Tag: curriculum

  • ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‍ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು 2022-23ನೇ ಸಾಲಿನ ಹತ್ತನೆಯ ತರಗತಿಯ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ಶಿಕ್ಷಣದ ಕೇಸರೀಕರಣದ ಮುಂದುವರಿದ ಭಾಗವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ವಿರೋಧಿಸಿದೆ.

    ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡ್ಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್‌ಎಸ್‍ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯ ಎಂದು ಕ್ಯಾಂಪಸ್ ಫ್ರಂಟ್ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್ ಭಾಷಣವನ್ನು ಓದಲಿದ್ದಾರೆ ವಿದ್ಯಾರ್ಥಿಗಳು

    ಕಾರಣವೇನು?
    ಹೆಗ್ಡೆವಾರ್ ಅವರ ಶಿಕ್ಷಣದ ನಂತರ ಬಂಗಾಳದಲ್ಲಿ ಅನುಶೀಲನ್ ಸಮಿತಿ(ಹಿಂದೂ ಕ್ರಾಂತಿಕಾರಿಗಳು) ಅದರ ಭಾಗವಾಗಿದ್ದರು. 1920ರ ದಶಕದಲ್ಲಿ ಕಾಂಗ್ರೆಸ್‍ಗೆ ಸೇರಿದರು. ಆದರೆ ಹಿಂದೂ ಮತ್ತು ಮುಸಲ್ಮಾನರ ನಡುವೆ ಐಕ್ಯತೆಯ ನೀತಿಯನ್ನು ಕಾಂಗ್ರೆಸ್ ಪಾಲಿಸುತ್ತಿದೆಯೆಂದು ಅದನ್ನು ತೊರೆದರು. ಖಿಲಾಫತ್ ಹೋರಾಟದಿಂದಾಗಿ ಮಹಾತ್ಮ ಗಾಂಧಿಯವರು ಆರಂಭಿಸಿದ ಅಸಹಕಾರ ಚಳುವಳಿಯನ್ನು ಹೆಡ್ಗೆವಾರ್ ಒಪ್ಪಲಿಲ್ಲ, ನಂತರ ಹಿಂದೂ ರಾಷ್ಟ್ರದ ಗುರಿಗಾಗಿ 1925ರಲ್ಲಿ ಆರ್‌ಎಸ್‌ಎಸ್‌ ಸ್ಥಾಪಿಸಿದರು.

    1929ರಲ್ಲಿ ಲಾಹೋರ್ ಅಧಿವೇಶನದಲ್ಲಿ ಕಾಂಗ್ರೆಸ್ ಪೂರ್ಣ ಸ್ವರಾಜ್ ಅಂಗೀಕರಿಸಿತು. ಕಾಂಗ್ರೆಸ್ ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಅವರು ಭಗವಾಧ್ವಜವನ್ನು ಹಾರಿಸಲು ಆರ್‌ಎಸ್‍ಎಸ್ ಕಾರ್ಯಕರ್ತರನ್ನು ಒತ್ತಾಯಿಸಿದರು. ಸಂಘದ ಯಾವುದೇ ಜವಾಬ್ದಾರಿಯುತ ಕಾರ್ಯಕರ್ತರು 1930ರ ದಶಕದಲ್ಲಿ ನಡೆದ ಗಾಂಧೀಜಿಯವರ ದಂಡಿಯಾತ್ರೆ ಅಥವಾ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಬಾರದು ಎಂದು ಸಿ.ಪಿ.ಭಿಷಿಕರ್ ಬರೆದ ಹೆಡ್ಗೆವಾರ್‌ ಅವರ ಅಧಿಕೃತ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಇಂತಹ ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ಧಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ. ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸಿದೆ. ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರವೇ ಪಠ್ಯಕ್ರಮದಿಂದ ಕೈ ಬಿಡಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.

  • ಶಾಲಾ ಪಠ್ಯಕ್ರಮಗಳಲ್ಲಿ ‘ಸೈಬರ್ ಸುರಕ್ಷತೆ’ ಅಧ್ಯಯನ ಅಳವಡಿಕೆ

    ಶಾಲಾ ಪಠ್ಯಕ್ರಮಗಳಲ್ಲಿ ‘ಸೈಬರ್ ಸುರಕ್ಷತೆ’ ಅಧ್ಯಯನ ಅಳವಡಿಕೆ

    ತಿರುವನಂತಪುರಂ: ‘ಸೈಬರ್ ಸುರಕ್ಷತೆ’ ಈಗ ಕೇರಳದ ಶಾಲಾ ಪಠ್ಯಕ್ರಮದ ಒಂದು ಭಾಗವಾಗಿದೆ.

    ರಾಜ್ಯದ ಪ್ರೌಢಶಾಲೆಗಳಲ್ಲಿ ‘ಲಿಟಲ್ ಕೈಟ್ಸ್’ ಘಟಕಗಳ ಮೂಲಕ ಮೂರು ಲಕ್ಷ ತಾಯಂದಿರಿಗೆ ಸೈಬರ್ ಸುರಕ್ಷತೆ ತರಬೇತಿ ನೀಡಬೇಕೆಂದು ಸರ್ಕಾರ ನಿರ್ಧರಿಸಿದೆ. ಈ ತರಬೇತಿ ಕೇಂದ್ರವನ್ನು ರಾಜ್ಯ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಉದ್ಘಾಟಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ತೊರೆದ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

    Getting started in cybersecurity – 6 essential skills to consider | 2021-07-15 | Security Magazine

    ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಎರಡು ಲಕ್ಷ ತಾಯಂದಿರಿಗೆ ‘ಸೈಬರ್ ಸುರಕ್ಷತೆ’ ಬಗ್ಗೆ ತರಬೇತಿ ನೀಡಬೇಕು ಎಂಬ ಯೋಜನೆ ಇತ್ತು. ಆದರೆ ನಂತರ ಅದನ್ನು 3 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕ್ಷೇತ್ರಗಳಲ್ಲಿ ‘ಸೈಬರ್ ಸುರಕ್ಷತೆ’ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಮುಖ್ಯ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆ ಮತ್ತು ಪ್ರತಿಕ್ರಿಯೆಯನ್ನು ನೋಡಿದ ಅವರು, ವಿದ್ಯಾರ್ಥಿಗಳು ಮತ್ತು ತಾಯಂದಿರು ಸೇರಿದಂತೆ 10 ಲಕ್ಷ ಫಲಾನುಭವಿಗಳಿಗೆ ಸೈಬರ್ ಸುರಕ್ಷತೆ ತರಬೇತಿಯನ್ನು ನೀಡಲಾಗುವುದು ಎಂದು ಘೋಷಿಸಿದರು.

    Types of Cybersecurity Careers | University of Nevada, Reno

    ತರಬೇತಿಯ ವಿಷಯಗಳು ಸ್ಮಾರ್ಟ್‍ಫೋನ್‍ಗಳು, ಇಂಟರ್ನೆಟ್ ಮತ್ತು ಅದರ ಸುರಕ್ಷಿತ ಬಳಕೆಯನ್ನು ಒಳಗೊಂಡಿರುತ್ತದೆ. ಇದರಲ್ಲಿ ಹೊಸ ತಂತ್ರಜ್ಞಾನಗಳ ಪರಿಚಯ, ಒಟಿಪಿಗಳು ಮತ್ತು ಪಿನ್‍ಗಳಂತಹ ಪಾಸ್‍ವರ್ಡ್‍ಗಳ ಸುರಕ್ಷತೆ, ನಕಲಿ ಸುದ್ದಿಗಳನ್ನು ಗುರುತಿಸುವುದು ಮತ್ತು ತಡೆಗಟ್ಟುವುದು, ಸೈಬರ್ ದಾಳಿಗಳು ಮತ್ತು ಆನ್‍ಲೈನ್ ವಹಿವಾಟುಗಳನ್ನು ಕೈಗೊಳ್ಳುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ತರಗತಿಯನ್ನು ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮಾನಸಿಕ ಖಿನ್ನತೆಗೆ ಒಳಗಾಗಿ MBBS ವಿದ್ಯಾರ್ಥಿ ಆತ್ಮಹತ್ಯೆ

    ರಾಜ್ಯಾದ್ಯಂತ 2,000 ಪ್ರೌಢಶಾಲೆಗಳಲ್ಲಿ ‘ಲಿಟಲ್ ಕೈಟ್ಸ್’ ಘಟಕಗಳನ್ನು ತೆಗೆಯಬೇಕು. ಈ ಮೂಲಕ 30 ಜನರಿಗೆ, 5 ಸೆಷನ್‍ನಲ್ಲಿ ಮೂರು ಗಂಟೆಗಳ ಕ್ಲಾಸ್ ತೆಗೆದುಕೊಳ್ಳಬೇಕು ಎಂದು ವಿವರಿಸಿದರು.