Tag: Cyclist

  • ಬೆಂಗಳೂರಲ್ಲಿ ಸೈಕ್ಲಿಸ್ಟ್‌, ಫಿಟ್ನೆಸ್‌ ತರಬೇತುದಾರ ಹೃದಯಾಘಾತದಿಂದ ಸಾವು

    ಬೆಂಗಳೂರಲ್ಲಿ ಸೈಕ್ಲಿಸ್ಟ್‌, ಫಿಟ್ನೆಸ್‌ ತರಬೇತುದಾರ ಹೃದಯಾಘಾತದಿಂದ ಸಾವು

    ಬೆಂಗಳೂರು: ದೈಹಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದ ಫಿಟ್ನೆಸ್‌ ತರಬೇತುದಾರ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    45 ವಯಸ್ಸಿನ ಸೈಕ್ಲಿಸ್ಟ್, ಫಿಟ್ನೆಸ್ ತರಬೇತುದಾರ ಅನೀಲ್ ಕಡ್ಸೂರ್ ಶುಕ್ರವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ತೀವ್ರ ಅಸ್ವಸ್ಥರಾಗಿದ್ದ ಅನೀಲ್‌ರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಬರಲಿದೆ ಹೊಸ QR ಕೋಡ್ ಆ್ಯಪ್‌

    ಪ್ರತಿದಿನಿ 100 ಕಿ.ಮೀ‌ ಸೈಕ್ಲಿಂಗ್ ಮಾಡಿ ಅನಿಲ್‌ ಕ್ರಿಯಾಶೀಲರಾಗಿದ್ದರು. 100 ಕ್ಕೂ ಹೆಚ್ಚು ಸೈಕ್ಲಿಂಗ್‌ನ್ನು ಪೂರ್ತಿಗೊಳಿಸಿದ್ದರು. ಸೈಕ್ಲಿಂಗ್ ಮಾಡುವವರಿಗೆ ಸ್ಫೂರ್ತಿಯಾಗಿದ್ದರು. 42 ತಿಂಗಳು ನಿರಂತರವಾಗಿ, ಸೆಂಚ್ಯೂರಿ ರೇಡ್ ಮಾಡಿ ಗಮನ ಸೆಳೆದಿದ್ದರು.

    ಉತ್ತಮ ಹಾಗೂ ಕಠಿಣ ಸೈಕ್ಲಿಂಗ್ ಪಟುಗಳಾಗಲು ಸಲಹೆ ನೀಡುತ್ತಿದ್ದರು. ಸೈಕ್ಲಿಂಗ್ ಮಾಡುವ ಬಹುತೇಕ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದರು. ಇದನ್ನೂ ಓದಿ: ತುಮಕೂರಿನಲ್ಲಿ ತೆರೆಮರೆಯಲ್ಲಿ ಪ್ರಚಾರ ಆರಂಭಿಸಿದ ವಿ. ಸೋಮಣ್ಣ!

  • ಸೈಕಲ್ ಸವಾರನನ್ನು ಬಲಿ ಪಡೆದ BMW ಕಾರ್‌

    ಸೈಕಲ್ ಸವಾರನನ್ನು ಬಲಿ ಪಡೆದ BMW ಕಾರ್‌

    ನವದೆಹಲಿ: ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿ (Gurugram Expressway) ಸೈಕಲ್ ಸವಾರಿನಿಗೆ (Cyclist) ಬಿಎಮ್‍ಡಬ್ಲ್ಯೂ (BMW) ಕಾರ್ ಗುದ್ದಿ ಸೈಕಲ್ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

    ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುತ್ತಿದ್ದ ಬಿಎಮ್‍ಡಬ್ಲ್ಯೂ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಸೈಕಲ್ ಸವಾರ ಸುವೇಂದು ಚಟರ್ಜಿಯನ್ನು (50) ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಗಾಯಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಫುಟ್‌ಓವರ್ ಸೇತುವೆ ಕುಸಿತ – 60 ಅಡಿ ಎತ್ತರದಿಂದ ಬಿದ್ದ 20 ಮಂದಿ ಸ್ಥಿತಿ ಗಂಭೀರ

    ಅಪಘಾತದಲ್ಲಿ ಕಾರ್‌ನ ಟಯರ್ ಬ್ಲಾಸ್ಟ್ ಆಗಿದ್ದು, ಮುಂಭಾಗದ ಗ್ಲಾಸ್ ಪುಡಿಯಾಗಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಬಿಎಮ್‍ಡಬ್ಲ್ಯೂ ಚಾಲಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

    Live Tv
    [brid partner=56869869 player=32851 video=960834 autoplay=true]

  • ನಾಲೆಗೆ ಬಿದ್ದು ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಸಾವು

    ನಾಲೆಗೆ ಬಿದ್ದು ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಸಾವು

    ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು (Cyclist) ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್‌.ಪೇಟೆ (K.R.Pet) ತಾಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.

    ಪಾಂಡಿಚೇರಿ ಮೂಲದ ಆಲ್ಹರ್ಶ್ (17) ಮೃತ ಕ್ರೀಡಾಪಟು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ರಾಜ್ಯ, ಹೊರ ರಾಜ್ಯದಿಂದ ಸೈಕ್ಲಿಂಗ್ ಕ್ರೀಡಾಪಟುಗಳು ಆಗಮಿಸಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯ ಸೋಲಿಗೆ ಇದೇ ಕಾರಣ – ಪಾಕ್ ತಜ್ಞರ ವಿಶ್ಲೇಷಣೆ

    ಕ್ರೀಡಾಕೂಟದ ಸ್ಥಳದಿಂದ ಅನತಿ ದೂರದ ನಾಲೆ ಬಳಿ ಈಜಲು ಪಾಂಡಿಚೇರಿಯ ಕ್ರೀಡಾಪಟು ಆಲ್ಹರ್ಶ್ ಹೋಗಿದ್ದ. ಈ ವೇಳೆ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ನಾಲೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.

    ಸರಿಯಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸದ್ದಕ್ಕೆ ನಾಲೆಗೆ ಕ್ರೀಡಾಪಟು ಹೋಗಿದ್ದ. ಈ ವೇಳೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮಯ್ಯಗೆ ಸಿದ್ಧವಾಯ್ತು ಹೈಫೈ ಪ್ರಚಾರದ ಬಸ್

    Live Tv
    [brid partner=56869869 player=32851 video=960834 autoplay=true]

  • ಸೈಕ್ಲಿಂಗ್ ವೇಳೆ ಹೃದಯಾಘಾತ – ಸೈಕ್ಲಿಸ್ಟ್ ಸಾವು!

    ಸೈಕ್ಲಿಂಗ್ ವೇಳೆ ಹೃದಯಾಘಾತ – ಸೈಕ್ಲಿಸ್ಟ್ ಸಾವು!

    ಹುಬ್ಬಳ್ಳಿ: ಹವ್ಯಾಸಿ ಸೈಕ್ಲಿಸ್ಟ್ ಒಬ್ಬರು ಸೈಕಲ್ ರೈಡ್ ಮಾಡುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಏನಿದು ಘಟನೆ?: ಹುಬ್ಬಳ್ಳಿಯ ಬಸನಗೌಡ ಶಿವಳ್ಳಿ (35) ಎಂಬುವವರೇ ಮೃತ ಸೈಕ್ಲಿಸ್ಟ್. ಶಿವಳ್ಳಿ ಅವರು ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸದಸ್ಯರಾಗಿದ್ದರು. ಹುಬ್ಬಳ್ಳಿ ಬೈಸಿಕಲ್ ಕ್ಲಬ್ 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡು 35 ಸೈಕ್ಲಿಸ್ಟ್‍ಗಳು ಹುಬ್ಬಳ್ಳಿಯಿಂದ ಶಿಗ್ಗಾವಿಗೆ, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಬರುವ ಯೋಜನೆ ಹಾಕಿಕೊಂಡಿದ್ದರು. ಇದನ್ನೂ ಓದಿ: ಅಟ್ಲಾಂಟಾ ಮೃಗಾಲಯದ ಗೊರಿಲ್ಲಾಗಳಲ್ಲಿ ಕೊರೊನಾ ಸೋಂಕು ದೃಢ

    ಶಿವಳ್ಳಿ ಅವರು ಸೈಕಲ್ ಪ್ರಯಾಣಕ್ಕೆ ಹೆಸರು ನೋಂದಾಯಿಸಿಕೊಂಡಿರಲಿಲ್ಲ. ಆದರೆ, ಸ್ನೇಹಿತರನ್ನು ಬೀಳ್ಕೊಡಲು ಆಗಮಿಸಿದ್ದರು. ಹುಬ್ಬಳ್ಳಿಯ ಹೊರ ವಲಯದ ಕೆಲ ಕಿಲೋಮೀಟರ್ ವರೆಗೆ ಬಿಟ್ಟು ಬರುವುದಾಗಿ ಹೇಳಿ ಸ್ನೇಹಿತರೊಂದಿಗೆ ಸೈಕಲ್ ಏರಿ ಹೊರಟಿದ್ದರು. ಆದರೆ, ಮಧ್ಯದಲ್ಲಿ ಬಿಟ್ಟು ಬಾರದೇ ಶಿಗ್ಗಾವಿವರೆಗೆ ತೆರಳಿದ್ದರು. ಅಲ್ಲಿ ಹಣ್ಣು ತಿಂದು ಕೆಲಕಾಲ ಸ್ನೇಹಿತರೊಂದಿಗೆ ಹರಟೆ ಹೊಡೆದಿದ್ದಾರೆ. ಇದನ್ನೂ ಓದಿ:   ಗುಜರಾತ್ ಮುಂದಿನ ಸಿಎಂ ಯಾರು?- ಪಟೇಲ್ ಸಮುದಾಯಕ್ಕೆ ಮಣೆ ಹಾಕುವ ಚಿಂತನೆ

    ಶಿಗ್ಗಾವಿಯಿಂದ 3 ಕಿ.ಮೀ. ಮುಂದೆ ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸೈಕಲ್ ರೈಡರ್ ತಂಡದಲ್ಲಿದ್ದ ವೈದ್ಯರು ಪರೀಕ್ಷೆ ಮಾಡಿದಾಗ ಹೃದಯಾಘಾತದಿಂದ ಶಿವಳ್ಳಿ ಅವರು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಇದನ್ನೂ ಓದಿ:  ವಿಜಯಪುರದ ಕುವರಿಗೆ ರಾಷ್ಟ್ರೀಯ ಪ್ರಶಸ್ತಿ

    ಮೃತ ಬಸನಗೌಡ ಶಿವಳ್ಳಿ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

  • ಶ್ರೀಲಂಕಾದ ಸ್ಟಾರ್ ಕ್ರಿಕೆಟಿಗ ಕುಸಲ್ ಮೆಂಡಿಸ್ ಅರೆಸ್ಟ್

    ಶ್ರೀಲಂಕಾದ ಸ್ಟಾರ್ ಕ್ರಿಕೆಟಿಗ ಕುಸಲ್ ಮೆಂಡಿಸ್ ಅರೆಸ್ಟ್

    ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ.

    ಶ್ರೀಲಂಕಾದ ರಾಜಧಾನಿ ಕೊಲಂಬೊದ ಹೊರ ಭಾಗದಲ್ಲಿ ಸೈಕಲ್ ಸವಾರನಿಗೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದ ಅಪಘಾತ ಪ್ರಕರಣದಲ್ಲಿ ಶ್ರೀಲಂಕಾ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕುಸಲ್ ಮೆಂಡಿಸ್ ಶ್ರೀಲಂಕಾದ ಪುನದುರಾ ಪ್ರದೇಶದಲ್ಲಿ ತನ್ನ ಎಸ್‍ಯುವಿ ಕಾರನ್ನು ಡ್ರೈವ್ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ಅಲ್ಲಿ ಸೈಕಲ್ ಓಡಿಸುತ್ತಿದ್ದ ಓರ್ವನಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಕುಸಲ್ ಮಂಡಿಸ್ ಅವರನ್ನು ಬಂಧಿಸಿದ್ದು, ಅವರ ಕಾರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಮಾರ್ಚ್‍ನಲ್ಲಿ ಶ್ರೀಲಂಕಾದಲ್ಲಿಯೇ ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದ 16 ಜನರಲ್ಲಿ ಮೆಂಡಿಸ್ ಕೂಡ ಇದ್ದರು. ಆದರೆ ಕೊರೊನ ವೈರಸ್ ಭೀತಿಯಿಂದ ಈ ಸರಣಿಯನ್ನು ರದ್ದುಮಾಡಲಾಗಿತ್ತು. ಜೊತೆಗೆ ಶ್ರೀಲಂಕಾದಲ್ಲಿ ವರ್ಷಕ್ಕೆ ಸುಮಾರು 3 ಸಾವಿರಕ್ಕೂ ಹೆಚ್ಚು ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಾರೆ ಎಂದು ವರದಿ ಪ್ರಕಟಿಸಿದೆ.

    ಈ ಹಿಂದೆ 2003ರಲ್ಲಿ ಶ್ರೀಲಂಕಾದ ಮಾಜಿ ಸ್ಪಿನ್ ಬೌಲರ್ ಕೌಶಲ್ ಲೋಕುರಾಚಿ ಅವರು ಕೂಡ ಮಹಿಳಾ ಪಾದಚಾರಿಗೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದರು. ಆಗ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆಯ ನಂತರ ಕೌಶಲ್ ಅವರನ್ನು ನಾಲ್ಕು ವರ್ಷ ಕ್ರಿಕೆಟಿನಿಂದ ಅಮಾನತು ಮಾಡಿ ಜೈಲಿಗೆ ಕೂಡ ಕಳುಹಿಸಲಾಗಿತ್ತು.