೀಗ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಕೆ.ಜಿಗೆ 130 ರಿಂದ 160 ರೂ.ಯಂತೆ ಮಾರಾಟವಾಗುತ್ತಿದ್ದು, ಮಳೆ ಸೃಷ್ಟಿಸಿದ ಅವಾಂತರದಿಂದಾಗಿ ಎಲ್ಲವೂ ಮಣ್ಣುಪಾಲಾಗಿದೆ. ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದ್ದು, ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಸರ್ಕಾರಕ್ಕೂ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸಂಬಂಧವಿಲ್ಲ- ಹೆಚ್.ಕೆ.ಪಾಟೀಲ್

  • ಬಾಗಲಕೋಟೆ | ಹಲವೆಡೆ ಬಿರುಗಾಳಿ ಸಹಿತ ಮಳೆ, ನೆಲಕ್ಕುರುಳಿದ ಬೆಳೆ

    ಬಾಗಲಕೋಟೆ | ಹಲವೆಡೆ ಬಿರುಗಾಳಿ ಸಹಿತ ಮಳೆ, ನೆಲಕ್ಕುರುಳಿದ ಬೆಳೆ

    ಬಾಗಲಕೋಟೆ: ಜಿಲ್ಲೆಯ ಜಮಖಂಡಿ (JamaKhandi) ತಾಲೂಕಿನ ಕೆಲವು ಕಡೆಗಳಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆಯಿಂದ ಕಟಾವಿಗೆ ಬಂದಿದ್ದ ಬೆಳೆಗಳು ನೆಲಕ್ಕುರುಳಿದೆ.

    ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೇಶವ್ ಜಾಧವ್, ಅನೀಲ್ ಬಬಲೇಶ್ವರ, ಉಮೇಶ್ ಜಾಧವ್, ಶಿವಾಜಿ ಜಾಧವ್ ಎಂಬುವವರ ಒಣದ್ರಾಕ್ಷಿ ಘಟಕಗಳಿಗೆ ಗಾಳಿ ಸಹಿತ ಮಳೆಯಿಂದ ಹಾನಿ ಆಗಿದೆ. ಹಾಗೆಯೇ ತೊದಲಬಾಗಿ ಗ್ರಾಮದ ಅಣ್ಣಪ್ಪ ಶಿರಹಟ್ಟಿ ಎನ್ನುವವರ ಜಮೀನಿನಲ್ಲಿ ಬೆಳೆದು ನಿಂತಿದ್ದ ಮೆಕ್ಕೆಜೋಳ ಗಾಳಿ ಹೊಡೆತಕ್ಕೆ ಸಿಕ್ಕು ನೆಲಕ್ಕಪ್ಪಳಿಸಿದೆ. ಇದನ್ನೂ ಓದಿ: ನಾಗ್ಪುರ ಕೋಮು ಗಲಭೆ – ಮಾಸ್ಟರ್‌ಮೈಂಡ್‌ ಮನೆ ಮೇಲೆ ಬುಲ್ಡೋಜರ್ ಅಸ್ತ್ರ ಪ್ರಯೋಗ!

    ಜಿಲ್ಲೆಯಲ್ಲಿ ಒಂದು ಕಡೆಗೆ ಬೇಸಿಗೆ ಬಿರುಬಿಸಿಲು ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಮತ್ತೊಂದೆಡೆ ತಾಪಮಾನ ಹೆಚ್ಚಾಗಿ ಅಕಾಲಿಕ ಮಳೆ ಆಗುತ್ತಿದ್ದು, ಇದೀಗ ಮಳೆಯ ಜೊತೆ ಗಾಳಿ ಬೀಸುವುದು ಬೆಳೆಗಳಿಗೆ ಕಂಟಕವಾಗುತ್ತಿದೆ. ಗಾಳಿ ಹಾಗೂ ಅಕಾಲಿಕ ಮಳೆಯು ದ್ರಾಕ್ಷಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಹೇಳಿಕೆ ಡಿಕೆಶಿ ಬಂಡವಾಳ ಬಯಲು ಮಾಡಿದೆ: ಬಿವೈವಿ

  • ಕೋಲಾರ ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ – ಅಪಾರ ಪ್ರಮಾಣದ ಬೆಳೆಗಳು ನಾಶ

    ಕೋಲಾರ ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ – ಅಪಾರ ಪ್ರಮಾಣದ ಬೆಳೆಗಳು ನಾಶ

    ಕೋಲಾರ: ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ (Wild Elephant) ಹಿಂಡು ದಾಳಿಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದೆ.

    ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಸದ್ಯ ಆತಂಕದ ವಾತಾವರಣ ಇದ್ದು, ಭಯದಲ್ಲೆ ಜೀವನ ನಡೆಸುವ ಸ್ಥಿತಿ ಬಂದಿದೆ. ಕಳೆದೊಂದು ವಾರದಿಂದ ಕಾಡಂಚಿನ ಗ್ರಾಮಗಳ ರೈತರ ಜಮೀನುಗಳಿಗೆ ದಾಳಿ ಮಾಡಿರುವ ಕಾಡಾನೆಗಳ ಹಿಂಡು ರೈತರು ಬೆಳೆದ ಅಪಾರ ಪ್ರಮಾಣದ ಟೊಮ್ಯಾಟೊ, ರಾಗಿ, ಭತ್ತ, ಬಾಳೆ ಎಲ್ಲವನ್ನು ನಾಶ ಮಾಡಿವೆ. ಇದರಿಂದ ರೈತರು ಕಂಗೆಟ್ಟಿದ್ದಾರೆ. ಇದನ್ನೂ ಓದಿ: Tumakuru| ಹೊಸ ವರ್ಷಕ್ಕೆ ಕೇಕ್ ತರಲು ಹೋದ ಯುವಕ ಅಪಘಾತದಲ್ಲಿ ಸಾವು

    ತಾಲೂಕಿನ ಕಾಡಂಚಿನ ಗ್ರಾಮಗಳಾದ ಭತ್ತಲಹಳ್ಳಿ, ತಳೂರು ಮತ್ತು ಸಾಕರಸನಹಳ್ಳಿ ಗ್ರಾಮಗಳಲ್ಲಿ ಬೆಳೆ (Crop Loss) ನಾಶವಾಗಿದೆ. ಭತ್ತಲಹಳ್ಳಿ ಗ್ರಾಮದ ಸುಬ್ರಮಣಿ, ತಳೂರು ಗ್ರಾಮದ ವೆಂಕಟೇಶ್, ಸಾಕರಸನಹಳ್ಳಿ ಗ್ರಾಮದ ಮಂಜುನಾಥ್ ಎಂಬವರ ರೈತರ ಬೆಳೆಗಳು ನಾಶವಾಗಿವೆ. ಇನ್ನೂ ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡು ಪದೇಪದೆ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಲೇ ಇವೆ. ಇದನ್ನೂ ಓದಿ: ಮುಂಬೈ | 232 ಕೆಜಿ ಮಾದಕ ವಸ್ತು ಕಳ್ಳಸಾಗಾಣಿಕೆ ಕೇಸ್‌ – 8 ಪಾಕ್‌ ಪ್ರಜೆಗಳಿಗೆ 20 ವರ್ಷ ಜೈಲು

    ಸದ್ಯ 3 ಕಿ.ಮೀ ಸೋಲಾರ್ ಫೆನ್ಸಿಂಗ್ ಅಳವಡಿಕೆ ಮಾಡದ ಕಾರಣ ಕಾಡಾನೆಗಳ ಹಿಂಡು ಪದೇ ಪದೇ ರೈತರ ಜಮೀನುಗಳಿಗೆ ಈ ಭಾಗದಲ್ಲಿ ಲಗ್ಗೆ ಇಡುತ್ತಿವೆ ಅನ್ನೋದು ರೈತರ ಆರೋಪವಾಗಿದೆ. ಇದನ್ನೂ ಓದಿ: ದಿ.ಮನಮೋಹನ್ ಸಿಂಗ್‌ಗೆ ಭಾರತ ರತ್ನ ನೀಡುವಂತೆ ಕಾಂಗ್ರೆಸ್ ಒತ್ತಡ

  • Kolar| ಜಡಿ ಮಳೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ಹಾನಿ – ಜಂಟಿ ಸಮೀಕ್ಷೆ ನಡೆಸಿ ಪರಿಹಾರಕ್ಕೆ ಕ್ರಮ

    Kolar| ಜಡಿ ಮಳೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ಹಾನಿ – ಜಂಟಿ ಸಮೀಕ್ಷೆ ನಡೆಸಿ ಪರಿಹಾರಕ್ಕೆ ಕ್ರಮ

    ಕೋಲಾರ: ಫೆಂಗಲ್ ಚಂಡಮಾರುತ (Fengal Cyclone) ಹಿನ್ನೆಲೆ ಕೋಲಾರದಲ್ಲಿ (Kolar) ಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು  ಹಾನಿಯಾಗಿದೆ.

    ಜಡಿ ಮಳೆಯಿಂದಾಗಿ (Rain) ರೈತರು ಬೆಳೆದಿದ್ದ ರಾಗಿ, ಅವರೆಕಾಯಿ, ಹೂಕೋಸು, ಹೂವು ಸೇರಿದಂತೆ ಸಾಕಷ್ಟು ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಇದರಿಂದ ರೈತರು ಕಂಗಾಲಾಗಿದ್ದರಲ್ಲದೆ, ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದರು. ಮಳೆ ಹಾನಿಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರು. ಇದರಿಂದ ಎಚ್ಚೆತ್ತ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ (Akram Pasha) ಕೂಡಲೇ ಬೆಳೆ ಹಾನಿ ಸಮೀಕ್ಷೆ ಮಾಡಿ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ, ಕಂದಾಯ ಇಲಾಖೆ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ಬೆಳೆ ಸಮೀಕ್ಷೆಗೆ ತಿಳಿಸಲಾಗಿದೆ. ಮಳೆ ನಿಂತ ತಕ್ಷಣ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ರಾಜ್ಯ ಸರ್ಕಾರಕ್ಕೆ ಬೆಳಹಾನಿ ಮಾಹಿತಿ ಒದಗಿಸಲಾಗುವುದು, ನಂತರ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ, ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಲಾಗುವುದು ಎಂದು  ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸಿಪಿವೈ ಗೆದ್ರೆ ಡಿಕೆಶಿ ಸಿಎಂ ಆಗ್ತಾರೆ ಅಂದ್ರು ಈಗೇನು ಮಾಡ್ತಾರೆ: ಛಲವಾದಿ ಪ್ರಶ್ನೆ

  • ಚಿಕ್ಕಬಳ್ಳಾಪುರ | ಫೆಂಗಲ್‌ ಚಂಡಮಾರುತಕ್ಕೆ ರಾಗಿ ಬೆಳೆ ನಾಶ – ಹೂದೋಟವೂ ಹಾಳು

    ಚಿಕ್ಕಬಳ್ಳಾಪುರ | ಫೆಂಗಲ್‌ ಚಂಡಮಾರುತಕ್ಕೆ ರಾಗಿ ಬೆಳೆ ನಾಶ – ಹೂದೋಟವೂ ಹಾಳು

    – ಜಿಲ್ಲಾಧಿಕಾರಿ ಮನೆ ಬಳಿಯೇ ಧರೆಗುರುಳಿದ ಮರ

    ಚಿಕ್ಕಬಳ್ಳಾಪುರ: ಫೆಂಗಲ್ ಚಂಡಮಾರುತದ ಬಿಸಿ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗೂ ತಟ್ಟಿದೆ. ಸೈಕ್ಲೋನ್ ಪರಿಣಾಮದಿಂದ ಚಿಕ್ಕಬಳ್ಳಾಪುರದಲ್ಲಿ ತರಹೇವಾರಿ ಹೂವು ಹಾಗೂ ತರಕಾರಿ, ರಾಗಿ ಬೆಳೆಗಳು (Millet Crop) ಹಾನಿಯಾಗಿವೆ.

    ಜಿಲ್ಲೆಯಲ್ಲಿ ತರಹೇವಾರಿ ಸೇವಂತಿಗೆ, ಗುಲಾಬಿ, ಚೆಂಡು ಹೂ, ಕನಕಾಂಬರ, ಸೇರಿದಂತೆ ವಿವಿಧ ರೀತಿಯ ಹೂವುಗಳನ್ನ ಬೆಳೆಯಲಾಗುತ್ತದೆ. ಆದ್ರೆ ಕಳೆದ 2 ದಿನಗಳಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಹೋದೋಟಗಳೆಲ್ಲವೂ ಮಳೆ ನೀರಿನಿಂದ ಆವೃತವಾಗಿ ಬೆಳೆ ಕೊಳೆಯುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ವಿಧಾನಸೌಧಕ್ಕೆ ತಲುಪಿದ ಇಡಿ ತನಿಖೆ – ಬೈರತಿ ಸುರೇಶ್‌ ಕಚೇರಿ ಸಿಬ್ಬಂದಿಗೆ ಇಡಿ ನೋಟಿಸ್‌

    ಇತ್ತ ತೇವಾಂಶದಿಂದ ಹೂವನ್ನ ಪಾರ್ಸೆಲ್‌ ಕೊಂಡೊಯ್ಯಲಾಗುವುದಿಲ್ಲ ಅಂತ, ಜನ ಖರೀದಿಗೂ ಮುಂದಾಗುತ್ತಿಲ್ಲ. ಇದ್ರಿಂದ ಹೂ ಬೆಳೆದ ರೈತರು ನಷ್ಟಕ್ಕೀಡಾಗಿದ್ದಾರೆ. ಇನ್ನೂ ಕಟಾವಿಗೆ ಬಂದಿದ್ದ ರಾಗಿ ಬೆಳೆ ಸಹ ಮಳೆಯಿಂದ ಒದ್ದೆಯಾಗಿ ನಾಶವಾಗುತ್ತಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ತುಮಕೂರಿಗೆ ಮೆಟ್ರೋ ರೈಲು‌ ಸೇವೆ ಕಲ್ಪಿಸಲು ಡಿಪಿಆರ್ ಪರಿಶೀಲನೆ ನಡೀತಿದೆ: ಪರಮೇಶ್ವರ್‌

    ಜಿಲ್ಲಾಧಿಕಾರಿ ಮನೆ ಬಳಿಯೇ ಧರೆಗುರುಳಿದ ಮರ:
    ಇನ್ನೂ ಚಂಡಮಾರುತದಿಂದಾಗಿ ಜಿಲ್ಲೆಯಾದ್ಯಂತ ಜಡಿ ಮಳೆಯಾಗುತ್ತಿದೆ. ನಗರದಿಂದ ಮೂಷ್ಟೂರು ಮಾರ್ಗದ ರಸ್ತೆಯಲ್ಲಿರುವ ಡಿಸಿ ರವೀಂದ್ರ ನಿವಾಸದ ರಸ್ತೆಯಲ್ಲೇ ಬೃಹತ್ ಮರವೊಂದು ಧರೆಗುರುಳಿದೆ. ಸದಾ ಸಂಚಾರದಟ್ಟಣೆಯಿಂದ ಕೂಡಿರುತ್ತಿದ್ದ ರಸ್ತೆ ಇಂದು ಖಾಲಿಯಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನುತ್ತಾರೆ ಸ್ಥಳೀಯರು. ಅಲ್ಲದೇ ಇದೇ ರಸ್ತೆಯಲ್ಲಿ ಇನ್ನಷ್ಟು ಮರಗಳು ಬೀಳುವ ಹಂತದಲ್ಲಿದ್ದು, ಅವುಗಳನ್ನು ತೆರವುಗೊಳಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಬರಲು ಸಾಧ್ಯವಿಲ್ಲ – ಪೊಲೀಸರಿಗೆ ಚಂದ್ರಶೇಖರ ಶ್ರೀ ಪತ್ರ

  • ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

    ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

    ಕೋಲಾರ: ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ರೈತರು ಕಂಗಾಲಾಗಿದ್ದಾರೆ. ಕೋಲಾರ (Kolar) ಜಿಲ್ಲೆಯ ಜನ್ನಘಟ್ಟ (Janaghatta) ಗ್ರಾಮದಲ್ಲಿ ಎಂಜಿನಿಯರ್ ಕೆಲಸ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶವಾಗಿದೆ.ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ- ಮಾಲೀಕ, ಮಗನ ವಿರುದ್ಧ ಎಫ್‌ಐಆರ್ ದಾಖಲು

    ರೈತ ನಂದನ್ ಗೌಡ ಎಂಬುವವರು ಸಿವಿಲ್ ಎಂಜಿನಿಯರ್ ಕೆಲಸ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದರು. ಒಟ್ಟು 9 ಎಕರೆ ತೋಟದಲ್ಲಿ 7 ಎಕರೆ ಎಲೆ ಕೋಸು ಹಾಗೂ 2 ಎಕರೆ ಹೂ ಕೋಸನ್ನು ಬೆಳೆದಿದ್ದರು. ಜೊತೆಗೆ ಟೊಮ್ಯಾಟೊ, ಹೂವು, ಕ್ಯಾಪ್ಸಿಕಂ, ಪಪ್ಪಾಯವನ್ನು ಬೆಳೆದಿದ್ದರು. ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕೋಟ್ಯಂತರ ರೂ. ವಿವಿಧ ಬೆಳೆಗಳು ನಾಶವಾಗಿವೆ.

    ಧಾರಾಕಾರ ಮಳೆಯಿಂದಾಗಿ ಮಳೆ ನೀರು ತೋಟಗಳಿಗೆ ನುಗ್ಗಿದ್ದು, ಅತಿಯಾದ ತೇವಾಂಶದಿಂದಾಗಿ ಎಲೆ ಕೋಸು ಕೊಳೆತು ಹೋಗಿದೆ. ಕೊಳೆತ ಕಾರಣ ಮಾರುಕಟ್ಟೆಗೂ ಕಳುಹಿಸಲಾಗುವುದಿಲ್ಲ. ಇತ್ತ ಪ್ರಾಣಿಗಳಿಗೂ ಆಹಾರವಾಗಿಯೂ ಹಾಕಲಾಗುವುದಿಲ್ಲ ಎಂದು ರೈತ ಕಂಗಾಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ, ಲಾಭದ ನಿರೀಕ್ಷೆಯಲ್ಲಿದ್ದ ರೈತ ಪರದಾಡುವಂತಾಗಿದೆ.ಇದನ್ನೂ ಓದಿ: ತುಂಗಭದ್ರಾ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ – ಮುಳುಗಡೆ ಹಂತ ತಲುಪಿದ ಕಂಪ್ಲಿ ಸೇತುವೆ

  • ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ- ಸರ್ಕಾರಕ್ಕೆ ಮಲೆನಾಡಿಗರ ಆಗ್ರಹ

    ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ- ಸರ್ಕಾರಕ್ಕೆ ಮಲೆನಾಡಿಗರ ಆಗ್ರಹ

    ಚಿಕ್ಕಮಗಳೂರು: ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ಬೇರೆ ಭೂಮಿ ಕೊಡಿ, ನಾವು ಬೇರೆ ಕಡೆ ಹೋಗಿ ಬದುಕು ಕಟ್ಟಿಕೊಳ್ಳುತ್ತೇವೆ ಎಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲರಹಳ್ಳಿ, ಗುತ್ತಿ, ಭೈರಾಪುರ, ಊರಬಗೆ ಗ್ರಾಮದ ಜನ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಕಳೆದೊಂದು ವಾರದಿಂದ ಮೂರು ಕಾಡಾನೆಗಳು ಹೊಲ-ಗದ್ದೆ, ತೋಟದಲ್ಲಿ ದಾಂಧಲೆ ನಡೆಸುತ್ತಿವೆ. ಬೆಳೆಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಅಡಿಕೆ, ಕಾಫಿ, ಮೆಣಸು, ಬಾಳೆ ಸಂಪೂರ್ಣ ನೆಲಕಚ್ಚುತ್ತಿದೆ. ಹೀಗೇ ಆದರೆ ಬದುಕುವುದಾದರೂ ಹೇಗೆ ಎಂದು ಅರಣ್ಯ ಇಲಾಖೆಗೆ ಪ್ರಶ್ನಿಸಿರುವ ಸ್ಥಳಿಯರು, ಕಾಡಾನೆಗಳನ್ನು ಸ್ಥಳಾಂತರಿಸಿ, ಇಲ್ಲವೇ ನಮ್ಮನ್ನೇ ಸ್ಥಳಾಂತರಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸೋನು ಸೂದ್ ಕಚೇರಿ ಮೇಲೆ ಐಟಿ ದಾಳಿ

    ಮೂರು ದಿನಗಳಿಂದ ಕಾಡಾನೆಗಳು ನಿರಂತರ ದಾಳಿ ಮಾಡುತ್ತಿರುವುದರಿಂದ ಲಕ್ಷಾಂತರ ಮೌಲ್ಯದ ಬೆಳೆಗಳು ನಾಶವಾಗಿವೆ. ಕಳೆದ ಒಂದೆರಡು ದಶಕಗಳಿಂದ ಕಾಡಂಚಿನ ಗ್ರಾಮದ ಜನ ಆನೆ ಹಾವಳಿಯಿಂದ ಬಸವಳಿದಿದ್ದಾರೆ. ನಾಲ್ಕೈದು ವರ್ಷಗಳಿಂದ ನಿರಂತರ ಆನೆ ಹಾವಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳ ಅವಧಿಯಲ್ಲಿ ಆನೆ ಹಾವಳಿಯಿಂದ ಈಗಾಗಲೇ ನಾಲ್ಕೈದು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ಇಷ್ಟು ದಿನ ಹೊಲಗದ್ದೆ, ತೋಟಗಳಲ್ಲಿದ್ದ ಆನೆಗಳು ಈಗೀಗ ನಾಡಿಗೂ ಬರುತ್ತಿರುವುದರಿಂದ ಹಳ್ಳಿಗರು ಭಯಗೊಂಡಿದ್ದಾರೆ. ಆನೆಗಳು ಕಂಡಾಕ್ಷಣ ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದರೂ ಅವರು ಬರೋದು ಒಂದೆರಡು ಗಂಟೆಯ ಬಳಿಕವೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸರ್ಕಾರ ನಮ್ಮ ನೋವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಕಾಡಾನೆ ಹಾಗೂ ಕಾಡು ಪ್ರಾಣಗಳಿಂದ ರೈತರು ಬೆಳೆ ಕಳೆದುಕೊಂಡಾಗ ಸೂಕ್ತ ರೀತಿಯಲ್ಲಿ ಪರಿಹಾರವನ್ನೂ ನೀಡಲ್ಲ. ಸೂಕ್ತ ಪರಿಹಾರಕ್ಕಾಗಿ ಮೂಡಿಗೆರೆ ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ಹಾವಳಿ ನಿಂತಿಲ್ಲ, ಸರ್ಕಾರದಿಂದ ಸಮಪರ್ಕಕ ಪರಿಹಾರವೂ ಬರುತ್ತಿಲ್ಲ. ಹೀಗೆ ಮುಂದುವರಿದರೆ ನಾವು ಬದುಕುವುದಾದರೂ ಹೇಗೆಂದು ಹಳ್ಳಿಗರು ಪ್ರಶ್ನಿಸಿದ್ದಾರೆ.

    ತಾಲೂಕಿನ ಸಾರಗೋಡು, ಕುಂದೂರು, ಗೌಡಹಳ್ಳಿಯಲ್ಲೂ ಆನೆ ಹಾವಳಿ ಮಿತಿಮೀರಿದೆ. ಅರಣ್ಯ ಅಧಿಕಾರಿಗಳು ಕಾಡಾನೆ ಹಾವಳಿ ತಪ್ಪಿಸಬೇಕು, ನೆಮ್ಮದಿಯಿಂದ ಬದುಕಲು ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.