Tag: Cross Voting

  • ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಲ್ಲ: ಡಾ.ಎಂ.ಸಿ ಸುಧಾಕರ್

    ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಲ್ಲ: ಡಾ.ಎಂ.ಸಿ ಸುಧಾಕರ್

    ಬೆಂಗಳೂರು: ಕಾಂಗ್ರೆಸ್‌ನಿಂದ (Congress) ಯಾವ ಶಾಸಕರೂ ಅಡ್ಡ ಮತದಾನ (Cross Voting) ಮಾಡೋದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ (Dr M.C.Sudhakar) ತಿಳಿಸಿದ್ದಾರೆ.

    ರಾಜ್ಯಸಭೆ ಚುನಾವಣೆ ವಿಚಾರ ಮತ್ತು ಕಾಂಗ್ರೆಸ್ ಶಾಸಕರು ರೆಸಾರ್ಟ್ ಹೋಗುತ್ತಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಶಾಸಕರು ಯಾರೂ ಅಡ್ಡ ಮತದಾನ ಮಾಡೋದಿಲ್ಲ. ಶಾಸಕರು ಏಜೆಂಟ್‌ಗೆ ಮತ ತೋರಿಸಿ ಮತ ಹಾಕಬೇಕು. ಹೀಗಾಗಿ ನಮಗೆ ನಮ್ಮ ಶಾಸಕರು ಅಡ್ಡ ಮತದಾನ ಮಾಡುವ ಭೀತಿ ಇಲ್ಲ. ರಾಜ್ಯಸಭೆಯಲ್ಲಿ ಮತ ಹಾಕುವ ಪದ್ಧತಿ ಬೇರೆ ಇರುತ್ತದೆ. ಇದರ ಬಗ್ಗೆ ಮಾಹಿತಿ ನೀಡಲು ಶಾಸಕರನ್ನು ಸಂಜೆ ರೆಸಾರ್ಟ್‌ಗೆ ಕರೆದಿದ್ದಾರೆ ಎಂದರು. ಇದನ್ನೂ ಓದಿ: ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಅನ್ನೋ ಭಾವನೆ- ಅಭಿಯಾನದ ವಿರುದ್ಧ ಶೋಭಾ ರೆಬೆಲ್

    ಬಿಜೆಪಿ-ಜೆಡಿಎಸ್ ಅವರು ಹೊಸ ಸಂಬಂಧ ಬೆಳೆಸಿಕೊಂಡು ಏನೋ ಮಾಡೋಣ ಎಂದು ಹೊರಟಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಸೋಲಾಗಿ ಮೈತ್ರಿಗೆ ಉತ್ತರ ಕೊಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಗೆದ್ದಿದ್ದಾರೆ. ಬಿಜೆಪಿ-ಜೆಡಿಎಸ್ ಅವರು ಏನೋ ಮಾಡಲು ಹೊರಟಿದ್ದಾರೆ. ಹೀಗಾಗಿ ನಾವು ಹುಷಾರಾಗಿ ಇರಬೇಕು. ಶಾಸಕಾಂಗ ಸಭೆ ಕೂಡಾ ಕರೆದಿದ್ದಾರೆ. ಹೀಗಾಗಿ ರೆಸಾರ್ಟ್‌ಗೆ ಹೋಗುತ್ತಿದ್ದೇವೆ. ನಮಗೆ ಅಡ್ಡ ಮತದಾನದ ಭೀತಿ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯನವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯೋದಿಲ್ಲ – ಸಿಎಂ ವಿರುದ್ಧ ಹರಿಹಾಯ್ದ ಜೋಶಿ

  • ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ

    ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ

    ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಜೆಡಿಎಸ್ ಶಾಸಕರು ಮತ್ತು ಅಡ್ಡ ಮತದಾನ ಮಾಡಿಸಿದ ಕಾಂಗ್ರೆಸ್, ಬಿಜೆಪಿ ಪಕ್ಷದ ವಿರುದ್ಧ ಜೆಡಿಎಸ್ ಪಕ್ಷದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.

    ಫ್ರೀಡಂ ಪಾರ್ಕ್‍ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಪರಾಜಿತ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ 420 ಶ್ರೀನಿವಾಸರು ಅಂತ ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು. ಚಪ್ಪಲಿ ತೋರಿಸಿ ಕಿಡಿಕಾರಿದರು. ಇದೇ ವೇಳೆ ಇಬ್ಬರು ಶಾಸಕರನ್ನು ಉಚ್ಚಾಟನೆ ಮಾಡಲು ಹಾಗೂ ಪಕ್ಷಾಂತರ ನಿಷೇಧ ಕಾಯ್ದೆಯಡಿ ಸ್ಪೀಕರ್‌ಗೆ ದೂರು ನೀಡಲು ಜೆಡಿಎಸ್ ನಿರ್ಧಾರ ಮಾಡಿತು. ಇದನ್ನೂ ಓದಿ:  ಕೋವಿಡ್ ಸಮಸ್ಯೆ – ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು 

    ಪ್ರತಿಭಟನೆಯಲ್ಲಿ ಮಾತನಾಡಿದ ಇಬ್ರಾಹಿಂ, ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಮತ ಹಾಕಿಸಿದ್ದಾರೆ. ತಾಕತ್ ಇದ್ದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸುರ್ಜೆವಾಲ ಇಬ್ಬರನ್ನು ಕಿತ್ತು ಹಾಕಿ ಎಂದು ಸವಾಲ್ ಹಾಕಿದರು.

    ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಡೀಲ್ ಮಾಡಿಕೊಂಡು ಕನ್ನಡಿಗರನ್ನು ಸೋಲಿಸಿದ್ದಾರೆ. ನಿಮಗೆ ಮಾನ ಮರ್ಯಾದೆ ಇದೆಯಾ. ನೀವು ಪತಿವ್ರತೆಯರಾ ಎಂದು ವ್ಯಂಗ್ಯವಾಡಿದರು.

    ಪರಾಜಿತ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮಾತನಾಡಿ, ಕಾಂಗ್ರೆಸ್‍ನಿಂದಲೇ ಕಾಂಗ್ರೆಸ್ ದೇಶದಲ್ಲಿ ಮುಕ್ತವಾಗ್ತಿದೆ. ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ. ಮನವಿ ಮಾಡಿದರು ಕಾಂಗ್ರೆಸ್ ನಾಯಕರು ಎರಡನೇ ಪ್ರಾಶಸ್ತ್ಯ ಮತಗಳನ್ನು ಕೊಟ್ಟಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಖಾಸಗಿ ಶಾಲಾ-ಕಾಲೇಜುಗಳಿಗೆ ನಮ್ಮ ಶಾಲೆಗಳು ಸ್ಪರ್ಧಿಸುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು 

    ಪರಿಷತ್ ಸದಸ್ಯ ಶರವಣ ಮಾತನಾಡಿ, ಸಿದ್ದರಾಮಯ್ಯ ಡೀಲ್ ರಾಜ, ಡೀಲ್ ರಾಮಯ್ಯ. ಸಿದ್ದರಾಮಯ್ಯ ಸುಳ್ಳು ರಾಮಯ್ಯ. ಮಾತಾಡೋದು ಆಚಾರ ಮಾಡೋದು ಬದನೆಕಾಯಿ. ಈಗ ಬಿಜೆಪಿ ಬಿ ಟೀಂ ಸಿದ್ದರಾಮಯ್ಯ ಅಂತ ಗೊತ್ತಾಗಿದೆ. ಎಷ್ಟು ಸೂಟ್ ಕೇಸ್ ಸಿದ್ದರಾಮಯ್ಯ ಅವರಿಗೆ ಬಂದಿದೆ ಹೇಳಬೇಕು. ಜಾತ್ಯತೀತ ಪಕ್ಷ ಎಂದು ಕಾಂಗ್ರೆಸ್‍ಗೆ ಹೇಳೋಕೆ ನೈತಿಕತೆ ಇಲ್ಲ ಆಕ್ರೋಶ ಹೊರಹಾಕಿದರು.