ಚಿಕ್ಕಬಳ್ಳಾಪುರ: ಮಳೆ ನಿಂತರೂ ಮಳೆಯಿಂದಾದ (Rain) ಅವಾಂತರಗಳಿಗೇನು ಕಮ್ಮಿ ಇಲ್ಲ. ರೈತರು ಹಗಲು ರಾತ್ರಿ ಅನ್ನದೇ ಕಷ್ಟಪಟ್ಟು ಹೂವು ಹಣ್ಣು ತರಕಾರಿ ಎಲ್ಲವನ್ನೂ ಬೆಳೀತಾರೆ, ಆದ್ರೆ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಾಂತಾಗಿ ಅನ್ನದಾತರು (Farmers) ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹನಿ ಹನಿ ನೀರುಣಿಸಿ ಬಂಗಾರದಂಹತ ಬೆಳೆ ತೆಗೀತಾರೆ. ಹೂವು ಹಣ್ಣು ತರಕಾರಿ ಎಲ್ಲವನ್ನೂ ಬೆಳೆಯುವ ರೈತರು ಈ ಬಾರಿ ಯಥೇಚ್ಛವಾಗಿ ಸೌತೆಕಾಯಿಯನ್ನ ಬೆಳೆದಿದ್ದಾರೆ. ನಿರಂತರ ಮಳೆಯಿಂದ ಸೌತೆಕಾಯಿ ಇಳುವರಿಯೂ ಹೆಚ್ಚಾಗಿದ್ದು ಚಿಕ್ಕಬಳ್ಳಾಪುರ ತರಕಾರಿ ಮಾರುಕಟ್ಟೆಗೆ ಹೆಚ್ಚಿನ ಸೌತೆಕಾಯಿ ಬಂದಿದೆ. ಇದ್ರಿಂದ ಒಂದು ಮೂಟೆ ಸೌತೆಕಾಯಿ ಕೇವಲ 100 ರಿಂದ 150 ರೂ.ಗೆ ಬಿಕರಿಯಾಗುತ್ತಿದ್ದು ಸೌತೆಕಾಯಿ ಬೆಳೆದ ರೈತರು ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆ | ಖಾದ್ರಿ ಬೆಂಬಲಿಗರಿಂದ ಕಾಂಗ್ರೆಸ್ ಅಭ್ಯರ್ಥಿಯ ಕಾರಿನ ಗಾಜು ಪುಡಿಪುಡಿ
ಇನ್ನೂ ಅತಿಯಾದ ಮಳೆಯ ಕಾರಣ ಒಂದು ಕಡೆ ಸೌತೆಕಾಯಿ ಬಂಪರ್ ಇಳುವರಿಯೂ ಬಂದಿದೆ. ಮತ್ತೊಂದು ಕಡೆ ಮಳೆ ಹೊಡೆತಕ್ಕೆ ಹೊಸ ಹೂವಿನ ಮೊಗ್ಗು ಎಲ್ಲವೂ ಉದುರಿ ಮುಂದೆ ಫಸಲು ಕುಂಠಿತವಾಗುತ್ತಿದೆ. ಮಳೆಯಿಂದ ಸೌತೆಕಾಯಿ ಬೆಳೆಗೆ ರೋಗ ರುಜಿನಗಳ ಬಾಧೆ ಸಹ ಆವರಿಸುತ್ತಿದ್ದು, ಸಾವಿರಾರು ರೂಪಾಯಿ ಕ್ರಿಮಿನಾಶಕಗಳಿಗೆ ಖರ್ಚು ಮಾಡಬೇಕಿದೆ.
ಇದರಿಂದ ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಇಲ್ಲದೇ ಅನ್ನದಾತ ಆತಂಕಕ್ಕೀಡಾಗುವಂತಾಗಿದೆ. ಮಳೆ ಬಂದರೂ ಕಷ್ಟ, ಬರಿದಿದ್ದರೂ ಕಷ್ಟ ಅನ್ನೋ ಹಾಗೆ ರೈತರಿಗೆ ನಷ್ಟ ಮಾತ್ರ ತಪ್ಪಿದ್ದಲ್ಲ ಎಂಬಂತಾಗಿದೆ.
ಬೇಸಿಗೆಯಲ್ಲಿ ಕೂಲ್ ಆಗಿ ಇರಲು ಜನರು ಹೆಚ್ಚು ನೀರಿನಾಂಶವಿರುವ ಆಹಾರವನ್ನು ಸೇವಿಸುತ್ತಾರೆ. ಅದರಲ್ಲಿ ಹೆಚ್ಚು ಜನರು ಸೌತೆಕಾಯಿಯನ್ನು ಬೇಸಿಗೆ ಸಮಯದಲ್ಲಿ ಹೆಚ್ಚು ತಿನ್ನುತ್ತಾರೆ. ನಿಮ್ಮ ದೇಹವನ್ನು ಹೆಚ್ಚು ತಂಪು ಮಾಡಲು ‘ಕೂಲಂಟ್ ಕುಕುಂಬರ್ ಡ್ರಿಂಕ್’ ಟ್ರೈ ಮಾಡಿ.
ಬೇಕಾಗಿರುವ ಪದಾರ್ಥಗಳು:
* ಕತ್ತರಿಸಿದ ಸೌತೆಕಾಯಿ – 1 ಕಪ್
* ನೀರು – 1/2 ಕಪ್
* ಪುದೀನಾ ಎಲೆಗಳು – 1/4 ಕಪ್
* ಹುರಿದ ಜೀರಿಗೆ ಪುಡಿ – 1/2 ಟೀಸ್ಪೂನ್
* ಕಪ್ಪು ಉಪ್ಪು – 1/4 ಟೀಸ್ಪೂನ್
* ಸಕ್ಕರೆ – 2 ಟೀಸ್ಪೂನ್
* ಉಪ್ಪು – 1/8 ಟೀಸ್ಪೂನ್
* ಐಸ್ ಕ್ಯೂಬ್ಸ್ – 4-6
* ನೀರಿನಲ್ಲಿ ಸಬ್ಜಾ ಬೀಜಗಳನ್ನು ನೆನೆಸಿಡಿ
ಮಾಡುವ ವಿಧಾನ:
* ‘ಕೂಲಂಟ್ ಕುಕುಂಬರ್ ಡ್ರಿಂಕ್’ ಮಾಡಲು ಮಿಕ್ಸಿಗೆ ಐಸ್ ಕ್ಯೂಬ್ ಸೇರಿದಂತೆ ಮೇಲೆ ತಿಳಿಸಿದ ಎಲ್ಲಾ ಪದಾರ್ಥಗಳನ್ನು ಹಾಕಿ ರುಬ್ಬಿ.
* ಸರ್ವಿಂಗ್ ಗ್ಲಾಸ್‍ನಲ್ಲಿ ಸುರಿಯಿರಿ. ಹುರಿದ ಜೀರಿಗೆ ಪುಡಿಯಿಂದ ಜ್ಯೂಸ್ ಅಲಂಕರಿಸಿ.
* ಅಗತ್ಯವಿದ್ದರೆ ಹೆಚ್ಚುವರಿ ಐಸ್‍ಕ್ಯೂಬ್‍ಗಳನ್ನು ಸೇರಿಸಿ.
ಕಡುಬು ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ನಾವು ಇಂದು ಹೇಳುತ್ತಿರುವ ಕಡುಬು ಸಖತ್ ಸ್ಪೆಷಲ್ ಆಗಿದೆ. ಸೌತೆಕಾಯಿಂದ ಈ ಕಡುಬನ್ನು ತಯಾರಿಸಬಹುದಾಗಿದೆ. ಈ ಕಡುಬನ್ನು ಮಾಡಲು ಟ್ರೈ ಮಾಡಿ, ನಿಮ್ಮ ಮನೆ ಮಂದಿಗೆ ಇಷ್ಟವಾಗದೇ ಇರುವುದರಲ್ಲಿ ಯಾವುದೇ ಅನುಮಾನವಿಲ್ಲ.
ಬೇಕಾಗುವ ಸಾಮಗ್ರಿಗಳು:
* ಸೌತೆಕಾಯಿ- 2 ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಅಕ್ಕಿ- 1 ಕಪ್
* ಬೆಲ್ಲ – ಸ್ವಲ್ಪ
* ತೆಂಗಿನಕಾಯಿ – ಅರ್ಧ ಕಪ್
* ತುಪ್ಪ – ಸ್ವಲ್ಪ
ಮಾಡುವ ವಿಧಾನ
* ಸೌತೆಕಾಯಿಯನ್ನು ತೆಗೆದುಕೊಂಡು ಪೂರ್ಣವಾಗಿ ತುರಿಯಿರಿ. ರಸವನ್ನು ಹಿಂಡಿ. ಸೌತೆಕಾಯಿ ಮತ್ತು ರಸವನ್ನು ಬೇರೆ ಮಾಡಿಟ್ಟುಕೊಳ್ಳಬೇಕು. ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ
* ಅಕ್ಕಿಯನ್ನು ರಾತ್ರಿಯಿಡೀ ನೆನೆಸಿಟ್ಟಿರಬೇಕು.
* ಮಿಕ್ಸಿಗೆ ಬೆಲ್ಲ, ತೆಂಗಿನಕಾಯಿ ಸೇರಿಸಿ ಸೌತೆಕಾಯಿ ರಸವನ್ನು ಸೇರಿಸಿ ರುಬ್ಬಿಕೊಳ್ಳಬೇಕು.
ತಂಬುಳಿ ಊಟ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹಿರಿಯರು ಮನೆಯಲ್ಲಿ ಹೇಳುವುದನ್ನು ನಾವು ಕೇಳಿದ್ದೇವೆ. ಯಾವುದೇ ತಂಬುಳಿ ಮಾಡುವಾಗ ಹೆಚ್ಚು ಮಸಾಲೆ ಪದಾರ್ಥವನ್ನು ಬಳಕೆ ಮಾಡುವುದಿಲ್ಲ. ಹೀಗಾಗಿ ಆರೋಗ್ಯಕ್ಕೆ ಒಳ್ಳೆಯದಾಗಿದೆ. ಸೌತೆಕಾಯಿಂದ ತಯಾರಿಸುವ ಈ ತಂಬುಳಿ ನಾಲಗೆಗೆ ರುಚಿ ಮಾತ್ರವಲ್ಲ ನಿಮ್ಮ ಆರೋಗ್ಯಕ್ಕೂ ಹಿತವಾದ ಅಡುಗೆಯಾಗಿದೆ. ಕುಡಿಯಲೂ ಸೂಪರ್ ಅಷ್ಟೇ ಅಲ್ಲ ಅನ್ನಕ್ಕೆ ಕಲಸಿಕೊಂಡು ಊಟ ಮಾಡಲು ಕೂಡ ಟೇಸ್ಟಿಯಾಗಿರುತ್ತೆ. ಹಾಗಿದ್ದರೆ ಇನ್ಯಾಕೆ ತಡ ಸೌತೆಕಾಯಿ ತಂಬುಳಿ ಮಾಡು ವಿಧಾನವನ್ನು ನೋಡೋಣ.
ಬೇಕಾಗುವ ಸಾಮಗ್ರಿಗಳು:
* ಸೌತೆಕಾಯಿ – 2
* ಜೀರಿಗೆ – 1 ಚಮಚ
* ತೆಂಗಿನ ತುರಿ – ಅರ್ಧ ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಮಜ್ಜಿಗೆ – 2ಕಪ್
* ಅಡುಗೆಎಣ್ಣೆ ಅಥವಾ ತುಪ್ಪ – 4 ಚಮಚ
* ಕೆಂಪು ಬ್ಯಾಡಗಿ ಮೆಣಸು – 4
ಮಾಡುವ ವಿಧಾನ:
* ಮೊದಲು ಸೌತೆಕಾಯಿಯನ್ನು ಸಣ್ಣದಾಕಿ ಕಟ್ ಮಾಡಿಕೊಳ್ಳಬೇಕು.
* ಸೌತೆಕಾಯಿ, ಜೀರಿಗೆ, ತೆಂಗಿನತುರಿ ಹಾಕಿ ಮಿಕ್ಸಿ ಮಾಡ್ಕೊಳ್ಳಿ. ರುಬ್ಬಿದ ಮಿಶ್ರಣದಿಂದ ಹಾಲನ್ನು ಬೇರ್ಪಡಿಸಿಕೊಂಡ್ರೆ ತಂಬುಳಿ ರುಚಿ ಅನ್ನಿಸುತ್ತೆ.
* ಎಣ್ಣೆ ಕಾದ ಬಳಿಗೆ ಜೀರಿಗೆ, ಕೆಂಪುಬ್ಯಾಡಗಿ ಮೆಣಸನ್ನು ಹಾಕಿ ಚಟಿಪಟಿ ಮಾಡಿ ತಂಬುಳಿಗೆ ಹಾಕಿ ಒಗ್ಗರಣೆ ನೀಡಿದರೆ ರುಚಿರುಚಿಯಾದ ತಂಬುಳಿ ಸಿದ್ಧವಾಗುತ್ತೆ. ಇದನ್ನೂ ಓದಿ:ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ
– ಆನ್‍ಲೈನ್ ದ್ರಾಕ್ಷಿ ಮಾರಾಟಕ್ಕೆ ಕ್ರಮ
– ಪರಿಸ್ಥಿತಿಯ ದುರ್ಲಾಭ ಪಡೆದರೆ ಕಠಿಣ ಕ್ರಮ
ವಿಜಯಪುರ: ರೈತ ಸಮುದಾಯಕ್ಕಾಗುವ ತೊಂದರೆ ಇಡೀ ದೇಶಕ್ಕಾಗುವ ತೊಂದರೆಯಿದ್ದಂತೆ. ಹೀಗಾಗಿ ರೈತರಿಗೆ ಅನುಕೂಲವಾಗಲೆಂದು ಕೃಷಿ ಉತ್ಪನ್ನಗಳ ಸುಲಲಿತ ಮಾರಾಟಕ್ಕೆ ಅಂತರಾಜ್ಯ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಸಚಿವರು ಕೊರೊನಾ ಹಿನ್ನಲೆಯಲ್ಲಿ ರೈತ ಮತ್ತು ಕೃಷಿ ಚಟುವಟಿಕೆಗಳ ಕುರಿತು ಜಿಲ್ಲಾ ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖೆ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ವಿಜಯಪುರ ಜಿಲ್ಲಾ ಕೃಷಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿ ರೈತರು, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು, ಜಿಲ್ಲೆಯಲ್ಲಿ ಪ್ರಸ್ತುತ ಯಾವುದೇ ಕೃಷಿ ಚಟುವಟಿಕೆ ನಡೆಯುತ್ತಿಲ್ಲ. ಈ ಚಟುವಟಿಕೆಗಳು ಜೂನ್ ನಂತರ ಪ್ರಾರಂಭವಾಗಲಿದ್ದು, ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದರು. ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಆನ್‍ಲೈನ್ ಟ್ರೆಡಿಂಗ್ ಕೊರತೆಗಳ ಬಗ್ಗೆ ಸಚಿವರ ಗಮನ ಸೆಳೆದರು. ರೈತರು, ಅಧಿಕಾರಿಗಳು ಮತ್ತು ಜಿಲ್ಲೆಯ ಶಾಸಕರಿಂದ ಅಗತ್ಯ ಮಾಹಿತಿ ಪಡೆದ ನಂತರ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾತನಾಡಿ ಸೂಕ್ತ ನಿರ್ದೇಶನಗಳನ್ನು ನೀಡಿದರು.
ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಎಲ್ಲಾ ಇಲಾಖೆಗಳ ಸಭೆ ನಡೆಸಿದ್ದೇನೆ. ಈ ಸಭೆಯ ಮುಖ್ಯ ಉದ್ದೇಶ ರೈತರಿಗೆ ಅನುಕೂಲ ಕಲ್ಪಿಸುವುದಾಗಿದೆ. ವಿಜಯಪುರ ಜಿಲ್ಲೆಗೆ ಬೇಕಾದ ಎಲ್ಲಾ ಬೀಜ, ಗೊಬ್ಬರ ವ್ಯವಸ್ಥೆ ಆಗಿದೆ. ಕಡಲೇ ಖರೀದಿಗೆ ಕೇಂದ್ರಗಳನ್ನು ತೆರೆಯಬೇಕು. ಇಲ್ಲದಿದ್ದರೆ ಬೆಳೆಗಾರರಿಗೆ ನಷ್ಟವುಂಟಾಗುತ್ತದೆ. ಸಾರಿಗೆ ಸಮಸ್ಯೆಯೂ ಉಂಟಾಗುತ್ತದೆ. ಆದ್ದರಿಂದ ಖರೀದಿ ಕೇಂದ್ರ ತೆರೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ವ್ಯಾಪಕ ಪ್ರಚಾರವೂ ಅಗತ್ಯವಿದ್ದು, ಮುದ್ರಣ ಮತ್ತು ದೃಶ್ಯ ಮಾಧ್ಯಮಗಳ ನೆರವು ಪಡೆಯುವಂತೆ ಸಲಹೆ ನೀಡಿದರು.
ದ್ರಾಕ್ಷಿ ಬೆಳೆಗಾರರು ಗಮನ ಸೆಳೆದ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ದ್ರಾಕ್ಷಿ ಆನ್‍ಲೈನ್ ವ್ಯಾಪಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ತೊಡಕುಗಳಿದ್ದರೂ ನಿವಾರಿಸಲು ಜಿಲ್ಲಾಧಿಕಾರಿಗೆ ಕೃಷಿ ಸಚಿವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆ ಉತ್ತಮವಾಗಿ ಬಂದಿದೆ. ಆದರೆ ಕಿಡಿಗೇಡಿಗಳು ಕಲ್ಲಂಗಡಿ ತಿಂದರೆ ರೋಗ ಬರುತ್ತದೆ ಎಂದು ವದಂತಿ ಹಬ್ಬಿಸಿದ್ದಾರೆ. ಇದು ಸುಳ್ಳು, ಹೀಗೆ ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಬಿ.ಸಿ ಪಾಟೀಲ್ ಎಚ್ಚರಿಕೆ ನೀಡಿದರು.
ಕಲ್ಲಂಗಡಿ, ಸೌತೆಕಾಯಿ ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಬಗ್ಗೆ ವೈದ್ಯರು ಹೇಳಿಕೆ ನೀಡಿದ್ದಾರೆ. ಅವರಿಂದ ಮಾಹಿತಿಗಳನ್ನು ಪಡೆಯಲಾಗಿದೆ. ಆದ್ದರಿಂದ ಭೀತಿಯಿಲ್ಲದೇ ಈ ಹಣ್ಣುಗಳ ಸೇವನೆ ಮಾಡುವಂತೆ ಸಚವರು ಸಲಹೆ ನೀಡಿದರು. ಕಲ್ಲಂಗಡಿ ತಿಂದರೆ ಕೊರೊನಾ ಬರುತ್ತೆ ಅಂತ ಅಪಪ್ರಚಾರ ಮಾಡಲಾಗಿದೆ. ಹಾಗಾಗಿ ಕಲ್ಲಂಗಡಿ ಮಾರಾಟ ಆಗುತ್ತಿಲ್ಲ ಎಂದು ದೂರುಗಳು ಬಂದಿವೆ. ಒಂದು ಮೂಲದ ಪ್ರಕಾರ, ಕಲ್ಲಂಗಡಿ ಹಾಗೂ ಸವತೆಕಾಯಿ ತಿಂದರೆ ಮನುಷ್ಯನ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹೀಗಾಗಿ ಯಾರೂ ಭಯಪಡಬಾರದು. ರೈತರಿಗೆ ಯಾರೇ ಅಧಿಕಾರಿಗಳು ತೊಂದರೆ ಮಾಡಿದಲ್ಲಿ ಅಂಥವರ ಮೇಲೆ ಹಿಂದುಮುಂದು ನೋಡದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆ. ಹಾಪ್ ಕಾಮ್ಸ್ ನಲ್ಲಿ ತರಕಾರಿ, ಹಣ್ಣು, ಮೊಟ್ಟೆ ಮಾರಾಟಕ್ಕೆ ಸೂಚಿಸಲಾಗಿದೆ. ರೈತರೆಲ್ಲ ಹೆದರಬಾರದು, ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ಹಾಗೆಯೇ ಯಾರಾದರೂ ಪರಿಸ್ಥಿತಿಯ ದುರ್ಲಾಭ ಪಡೆದುಕೊಳ್ಳುವುದಾಗಲೀ, ಪಡೆದುಕೊಂಡಿದ್ದಾಗಲಿ ತಮ್ಮ ಗಮನಕ್ಕೆ ಬಂದರೆ ಅವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮಜರುಗಿಸ ಬೇಕಾಗುತ್ತದೆ ಎಂದು ಕೃಷಿ ಸಚಿವರು ಖಡಕ್ ಎಚ್ಚರಿಕೆ ನೀಡಿದರು.
ತಾವು ಹಾಗೂ ಸರ್ಕಾರ ರೈತರ ಜೊತೆಗೆ ಇದ್ದೇವೆ. ರೈತರು ಹತಾಶರಾಗಬಾರದು. ಕೊರೊನಾ ಹಾವಳಿ ಆದಷ್ಟು ಬೇಗ ಕಡಿಮೆಯಾಗಲಿದೆ, ನಾವೆಲ್ಲರೂ ಇದರಿಂದ ಪಾರಾಗುತ್ತೇವೆ. ಕೊರೊನಾ ಎಂಬ ಸಾಮಾಜಿಕ ಕುತ್ತು ಆದಷ್ಟು ಬೇಗ ನಿವಾರಣೆಯಾಗಲಿದೆ. ಕೊರೊನಾ ಕಂಟಕದಿಂದ ಪಾರಾಗಿ ಜನರನ್ನು ಬದುಕಿಸಿಕೊಳ್ಳುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು. ಹಾಗೆಯೇ ರಾಜ್ಯದ ಸಹಕಾರ ಸಚಿವರು 1200 ಕೋಟಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಕೃಷಿಗೆ ಸಂಬಂಧಿಸಿದ ಸೊಸೈಟಿಗಳ ಚಟುವಟಿಕೆಗೆ ಯಾವುದೇ ತೊಂದರೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಲ್ಲದೇ ಜಿಲ್ಲಾಧಿಕಾರಿಗಳ ಕಾರ್ಯಾಲಯ ಮುಂಭಾಗದಲ್ಲಿ ರೈತರಿಂದ ನೇರವಾಗಿ ಗ್ರಾಹಕರ ಮನೆಬಾಗಿಲಿಗೆ ತಾಜಾ ಹಣ್ಣು ಮತ್ತು ತರಕಾರಿ ಮಾರಾಟ ಸೇವೆಗೆ ಕೃಷಿ ಸಚಿವರು ಚಾಲನೆ ನೀಡಿದರು. ಶಾಸಕರಾದ ಶಿವಾನಂದ್ ಪಾಟೀಲ್, ಅರುಣ್ ಶಾಪುರ್, ಬಸನಗೌಡ ಪಾಟೀಲ್ ಯತ್ನಾಳ, ಈಶ್ವಂತ್ ರಾಯ್, ದೇವಾನಂದ್ ಚೌಹಣ್, ಮುರುಗೇಶ್ ನಿರಾಣಿ ಸೇರಿದಂತೆ ಇಲಾಖಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಲಂಗಡಿ ಹಾಗೂ ಸೌತೆಕಾಯಿ ಹಣ್ಣು ತಿಂದರೆ ಲಂಗ್ಸ್ ಕ್ಲಿಯರ್ ಆಗುತ್ತೆ, ಇದರಿಂದ ಕೊರೊನಾ ಬರದಂತೆ ನಾವು ತಡೆ ಹಿಡಿಯಬಹುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ನಡೆದ ಕೃಷಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಲ್ಲಂಗಡಿ ಹಣ್ಣು ತಿಂದರೆ ಕೊರೊನಾ ಬರುತ್ತೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ ವಿಜ್ಞಾನಿಗಳ ಪ್ರಕಾರ ಕಲ್ಲಂಗಡಿ ಹಾಗೂ ಸೌತೆಹಣ್ಣು ಜಾಸ್ತಿ ತಿನ್ನಬೇಕು. ಈ ಮೂಲಕ ಲಂಗ್ಸ್ ಕ್ಲಿಯರ್ ಇದ್ದರೆ ಕೊರೊನಾ ಸಹ ಬರುವುದಿಲ್ಲ ಎಂದರು.
ಇದರ ಬಗ್ಗೆ ಜನರಿಗೆ ಮಾಧ್ಯಮದವರು ಹಾಗೂ ಅಧಿಕಾರಿಗಳು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು. ಸಭೆಗೂ ಮುನ್ನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತ ಚಂದ್ರಕಾಂತ ಕುಟುಂಬಕ್ಕೆ, ಸರ್ಕಾರದ 5 ಲಕ್ಷ ಹಾಗೂ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಪರಿಹಾರದ ಚೆಕ್‍ನ್ನು ಬಿ.ಸಿ.ಪಾಟೀಲ್ ವಿತರಿಸಿದರು. ಇದೇ ವೇಳೆ ಮಾತನಾಡಿದ ಸಚಿವರು ಯಾವುದೇ ಕಾರಣಕ್ಕೂ ರೈತರ ಬೆಳೆದ ಸಾಮಗ್ರಿಗಳನ್ನು ಪೊಲೀಸರು ತಡೆಹಿಡಿಯ ಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಹೇಳಿದ್ದರು.
ಮೈಸೂರು: ಜಿಲ್ಲೆಯ ಮಾರುಕಟ್ಟೆಯಲ್ಲಿ ಸೌತೆಕಾಯಿ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡು ರೈತರು ಕಂಗಾಲಾಗಿದ್ದಾರೆ.
ನೆರೆ ಪ್ರವಾಹದಿಂದ ಮೊದಲೇ ತತ್ತರಿಸಿ ಹೋಗಿದ್ದ ರೈತರಿಗೆ ಈಗ ಸೌತೆಕಾಯಿ ಬೆಲೆ ದಿಢೀರನೆ ಭಾರೀ ಇಳಿಕೆ ಕಂಡಿರೋದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಚಳಿಗಾಲದ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿದಷ್ಟು ಸೌತೆಕಾಯಿ ಬೆಲೆ ಕುಸಿದಿದೆ. ಒಂದು ತಿಂಗಳ ಹಿಂದೆ 15 ರಿಂದ 20 ರೂಪಾಯಿ ಕೆಜಿ ಇದ್ದ ಸೌತೆಕಾಯಿ ಈಗ 2 ರಿಂದ ಮೂರು ರೂಪಾಯಿಗೆ ಇಳಿದಿದೆ. ಇದರಿಂದ ರೈತರಿಗೆ ಹಾಕಿದ ಬಂಡವಾಳವೂ ವಾಪಸ್ ಬರುತ್ತಿಲ್ಲ.
ಬಂಡವಾಳ ಇರಲಿ ಹೊಲದಿಂದ ಮಾರುಕಟ್ಟೆಗೆ ಸೌತೆಕಾಯಿ ಸಾಗಿಸಿದ ವಾಹನ ಬಾಡಿಗೆ ಹಣವೂ ಇದರಿಂದ ಸಿಗುತ್ತಿಲ್ಲ. ಸೌತೆಕಾಯಿಗೆ ಕನಿಷ್ಟ ಕೆಜಿಗೆ 10 ರೂಪಾಯಿ ಸಿಗದಿದ್ದರೆ ಹಾಕಿದ ಬಂಡವಾಳ ವಾಪಾಸ್ ಬರಲ್ಲ. ರೈತರು ಒಂದು ಎಕ್ರೆಯಲ್ಲಿ ಸೌತೆಕಾಯಿ ಬೆಳೆಯಲು ಕನಿಷ್ಟ 50 ಸಾವಿರ ರೂಪಾಯಿ ಖರ್ಚು ಮಾಡುತ್ತಾರೆ. ಇದರಿಂದ ಎಕ್ರೆಗೆ ಕನಿಷ್ಟ 10 ಸಾವಿರ ಕೆಜಿ ಇಳುವರಿ ಬರುತ್ತೆ. ಆದರೆ ಸೌತೆಕಾಯಿ ಬೆಲೆ ಈ ಮಟ್ಟದಲ್ಲಿ ಕುಸಿದ ಕಾರಣ ರೈತರು ಕಷ್ಟಕ್ಕೆ ಸಿಲುಕಿದ್ದಾರೆ.
ಸೌತೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ತಿಳಿದುಕೊಂಡಿರುತ್ತಾರೆ. ಕೆಲವರು ತಮ್ಮ ಡಯಟ್‍ಗೆಂದು ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ಒಳ್ಳೆಯದಾಗುತ್ತದೆ. ಸೌತೆಕಾಯಿ ಒಳ್ಳೆಯದು ಅಂತಾ ಹೆಚ್ಚಾಗಿ ಸೇವನೆ ಮಾಡಿದ್ರೆ ಅದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಕೆಲವು ಜನರು ಡಯಟ್ ಎಂದು ದಿನಕ್ಕೆ 8 ರಿಂದ 10 ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ನಮ್ಮ ದೇಹಕ್ಕೆ ಒಳ್ಳೆಯದಾಗುತ್ತೆ. ಆದರೆ ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ಅಮೃತವೂ ವಿಷವಾಗುತ್ತದೆ ಎನ್ನುವ ಗಾದೆ ಮಾತಿನಂತೆ ಸೌತೆಕಾಯಿ ಕೂಡ ವಿಷ ಆಗುತ್ತದೆ.
ರಾತ್ರಿ ಸಮಯದಲ್ಲಿ ಎಂದಿಗೂ ಸೌತೆಕಾಯಿ ತಿನ್ನಬೇಡಿ. ಬೆಳಗ್ಗೆ ಹೊತ್ತು ಸೌತೆಕಾಯಿ ತಿಂದರೆ ನಿಮ್ಮ ದೇಹಕ್ಕೆ ಅಧಿಕ ಲಾಭವಾಗುತ್ತದೆ. ಮಧ್ಯಾಹ್ನ ತಿಂದರೆ ಸಾಮಾನ್ಯವಾಗಿ ಒಳ್ಳೆಯದಾಗುತ್ತದೆ. ಆದರೆ ರಾತ್ರಿ ಸೌತೆಕಾಯಿ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ.
ಸೌತೆಕಾಯಿಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಕುಕುರ್ಬಿಟೈನ್ ಎಂಬ ವಿಷಕಾರಿ ಅಂಶವಿರುತ್ತದೆ. ನೀವು ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ನಿಮ್ಮೆ ದೇಹದಲ್ಲಿ ಟಾಕ್ಸಿಕ್ ಅಂಶ ಸೇರುತ್ತದೆ. ಇದರಿಂದ ನಿಮ್ಮ ಲಿವರ್, ಪ್ಯಾಂಕ್ರಿಯಾಟಿಕ್ ಮತ್ತು ಮೂತ್ರಪಿಂಡ ಊತವಾಗುತ್ತದೆ. ಹಾಗಾಗಿ ಸೌತೆಕಾಯಿಯನ್ನು ಮಿತಿಯಲ್ಲಿ ತಿಂದರೆ ಉತ್ತಮ.
ಸೌತೆಕಾಯಿ ತಣ್ಣಗಿನ ಪದಾರ್ಥ. ನಿಮಗೆ ಕಫ, ಶೀತ, ನೆಗಡಿ ಅಥವಾ ಉಸಿರಾಟದ ಸಮಸ್ಯೆ ಇದ್ದರೆ ಸೌತೆಕಾಯಿ ತಿನ್ನಬೇಡಿ. ಸೌತೆಕಾಯಿಯನ್ನು ಮಿತವಾಗಿ ಸೇವನೆ ಮಾಡಿದ್ದಲ್ಲಿ ನಿಮ್ಮ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ.