Tag: CRPF

  • CRPF ಅಧಿಕಾರಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

    CRPF ಅಧಿಕಾರಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

    -ರಾಜ್ಯ ಸರ್ಕಾರದ ವಿರುದ್ಧ ಎಕ್ಸ್‌ನಲ್ಲಿ ಅಣ್ಣಾಮಲೈ ಕಿಡಿ

    ಚೆನ್ನೈ: ಮದುವೆಗೆಂದು ಮನೆಯಲ್ಲಿ ಇಟ್ಟಿದ್ದ ಆಭರಣಗಳು ಕಳ್ಳತನವಾಗಿದೆ ಹುಡುಕಿಕೊಡಿ ಅಂತ ಸಿಆರ್‌ಪಿಎಫ್‌ನ‌ (CRPF) ಮಹಿಳಾ ಅಧಿಕಾರಿಯೊಬ್ಬರು ಕಣ್ಣೀರಿಟ್ಟಿದ್ದಾರೆ.

    ತಮಿಳುನಾಡಿನ (Tamil Nadu) ವೇಲೂರು (Velur) ಜಿಲ್ಲೆಯ ನಾರಾಯಣಪುರಂ ಗ್ರಾಮದ 32 ವರ್ಷದ ಕಲಾವತಿ ಎಂಬುವವರು ಮನೆಯಲ್ಲಿ 15 ಸವರನ್ ಚಿನ್ನಾಭರಣ, 50,000 ರೂಪಾಯಿ ನಗದು, ರೇಷ್ಮೆ ಸೀರೆ ಇಟ್ಟಿದ್ದರು. ಇದು ಜೂನ್ 24ರಂದು ಕಳುವಾಗಿದೆ. ಕುಟುಂಬಸ್ಥರು ಕೃಷಿ ಕೆಲಸಕ್ಕೆ ಹೋಗಿದ್ದನ್ನೇ ಹೊಂಚುಹಾಕಿ ಕಾದಿದ್ದ ಕಳ್ಳರು ಮನೆ ಬಾಗಿಲು ಒಡೆದು ಲೂಟಿ ಮಾಡಿದ್ದಾರೆ. ಸ್ಥಳೀಯ ಪೊಲಿಸರಿಗೆ ದೂರು ಕೊಟ್ಟರೆ ಇನ್ನೂ ಕ್ರಮ ಇಲ್ಲ ಅಂತ ಕಲಾವತಿ ಕಣ್ಣೀರು ಹಾಕಿದ್ದು ವೈರಲ್ ಆಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

    ಇದನ್ನು ಬಿಜೆಪಿ ನಾಯಕ ಅಣ್ಣಾಮಲೈ ಗಮನಿಸಿ ರಾಜ್ಯ ಸರ್ಕಾರದ ವಿರುದ್ಧ ಎಕ್ಸ್‌ನಲ್ಲಿ ಕಿಡಿಕಾರಿದ್ದರು. ತಕ್ಷಣವೇ ಸ್ಥಳೀಯ ಪೊಲೀಸರು ಪ್ರತಿಕ್ರಿಯಿಸಿದ್ದು, ನಾವು ಎಫ್‌ಐಆರ್ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

  • Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

    Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

    – ಶ್ರೀನಗರ ಬಳಿಯ ಲಿಡ್ವಾಸ್‌ನಲ್ಲಿ ಎನ್‌ಕೌಂಟರ್

    ಶ್ರೀನಗರ: ʻಆಪರೇಷನ್‌ ಮಹಾದೇವ್‌ʼ (Operation MAHADEV) ಅಡಿಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್‌ ಪ್ರದೇಶದಲ್ಲಿ ಮೂವರು ವಿದೇಶಿ ಉಗ್ರರನ್ನ ಹತ್ಯೆಗೈದಿವೆ.

    ಸೇನೆಯ ಹಿರಿಯ ಅಧಿಕಾರಿಗಳ ಪ್ರಕಾರ, ಈ ಮೂವರು ಏಪ್ರಿಲ್‌ 22ರ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) ಭಾಗಿಯಾಗಿದ್ದರೆಂದು ಶಂಕಿಸಲಾಗಿದೆ. ಅಲ್ಲದೇ ಲಷ್ಕರ್‌ ಮುಖವಾಣಿ ಟಿಆರ್‌ಎಫ್‌ (The Resistance Front) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ

    ಸೇನೆಯ ಚಿನಾರ್ ಕಾರ್ಪ್ಸ್ ಕಂಪನಿ ಮತ್ತು ಜಮ್ಮು ಮತ್ತು ಕಾಶ್ಮೀರ (Jammu And Kashmir) ಪೊಲೀಸರು ನಡೆಸಿದ ಯಶಸ್ವಿ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನ ಹತ್ಯೆಗೈಯಲಾಗಿದೆ. ಲಿಡ್ವಾಸ್‌ನ ದಚಿಗಮ್ ಶ್ರೀನಗರದ ಹೊರವಲಯದಲ್ಲಿರುವ ದಟ್ಟ ಅರಣ್ಯ ಪ್ರದೇಶವಾಗಿದೆ. ಇಲ್ಲಿನ ಬೆಟ್ಟದ ದುರ್ಗಮ ಹಾದಿಯು ಟ್ರಾಲ್‌ಗೆ ಸಂಪರ್ಕ ಕಲ್ಪಿಸುತ್ತದೆ. ಈ ಪ್ರದೇಶದಲ್ಲಿ‌ ಹಿಂದೆಯೂ ಟಿಆರ್‌ಎಫ್‌‌ ಉಗ್ರ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

    ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದಿದೆ. ಕಳೆದ ಜನವರಿ ತಿಂಗಳಲ್ಲಿ ಈ ಪ್ರದೇಶದಲ್ಲಿ ಟಿಆರ್‌ಎಫ್ ಉಗ್ರರ ಅಡಗು ತಾಣವನ್ನಸೇನೆ ಧ್ವಂಸಗೊಳಿಸಿತ್ತು. ಆದ್ರೆ 2 ದಿನಗಳ ಹಿಂದೆ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಿದೆ. ಅಲ್ಲದೇ ಇನ್ನಷ್ಟು ಉಗ್ರರು ಈ ಪ್ರದೇಶದಲ್ಲಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

    ದಚಿಗಮ್ ಅರಣ್ಯವನ್ನ ಈಗಾಗಲೇ ಟಿಆರ್‌ಎಫ್‌ನ ಮುಖ್ಯ ಅಡಗುತಾಣವೆಂದು ಪರಿಗಣಿಸಲಾಗಿದೆ. ಇದೇ ಗುಂಪು ಇತ್ತೀಚೆಗೆ ಎಲ್‌ಒಸಿ ಬಳಿ ನಡೆದಿದ್ದ ನೆಲಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು, ಇದರಲ್ಲಿ ಓರ್ವ ಸೈನಿಕ ಹುತಾತ್ಮರಾಗಿ ಮೂವರು ಗಾಯಗೊಂಡಿದ್ದರು. ಇನ್ನೂ ಕಾರ್ಯಾಚರಣೆ ಹಿನ್ನೆಲೆ ಸಾರ್ವಜನಿಕರು ಮನೆಯಿಂದ ಆಚೆ ಬರದಂತೆ ಭದ್ರತಾ ಪಡೆದಗಳು ಎಚ್ಚರಿಕೆ ನೀಡಿವೆ.

  • ಅಮರನಾಥ ಯಾತ್ರೆ – ಯಾತ್ರಿಕರ ಸುರಕ್ಷತೆಗೆ ಗಸ್ತು ಹೆಚ್ಚಿಸಿದ ಸಿಆರ್‌ಪಿಎಫ್

    ಅಮರನಾಥ ಯಾತ್ರೆ – ಯಾತ್ರಿಕರ ಸುರಕ್ಷತೆಗೆ ಗಸ್ತು ಹೆಚ್ಚಿಸಿದ ಸಿಆರ್‌ಪಿಎಫ್

    ಶ್ರೀನಗರ: ಜುಲೈ 3 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ (Amarnath Yatra) ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಎನ್‌ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ.

    ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಸಿಆರ್‌ಪಿಎಫ್ (CRPF) ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ-9 ಶ್ವಾನ ದಳಗಳನ್ನು ಅದರ ಸಿಬ್ಬಂದಿಯೊಂದಿಗೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಶಾಲಾ ಬಸ್, ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ – ಪವಾಡ ಸದೃಶವಾಗಿ ಚಾಲಕ ಪಾರು

    ಉಧಮ್‌ಪುರ ವಲಯದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ಗಮನಹರಿಸಿ ಹೆದ್ದಾರಿ ಗಸ್ತು ತಿರುಗುವಿಕೆಯನ್ನು ನಡೆಸಲಾಗುತ್ತಿದೆ. ಜುಲೈ 2ರಂದು ಶಿಬಿರದಿಂದ ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಲಾಗುವುದು, ಆದರೆ ಜುಲೈ 3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಇದನ್ನೂ ಓದಿ: ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ

    ಜುಲೈ 2ರಿಂದ ಭಗವತಿ ನಗರದಿಂದ ಯಾತ್ರೆ ಆರಂಭವಾಗಲಿದೆ ಎಂದು ಆಯುಕ್ತ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಭೆ ನಡೆಸಿ ಪೊಲೀಸರು, ಧಾರ್ಮಿಕ ಸಂಸ್ಥೆಗಳು, ಟ್ಯಾಕ್ಸಿ ಒಕ್ಕೂಟಗಳು, ವ್ಯಾಪಾರಿಗಳು, ಮಾರುಕಟ್ಟೆ ಮತ್ತು ಹೋಟೆಲ್ ಸಂಘದ ಅಧಿಕಾರಿಗಳಿಂದ ಸಲಹೆಗಳನ್ನು ಪಡೆಯಲಾಯಿತು. ಅಮರನಾಥ ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ ಎಂದು ಆಯುಕ್ತರು ಹೇಳಿದರು. ಇದನ್ನೂ ಓದಿ: 70 ಲಕ್ಷದ ಕಾರು, 800 ಗ್ರಾಂ ಚಿನ್ನ ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ – ನವವಿವಾಹಿತೆ ಆತ್ಮಹತ್ಯೆ

    ಬೇಸ್ ಕ್ಯಾಂಪ್‌ನಲ್ಲಿಯಾತ್ರಿಕರಿಗೆ ಎಸಿ ಹಾಲ್, ಹ್ಯಾಂಗರ್, ಸಮುದಾಯ ಲಂಗಾರ್ ಸೇವೆ, ಸ್ವಚ್ಛ ಮೊಬೈಲ್ ಶೌಚಾಲಯಗಳನ್ನು ಒದಗಿಸಲಾಗಿದೆ. ಇದರೊಂದಿಗೆ, ಕಥುವಾದ ಲಖನ್‌ಪುರದಿಂದ ಲಂಬಾರ್ ಮತ್ತು ರಾಂಬನ್‌ನ ಬನಿಹಾಲ್‌ಗೆ ಯಾತ್ರೆಯ ಮಾರ್ಗದಲ್ಲಿರುವ ಜಿಲ್ಲೆಗಳ ವಸತಿ ಕೇಂದ್ರಗಳಲ್ಲಿ ಯಾತ್ರಿಕರಿಗೆ ಇದೇ ರೀತಿಯ ಸೌಲಭ್ಯಗಳು ಸಿಗುತ್ತವೆ. ಇದನ್ನೂ ಓದಿ: ಹಾಸನ| ಇಂದು ಒಂದೇ ದಿನ ಗೃಹಿಣಿ, ಪ್ರೊಫೆಸರ್‌, ಸರ್ಕಾರಿ ನೌಕರ ಹೃದಯಾಘಾತಕ್ಕೆ ಬಲಿ

    ಜುಲೈ 1 ರಿಂದ ಆಫ್‌ಲೈನ್ ನೋಂದಣಿ ಆರಂಭವಾಗಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಆನ್‌ಲೈನ್ ನಂತರ ಜುಲೈ 1 ರಿಂದ ಯಾತ್ರಿಕರಿಗೆ ಆಫ್‌ಲೈನ್ ನೋಂದಣಿ ಸೌಲಭ್ಯವನ್ನು ಒದಗಿಸಲಾಗುತ್ತದೆದೆ. ಯಾತ್ರಿಕರು ಒಂದು ದಿನ ಮೊದಲು ಭಗವತಿ ನಗರ ಯಾತ್ರಾ ಮೂಲ ಶಿಬಿರವನ್ನು ತಲುಪುತ್ತಾರೆ, ಮರುದಿನ ಬಾಲ್ಟಾಲ್, ಪಹಲ್ಗಾಮ್ ಮೂಲಶಿಬಿರಕ್ಕೆ ಹೊರಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

  • ನಕ್ಸಲರ ವಿರುದ್ಧ ಕಾರ್ಯಾಚರಣೆ ವೇಳೆ ಜೇನು ದಾಳಿ – ಬೆಂಗ್ಳೂರಲ್ಲಿ ಪಳಗಿದ್ದ ಸ್ನಿಫರ್ ಡಾಗ್‌ ಸಾವು

    ನಕ್ಸಲರ ವಿರುದ್ಧ ಕಾರ್ಯಾಚರಣೆ ವೇಳೆ ಜೇನು ದಾಳಿ – ಬೆಂಗ್ಳೂರಲ್ಲಿ ಪಳಗಿದ್ದ ಸ್ನಿಫರ್ ಡಾಗ್‌ ಸಾವು

    ರಾಯ್ಪುರ್‌: ಛತ್ತೀಸ್‌ಗಢ (Chhattisgarh) – ತೆಲಂಗಾಣ ಗಡಿಯಲ್ಲಿ ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆಯ ವೇಳೆ ಜೇನುನೊಣಗಳ ದಾಳಿಗೆ ಸಿಆರ್‌ಪಿಎಫ್‌ (CRPF) ಪಡೆಯಲ್ಲಿದ್ದ ಸ್ನಿಫರ್ ಶ್ವಾನ (Sniffer Dog) ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೊರ್ಗೋಟಾಲು ಬೆಟ್ಟಗಳಲ್ಲಿ ಏ.27 ರಂದು ನಡೆದ ಅತಿದೊಡ್ಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ವೇಳೆ ಈ ಘಟನೆ ನಡೆದಿದೆ. ಕಾರ್ಯಾಚರಣೆ ವೇಳೆ, ಎರಡು ವರ್ಷದ ಹೆಣ್ಣು ನಾಯಿ ರೋಲೋ (Rolo) ಮೇಲೆ ಜೇನುನೊಣಗಳು ದಾಳಿ ನಡೆಸಿದ್ದವು. ದಾಳಿಯಿಂದ ಗಾಯಗೊಂಡಿದ್ದ ರೋಲೋಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕರೆತರುವಾಗ, ಮಾರ್ಗ ಮಧ್ಯೆ ಅದು ಸಾವನ್ನಪ್ಪಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜೇನು ದಾಳಿ ನಡೆದ ವೇಳೆ, ರೋಲೋಗೆ ಸಿಆರ್‌ಪಿಎಫ್‌ ಸಿಬ್ಬಂದಿ ಪಾಲಿಥಿನ್ ಹಾಳೆಯಿಂದ ಮುಚ್ಚಿದ್ದರು. ಆದರೂ ಸಹ ಜೇನುನೊಣಗಳು ಒಳಗೆ ಹೋಗಿ ಅದನ್ನು ಕಚ್ಚಿದವು. ಇದರಿಂದ ಕಿರಿಕಿರಿಯಾಗಿ ಅದು ಹೊರಗೆ ಬಂದಿತ್ತು. ಈ ವೇಳೆ, ಜೇನುನೊಣಗಳು ಮತ್ತಷ್ಟು ದಾಳಿ ಮಾಡಿದವು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ.

    ಕಾರ್ಯಾಚರಣೆಯಲ್ಲಿ ರೋಲೋ, ಸ್ಫೋಟಕಗಳು ಮತ್ತು ಸುಧಾರಿತ ಸ್ಫೋಟಕ ಸಾಧನಗಳನ್ನು (IED) ಪತ್ತೆ ಹಚ್ಚಲು ನೆರವಾಗುತ್ತಿತ್ತು. ಮೇ 11 ರಂದು ಮುಕ್ತಾಯಗೊಂಡ 21 ದಿನಗಳ ಈ ಕಾರ್ಯಾಚರಣೆಯಲ್ಲಿ ರೋಲೋ ಪಾತ್ರ ಬಹಳ ಮುಖ್ಯವಾಗಿತ್ತು. ಸಿಆರ್‌ಪಿಎಫ್ ಡಿಜಿ, ಮರಣೋತ್ತರವಾಗಿ ಶ್ವಾನಕ್ಕೆ ಪದಕವನ್ನು ನೀಡಿದ್ದಾರೆ.

    ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಛತ್ತೀಸ್‌ಗಢ ಪೊಲೀಸ್ ಘಟಕಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 31 ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿತ್ತು. ಈ ವೇಳೆ ಒಟ್ಟು 18 ಸೈನಿಕರು ಗಾಯಗೊಂಡಿದ್ದರು.

    ಬೆಲ್ಜಿಯಂ ಶೆಫರ್ಡ್ ಶ್ವಾನ ರೋಲೋ, ಬೆಂಗಳೂರಿನ (Bengaluru) ಬಳಿಯ ಸಿಆರ್‌ಪಿಎಫ್ ಶ್ವಾನ ತರಬೇತಿ ಕೇಂದ್ರದಲ್ಲಿ ಪಳಗಿತ್ತು. ಕಳೆದ ವರ್ಷ ಏಪ್ರಿಲ್‌ನಲ್ಲಿ ಛತ್ತೀಸ್‌ಗಢದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಾಗಿ ಅದನ್ನು ನಿಯೋಜಿಸಲಾಗಿತ್ತು.

  • ಆರ್ಮಿಗೆ ಸೇರೋಕಾಗಿಲ್ಲ ಅಂತ 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶ ಸೇವೆಗೆ ನೀಡಿದ ಅಧಿಕಾರಿ!

    ಆರ್ಮಿಗೆ ಸೇರೋಕಾಗಿಲ್ಲ ಅಂತ 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶ ಸೇವೆಗೆ ನೀಡಿದ ಅಧಿಕಾರಿ!

    ಕಾರವಾರ: ಅಂಕೋಲದ (Ankola) ವ್ಯಕ್ತಿಯೊಬ್ಬರು ಸೈನ್ಯ (Indian Army) ಸೇರಿ ದೇಶ ಸೇವೆ ಮಾಡಬೇಕು ಎಂಬ ಹಂಬಲ ಈಡೇರದಿದ್ದಿದ್ದಕ್ಕೆ, ತಾವು ಸಾಕಿದ್ದ ಶ್ವಾನದ ಸಂತತಿಯನ್ನೇ ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಇಲ್ಲಿಯವರೆಗೆ ಅವರು 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶದ ಭದ್ರತೆಗಾಗಿ ನೀಡಿದ್ದಾರೆ. ಇದೀಗ ಎರಡು ಮರಿಗಳು ಸಿಆರ್‌ಪಿಎಫ್ (CRPF) ತುಕಡಿಗೆ ಸೇರಲು ಸಿದ್ಧವಾಗಿವೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಅಂಕೋಲ ತಾಲೂಕಿನ ಬಾವಿಕೇರಿಯ ರಾಘವೇಂದ್ರ ಭಟ್ ಅವರಿಗೆ ಸೇನೆಗೆ ಸೇರಬೇಕೆಂಬ ಬಯಕೆ ಇತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಅದಕ್ಕಾಗಿಯೇ ಅವರು ಸಾಕಿದ್ದ ನಾಯಿಗಳನ್ನೇ ಕಳೆದ ಹಲವು ವರ್ಷಗಳಿಂದ ಸೇನೆ ಹಾಗೂ ಪೊಲೀಸ್‌ ಇಲಾಖೆಗೆ ಒಪ್ಪಿಸುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 30ಕ್ಕೂ ಹೆಚ್ಚು ಶ್ವಾನಗಳನ್ನು ಅವರು ದೇಶದ ಭದ್ರತೆಗೆ ಒಪ್ಪಿಸಿದ್ದಾರೆ.

    ಹವ್ಯಾಸಕ್ಕಾಗಿ ಕಳೆದ 25 ವರ್ಷಗಳಿಂದ ಹಲವು ತಳಿಯ ಶ್ವಾನಗಳನ್ನು ಸಾಕುತ್ತಾ ಬಂದಿದ್ದಾರೆ. ಈಗ ಇವರ ಬಳಿ ಬೆಲ್ಝಿಯಂ ಮೆಲಿನೋಯ್ಸ್ ತಳಿಯ ಐದು ಶ್ವಾನಗಳಿದ್ದು, ಇವುಗಳಲ್ಲಿ ಮೂರು ಹೆಣ್ಣು ,ಎರಡು ಗಂಡುಗಳಿವೆ. ಇವುಗಳ ಮರಿಗಳೆಲ್ಲವೂ ದೇಶಸೇವೆಗೆ ಮುಡಿಪಾಗಿಡಲಾಗಿದೆ. ಲೀಸಾ ಶ್ವಾನದ ಎರಡು ಮರಿಗಳನ್ನು ಬೆಂಗಳೂರಿನ ಸಿಆರ್‌ಪಿಎಫ್‌ನ ಡಾಗ್ ಬ್ರೀಡ್ ಸೆಂಟರ್‌ಗೆ ಕರೆದೊಯ್ಯಲಾಗುತ್ತಿದೆ. ಇಲ್ಲಿ ಒಂದು ವರ್ಷಗಳ ತರಬೇತಿ ನೀಡಿದ ನಂತರ ಮಾದಕ ವಸ್ತು ಪತ್ತೆ, ಬಾಂಬ್ ಪತ್ತೆ ಕಾರ್ಯಕ್ಕೆ ಇವುಗಳ ನಿಯೋಜನೆಯಾಗಲಿವೆ. ನಕ್ಸಲ್ ನಿಗ್ರಹ ಪಡೆಯಲ್ಲಿ ಈ ಶ್ವಾನದ ಮರಿಗಳು ಕಾರ್ಯ ನಿರ್ವಹಿಸಲಿದೆ.

    ವರ ಮನೆಯಲ್ಲಿ ಸಾಕಿರುವ ಬೆಲ್ಝಿಯಂ ಮೆಲಿನೋಯ್ಸ್ ತಳಿಯ ಶ್ವಾನಗಳ ವಿಶೇಷವೇನು ಗೊತ್ತಾ? ಇವುಗಳಿಗೆ ಚಿರತೆಯ ವೇಗ, ಹದ್ದಿನ ಕಣ್ಣು, ಚಾಣಾಕ್ಷ ಬುದ್ಧಿ, ಎಂಟೆದೆ ಬಂಟನಂತ ದೈರ್ಯ! ಇವು ನೋಟದಲ್ಲೇ ಶತ್ರುಗಳ ಹುಟ್ಟಡಗಿಸುವ ಶಕ್ತಿ ಹೊಂದಿವೆ. ಮೊದಲ ಬಾರಿಗೆ ತಾವು ಸಾಕಿದ್ದ ಲೀಸಾ ಮತ್ತು ಟೈನಿ ಎಂಬ ಎರಡು ಶ್ವಾನಗಳ ಸಂಪೂರ್ಣ ಸಂತತಿಯನ್ನ ದೇಶ ಮತ್ತು ರಾಜ್ಯದ ಸೇವೆಗೆ ಮುಡಿಪಾಗಿರಿಸಿದ್ದಾರೆ. ಮೊದಲ ಬಾರಿ ಹುಟ್ಟಿದ ಟೈನಿ ಶ್ವಾನದ -8 ಲೀಸಾ ಶ್ವಾನದ 9 ಮರಿಗಳನ್ನು ಆರ್ಮಿಗಳಿಗೆ ಒಪ್ಪಿಸಿದ್ದಾರೆ. ಇದರ ಜೊತೆಗೆ 6 ವರ್ಷಗಳಲ್ಲಿ ಹುಟ್ಟಿದ 15 ಮರಿಗಳನ್ನು ರಾಜ್ಯದ ಪೊಲೀಸ್ ಇಲಾಖೆಗೆ ನೀಡಿದ್ದಾರೆ.

    ಅಸ್ಸಾಂ ರೈಫಲ್ ತುಕಡಿಯಲ್ಲಿ ಇವರು ನೀಡಿದ 16 ಶ್ವಾನಗಳು ದೇಶ ಸೇವೆ ಮಾಡುತ್ತಿವೆ. ಬಾಂಬ್ ಪತ್ತೆಕಾರ್ಯ, ಮಾದಕ ವಸ್ತುಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇನ್ನೂ ರಾಜ್ಯ ಪೊಲೀಸ್ ಇಲಾಖೆಯ ಬೆಳಗಾವಿಯ ಬಾಂಬ್ ನಿಷ್ಕ್ರಿಯ ದಳದಲ್ಲಿರುವ ಇವರ ಮಾಯಾ ಎಂಬ ಶ್ವಾನವು ಎಕ್ಸ್ ಪೊಲೀಸಿವ್ ಟ್ರೇಡ್‌ನಲ್ಲಿ ಪ್ರಥಮ ಸ್ಥಾನಗಳಿಸಿದೆ. ಬೆಂಗಳೂರಿನ ವಿಮಾನ ನಿಲ್ದಾಣ, ರಾಜ್ಯದ ಬಾಂಬ್ ನಿಷ್ಕ್ರಿಯ ದಳದಲ್ಲಿ ಕರ್ತವ್ಯ ನಿರ್ವಹಿಸಿತ್ತಿವೆ.

    ಲೀಸಾ ಶ್ವಾನವು ಈಗ ಮೂರು ಮರಿಗಳನ್ನು ಹಾಕಿದ್ದು ಪಹಲ್ಗಾವ್ ದಾಳಿಯ ನಂತರ ಮರಿಗಳನ್ನು ಸಿಆರ್‌ಪಿಎಫ್‌ಗೆ ನೀಡಬೇಕು ಎಂಬ ಹಂಬಲದಲ್ಲಿ ರಾಘವೇಂದ್ರ ಭಟ್, ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಉತ್ತಮ ಶ್ವಾನದ ಹುಡುಕಾಟದಲ್ಲಿದ್ದ ಸಿಆರ್‌ಪಿಎಫ್ ಅಧಿಕಾರಿಗಳು ತಕ್ಷಣ ಇವರ ಮನೆಗೆ ಆಗಮಿಸಿ ಮರಿಗಳನ್ನು ತಪಾಸಣೆ ಮಾಡಿದಾಗ ಉತ್ತಮ ಆರೋಗ್ಯ, ಚುರುಕುತನದಿಂದ ಕೂಡಿದ ಬಲಶಾಲಿಯಾದ ಬೆಲ್ಝಿಯಂ ಮೆಲಿನೋಯ್ಸ್‌ನ ಎರಡು ಮರಿಗಳು ಆಯ್ಕೆಯಾಗಿದ್ದು ಉಚಿತವಾಗಿ ದೇಶಸೇವೆಗಾಗಿ ಈ ಮರಿಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದರು.

    ಸೈನ್ಯದ ಪ್ರತಿ ತುಕಡಿಗೆ 14 ಶ್ವಾನಗಳ ಅವಶ್ಯಕತೆ ಇರುತ್ತದೆ. ಇವುಗಳು ಯೋಧರ ಜೀವ ರಕ್ಷಣೆಯ ಹೊಣೆ ಹೊರುವ ಜೊತೆ ಬಾಂಬ್ ಪತ್ತೆ ಕಾರ್ಯ, ಮಾದಕ ವಸ್ತುಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

  • ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

    ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

    ಶ್ರೀನಗರ: ಪಾಕಿಸ್ತಾನದ (Pakistan) ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಕೆಲಸ ಕಳೆದುಕೊಂಡಿದ್ದ ಸಿಆರ್‌ಪಿಎಫ್‌ (CRPF) ಯೋಧ, ನ್ಯಾಯಕ್ಕಾಗಿ ಪ್ರಧಾನಿ ಮೋದಿಯವರ (Narendra Modi) ಮೊರೆ ಹೋಗಿದ್ದಾರೆ.

    41ನೇ ಬೆಟಾಲಿಯನ್‍ನಲ್ಲಿ ಸಿಆರ್‌ಪಿಎಫ್ ಯೋಧರಾಗಿದ್ದ ಮುನೀರ್ ಅಹಮದ್ ಪಾಕಿಸ್ತಾನದ ಯುವತಿ ಮೆನಾಲ್ ಖಾನ್ ಅವರನ್ನು ಪ್ರೀತಿಸುತ್ತಿದ್ದರು. ಆಕೆಯ ಜೊತೆ ವಿವಾಹಕ್ಕೆ ಸಿಆರ್‌ಪಿಎಫ್ ಬಳಿ ಅನುಮತಿಯನ್ನು ಕೋರಿದ್ದರು. ಅವರಿಗೆ ಅನುಮತಿ ನೀಡುವ ಮುನ್ನವೇ ಮುನೀರ್ ಅವರು ವಿವಾಹವಾಗಿದ್ದರು. ಇದರಿಂದ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಇನ್ನೂ ಮುನೀರ್ ಅಹ್ಮದ್ ಅವರ ಪತ್ನಿ ಮೆನಾಲ್ ಖಾನ್ ಅವರನ್ನು ಗಡೀಪಾರು ಮಾಡುವ ಹಂತದಲ್ಲಿದ್ದರು, ಕೊನೆ ಕ್ಷಣದಲ್ಲಿ ನ್ಯಾಯಾಲಯದಿಂದ ಗಡೀಪಾರಿಗೆ ತಡೆ ತರಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನೀರ್‌, ವೀಸಾ ಅವಧಿ ಮುಗಿದ ನಂತರವೂ ತನ್ನ ಪತ್ನಿ ಭಾರತದಲ್ಲಿ ಉಳಿದುಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ವಜಾ ಪತ್ರದಲ್ಲಿ ತಿಳಿಸಲಾಗಿದೆ. ಆದರೆ ಈ ಬಗ್ಗೆ ನಾನು ಮಾಹಿತಿ ನೀಡಿದ್ದೇನೆ, ನನ್ನ ಬಳಿ ಪುರಾವೆಗಳಿವೆ. ನಾನು ಸರಿಯಾದ ದಾಖಲೆಗಳನ್ನು ಒದಗಿಸಿದ್ದೇನೆ ಎಂದಿದ್ದಾರೆ.

    ಮುನೀರ್ ಅಹ್ಮದ್ ಅವರು ಪಾಕ್‌ನ ಯುವತಿ ಮೆನಾಲ್ ಖಾನ್ ಅವರನ್ನು ಕಳೆದ ವರ್ಷ ಮೇ 24 ರಂದು ವೀಡಿಯೊ ಕರೆಯಲ್ಲಿ ವಿವಾಹವಾಗಿದ್ದರು. ಅಕ್ಟೋಬರ್‌ನಲ್ಲಿ ಮದುವೆಯ ಬಗ್ಗೆ ಸಿಆರ್‌ಪಿಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಮೆನಾಲ್ ಖಾನ್ ಫೆಬ್ರವರಿಯಲ್ಲಿ ವಾಘಾ-ಅಟ್ಟಾರಿ ಗಡಿಯ ಮೂಲಕ ಭಾರತಕ್ಕೆ ಬಂದು ಮುನೀರ್ ಅಹ್ಮದ್ ಜೊತೆ ವಾಸವಾಗಿದ್ದರು. ಅವರ 15 ದಿನಗಳ ವೀಸಾ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿತ್ತು. ನಂತರ ಮುನೀರ್ ದೀರ್ಘಾವಧಿಯ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ವೇಳೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಪಾಕ್‌ ಪ್ರಜೆಗಳನ್ನು ದೇಶ ತೊರೆಯುವಂತೆ ಆದೇಶಿಸಿತ್ತು. ಇನ್ನೂ ಮೆನಾಲ್ ಖಾನ್ ಅಹ ಗಡೀಪಾರಾಗುವ ಹಂತದಲ್ಲಿದ್ದರು. ಅಷ್ಟರಲ್ಲೇ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ಅವರ ಗಡೀಪಾರಿಗೆ ತಡೆ ನೀಡಿತ್ತು.

    ಫೆಬ್ರವರಿಯಲ್ಲಿ ಪತ್ನಿ ಬಂದ ನಂತರ ನಾನು ರಜೆಯಲ್ಲಿದ್ದೆ. ಮಾರ್ಚ್ 23 ರಂದು ಮತ್ತೆ ಕರ್ತವ್ಯಕ್ಕೆ ಸೇರಿಕೊಂಡೆ. ಅಧಿಕಾರಿಗಳಿಗೆ ಈ ವೇಳೆ ಎಲ್ಲಾ ಮಾಹಿತಿ ತಿಳಿಸಿದೆ. ನಾನು ಅವರ ವೀಸಾದ ಪ್ರತಿಯನ್ನು ನೀಡಿ ದೀರ್ಘಾವಧಿಯ ವೀಸಾ ಅರ್ಜಿಯ ಬಗ್ಗೆಯೂ ಹೇಳಿದೆ. ನಂತರ ಇದ್ದಕ್ಕಿದ್ದಂತೆ, ನನ್ನನ್ನು (ಭೋಪಾಲ್‌ಗೆ) ವರ್ಗಾಯಿಸಲಾಯಿತು. ನಾನು 2027 ರಲ್ಲಿ ಜಮ್ಮು ಮತ್ತು ಕಾಶ್ಮೀರದ ನನ್ನ ನಿಯೋಜನೆ ಪೂರ್ಣಗೊಳಿಸಬೇಕಾಗಿತ್ತು. ಬೇರೆ ಬೆಟಾಲಿಯನ್‌ಗೆ ವರ್ಗಾಯಿಸಿದಾಗಲೆಲ್ಲಾ, 15 ದಿನಗಳ ಸೇರ್ಪಡೆ ಸಮಯ ಸಿಗುತ್ತದೆ. ನನಗೆ ಅದು ಸಿಗಲಿಲ್ಲ. ನನಗೆ ರೈಲು ಟಿಕೆಟ್ ಕೂಡ ನೀಡಲಾಗಿಲ್ಲ. ನಾನು 41ನೇ ಬೆಟಾಲಿಯನ್‌ಗೆ ಸೇರಿದೆ. ಸಂದರ್ಶನದ ವೇಳೆ ಮದುವೆಯ ಬಗ್ಗೆ ಎಲ್ಲವನ್ನೂ ಹೇಳಿದೆ. ನನ್ನ ವರ್ಗಾವಣೆಯ ಬಗ್ಗೆ ನಾನು ಮಹಾನಿರ್ದೇಶಕರಿಗೆ ಸಹ ಪತ್ರ ಬರೆದಿದ್ದೇನೆ. ಆ ಅರ್ಜಿ ಪ್ರಕ್ರಿಯೆಯಲ್ಲಿದೆ ಎಂದು ಮುನೀರ್‌ ಹೇಳಿಕೊಂಡಿದ್ದಾರೆ.

    ಸೇವೆಯಿಂದ ವಜಾಗೊಳಿಸಿದ್ದರಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಒಬ್ಬ ಜವಾನನಾಗಿ ನನಗೆ ನ್ಯಾಯ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಲು ಬಯಸುತ್ತೇನೆ. ನಾನು 2024 ರಲ್ಲಿ ವಿವಾಹವಾದೆ ಮತ್ತು 2022 ರಿಂದ ಇಲಾಖೆಗೆ ಎಲ್ಲಾ ಮಾಹಿತಿ ನೀಡುತ್ತಿದ್ದೇನೆ. ಇದರಲ್ಲಿ ಅಕ್ರಮ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದಾರೆ.

  • ಛತ್ತೀಸ್‌ಗಢ | ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – 16 ನಕ್ಸಲರ ಹತ್ಯೆ

    ಛತ್ತೀಸ್‌ಗಢ | ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – 16 ನಕ್ಸಲರ ಹತ್ಯೆ

    ರಾಯ್ಪುರ್‌: ಛತ್ತೀಸ್‌ಗಢದ (Chhattisgarh) ಸುಕ್ಮಾ-ದಂತೇವಾಡ ಗಡಿಯಲ್ಲಿರುವ ಉಪಂಪಲ್ಲಿ ಕೇರ್ಲಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Encounter) 16 ನಕ್ಸಲರು (Naxal) ಹತ್ಯೆಯಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಜವಾನರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶುಕ್ರವಾರ (ಮಾ.28) ರಾತ್ರಿ ಈ ಪ್ರದೇಶದಲ್ಲಿ ಮಾವೋವಾದಿಗಳ ಇರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಕೂಡಲೇ ಎಚ್ಚೆತ್ತ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು (ಮಾ.29) ಬೆಳಗ್ಗೆ ಕೇರ್ಲಪಾಲ್ ಪೊಲೀಸ್ ಠಾಣೆ ಬಳಿಯ ಕಾಡಿನಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಇಲ್ಲಿಯವರೆಗೆ 16 ನಕ್ಸಲರ ಶವಗಳು ಪತ್ತೆಯಾಗಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಎಕೆ 47, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ರೈಫಲ್, 303 ರೈಫಲ್, ರಾಕೆಟ್ ಲಾಂಚರ್, ಬಿಜಿಎಲ್ ಲಾಂಚರ್ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಾ.25 ರಂದು ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದರು. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಪಡೆಯ ಸಿಬ್ಬಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

  • ದಾವಣಗೆರೆ | ಸಾಲಬಾಧೆ ತಾಳಲಾರದೇ ಸಿಆರ್‌ಪಿಎಫ್ ಯೋಧ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

    ದಾವಣಗೆರೆ | ಸಾಲಬಾಧೆ ತಾಳಲಾರದೇ ಸಿಆರ್‌ಪಿಎಫ್ ಯೋಧ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

    ದಾವಣಗೆರೆ/ಅಮರಾವತಿ: ಸಾಲಬಾಧೆ ಹಾಗೂ ಜೀವನದಲ್ಲಿ ಜಿಗುಪ್ಸೆಯಿಂದಾಗಿ ಸಿಆರ್‌ಪಿಎಫ್ ಯೋಧ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ (Vijayawad) ನಡೆದಿದೆ.

    ಮೃತ ಯೋಧನನ್ನು ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ನಿವಾಸಿ ಉಮೇಶ್(34) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಆಟೋ ಪಲ್ಟಿಯಾಗಿ ರೈತ ಸಂಘದ ಮುಖಂಡ ಸಾವು

    ಕಳೆದ ಒಂದು ತಿಂಗಳ ಹಿಂದೆ ಕೈದಾಳೆ ಗ್ರಾಮಕ್ಕೆ ಉಮೇಶ್ ಆಗಮಿಸಿದ್ದರು. ಮೂರು ದಿನದ ಹಿಂದೆಯಷ್ಟೇ ರಜೆ ಮುಗಿಸಿ ಛತ್ತೀಸ್‌ಗಢದ 217 ಬೆಟಾಲಿಯನ್ ಕೊಂಟಾದಲ್ಲಿ ಡ್ಯೂಟಿಗೆ ಸೇರಿಕೊಂಡಿದ್ದರು. ಮಾರನೇ ದಿನ ಸಿಆರ್‌ಪಿಎಫ್ ಯೋಧರು ಉಮೇಶ್‌ಗಾಗಿ ಎಷ್ಟೇ ಹುಡುಕಾಡಿದರೂ ಆತ ಸಿಕ್ಕಿರಲಿಲ್ಲ. ಬಳಿಕ ವಿಜಯವಾಡದಲ್ಲಿ ರೈಲಿಗೆ ತೆಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.

    ಈ ಬಗ್ಗೆ ಉಮೇಶ್ ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಬುಧವಾರ ಬೆಳಿಗ್ಗೆ ದಾವಣಗೆರೆ ತಾಲೂಕಿನ ಕೈದಾಳೆ ಸ್ವಗ್ರಾಮಕ್ಕೆ ಮೃತದೇಹವನ್ನು ರವಾನಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಮಣಿಪುರಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಐವರು ಜಡ್ಜ್‌ಗಳ ನಿಯೋಗ

  • ಟಿಬೆಟನ್‌ ಧರ್ಮಗುರು ದಲೈ ಲಾಮಾಗೆ ಜೀವ ಬೆದರಿಕೆ – ಕೇಂದ್ರದಿಂದ ʻZʼ ಶ್ರೇಣಿಯ ಭದ್ರತೆ

    ಟಿಬೆಟನ್‌ ಧರ್ಮಗುರು ದಲೈ ಲಾಮಾಗೆ ಜೀವ ಬೆದರಿಕೆ – ಕೇಂದ್ರದಿಂದ ʻZʼ ಶ್ರೇಣಿಯ ಭದ್ರತೆ

    ನವದೆಹಲಿ: ಟಿಬೆಟನ್‌ ಧರ್ಮಗುರು ದಲೈ ಲಾಮಾ (Tibetan Spiritual leader Dalai Lama) ಅವರಿಗೆ ಜೀವ ಬೆದರಿಕೆ ಇರುವುದರಿಂದ ಕೇಂದ್ರ ಸರ್ಕಾರವು ‘ಜೆಡ್‌’ ಶ್ರೇಣಿಯ ಭದ್ರತೆಯನ್ನು (Z Category Protection) ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿದೆ.

    89 ವರ್ಷದ ಆಧಾತ್ಮಿಕ ನಾಯಕನಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗಕ್ಕೆ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Manipur | ಬಿರೇನ್‌ ಸಿಂಗ್‌ ರಾಜೀನಾಮೆ ಬೆನ್ನಲ್ಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

    ದಲೈ ಲಾಮಾ ಅವರು ಹಿಮಾಚಲ ಪ್ರದೇಶ ಪೊಲೀಸರ ಭದ್ರತೆ ಹೊಂದಿದ್ದರು. ಆದ್ರೆ ದೆಹಲಿ ಮತ್ತು ಇತರ ಯಾವುದೇ ಸ್ಥಳಗಳಿಗೆ ಭೇಟಿ ನೀಡುವಾಗ ಪೊಲೀಸ್‌ ಭದ್ರತೆಯನ್ನು ವಿಸ್ತರಿಸಲಾಗುತ್ತಿತ್ತು. ಆದ್ರೆ ಕೇಂದ್ರ ಗುಪ್ತಚರ ಸಂಸ್ಥೆಗಳ ಪರಿಶೀಲನೆಯ ನಂತರ ಸರ್ಕಾರ ಏಕರೂಪದ ಭದ್ರತೆಗೆ ಸೂಚನೆ ನೀಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸುಮಾರು 30 ಸಿಆರ್‌ಪಿಎಫ್‌ ಕಮಾಂಡೋಗಳ ತಂಡವು ದಲೈ ಲಾಮಾಗೆ ರಕ್ಷಣೆ ನೀಡಲಿದೆ. ಅಲ್ಲದೇ ಮಣಿಪುರದ ಬಿಜೆಪಿ ನಾಯಕ ಸಂಬಿತ್ ಪಾತ್ರ ಅವರಿಗೂ ʻಜೆಡ್‌ʼ ಶ್ರೇಣಿಯ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

  • ಏಡ್ಸ್‌ ಸೋಂಕಿಗೆ ಒಳಗಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಬಡ್ತಿ ನಿರಾಕರಣೆ – ತಾರತಮ್ಯದ ಸ್ಪಷ್ಟ ನಿದರ್ಶನ ಎಂದ ಹೈಕೋರ್ಟ್‌

    ಏಡ್ಸ್‌ ಸೋಂಕಿಗೆ ಒಳಗಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಬಡ್ತಿ ನಿರಾಕರಣೆ – ತಾರತಮ್ಯದ ಸ್ಪಷ್ಟ ನಿದರ್ಶನ ಎಂದ ಹೈಕೋರ್ಟ್‌

    ಅಹಮದಾಬಾದ್: ಹೆಚ್‌ಐವಿ ಏಡ್ಸ್‌ (HIV AIDS) ಸೋಂಕಿಗೆ ಒಳಗಾದ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಮಹಿಳಾ ಸಿಬ್ಬಂದಿಗೆ ಉನ್ನತ ಹುದ್ದೆಗೆ ಬಡ್ತಿ ನಿರಾಕರಿಸುವುದು ತಾರತಮ್ಯದ ಸ್ಪಷ್ಟ ನಿದರ್ಶನವಾಗಿದೆ ಎಂದು ಗುಜರಾತ್ ಹೈಕೋರ್ಟ್ (Gujarat High Court) ಅಸಮಾಧಾನ ಹೊರಹಾಕಿದೆ.

    ಏಡ್ಸ್‌ನಿಂದ ಬಳಲುತ್ತಿರುವ ಕಾರಣ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದರೂ ಬಡ್ತಿ ನಿರಾಕರಿಸಲಾಗುತ್ತಿದೆ ಎಂದು CRPF ಮಹಿಳಾ ಸಿಬ್ಬಂದಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಪ್ರಣವ್ ತ್ರಿವೇದಿ ಅವರಿದ್ದ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

    ಈ ವಿಷಯವನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರ ಗಮನಕ್ಕೆ ತರುವಂತೆ ನ್ಯಾಯಾಲಯವು ನಿರ್ದೇಶಿಸಿತು. ಮಾರ್ಚ್ 6 ರಂದು ಮುಂದಿನ ವಿಚಾರಣೆ ನಡೆಸಲಾಗುತ್ತದೆ. ಆ ದಿನ ಕಾನೂನು ಅಧಿಕಾರಿ ತನ್ನ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

    ಪ್ರತಿವಾದಿಗಳ ಪರವಾಗಿ ಹಾಜರಾದ ವಕೀಲರು CRPF ಮತ್ತು CRPF ಕಮಾಂಡೆಂಟ್ ನಿಯಮದ ಪ್ರಕಾರ ಆದೇಶವನ್ನು ನೀಡಲಾಗಿದೆ ಎಂದು ವಾದಿಸಿದರು. ಅರ್ಜಿದಾರರ ಪರ ವಕೀಲರು, ಅವರು ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಅಂಶವನ್ನು ಹೊರತುಪಡಿಸಿ, ಅರ್ಹರಾಗಿದ್ದರೂ ಉನ್ನತ ಹುದ್ದೆಗಳಿಗೆ ಬಡ್ತಿ ನೀಡಲು ನಿರಂತರವಾಗಿ ನಿರಾಕರಿಸಲಾಗಿದೆ ಎಂದು ವಾದಿಸಿದರು.

    ಈ ವೇಳೆ, ನ್ಯಾಯಾಲಯ, ಈ ಪ್ರಕರಣವು ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಹೆಚ್‌ಐವಿ-ಏಡ್ಸ್‌ನಿಂದ ಬಳಲುತ್ತಿರುವ ಸಿಬ್ಬಂದಿಗೆ ಮಾಡುತ್ತಿರುವ ತಾರತಮ್ಯದ ಸ್ಪಷ್ಟ ನಿದರ್ಶನಗಳನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದೆ.