Tag: CSK

  • ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    – ಬೆಂಗಳೂರಿನಲ್ಲಿ ಮಳೆಯ ವಾತಾವರಣ ಹೇಗಿದೆ?
    – ʻಸಬ್ ಏರ್ ಸಿಸ್ಟಂʼ ಒಂದೇ ಆಧಾರ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಹೆಚ್ಚಾಗಿದೆ.

    ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರವೂ ಗರಿಷ್ಠ 28°, ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದೆ. ಒಂದು ವೇಳೆ ಶನಿವಾರವೂ ನಗರದಲ್ಲಿ ಮಳೆಯಾದರೆ, ಪಂದ್ಯ ರದ್ದಾಗಲಿದ್ದು, ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಗಲಿದೆ. ಇದರಿಂದ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೇ ಆಫ್‌ ಪ್ರವೇಶಿಸಲಿದೆ. ಹಾಗಾಗಿ ಮೇ 18 ರಂದು ಯಾವುದೇ ಕಾರಣಕ್ಕೂ ಮಳೆಯಾಗದಿರಲಿ ಎಂದು ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ- ಅರ್ಹತೆಗಳೇನು?

    ಆರ್‌ಸಿಬಿ ತಂಡ ಈವರೆಗೆ ಆಡಿದ 13 ಪಂದ್ಯಗಳಿಂದ 12 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಉತ್ತಮ ನೆಟ್‌ ರನ್‌ರೇಟ್‌ ಆರ್‌ಸಿಬಿ ಕೈ ಹಿಡಿದಿದ್ದು, ಪ್ಲೇ ಆಫ್ಸ್‌ ಪ್ರವೇಶಿಸಲು ಎದುರು ನೋಡುತ್ತಿದೆ. ಆದ್ರೆ ಆರ್‌ಸಿಬಿಗೆ ಮ್ಯಾಜಿಕ್‌ ನಂಬರ್‌ 14 ಅಂಕಗಳನ್ನು ಸಂಪಾದಿಸಲು ಡಿಫೆಂಡಿಂಗ್‌ ಚಾಂಪಿಯನ್ಸ್‌ ಸಿಎಸ್‌ಕೆ ಎದುರು ಜಯಗಳಿಸಲೇಬೇಕಿದೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಒಂದು ವೇಳೆ ಆರ್‌ಸಿಬಿ ರನ್‌ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗೆ ಗೆಲ್ಲಬೇಕು. ಮೊದಲು ಬ್ಯಾಟ್‌ ಮಾಡಿದರೆ ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕು. ಈ ಸುಲಭ ಲೆಕ್ಕಾಚಾರದ ಗೆಲುವು ಕೂಡ ಆರ್‌ಸಿಬಿಗೆ ಅಗತ್ಯವಿದೆ. ಆದರೆ, ಆರ್‌ಸಿಬಿ ತಂಡದ ಎಲ್ಲಾ ಲೆಕ್ಕಾಚಾರಗಳಿಗೆ ಮಳೆ ತಣ್ಣೀರೆರಚುವ ಸಾಧ್ಯತೆ ಇದೆ. ಹವಾಮಾನ ವರದಿ ಪ್ರಕಾರ ಶನಿವಾರ ಸಂಜೆ 5-11ರ ವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಪಂದ್ಯ ಮಳೆಗೆ ಬಲಿಯಾದ್ರೆ ಸಿಎಸ್‌ಕೆ 15 ಅಂಕಗಳೊಂದಿಗೆ ಪ್ಲೇ ಆಫ್‌ ಪ್ರವೇಶಿಸಲಿದೆ.

    ʻಸಬ್‌ ಏರ್‌ ಸಿಸ್ಟಮ್‌ʼ ಒಂದೇ ಆಧಾರ:
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಆದ್ದರಿಂದ ಮಳೆಯು 9 ಗಂಟೆ ವೇಳೆಗೆ ಬಿಡುವು ಕೊಟ್ಟರು ಕನಿಷ್ಠ ಓವರ್‌ಗಳ ಮಿತಿಯಲ್ಲಿ 9:30 ರಿಂದ ಪಂದ್ಯ ಆರಂಭಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಿಚಿತ್ರ ಕಾರಣಕ್ಕೆ ಔಟಾದ ಜಡೇಜಾ – ಏನಿದು ರೂಲ್ಸ್ 37.1.4? 

  • IPL 2024: ಗೆದ್ದರೂ ಖುಷಿಯಿಲ್ಲ – ಶತಕ ಸಿಡಿಸಿ ಮೆರೆದಾಡಿದ ಗಿಲ್‌ಗೆ 24 ಲಕ್ಷ ರೂ. ದಂಡ!

    IPL 2024: ಗೆದ್ದರೂ ಖುಷಿಯಿಲ್ಲ – ಶತಕ ಸಿಡಿಸಿ ಮೆರೆದಾಡಿದ ಗಿಲ್‌ಗೆ 24 ಲಕ್ಷ ರೂ. ದಂಡ!

    – ತಂಡದ ಉಳಿದ ಆಟಗಾರರಿಗೆ ಪಂದ್ಯ ಶುಲ್ಕದ 25% ದಂಡ ವಿಧಿಸಿದ್ದೇಕೆ?

    ಅಹಮದಾಬಾದ್‌: 2024ರ ಐಪಿಎಲ್‌ ಆವೃತ್ತಿಯಲ್ಲಿ 12 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‌ ರೇಸ್‌ನಲ್ಲಿರುವ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡ ಸಿಎಸ್‌ಕೆ ವಿರುದ್ಧ ಗೆದ್ದರೂ ಖುಷಿಯಿಲ್ಲದಂತಾಗಿದೆ.

    ಹೌದು. ಸಿಎಸ್‌ಕೆ (CSK) ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ (Shubman Gill) ಅವರಿಗೆ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದು ಈ ಋತುವಿನಲ್ಲಿ ಟೈಟಾನ್ಸ್‌ ತಂಡಕ್ಕೆ ವಿಧಿಸಲಾದ 2ನೇ ದಂಡ ಶುಲ್ಕವಾಗಿದೆ. ಇದನ್ನೂ ಓದಿ: ಕಿರಿಯ ವಯಸ್ಸಿನಲ್ಲೇ ಕ್ರಿಕೆಟ್ ದೇವರ ದಾಖಲೆ ಮುರಿದ ಸಾಯಿ ಸುದರ್ಶನ್!

    ಮೊದಲ ಬಾರಿಗೆ ನಿಧಾನಗತಿಯ ಓವರ್‌ರೇಟ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. 2ನೇ ಬಾರಿ ನಿಮಯ ಉಲ್ಲಂಘಿಸಿದ್ದರಿಂದಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಇಂಪ್ಯಾಕ್ಟ್‌ ಪ್ಲೇಯರ್‌ (Impact Player) ಸೇರಿದಂತೆ ತಂಡದ ಉಳಿದ 11 ಸದಸ್ಯರಿಗೆ ವೈಯಕ್ತಿಕವಾಗಿ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ 25 ಪ್ರತಿಶತದಷ್ಟು ದಂಡ (IPL Fined) ವಿಧಿಸಲಾಗಿದೆ.

    ಗಿಲ್‌-ಸುದರ್ಶನ ಶತಕಗಳ ಸಾಧನೆ:
    ಸಿಎಸ್‌ಕೆ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಶತಗಳ ಜೊತೆಯಾಟವಾಡಿದ ಶುಭಮನ್‌ ಗಿಲ್‌ ಹಾಗೂ ಸಾಯಿಸುದರ್ಶನ್‌ ಮೊದಲ ವಿಕೆಟ್‌ಗೆ 210 ರನ್‌ಗಳ ಜೊತೆಯಾಟ ನೀಡಿದರು. ಈ ಮೂಲಕ ಮೊದಲ ವಿಕೆಟಿಗೆ ದ್ವಿಶತಕದ ಜೊತೆಯಾಟವಾಡಿದ್ದ ಕೆ.ಎಲ್‌ ರಾಹುಲ್‌ ಹಾಗೂ ಕ್ವಿಂಟನ್‌ ಡಿಕಾಕ್‌ ಅವರ ದಾಖಲೆಯನ್ನೂ ಸರಿಗಟ್ಟಿದ್ದರು. 2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಲಕ್ನೂ ಸೂಪರ್‌ ಜೈಂಟ್ಸ್‌ ತಂಡದ ಪರ ಕ್ವಿಂಟನ್‌ ಡಿಕಾಕ್‌ ಹಾಗೂ ಕೆ.ಎಲ್‌ ರಾಹುಲ್‌ ಆರಂಭಿಕರಾಗಿ ಕಣಕ್ಕಿಳಿದು 210 ರನ್‌ಗಳ ಜೊತೆಯಾಟ ನೀಡಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು.

    ಗಿಲ್‌-ಸುದರ್ಶನ್‌ 17.2 ಓವರ್‌ಗಳಲ್ಲೇ 210 ರನ್‌ ಬಾರಿಸುವ ಮೂಲಕ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಶುಭಮನ್‌ ಗಿಲ್‌ 55 ಎಸೆತಗಳಲ್ಲಿ 104 ರನ್‌ (9 ಬೌಂಡರಿ, 6 ಸಿಕ್ಸರ್)‌ ಬಾರಿಸಿದ್ರೆ, ಸಾಯಿ ಸುದರ್ಶನ್‌ 51 ಎಸೆತಗಳಲ್ಲಿ 103 ರನ್‌ (7 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಶುಕ್ರವಾರ ಸಿಎಸ್‌ಕೆ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ ತಂಡ 3 ವಿಕೆಟ್‌ ನಷ್ಟಕ್ಕೆ 231 ರನ್‌ ಸಿಡಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಸಿಎಸ್‌ಕೆ 8 ವಿಕೆಟ್‌ಕೆ 196 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

  • ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    – ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭದ್ರತಾ ವೈಫಲ್ಯ

    ಅಹಮದಾಬಾದ್‌: ಇತ್ತೀಚಿನ ದಿನಗಳಲ್ಲಿ ಅಭಿಮಾನಿಗಳ ಅತ್ಯುತ್ಸಾಹ ಭದ್ರತಾ ವೈಫಲ್ಯಗಳಿಗೆ ದಾರಿ ಮಾಡಿಕೊಡುತ್ತಿದೆ. ಅದೇ ರೀತಿ ಶುಕ್ರವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಧೋನಿ ಅಭಿಮಾನಿಯೊಬ್ಬರು (MS Dhoni Fans) ದಿಢೀರ್‌ ಮೈದಾನಕ್ಕೆ ನುಗ್ಗಿದ್ದು, ಭದ್ರತಾ ವೈಫಲ್ಯಕ್ಕೆ ಕಾರಣವಾಗಿದೆ.

    ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್‌ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದ ಪರವಾಗಿಯೇ ಆಡಿದ್ದಾರೆ. ಈಗಲೂ ಆರೋಗ್ಯ ಸಮಸ್ಯೆಯಿದ್ದರೂ ಮಹಿ ತಮ್ಮ ಅಭಿಮಾನಿಗಳಿಗಾಗಿಯೇ ಆಡುತ್ತಿದ್ದಾರೆ.

    ಶುಕ್ರವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (Gujarat Titans) ನಡುವಿನ ಐಪಿಎಲ್‌ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಏಕಾಏಕಿ ಮೈದಾನಕ್ಕೆ ನುಗ್ಗಿದ್ದಾರೆ. ಎಂ.ಎಸ್ ಧೋನಿ ಅವರ ಪಾದಗಳನ್ನು ಮುಟ್ಟಿ, ತಮ್ಮ ತಲೆಯನ್ನು ನೆಲಕ್ಕೆ ಸ್ಪರ್ಶಿಸಿ ನಮಸ್ಕರಿಸಿದ್ದಾರೆ. ದಿಢೀರನೆ ಬಂದ ಅಭಿಮಾನಿ ಕಂಡು ಕ್ಷಣಿಕ ಬೆಚ್ಚಿದ ಮಹಿ ಬಳಿಕ ಅಭಿಮಾನಿಯನ್ನು ನಿಲ್ಲಿಸಿ, ಹೆಗಲ ಮೇಲೆ ಕೈಯಿಟ್ಟು ಮಾತನಾಡಿಸಿದ್ದಾರೆ, ಪ್ರೀತಿಯ ಅಪ್ಪುಗೆಯೊಂದಿಗೆ ಬೀಳ್ಕೊಟ್ಟಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಅಭಿಮಾನಿಯನ್ನು ಎಳೆದೊಯ್ಯುವ ವೇಳೆ, ಅವರನ್ನು ಆರಾಮಾಗಿ ಹೋಗಲು ಬಿಡಿ ಎಂದು ಭದ್ರತಾ ಸಿಬ್ಬಂದಿಗೆ ಹೇಳಿದ್ದಾರೆ. ಮಹಿ ಅವರ ಈ ನಡೆ ಅಭಿಮಾನಿಗಳ ಹೃದಯಸ್ಪರ್ಶಿಸುವಂತೆ ಮಾಡಿದೆ. ಈ ಕುರಿತ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಗುಜರಾತ್‌ ಟೈಟಾನ್ಸ್‌ ಮೂರು ವಿಕೆಟ್‌ ನಷ್ಟಕ್ಕೆ 231 ರನ್‌ ಬಾರಿಸಿತ್ತು. 232 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ 8 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ಕೊನೆಯಲ್ಲಿ 236.36 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಮಹಿ, 11 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್‌, 1 ಬೌಂಡರಿ ಸೇರಿ 26 ರನ್‌ ಚಚ್ಚಿದರು.

  • ಸಾಯಿ ಸುದರ್ಶನ್‌, ಗಿಲ್‌ ದ್ವಿಶತಕ ಜೊತೆಯಾಟ – ಚೆನ್ನೈ ವಿರುದ್ಧ ಗುಜರಾತ್‌ಗೆ 35 ರನ್‌ಗಳ ಜಯ

    ಸಾಯಿ ಸುದರ್ಶನ್‌, ಗಿಲ್‌ ದ್ವಿಶತಕ ಜೊತೆಯಾಟ – ಚೆನ್ನೈ ವಿರುದ್ಧ ಗುಜರಾತ್‌ಗೆ 35 ರನ್‌ಗಳ ಜಯ

    ಅಹಮದಾಬಾದ್‌: ಇಲ್ಲಿ ನಡೆದ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್‌ನಲ್ಲಿ ಪಂದ್ಯದಲ್ಲಿ ಗುಜರಾತ್ 35 ರನ್‌ಗಳ ಜಯ ಗಳಿಸಿದೆ.

    ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ನಿಗದಿತ ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 231 ರನ್‌ಗಳನ್ನು ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 196 ರನ್‌ಗಳನ್ನು ಮಾತ್ರ ಕಲೆ ಹಾಕಲು ಶಕ್ತವಾಯಿತು.

    ಚೆನ್ನೈ ತಂಡದ ಮೊತ್ತ 10 ರನ್‌ ಇರುವಾಗಲೇ 3 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಎದರಿಸಿತು. ತಂಡದ ಪರ ಡೆರಿಲ್ ಮಿಚೆಲ್ 34 ಎಸೆತಗಳಲ್ಲಿ 3 ಸಿಕ್ಸರ್‌, 7 ಬೌಂಡರಿ ನೆರವಿನಿಂದ 63 ರನ್‌ ಕಲೆ ಹಾಕಿದರು. ಮೊಯಿನ್ ಅಲಿ 36 ಎಸೆತಗಳಲ್ಲಿ 4 ಸಿಕ್ಸರ್‌ 4 ಬೌಂಡರಿ ಸಿಡಿಸಿ 56 ರನ್‌ ಗಳಿಸಿದರು. ಶಿವಂ ದುಬೆ 13 ಎಸೆತಗಳಲ್ಲಿ 21, ಜಡೇಜಾ 10 ಎಸೆತಗಳಲ್ಲಿ 18 ರನ್‌ಗಳ ಕೊಡುಗೆ ನೀಡಿದರು. ಧೋನಿ 11 ಎಸೆತಗಳಲ್ಲಿ 3 ಸಿಕ್ಸರ್‌, 1 ಬೌಂಡರಿ ನೆರವಿನಿಂದ 26 ರನ್‌ ಗಳಿಸಿದರು.

    ಗುಜರಾತ್‌ ಪರ ಮೋಹಿತ್ ಶರ್ಮಾ 3, ರಶೀದ್ ಖಾನ್ 2, ಸಂದೀಪ್, ಉಮೇಶ್‌ ಯಾದವ್‌ ತಲಾ 1 ವಿಕೆಟ್‌ ಉರುಳಿಸಿದರು.

    ಗುಜರಾತ್‌ ಪರ ಶುಬಮನ್‌ ಗಿಲ್ 55 ಎಸೆತಗಳಲ್ಲಿ 6 ಸಿಕ್ಸರ್‌, 9 ಬೌಂಡರಿ ನೆರವಿನಿಂದ 104 ರನ್‌, ಸಾಯಿ ಸುದರ್ಶನ್‌ 51 ಎಸೆತಗಳಲ್ಲಿ 7 ಸಿಕ್ಸರ್‌ 5 ಬೌಂಡರಿ ಸಿಡಿಸಿ 103 ರನ್‌ ಕಲೆ ಹಾಕಿದರು. ಈ ಮೂಲಕ ಸಾಯಿ ಸುದರ್ಶನ್‌ ಐಪಿಎಲ್‌ನಲ್ಲಿ ಅತಿ ವೇಗವಾಗಿ 1000 ರನ್‌ಗಳನ್ನು (25 ಇನ್ನಿಂಗ್ಸ್) ಸಿಡಿಸಿದ ಆಟಗಾರ ಎಂಬ ದಾಖಲೆ ಬರೆದರು.

    ಸಚಿನ್‌ ತೆಂಡೂಲ್ಕರ್‌ (31), ರುತುರಾಜ್ ಗಾಯಕ್ವಾಡ್ (31), ತಿಲಕ್‌ ವರ್ಮಾ (33) ಇನ್ನಿಂಗ್ಸ್ನಲ್ಲಿ 1000 ರನ್‌ಗಳನ್ನು ದಾಖಲಿಸಿದ್ದರು.

    ಪಂದ್ಯದಲ್ಲಿ ಚೆನ್ನೈ ಪರ ತುಷಾರ್ ದೇಶಪಾಂಡೆ 2 ವಿಕೆಟ್‌ ಕಿತ್ತರು.

  • ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?

    ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?

    – 9ನೇ ಕ್ರಮಾಂಕದಲ್ಲಿ ಮಹಿ ಬ್ಯಾಟ್‌ ಬೀಸಿದ್ದೇಕೆ?
    – ಐಪಿಎಲ್‌ ವೃತ್ತಿ ಬದುಕಿಗೆ ಇದು ಕೊನೇ ಆವೃತ್ತಿಯಾಗುತ್ತಾ?

    ಚೆನ್ನೈ: ಸಿಎಸ್‌ಕೆ ತಂಡದ ಮಿಡಿತ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಅವರ ನಿವೃತ್ತಿಯ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದಿದ್ದ ಮಹಿ ಮೊದಲ ಎಸೆತದಲ್ಲೇ ಗೋಲ್ಡನ್‌ ಡಕ್‌ ಆದರು. ಮಹಿ ಅವರ ಔಟ್‌ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಪರ – ವಿರೋಧ ಚರ್ಚೆ ನಡೆಯುತ್ತಿದ್ದಾಗಲೇ ಮತ್ತೊಂದು ಸೀಕ್ರೆಟ್‌ ಬಹಿರಂಗಗೊಂಡಿದೆ.



    2024ರ ಐಪಿಎಲ್‌ (IPL 2024) ಆರಂಭದಿಂದಲೂ ಮಹಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಏಕೆ ಉಳಿಯುತ್ತಿಲ್ಲ? ಕೊನೇ 2-3 ಓವರ್‌ಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವುದು ಏಕೆ? ಅನ್ನೋ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಇದಕ್ಕೆ ಉತ್ತರ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?
    42 ವರ್ಷದ ಲೆಜೆಂಡರಿ ಧೋನಿ ಅವರಿಗೆ ಇದು ಅಂತಿಮ ಆವೃತ್ತಿ ಎಂದೇ ಭಾವಿಸಲಾಗಿದೆ. ಏಕೆಂದರೆ 2023 ಆವೃತ್ತಿಯಲ್ಲಿ ಮೊಣಕಾಲು ಸಮಸ್ಯೆಯಿಂದ ಬಳಲುತ್ತಿದ್ದ ಮಹಿ, ಆ ನೋವಿನಲ್ಲೂ ಆಡಿ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು. ಚೆನ್ನೈ ಸೂಪರ್‌ ಕಿಂಗ್ಸ್‌ 5ನೇ ಬಾರಿಗೆ ಟ್ರೋಫಿ ಗೆದ್ದ ಬಳಿಕವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮೊಣಕಾಲು ಗಾಯ ವಾಸಿಯಾದ್ದರಿಂದ ತಮ್ಮ ಅಭಿಮಾನಿಗಳಿಗಾಗಿ 2024ರಲ್ಲೂ ಆಡುವ ಮಹಿ ಮತ್ತೊಂದು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ಹೌದು. ಮಹಿ ಕೆಲ ದಿನಗಳಿಂದ ಸ್ನಾಯು ಸಮಸ್ಯೆಯಿಂದ (Muscle Tear) ಬಳಲುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಅವರಿಗೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗುತ್ತಿಲ್ಲ, ರನ್‌ ಓಡಲಾಗುತ್ತಿಲ್ಲ. ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗಲೂ ಸ್ಮ್ಯಾಶ್‌ ಮಾಡುವತ್ತ ಮಾತ್ರ ಗಮನಹರಿಸುತ್ತಿದ್ದಾರೆ. 20 ಓವರ್‌ ಮೈದಾನದಲ್ಲಿ ನಿಂತು ಫೀಲ್ಡಿಂಗ್‌ ಮಾಡುವ ಮಹಿ, ಬ್ಯಾಟಿಂಗ್‌ ವೇಳೆ ವಿರಾಮ ಪಡೆಯುತ್ತಿರುವುದು ಇದೇ ಕಾರಣಕ್ಕೆ ಎಂದು ಸಿಎಸ್‌ಕೆ ಫ್ರಾಂಚೈಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

    ಅಭಿಮಾನಿಗಳು ಸತ್ಯ ತಿಳಿಯಬೇಕು:
    ಇತ್ತೀಚೆಗೆ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲೂ ಚೆನ್ನೈ ಸೂಪರ್‌ ಕಿಂಗ್ಸ್ ಇನಿಂಗ್ಸ್‌ನ ಕೊನೇ ಓವರ್‌ನ ಮೊದಲ ಎಸೆತದಲ್ಲಿ ಎಂ.ಎಸ್‌ ಧೋನಿ, ಅರ್ಷದೀಪ್‌ ಸಿಂಗ್‌ಗೆ ಬೌಂಡರಿ ಬಾರಿಸಿದ್ದರು. ನಂತರ ಮುಂದಿನ 2 ಎಸೆತಗಳನ್ನು ಡಾಟ್‌ ಮಾಡಿದ್ದರು. 3ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ್ದ ಧೋನಿ, ಬೌಂಡರಿ ಅಥವಾ ಸಿಕ್ಸರ್‌ ಬಾರಿಸುವಲ್ಲಿ ವಿಫಲವಾಗಿದ್ದರು. ಆದ್ರೆ ಈ ವೇಳೆ ಸುಲಭವಾಗಿ ಒಂದು ರನ್‌ ಕದಿಯಬಹುದಿತ್ತು. ಆದರೆ, ಧೋನಿ ನಿರಾಕರಿಸಿದರು. ನಾನ್‌ಸ್ಟ್ರೈಕ್‌ ತುದಿಯಲ್ಲಿದ್ದ ಡೇರಿಲ್‌ ಮಿಚೆಲ್‌ ರನ್‌ ಪಡೆಯಲು ಸ್ಟ್ರೈಕರ್‌ ತುದಿಗೆ ಓಡಿ ಬಂದರು. ಆದರೆ, ಧೋನಿ ನಿಂತಲ್ಲಿಯೇ ಡೇರಿಲ್‌ ಮಿಚೆಲ್‌ಗೆ ವಾಪಸ್‌ ಹೋಗುವಂತೆ ಹೇಳಿದರು. ಈಬಗ್ಗೆ ಅಭಿಮಾನಿಗಳಿಂದಲೂ ಟೀಕೆ ವ್ಯಕ್ತವಾಗಿತ್ತು. ಆದ್ರೆ ಇದೀಗ ಫ್ರಾಂಚೈಸಿ ಮೂಲಗಳೇ ಅಭಿಮಾನಿಗಳಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿವೆ.

    ಬೌಲರ್​​ಗೆ ಅವಕಾಶ ಕೊಡಿ ಎಂದಿದ್ದ ಭಜ್ಜಿ:
    ಇನ್ನೂ 9ನೇ ಕ್ರಮಾಂಕದಲ್ಲಿ ಬಂದು ಮಹಿ ಗೋಲ್ಡನ್‌ ಡಕ್‌ ಆದ ಮಹಿ ಬ್ಯಾಟಿಂಗ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಹರ್ಭಜನ್ ಸಿಂಗ್, ಎಂ.ಎಸ್ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಯಸಿದರೆ, ಅವರು ಪ್ಲೇಯಿಂಗ್​ ಇಲೆವೆನ್​​ನಲ್ಲಿ ಆಡಲೇಬಾರದು. ಬದಲಿಗೆ ಒಬ್ಬ ವೇಗದ ಬೌಲರ್ ಅನ್ನು ಪ್ಲೇಯಿಂಗ್ ಹನ್ನೊಂದರಲ್ಲಿ ಸೇರಿಸುವುದು ಉತ್ತಮ. ಪ್ರತಿಯೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಅವರೇ ಈ ರೀತಿ ಪಂಜಾಬ್ ಕಿಂಗ್ಸ್ ವಿರುದ್ಧ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ತಂಡದ ಹಿನ್ನಡೆಗೆ ಕಾರಣರಾಗಿದ್ದಾರೆ. ಧೋನಿ ಈ ತಪ್ಪು ಮಾಡಿದ್ದೇಕೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

  • ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಕಿಂಗ್ಸ್‌ಗೆ 20 ರನ್‌ಗಳ ಜಯ

    ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಕಿಂಗ್ಸ್‌ಗೆ 20 ರನ್‌ಗಳ ಜಯ

    ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ನಡುವೆ ನಡೆದ ಐಪಿಎಲ್ (IPL 2024) ಪಂದ್ಯದಲ್ಲಿ ಸಿಎಸ್‌ಕೆ ತಂಡವು 20  ರನ್‌ ಗಳ ಜಯ ಸಾಧಿಸಿದೆ.

    ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 206 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 207 ರನ್‌ಗಳ ಗುರಿ ನೀಡಿತು.

     

    ಸಿಎಸ್‌ಕೆ ತಂಡದಿಂದ ಓಪನಿಂಗ್ ಆಟಗಾರರಾಗಿ ಅಜಿಂಕ್ಯಾ ರಹಾನೆ ಮತ್ತು ರಚಿನ್ ರವೀಂದ್ರ ಕಣಕ್ಕಿಳಿದಿದ್ದರು. ಕೇವಲ 8 ಎಸೆತಗಳಿಗೆ 5 ರನ್ ಗಳಿಸಿ ರಹಾನೆ ಔಟಾಗುವ ಮೂಲಕ ಸಿಎಸ್‌ಕೆ ಮೊದಲ ವಿಕೆಟ್ ಕಳೆದುಕೊಂಡಿತು. ಬಳಿಕ ಕ್ರೀಸ್‌ಗೆ ಎಂಟ್ರಿಕೊಟ್ಟ ಸಿಎಸ್‌ಕೆ ತಂಡದ ನಾಯಕ ಋತುರಾಜ್ ಗಾಯಕ್ವಾಡ್ 40 ಬಾಲ್‌ಗಳಿಗೆ 69 ರನ್ ಗಳಿಸಿ ಅತ್ಯುತ್ತಮ ಪ್ರದರ್ಶನ ನೀಡಿದರು. ರಚಿನ್ ರವೀಂದ್ರ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 21 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರುತುರಾಜ್, ಶಿವಂ ದುಬೆಯೊಂದಿಗೆ 90 ರನ್‌ಗಳ ಬೃಹತ್ ಜೊತೆಯಾಟ ನಡೆಸಿ ತಂಡದ ಮೊತ್ತ ಹೆಚ್ಚಿಸಿದರು. ಶಿವಂ ದುಬೆ 28 ಎಸೆತಗಳಿಗೆ ಅರ್ಧಶತಕ ಸಿಡಿಸಿ ಒಟ್ಟು 33 ಎಸೆತಗಳಿಗೆ 66 ರನ್‌ಗಳ ಕಲೆ ಹಾಕಿದರು.

     

    ಮುಂಬೈ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ತಂಡದ ಪರ ನಾಯಕ ರುತುರಾಜ್ 69 ರನ್ ಹಾಗೂ ಶಿವಂ ದುಬೆ 66 ರನ್ ಸಿಡಿಸಿ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಮಿಚೆಲ್ ಬಳಿಕ ಕ್ರೀಸ್‌ಗೆ ಮರಳಿದ ಧೋನಿ ಕೊನೆಯ ಓವರ್‌ನಲ್ಲಿ 3 ಸಿಕ್ಸ್ ಬಾರಿಸುವ ಮೂಲಕ 4 ಬಾಲ್‌ಗಳಿಗೆ 20 ರನ್ ಗಳಿಸಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

     

    207 ರನ್‌ಗಳ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಹೀನಾಯ ಸೋಲು ಕಂಡಿತು. ಮುಂಬೈ ತಂಡದಿಂದ ಆರಂಭಿಕ ಆಟಗಾರರಾಗಿ ಇಶನ್ ಕಿಶನ್ ಹಾಗೂ ರೋಹಿತ್ ಶರ್ಮಾ ಆಡಿದರು. ಇಶನ್ ಕಿಶನ್ 15 ಎಸೆತಗಳಿಗೆ 23 ರನ್ ಗಳಿಸಿ ಔಟಾದರೆ, ಸೂರ್ಯ ಕುಮಾರ್ ಯಾದವ್ ಕೇವಲ 2 ಎಸೆತಗಳಿಗೆ ಯಾವುದೇ ರನ್‌ಗಳಿಸದೇ ಪೆವಿಲಿಯನ್‌ಗೆ ಮರಳಿದರು. ರೋಹಿತ್ ಶರ್ಮಾ 61 ಎಸೆತಗಳಿಗೆ ಶತಕ ಬಾರಿಸಿ ತಂಡವನ್ನು ಮುನ್ನಡೆಸಿದರು. ಈ ಮೂಲಕ ರೋಹಿತ್ ಶರ್ಮಾ 63 ಬಾಲ್‌ಗಳಿಗೆ 105 ರನ್ ಸಿಡಿಸಿದರು.

    ತಿಲಕ್ 20 ಎಸೆತಗಳಿಗೆ 31 ರನ್‌ಗಳಿಸಿ ಔಟ್ ಆದರು. ಮೂರನೇ ವಿಕೆಟ್‌ಗೆ ರೋಹಿತ್ ಶರ್ಮಾ ಜೊತೆ ತಿಲಕ್ 60 ರನ್‌ಗಳ ಜೊತೆಯಾಟ ನಡೆಸಿದರು. ತುಷಾರ್ ದೇಶಪಾಂಡೆ ಬೌಲಿಂಗ್‌ನಲ್ಲಿ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಆರು ಎಸೆತಗಳಲ್ಲಿ ಕೇವಲ ಎರಡು ರನ್ ಗಳಿಸಿ ಔಟಾದರು. ಡೇವಿಡ್ 5 ಬಾಲ್‌ಗಳಲ್ಲಿ 13 ರನ್ ಗಳಿಸಿ ತಮ್ಮ ಆಟ ಮುಗಿಸಿದರು. ಪತಿರಾನ ತಮ್ಮ ಬೌಲಿಂಗ್ ಮೂಲಕ ರೊಮಾರಿಯೊ ಶೆಫರ್ಡ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ 6ನೇ ವಿಕೆಟ್ ಕಿತ್ತರು. ಬಳಿಕ ಬಂದ ನಬೀ 7 ಎಸೆತಗಳಿಗೆ 4 ರನ್ ಗಳಿಸಿ ಪಂದ್ಯವನ್ನು ಮುಕ್ತಾಯಗೊಳಿಸಿದರು.

  • ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್‌ -‌ ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!

    ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್‌ -‌ ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!

    ವಿಶಾಖಪಟ್ಟಣಂ: 2024ರ ಐಪಿಎಲ್‌ (IPL 2024) ಆವೃತ್ತಿ ಹಲವು ಅವಿಸ್ಮರಣೀಯ ದಾಖಲೆಗಳಿಗೆ ಸಾಕ್ಷಿಯಾಗಿದೆ. ಮೈದಾನದಲ್ಲಿ ಹುರಿಯಾಳುಗಳು ಬ್ಯಾಟ್‌ ಹಿಡಿದು ಅಬ್ಬರಿಸುತ್ತಾ ದಾಖಲೆಗಳನ್ನು ಬರೆಯುತ್ತಿದ್ದರೆ, ಗ್ರೌಂಡ್‌ ಹೊರಗೆ ಕ್ರಿಕೆಟ್‌ ಅಭಿಮಾನಿಗಳು ವೀಕ್ಷಣೆಯಲ್ಲಿ ದಾಖಲೆ ಮಾಡುತ್ತಿದ್ದಾರೆ. ಬುಧವಾರ ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (KKR vs DC) ವಿರುದ್ಧ ಪಂದ್ಯದ ಬಳಿಕ 17ನೇ ಆವೃತ್ತಿ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ.

    ಲೀಗ್‌ ಸುತ್ತಿನ ಮೊದಲ 10 ಪಂದ್ಯಗಳಲ್ಲಿ ದಾಖಲೆಯ 35 ಕೋಟಿ ವೀಕ್ಷಣೆ ಕಂಡಿದೆ.‌ ಕೋವಿಡ್‌ ಬಳಿಕ ಸ್ಟಾರ್‌ ಸ್ಫೋರ್ಟ್ಸ್‌ನಲ್ಲಿ (Star Sports) ಐಪಿಎಲ್‌ ಟೂರ್ನಿಯ ಮೊದಲ 10 ಪಂದ್ಯಗಳನ್ನು 35 ಕೋಟಿ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನ ನುಚ್ಚುನೂರು ಮಾಡಿದೆ. ಬಾರ್ಕ್‌ (BARC) ದತ್ತಾಂಶಗಳನ್ನು ಉಲ್ಲೇಖಿಸಿ ಸ್ಟಾರ್‌ಸ್ಫೋರ್ಟ್ಸ್‌ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

    ಅಲ್ಲದೇ ಟಿವಿಯಲ್ಲಿ ಪಂದ್ಯಾವಳಿಯ ಒಟ್ಟು ವೀಕ್ಷಣೆ ಸಮಯವು 8,028 ಕೋಟಿ ನಿಮಿಷಗಳಷ್ಟು ತಲುಪಿದೆ. ಇದು ಕಳೆದ ವರ್ಷಕ್ಕಿಂತ 20% ಹೆಚ್ಚಳವಾಗಿದೆ. ಅಲ್ಲದೇ ಹಿಂದಿನ ಎಲ್ಲಾ ಆವೃತ್ತಿಗಳಿಗೆ ಹೋಲಿಸಿದರೆ, 17ನೇ ಆವೃತ್ತಿಯ ಐಪಿಎಲ್‌ ಪಂದ್ಯದ ರೇಟಿಂಗ್‌ಗಳು 22% ರಷ್ಟು ಏರಿಕೆಯಾಗಿದೆ ಎಂದು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನ ಕ್ರೀಡಾ ವಿಭಾಗದ ಮುಖ್ಯಸ್ಥ ಸಂಜೋಗ್ ಗುಪ್ತಾ ತಿಳಿಸಿದ್ದಾರೆ.

    17ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಕಳೆದ ಮಾರ್ಚ್‌ 22ರಂದು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯವನ್ನು ಸುಮಾರು 16.8 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಮೊದಲ 6 ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ಆಪ್‌ನಲ್ಲಿ 20 ಕೋಟಿ ಮಂದಿ ವೀಕ್ಷಿಸಿದ್ದರು. ಇದನ್ನೂ ಓದಿ: ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    ಡಿಸ್ನಿ ಸ್ಟಾರ್‌ ಟಾಟಾ ಐಪಿಎಲ್‌ ಟೂರ್ನಿಯನ್ನು 10 ಭಾಷೆಗಳಲ್ಲಿ ಮತ್ತು 14 ವಾಹಿನಿಗಳಲ್ಲಿ ಪ್ರಸಾರ ಮಾಡುತ್ತಿದೆ. ಅಲ್ಲದೇ ಶ್ರವಣದೋಷವುಳ್ಳವರಿಗಾಗಿ ಸಂಕೇತ ಭಾಷೆಯಲ್ಲಿಯೂ ಕಾಮೆಂಟ್ರಿ ಪ್ರಸಾರ ಮಾಡಲಾಗುತ್ತಿದೆ. ಈ ನಡುವೆ ಜಿಯೋ ಸಿನಿಮಾ ತನ್ನ ಆಪ್‌ ಮತ್ತು ಕಂಪ್ಯೂಟರ್‌ ವೀಕ್ಷಕರಿಗೆ ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿದೆ. ಕಳೆದ ವರ್ಷವೂ ಟಾಟಾ ಐಪಿಎಲ್‌ನ ಮೊದಲ 5 ವಾರಗಳಲ್ಲಿ 1,300 ಕೋಟಿಗೂ ಅಧಿಕ ವಿಡಿಯೋ ವೀಕ್ಷಣೆಯ ದಾಖಲೆಯನ್ನು ಜಿಯೋ ಸಿನಿಮಾ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

  • 42ನೇ ವಯಸ್ಸಿನಲ್ಲೂ ಎಷ್ಟೊಂದು ಉತ್ಸಾಹ – ಚಿರತೆಯಂತೆ ನೆಗೆದು ಕ್ಯಾಚ್‌ ಹಿಡಿದ ಮಹಿ; ವೀಡಿಯೋ ವೈರಲ್‌

    42ನೇ ವಯಸ್ಸಿನಲ್ಲೂ ಎಷ್ಟೊಂದು ಉತ್ಸಾಹ – ಚಿರತೆಯಂತೆ ನೆಗೆದು ಕ್ಯಾಚ್‌ ಹಿಡಿದ ಮಹಿ; ವೀಡಿಯೋ ವೈರಲ್‌

    ಚೆನ್ನೈ: ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧದ ಪಂದ್ಯದಲ್ಲಿ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಹಿಡಿದ ಸ್ಟನ್ನಿಂಗ್‌ ಕ್ಯಾಚ್‌ವೊಂದು ಸೋಶಿಯಲ್‌ ಮೀಡಿಯಾದಲ್ಲಿ ಧೂಳೆಬ್ಬಿಸಿದೆ.

    ಹೌದು. ಸಿಎಸ್‌ಕೆ (CSK) ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ (Cricket Fans) ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್‌ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ಕಾಲ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದಿಂದ ಹೊರಬಂದಿಲ್ಲ.

    ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೂ ನಿವೃತ್ತಿ ಘೋಷಣೆ ಮಾಡಿರುವ ಎಂ.ಎಸ್‌ ಧೋನಿ ಐಪಿಎಲ್‌ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದರು ಚಿರಯುವಕನಿಗೆ ಸರಿಸಮನಾಗಿ ನಿಂತು ಮೈದಾನದಲ್ಲಿ ಉತ್ಸಾಹದಿಂದ ಪಂದ್ಯವನ್ನಾಡುತ್ತಿದ್ದಾರೆ. ಗುಜರಾತ್‌ ವಿರುದ್ಧ ಮಹಿ ಹಿಡಿದ ಸ್ಟನ್ನಿಂಗ್‌ ಕ್ಯಾಚ್‌ (Stunning Catch) ಇದಕ್ಕೆ ತಾಜಾ ಉದಾಹರಣೆಯಾಗಿದೆ. ಇದನ್ನೂ ಓದಿ: ಐಪಿಎಲ್‌ ಅಂಗಳದಲ್ಲಿ ಕ್ಯಾಪ್ಟನ್ಸಿ ಕಿಚ್ಚು – ಕರ್ಮ ಸುಮ್ಮನೆ ಬಿಡಲ್ಲ; ಪಾಂಡ್ಯ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ

    ಹೌದು.. 206 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಟೈಟಾನ್ಸ್‌ ಪಡೆ ಆರಂಭದಲ್ಲೇ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಳೆದುಕೊಂಡು ಸಂಷ್ಟಕ್ಕೀಡಾಯಿತು. 8ನೇ ಓವರ್‌ನಲ್ಲಿ ಡೇರಿಲ್‌ ಮಿಚೆಲ್‌ (Daryl Mitchell) ಬೌಲಿಂಗ್‌ ವೇಳೆ ಕ್ರೀಸ್‌ನಲ್ಲಿದ್ದ ವಿಜಯ್‌ ಶಂಕರ್‌ ಸ್ಟ್ರೈಕ್‌ ಮಾಡಲು ಮುಂದಾದರು. ಮಿಚೆಲ್‌ ಎಸೆದ 3ನೇ ಎಸೆತವು ಬ್ಯಾಟ್‌ಗೆ ತಗುಲಿ ಸ್ಲಿಪ್‌ ವಿಭಾಗದಲ್ಲಿ ಬೌಂಡರಿ ತಲುಪುವ ಸಾಧ್ಯತೆ ಇತ್ತು. ಆದ್ರೆ ಮಹಿ ಚಿರತೆಯಂತೆ ನೆಗೆದು ಕ್ಯಾಚ್‌ ಹಿಡಿದರು. ಮಹಿ ಜಿಗಿದ ಅಂತರ ಸುಮಾರು 2.27 ಮೀಟರ್‌ ಉದ್ದವಿತ್ತು ಎಂದು ಹೇಳಲಾಗಿದೆ. ಇದು ಅಭಿಮಾನಿಗಳ ಮೆಚ್ಚುಗೆಗೂ ಪಾತ್ರವಾಯಿತು. ಅಲ್ಲದೇ 42ನೇ ವಯಸ್ಸಿನಲ್ಲೂ ಅದೆಂತಹ ಉತ್ಸಾಹ ಎಂದು ಅಚ್ಚರಿಪಟ್ಟರು.

    ಮಹಿ ಕ್ಯಾಚ್‌ ಹಿಡಿದ ವೀಡಿಯೋ ತುಣುಕು ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಭಿಮಾನಿಗಳು ತಮ್ಮ ಖಾತೆಗಳಲ್ಲಿ ವೀಡಿಯೋ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲೇ ಐಪಿಎಲ್‌ – ಪೂರ್ಣ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಮ್ಯಾಚ್‌?

    ಮಂಗಳವಾರ ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಸಿಎಸ್‌ಕೆ 20 ಓವರ್‌ಗಳಲ್ಲಿ 206 ರನ್‌ ಬಾರಿಸಿತ್ತು. 207 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಟೈಟಾನ್ಸ್‌ ನಿಗದಿತ ಓವರ್‌ಗಳಲ್ಲಿ 143 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಚೆನ್ನೈ ಸಿಡಿಸಿದ ರನ್‌ ಮಳೆಗೆ ಕೊಚ್ಚಿ ಹೋಯ್ತು ಟೈಟಾನ್ಸ್‌ – ಮೊದಲ ಸ್ಥಾನಕ್ಕೆ ಜಿಗಿದ ಸಿಎಸ್‌ಕೆ 

  • ಚೆನ್ನೈ ಸಿಡಿಸಿದ ರನ್‌ ಮಳೆಗೆ ಕೊಚ್ಚಿ ಹೋಯ್ತು ಟೈಟಾನ್ಸ್‌ – ಮೊದಲ ಸ್ಥಾನಕ್ಕೆ ಜಿಗಿದ ಸಿಎಸ್‌ಕೆ

    ಚೆನ್ನೈ ಸಿಡಿಸಿದ ರನ್‌ ಮಳೆಗೆ ಕೊಚ್ಚಿ ಹೋಯ್ತು ಟೈಟಾನ್ಸ್‌ – ಮೊದಲ ಸ್ಥಾನಕ್ಕೆ ಜಿಗಿದ ಸಿಎಸ್‌ಕೆ

    ಚೆನ್ನೈ: ತವರಿನಲ್ಲಿ ಚೆನ್ನೈ ಸಿಡಿಸಿದ ರನ್‌ ಮಳೆಗೆ ಗುಜರಾತ್‌ ಟೈಟಾನ್ಸ್‌ (Gujarat Titans) ಕೊಚ್ಚಿ ಹೋಗಿದೆ. ಬ್ಯಾಟಿಂಗ್‌, ಬೌಲಿಂಗ್‌, ಫೀಲ್ಡಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) 63 ರನ್‌ಗಳ ಭರ್ಜರಿ ಜಯದೊಂದಿಗೆ ಐಪಿಎಲ್‌ (IPL) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 6 ವಿಕೆಟ್‌ ನಷ್ಟಕ್ಕೆ 206 ರನ್‌ ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಗುಜರಾತ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 143 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ತಂಡದ ಮೊತ್ತ 28 ರನ್‌ಗಳಿಸಿದಾಗ ಶುಭಮನ್‌ ಗಿಲ್‌ (Shubaman Gill) 8 ರನ್‌ ಗಳಿಸಿ ಎಲ್‌ಬಿಗೆ ಔಟಾದರು. 55 ರನ್‌ಗಳಿಸುವಷ್ಟರಲ್ಲಿ ಗುಜರಾತ್‌ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. 12 ರನ್‌ಗಳಿಸಿದ್ದ ವಿಜಯ್‌ ಶಂಕರ್‌ ಅವರ ಕ್ಯಾಚನ್ನು ಧೋನಿ (Dhoni) ಹಾರಿ ಪಡೆದು ತಂಡಕ್ಕೆ ಮುನ್ನಡೆ ತಂದುಕೊಟ್ಟರು. 21 ರನ್‌ ಗಳಿಸಿ ಸಿಕ್ಸ್‌ ಸಿಡಿಸಲು ಹೋಗಿ ರಹಾನೆ ಹಿಡಿದ ಉತ್ತಮ ಕ್ಯಾಚ್‌ಗೆ ಡೇವಿಡ್‌ ಮಿಲ್ಲರ್‌ ಔಟಾದರು.

    ಸಾಯಿ ಸುದರ್ಶನ್‌ 37 ರನ್‌ (31 ಎಸೆತ, 3 ಬೌಂಡರಿ), ಡೇವಿಡ್‌ ಮಿಲ್ಲರ್‌ 21 ರನ್‌ ಗಳಿಸಿ ಔಟಾದರು. ಟೈಟಾನ್ಸ್‌ ಪರ ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತು ಆಟಗಾರರು ಆಡದ ಕಾರಣ ಸೋಲೊಪ್ಪಿಕೊಂಡಿತು. ದೀಪಕ್‌ ಚಹರ್‌ 4 ಓವರ್‌ ಎಸೆದು 28 ರನ್‌ ನೀಡಿ 2 ವಿಕೆಟ್‌ ಕಿತ್ತರೆ, ತುಷಾರ್‌ ದೇಶಾಪಂಡೆ 4 ಓವರ್‌ ಎಸೆದು 21 ರನ್‌ ನೀಡಿ 2 ವಿಕೆಟ್‌ ಕಿತ್ತರು. ಮುಸ್ತಫಿಜುರ್ ರೆಹಮಾನ್ 30 ರನ್‌ ನೀಡಿ 2 ವಿಕೆಟ್‌ ಪಡೆದರು.

    ಸ್ಪೋಟಕ ಆರಂಭ: ಚೆನ್ನೈ ಆರಂಭಿಕ ಆಟಗಾರರಾದ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಮತ್ತು ರಚಿನ್‌ ರವೀಂದ್ರ (Rachin Ravindra) ಸ್ಫೋಟಕ ಆರಂಭ ನೀಡಿದರು. ಇಬ್ಬರು ಮೊದಲ ವಿಕೆಟಿಗೆ 32 ಎಸೆತಗಳಲ್ಲಿ 62 ರನ್‌ ಜೊತೆಯಾಟ ನೀಡಿದರು. ರಚಿನ್‌ ರವೀಂದ್ರ 46 ರನ್‌ (20 ಎಸೆತ, 6 ಬೌಂಡರಿ, 3 ಸಿಕ್ಸರ್‌) ಹೊಡೆದು ಔಟಾದರೆ ಗಾಯಕ್ವಾಡ್‌ 46 ರನ್‌ (36 ಎಸೆತ, 5 ಬೌಂಡರಿ, 1 ಸಿಕ್ಸರ್‌) ಸಿಡಿಸಿ ವಿಕೆಟ್‌ ಒಪ್ಪಿಸಿದರು. ಇದನ್ನೂ ಓದಿ: ಆರ್‌ಸಿಬಿ ಪಂದ್ಯ ಗೆದ್ದ ಖುಷಿಯಲ್ಲಿ ಫ್ಯಾಮಿಲಿಗೆ ವೀಡಿಯೋ ಕರೆ ಮಾಡಿ ಕೊಹ್ಲಿ ಮಾತು

    ಅಜಿಂಕ್ಯಾ ರಹಾನೆ 12 ರನ್‌ ಗಳಿಸಿ ಔಟಾದರು. ನಂತರ ಬಂದ ಶಿವಂ ದುಬೆ (Shivam Dube) ಸಿಕ್ಸರ್‌ಗಳ ಮಳೆಯನ್ನೇ ಸುರಿಸಿದರು. 23 ಎಸೆತಗಳಲ್ಲಿ 5 ಸಿಕ್ಸ್‌, 2 ಬೌಂಡರಿಯೊಂದಿಗೆ 51 ರನ್‌ ಚಚ್ಚಿ ಔಟಾದರು.

    ಕೊನೆಯಲ್ಲಿ ಡೆರೆಲ್‌ ಮಿಚೆಲ್‌ ಔಟಾಗದೇ 24 ರನ್‌ ಮತ್ತು ಸಮೀರ್‌ ರಿಜ್ವಿ 14 ರನ್‌ ಹೊಡೆದರು. 6 ಮಂದಿ ಬೌಲರ್‌ಗಳು ಬೌಲ್‌ ಮಾಡಿದರೂ ಚೆನ್ನೈ ಬ್ಯಾಟರ್‌ಗಳನ್ನು ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ.

  • ನಾಮಕಾವಸ್ಥೆಗೆ ನಾಯಕ ಆದ್ರಾ ರುತುರಾಜ್‌ – ನಾಯಕತ್ವದ ಬಗ್ಗೆ ಸೆಹ್ವಾಗ್‌ ಹೇಳಿದ್ದೇನು?

    ನಾಮಕಾವಸ್ಥೆಗೆ ನಾಯಕ ಆದ್ರಾ ರುತುರಾಜ್‌ – ನಾಯಕತ್ವದ ಬಗ್ಗೆ ಸೆಹ್ವಾಗ್‌ ಹೇಳಿದ್ದೇನು?

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ (IPL 2024) ಟೂರ್ನಿ ಅದ್ಧೂರಿಯಾಗಿ ಚಾಲನೆಗೊಂಡಿದ್ದು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಗೆಲುವಿನ ಖಾತೆ ತೆರೆದಿದೆ. ನೂತನ ನಾಯಕ ರುತುರಾಜ್‌ ಗಾಯಕ್ವಾಡ್‌ (Ruturaj Gaikwad) ಅವರ ನೇತೃತ್ವದಲ್ಲಿ ಸಿಎಸ್‌ಕೆ ಗೆಲುವು ಸಾಧಿಸಿದೆ. ಆದ್ರೆ ಪಂದ್ಯದ ಬಳಿಕ ರುತುರಾಜ್‌ ನಾಮಕಾವಸ್ಥೆಗೆ ಮಾತ್ರ ನಾಯಕನಾದ್ರಾ ಅನ್ನೋ ಪ್ರಶ್ನೆ ಎದ್ದಿದೆ.

    ಟಾಸ್‌ ಸೋತು ಆರ್‌ಸಿಬಿ ವಿರುದ್ಧ ಮೊದಲು ಸಿಎಸ್‌ಕೆ ಫೀಲ್ಡಿಂಗ್‌ (Field) ಮಾಡಿತು. ಈ ವೇಳೆ ರುತುರಾಜ್‌ ನಾಯಕನಾಗಿದ್ದರೂ, ಎಂ.ಎಸ್‌ ಧೋನಿ ಅವರ ಮೇಲೆ ಕ್ಯಾಮೆರಾ ಹೆಚ್ಚು ಫೋಕಸ್‌ ಆಗಿತ್ತು. ರುತುರಾಜ್‌ ಬೌಲರ್‌ಗಳೊಂದಿಗೆ ಹಾಗೂ ಫೀಲ್ಡಿಂಗ್‌ ಸೆಟ್‌ ಮಾಡುತ್ತಿದ್ದ ದೃಶ್ಯ ಕೆಲವು ವೇಳೆ ಕಂಡುಬಂದರೂ ಧೋನಿ (MS Dhoni) ಫೀಲ್ಡಿಂಗ್‌ ಸೆಟ್‌ ಮಾಡುತ್ತಿದ್ದಾಗ ಮಾತ್ರ ಅವರನ್ನು ಹೆಚ್ಚಾಗಿ ತೋರಿಸಲಾಗುತ್ತಿತ್ತು.

    ಈ ವೇಳೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ (Virender Sehwag), ದಯವಿಟ್ಟು ರುತುರಾಜ್‌ ಅವರ ಮುಖವನ್ನು ತೋರಿಸು ಗುರು ಅವರು ತಂಡದ ನಾಯಕ, ಕ್ಯಾಮೆರಾ ಮ್ಯಾನ್‌ ಧೋನಿಯ ಮುಖವನ್ನ ಮಾತ್ರ ತೋರಿಸ್ತಿದ್ದಾರೆ ಅಂತಾ ಹೇಳಿದ್ದಾರೆ. ಸೆಹ್ವಾಗ್‌ ಅವರ ಈ ಹೇಳಿಕೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡ್ತಿದೆ. ಇದನ್ನೂ ಓದಿ: IPL 2024: ತವರಿನಲ್ಲಿ ರಾಯಲ್‌ ಆಗಿ ಚಾಲೆಂಜ್‌ ಗೆದ್ದ ಚೆನ್ನೈ – 6 ವಿಕೆಟ್‌ಗಳ ಜಯ, ಸಿಎಸ್‌ಕೆ ಶುಭಾರಂಭ

    ರುತುರಾಜ್‌ ನಾಯಕತ್ವ ಹೊಗಳಿದ ಪಠಾಣ್‌:
    ಆರ್‌ಸಿಬಿ ವಿರುದ್ಧ ಚೆನ್ನೈ ಗೆಲುವು ಸಾಧಿಸುತ್ತಿದ್ದಂತೆ ಇರ್ಫಾನ್‌ ಪಠಾಣ್‌, ರುತುರಾಜ್‌ ಅವರ ನಾಯತ್ವವನ್ನು ಹೊಗಳಿದ್ದಾರೆ. ಮೊದಲ 26 ಎಸೆತಗಳ ನಂತರ ಸಿಎಸ್‌ಕೆ ಬ್ರಿಲಿಯಂಟ್ ಕಮ್ ಬ್ಯಾಕ್ ಮಾಡಿತು. ಒತ್ತಡದ ಸಮಯದಲ್ಲಿ ರುತುರಾಜ್ ಬೌಲಿಂಗ್ ಬದಲಾವಣೆ ಮಾಡುತ್ತಿದ್ದ ರೀತಿ ಆಕರ್ಷಕವಾಗಿತ್ತು ಎಂದು ಕೊಂಡಾಡಿದ್ದಾರೆ.

    ಚೆನ್ನೈನ ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಆರ್‌ಸಿಬಿ (RCB) 173 ರನ್‌ ಗಳಿತ್ತು. 174 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್‌‌ ಕಿಂಗ್ಸ್‌ ತಂಡ 18.4 ಓವರ್‌ಗಳಲ್ಲಿ 176 ರನ್‌ ಬಾರಿ 17ನೇ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆಯಿತು. ಇದನ್ನೂ ಓದಿ: IPL 2024: 21 ರನ್‌ ಬಾರಿಸಿದ್ರೂ ಎರಡೆರಡು ದಾಖಲೆ ಬರೆದ ಕಿಂಗ್‌ ಕೊಹ್ಲಿ!