Tag: Cult Movie

  • ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್

    ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್

    ಟ ಝೈದ್ ಖಾನ್ (Zaid Khan) ಅವರು ತಮ್ಮ ಮೊದಲ ಚಿತ್ರ ಬನಾರಸ್ ಮೂಲಕವೇ ಎಲ್ಲರ ಗಮನ ಸೆಳಿದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರ ಕಲ್ಟ್. ಉಪಾಧ್ಯಕ್ಷ ಸೇರಿದಂತೆ ಯಶಸ್ವಿ ಚಿತ್ರಗಳ ನಿರ್ದೇಶಕ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಚಿತರಾಮ್ ಹಾಗೂ ಮಲೈಕಾ ಈ ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಅಯ್ಯೋ ಶಿವನೇ ಇತ್ತೀಚೆಗೆ ಬಿಡುಗಡೆ ಆಗಿದೆ.

    ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡನ್ನು ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ. ಝೈದ್ ಖಾನ್ ಹಾಗೂ ಮಲೈಕ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ ಕಲ್ಟ್ ಚಿತ್ರದ ಮೊದಲ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ಅಯ್ಯೋ ಶಿವನೇ ಹಾಡಿಗೆ ಸಿಗುತ್ತಿರುವ ಪ್ರಶಂಸೆಗೆ ಆನಂದ್ ಆಡಿಯೋ ಸಂಸ್ಥೆ ಸಹ ಸಂತೋಷ ವ್ಯಕ್ತಪಡಿಸಿದೆ. ಇದನ್ನೂ ಓದಿ: ಮರಳಿ ಮನಸಾಗಿದೆ ಸಾಂಗ್ ರಿಲೀಸ್ ಮಾಡಿದ ನಟಿ ಪ್ರೇಮಾ

    ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹು ನಿರೀಕ್ಷಿತ `ಕಲ್ಟ್’ (Cult movie) ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಇದನ್ನೂ ಓದಿ: ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್

  • ಕಲ್ಟ್ ಸಿನಿಮಾದ ಅಯ್ಯೊ ಶಿವನೇ ಹಾಡಿನ ರಿಲೀಸ್ ಡೇಟ್ ಫಿಕ್ಸ್

    ಕಲ್ಟ್ ಸಿನಿಮಾದ ಅಯ್ಯೊ ಶಿವನೇ ಹಾಡಿನ ರಿಲೀಸ್ ಡೇಟ್ ಫಿಕ್ಸ್

    ನಾರಸ್ (Banaras) ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಉಪಾಧ್ಯಕ್ಷ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” (Cult) ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಝೈದ್ ಖಾನ್, ರಚಿತರಾಮ್ ಹಾಗೂ ಮಲೈಕ ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

    ಈಗಾಗಲೇ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಮೊದಲ ಹಾಡು “ಅಯ್ಯೊ ಶಿವನೇ” ಇದೇ ಸೆಪ್ಟೆಂಬರ್ 10 ರಂದು ಆನಂದ್ ಆಡಿಯೋ (Anand Audio) ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೇ ಬರೆದಿರುವ ಈ ಹಾಡನ್ನು ಜನಪ್ರಿಯ ಗಾಯಕ – ಗಾಯಕಿ ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ.ಇದನ್ನೂ ಓದಿ: ಯಶ್ ನಟನೆಯ ರಾಮಾಯಣ-2 ಚಿತ್ರಕ್ಕೆ VFX ಗಾಗಿ ಗಾಡ್ಜಿಲ್ಲ ತಂತ್ರಜ್ಞರು ಎಂಟ್ರಿ

    ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಮಲೈಕ ಅಭಿನಯಿಸಿದ್ದಾರೆ. ಈಗಾಗಲೇ ಈ ಮೊದಲ ಹಾಡಿನ ಪ್ರೋಮೋ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಪ್ರೋಮೋದಲ್ಲೇ ಗಮನ ಸೆಳೆದಿರುವ “ಅಯ್ಯೋ ಶಿವನೇ” ಹಾಡನ್ನು ಆಲಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ “ಕಲ್ಟ್” ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.ಇದನ್ನೂ ಓದಿ: ಪವನ್ ಕಲ್ಯಾಣ್ ಅಭಿಮಾನಿಗಳಿಂದ ಸರ್ ಎಂ.ವಿಶ್ವೇಶ್ವರಯ್ಯ ವಿದ್ಯಾಭ್ಯಾಸ ಮಾಡಿದ ಶಾಲೆಯ ನವೀಕರಣ

  • ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ – ಕಲ್ಟ್ ಚಿತ್ರದ ವಿರುದ್ಧ ಕೇಸ್

    ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ – ಕಲ್ಟ್ ಚಿತ್ರದ ವಿರುದ್ಧ ಕೇಸ್

    ಕೊಪ್ಪಳ: ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ ಮಾಡಿದ್ದಕ್ಕೆ ಕಲ್ಟ್ ಸಿನಿಮಾ (Cult Movie) ವಿರುದ್ಧ ಗಂಗಾವತಿ (Gangavathi Forest Area) ವಲಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ

    ಜನವರಿ 31ರಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಜೈದ್ ಖಾನ್ ಹಾಗೂ ರಚಿತಾ ರಾಮ್ ನಟನೆಯ ಕಲ್ಟ್ ಚಿತ್ರ ತಂಡ ಗಂಗಾವತಿ ತಾಲೂಕಿನ, ಸಾಣಾಪುರ, ರಂಗಾಪುರ ಸೇರಿ ತುಂಗಭದ್ರಾ ದಡದಲ್ಲಿ ಚಿತ್ರೀಕರಣ ಮಾಡಿದ್ದರು. ತುಂಗಭದ್ರಾ ನೀರು ಸಂರಕ್ಷಿತ ಪ್ರದೇಶದಲ್ಲಿ ನಿಯಮ ಮೀರಿ ಚಿತ್ರೀಕರಣ ನಡೆಸಿದ್ದಕ್ಕೆ ದೂರು ದಾಖಲಾಗಿದೆ.

    ಈ ಕುರಿತು ಅರಣ್ಯ ಅಧಿಕಾರಿಗಳ ಬಳಿ ಮಾಹಿತಿ ಕೇಳಿದಾಗ ನಿರಾಕರಿಸಿ, ಮಾಹಿತಿ ಬೇಕಾದರೆ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಿಸುವಂತೆ ತಿಳಿಸಿದ್ದಾರೆ. ಇದೀಗ ಅಧಿಕಾರಿಗಳ ಮೇಲೆ ಸಚಿವ ಜಮೀರ್ ಅಹ್ಮದ್ ಒತ್ತಡ ಹೇರಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.ಇದನ್ನೂ ಓದಿ: ಕಾಂಗ್ರೆಸ್‌ನಿಂದ 50 ಕೋಟಿಗೂ ಅಧಿಕ ಮೌಲ್ಯದ ವಿವಾದಿತ ಜಾಗ ಕಬ್ಜಾ: ಬಿಜೆಪಿ ಆರೋಪ