Tag: Cruiser car

  • ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

    ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

    ತುಮಕೂರು: ನಿಂತಿದ್ದ ಕ್ರೂಸರ್ ಕಾರಿಗೆ (Cruiser Car) ಲಾರಿ (Lorry) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ (Tumakuru) ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ (Highway) 4ರಲ್ಲಿ ನಡೆದಿದೆ.

    ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು. ಅಪಘಾತದಲ್ಲಿ (Accident) ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, ಮೃತರು ಗಂಗಾವತಿ (Gangavati) ಮೂಲದವರು ಎನ್ನುವ ಮಾಹಿತಿ ದೊರೆತಿದೆ. ಇದನ್ನೂ ಓದಿ: ಬೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಹ್ಯಾಕ್ – ಬಿಲ್ ಕಟ್ಟೋಕೆ ಹೋದ್ರೆ ಅಕೌಂಟ್‌ನಲ್ಲಿದ್ದ ಹಣ ಮಾಯ

    ಮೃತರು ಗಂಗಾವತಿಯಿಂದ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು

  • ದೇವರ ದರ್ಶನ ಪಡೆದು ಬರುತ್ತಿದ್ದ ಕ್ರೂಸರ್ ಪಲ್ಟಿ- 12 ಮಂದಿ ಗಂಭೀರ

    ದೇವರ ದರ್ಶನ ಪಡೆದು ಬರುತ್ತಿದ್ದ ಕ್ರೂಸರ್ ಪಲ್ಟಿ- 12 ಮಂದಿ ಗಂಭೀರ

    ವಿಜಯಪುರ: ದೇವರ ದರ್ಶನ ಪಡೆದು ವಾಪಾಸ್ ಬರುತ್ತಿದ್ದ ವೇಳೆ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಕ್ರೂಸರ್ ಪಲ್ಟಿಯಾಗಿದೆ.

    ಇಂಡಿ ತಾಲೂಕಿನ ಧೂಳಖೇಡ ಬಳಿಯ ಚಾಚಾ ದಾಬಾದ ಹತ್ತಿರ ಈ ಅಪಘಾತ ಸಂಭವಿಸಿದೆ. ತುಳಜಾಪುರಕ್ಕೆ ಹೋಗಿ ವಾಪಸ್ಸು ಬರುವಾಗ ಘಟನೆ ನಡೆದಿದ್ದು, ಈ ಅಪಘಾತದಲ್ಲಿ ಮದುವೆಯ ನಂತರ ದೇವಸ್ಥಾನಕ್ಕೆ ಹೋಗಿದ್ದ ನವ ದಂಪತಿ ಕೂಡ ಗಾಯಗೊಂಡಿದ್ದಾರೆ. ಜೊತೆಗೆ ವಾಹನದಲ್ಲಿದ್ದ 12 ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ರಾಷ್ಟೀಯ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಕ್ರೂಸರ್ ಚಾಲಕ ಮುಂದಾಗಿದ್ದನು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಏಕಾಏಕಿ ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.