Tag: Cyber police

  • ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯ ಎಕ್ಸ್ ಖಾತೆ ಹ್ಯಾಕ್

    ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯ ಎಕ್ಸ್ ಖಾತೆ ಹ್ಯಾಕ್

    ಚಿತ್ರದುರ್ಗ: ಪೊಲೀಸ್ ಇಲಾಖೆಯ (Police Department) ಎಕ್ಸ್ ಖಾತೆಯನ್ನೇ ಖದೀಮರು ಹ್ಯಾಕ್ (Hack) ಮಾಡಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ.

    ಜಿಲ್ಲಾ ಪೊಲೀಸ್ ಅಕೌಂಟ್ ಹ್ಯಾಕ್ ಮಾಡಿರುವ ಖದೀಮರು, ಬಿಟ್ ಕಾಯಿನ್ ಬಗ್ಗೆ ಜಾಹೀರಾತು ಪ್ರಕಟಿಸಿದ್ದಾರೆ. ಹೀಗಾಗಿ ಅಲರ್ಟ್ ಆದ ಪೊಲೀಸ್ ಇಲಾಖೆ, ಖಾತೆಯನ್ನು ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದೆ. ಇದನ್ನೂ ಓದಿ: ವಿಜಯಪುರ ನಗರದಲ್ಲಿ ಚಿರತೆ ಪ್ರತ್ಯಕ್ಷ – ಜನರಲ್ಲಿ ಆತಂಕ

    ಪರಿಶೀಲನೆ ಬಳಿಕ ಪುನಃ ಎಕ್ಸ್ ಖಾತೆಯನ್ನು ಸಕ್ರಿಯಗೊಳಿಸಿದ್ದು, ಎಕ್ಸ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಕ್ ಮಾಹಿತಿಯನ್ನು ಜನರ ಜಾಗೃತಿಗಾಗಿ ಶೇರ್ ಮಾಡಿದೆ. ಇದನ್ನೂ ಓದಿ: ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು: ಚಲುವರಾಯಸ್ವಾಮಿ ಬಾಂಬ್‌ | ಏನಿದು ಕಾರ್‌ ಕಿರಿಕ್‌?

    ಇನ್ನು ಸೈಬರ್ ಕ್ರೈಂಬಗ್ಗೆ ಜಿಲ್ಲೆಯಾದ್ಯಂತ ವಿಶೇಷ ಜಾಗೃತಿ ಮೂಡಿಸುತ್ತಿರುವ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ನಿರಂತರವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನೂ ಓದಿ: ಒಂದೇ ಒಂದು ಎನ್‌ಕೌಂಟರ್‌ಗೆ ಬೆಚ್ಚಿದ ನಕ್ಸಲರು – ಸದ್ಯದಲ್ಲೇ 6 ಜನ ಶರಣಾಗತಿ ಸಾಧ್ಯತೆ

    ಸಾಮಾಜಿಕ ಜಾಲಾ ತಾಣ ಸೇರಿದಂತೆ ಶಾಲಾ ಕಾಲೇಜುಗಳಲ್ಲೂ ಅಪರಾಧ ತಡೆ ಹಾಗು ಸೈಬರ್ ಕ್ರೈಂ ಬಗ್ಗೆ ಜಾಗೃತಿ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಈ ರೀತಿ ಪೊಲೀಸ್ ಇಲಾಖೆಯ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿರೋದು ದುರಂತವೇ ಸರಿ.‌ ಇದನ್ನೂ ಓದಿ: ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ʻಶೀಷ್‌ ಮಹಲ್‌ʼ ನವೀಕರಣ – ಮೋದಿ ಮತ್ತೆ ಕಿಡಿ

  • ಫೇಕ್ ನ್ಯೂಸ್‌ಗಳ ಮೂಲ ಪತ್ತೆಹಚ್ಚಿ- ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಫೇಕ್ ನ್ಯೂಸ್‌ಗಳ ಮೂಲ ಪತ್ತೆಹಚ್ಚಿ- ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಫೇಕ್ ನ್ಯೂಸ್ (Fake News) ಹಾವಳಿ ಮಿತಿ ಮೀರಿದೆ. ಈ ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಮಂಗಳವಾರ ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದರು. ಇದನ್ನೂ ಓದಿ: ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಡಿಕೆಶಿ ಶಪಥ

    ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ (BJP) ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು  ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ – ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

    ಈ ಹಿಂದೆ ಬೆಂಗಳೂರು (Bengaluru) ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್‌ಚೆಕ್ (Fact Check) ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್‌ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು (Cyber Police) ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ಧವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಿ.ಎಲ್ ಸಂತೋಷ್ ಬುಟ್ಟಿಯಲ್ಲಿ ಇಂತಹ ಚೇಳುಗಳೇ ಬಹಳ ಇರಬೇಕು: ಎಂಬಿ ಪಾಟೀಲ್

  • Cyber Crimeː 1 ತಿಂಗಳಲ್ಲಿ 1,228 ಕೇಸ್ – ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ

    Cyber Crimeː 1 ತಿಂಗಳಲ್ಲಿ 1,228 ಕೇಸ್ – ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ

    ಬೆಂಗಳೂರು: ಸಿಲಿಕಾನ್ ಸಿಟಿ ತಾಂತ್ರಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಂತೆ ಆನ್‌ಲೈನ್‌ನಲ್ಲಿ (Online) ವಂಚಿಸುವ ಜಾಲವು ಬೃಹತ್ತಾಗಿಯೇ ಬೆಳೆಯುತ್ತಿದೆ. ಜೇಬಿಗೆ ಕತ್ತರಿ ಹಾಕುವ ಬದಲು ಲೇಟೆಸ್ಟ್ ಕಳ್ಳರು ನೇರವಾಗಿ ಬ್ಯಾಂಕ್ ಖಾತೆಗಳಿಂದಲೇ (Bank Account) ಹಣ ಎಗರಿಸಲು ಶುರು ಮಾಡಿದ್ದಾರೆ.

    ರಾಜಧಾನಿ ಬೆಂಗಳೂರಲ್ಲಿ (Bengaluru) ಈ ವರ್ಷದ ಆರಂಭದಲ್ಲಿ ಸೈಬರ್ ಕಳ್ಳರು (Cyber Crime) ತಮ್ಮ ಕೈಚಳಕ ತೋರಿಸಿದ್ದಾರೆ. ಕಳೆದ ಜನವರಿ ಒಂದು ತಿಂಗಳಲ್ಲೇ ಬರೋಬ್ಬರಿ 1,228 ಪ್ರಕರಣಗಳು ದಾಖಲಾಗಿವೆ. ಆದ್ರೆ ಸಿಬ್ಬಂದಿ ಕೊರತೆಯಿಂದಾಗಿ ಪೊಲೀಸರು (Police) ಸಮಸ್ಯೆಗಳನ್ನು ಬಗೆಹರಿಸಲಾಗದೇ ತಿಣುಕಾಡುತ್ತಿದ್ದಾರೆ. ಇದನ್ನೂ ಓದಿ: ಹರತಾಳು ಹಾಲಪ್ಪ ಬೀಗರ ಕಾರಿಗೆ ಇಬ್ಬರು ಬಲಿ- ನಾಲ್ವರಿಗೆ ಗಾಯ, ಚಾಲಕ ವಶಕ್ಕೆ

    ಕಳೆದ ವರ್ಷವೂ ಬೆಂಗಳೂರಿನಲ್ಲಿ ಅತಿಹೆಚ್ಚು ಸೈಬರ್ ಪ್ರಕರಣಗಳು (Cyber Crime Case) ವರದಿಯಾಗಿದ್ದವು. ಈ ಬಾರಿ ವರ್ಷಾರಂಭದಲ್ಲೇ ಕೇಸ್‌ಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ 90, ದಕ್ಷಿಣ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ 145, ಉತ್ತರ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 215, ಪೂರ್ವ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 122, ಪಶ್ಚಿಮ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 118, ಅಗ್ನೇಯ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 223, ಈಶಾನ್ಯ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ 155 ಹಾಗೂ ವೈಟ್ ಫೀಲ್ಡ್ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ 160 ಕೇಸ್‌ಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಸಹಾಯಧನ ಮಂಜೂರು ಮಾಡಲು 10 ಸಾವಿರ ಲಂಚ – ಮೂವರು ಲೋಕಾಯುಕ್ತ ಬಲೆಗೆ

    ಸಿಬ್ಬಂದಿ ಕೊರತೆ: ಸೈಬರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಉಪ ವಿಭಾಗದ ಮಟ್ಟದಲ್ಲಿ ಸೆನ್ ಠಾಣೆಗಳನ್ನ ತೆರಯಲು ಸರ್ಕಾರ ಹಿಂದೇಟು ಹಾಕುತ್ತಿದೆ. ಇದರಿಂದ ಸೆನ್ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ಪೊಲೀಸರು ಅಸಹಾಯಕರಾಗಿ ವರ್ತಿಸಬೇಕಾದ ಸ್ಥಿತಿ ಎದುರಾಗಿದೆ. ಸರ್ಕಾರದ ಈ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನ್ಯಾಯಾಧೀಶರ ಪತ್ನಿಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – ನಿವೃತ್ತ ನ್ಯಾಯಮೂರ್ತಿ ಕರ್ಣನ್ ಅರೆಸ್ಟ್

    ನ್ಯಾಯಾಧೀಶರ ಪತ್ನಿಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – ನಿವೃತ್ತ ನ್ಯಾಯಮೂರ್ತಿ ಕರ್ಣನ್ ಅರೆಸ್ಟ್

    ಚೆನ್ನೈ: ನ್ಯಾಯಾಧೀಶರ ಪತ್ನಿಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನಿವೃತ್ತ ನ್ಯಾಯಾಮೂರ್ತಿ ಸಿಎಸ್ ಕರ್ಣನ್ ಅವರನ್ನು ಬಂಧಿಸಲಾಗಿದೆ.

    ಕರ್ಣನ್ ಅವರು ಹೈಕೋರ್ಟ್ ನ್ಯಾಯಾಧೀಶರ ಪತ್ನಿಯರು ಮತ್ತು ಮಹಿಳಾ ನ್ಯಾಯಾಮೂರ್ತಿಗಳು ಹಾಗೂ ಕೋರ್ಟಿನಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ವಿರುದ್ಧ ಅಸಭ್ಯವಾಗಿ ಮಾತನಾಡಿ, ಆ ವಿಡಿಯೋವನ್ನು ಯೂಟ್ಯೂಬ್‍ಗೆ ಅಪ್ಲೋಡ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

    ಈ ವಿಚಾರವಾಗಿ ಕರ್ಣನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮದ್ರಾಸ್ ಹೈಕೋರ್ಟಿನ ಹಿರಿಯ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಾಧೀಶ ಎಸ್‍ಎ ಬೊಬ್ಡೆ ಅವರಿಗೆ ಪತ್ರ ಕೂಡ ಬರೆದಿದ್ದರು. ನಂತರ ವಕೀಲರೊಬ್ಬರು ಕರ್ಣನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರನ್ನು ದಾಖಲಿಸಿಕೊಂಡಿದ್ದ ಚೆನ್ನೈ ಸೈಬರ್ ಕ್ರೈಮ್ ವಿಭಾಗದ ಪೊಲೀಸರು ಒಂದು ತಿಂಗಳು ತನಿಖೆ ಮಾಡಿ ಇಂದು ಕರ್ಣನ್ ಅವರನ್ನು ಬಂಧಿಸಿದ್ದಾರೆ.

    ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಕರ್ಣನ್ ಮೊದಲು 2009ರಲ್ಲಿ ಮದ್ರಾಸ್ ಹೈಕೋರ್ಟಿನಲ್ಲಿ ನ್ಯಾಯಾಮೂರ್ತಿಯಾಗಿದ್ದರು. ನಂತರ 2016ರಲ್ಲಿ ಕೋಲ್ಕತ್ತಾ ಹೈಕೋರ್ಟಿಗೆ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ 2017ರಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಅವರು ಆರು ತಿಂಗಳು ಜೈಲುವಾಸ ಕೂಡ ಅನುಭವಿಸಿದ್ದರು.

  • ಹುಡುಗಿಯರ ಹೆಸರಲ್ಲಿ ಫೇಕ್ ಖಾತೆ- ಖಾಸಗಿ ಪೋಟೋ, ಮಾಹಿತಿ ಪಡೆದು ಲಕ್ಷ ಲಕ್ಷ ದೋಚಿದ ಯುವಕ!

    ಹುಡುಗಿಯರ ಹೆಸರಲ್ಲಿ ಫೇಕ್ ಖಾತೆ- ಖಾಸಗಿ ಪೋಟೋ, ಮಾಹಿತಿ ಪಡೆದು ಲಕ್ಷ ಲಕ್ಷ ದೋಚಿದ ಯುವಕ!

    ಬೆಂಗಳೂರು: ಹುಡುಗಿಯರ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು, ಚಂದದ ಬೆಡಗಿಯರ ಬಣ್ಣಬಣ್ಣದ ಫೋಟೋ ಹಾಕಿ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಯುವಕ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

    ಪ್ರಖ್ಯಾತ್ ವಿನಯ್ ಬಂಧಿತ ಆರೋಪಿ. ಮೂಲತಃ ತುಮಕೂರಿನ ಶಿರಾ ಗೇಟ್ ಕೆ.ಹೆಚ್.ಬಿ ಕಾಲೋನಿ ವಾಸಿಯಾಗಿರುವ ಪ್ರಖ್ಯಾತ್ ಫೇಸ್‍ಬುಕ್‍ನಲ್ಲಿ ಫೇಕ್ ಖಾತೆ ತೆರೆದು, ಹುಡುಗಿ ಅಂತ ನಂಬಿಸಿ ವಂಚಿಸುತ್ತಿದ್ದನು. ವಿನುತ ಹಾಗೂ ವಿಜೇತ ಎಂಬ ಹುಡುಗಿಯರ ಹೆಸರಲ್ಲಿ ಖಾತೆ ತೆರೆದಿದ್ದ ಆರೋಪಿ, ಬೆಂಗಳೂರಿನ ಖಾಸಗಿ ಕಾಲೇಜ್ ವಿದ್ಯಾರ್ಥಿನಿ ಎಂದು ಪೋಸ್ಟ್ ಗಳನ್ನು ಹಾಕುತ್ತಿದ್ದ.

    ಕೆಲವು ಹುಡುಗಿಯರ ಖಾಸಗಿ ಪೋಟೋ ಮತ್ತು ಮಾಹಿತಿ ಪಡೆದು ಲಕ್ಷ ಲಕ್ಷ ರೂ. ಹಣಕ್ಕೆ ಆರೋಪಿ ಬೇಡಿಕೆ ಇಡುತ್ತಿದ್ದನು. ಅಲ್ಲದೆ ಆನ್‍ಲೈನ್ ಮೂಲಕ ಹಣ ಪಡೆದು ಜನರಿಗೆ ವಂಚಿಸುತ್ತಿದ್ದನು. ಈತನಿಂದ ವಂಚನೆಗೊಳಗಾದವರು ಪೊಲೀಸರ ಮೊರೆ ಹೋಗಿದ್ದಾರೆ. ಸೈಬರ್ ಪೊಲೀಸರಿಗೆ ವಂಚನೆ ಕುರಿತು ದೂರು ಸಲ್ಲಿಸಿದ್ದು, ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸದ್ಯ ಈ ದೂರಿನ ಆಧಾರದ ಮೇರೆಗೆ ಪ್ರಖ್ಯಾತ್‍ನನ್ನು ಸೈಬರ್ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv