Tag: Curry leaves

  • ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

    ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

    ರಿಬೇವು ಎಂದಾಕ್ಷಣ ಒಗ್ಗರಣೆಯ ನೆನಪಾಗುತ್ತದೆ. ಇದನ್ನು ಒಗ್ಗರಣೆ ಸೊಪ್ಪು ಎಂದು ಕೂಡ ಕರೆಯುತ್ತಾರೆ. ಕರಿಬೇವನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಉಪಯೋಗಿಸದಿದ್ದರೆ ರುಚಿಯೇ ಬರುವುದಿಲ್ಲ. ಸಾಂಬಾರಿಗೆ ಒಗ್ಗರಣೆ ಹಾಕಲು, ಬಜೆ ಮಾಡಲು, ಚಟ್ನಿ ಮಾಡಲು, ಪಲ್ಯ ಮಾಡುವಾಗ ಇದರ ಬಳಕೆ ಹೆಚ್ಚು. ಕರಿಬೇವು ಇಲ್ಲದ ಅಡುಗೆ ರುಚಿಹೀನ ಎನ್ನಬಹುದು. ಈ ಕರಿಬೇವು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಉಪಯೋಗಿಸುತ್ತಾರೆ. ಅಷ್ಟೆ ಅಲ್ಲದೆ ಕರಿಬೇವಿನಲ್ಲಿ ಕಾರ್ಬೋಹೈಡ್ರೇಟ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಸಿ, ಬಿ, ಎ ಪೋಷಕಾಂಶಗಳು ಇದ್ದು ಔಷಧೀಯ ಗುಣವನ್ನು ಹೊಂದಿದೆ.

    ಬಿಳಿ ಕೂದಲು ಕಡಿಮೆ: ಬಿಳಿ ಕೂದಲ ಸಮಸ್ಯೆಯನ್ನು ಕರಿಬೇವು ದೂರ ಮಾಡುತ್ತದೆ. ದೇಹದಲ್ಲಿ ಪೋಷಕಾಂಶದ ಕೊರತೆಯಾದಾಗ ಮಕ್ಕಳಿಗೆ ಕೂದಲು ಬೇಗ ಬಿಳಿಯಾಗುತ್ತದೆ. ಇಂತಹ ಸಮಸ್ಯೆಗೆ ಕರಿಬೇವು ತುಂಬಾ ಸಹಕಾರಿಯಾಗಿದೆ. ಹಾಗೂ ಕೂದಲ ಬೆಳವಣಿಗೆಗೂ ಉಪಯುಕ್ತವಾಗಿದೆ. ಕರಿಬೇವಿನ ಎಲೆಗಳನ್ನು ಒಣಗಿಸಿ, ಅದನ್ನು ಕೊಬ್ಬರಿ ಎಣ್ಣೆಯಲ್ಲಿ, ಎಣ್ಣೆ ಹಸಿರು ಬಣ್ಣಕ್ಕೆ ಬರುವವರೆಗೂ ಕುದಿಸಬೇಕು. ನಂತರ ತಣಿಸಿ ಕೂದಲಿಗೆ ಪ್ರತಿ ವಾರಕೊಮ್ಮೆ ಹಚ್ಚುವುದರಿಂದ ಕೂದಲು ಬಿಳಿಯಾಗುವುದನ್ನು ತಡೆಯಬಹುದು.

    ಎಸಿಡಿಟಿ ಕಡಿಮೆ: ಕರಿಬೇವಿನ ಮರದ ತೊಗಟೆಯನ್ನು ಒಣಗಿಸಿ, ಪುಡಿ ಮಾಡಿಕೊಂಡು, ಒಂದು ಚಮಚ ಆ ಪುಡಿಯನ್ನು ನೀರಲ್ಲಿ ಬೆರಸಿ ಸೇವಿಸದರೆ ಎಸಿಡಿಟಿ ಕಡಿಮೆಯಾಗುತ್ತದೆ. ಕರಿಬೇವಿಗೆ ಸಕ್ಕರೆ ಮತ್ತು ನಿಂಬೆ ರಸವನ್ನು ಸೇರಿಸಿ ಕಡಿಯುವುದರಿಂದ ಎಸಿಡಿಟಿ ಕಡಿಮೆ ಆಗುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ

    ಬೇಧಿ, ಆಮಶಂಕೆ ನಿವಾರಣೆ: ಎಳೆಯದಾದ ಕರಿಬೇವಿನ ಎಲೆಯನ್ನು ಜೇನು ತುಪ್ಪದೊಂದಿಗೆ ತಿನ್ನುವುದು, ಅಥವಾ ಕರಿಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಸೇರಿಸಿ ಕುಡಿಯುವುದರಿಂದ ಬೇಧಿ, ಆಮಶಂಕೆಯನ್ನು ನಿವಾರಿಸಬಹುದು.

    ಬೊಜ್ಜು ಕರಗಿಸಲು ಕರಿಬೇವು: ಕೆಲವರಿಗೆ ದೇಹದ ತೂಕ ಕಡಿಮೆ ಮಾಡುವುದು ಹೇಗೆ ಎಂಬುದೇ ದೊಡ್ಡ ಚಿಂತೆಯಾಗಿರುತ್ತದೆ. ಕರಿಬೇವು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಮೂಲಕ ದೇಹದ ತೂಕವನ್ನು ಕಡಿಮೆಗೊಳಿಸುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ 8 ರಿಂದ 10 ತಾಜಾ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ದೇಹದ ತೂಕ ಕಡಿಮೆ ಮಾಡಬಹುದು. ಇದನ್ನೂ ಓದಿ: ನೋಡಲು ಪುಟ್ಟದಾಗಿರುವ ನೆಲನೆಲ್ಲಿಯಿಂದ ಬೆಟ್ಟದಷ್ಟು ಪ್ರಯೋಜನ

    ಕಾಮಾಲೆ ರೋಗಕ್ಕೆ ಕರಿಬೇವು ಮದ್ದು:  ಕರಿಬೇವು ಕಾಮಾಲೆ ರೋಗಕ್ಕೆ ರಾಮಮದ್ದು ಆಗಿದೆ. 10 ರಿಂದ 12 ಕರಿಬೇವಿನ ಎಲೆಗಳನ್ನ ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಏಕೆಂದರೆ ಎಲೆಗಳ ಮೇಲೆ ಸಣ್ಣ ಪುಟ್ಟ ಕಶ್ಮಲಗಳು ಅಥವಾ ಹುಳು ಹಪ್ಪಟೆಗಳು ಹರಿದಿರುವ ಸಾಧ್ಯತೆ ಇರುತ್ತದೆ. ನಂತರ ಎಲೆಗಳನ್ನು ಅರೆದು ಆ ಮಿಶ್ರಣವನ್ನು ಸುಮಾರು 60 ರಿಂದ 100 ಮಿ.ಲೀ ಎಳೆನೀರಿನೊಂದಿಗೆ ಕುಡಿಯುವುದರಿಂದ ಕಾಮಾಲೆ ರೋಗವನ್ನು ಹೋಗಲಾಡಿಸಬಹುದು.

    ರಕ್ತಹೀನತೆ ನಿವಾರಣೆ: 1/2 ಚಮಚ ಕರಿಬೇವು ಸೊಪ್ಪಿನ ಪುಡಿಯನ್ನು, ಜೇನು ತುಪ್ಪದ ಜೊತೆ ಸಮ ಪ್ರಮಾಣದಲ್ಲಿ ಬೆರಸಿ ಸೇವಿಸುವುದರಿಂದ ಅದರಲ್ಲಿರುವ ಕಬ್ಬಿಣದ ಅಂಶ ರಕ್ತಹೀನತೆಯನ್ನು ನಿವಾರಿಸುತ್ತದೆ. ಕರಿಬೇವು ಅನೇಕ ರೋಗಗಳಿಗೆ ಸಹಕಾರಿಯಾಗಿದೆ. ಕರಿಬೇವಿನ ಕಷಾಯ ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಕಡಿಮೆ ಮಾಡುವುದರ ಮೂಲಕ ಜ್ವರವನ್ನು ಕಡಿಮೆಮಾಡಬಹುದು. ಮತ್ತು ಕರಿಬೇವು ಮೂಗು ಕಟ್ಟುವುದು, ಶ್ವಾಸಕೋಶದ ಸಮಸ್ಯೆ, ಮತ್ತು ಹೃದಯ ರೋಗದ ಸಮಸ್ಯೆಗಳನ್ನೂ ಹೋಗಲಾಡಿಸುತ್ತದೆ. ಆಲ್ಕೋಹಾಲ್ ಸೇವಿಸುವವರು ಆಹಾರದಲ್ಲಿ ಕರಿಬೇವನ್ನು ಸೇವಿಸುವುದರಿಂದ ಲಿವರ್ ಸಂಬಂಧಿತ ಕಾಯಿಲೆಗಳಿಂದ ದೂರವಿರಬಹುದು. ಇದನ್ನೂ ಓದಿ: ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದೀರಾ..?- ಹಾಗಾದರೆ ಇಲ್ಲಿದೆ ಮನೆ ಮದ್ದು

    Live Tv

  • ಕೂದಲು ಉದುರುವ ಸಮಸ್ಯೆಗೆ ಕರಿಬೇವಿನ ಎಲೆಗಳಲ್ಲಿದೆ ಪರಿಹಾರ

    ಕೂದಲು ಉದುರುವ ಸಮಸ್ಯೆಗೆ ಕರಿಬೇವಿನ ಎಲೆಗಳಲ್ಲಿದೆ ಪರಿಹಾರ

    ಕೂದಲು ಉದುರುವಿಕೆಗೆ ಹಲವು ಕಾರಣಗಳಿವೆ. ಆದರೆ ನಾವು ಅಂಗಡಿಯಲ್ಲಿ ಸಿಗುವ ಎಲ್ಲಾ ಶಾಂಪೂ, ಹೇರ್ ಆಯಿಲ್‍ಗಳನ್ನು ಬಳಸಿರುತ್ತೇವೆ. ಆದರೆ ಕೆಲವು ಬಾರಿ ನಾವು ನಮ್ಮ ಮನೆಯಲ್ಲಿ ಇರುವ ಮನೆ ಮದ್ದುಗಳನ್ನು ಬಳಸುವುದರಿಂದ ಈ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಕೂದಲು ಉದುರುವ ಸಮಸ್ಯೆಗೆ ಪರಿಹಾರ ನಿಮ್ಮ ಮನೆಯ ಹಿತ್ತಲಿನಲ್ಲೇ ಇದೆ.

    ಕೂದಲು ಉದುರುವಿಕೆ ತಡೆಯಲು ಹಲವಾರು ಶಾಂಪೂ ಹಾಗೂ ಇತರ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದರ ಪ್ರಭಾವ ಮಾತ್ರ ತಾತ್ಕಾಲಿಕ. ಇದನ್ನು ನಾವು ದೀರ್ಘಕಾಲದ ತನಕ ಬಳಸಿದರೆ ಅದರಿಂದ ಬೇರೆ ರೀತಿಯ ಅಡ್ಡಪರಿಣಾಮಗಳು ಬರಬಹುದು. ಹೀಗಾಗಿ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ತುಂಬಾ ಒಳ್ಳೆಯದು.

    * ಒಂದು ಕಪ್ ತೆಂಗಿನ ಎಣ್ಣೆಯಲ್ಲಿ ಒಂದು ಹಿಡಿ ಕರಿಬೇವಿನ ಎಲೆಗಳನ್ನು ಕುದಿಸಿ. ನಂತರ ಇದನ್ನು ಫಿಲ್ಟರ್ ಮಾಡಿ, ಕೂದಲಿನ ಬೇರುಗಳಿಗೆ ವಾರಕ್ಕೆ ಎರಡು ಬಾರಿ ಮಸಾಜ್ ಮಾಡಿ. ನಂತರ ನಿಮ್ಮ ತಲೆಯನ್ನು ಶಾಂಪೂ ಬಳಸಿ ತೊಳೆಯಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡಿ.

    * ಕರಿಬೇವಿನ ಎಲೆಗಳು, ನೆಲ್ಲಿಕಾಯಿ ಮಿಕ್ಸಿಯಲ್ಲಿ ಪುಡಿ ಮಾಡಿ ನಿಮ್ಮ ಕೂದಲಿಗೆ ಹಚ್ಚಿ. ನಂತರ 1 ಗಂಟೆಯ ನಂತರ ತಲೆ ತೊಳೆಯಿರಿ.

    * ಕರಿಬೇವಿನ ಎಲೆಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ಇದನ್ನು ಒಂದು ಕಪ್ ಮೊಸರಿನೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿ. ನಂತರ ಒಂದು ಗಂಟೆ ನೆನೆಸಿ ಮತ್ತು ತೊಳೆಯಿರಿ. ಹೀಗೆ ಮಾಡುವುದರಿಂದ ಕೂದಲು ಉದುರುವುದನ್ನು ತಡೆಯುವುದಲ್ಲದೆ ತಲೆಹೊಟ್ಟು ಕೂಡ ತಡೆಯಬಹುದು.

    * ಎರಡು ಚಮಚ ಮೆಂತ್ಯೆ ಕಾಳುಗಳನ್ನು ತೆಗೆದುಕೊಂಡು ಅದನ್ನು ಹುಡಿ ಮಾಡಿಕೊಳ್ಳಿ. 10-15 ಕರಿಬೇವಿನ ಎಲೆಗಳನ್ನು ತೆಗೆದುಕೊಳ್ಳಿ. ಎರಡು ಚಮಚ ನೆಲ್ಲಿಕಾಯಿ ಹುಡಿ ಹಾಕಿ ಮಿಶ್ರಣ ಮಾಡಿ. ಈ ಎಲ್ಲವನ್ನು ಸರಿಯಾಗಿ ಮಿಶ್ರಣ ಮಾಡಿ ಮತ್ತು ಇದನ್ನು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ತಲೆಬುರುಡೆ ಮತ್ತು ಕೂದಲಿಗೆ ಪೇಸ್ಟ್ ಬಳಸಿಕೊಳ್ಳಿ. 30 ನಿಮಿಷ ಕಾಲ ಹಾಗೆ ಬಿಡಿ ಮತ್ತು ಇದರ ಬಳಿಕ ಕೂದಲು ತೊಳೆಯಿರಿ.

    * ಎರಡು ಕಪ್ ನೀರು ಬಳಸಿಕೊಳ್ಳಿ ಮತ್ತು 10-15 ಕರಿಬೇವಿನ ಎಲೆಗಳನ್ನು ಹಾಕಿ ಕುದಿಸಿ. ಸ್ವಲ್ಪ ಸಮಯ ಇದನ್ನು ಸರಿಯಾಗಿ ಕುದಿಸಿ. ಶಾಂಪೂ ಹಾಕಿಕೊಂಡು ಕೂದಲು ತೊಳೆದ ಬಳಿಕ ಈ ನೀರಿನಿಂದ ಮತ್ತೆ ಕೂದಲು ತೊಳೆಯಿರಿ.

  • ಕರಿಬೇವಿನ ಸೇವನೆಯಿಂದ ಸಿಗಲಿದೆ ಹಲವು ಪ್ರಯೋಜನ

    ಕರಿಬೇವಿನ ಸೇವನೆಯಿಂದ ಸಿಗಲಿದೆ ಹಲವು ಪ್ರಯೋಜನ

    ರಿಬೇವಿನ ಎಲೆಗಳನ್ನು ಅಡುಗೆಗೆ ಒಗ್ಗರಣೆ ನೀಡಲು ಬಳಸುತ್ತೇವೆ ಎಂದು ನಮಗೆ ಗೊತ್ತು. ಆದರೆ ಇದರಿಂದ ಸಿಗುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ತಿಳಿದುಕೊಂಡರೆ ನೀವು ಪ್ರತಿನಿತ್ಯ ಕರಿಬೇವನ್ನು ಬಳಸುತ್ತೀರಿ.

     

    ಆಡುಗೆ ಮನೆಯ ವಿಚಾರಕ್ಕೆ ಬಂದರೆ ಪ್ರತಿಯೊಬ್ಬರ ಮನೆಯಲ್ಲಿ ಕರಿಬೇವಿನ ಎಲೆಗಳು ಆಹಾರದ ರುಚಿ ಮತ್ತು ವಾಸನೆಯನ್ನು ಹೆಚ್ಚಿಸಲು ಬಳಸಲಾಗುತ್ತದೆ. ಇದು ಮಾತ್ರವಲ್ಲದೇ ಕರಿಬೇವು ಔಷಧೀಯ ಗುಣಗಳನ್ನು ಕೂಡ ಹೊಂದಿದೆ.

    ಆರೋಗ್ಯಕಾರಿ ಪ್ರಯೋಜನಗಳು:
    * ಆಹಾರದಲ್ಲಿ ಕರಿಬೇವನ್ನು ಬಳಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

    * ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಕರಿಬೇವಿನ ಪಾತ್ರ ಬಹುಮುಖ್ಯವಾಗಿದೆ.
    * ಕರಿಬೇವಿನಲ್ಲಿ ಅನೇಕ ಔಷಧೀಯ ಗುಣಗಳಿರುವುದರಿಂದ ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

    * ಕರಿಬೇವಿನ ಎಲೆಗಳ ಸೇವನೆಯಿಂದ ದೇಹ ತೂಕವನ್ನು ನಿಯಂತ್ರಣದಲ್ಲಿಡಬಹುದು. ಇದರ ಎಲೆಗಳು ನಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ದೂರ ಮಾಡುತ್ತದೆ.
    * ಕೂದಲು ಬೇಳವಣಿಗೆಗೆ ಕರಿಬೇವನ್ನು ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕುದಿಸಿ ಹಚ್ಚಿಕೊಂಡರೆ ಒಳ್ಳೆಯದು.

    * ಖಾದ್ಯಗಳಿಗೆ ಹಾಕಿರುವ ಕರಿಬೇವಿನ ಎಲೆಗಳನ್ನು ತೆಗೆದು ಇಡದೆ ಸೇವಿಸುವುದರಿಂದ ಚರ್ಮದ ಸಮಸ್ಯೆ ನಿವಾರಣೆಯಾಗುತ್ತದೆ.

    * ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುವ ಸಾಮಥ್ರ್ಯವನ್ನು ಕರಿಬೇವು ಹೊಂದಿದೆ.

  • ಬಳ್ಳಾರಿ: ಬಿಸಿಲಿಗೆ ಕರಗಿಹೋಯ್ತು ವಿದೇಶಗಳಿಗೆ ರಫ್ತಾಗುತ್ತಿದ್ದ ಕರಿಬೇವು!

    ಬಳ್ಳಾರಿ: ಬಿಸಿಲಿಗೆ ಕರಗಿಹೋಯ್ತು ವಿದೇಶಗಳಿಗೆ ರಫ್ತಾಗುತ್ತಿದ್ದ ಕರಿಬೇವು!

    ವೀರೇಶ್ ದಾನಿ 

    ಬಳ್ಳಾರಿ: ಜಿಲ್ಲೆಯಲ್ಲಿ ಈ ಭಾರಿ ಎಂದೂ ಕಂಡರಿಯದ ಭೀಕರ ಬರಗಾಲ ಪರಿಸ್ಥಿತಿ ಆವರಿಸಿದೆ. ಬರದ ತೀವ್ರತೆಗೆ ರೈತರು ಬೆಳೆದ ಬೆಳೆಗಳಲ್ಲಾ ಒಣಗಿ ಹೋಗಿವೆ. ಅದರಲ್ಲೂ ಅರಬ್ ದೇಶಗಳು ಸೇರಿದಂತೆ ವಿವಿಧ ದೇಶಗಳಿಗೆ ರಪ್ತಾಗುತ್ತಿದ್ದ ಕರಿಬೇವು ಸೊಪ್ಪಿಗೂ ಈ ಬಾರಿ ಬರದ ಬಿಸಿ ತಟ್ಟಿದೆ. ನೀರಿಲ್ಲದ ಪರಿಣಾಮ ಕರಿಬೇವು ಬೆಳೆದ ರೈತರ ಬೆಳೆಗಳಲ್ಲಾ ಸಂಪೂರ್ಣ ಒಣಗಿ ಹೋಗಿವೆ.

    ಎಲ್ಲರ ಮನೆಯ ಅಡುಗೆಯ ಒಗ್ಗರಣೆಗೆ ಕರಿಬೇವು ಸೊಪ್ಪು ಬೇಕೆ ಬೇಕು. ಅದರಲ್ಲೂ ದೂರದ ಅರಬ್ ದೇಶಗಳಿಗೆ ರಪ್ತಾಗುತ್ತಿದ್ದ ಬಳ್ಳಾರಿಯ ಸುವಾಸನೆ ಭರಿತ ಕರಬೇವು ಸೊಪ್ಪಿನ ಬೆಳೆಗಳೆಲ್ಲಾ ಈ ಬಾರಿ ಜಿಲ್ಲೆಯಲ್ಲಿ ಒಣಗಿ ಹೋಗಿವೆ. ಅಷ್ಟೊಂದು ಪ್ರಮಾಣದಲ್ಲಿ ಕರಿಬೇವು ಸೊಪ್ಪಿಗೂ ಬರದ ಬಿಸಿ ತಟ್ಟಿದೆ. ರೈತರಿಗೆ ಆದಾಯ ತರುತ್ತಿದ್ದ ಕರಿಬೇವು ಬೆಳೆಯೆಲ್ಲಾ ಒಣಗಿ ಹೋದ ಪರಿಣಾಮ ಬಳ್ಳಾರಿ ತಾಲೂಕಿನ ಬೆಳಗಲ್, ಬೆಳಗಲ್ ತಾಂಡಾ ಸೇರಿದಂತೆ ಹಲವು ಹಳ್ಳಿಗಳಲ್ಲಿ ಬೆಳೆದ ನೂರಾರು ಎಕರೆಯಲ್ಲಿನ ಕರಿಬೇವು ಬೆಳೆ ಇದೀಗ ನೀರಿಲ್ಲದೆ ಸಂಪೂರ್ಣವಾಗಿ ನಾಶವಾಗಿದೆ.

    ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳಿಂದ ಸರಿಯಾಗಿ ಮಳೆಯಾಗದ ಪರಿಣಾಮ, ರೈತರ ತೋಟಗಾರಿಕೆ ಬೆಳೆಗಳಿಗೂ ನೀರು ಪೂರೈಕೆ ಆಗುತ್ತಿಲ್ಲ. ಇನ್ನು ರೈತರು ಬೋರ್‍ವೆಲ್ ಗಳನ್ನು 500 ರಿಂದ 700 ಅಡಿ ಕೊರೆದರು ನೀರು ಸಿಗುತ್ತಿಲ್ಲ.

    ಒರಿಸ್ಸಾ ರಾಜ್ಯದಿಂದ ಲಕ್ಷಾಂತರ ರೂಪಾಯಿ ಕೊಟ್ಟು ಬೀಜ ಖರೀದಿಸಿ ಕರಿಬೇವು ಸೊಪ್ಪು ಬೆಳೆದಿದ್ದವರಿಗೆ ನೀರು ಸಿಗದ ಪರಿಣಾಮ ರೈತರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಕಡಿಮೆ ನೀರು ಬಳಸಿ ತೋಟಗಾರಿಕೆ ಮಾಡುವ ಮೂಲಕ ಕರಿಬೇವು ಬೆಳೆದಿದ್ದ ರೈತರಿಗೆ ಇದೀಗ ಸರ್ಕಾರ ಬರ ಪರಿಹಾರ ನೀಡುವ ಮೂಲಕ ನಷ್ಟ ಹೊಂದಿರುವ ರೈತರ ಸಹಾಯಕ್ಕೆ ಮುಂದಾಗಬೇಕಿದೆ.