ಬೆಂಗಳೂರು: ಸೋಲು ನಮಗೆ, ನಮ್ಮ ಕುಟುಂಬಕ್ಕೆ ಹೊಸದಲ್ಲ. ಹಿಂದೆ ತುಂಬಾ ಜನ ಸೋತಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಎಸ್‌ಟಿ ಸೋಮಶೇಖರ್ (ST Somashekar) ಕ್ರಾಸ್ ವೋಟ್, ಮೈತ್ರಿ ಕೂಟಕ್ಕೆ ಎರಡನೇ ಸೋಲು ವಿಚಾರವಾಗಿ ಮಾತನಾಡಿದ ಅವರು, ನಮ್ಮೆಲ್ಲ ಶಾಸಕರೂ ನಮ್ಮ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಸೋಮಶೇಖರ್ ನಡೆ ನಿರೀಕ್ಷಿತವೇ ಆಗಿತ್ತು. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ನಿನ್ನೆ ಕಾಂಗ್ರೆಸ್ (Congress) ಶಾಸಕಾಂಗ ಪಕ್ಷದ ಸಭೆಗೆ ಕರೆದುಕೊಂಡು ಹೋದವರು ಯಾರು ಎಂದು ನಮಗೂ ಗೊತ್ತಿದೆ ಎಂದರು. ಇದನ್ನೂ ಓದಿ: ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ: ಸಿ.ಟಿ ರವಿ ಗರಂ
ಇದು ನಮಗೆ ಸೋಲಲ್ಲ. ಇದು ಮೈತ್ರಿ ಮೇಲೂ, ಲೋಕಸಭೆ ಮೇಲೂ ಪರಿಣಾಮ ಬೀರಲ್ಲ. ಹಿಂದೆ ತುಂಬ ಜನ ಸೋತಿಲ್ವಾ? ದೇವೇಗೌಡ್ರು, ವಾಜಪೇಯಿ ಸೋತಿದ್ದಾರೆ. ಇದೇ ಸಿದ್ದರಾಮಯ್ಯ ಸೋತಿಲ್ವಾ? ನನ್ನ ಮಗನೂ ಎರಡು ಸಲ ಸೋತಿದ್ದಾನೆ. ರಾಜಕೀಯದಲ್ಲಿ ಸೋಲು-ಗೆಲುವು ಸಹಜ ಎಂದು ತಿಳಿಸಿದರು. ಇದನ್ನೂ ಓದಿ: ಸೋಮಶೇಖರ್ ವಿರುದ್ಧ ಸ್ಪೀಕರ್‌ಗೆ ದೂರು: ದೊಡ್ಡನಗೌಡ ಪಾಟೀಲ್
ಬೆಂಗಳೂರು ಶಿಕ್ಷಕರ ಚುನಾವಣೆಯಲ್ಲೂ ಆಡಳಿತ ಯಂತ್ರದ ದುರುಪಯೋಗ ಆಗಿತ್ತು. ಈಗಲೂ ರಾಜ್ಯಸಭೆಯಲ್ಲೂ ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡಿದ್ದಾರೆ. ಒಂದೊಂದು ಬಾರಿ ಏರಿಕೆ, ಇಳಿಕೆ ಆಗುತ್ತದೆ. ನಮ್ಮ ಕುಟುಂಬ ಸೋತಾಗ ಕುಗ್ಗಲ್ಲ, ಗೆದ್ದಾಗ ಹಿಗ್ಗಲ್ಲ ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್‍ನವರಿಗೆ ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ?: ಸಿಎಂ
ಸೋಮಶೇಖರ್ ವೀರಾವೇಶದ ಮಾತುಗಳನ್ನು ಹೇಳುತ್ತಿದ್ದರು. ನಮ್ಮ ಉದ್ದೇಶ ಸಕ್ಸಸ್ ಆಗಿದೆ. ಇದು ಬಿಜೆಪಿಗೆ ಶಾಕ್ ಕೊಡುವಂತದ್ದಲ್ಲ. ಬಿಜೆಪಿ ಶಾಸಕರು ವಿಪ್ ಉಲ್ಲಂಘನೆ ಮಾಡಿ ಏನು ಹೇಳಿದ್ರು? ಕುಮಾರಸ್ವಾಮಿ ಅವಕಾಶವಾದಿ ಅಲ್ವಾ ಎಂದು ಪ್ರಶ್ನೆ ಇಟ್ಟಿದ್ದಾರೆ. ಈಗ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಹೋದರಲ್ವಾ? ಅವತ್ತು ಇದೇ ಕಾಂಗ್ರೆಸ್ ನಾಯಕರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ – ಕಾಂಗ್ರೆಸ್ ಪರ ಎಸ್.ಟಿ.ಸೋಮಶೇಖರ್ ಮತ
ಬೆಂಗಳೂರು: ಜೆಡಿಎಸ್ ನಾಯಕರೇ ಯಾರಿಂದಲೋ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ದ ದೂರಿದ್ದಾರೆ ಎಂದು ಜೆಡಿಎಸ್(JDS) ಬಂಡಾಯ ಶಾಸಕ ಎಸ್.ಆರ್.ಶ್ರೀನಿವಾಸ್(S R Srinivas) ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ(Rajya Sabha Election) ಅಡ್ಡ ಮತದಾನ(Cross Voting) ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ನೀಡಿದ ದೂರಿಗೆ ಎಸ್.ಆರ್.ಶ್ರೀನಿವಾಸ್ ವಿಧಾನಸಭೆ ಕಾರ್ಯದರ್ಶಿಗೆ ವಕೀಲರ ಮೂಲಕ ಉತ್ತರಿಸಿದ್ದಾರೆ. ನಾನು ಈವರೆಗೂ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ನಾನು ಜೆಡಿಎಸ್ ಬೆಂಬಲಿತ ಕುಪೇಂದ್ರರೆಡ್ಡಿಗೆ(Kupendra Reddy) ಮತ ಹಾಕಿದ್ದೇನೆ ಎಂದು ತಿಳಿಸಿದ್ದಾರೆ.
ಉತ್ತರದಲ್ಲಿ ಏನಿದೆ?
ಜೆಡಿಎಸ್ ನಾಯಕರು ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲೇ ಗುಬ್ಬಿ ಕ್ಷೇತ್ರದಲ್ಲಿ ಸಮಾವೇಶ ಮಾಡಿ ಪರ್ಯಾಯ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಆದರೂ ನಾನು ಪಕ್ಷದ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿದ್ದೇವೆ. ನಾನು ಈವರೆಗೂ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ.
ಜೂನ್ 10 ರಂದು ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ, ಎಚ್‌ಡಿ ರೇವಣ್ಣ ಹೇಳಿದ್ದಾರೆ. ಅದೇ ದಿನ ರಾತ್ರಿ ಹೆಬ್ಬೆಟ್ಟು ಇಟ್ಟು ಮತದಾನ ಮಾಡಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಜೂನ್ 11 ರಂದು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ರೇವಣ್ಣ ಹೇಳಿಕೆ ಕೊಟ್ಟಿದ್ದಾರೆ. ಜೂನ್ 12 ರಂದು ಮೊದಲ ಪ್ರಾಶಸ್ತ್ಯ ಮತ ಕಾಂಗ್ರೆಸ್, 2ನೇ ಪ್ರಾಶಸ್ತ್ಯ ಬಿಜೆಪಿಗೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಹಾಟ್‌ಸ್ಪಾಟ್‌ನಲ್ಲಿ ಪ್ರಿಪೇಯ್ಡ್ ಕೌಂಟರ್ – ಆಟೋ ಚಾಲಕರ ಮಾಸ್ಟರ್ ಪ್ಲ್ಯಾನ್
ಉಚ್ಚಾಟನಾ ಪತ್ರದಲ್ಲಿ ಮೊದಲನೇ ಪ್ರಾಶಸ್ತ್ಯ ಮತ ಬಿಜೆಪಿಗೆ, ಎರಡನೇ ಪ್ರಾಶಸ್ತ್ಯ ಕಾಂಗ್ರೆಸ್ ಗೆ ಎಂದು ಉಲ್ಲೇಖಿಸಿದ್ದಾರೆ. ನೋಟಿಸ್‌ನಲ್ಲಿ ಖಾಲಿ ಬ್ಯಾಲೆಟ್ ಹಾಕಿರಬಹುದು, ಅಥವಾ ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಮೊದಲನೇ ಪ್ರಾಶಸ್ತ್ಯ ಮತ ನೀಡಿರಬಹುದು ಎಂದು ಅಸ್ಪಷ್ಟ ಆರೋಪ ಮಾಡಿದ್ದಾರೆ. ನಾಯಕರ ಹೇಳಿಕೆಗಳು ಪದೇ ಪದೇ ಬದಲಾಗುತ್ತಿದ್ದು ಯಾವುದೇ ಸ್ಪಷ್ಟತೆ ಇಲ್ಲ. ಮೂರು ದ್ವಂದ್ವ ಹೇಳಿಕೆಗಳನ್ನು ಅವರೇ ಕೊಟ್ಟಿದ್ದಾರೆ.
ಈ ಹೇಳಿಕೆಗಳನ್ನು ಗಮನಿಸಿದರೆ ಜೆಡಿಎಸ್ ನಾಯಕರೇ ಯಾರಿಂದಲೋ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ದ ದೂರಿದ್ದಾರೆ. ಒಂದು ವೇಳೆ ಅಡ್ಡ ಮತದಾನ ಮಾಡಿದ್ದರೆ ಏಜೆಂಟ್ ಆಗಿದ್ದ ರೇವಣ್ಣ ಕೂಡಲೇ ತಕರಾರು ಮಾಡಬೇಕಿತ್ತು. ಆದರೆ ಅವರು ಯಾಕೆ ಪ್ರಶ್ನಿಸಲಿಲ್ಲ? ಕೇವಲ ಮಾಧ್ಯಮಗಳಲ್ಲಷ್ಟೇ ಹೇಳಿಕೆಗಳನ್ನ ಕೊಟ್ಟಿದ್ದಾರೆ. ಆದರೆ ನಾನು ಮತದಾನವಾದ ಕೂಡಲೇ ಟ್ವೀಟ್ ಮಾಡಿದ್ದೇನೆ. ನಮಗೆ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಶ್ರೀನಿವಾಸ್ ತಮ್ಮ ಉತ್ತರದಲ್ಲಿ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕೋಲಾರ: ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ನಾನು ಯಾಕೆ ಅಡ್ಡ ಮತದಾನ ಮಾಡಿದೆ ಎಂಬುದಕ್ಕೆ ಈಗ ಹಳೆ ಕಥೆ ಬಿಚ್ಚಿಟ್ಟು ಶ್ರೀನಿವಾಸ್ ಗೌಡ ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಶ್ರೀನಿವಾಸ್ ಗೌಡ, ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ಗೆ ಮತ ಹಾಕಿದ್ದೇನೆ. ಈ ಹಿನ್ನೆಲೆ ಜೆಡಿಎಸ್ ಮುಖಂಡರು ನನ್ನ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ ಎಂದು ತಿಳಿಸಿದರು.
7 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ಅವರು ನನ್ನನ್ನು ಉಚ್ಚಾಟನೆ ಮಾಡಿದ್ದರು. ಇದೀಗ ಜೆಡಿಎಸ್‌ನವರಿಗೆ ನನ್ನ ವಿಷಯದಲ್ಲಿ ಮಾತನಾಡುವ ಹಕ್ಕು ಇಲ್ಲ. ಅವರು ಉಚ್ಚಾಟನೆ ಮಾಡಿದ ಬಳಿಕ ನಾನು ಯಾವುದೇ ಪಕ್ಷಕ್ಕೂ ಹೋಗಬಹುದು ಎಂದು ಹೇಳಿದರು.
ನಾನೊಬ್ಬ ಹಿರಿಯ ಶಾಸಕನಾಗಿದ್ದರೂ ನನ್ನನ್ನು ಸಚಿವನನ್ನಾಗಿ ಮಾಡಿಲ್ಲ. ನಾನು ಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರು ಶಾಸಕರೂ ಆಗಿರಲಿಲ್ಲ. ಇಂತಹ ಹಿರಿಯ ಶಾಸಕನನ್ನು ಪಕ್ಷ ಸರಿಯಾಗಿ ನೋಡಿಕೊಂಡಿಲ್ಲ. ನನ್ನ ಹಿನ್ನೆಲೆ ನೋಡಿಯಾದರೂ ಗೌರವ ನೀಡಬೇಕಿತ್ತು ಎಂದು ನುಡಿದರು. ಇದನ್ನೂ ಓದಿ: ಬಿಜೆಪಿ ‘ಎ’ ಟೀಂ ಅಂತ ಎಲ್ಲರೂ ಒಪ್ಪಿಕೊಂಡಾಗಿದೆ, ಬಿ ಟೀಂ ಯಾವುದಾದರೇನು: ಬೊಮ್ಮಾಯಿ
ನಾನು ಧರಂ ಸಿಂಗ್ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದೆ. ಅವರ ನಡತೆ ನ್ಯಾಯಯುತವಾಗಿರಲಿಲ್ಲ. ಈಗ ತಾಲೂಕು, ಜಿಲ್ಲಾ ಪಂಚಾಯತ್ ಎಲ್ಲದರಿಂದಲೂ ನಾನು ಹೊರ ಬಂದಿದ್ದೇನೆ. ನನ್ನ ಕೈಲಾದಮಟ್ಟಿಗೆ ಅಭಿವೃದ್ಧಿ ಮಾಡಿದ್ದೇನೆ. ಕೋಲಾರಕ್ಕೆ ರಿಂಗ್ ರಸ್ತೆ ಮಾಡಿಸುವ ಕನಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ಬಿಟ್ಟುಕೊಟ್ಟ ಅಶ್ವಥ್ ನಾರಾಯಣ್
2018ರಲ್ಲಿ ನನಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತಪ್ಪಿತ್ತು. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳಿದ್ದಾಗ ಮಿಸ್ ಆಯ್ತು ಎಂದು ಜೆಡಿಎಸ್‌ನಿಂದ ಸ್ಪರ್ಧೆಗೆ ನಿಂತಿದ್ದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ ಶಾಸಕರಿಗೂ 50 ಲಕ್ಷ ರೂ. ನೀಡಲಾಗಿದೆ. ಅದನ್ನು ಎಲ್ಲಾ ಜೆಡಿಎಸ್ ಶಾಸಕರೂ ಪಡೆದಿದ್ದಾರೆ. ಆದರೆ ನಾನು ಪಡೆದಿಲ್ಲ ಎಂದು ಹೇಳಿಕೆ ನೀಡಿದರು.
ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟಕ್ಕೆ ಬಂದು ನಿಂತಿದೆ. 4ನೇ ಅಭ್ಯರ್ಥಿಯ ಗೆಲುವಿಗೆ ಮೂರೂ ಪಕ್ಷಗಳಲ್ಲೂ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಜೆಡಿಎಸ್‌ನ ಕೆಲ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಚುನಾಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೇಳಿಕೊಂಡಿರುವುದು ಕುತೂಹಲ ಮೂಡಿಸಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಪಕ್ಷಗಳೂ 4ನೇ ಅಭ್ಯರ್ಥಿಯ ಗೆಲುವಿಗೆ ರಣತಂತ್ರ ರೂಪಿಸುತ್ತಿವೆ. ಜೆಡಿಎಸ್ ಪಾಳಯದಲ್ಲಿ ಆತಂಕ, ಗೊಂದಲ ಮುಂದುವರಿದಿದೆ. ಶತಾಯಗತಾಯ ಕಾಂಗ್ರೆಸ್ ಬೆಂಬಲ ಪಡೆದು ತನ್ನ ಅಭ್ಯರ್ಥಿ ಗೆಲ್ಲಿಸಿಕೊಳ್ಳಲೇಬೇಕೆಂದು ಜೆಡಿಎಸ್ ಕಸರತ್ತು ನಡೆಸ್ತಿದೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲವನ್ನೂ ಕೋರಲಾಗಿದೆ. ನಿಮ್ಮ ಅಭ್ಯರ್ಥಿಯನ್ನು ಕಣದಿಂದ ಹಿಂದಕ್ಕೆ ಪಡೆದು ನಮ್ಮ ಅಭ್ಯರ್ಥಿಗೆ ಗೆಲುವಿಗೆ ಸಹಕಾರ ಕೊಡುವಂತೆ ಜೆಡಿಎಸ್ ನಾಯಕರಾದ ಟಿ.ಎ.ಶರವಣ ಮತ್ತು ಬಿ.ಎಂ.ಫಾರೂಕ್ ಮನವಿ ಮಾಡಿಕೊಂಡಿದಾರೆ. ಆದ್ರೆ ಸಿದ್ದರಾಮಯ್ಯ ಯಾವುದೇ ಭರವಸೆ ಕೊಡದೇ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತಿಳಿಸೋದಾಗಿ ಹೇಳಿ ಕಳಿಸಿದ್ದಾರೆ. ಇದನ್ನೂ ಓದಿ: ನಮಗೆ ಬೆಂಬಲ ನೀಡಿ – ಸಿದ್ದು ಬಳಿ JDS ನಾಯಕರ ಮನವಿ
ಇತ್ತ ಮೂರೂ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ ಸರಿಯದಿದ್ರೆ ಜೆಡಿಎಸ್‌ಗೆ ಅಡ್ಡ ಮತದಾನದ ಆತಂಕವೂ ಕಾಡ್ತಿದೆ. ಕಾಂಗ್ರೆಸ್ ಸಂಪರ್ಕದಲ್ಲಿರುವ ಜೆಡಿಎಸ್ ನ ಕೆಲ ಶಾಸಕರು ಅಡ್ಡ ಮತದಾನ ಮಾಡೋ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎನ್ನಲಾಗ್ತಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ನಾಳೆ ರಾತ್ರಿ ಸಿಂಗಾಪುರದಿಂದ ವಾಪಸ್ಸಾಗ್ತಿದ್ದಾರೆ. ಎಚ್‌ಡಿಕೆ ವಾಪಸ್ಸಾದ ಬಳಿಕ ಯಾವ ರಣತಂತ್ರ ಹೆಣೀತಾರೆ, ತಮ್ಮಪಕ್ಷದ ಶಾಸಕರನ್ನ ಹೇಗೆ ಕಟ್ಟಿಹಾಕ್ತಾರೆ ಅನ್ನೋ ಕುತೂಹಲ ಮನೆಮಾಡಿದೆ. ಇದನ್ನೂ ಓದಿ: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ
ಬಿಜೆಪಿ ಪಾಳಯದ ಲೆಕ್ಕಾಚಾರಗಳೇ ಬೇರೆ. ಕಾಂಗ್ರೆಸ್ ಪ್ರತಿಷ್ಠೆಗೆ ಎದಿರೇಟು ಕೊಡಲು ಮೂರನೇ ಅಭ್ಯರ್ಥಿ ಇಳಿಸಿದ ಬಿಜೆಪಿ ಈಗ ತನ್ನ ತಂತ್ರ ಬದಲಾಯಿಸಿಕೊಂಡಿದೆ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮಧ್ಯೆ ಮೈತ್ರಿ ಆಗಲಿ, ಆಗದಿರಲಿ ತನ್ನ ಅಭ್ಯರ್ಥಿಯನ್ನ ಕಣದಿಂದ ಹಿಂದಕ್ಕೆ ತೆಗೆಯದಿರಲು ಬಿಜೆಪಿ ನಿರ್ಧರಿಸಿದೆ. ಕಾಂಗ್ರೆಸ್ – ಜೆಡಿಎಸ್ ಜಟಾಪಟಿ ನಡುವೆ ತನ್ನ 3ನೇ ಅಭ್ಯರ್ಥಿ ಗೆಲ್ಲುವ ವಿಶ್ವಾಸದಲ್ಲಿದೆ ಬಿಜೆಪಿ.
ಮೂರೂ ಪಕ್ಷಗಳಲ್ಲಿ ನಾಳೆಯೂ ಒಂದಷ್ಟು ವಿದ್ಯಮಾನಗಳು ನಡೆಯಲಿದ್ದು, ಯಾವ ತಿರುವು ಪಡೆದುಕೊಳ್ಳುತ್ತೋ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಈ ಸಲ ರಾಜ್ಯಸಭೆ ಚುನಾವಣಾ ಕಣ ಸಾಕಷ್ಟು ರೋಚಕತೆ ಪಡೆದುಕೊಂಡಿದೆ.