Tag: cusec

  • ಭಾರೀ ಮಳೆಯಿಂದಾಗಿ ಚಿಕ್ಕೋಡಿಯ 4 ಕೆಳ ಹಂತದ ಸೇತುವೆ ಮುಳುಗಡೆ!

    ಭಾರೀ ಮಳೆಯಿಂದಾಗಿ ಚಿಕ್ಕೋಡಿಯ 4 ಕೆಳ ಹಂತದ ಸೇತುವೆ ಮುಳುಗಡೆ!

    ಚಿಕ್ಕೋಡಿ: ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೃಷ್ಣಾ ಹಾಗೂ ಕೃಷ್ಣೆಯ ಉಪ ನದಿಗಳಾದ ದೂದ ಗಂಗಾ ಹಾಗೂ ವೇದಗಂಗಾ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ 4 ಕೆಳ ಹಂತದ ಸೇತುವೆ ಮುಳುಗಡೆಯಾಗಿವೆ.

    ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು- ಕಲ್ಲೋಳ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೋಜ- ಕಾರದಗಾ ಹಾಗೂ ದೂದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೋಜವಾಡ-ಕುನ್ನೂರು, ದತ್ತವಾಡ-ಮಲಿಕವಾಡ ಸೇತುವೆಗಳು ಮುಳುಗಡೆಯಾಗಿದ್ದು ಪರ್ಯಾಯ ಮಾರ್ಗವಾಗಿ ಜನರು ಸಂಚಾರ ಮಾಡುತ್ತಿದ್ದಾರೆ.

    ಎರಡು ಕೆಳ ಹಂತದ ಸೇತುವೆಗಳು ಇಂದು ಮುಳುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ 80 ಸಾವಿರ ಕ್ಕೂ ಹೆಚ್ಚು ಕ್ಯೂಸೆಕ್ ನೀರು ಕೃಷ್ಣಾ ನದಿಯ ಒಳ ಹರಿದು ಬರುತ್ತಿದೆ. 60 ಸಾವಿರ ಕ್ಯೂಸೆಕ್ ನೀರನ್ನ ಹಿಪ್ಪರಗಿ ಜಲಾಶಯದ ಮೂಲಕ ಹೊರ ಬಿಡಲಾಗುತ್ತಿದ್ದು, ಈ ಕುರಿತು ನದಿ ತೀರದ ಜನರಲ್ಲಿ ನದಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಬಿಡುಗಡೆ

    ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಬಿಡುಗಡೆ

    ಬಳ್ಳಾರಿ: ಮಲೆನಾಡು ಹಾಗೂ ಪಶ್ಚಿಮಘಟ್ಟಗಳಲ್ಲಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗಿ ನೀರಿನ ಒಳಹರಿವು ಹೆಚ್ಚಾಗಿದೆ. ಹಾಗಾಗಿ 33 ಕ್ರಸ್ಟ್ ಗೇಟುಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದನ್ನು ಓದಿ: ತುಂಗಭದ್ರಾ ಜಲಾಶಯಕ್ಕೆ ಉಜ್ಜಯಿನಿ ಜಗದ್ಗುರುಗಳಿಂದ ಬಾಗಿನ ಅರ್ಪಣೆ.

    ಪರಿಣಾಮ ನದಿಪಾತ್ರ ಹಂಪಿಯ ಸ್ಮಾರಕಗಳು ಹಾಗೂ ಸಾಲುಮಂಟಪಗಳು ಮುಳುಗಡೆಯಾಗಿವೆ. ದೇವಸ್ಥಾನಕ್ಕೆ ತೆರಳುವ ರಸ್ತೆ ನದಿ ನೀರಿನಿಂದ ಆವೃತವಾಗಿದ್ದು, ಕಂಪ್ಲಿ ಸೇತುವೆ ಮುಳುಗಡೆಯಾಗಲು ಕೆಲ ಅಡಿಗಳು ಮಾತ್ರ ಬಾಕಿಯಿದೆ. ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಶ್ರೀ ಪುರಂದರದಾಸರ ಮಂಟಪ, ಸಾಲುಮಂಟಪಗಳು ನದಿ ನೀರಿಗೆ ಮುಳುಗಿದೆ. ರಾಮಲಕ್ಷ್ಮಣ ಹಾಗೂ ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನಕ್ಕೆ ತೆರಳುವ ರಸ್ತೆ ಕೂಡ ನದಿ ನೀರಿನಿಂದ ಆವೃತವಾಗಿದೆ. ಇದನ್ನು ಓದಿ: ಬಣ್ಣದ ಓಕುಳಿಯಲ್ಲಿ ಕಂಗೊಳಿಸುತ್ತಿರುವ ಟಿಬಿ ಡ್ಯಾಂ – ಒಮ್ಮೆ ನೀವು ನೋಡಿ

    ಸದ್ಯ ಜಲಾಶಯಕ್ಕೆ 57,285 ಒಳಹರಿವು ಇದ್ದು, 34,147 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ. 97.59 ಟಿಎಂಸಿ ನೀರು ಶೇಖರಣೆಯಾಗಿದ್ದು, ನಾಳೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟುಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಸಚಿವ ಡಿ ಕೆ ಶಿವಕುಮಾರ್ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೀರು ಬಿಡುವ ಸಾಧ್ಯತೆಯಿದೆ. ಹೀಗಾಗಿ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಜಿಲ್ಲಾಡಳಿತ ಸೂಚಿಸಿದೆ. ಇದನ್ನು ಓದಿ: ಹಂಪಿಯ ಶ್ರೀ ಪುರಂದರದಾಸ ಮಂಟಪ ಮುಳುಗಡೆ   

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv