Tag: Crowd

  • ತಿರುಪತಿಯಲ್ಲಿ ದೇವರ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

    ತಿರುಪತಿಯಲ್ಲಿ ದೇವರ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

    ತಿರುಮಲ: ಶನಿವಾರ, ಭಾನುವಾರದ ರಜೆ ಹಾಗೂ ಸೋಮವಾರ ಬಕ್ರೀದ್ ರಜೆ ಹಿನ್ನೆಲೆಯಲ್ಲಿ ತಿರುಮಲದ ವೆಂಕಟೇಶ್ವರ ಸ್ವಾಮಿಯ (Venkateswara Temple, Tirumala) ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ.

    ಶನಿವಾರ ಮತ್ತು ಭಾನುವಾರ ಭಾರೀ ಜನದಟ್ಟಣೆ ಕಂಡುಬಂದಿದ್ದು, ಭಕ್ತಾದಿಗಳು ದೇವರ ದರ್ಶನಕ್ಕಾಗಿ ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು. ಇದನ್ನೂ ಓದಿ: ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ – ಸ್ನೇಹಿತನ ಮಾತು ಕೇಳಿ ಶೆಡ್‌ನಲ್ಲಿ ಎಲೆಕ್ಟ್ರಿಕ್‌ ಶಾಕ್‌ ನೀಡಿ ಸಿಕ್ಕಿಬಿದ್ದ

     

    ಚುನಾವಣೆ ಮುಕ್ತಾಯ, ವಾರಾಂತ್ಯ ರಜೆ, ಬಹುತೇಕ ಪರೀಕ್ಷೆಗಳು ಮುಗಿದಿರುವುದು ಜೊತೆ ಬಕ್ರೀದ್‌ ರಜೆಯೂ (Bakrid) ಸೇರಿದ್ದರಿಂದ ತಿರುಪತಿಗೆ ಹೆಚ್ಚಿನ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸೋಮವಾರವೂ ಈ ದಟ್ಟಣೆ ಮುಂದುವರಿಯುವ ಸಾಧ್ಯತೆಯಿದೆ.

  • ವ್ಯಾಕ್ಸಿನ್‍ಗಾಗಿ ನೂಕು ನುಗ್ಗಲು- ಅಂತರ ಕಾಯ್ದುಕೊಳ್ಳದೆ ಆತಂಕ ಸೃಷ್ಟಿಸಿದ ಜನ

    ವ್ಯಾಕ್ಸಿನ್‍ಗಾಗಿ ನೂಕು ನುಗ್ಗಲು- ಅಂತರ ಕಾಯ್ದುಕೊಳ್ಳದೆ ಆತಂಕ ಸೃಷ್ಟಿಸಿದ ಜನ

    ಮಡಿಕೇರಿ: ಕೋವಿಡ್ ವ್ಯಾಕ್ಸಿನ್ ಪಡೆಯಲು ಜಿಲ್ಲೆಯ ಜನ ಸಮರೋಪಾದಿಯಲ್ಲಿ ಆಗಮಿಸುತ್ತಿದ್ದು, ಲಸಿಕಾ ಕೇಂದ್ರದ ಬಳಿ ಜನಜಂಗುಳಿ ಉಂಟಾಗುತ್ತಿದೆ.

    ಇಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ವ್ಯಾಕ್ಸಿನ್ ಗಾಗಿ ನೂಕು ನುಗ್ಗಲು ಉಂಟಾಗಿದೆ. ಅಂತರ ಕಾಯ್ದುಕೊಳ್ಳದೆ ಜನ ಸೋಂಕು ವ್ಯಾಪಿಸುವ ಆತಂಕ ಸೃಷ್ಟಿಸಿದರು. ಜನರನ್ನು ನಿಯಂತ್ರಿಸಲು ಆಸ್ಪತ್ರೆ ಸಿಬ್ಬಂದಿ, ಪೊಲೀಸರು ಹರಸಾಹಸಪಡುವಂತಾಯಿತು. ಕೆಲವರು ಬೆಳಗ್ಗೆ 7.30ಕ್ಕೆ ಲಸಿಕೆ ನೀಡುವ ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎದುರು ಸಾಲುಗಟ್ಟಿ ನಿಂತಿದ್ದರು. ಇದನ್ನೂ ಓದಿ: ಅನ್‍ಲಾಕ್ ಬಳಿಕ ಸಹಜ ಸ್ಥಿತಿಯತ್ತ ಸಾರಿಗೆ

    ಇಂದು ಎರಡನೇ ಡೋಸ್ ಲಸಿಕೆ ಮಾತ್ರ ನೀಡಲಾಗುವುದು ಎಂದು ವೈದ್ಯರು ತಿಳಿಸಿದ ನಂತರ ಹಲವರು ನಿರಾಶೆಯಿಂದ ಮರಳಿದರು. ಅಲ್ಪ ಪ್ರಮಾಣದ ವ್ಯಾಕ್ಸಿನ್ ಬಂದಿದೆ ಎನ್ನುವ ವಿಚಾರ ತಿಳಿದು ಜನಜಂಗುಳಿ ಉಂಟಾಯಿತು ಎಂದು ಹೇಳಲಾಗಿದೆ. ವ್ಯಾಕ್ಸಿನ್ ವಿತರಣೆ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯುತ್ತಿಲ್ಲವೆಂದು ಸ್ಥಳೀಯರು ದೂರಿಕೊಂಡಿದ್ದಾರೆ. ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಲಸಿಕೆ ನೀಡಲಾಗುತ್ತಿದೆ. ಆದರೆ ಇದನ್ನು ಪಡೆಯಲು ಬರುತ್ತಿರುವವರು ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ ತೂರಿ ನೂಕು ನುಗ್ಗಲು ಉಂಟು ಮಾಡುತ್ತಿದ್ದಾರೆ.

    ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲಸಿಕೆ ಪಡೆಯಲು ಬಂದವರು ರಸ್ತೆಯುದ್ದಕ್ಕೂ ಎರಡೂ ಬದಿ ವಾಹನಗಳನ್ನು ನಿಲ್ಲಿಸಿದ್ದರಿಂದ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಸಹ ಉಂಟಾಯಿತು.

  • ವಿಸಿಲ್ ಪೋಡು ಎಂದು ಚೆನ್ನೈ ಅಭಿಮಾನಿಗಳನ್ನು ಹುರಿದುಂಬಿಸಿದ ವಿರಾಟ್ ಕೊಹ್ಲಿ

    ವಿಸಿಲ್ ಪೋಡು ಎಂದು ಚೆನ್ನೈ ಅಭಿಮಾನಿಗಳನ್ನು ಹುರಿದುಂಬಿಸಿದ ವಿರಾಟ್ ಕೊಹ್ಲಿ

    ಚೆನ್ನೈ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಾಟದ ಎರಡನೇ ದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಸಿಲ್ ಹೊಡೆಯಿರಿ ಎಂದು ಸನ್ನೆ ಮಾಡುವ ಮೂಲಕ ಅಭಿಮಾನಿಗಳನ್ನು ಹುರಿದುಂಬಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

    ಪ್ರವಾಸಿ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಚಿಪಾಕ್‍ನ ಎಂ ಚಿದಂಬರಂ ಸೇಡಿಯಂನಲ್ಲಿ ನಡೆಯುತ್ತಿದ್ದು, ಎರಡನೇ ದಿನದ ಪಂದ್ಯಾಟದಲ್ಲಿ ಭಾರತದ ಬೌಲರ್ ಗಳು ವಿಕೆಟ್ ಪಡೆಯುತ್ತಿದ್ದರೆ ಇದ್ದ ಕೊಹ್ಲಿ ಪ್ರೇಕ್ಷಕರಲ್ಲಿ ವಿಸಿಲ್ ಹಾಕುವಂತೆ ಕೈ ಸನ್ನೆ ಮಾಡಿದ್ದಾರೆ. ಪ್ರೇಕ್ಷಕರು ಕೊಹ್ಲಿ ಕೈ ಸನ್ನೆ ಮಾಡುತ್ತಿದ್ದಂತೆ ವಿಸಿಲ್ ಹೊಡೆಯಲು ಪ್ರಾರಂಭಿಸಿದ್ದಾರೆ. ವಿರಾಟ್ ಇನ್ನು ಜೋರಾಗಿ ವಿಸಿಲ್ ಹೋಡಿಯಿರಿ ಎಂದಿದ್ದಾರೆ.

    ಕೊಹ್ಲಿ ಪ್ರೇಕ್ಷಕರಲ್ಲಿ ವಿಸಿಲ್ ಹಾಕುವಂತೆ ಕೈ ಸನ್ನೆ ಮಾಡುವ ವಿಡಿಯೋವನ್ನು ಬಿಸಿಸಿಐ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದೆ. ಇದನ್ನು ಗಮನಿಸಿರುವ ಅಭಿಮಾನಿಗಳು ಈ ವಿಡಿಯೋವನ್ನು ವೈರಲ್ ಮಾಡಿದ್ದಾರೆ.

    ಕಳೆದ ಒಂದು ವರ್ಷಗಳಿಂದ ಕೊರೊನಾದಿಂದಾಗಿ ಅಭಿಮಾನಿಗಳಿಗೆ ಕ್ರೀಡಾಂಗಣ ಪ್ರವೇಶ ನಿಷೇಧಿಸಲಾಗಿತ್ತು. ಇದೀಗ ಎರಡನೇ ಟೆಸ್ಟ್ ವೇಳೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಅಭಿಮಾನಿಗಳು ಮತ್ತೆ ಕ್ರೀಡಾಂಗಣಕ್ಕೆ ಬಂದು ಕ್ರಿಕೆಟ್ ವೀಕ್ಷಣೆಯಲ್ಲಿ ತೊಡಗಿದ್ದಾರೆ.