Tag: CRPF personnel

  • ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

    ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

    ಛತ್ತೀಸಗಢ: ಪಂಜಾಬ್‌ನ (Punjab) ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್‌ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ (CRPF Personnel) ಮತ್ತು ಮೂವರು ನಾಗರಿಕರನ್ನು ರಕ್ಷಿಸಿತು.

    ಸವಾಲಿನ ಹವಾಮಾನದ ಹೊರತಾಗಿಯೂ ರಕ್ಷಣಾ ಕಾರ್ಯ ಕೈಗೊಳ್ಳಲು ಬುಧವಾರ ಬೆಳಗ್ಗೆ 6 ಗಂಟೆಗೆ ಹೆಲಿಕಾಪ್ಟರ್‌ಗಳನ್ನು ಕಳುಹಿಸಲಾಯಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಎಲ್ಲರನ್ನೂ ಯಶಸ್ವಿಯಾಗಿ ಸ್ಥಳಾಂತರಿಸಿ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ ಎಂದು ಸೇನೆಯು ತಿಳಿಸಿದೆ. ಇದನ್ನೂ ಓದಿ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಾವಿನ ಸಂಖ್ಯೆ 30ಕ್ಕೆ ಏರಿಕೆ

    ಸ್ಥಳಾಂತರಿಸಿದ ಸ್ವಲ್ಪ ಸಮಯದ ನಂತರ ಸಿಬ್ಬಂದಿ ಆಶ್ರಯ ಪಡೆದಿದ್ದ ಕಟ್ಟಡ ಕುಸಿದು ಬಿದ್ದಿದೆ. ಸಮಯೋಚಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಎಲ್ಲರೂ ಬಚಾವ್‌ ಆಗಿದ್ದಾರೆ.

    ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್, ಉಜ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿವೆ. ಪಠಾಣ್‌ಕೋಟ್, ಹೋಶಿಯಾರ್‌ಪುರ, ಗುರುದಾಸ್ಪುರ್, ಕಪುರ್ತಲಾ, ಫಜಿಲ್ಕಾ, ತರಣ್ ತರಣ್ ಮತ್ತು ಫಿರೋಜ್‌ಪುರ ಸೇರಿದಂತೆ ಪಂಜಾಬ್ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದನ್ನೂ ಓದಿ: ಭಾರತದಲ್ಲಿ 5 ಲಕ್ಷ ಉಚಿತ ChatGPT ಖಾತೆ – OpenAI ಘೋಷಣೆ

    ಹೆಚ್ಚುವರಿ ಜಿಲ್ಲಾಧಿಕಾರಿ ಹರ್ದೀಪ್ ಸಿಂಗ್, ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಿಂದಾಗಿ ಪಠಾಣ್‌ಕೋಟ್‌ನಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಪಠಾಣ್‌ಕೋಟ್‌ನಲ್ಲಿರುವ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ಅನ್ನು ಸ್ಥಳಾಂತರಿಸುವ ಕೇಂದ್ರವೆಂದು ನಾವು ಗುರುತಿಸಿದ್ದೇವೆ. ನಾವು ಜನರನ್ನು ಸ್ಥಳಾಂತರಿಸುತ್ತೇವೆ. ಆಹಾರಕ್ಕಾಗಿ ಸರಿಯಾದ ವ್ಯವಸ್ಥೆಗಳನ್ನು ಸಹ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

  • ಬಾಲಕನನ್ನು 8 ಕಿ.ಮೀ ಹೊತ್ಕೊಂಡು ಹೋಗಿ ಕ್ಯಾಂಪ್‍ನಲ್ಲಿ ಚಿಕಿತ್ಸೆ – ಯೋಧರ ವಿಡಿಯೋ ವೈರಲ್

    ಬಾಲಕನನ್ನು 8 ಕಿ.ಮೀ ಹೊತ್ಕೊಂಡು ಹೋಗಿ ಕ್ಯಾಂಪ್‍ನಲ್ಲಿ ಚಿಕಿತ್ಸೆ – ಯೋಧರ ವಿಡಿಯೋ ವೈರಲ್

    ರಾಯ್ಪುರ್: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನನ್ನು ಹೊತ್ತುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಸೈನಿಕರು ಮಾನವೀಯತೆ ಮೆರೆದಿದ್ದಾರೆ.

    ಚತ್ತೀಸ್‍ಗಢದ ದಾಂತೇವಾಡ ಪ್ರದೇಶದಲ್ಲಿರುವ ಗುಮೋದಿ ಗ್ರಾಮದ 13 ವರ್ಷದ ಬಾಲಕ ಅನಾರೋಗ್ಯದಿಂದ ಬಳಲುತ್ತಿದ್ದ. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್‌ಪಿಎಫ್ 231 ಬೆಟಾಲಿಯನ್ ಪಡೆಯ ಸೈನಿಕರು ಬಾಲಕನನ್ನು ನೋಡಿದ್ದಾರೆ. ಆತನ ಸ್ಥಿತಿಯನ್ನು ಅರಿತ ಯೋಧರು ಮಂಚವನ್ನು ಹಗ್ಗದ ಸಹಾಯದಿಂದ ಉದ್ದದ ಕಟ್ಟಿಗೆ ಕಟ್ಟಿದ್ದಾರೆ. ಬಳಿಕ ಇಬ್ಬರು ಯೋಧರು ಅದನ್ನು ಹೆಗಲ ಮೇಲೆ ಇಟ್ಟುಕೊಂಡು ಬಾಲಕನನ್ನು ಕ್ಯಾಂಪ್‍ಗೆ ಸಾಗಿಸಿದ್ದಾರೆ.

    ಗುಮೋದಿ ಗ್ರಾಮದಿಂದ 8 ಕಿ.ಮೀ. ದೂರದಲ್ಲಿದ್ದ ಕ್ಯಾಂಪ್‍ವರೆಗೂ ಯೋಧರು ಬಾಲಕನನ್ನು ಹೊತ್ತುಕೊಂಡು ಸಾಗಿದ್ದಾರೆ. ಸೈನಿಕರ ಹಿಂದೆ ಬಾಲಕನ ಸಂಬಂಧಿಕರು, ಸ್ನೇಹಿತರು ಕೂಡ ಹೆಜ್ಜೆಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯೋಧರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಬಾಲಕನಿಗೆ ಕಾಮಾಲೆ ಕಾಯಿಲೆ ಕಾಣಿಸಿಕೊಂಡಿತ್ತು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕಿತ್ಸೆ ಮುಂದುವರಿದಿದೆ ಎಂದು ವರದಿಯಾಗಿದೆ.

  • ಕೆಚ್ಚೆದೆಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡಲ್ಲ: ಪ್ರಧಾನಿ ಮೋದಿ

    ಕೆಚ್ಚೆದೆಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡಲ್ಲ: ಪ್ರಧಾನಿ ಮೋದಿ

    ನವದೆಹಲಿ: ಕೆಚ್ಚೆದೆಯ ಭಾರತೀಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ನರೇಂದ್ರ ಮೋದಿ, ಉಗ್ರರ ದಾಳಿ ವಿರುದ್ಧ ಕಿಡಿಕಾರಿದ್ದಾರೆ.

    ಟ್ವೀಟ್ ಮೂಲಕ ಉಗ್ರರ ವಿರುದ್ಧ ಗುಡುಗಿರುವ ಪ್ರಧಾನಿ ಮೋದಿ, ಪುಲ್ವಾಮದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಿರುವುದು ತೀವ್ರವಾಗಿ ಖಂಡಿಸುತ್ತೇನೆ. ಹುತಾತ್ಮ ಯೋಧರ ಕುಟುಂಬದ ಜೊತೆಗೆ ಈಡಿ ದೇಶವೇ ನಿಂತಿದೆ. ಗಾಯಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ವಿಡಿಯೋ ರಿಲೀಸ್ ಆಗೋ ವೇಳೆ ನಾನು ಸ್ವರ್ಗದಲ್ಲಿ ಇರ್ತೀನಿ: ನರಹಂತಕ ಉಗ್ರ

    ಈ ದಾಳಿಯ ಕುರಿತು ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಹಾಗೂ ಉನ್ನತ ಅಧಿಕಾರಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ನಂತ್ರ ಗುಂಡಿನ ದಾಳಿ: 2,547 ಸೈನಿಕರು ಟಾರ್ಗೆಟ್, 100 ಮೀಟರ್ ದೂರಕ್ಕೆ ಹಾರಿತು ದೇಹ!

    ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವೆಲ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ಆರಂಭಿಸಿದ್ದಾರೆ. ಈಗಾಗಲೇ ಉನ್ನತ ಅಧಿಕಾರಿಗಳು ದೆಹಲಿ ಕಡೆಗೆ ಆಗಮಿಸುತ್ತಿದ್ದು, ಮುಂದಿನ ಕ್ರಮಕ್ಕೆ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರ ಮೂಲಗಳಿಂದ ತಿಳಿದುಬಂದಿದೆ.

    ಗೃಹ ಇಲಾಖೆಯ ಕಾರ್ಯದರ್ಶಿ ರಾಜೀವ್ ಗೌಭ ವಾರ್ಷಿಕ ಕಾರ್ಯದರ್ಶಿಗಳ ಮಾತುಕತೆಗೆ ಭುತಾನ್‍ಗೆ ಇಂದು ತೆರಳಿದ್ದರು. ಉಗ್ರರ ದಾಳಿ ಬಳಿಕ ಭುತಾನ್‍ನಿಂದ ಭಾರತಕ್ಕೆ ಮರಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾರು ಡಿಕ್ಕಿ ಹೊಡೆದ ನಂತ್ರ ಗುಂಡಿನ ದಾಳಿ: 2,547 ಸೈನಿಕರು ಟಾರ್ಗೆಟ್, 100 ಮೀಟರ್ ದೂರಕ್ಕೆ ಹಾರಿತು ದೇಹ!

    ಕಾರು ಡಿಕ್ಕಿ ಹೊಡೆದ ನಂತ್ರ ಗುಂಡಿನ ದಾಳಿ: 2,547 ಸೈನಿಕರು ಟಾರ್ಗೆಟ್, 100 ಮೀಟರ್ ದೂರಕ್ಕೆ ಹಾರಿತು ದೇಹ!

    – ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ಕೃತ್ಯ
    – 78 ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯೋಧರು
    – ಹೈವೇಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಆತ್ಮಾಹತ್ಯಾ ದಾಳಿ

    ಶ್ರೀನಗರ: ಸರ್ಜಿಕಲ್ ಸ್ಟ್ರೈಕ್ ನಡೆದರೂ ಪಾಕಿಸ್ತಾನ ಪ್ರಾಯೋಜಿತ ಉಗ್ರರಿಗೆ ಬುದ್ಧಿ ಬಂದಿಲ್ಲ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಬಸ್ಸಿನಲ್ಲಿದ್ದ 42 ಮಂದಿ ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದಾರೆ. ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

    ದೇಶದ ಸೇನಾ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ದಾಳಿ ಇದಾಗಿದೆ. ದಾಳಿಯಲ್ಲಿ 45 ಮಂದಿ ಗಾಯಗೊಂಡಿದ್ದು, 18 ಯೋಧರ ಸ್ಥಿತಿ ಗಂಭೀರವಾಗಿದೆ. ಗೋರಿಪೋರ ಪ್ರದೇಶದಲ್ಲಿ ಉಗ್ರರು ಸುಧಾರಿತ ಸ್ಫೋಟಕ ಬಳಸಿ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಜೈಶ್ -ಎ-ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

    ಕೃತ್ಯ ನಡೆದಿದ್ದು ಹೇಗೆ?
    ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‌ಪಿಎಫ್‌ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 42 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ.

    ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದಾರೆ. ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದಾರೆ. ಆತ್ಮಾಹುತಿ ದಾಳಿಕೋರ ಬಸ್ಸಿಗೆ ಕಾರನ್ನು ಡಿಕ್ಕಿ ಹೊಡೆದ ಬಳಿಕ ಉಳಿದ ಬಸ್ಸುಗಳು ನಿಂತ ಕೂಡಲೇ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿದೆ. ವಿಪರೀತ ಮಂಜು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿತ್ತು.

    ಜಮ್ಮು ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ 2016ರ ಸೆಪ್ಟೆಂಬರ್ 18ರಂದು ನಾಲ್ವರು ಉಗ್ರರು ದಾಳಿ ನಡೆಸಿ 18 ಮಂದಿ ಯೋಧರನ್ನು ಹತ್ಯೆ ಮಾಡಿದ್ದರು. ಭಾರತೀಯ ಸೇನೆ ಸಮವಸ್ತ್ರ ಧರಿಸಿ ಅಕ್ರಮವಾಗಿ ಒಳ ನುಗ್ಗಿದ್ದ ಈ ಪಾಪಿಗಳು ಯೋಧರು ಮಲಗಿದ್ದಾಗ ದಾಳಿ ನಡೆಸಿ ಕೃತ್ಯ ಎಸಗಿದ್ದರು. ಇಲ್ಲಿಯವರೆಗೆ ದೇಶದ ಇತಿಹಾಸಲ್ಲಿ ಅತಿ ದೊಡ್ಡ ದಾಳಿ ಎಂಬ ಕುಖ್ಯಾತಿ ಗಳಿಸಿತ್ತು. ಈಗ ಇದಕ್ಕಿಂತಲೂ ಅತಿ ದೊಡ್ಡ ದಾಳಿ ನಡೆದಿದ್ದು ಉಗ್ರರ ಪಾಪಿ ಕೃತ್ಯಕ್ಕೆ ಅಮಾಯಕ 42ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬಸ್ ಮೇಲೆ ಉಗ್ರರ ದಾಳಿ – 30 ಸಿಆರ್‌ಪಿಎಫ್ ಯೋಧರು ಹುತಾತ್ಮ

    ಬಸ್ ಮೇಲೆ ಉಗ್ರರ ದಾಳಿ – 30 ಸಿಆರ್‌ಪಿಎಫ್ ಯೋಧರು ಹುತಾತ್ಮ

    ಶ್ರೀನಗರ: ಈ ವರ್ಷದ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಅತಿದೊಡ್ಡ ದಾಳಿ ನಡೆಸಿ 30 ಜನ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಅವಂತಿಪುರ ಸಮೀಪದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ಸುಧಾರಿತ ಸ್ಫೋಟಕ ಸಾಮಾಗ್ರಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ 30 ಮಂದಿ ಯೋಧರು ಹುತಾತ್ಮರಾಗಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಧಾರಿತ ಸ್ಫೋಟಕ ಸಾಧನಗಳಿಂದ ದಾಳಿ ಮಾಡಿದ ಪರಿಣಾಮ ಯೋಧರ ಮೃತ ದೇಹಗಳನ್ನು ಗುರುತು ಸಿಗದಂತೆ ರಸ್ತೆಯಲ್ಲಿ ಬಿದ್ದಿದೆ.

    ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯ ನಡೆದಿದ್ದಾರೆ. ಪಾಕ್ ಮೂಲದ ಜೈಶ್ ಈ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv