Tag: CS Puttaraju

  • ಮಂಡ್ಯದಲ್ಲಿ ಮಾಜಿ ಸಚಿವ ಪುಟ್ಟರಾಜುಗೆ ಕಾಂಗ್ರೆಸ್ ಗಾಳ!

    ಮಂಡ್ಯದಲ್ಲಿ ಮಾಜಿ ಸಚಿವ ಪುಟ್ಟರಾಜುಗೆ ಕಾಂಗ್ರೆಸ್ ಗಾಳ!

    ಮಂಡ್ಯ: ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ (Congress) ಮುಂಬರುವ ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಮಾಡಿದ್ದು, ಆಪರೇಷನ್ ಹಸ್ತಕ್ಕೆ ಕೈ ನಾಯಕರು ಮುಂದಾಗಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಜೋರಾಗಿ ಕೇಳಿ ಬರುತ್ತಿದೆ. ಅದೇ ರೀತಿ ಸಕ್ಕರೆನಾಡು ಮಂಡ್ಯದಲ್ಲಿ ಕಾಂಗ್ರೆಸ್ ತನ್ನ ಎಂಪಿ ಅಭ್ಯರ್ಥಿಗೆ ಜೆಡಿಎಸ್ (JDS) ನಾಯಕನಿಗೆ ಗಾಳ ಹಾಕಲು ಆಪರೇಷನ್‍ಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

    ಹೌದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ ಮೇಲೆ ಬಿಜೆಪಿ (BJP) ಹಾಗೂ ಜೆಡಿಎಸ್ ನಾಯಕರನ್ನು ಕರೆತಂದು ಎಂಪಿ ಅಭ್ಯರ್ಥಿಯನ್ನಾಗಿ ಮಾಡಿ ಲೋಕ ಸಮರ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಮಂಡ್ಯದಲ್ಲಿ ಕಾಂಗ್ರೆಸ್‍ಗೆ ಸೂಕ್ತ ಎಂಪಿ ಅಭ್ಯರ್ಥಿ ಇಲ್ಲ. ಅಭ್ಯರ್ಥಿ ಇಲ್ಲದ ಕಾರಣ ಜೆಡಿಎಸ್‍ನ ನಾಯಕನೊಬ್ಬನನ್ನು ಕರೆತಂದು ಅಭ್ಯರ್ಥಿ ಮಾಡುವ ಪ್ಲಾನ್‍ನನ್ನು ಕೈ ನಾಯಕರು ಮಾಡ್ತಾ ಇದ್ದಾರೆ.

    ಸದ್ಯ ಜೆಡಿಎಸ್ ಹಾಗೂ ರಾಜಕೀಯ ಮುಖಂಡರ ಪೈಕಿ ಪ್ರಭಾವಿ ನಾಯಕರೆಂದರೆ ಅದು ಸಿ.ಎಸ್.ಪುಟ್ಟರಾಜು. ಹೀಗಾಗಿ ಕಾಂಗ್ರೆಸ್ ಪುಟ್ಟರಾಜು (C S Puttarju) ಆಪರೇಷನ್‍ಗೆ ಕೈ ಹಾಕುವ ಪ್ರಯತ್ನದಲ್ಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಸಚಿವ ಚಲುವರಾಯಸ್ವಾಮಿಯವರ ಶುಕ್ರವಾರ ಮಂಡ್ಯ ಹೇಳಿಕೆ ಮತ್ತಷ್ಟು ಪುಷ್ಟಿ ನೀಡಿದೆ. ಆದರೆ ಈವರೆಗೆ ಪುಟ್ಟರಾಜು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಸುಧಾಕರ್ ಮತ್ತೆ ಕಾಂಗ್ರೆಸ್‌ಗೆ ಬರಲು ನಾನು ಬಿಡಲ್ಲ: ಶಿವಶಂಕರ ರೆಡ್ಡಿ

    ಇಂದು (ಶನಿವಾರ) ಸಹ ಪುಟ್ಟರಾಜುಗೆ ಕಾಂಗ್ರೆಸ್ ಗಾಳ ವಿಚಾರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, ನಮಗೆ ಆಡಳಿತ ನಡೆಸಲು ಯಾರ ಅವಶ್ಯಕತೆ ಇಲ್ಲ. ಈಗ ಯಾರ ಹೆಸರನ್ನು ಹೇಳಲ್ಲ, ವಾಲೆಂಟರಿಯಾಗಿ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿರುವ ಪುಟ್ಟರಾಜು, ಚಲುವರಾಯಸ್ವಾಮಿ ಹೇಳೋದೆಲ್ಲ ನಿಜವಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಮಾತಾಡಲ್ಲ ಎಂದಿದ್ದಾರೆ.

    ಪುಟ್ಟರಾಜುಗೆ ಕಾಂಗ್ರೆಸ್ ಗಾಳ ಹಾಕ್ತಿದೆ ಎಂಬ ವಿಚಾರಕ್ಕೆ ಹೆಚ್‍ಡಿಕೆ ಪ್ರತಿಕ್ರಿಯಿಸಿ, ಅವರು ಬರೋರಿದ್ದರೆ ಕರೆದುಕೊಂಡು ಹೋಗಿ. ಮೈಸೂರು ಪೇಟ ತೊಡಿಸಿ ಕರೆದುಕೊಂಡು ಹೋಗಿ ಅಂತ ಹೇಳಿದ್ದಾರೆ. ಒಟ್ಟಾರೆ ಲೋಕಸಭಾ ಚುನಾವಣೆ ಸಮೀಪ ಆಪರೇಷನ್ ವಿಚಾರ ಭಾರೀ ಚರ್ಚೆ ಆಗ್ತಿದ್ದು… ಯಾರು ಎಲ್ಲಿಗೆ ಹೋಗ್ತಾರೆ ಎಂಬುದಕ್ಕೆ ಉತ್ತರ ಲೋಕಸಭೆಗೆ ಚುನಾವಣೆ ದಿನಾಂಕ ನಿಗದಿ ಆದ್ಮೇಲೆ ಗೊತ್ತಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಶಪಥ ರಸ್ತೆ ಜೆಡಿಎಸ್ ಸರ್ಕಾರದ ಕೊಡುಗೆ – ಶಾಸಕ ಪುಟ್ಟರಾಜು

    ದಶಪಥ ರಸ್ತೆ ಜೆಡಿಎಸ್ ಸರ್ಕಾರದ ಕೊಡುಗೆ – ಶಾಸಕ ಪುಟ್ಟರಾಜು

    ಮೈಸೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ನಿರ್ಮಾಣಕ್ಕೆ ಜೆಡಿಎಸ್  ಸರ್ಕಾರದ ಕೊಡುಗೆಯೂ ಇದೆ. ಮೈತ್ರಿ ಸರ್ಕಾರ ಇದ್ದಾಗ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಅನುಮೋದನೆ ಕೊಡದೇ ಇದ್ದಿದ್ದರೇ ರಸ್ತೆ ಹೇಗೆ ಆಗುತ್ತಿತ್ತು ಎಂದು ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು (CS Puttaraju) ಪ್ರಶ್ನಿಸಿದ್ದಾರೆ.

    PRATAP SIMHA 2

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ದಶಪಥ ರಸ್ತೆ ಕ್ರೆಡಿಟ್ ವಾರ್ ವಿಚಾರಕ್ಕೆ ಪ್ರತಿಕ್ರಿಯಿಸಿ, ದಶಪಥ ರಸ್ತೆಗೆ ಜೆಡಿಎಸ್‌ನದ್ದೂ (JDS) ಪಾಲಿದೆ ಎಂದು ಹೇಳಿದರು. ಇದನ್ನೂ ಓದಿ: ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು

    ಪ್ರತಾಪ್ ಸಿಂಹ (Pratap Simha) ಹೆಜ್ಜೆ-ಹೆಜ್ಜೆಗೂ ಚೀಫ್ ಎಂಜಿನಿಯರ್ ಥರ ಆಡ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಾಪ್ ಸಿಂಹಗೇ ಹೆದ್ದಾರಿ ಯೋಜನೆ ಗುತ್ತಿಗೆ ಕೊಟ್ಟಿದ್ಯಾ? ಇಡೀ ಯೋಜನೆ ನಾನೊಬ್ಬನೇ ಮಾಡಿಸಿದ್ದೇನೆ ಅಂತಾ ಓಡಾಡಿಕೊಂಡಿದ್ದಾರೆ. ನಾನು ಎಂಪಿ ಆಗಿದ್ದವನು. ದೆಹಲಿಯಲ್ಲಿ ಏನೆಲ್ಲಾ ಹೋರಾಟ ಮಾಡಿದ್ದೀನಿ ಅಂತಾ ಯಡಿಯೂರಪ್ಪ ಅವರ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದರು. ಇದನ್ನೂ ಓದಿ: ಮೋದಿ ರೋಡ್ ಶೋಗೆ ಮೊದಲೇ ಸಿದ್ದರಾಮಯ್ಯ ಪರಿಶೀಲನಾ ಯಾತ್ರೆ

    ExpressWay

    ಮೈತ್ರಿ ಸರ್ಕಾರ ಇದ್ದಾಗ ಕುಮಾರಸ್ವಾಮಿ ಯೋಜನೆಯ ಅನುಮೋದನೆ ನೀಡದೇ ಇದ್ದಿದ್ದರೆ ಹೆದ್ದಾರಿ ಹೇಗೆ ಆಗುತ್ತಿತ್ತು. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದಿದ್ರೂ ಈ ಯೋಜನೆಗೆ ಸಹಕಾರ ಕೊಡಲೇಬೇಕಿತ್ತು. ಹೆದ್ದಾರಿ ಬಂದಿರುವುದರಿಂದ ಚನ್ನಪಟ್ಟಣ, ರಾಮನಗರ, ಮಂಡ್ಯ ಶ್ರೀರಂಗಪಟ್ಟಣದ ನೂರಾರು ಕುಟುಂಬಗಳ ಬಾಯಿಗೆ ಮಣ್ಣು ಬಿದ್ದಿದೆ ಎಂದು ತಿಳಿಸಿದರು.

  • ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು

    ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು

    ಮೈಸೂರು: ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ನಾಳೆಯೇ ಬಿಜೆಪಿ ಸೇರಿಕೊಳ್ಳುತ್ತಾರೆ ಎಂದು ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು (C.S Puttaraju) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ (Narendra Modi) ಕಾರ್ಯಕ್ರಮದಲ್ಲೇ ಸೇರ್ಪಡೆ ಆಗೋ ಪ್ಲಾನ್ ಮಾಡಿದ್ರು. ಆದರೆ ಸರ್ಕಾರಿ ಕಾರ್ಯಕ್ರಮ ಆಗಿದ್ರಿಂದ ಅವಕಾಶ ಸಿಗಲಿಲ್ಲ. ಹೀಗಾಗಿ ನನ್ನ ಪ್ರಕಾರ ಅವರು ನಾಳೆ ಬಿಜೆಪಿ (Sumalatha BJP) ಸೇರಬಹುದು ಎಂದಿದ್ದಾರೆ.

    ಇದೇ ವೇಳೆ ದಶಪಥ ರಸ್ತೆ ಕ್ರೆಡಿಟ್ ವಾರ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜೆಡಿಎಸ್‍ನದ್ದು ಪಾಲಿದೆ ಎಂದು ಕ್ರೆಡಿಟ್ ಕ್ಲೈಮ್ ಮಾಡಿದರು. ಪ್ರತಾಪ್ ಸಿಂಹ (Pratap Simha) ಹೆಜ್ಜೆ ಹೆಜ್ಜೆಗೂ ಚೀಫ್ ಎಂಜಿನಿಯರ್ ಥರ ಆಡ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಾಪ್ ಸಿಂಹಗೆ ಹೆದ್ದಾರಿ ಯೋಜನೆ ಗುತ್ತಿಗೆ ಕೊಟ್ಟಿದ್ಯಾ? ಇಡೀ ಯೋಜನೆ ನಾನೊಬ್ಬನೇ ಮಾಡಿಸಿದ್ದೇನೆ ಅಂತ ಓಡಾಡಿಕೊಂಡಿದ್ದಾರೆ. ನಾನು ಎಂಪಿ ಆಗಿದ್ದವನು. ದೆಹಲಿಯಲ್ಲಿ ಏನೆಲ್ಲಾ ಹೋರಾಟ ಮಾಡಿದ್ದೀನಿ ಅಂತ ಯಡಿಯೂರಪ್ಪ (BS Yediyurappa) ಅವರ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದರು.

    ಮೈತ್ರಿ ಸರ್ಕಾರ ಇದ್ದಾಗ ಕುಮಾರಸ್ವಾಮಿ ಯೋಜನೆಯ ಅಲೈನ್‍ಮೆಂಟ್ ಮಾಡಿ, ಅನುಮೋದನೆ ನೀಡದಿದ್ದರೆ ಹೆದ್ದಾರಿ ಹೇಗೆ ಆಗುತ್ತಿತ್ತು. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದಿದ್ರೂ ಈ ಯೋಜನೆಗೆ ಸಹಕಾರ ಕೊಡಲೇಬೇಕಿತ್ತು. ಹೆದ್ದಾರಿ ಬಂದಿರುವುದರಿಂದ ಚನ್ನಪಟ್ಟಣ, ರಾಮನಗರ, ಮಂಡ್ಯ ಶ್ರೀರಂಗಪಟ್ಟಣದ ನೂರಾರು ಕುಟುಂಬಗಳ ಬಾಯಿಗೆ ಮಣ್ಣು ಬಿದ್ದಿದೆ ಎಂದು ತಿಳಿಸಿದರು.

  • ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಿದ್ದರಾಮಯ್ಯ ಮನೆಗೆ ಹೋಗಿದ್ದೆ: ಪುಟ್ಟರಾಜು

    ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಿದ್ದರಾಮಯ್ಯ ಮನೆಗೆ ಹೋಗಿದ್ದೆ: ಪುಟ್ಟರಾಜು

    ಮಂಡ್ಯ: ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಿದ್ದರಾಮಯ್ಯನವರ ಮನೆಗೆ ಹೋಗಿದ್ದೆ ಎಂದು ಮೇಲುಕೋಟೆಯ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಸೇರ್ಪಡೆ ಚರ್ಚೆ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಡಿಂಕಾ ಮಲ್ಲಿಗೆರೆ ಗ್ರಾಮದಲ್ಲಿ ಸಿದ್ದರಾಮೇಶ್ವರ ದೇವಾಲಯ ನಿರ್ಮಾಣ ಮಾಡಿದ್ದಾರೆ. ದೇವಾಲಯ ಸಮಿತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡುವಂತೆ ಒತ್ತಾಯಿಸಿದ್ದರು ಎಂದರು. ಇದನ್ನೂ ಓದಿ: ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ

    ಹೀಗಾಗಿ ಸಿದ್ದರಾಮಯ್ಯನವರ ಭೇಟಿಗೆ ಸಮಯ ಕೇಳಿದ್ದು, ಅವರು ನಿನ್ನೆ ಬೆಳಿಗ್ಗೆ 7 ಗಂಟೆಗೆ ಸಮಯ ನೀಡಿದ್ದರು. ಆದರೆ ಸಿದ್ದರಾಮಯ್ಯನವರನ್ನು ಸಂಜೆ 6:30ಕ್ಕೆ ಭೇಟಿಯಾಗಲು ಹೋಗಿದ್ದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ

    ಅದೇ ವೇಳೆಗೆ ಎಂ.ಬಿ.ಪಾಟೀಲ್, ಜಮೀರ್ ಅಹಮದ್ ಸಿದ್ದರಾಮಯ್ಯ ಅವರ ಮನೆಗೆ ಬಂದರು. ಇದನ್ನೂ ಗಮನಿಸಿದ ಯಾರೋ ಫೋಟೋ ತೆಗೆದು ವೈರಲ್ ಮಾಡಿದ್ದಾರೆ. ರಾಜಕೀಯದ ಬಗ್ಗೆ ಮಾತನಾಡೋದಕ್ಕೆ ಏನಿದೆ? ನಾನು ಜೆಡಿಎಸ್, ಅವರು ಕಾಂಗ್ರೆಸ್, ಹಾಗಾಗಿ ರಾಜಕೀಯ ಚರ್ಚೆ ಏನೂ ಇಲ್ಲ ಎಂದು ನುಡಿದರು.

     

  • ಮಂಡ್ಯ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರೀ ಮಳೆ – ಮನೆಗಳು ಕುಸಿತ

    ಮಂಡ್ಯ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರೀ ಮಳೆ – ಮನೆಗಳು ಕುಸಿತ

    ಮಂಡ್ಯ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕಳೆದ ರಾತ್ರಿ ಮಳೆ ಸುರಿದ ಕಾರಣ ಪಾಂಡವಪುರ ಹಾಗೂ ಕೆಆರ್‍ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಕುಸಿದಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಇದರಿಂದ ರೈತರು ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.

    ಪಾಂಡವಪುರ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಇಡೀ ಗ್ರಾಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಮನೆಗಳಿಗೆ ನೀರು ನುಗ್ಗಿರುವ ಕಾರಣ 8 ಮನೆಗಳು ಕುಸಿದಿವೆ. ರಾತ್ರಿಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ನೀರಿನಲ್ಲಿ ಸಿಲುಕಿದವರ ರಕ್ಷಣೆ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಅವರ ತಂದೆ ಮಾಡಿದ ಕೆಲಸ ಮರೆತಿದ್ದಾರೆ: ರಾಜೂಗೌಡ

    ನಿನ್ನೆ ಸಂಜೆ 4 ಗಂಟೆಯಿಂದ ಇಂದು ಮುಂಜಾನೆಯವರೆಗೂ ಪಾಂಡವಪುರ ಹಾಗೂ ಕೆಆರ್‍ಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಮಳೆ ಸುರಿದಿದೆ. ಲಿಂಗಾರಪುರ ಗ್ರಾಮದ ಪಕ್ಕದ ಹಳ್ಳದ ನೀರು ಉಕ್ಕಿ ಹರಿದ ಕಾರಣ ಗ್ರಾಮಕ್ಕೆ ನೀರು ನುಗ್ಗಿದೆ. ಹೀಗಾಗಿ ರಾತ್ರಿ ಪೂರ್ತಿ ಇಲ್ಲಿನ ಜನರು ಜಾಗರಣೆ ಮಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಗ್ರಾಮದ ಬಹುತೇಕ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

    ದಿನಸಿ ಸೇರಿದಂತೆ ಅಗತ್ಯ ವಸ್ತುಗಳು ಸಂಪೂರ್ಣ ನಾಶವಾಗಿದ್ದು, ಒಟ್ಟು 8 ಮನೆಗಳ ಗೋಡೆ ಕುಸಿದು ಲಕ್ಷಾಂತರ ನಷ್ಟವಾಗಿದೆ. ಮನೆಗೆ ನೀರು ತುಂಬಿಕೊಳ್ಳುತ್ತಿದ್ದಂತೆ ಜನರು ಹೊರ ಬಂದಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆ ಕಳೆದುಕೊಂಡವರು ಸಂಬಂಧಿಕರ ಮನೆಗಳಿಗೆ ಆಟೋ, ಗೂಡ್ಸ್ ವಾಹನದಲ್ಲಿ ಅಳಿದುಳಿದ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಪರಿಷತ್‍ಗೆ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

    ಮಧ್ಯರಾತ್ರಿಯೇ ಗ್ರಾಮಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಭೇಟಿ ನೀಡಿದ್ದು, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ತುರ್ತು ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.

  • ಮನೆ ಮೇಲೆ ಕಲ್ಲು ತೂರಿರುವುದು ರಾಜಕೀಯ ಪ್ರೇರಿತವಲ್ಲ: ಪುಟ್ಟರಾಜು ಸ್ಪಷ್ಟನೆ

    ಮನೆ ಮೇಲೆ ಕಲ್ಲು ತೂರಿರುವುದು ರಾಜಕೀಯ ಪ್ರೇರಿತವಲ್ಲ: ಪುಟ್ಟರಾಜು ಸ್ಪಷ್ಟನೆ

    ಮಂಡ್ಯ: ನನ್ನ ಮೇಲೆ ಕಲ್ಲು ತೂರಾಟ ನಡೆಸಿರುವುದು ರಾಜಕೀಯ ಪ್ರೇರಿತವಲ್ಲ. ಬದಲಾಗಿ ಯಾರೋ ಕಿಡಿಗೇಡಿಗಳು ಮಾಡಿರುವ ಕೆಲಸ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು ಸ್ಪಷ್ಟಪಡಿಸಿದ್ದಾರೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಾಸಕರು, ಕಳೆದ ರಾತ್ರಿ ಪಾಂಡವಪುರ ಪಟ್ಟಣದಲ್ಲಿ ಯಾರೋ ಕಿಡಿಗೇಡಿಗಳು ಬಸ್, ಕಾರು, ಮೊಬೈಲ್ ಅಂಗಡಿ ಸೇರಿದಂತೆ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ನಮ್ಮ ಮನೆ ಮೇಲೂ ಕಲ್ಲು ತೂರಿದ್ದಾರೆ. ಇದೊಂದು ರಾಜಕೀಯ ಪ್ರೇರಿತವಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯವಾಗಿದೆ. ಇದಕ್ಕೂ ಮೊದಲು ಕಿಡಿಗೇಡಿಗಳು ಪೆಟ್ರೋಲ್ ಬಂಕ್ ವೊಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಆದ್ದರಿಂದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಯಾವುದೇ ಆತಂಕಪಡದೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ಪಾಂಡವಪುರ ಪಟ್ಟಣದಲ್ಲಿ ಗುರುವಾರ ಮಧ್ಯರಾತ್ರಿ ಮಂಡ್ಯದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು ಶಾಸಕ ಪುಟ್ಟರಾಜು ಮನೆ ಸೇರಿದಂತೆ ಹಲವು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪುಟ್ಟರಾಜು ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದು ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ಕಲ್ಲು ತೂರಾಟದಿಂದ ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಅಲ್ಲದೆ ಪುಂಡರು ಮೂರು ಕಾರು, ಒಂದು ಖಾಸಗಿ ಬಸ್ ಹಾಗೂ ಹೋಂಡಾ ಶೋರೂಂ ಮೇಲು ಕಲ್ಲು ಎಸೆದಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಯುವತಿ ತಂದೆ, ತಾಯಿ ಸೇರಿ 10 ಮಂದಿ ಅರೆಸ್ಟ್

    ಮೂರು ಕಾರುಗಳ ಗಾಜುಗಳಿಗೆ ಡ್ಯಾಮೇಜ್ ಆಗಿದೆ. ಒಂದು ಕಾರಿಗೆ ಭಾರೀ ಗಾತ್ರದ ಕಲ್ಲು ಎಸೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ ಮಂಡ್ಯದಲ್ಲಿ ಪುಂಡರ ಅಟ್ಟಹಾಸ – ಶಾಸಕ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ

  • ಮಧ್ಯರಾತ್ರಿ ಮಂಡ್ಯದಲ್ಲಿ ಪುಂಡರ ಅಟ್ಟಹಾಸ – ಶಾಸಕ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ

    ಮಧ್ಯರಾತ್ರಿ ಮಂಡ್ಯದಲ್ಲಿ ಪುಂಡರ ಅಟ್ಟಹಾಸ – ಶಾಸಕ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ

    – ಕಾರುಗಳ ಗಾಜು ಪುಡಿ ಪುಡಿ

    ಮಂಡ್ಯ: ಶಾಸಕ ಸಿ.ಎಸ್.ಪುಟ್ಟರಾಜು ಮನೆ ಸೇರಿದಂತೆ ಹಲವು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.

    ಪಾಂಡವಪುರ ಪಟ್ಟಣದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದು ವಿಕೃತಿ ಮೆರೆದಿದ್ದಾರೆ.

    ಕಿಡಿಗೇಡಿಗಳ ಕಲ್ಲು ತೂರಾಟದಿಂದ ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಅಲ್ಲದೆ ಪುಂಡರು ಮೂರು ಕಾರು, ಒಂದು ಖಾಸಗಿ ಬಸ್ ಹಾಗೂ ಹೋಂಡಾ ಶೋರೂಂ ಮೇಲು ಕಲ್ಲು ಎಸೆದಿದ್ದಾರೆ. ಇದನ್ನೂ ಓದಿ: ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿ ಮೇಲೆ ಅನುಮಾನ

    ಮೂರು ಕಾರುಗಳ ಗಾಜುಗಳಿಗೆ ಡ್ಯಾಮೇಜ್ ಆಗಿದೆ. ಒಂದು ಕಾರಿಗೆ ಭಾರೀ ಗಾತ್ರದ ಕಲ್ಲು ಎಸೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚಾಮರಾಜನಗರ ದುಸ್ಥಿತಿ ಮಂಡ್ಯಕ್ಕೂ ಬರುತ್ತಾ? – ಸಿ.ಎಸ್ ಪುಟ್ಟರಾಜು ಆತಂಕ

    ಚಾಮರಾಜನಗರ ದುಸ್ಥಿತಿ ಮಂಡ್ಯಕ್ಕೂ ಬರುತ್ತಾ? – ಸಿ.ಎಸ್ ಪುಟ್ಟರಾಜು ಆತಂಕ

    ಮಂಡ್ಯ: ಚಾಮರಾಜನಗರದಲ್ಲಿ ಆದಂತಹ ದುಸ್ಥಿತಿ ಮಂಡ್ಯಕ್ಕೂ ಬರುತ್ತಾ ಎಂದು ಮಾಜಿ ಸಚಿವ, ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಆತಂಕ ವ್ಯಕ್ತಪಡಿಸಿದ್ದಾರೆ.

    ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ಸಾವು ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅಂಕಿ ಅಂಶ ಪಡೆದ ಮೇಲೆ ನಮ್ಮ ಜಿಲ್ಲೆಯಲ್ಲೂ ಇಂದು ಸಂಜೆಯಿಂದ ಆ ರೀತಿ ಆಗಬಹುದೆಂಬ ಆತಂಕ ಎದುರಾಗಿದೆ. ನಿನ್ನೆ ಡಿಸಿಯಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅವರು ಆಕ್ಸಿಜನ್ ತರೋಕೆ ಸಾಕಷ್ಟು ಪ್ರಯತ್ನ ಮಾಡ್ತಿದ್ದಾರೆ. ಆದರೂ ಸರ್ಕಾರ ಆಕ್ಸಿಜನ್ ಪೂರೈಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

    ಸರ್ಕಾರ ಆಕ್ಸಿಜನ್ ಒದಗಿಸುವಲ್ಲಿ ವಿಫಲವಾಗಿದೆ. ಇಂದು ಸಂಜೆಯೊಳಗೆ ಆಕ್ಸಿಜನ್ ನೀಡುವುದಾಗಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ನಾವೆಲ್ಲರೂ ಇಂದು ಕೆಟ್ಟ ಪರಿಸ್ಥಿತಿ ತಲುಪಿದ್ದೇವೆ. ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಹೆಚ್ಚು ಕೇಸ್ ಗಳು ಬರುತ್ತಿವೆ ಎಂದು ತಿಳಿಸಿದರು.

  • ನಿಖಿಲ್ ಕುಮಾರಸ್ವಾಮಿ ಮಗ ಇದ್ದಂಗೆ, ಒಳ್ಳೆ ಹುಡ್ಗ- ಚಲುವರಾಯಸ್ವಾಮಿ

    ನಿಖಿಲ್ ಕುಮಾರಸ್ವಾಮಿ ಮಗ ಇದ್ದಂಗೆ, ಒಳ್ಳೆ ಹುಡ್ಗ- ಚಲುವರಾಯಸ್ವಾಮಿ

    – ದೊಡ್ಡವರ ಸುಳ್ಳುಗಳಿಂದ ನಿಖಿಲ್‍ಗೆ ಸೋಲು

    ಮಂಡ್ಯ: ಜೆಡಿಎಸ್ ಅನರ್ಹ ಶಾಸಕ ನಾರಾಯಣ ಗೌಡರ ಬಳಿಕ ಇದೀಗ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೆ.ಆರ್ ಪೇಟೆ ಉಪ ಚುನಾವಣೆ ಹೊಸ್ತಿಲಲ್ಲಿ ಮತ್ತೆ ನಿಖಿಲ್ ಕುಮಾರಸ್ವಾಮಿ ಅವರ ಸೋಲಿನ ಪರಾಮರ್ಶೆ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಒಳ್ಳೆಯ ಹುಡುಗ. ರಾಜಕಾರಣ ಮಾಡುವುದಕ್ಕೆ ಇನ್ನೂ ಸಮಯ ಇತ್ತು. ದೊಡ್ಡದಾಗಿ ಮೀಸೆ ತಿರುಗಿಸಿ ಕರೆತಂದು ಸೋಲಿಸಿದರು. ನಿಖಿಲ್ ಎಲ್ಲೋ ಒಂದು ಕಡೆ ರಾಜಕಾರಣ ಮಾಡುಕೊಳ್ಳುತ್ತಿದ್ದರು. ಅವರನ್ನು ಕರೆತಂದು ಸೋಲಿಸಿದರು. ಸಿ.ಎಸ್ ಪುಟ್ಟರಾಜು ಅವರೇ ಚುನಾವಣೆಯ ಜವಾಬ್ದಾರಿ ತೆಗೆದುಕೊಂಡಿದ್ದರು ಎಂದು ಹೇಳುವ ಮೂಲಕ ಪರೋಕ್ಷವಾಗಿ ನಿಖಿಲ್ ಸೋಲಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕಾರಣ ಎಂದು ಆರೋಪಿಸಿದರು.

    ನನಗೂ ಕುಮಾರಸ್ವಾಮಿಗೂ ವೈರತ್ವ ಇದೆ. ಹಾಗಂತ ನಿಖಿಲ್ ಜೊತೆಗೂ ವೈರತ್ವ ಕಟ್ಟಿಕೊಳ್ಳೋದಕ್ಕೆ ಆಗುತ್ತಾ. ಅವನೂ ನನ್ನ ಮಗ ಇದ್ದಂಗೆ. ಸಿ.ಎಸ್ ಪುಟ್ಟರಾಜು ಮಂಡ್ಯ ಜಿಲ್ಲೆಯ ಪ್ರಶ್ನಾತೀತ ನಾಯಕರಾಗಿದ್ದಾರೆ. ರಾಜ್ಯಕ್ಕೆ ದೇವೇಗೌಡರು ಇದ್ದಂತೆ ಮಂಡ್ಯಕ್ಕೆ ಸಿ.ಎಸ್.ಪುಟ್ಟರಾಜು ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸಿಲ್ವಾ? ಹಾಗೆ ನಾರಾಯಣಗೌಡರಿಗೂ ಜನ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದರು.

    ಪುಟ್ಟರಾಜು ಕ್ಷೇತ್ರದಲ್ಲಿ ನಿಖಿಲ್ ಗೆ ಎಷ್ಟು ಲೀಡ್ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ ಮಾಜಿ ಸಚಿವರು, ಸಚಿವರಾಗಿದ್ದಾಗ ಕುದುರೆ ಮೇಲಿದ್ರೆ ಮಾತಾಡ್ತಾರೆ ಅಂದುಕೊಂಡಿದ್ದೆವು. ಆದರೆ ಕುದುರೆ ಮೇಲಿಂದ ಇಳಿದ ಮೇಲೂ ಮಾತನಾಡೋದನ್ನ ಎಲ್ಲೂ ನೋಡಿಲ್ಲ. ಎರಡೂವರೆ ಲಕ್ಷ ಲೀಡ್ ಬರದಿದ್ದರೆ ರಾಜಕೀಯ ನಿವೃತ್ತಿ ಅಂದಿದ್ದರು. ಆ ಮೇಲೆ ತಮಾಷೆಗೆ ಅಂದೆ ಎಂದು ಹೇಳುತ್ತಾರೆ. ಈವಾಗ ಯಾಕೆ ಈ ವಿಚಾರ ಮಾತನಾಡಲ್ಲ. ರಾಜಕಾರಣದಲ್ಲಿರುವಾಗ ಮಾತಿನಲ್ಲಿ ಸ್ವಲ್ಪ ಹಿಡಿತವಿರಬೇಕು ಎಂದು ಪುಟ್ಟರಾಜು ವಿರುದ್ಧ ಮತ್ತೆ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

    8 ಸಾವಿರ ಕೋಟಿ ಕೊಟ್ಟಿದ್ದೀವಿ ಅಂತಾರೆ. ಎಲ್ಲಿ ಟೆಂಡರ್ ಆಗಿದೆ. ಯಾವ ಕೆಲಸ ಪ್ರಾರಂಭವಾಗಿದೆ. ಇದಕ್ಕೆಲ್ಲ ಕೆ.ಆರ್ ಪೇಟೆ ಚುನಾವಣೆಗೂ ಮುನ್ನ ಉತ್ತರ ಹೇಳಲೇ ಬೇಕು. ಕುಮಾರಸ್ವಾಮಿ ಅವರು 14 ತಿಂಗಳ ಅವಧಿಯಲ್ಲಿ ಮಂಡ್ಯಕ್ಕೆ 8 ಸಾವಿರ ಕೋಟಿ ಹಣ ಬಿಡುಗಡೆಯಾಗಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

    ಈ ಹಿಂದೆ ನಾರಾಯಣ ಗೌಡ ಅವರು ಕೂಡ ನಿಖಿಲ್ ಸೋಲಿನ ಬಗ್ಗೆ ಪರಾಮರ್ಶೆ ಮಾಡಿದ್ದು, ಜೆಡಿಎಸ್ ವರಿಷ್ಠರ ಸುಳ್ಳಿನಿಂದ ನಿಖಿಲ್‍ಗೆ ಸೋಲಾಯಿತು ಎಂದಿದ್ದರು.

  • ಬಿಎಸ್‍ವೈ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ: ಪುಟ್ಟರಾಜು

    ಬಿಎಸ್‍ವೈ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ: ಪುಟ್ಟರಾಜು

    ಮಂಡ್ಯ: ಸಿಎಂ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಚಿವ ಸ್ಥಾನ ವಂಚಿತರ ವೇಗ ನೋಡಿದರೆ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಅನ್ನಿಸುತ್ತಿದೆ. ಅತೃಪ್ತ ಶಾಸಕರ ಸ್ಪೀಡ್ ನೋಡಿದರೆ ಅವರುಗಳೇ ಯಡಿಯೂರಪ್ಪ ಅವರನ್ನು ಮನೆಗೆ ಕಳುಹಿಸಲು ರೆಡಿಯಾಗಿದ್ದಾರೆ. ನಾವೇನೂ ಬಿಜೆಪಿ ನಾಯಕರಂತೆ ಬಿಜೆಪಿ ಶಾಸಕರನ್ನು ಅಪರೇಶನ್ ಮಾಡುವ ಕೆಲಸಕ್ಕೆ ಕೈ ಹಾಕೋದಿಲ್ಲ ಎಂದು ಟೀಕಿಸಿದರು.

    ಇದೇ ವೇಳೆ ಬೇಬಿ ಬೆಟ್ಟದ ಗಣಿಗಾರಿಕೆ ವಿಷಯದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಗಣಿಗಾರಿಕೆಗೆ ಸಂಬಂಧಿಸಿದಂತೆ ನಾವೇ ಎರಡು ತಿಂಗಳು ಕಾಲ ನಿಷೇಧಾಜ್ಞೆ ವಿಧಿಸಲಾಗಿದೆ. ಈಗ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.