Tag: curse

  • ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

    ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

    ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.

    ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

    ಚಂದ್ರನನ್ನು ಯಾಕೆ ನೋಡಬಾರದು?:
    ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖ, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ. ಇದನ್ನೂ ಓದಿ: ಗಣೇಶ ಚತುರ್ಥಿಗೆ ಸಂಬಂಧಿಸಿದ ಸುದ್ದಿ ಓದಲು ಕ್ಲಿಕ್ ಮಾಡಿ

    ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.

    ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?

    ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

    ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮ‌ಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

    ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

    ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.

    ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

    ಚಂದ್ರನನ್ನು ಯಾಕೆ ನೋಡಬಾರದು?:
    ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖು, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ. ಇದನ್ನೂ ಓದಿ: ಗಣೇಶ ಚತುರ್ಥಿಗೆ ಸಂಬಂಧಿಸಿದ ಸುದ್ದಿ ಓದಲು ಕ್ಲಿಕ್ ಮಾಡಿ

    ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.

    ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ.

    ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

    ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮಣ್ಣನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈಸೂರು ರಾಜರಿಗೆ ಪುತ್ರ ಸಂತಾನ: ಅಲಮೇಲಮ್ಮ ಶಾಪ ವಿಮೋಚನೆ ಆಯ್ತಾ? ಶಾಪ ನೀಡಿದ್ದು ಯಾಕೆ?

    ಮೈಸೂರು ರಾಜರಿಗೆ ಪುತ್ರ ಸಂತಾನ: ಅಲಮೇಲಮ್ಮ ಶಾಪ ವಿಮೋಚನೆ ಆಯ್ತಾ? ಶಾಪ ನೀಡಿದ್ದು ಯಾಕೆ?

    ಮೈಸೂರು: ಬರೋಬ್ಬರಿ 64 ವರ್ಷಗಳ ಬಳಿಕ ಮೈಸೂರಿನ ಯದುವಂಶಕ್ಕೆ ಸಂತಾನ ಪ್ರಾಪ್ತಿಯಾಗಿದೆ. ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಣಿ ತ್ರಿಷಿಕಾ ಕುಮಾರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿದೆ.

    ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಣಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಅರಮನೆಯಲ್ಲಿ ಎಲ್ಲಿಲ್ಲದ ಸಂಭ್ರಮ ಮನೆಮಾಡಿದೆ. ಮೈಸೂರು ಯದುವಂಶಕ್ಕೆ 1953ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನನವಾದ ನಂತರ ಇಲ್ಲಿಯವರೆಗೆ ಯಾವುದೇ ಗಂಡು ಮಕ್ಕಳು ಜನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಯದುವೀರ್ ಅವರನ್ನು 2013ರಲ್ಲಿ ಸಂಬಂಧಿಕರಲ್ಲೇ ದತ್ತು ತೆಗೆದುಕೊಳ್ಳಲಾಗಿತ್ತು. 2016 ಜೂನ್ 27ರಂದು ತ್ರಿಷಿಕಾ ಕುಮಾರಿ ಜೊತೆ ಮದುವೆ ಮಾಡಲಾಗಿತ್ತು.

    ಬುಧವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗು ಸುಮಾರು 9.50ರ ಸಮಯದಲ್ಲಿ ಪುನರ್ವಸು ನಕ್ಷತ್ರ ಹಾಗೂ ಮಿಥುನ ರಾಶಿಯಲ್ಲಿ ಜನಿಸಿದೆ. ಇದು ಶ್ರೀರಾಮ ಚಂದ್ರ ಜನಿಸಿದ ನಕ್ಷತ್ರವಾಗಿದೆ ಎನ್ನುವುದು ವಿಶೇಷ.

    ದೇವಸ್ಥಾನದಲ್ಲಿ ವಿಶೇಷ ಪೂಜೆ:
    ಯದುವಂಶಕ್ಕೆ ನೂತನ ವಾರುಸುದಾರ ಜನನವಾದ ಹಿನ್ನೆಲೆಯಲ್ಲಿ ಶೃಂಗೇರಿಯ ಶಾರದಾ ಪೀಠದಲ್ಲಿ ಹಾಗೂ ಮನೆದೇವರಾದ ಪರಕಾಲ ಸ್ವತಂತ್ರ ಮಠದಲ್ಲಿ ವಿಶೇಷ ಪೂಜೆ ನೇರವೇರಿಸಲಾಗಿದೆ. ಅರಮನೆಯೊಳಗಿನ ದೇವಾಲಯಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಮನೆದೇವರಾದ ಚಾಮುಂಡಿ ಬೆಟ್ಟದಲ್ಲೂ ವಿಶಿಷ್ಟ ಪೂಜೆ ನಡೆಯುತ್ತಿದೆ. ನೂತನ ಅತಿಥಿಯ ಆಗಮನದಿಂದ ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಅರಸು ಮನೆತನದವರು ಅರಮನೆಗೆ ಆಗಮಿಸುವ ಜನರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

    ದಸರಾ ಸಂದರ್ಭದಲ್ಲಿ ತ್ರಿಷಿಕಾ ಗರ್ಭ ಧರಿಸಿದ ವಿಚಾರ ತಿಳಿದು ಯದುವಂಶಕ್ಕೆ ತಟ್ಟಿದ್ದ ಅಲಮೇಲಮ್ಮ ಶಾಪ ವಿಮೋಚನೆಯಾಗಿದೆ ಎನ್ನುವ ಸುದ್ದಿಗಳು ಕೇಳಿ ಬಂದಿತ್ತು. ಆದರೆ ಈ ಶಾಪಕ್ಕೂ ಗರ್ಭ ಧರಿಸಿದ್ದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಶಾಪದ ಪ್ರಕಾರ ದತ್ತು ಮಕ್ಕಳಿಗೆ ಮಕ್ಕಳಾಗುತ್ತದೆ. ಆದರೆ ದತ್ತು ಪುತ್ರರಿಗೆ ಆದ ಮಕ್ಕಳಿಗೆ ಸಂತಾನ ಯೋಗ ಇಲ್ಲದೇ ಇರುವ ವಿಚಾರ ಇತಿಹಾಸ ಪುಟದಲ್ಲಿ ಸಿಗುತ್ತದೆ.

    ಅಲಮೇಲಮ್ಮ ಶಾಪ ಏನು?
    ಹಿಂದೆ ಶ್ರೀರಂಗಪಟ್ಟಣವನ್ನು ವಿಜಯನಗರದ ಪ್ರತಿನಿಧಿಯಾಗಿ ಶ್ರೀರಂಗರಾಯ ರಾಜ್ಯಭಾರ ಮಾಡುತ್ತಿದ್ದ ವೇಳೆ ಆತನಿಗೆ ಬೆನ್ನುಪಣಿ ಎಂಬ ಕಾಯಿಲೆ ಬಂದಿತ್ತು. ಶ್ರೀರಂಗರಾಯ ತನ್ನ ಕಾಯಿಲೆ ನಿವಾರಣೆ ಮಾಡಿಕೊಳ್ಳಲು ತನ್ನ ಮಡದಿಯಾಗಿದ್ದ ಅಲಮೇಲಮ್ಮ ಜೊತೆ ತಲಕಾಡಿನ ವೈದ್ಯನಾಥೇಶ್ವರ ದೇವಾಲಯಕ್ಕೆ ತೆರಳಿದ್ದ. ರಾಜ ಶ್ರೀರಂಗರಾಯ ಪ್ರಾಂತ್ಯ ಬಿಟ್ಟು ಹೋಗಿರುವ ವಿಚಾರ ತಿಳಿದ ಮೈಸೂರು ಒಡೆಯರು, ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣವನ್ನು ಗೆಲ್ಲಲು ಸುವರ್ಣ ಸಮಯ ಎಂದು ತಿಳಿದು ರಾಜನಿಲ್ಲದ ವೇಳೆಯಲ್ಲಿ ಏಕಾಏಕಿ ಆಕ್ರಮಣ ಮಾಡಿ ಕೊನೆಗೆ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡಿದ್ದರು.

    ತಲಕಾಡಿನಲ್ಲಿದ್ದ ರಾಜ ಶ್ರಿರಂಗರಾಯ ಈ ವಿಚಾರ ತಿಳಿದು ಅಲ್ಲಿಯೇ ಮೃತಪಡುತ್ತಾನೆ. ಇನ್ನು ಮಡದಿ ಅಲಮೇಲಮ್ಮ ರಾಜ್ಯ, ಪತಿ ಇಬ್ಬರನ್ನು ಕಳೆದುಕೊಂಡು ಮಾಲಂಗಿಯಲ್ಲಿಯೇ ಉಳಿದುಕೊಂಡಿರುತ್ತಾಳೆ. ಆದರೆ ರಾಜ ಮನೆತನದವರು ಅವರ ಮೇಲೂ ದಾಳಿ ಮಾಡಲು ನಿರ್ಧರಿಸುತ್ತಾರೆ. ಒಡೆಯರು ತನ್ನ ಮೇಲು ಆಕ್ರಮಣ ಮಾಡಲು ನಿರ್ಧಾರ ಮಾಡಿದ ವಿಚಾರವನ್ನು ತಿಳಿದ ಅಲಮೇಲಮ್ಮ “ತಲಕಾಡು ಮರಳಾಗಿ, ಮಾಲಂಗಿ ಮಡುವಾಗಿ, ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ತಲಕಾಡಿನಲ್ಲಿ ಹರಿಯುತ್ತಿದ್ದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ.

    ದಸಾರೆಯಲ್ಲಿ ಪೂಜೆ:
    ಅಲಮೇಲಮ್ಮ ನೀಡಿದ ಶಾಪದ ವಿಮೋಚನೆಗೆ ಮೈಸೂರು ಅರಸರು ಅಂದಿನಿಂದ ಇಲ್ಲಿಯವರೆಗೂ ದಸರಾ ಉತ್ಸವದಲ್ಲಿ ಅಲಮೇಲಮ್ಮ ಮೂರ್ತಿಗೆ ಪೂಜೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಆದರೆ ಸುಮಾರು ಯುಗಗಳೇ ಕಳೆದರೂ ಶಾಪದಿಂದ ಮಾತ್ರ ಮುಕ್ತಿ ಪಡೆಯಲು ಸಾಧ್ಯವಾಗಿಲ್ಲ. ಸಂತಾನ ಭಾಗ್ಯ ಇಲ್ಲದ ಕಾರಣ ರಾಜರು ದತ್ತು ಮಗುವನ್ನು ಪಡೆದುಕೊಂಡು ವಂಶವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ.