ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ (Cruiser) ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.
ಗದಗ (Gadag) ಮೂಲದ ಕುಟುಂಬವು ಗದಗದಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಿದ್ದರು. ಕೊಲ್ಲಾಪುರದಿಂದ ವಾಪಸ್ಸಾಗುತ್ತಿದ್ದಾಗ ಮುಲ್ಲಾ ಧಾಬಾ ಬಳಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಾಯಾಳುಗಳಿಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾರವಾಡ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕೋಡಿ: ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ (Cruiser) ವಾಹನ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ನಡೆದಿದೆ.
ಮೃತ ಮಹಿಳೆಯರನ್ನು ಬೆಳಗಾವಿ ಜಿಲ್ಲೆಯ ಅಥಣಿಯ ಬಳ್ಳಿಗೇರಿ ಗ್ರಾಮದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯರು ಬಳ್ಳಿಗೇರಿಯಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಮನೆಯಲ್ಲಿ ಕೈ, ಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಮೃತದೇಹ ಪತ್ತೆ
ವಿಜಯಪುರ: ಬೆಳ್ಳಂಬೆಳಗ್ಗೆ ಕಬ್ಬು (sugar kane) ಸಾಗಿಸುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ (Cruiser) ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ದಂಪತಿ ಮೃತಪಟ್ಟಿದ್ದಾರೆ.
ಇತರೆ ಒಂಬತ್ತು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಮಹಾರಾಷ್ಟ್ರದ (Maharastra) ಸೊಲ್ಲಾಪುರಕ್ಕೆ ರವಾನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್‌ಎಚ್ 50 ರಲ್ಲಿ ಘಟನೆ ಸಂಭವಿಸಿದೆ. ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದಂಪತಿ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ
ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ಇವರೆಲ್ಲಾ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತವಾಗಿದೆ. ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22) ಹಾಗೂ ದಾಸನಟ್ಟಿ ಗ್ರಾಮದ ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಗೋಕಾಕ್ ತಾಲೂಕಿನ ದಾಸನಟ್ಟಿ, ಅಕ್ಕತಂಗೇರಹಾಳ, ಎಂ ಮಲ್ಲಾಪುರ ನಿವಾಸಿಗಳಾಗಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆಂದು ಹೊರಟಿದ್ದರು. ಆದರೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO
ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಗ್ರಾಮದಿಂದ ಮೂರು ಕ್ರೂಸ್‌ಗಳಲ್ಲಿ ಕಾರ್ಮಿಕ ಬೆಳಗಾವಿಯ ಸಮೀಪದಲ್ಲಿ ನಡೆಯುತ್ತಿರುವ ರೈಲ್ವೆ (ಡಬ್ಲಿಂಗ್) ಟ್ರಾಕ್ ಕಾಮಗಾರಿಗೆ ಹೊರಟಿದ್ದರು. ಒಂದು ಕ್ರೂಸ್‌ನಲ್ಲಿ 18 ಜನರು ಪ್ರಾಯಣಿಸುತ್ತಿದ್ದರು. ಗೋಕಾಕ್ ಮಾರ್ಗದಿಂದ ಅತಿವೇಗವಾಗಿ ಹೋಗುವಾಗ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಲ್ಯಾಳ ರಸ್ತೆ ಬದಿಯ ಬ್ರಿಡ್ಜ್ ( ಪೂಲ್ )ಗೆ ಡಿಕ್ಕಿ ಹೊಡೆದು ಎರಡು ಬಾರಿ ಪಲ್ಟಿ ಹೊಡೆದು ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಜನರ ಸಾವಾಗಿದೆ. ಬೆಳಿಗ್ಗೆ 9.20ರ ಸುಮಾರಿಗೆ ಈ ಅಪಘಾತವಾಗಿದೆ. ಮೃತರೆಲ್ಲರೂ ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಮತ್ತು ದಾಸನಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇನ್ನೂ ಅಪಘಾತವಾದ ಪರಿಣಾಮ ಕ್ರೂಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಮುಂದುವರಿಯುತ್ತಿದೆ. ಕಳೆದ 1 ವಾರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 12 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ನಿವಾಸಿಯಾಗಿರುವ ಆನಂದ ಕಳೆದ ಮೇ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಅಣ್ಣಿಗೇರಿ ತಾಲ್ಲೂಕಿನ ಭದ್ರಾಪೂರ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ತಿಮ್ಮಣ್ಣ ಮರಿಗೌಡರ್ (27), ಮುಹಬಕರ್ ಅಲಿ (22), ಜುಬೇಕರ್ (25) ಮತ್ತು ಸುಹೇಬಾ (23) ಗಾಯಗೊಂಡಿದ್ದಾರೆ. ಸುಹೇಬಾಗೆ ಎದೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರಾಧ್ಯ ಹುತಮಲ್ಲಣ್ಣವರ (5) ಹಾಗೂ ಮುತ್ತು ಮರಿಗೌಡ (16) ಎಂಬವರೇ ಮೃತಪಟ್ಟವರು. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನು 6 ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು
ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ @JoshiPralhad ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಇದೇ ಮೇ 20 ರಂದು ಧಾರವಾಡದ ಬಾಡ ಬಳಿ ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಐಸಿಯುನಲ್ಲಿದ್ದ ಇಬ್ಬರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇಂದು ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸೆಕ್ಸ್‌ನಿಂದಲೂ ಹರಡಬಹುದು ಮಂಕಿಪಾಕ್ಸ್- ತಜ್ಞರಿಂದ ಎಚ್ಚರಿಕೆ
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬೆನ್ನಲ್ಲೇ ಕ್ರೂಸರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಯಚೂರು: ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.
ಕೊಪ್ಪಳದ ಗಿಣಿಗೇರಾ ಮೂಲದ ಲಕ್ಷ್ಮೀದೇವಿ (45) ಮೃತ ಮಹಿಳೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನ ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕ್ರೂಸರ್ ಟೈರ್ ಬ್ಲಾಸ್ಟ್ ಆಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣನೇ?- ಲಂಕಾ ಅಧ್ಯಯನ
ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಲ್ಕೆರೆ ಗ್ರಾಮ ಬಳಿ ನಡೆದಿದೆ.
ಈ ಘಟನೆಯಲ್ಲಿ ಕಾರಿನಲ್ಲಿದ್ದ ಅರಸೀಕೆರೆ ಮೂಲದ ಗೌತಮ್ ಸಿಂಗ್, ಮದನ್ ಸಿಂಗ್ ಮತ್ತು ಮುಖೇಶ್ ಸಿಂಗ್ ಸಾವನ್ನಪ್ಪಿದ್ದು, ಕ್ರೂಸರ್ ವಾಹನದಲ್ಲಿದ್ದ ಚಿಕ್ಕಮಗಳೂರು ಜಿಲ್ಲೆ ಮೂಲದ ಲೋಕೇಶ್ ಎಂಬವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದ ಗಣೇಶೋತ್ಸಕ್ಕೆ ಬಂದು ತನ್ನ ಕ್ರೂಸರ್ ವಾಹನದಲ್ಲಿ ಹಿಂದಿರುಗುತ್ತಿದ್ದ ಲೊಕೇಶ್, ಮಾರ್ಗ ಮಧ್ಯೆ ಹೊಸದುರ್ಗದಿಂದ ಹಿಂದಿರುಗುತ್ತಿದ್ದ ಇಟಿಯಾಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಸಂಪೂರ್ಣ ನುಜ್ಜಾಗಿವೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಧಾರವಾಡ: ಕ್ರೂಸರ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಬಳಿ ನಡೆದಿದೆ.
ಜಿಲ್ಲೆಯ ಹನಸಿ ಗ್ರಾಮದ ಮಹಾಂತೇಶ ನಿಂಗಪ್ಪ ಗುಜ್ಜಳ (26), ಚಂದ್ರಗೌಡ ಶಿವನಗೌಡ ರಾಯನಗೌಡ (28) ಹಾಗೂ ಹೆಬ್ಬಾಳ ಗ್ರಾಮದ ಆನಂದ ನಿಂಗಪ್ಪ ಜೆಟ್ಟೆನವರ (26) ಎಂಬವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರಾತ್ರಿ ಈ ಮೂವರು ಗೆಳೆಯನ ಬರ್ತ್ ಡೇ ಪಾರ್ಟಿಗೆಂದು ನವಲಗುಂದಕ್ಕೆ ಹೋಗಿದ್ದಾರೆ. ಅಲ್ಲಿಯ ಒಂದು ಡಾಬಾದಲ್ಲಿ ಪಾರ್ಟಿ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.