Tag: Cyber Crime Police

  • ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ – ದೂರು ದಾಖಲು

    ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ – ದೂರು ದಾಖಲು

    ಬೆಂಗಳೂರು: ಇನ್ಫೋಸಿಸ್ (Infosys) ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ (Sudha Murthy) ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ (Cyber Crime Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದ. ಬಳಿಕ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್‌ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ ಎಂದಿದ್ದ. ಇದನ್ನೂ ಓದಿ: ಸಂಸದ ಸುಧಾಕರ್‌ ಪತ್ನಿ ಹೌಸ್‌ ಅರೆಸ್ಟ್‌ – 14 ಲಕ್ಷ ದೋಚಿದ ಸೈಬರ್‌ ಕಳ್ಳರು

    ಹಾಗಾಗಿ ವ್ಯೆಯಕ್ತಿಕ ಮಾಹಿತಿ ನೀಡಿ ಅಂತಾ ಮಾಹಿತಿ ಕೇಳಿದ್ದ. ಅಲ್ಲದೇ ನಿಮ್ಮ ನಂಬರ್‌ನಿಂದ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ ಎಂದೆಲ್ಲ ಹೇಳಿದ್ದ.

    ಈ ವೇಳೆ ಅನುಮಾನಗೊಂಡ ಸುಧಾಮೂರ್ತಿ ಅವರು, ಕರೆದ ಬಂದಿದ್ದ ನಂಬರ್‌ ಅನ್ನು ಟ್ರೂಕಾಲರ್ ಮೂಲಕ ಪರಿಶೀಲಿಸಿದ್ದರು. ಈ ವೇಳೆ ಟ್ರೂಕಾಲರ್‌ನಲ್ಲಿ ಟೆಲಿಕಾಂ ಡೆಪಾರ್ಟ್ಮೆಂಟ್ ಎಂದು ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡ ಅವರು ಸೈಬರ್ ವಂಚಕರ ಟ್ರ‍್ಯಾಪ್‌ಗೆ ಒಳಗಾಗದೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ವಂಚಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

  • ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ

    ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ

    ಕೊಪ್ಪಳ: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ (Actress Ramya) ಅಶ್ಲೀಲ ಕಾಮೆಂಟ್ ಹಾಕಿದವರ ಪೈಕಿ ಓರ್ವ ಯುವಕನನ್ನು ಸೈಬರ್ ಕ್ರೈಮ್‌ (Cyber Crime) ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆದ ಯುವಕನನ್ನು ಕೊಪ್ಪಳದ (Koppal) ಗಂಗಾವತಿ (Gangavathi) ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ ಎಂದು ಗುರುತಿಸಲಾಗಿದೆ. ಇದಕ್ಕೂ ಮುನ್ನ ಸಿಸಿಬಿ ಪೊಲೀಸರು ಭುವನ್ ಗೌಡ, ಪವನ್, ಓಬಣ್ಣ ಮತ್ತು ಗಂಗಾಧರ್ ಎಂಬ ನಾಲ್ವರನ್ನು ಬಂಧಿಸಿದ್ದರು.ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು.

    ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ರಮ್ಯಾ ಪೋಸ್ಟ್ ಹಾಕಿದ್ದಕ್ಕೆ ಅಶ್ಲೀಲ ಕಾಮೆಂಟ್ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು, ಮೈಸೂರು, ಹಾವೇರಿ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್

  • ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್‌ಗಳ ವಿಚಾರಣೆ

    ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್‌ಗಳ ವಿಚಾರಣೆ

    ಬೆಂಗಳೂರು: ಮಾನ್ಯತೆ ಪಡೆಯದ ಬೆಟ್ಟಿಂಗ್ ಆಪ್ ಬಗ್ಗೆ ಪ್ರಮೋಟ್ (Betting App Promote) ಮಾಡಿದ ಆರೋಪದ ಮೇಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್‌ಗೌಡ (Sonu Srinivas Gowda) ಸೇರಿದಂತೆ 100ಕ್ಕೂ ಅಧಿಕ ರೀಲ್ಸ್ ಸ್ಟಾರ್‌ಗಳಿಗೆ ನೋಟಿಸ್ ನೀಡಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

    ತಮ್ಮ ತಮ್ಮ ಇನ್ಸ್ಟಾಗ್ರಾಂ ಪೇಜ್‌ಗಳಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದ ರೀಲ್ಸ್ ಸ್ಟಾರ್‌ಗಳಿಗೆ (Reels Stars) ಶಾಕ್ ಎದುರಾಗಿದೆ. ತಮ್ಮ ಪೇಜ್‌ಗಳಲ್ಲಿ ಬಿತ್ತರಿಸಿದ್ದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿದ್ದವು. ಹಾಗಾಗಿ ವಕೀಲರೊಬ್ಬರು ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಕೊಟ್ಟಿದ್ದರು. ಸೋಶಿಯಲ್ ಮೀಡಿಯಾ ಪೇಜ್‌ಗಳಲ್ಲಿ ಜನರಿಗೆ ವಂಚಿಸುವ ಜಾಹೀರಾತು ಪ್ರಕಟಿಸಿದ್ದ ರೀಲ್ಸ್ ಸ್ಟಾರ್‌ಗಳ ಪಟ್ಟಿ ಮಾಡಿ ಸೈಬರ್ ಕ್ರೈಂ (Cyber Crime) ಪೊಲೀಸರು ನೋಟಿಸ್ ನೀಡಿದ್ದರು. ಇದನ್ನೂ ಓದಿ: ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ದರ್ಶನ್‌, ಪವಿತ್ರ ಗೌಡ

    ಸೋನು ಶ್ರೀನಿವಾಸ್‌ಗೌಡ, ದೀಪಕ್‌ಗೌಡ, ವರುಣ್ ಆರಾದ್ಯ, ದಚ್ಚು ಸೇರಿ ನೂರಕ್ಕು ಹೆಚ್ಚು ಮಂದಿ ರೀಲ್ಸ್ ಸ್ಟಾರ್‌ಗಳಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿದ್ದಾರೆ. ವಿಚಾರಣೆಗೆ ಹಾಜರಾದ ಸ್ಟಾರ್‌ಗಳು ಇನ್ನು ಮುಂದೆ ಇಂತಹ ಜಾಹೀರಾತುಗಳನ್ನ ನಾವು ಪ್ರಕಟಿಸುವುದಿಲ್ಲ. ಈ ಜಾಹೀರಾತು ಪ್ರಕಟಿಸುವುದರಿಂದ ಜನರಿಗೆ ಸಮಸ್ಯೆ ಆಗುತ್ತದೆ ಎಂಬ ಅರಿವಿಲ್ಲದೇ ನಾವು ಪ್ರಕಟಿಸಿದ್ದೇವೆ. ನಾವು ಮಾಡಿದ್ದ ತಪ್ಪಿನ ಬಗ್ಗೆ ಅರಿವಿಗೆ ಬಂದಿದ್ದು, ಜಾಹೀರಾತುಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಜನರಿಗೆ ವಂಚಿಸುವ ಜಾಹೀರಾತುಗಳು ಇನ್ನೊಮ್ಮೆ ಪ್ರಕಟಿಸಿದರೆ ಜೈಲಿಗೆ ಕಳಿಸುವ ಎಚ್ಚರಿಕೆಯನ್ನು ಸೈಬರ್ ಕ್ರೈಂ ಪೊಲೀಸರು ನೀಡಿದ್ದಾರೆ. ಇದನ್ನೂ ಓದಿ: ಬೆಟ್ಟಿಂಗ್‌ ಆಪ್‌ ಪ್ರಚಾರ – ದೇವರಕೊಂಡ, ಪ್ರಕಾಶ್‌ ರಾಜ್‌, ರಾಣಾ ಸೇರಿದಂತೆ 25 ಮಂದಿ ಮೇಲೆ ಕೇಸ್‌

  • ಜಾರ್ಜ್‌ ವಿರುದ್ಧ ಪೋಸ್ಟ್‌ – ತೆಲಂಗಾಣ ಮಾಜಿ ಪಾಲಿಕೆ ಸದಸ್ಯನ ಪುತ್ರ ಅರೆಸ್ಟ್‌

    ಜಾರ್ಜ್‌ ವಿರುದ್ಧ ಪೋಸ್ಟ್‌ – ತೆಲಂಗಾಣ ಮಾಜಿ ಪಾಲಿಕೆ ಸದಸ್ಯನ ಪುತ್ರ ಅರೆಸ್ಟ್‌

    ಬೆಂಗಳೂರು: ಇಂಧನ ಖಾತೆಯ ಸಚಿವ ಕೆಜೆ ಜಾರ್ಜ್‌ (KJ George) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ ಮಾಡಿದ್ದ ತೆಲಂಗಾಣ ಮಾಜಿ ಪಾಲಿಕೆ ಸದಸ್ಯನ ಪುತ್ರನನ್ನು ಬೆಂಗಳೂರಿನ ಸೈಬರ್‌ ಕ್ರೈಂ ಪೊಲೀಸರು (Cyber Crime Police) ಬಂಧಿಸಿದ್ದಾರೆ.

    ತೆಲಂಗಾಣದ ಕರೀಂನಗರ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿ. ತೆಲಂಗಾಣ ವಿಧಾನಸಭೆ ಚುನಾವಣೆ (Telangana Vidhan Sabha Election) ವೇಳೆ ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ (Gruha Jyothi) ಯೋಜನೆ ಬಗ್ಗೆ ಭಾರತ ರಾಷ್ಟ್ರ ಸಮಿತಿಯ ಐಟಿ ಸೆಲ್‌ ಸದಸ್ಯ ರವಿಕಾಂತ ಶರ್ಮಾ ಪೋಸ್ಟ್‌ ಮಾಡಿದ್ದ.  ಇದನ್ನೂ ಓದಿ: ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ

    ಗೃಹ ಜ್ಯೋತಿ ಯೋಜನೆಯ ಬಗ್ಗೆ ನಕಲಿ ಆಡಿಯೋ ಕ್ಲಿಪ್‌ ಶೇರ್ ಮಾಡಿದ್ದಕ್ಕೆ ಬೆಸ್ಕಾಂ ಜನರಲ್‌ ಮ್ಯಾನೇಜರ್‌ ಅವರು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಆರೋಪಿಯನ್ನು ಬಂಧಿಸಿ ಸೈಬರ್ ಕ್ರೈಮ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • Cyber Crimeː 4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!

    Cyber Crimeː 4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!

    ಬೆಂಗಳೂರು: ಆನ್‌ಲೈನ್ ವ್ಯವಹಾರ (Online Money Transfer) ಹೆಚ್ಚಿದಂತೆ ಸೈಬರ್ ವಂಚಕರ ಜಾಲ ಬೃಹತ್ತಾಗಿ ಬೆಳೆದಿದ್ದು, ನೇರವಾಗಿ ಗ್ರಾಹಕರ ಖಾತೆಗೆ ಕನ್ನ ಹಾಕುವ ಕೆಲಸ ನಡೆಯುತ್ತಿದೆ.

    ಹಾಗೆಯೇ 2019 ರಿಂದ 2023ರ ವರೆಗೆ ಸೈಬರ್ ಅಪರಾಧಗಳ (Cyber Crime) ಅಡಿಯಲ್ಲಿ ಬರೋಬ್ಬರಿ 722 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿದ್ದು, 722 ಕೋಟಿ ರೂ. ನಷ್ಟವಾಗಿದೆ ಎಂಬ ಅಂಕಿ-ಅಂಶ ಇಲಾಖೆ ಬಿಡುಗಡೆ ಮಾಡಿದೆ. ಅದರಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಪೊಲೀಸರು ಸಂಗ್ರಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

    ಅಲ್ಲದೆ, ಸೈಬರ್ ಅಪರಾಧಗಳಿಂದ ಎಚ್ಚರ ವಹಿಸುವಂತೆ ವಿಶೇಷ ಕೈಪಿಡಿ ಸಿದ್ಧಪಡಿಸಿದ್ದು, ಯುವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದನ್ನೂ ಓದಿ: ಹಳೆಯ ದ್ವೇಷಕ್ಕೆ ಕತ್ತಿಯಿಂದ ಕಡಿದು ಯುವಕನ ಭೀಕರ ಹತ್ಯೆ

    ಯಾವ ವರ್ಷ ಎಷ್ಟು ನಷ್ಟ?
    2019ರಲ್ಲಿ ಸೈಬರ್ ಅಪರಾಧದಲ್ಲಿ ರಾಜ್ಯಕ್ಕೆ 71.27 ಕೋಟಿ ರೂ. ನಷ್ಟವಾಗಿತ್ತು, ಅದರಲ್ಲಿ 8.59 ಕೋಟಿ ರೂ.ಗಳನ್ನು ಪೊಲೀಸರು ಸಂಗ್ರಹಿಸಿಕೊಟ್ಟಿದ್ದಾರೆ. 2020ರಲ್ಲಿ 105.99 ಕೋಟಿ ರೂ. ನಷ್ಟವಾಗಿದ್ದು, 14.83 ಕೋಟಿ ರೂ. ವಸೂಲಿ ಮಾಡಿದ್ದಾರೆ. 2021ರಲ್ಲಿ 145.05 ಕೋಟಿ ನಷ್ಟವಾಗಿದ್ದು, 25.96 ಕೋಟಿ ರೂ. ವಸೂಲಿ, 2022ರಲ್ಲಿ 363.11 ಕೋಟಿ ಕಳೆದುಕೊಳ್ಳಲಾಗಿದ್ದು, 46.87 ಕೋಟಿ ವಸೂಲಿ ಮಾಡಿದ್ದಾರೆ. ಇನ್ನೂ 2023ರ ಪ್ರಸಕ್ತ ವರ್ಷದಲ್ಲಿ ಜನವರಿ ತಿಂಗಳ ಅಂತ್ಯದ ವರೆಗೆ 36.63 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದ್ದು, ಪೊಲೀಸರು 1.03 ಕೋಟಿ ರೂ. ಮಾತ್ರ ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸೈಬರ್ ಕ್ರೈಂ ವಿಭಾಗ ಮಾಹಿತಿ ನೀಡಿದೆ.

  • ಆದಿತ್ಯಾ ಠಾಕ್ರೆಗೆ ಬೆದರಿಕೆ – ಬೆಂಗಳೂರು ವ್ಯಕ್ತಿ ಬಂಧನ

    ಆದಿತ್ಯಾ ಠಾಕ್ರೆಗೆ ಬೆದರಿಕೆ – ಬೆಂಗಳೂರು ವ್ಯಕ್ತಿ ಬಂಧನ

    ಮುಂಬೈ: ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

    ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆ ತಂದಿದ್ದೇವೆ ಎಂದು ಮುಂಬೈ ಅಪರಾಧ ವಿಭಾಗದ ಸೈಬರ್ ತಂಡ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್‌ ಸ್ಫೋಟ – ಇಂದು ಒಂದೇ ದಿನ 12 ಪ್ರಕರಣ ದೃಢ

    ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಡಿಸೆಂಬರ್ 23 ರಂದು ತಿಳಿಸಿದ್ದಾರೆ.

    ಆದಿತ್ಯಾ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರ ಮಗನಾಗಿದ್ದು, ಆರೋಪಿಯು ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ ಆ ಕರೆಯನ್ನು ಅವರು ತೆಗೆದಿಲ್ಲ. ನಂತರದಲ್ಲಿ ಆರೋಪಿಯು ಸಚಿವರಿಗೆ ಬೆದರಿಕೆಯ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟಮಟ್ಟದ ಸ್ಕೇಟಿಂಗ್ – ಏಕಾಂಶ್ ಕುಮಾರ್‌ಗೆ 1 ಬೆಳ್ಳಿ, 1 ಕಂಚಿನ ಪದಕ

    ಸೈಬರ್ ಪೊಲೀಸ್ ತಂಡವು ತನಿಖೆ ನಡೆಸಿದಾಗ ಆರೋಪಿಯು ಬೆಂಗಳೂರಿನಿಂದ ಕರೆ ಮಾಡಿರುವುದು ಗೊತ್ತಾಗಿದೆ. ಈ ಆಧಾರದಲ್ಲಿ ಜಾಡು ಹಿಡಿದು ಬೆಂಗಳೂರಿನಲ್ಲಿ ಬಂಧಿಸಿದಾರೆ. ಆ ವ್ಯಕ್ತಿಯನ್ನು ಹುಡುಕಿಕೊಂಡು ಪೊಲೀಸರು ಬೆಂಗಳೂರಿಗೆ ಬಂದಿದ್ದಾರೆ ಎಂದರು.

    ಆರೋಪಿಯನ್ನು ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆಯ ಸಮಯದಲ್ಲಿ ಆರೋಪಿಯು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರವರ ಅಭಿಮಾನಿಯಾಗಿರುವ ವಿಚಾರ ತಿಳಿದು ಬಂದಿದೆ.

  • ಡೆಡ್ಲಿ ಮೋಮೋ ಗೇಮ್: ಸೈಬರ್ ಕ್ರೈಂ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

    ಡೆಡ್ಲಿ ಮೋಮೋ ಗೇಮ್: ಸೈಬರ್ ಕ್ರೈಂ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

    ಬೆಂಗಳೂರು: ಭಾರತದಲ್ಲಿ ಹೆಚ್ಚಾಗಿ ಹರಡುತ್ತಿರುವ ಡೆಡ್ಲಿ ಮೋಮೋ ಗೇಮ್ ಬಗ್ಗೆ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ನೀಡುತ್ತಿದ್ದಾರೆ.

    ಹೌದು, ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಪೀಳಿಗೆಯು ಬ್ಲೂ ವೇಲ್ ಹಾಗೂ ಮೋಮೋ ಗೇಮ್‍ಗಳಂತಹ ಮಾರಣಾಂತಿಕ ಆಟಗಳಿಗೆ ಮುಗಿಬಿದ್ದು, ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪೋಷಕರು ತಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಗಮನಹರಿಸಬೇಕಾಗಿ ಸೈಬರ್ ಕ್ರೈಂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

    ಮೋಮೋ ಗೇಮ್ ಗೆ ಸಂಬಂಧಿಸಿದ ಯಾವುದೇ ಲಿಂಕ್‍ಗಳನ್ನು ಶೇರ್ ಹಾಗೂ ಡೌನ್‍ಲೋಡ್ ಮಾಡದಂತೆ ಎಚ್ಚರವಹಿಸುವಂತೆ ಶಾಲಾ ಶಿಕ್ಷಕರು, ಮಕ್ಕಳು ಹಾಗೂ ಪೋಷಕರಿಗೆ ಸಿಐಡಿ ಸೈಬರ್ ಕ್ರೈಂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದ್ದಾರೆ.

    ಏನಿದು ಮೋಮೋ ಗೇಮ್?
    ವಾಟ್ಸಪ್‍ಗೆ ಮೊದಲು ಅಪರಿಚಿತ ನಂಬರಿನಿಂದ ಒಂದು ಸಂದೇಶದ ಬರುತ್ತದೆ. ಬಳಿಕ ಆ ಚಾಲೆಂಜ್ ಒಪ್ಪಿಕೊಂಡರೆ, ಹಾಯ್-ಹಲೋ ಎಂದು ಸಂದೇಶ ಕಳುಹಿಸಬೇಕಾಗುತ್ತದೆ. ನಂತರ ಒಂದು ಅಪರಿಚಿತ ನಂಬರ್ ಕೊಟ್ಟು ಮಾತನಾಡುವಂತೆ ಅನಾಮಿಕನು ಚಾಲೆಂಜ್ ನೀಡುತ್ತಾನೆ. ಬಳಕೆದಾರರಿಗೆ ಕೆಲವು ಟಾಸ್ಕ್‍ಗಳನ್ನು ನೀಡುತ್ತಾರೆ. ಒಂದು ವೇಳೆ ಆ ಟಾಸ್ಕನ್ನು ಪೂರ್ಣ ಮಾಡದಿದ್ದರೆ, ಬಳಕೆದಾರರಿಗೆ ಬೆದರಿಕೆ ಹಾಕುತ್ತಾರೆ. ಕೊನೆಯದಾಗಿ ಬೆದರಿಕೆ ಮತ್ತು ಭಯದಿಂದ ಬಳಕೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂಸದ ಪ್ರತಾಪ್ ಸಿಂಹ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಸಂಸದ ಪ್ರತಾಪ್ ಸಿಂಹ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಚೋದನಾತ್ಮಕ ಪೋಸ್ಟ್ ಹಾಕುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಕರ್ನಾಟಕ ಅಂತರ್ಜಾಲ ಪ್ರಾಧಿಕಾರದ ಎ ಆನಂದ ಎಂಬವರು ಪ್ರತಾಪ್ ಸಿಂಹ ಅವರ ವಿರುದ್ಧ ದೂರು ದಾಖಲಿಸಿದ್ದು, ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳ ಮೇಲೆ ವಿನಕಾರಣ ಹೇಳಿಕೆ ನೀಡಿ ಅವರ ದಕ್ಷತೆ ಹಾಗೂ ಪ್ರಾಮಾಣಿಕತೆಗೆ ಧಕ್ಕೆ ತರುವ ರೀತಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

    ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇಳಿದ ಪ್ರಶ್ನೆಗೆ ಉತ್ತರಿಸುವ ವಿಡಿಯೋ ಕುರಿತು ದೂರಿನಲ್ಲಿ ಉಲ್ಲೇಖ ಮಾಡಲಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ನೈಜವಲ್ಲದ ಪೋಸ್ಟ್ ಗಳನ್ನು ಫೇಸ್‍ಬುಕ್ ನಲ್ಲಿ ಹಾಕಿ ಪ್ರಚೋದನೆ ನೀಡುತ್ತಾರೆ. ಅಲ್ಲದೇ ದೇಶದ ವೀರ ವನಿತೆಯರ ಚಾರಿತ್ರ್ಯ ಹರಣ ಮಾಡುವಂತಹ ಪೋಸ್ಟ್ ಗಳನ್ನು ಹಾಕಿದ್ದು, ಈ ಕುರಿತು ದೂರು ದಾಖಲಿಸಿ ಸೂಕ್ತ ಕ್ರಮಕೈಗೊಳ್ಳುಬೇಕು. ಪ್ರಕರಣದ ಸಂಬಂಧಿಸಿದ ಸಾಕ್ಷ್ಯಧಾರಗಳನ್ನು ನಂತರ ದಿನಗಳಲ್ಲಿ ಹಾಜರು ಪಡಿಸುವುದಾಗಿ ದೂರಿನಲ್ಲಿ ಮನವಿ ಮಾಡಿದ್ದಾರೆ. (ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!)

    ಪ್ರತಾಪ್ ಸಿಂಹ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 66 ಸಿ, ಐಪಿಸಿ ಸೆಕ್ಷನ್ ಗಳಾದ 153ಎ(ಸಮಾಜದ ಸಾಮರಸ್ಯ ಹಾಳು ಮಾಡುವುದು), 295ಎ( ಕೋಮು ಸೌಹಾರ್ದಕ್ಕೆ ಧಕ್ಕೆ), 505(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.