Tag: cyclone

  • ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ

    ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ

    – `ಶಕ್ತಿ’ ಹೆಸರು ಕೊಟ್ಟಿದ್ದೇ ಲಂಕಾ; ಅ.7ರ ವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ

    ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ (Shakti Cyclone) ಅಬ್ಬರ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಅ.7ರ ವರೆಗೆ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಇದು ಮುಂಗಾರು ಬಳಿಕ ಅರಬ್ಬಿ ಸಮುದ್ರದಲ್ಲಿ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ.

    ಚಂಡಮಾರುತ ಬೀಸುವ ಹಿನ್ನೆಲೆ ಮುಂಬೈ (Mumbai), ಥಾಣೆ, ಪಾಲ್ಘರ್, ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ ಸೇರಿದಂತೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಮಹಾರಾಷ್ಟ್ರದ ಒಳಭಾಗಗಳಲ್ಲಿ, ಅದ್ರಲ್ಲೂ ಮುಖ್ಯವಾಗಿ ಪೂರ್ವ ವಿದರ್ಭ ಮತ್ತು ಮರಾಠವಾಡದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

    ಉತ್ತರ ಕೊಂಕಣದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಸ್ಥಳೀಯ ಆಡಳಿತ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಕಂದಮ್ಮಗಳ ಜೀವ ತೆಗೆದ ಕೆಮ್ಮಿನ ಸಿರಪ್ – ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

    ಗುಜರಾತ್‌ಗೆ ಅಪ್ಪಳಿಸಲಿದೆ ಚಂಡಮಾರುತ
    ಹವಾಮಾನ ಇಲಾಖೆ (IMD) ವಿಜ್ಞಾನಿ ಅಭಿಮನ್ಯು ಚೌಹಾಣ್ ಪ್ರಕಾರ, ಈಶಾನ್ಯ ಅರೇಬಿಯನ್‌ ಸಮುದ್ರದಲ್ಲಿ (Arabian Sea) ಚಂಮಾರುತ ತೀವ್ರಗೊಂಡಿದೆ. ಗಂಟೆಗೆ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಅಕ್ಟೋಬರ್‌ 6ರಂದು ಬೆಳಗ್ಗಿನ ವೇಳೆಗೆ ಚಂಡಮಾರುತವು ಗುಜರಾತ್‌ ಕಡೆಗೆ ಬೀಸುವ ನಿರೀಕ್ಷೆಯಿದೆ. ಆದಾಗ್ಯೂ ರಾಜ್ಯದಲ್ಲಿ ಮಳೆಯ ಪರಿಣಾಮ ಕಡಿಮೆ ಇರಲಿದ್ದು, ಗಾಳಿಯು ಗಂಟೆಗೆ 40-55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ವಿಧಾನಸಭೆ ಚುನಾವಣೆ; ತಯಾರಿ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ

    ಶಕ್ತಿ ಚಂಡಮಾರುತ ಎದುರಿಸಲು ಸಕಲ ತಯಾರಿ
    ಇನ್ನೂ ಶಕ್ತಿ ಚಂಡ ಮಾರುತ ಎದುರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರ (Maharashtra Government) ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ವಿಪತ್ತು ನಿರ್ವಹಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಬೇಕು, ಕರಾವಳಿ ಮತ್ತು ತಗ್ಗು ಪ್ರದೇಶಗಳಲ್ಲಿ ನೆಲೆಸಿರುವ ಜನರನ್ನ ಸ್ಥಳಾಂತರಿಸಲು ಕ್ರಮ ವಹಿಸಬೇಕು, ಮೀನುಗಾರರು ಸಮುದ್ರಕ್ಕಿಳಿದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ‌

    ಸೈಕ್ಲೋನ್‌ ಶಕ್ತಿ ಈಗ ಎಲ್ಲಿದೆ?
    ಹವಾಮಾನ ಇಲಾಖೆ ಪ್ರಕಾರ, ಶಕ್ತಿ ಚಂಡಮಾರುತವು ಪ್ರಸ್ತುತ ಗುಜರಾತ್‌ನ ನಲಿಯಾದಿಂದ ನೃಋತ್ಯಕ್ಕೆ ಸುಮಾರು 270 ಕಿಮೀ ದೂರದಲ್ಲಿ, ಪೋರ್‌ಬಂದರ್‌ನಿಂದ ಪಶ್ಚಿಮಕ್ಕೆ 300 ಕಿಮೀ ಮತ್ತು ದಕ್ಷಿಣಕ್ಕೆ 360 ಕಿಮೀ ದೂರದಲ್ಲಿದೆ. ಸುಮಾರು 8 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸುತ್ತಿದ್ದು, 100 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದನ್ನೂ ಓದಿ: ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್

    `ಶಕ್ತಿ’ ಹೆಸರು ಕೊಟ್ಟಿದ್ದೇ ಶ್ರೀಲಂಕಾ
    ʻಶಕ್ತಿʼ ಚಂಡಮಾರುತದ ಹೆಸರು ಗಮನ ಸೆಳೆದಿದೆ. ಆದ್ರೆ ಚಂಡಮಾರುತಕ್ಕೆ ʻಶಕ್ತಿʼ ಎಂದು ಹೆಸರು ಕೊಟ್ಟಿದ್ದೇ ಶ್ರೀಲಂಕಾ. ವಿಶ್ವ ಹವಾಮಾನ ಸಂಸ್ಥೆ (WMO) ಹಾಗೂ ಏಷ್ಯಾ ಮತ್ತು ಪೆಸಿಫಿಕ್‌ನ ಆರ್ಥಿಕ ಮತ್ತು ಸಾಮಾಜಿಕ ಆಯೋಗ (ESCAP) ನಿರ್ವಹಿಸುವ ಸಂಘಟಿತ ವ್ಯವಸ್ಥೆಯ ಅಡಿಯಲ್ಲಿ ಶ್ರೀಲಂಕಾ ʻಶಕ್ತಿʼ ಎಂದು ಹೆಸರಿಸಿದೆ. 2020ರಲ್ಲಿ ಪರಿಚಯಿಸಲಾದ ಈ ಸಂಘಟಿತ ವ್ಯವಸ್ಥೆಯು ಬಾಂಗ್ಲಾದೇಶ, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ಓಮನ್, ಪಾಕಿಸ್ತಾನ, ಶ್ರೀಲಂಕಾ ಮತ್ತು ಥೈಲ್ಯಾಂಡ್ ಸದಸ್ಯರಾಷ್ಟ್ರಗಳನ್ನು ಒಳಗೊಂಡಿದೆ.

    ಚಂಡಮಾರುತವನ್ನು ಸುಲಭವಾಗಿ ಗುರುತಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇದಕ್ಕೆ ಹೆಸರುಗಳನ್ನು ನೀಡಲಾಗುತ್ತದೆ. ಈ ಋತುವಿನ ಮೊದಲ ಚಂಡಮಾರುತ ಇದಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ

  • ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಬೆಂಗಳೂರು: ಗುರುವಾರದಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತಗಳು (Cyclone) ಚುರುಕುಗೊಂಡ ಹಿನ್ನೆಲೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 03, 04 ಮತ್ತು 05ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕನ್ನಡ, ಕನ್ನಡಿಗರಿಗಾಗಿ 2 ಕೋಟಿ ಈಡುಗಾಯಿ ಹೊಡೆಯಿರಿ: ವಾಟಾಳ್ ನಾಗರಾಜ್ ಕರೆ

    ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್

  • ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ನವದೆಹಲಿ: ಇರಾಕ್ (Iraq) ಹಾಗೂ ಬಾಂಗ್ಲಾದೇಶದಲ್ಲಿ (Bangladesh) ಹುಟ್ಟಿಕೊಂಡ ಚಂಡಮಾರುತದ (Cyclone) ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಎಚ್ಚರಿಕೆ ಕೊಟ್ಟಿದೆ.

    ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶದ 18 ರಾಜ್ಯಗಳಲ್ಲಿ ಮಾ.15ರವರೆಗೆ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: ಮಾ.27 ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಯುಗಾದಿ ಮಹೋತ್ಸವ

    ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಮಾ.15ರವರೆಗೆ ಮಳೆ, ಭಾರೀ ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಮಾ.12 ಮತ್ತು 13ರಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಮಾ.13ರಿಂದ 15ರ ನಡುವೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಅಕ್ರಮ ಮದರಸಾಗಳ ಮೇಲೆ ಕ್ರಮ – 15 ದಿನಗಳಲ್ಲಿ 52 ಮದರಸಾಗಳು ಬಂದ್

    ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾಗಳಲ್ಲಿ ಮಾ.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾ.13ರೊಳಗೆ ಅರುಣಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಂಭವವಿದೆ. ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿಯೂ ಮಾ.13ರ ಒಳಗಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಭಾರತಕ್ಕೆ ಶೀಘ್ರವೇ ಸ್ಟಾರ್‌ಲಿಂಕ್‌ ಸ್ಯಾಟಲೈಟ್‌ ಇಂಟರ್ನೆಟ್‌ – ಮಸ್ಕ್‌ ಕಂಪನಿ ಜೊತೆ ಜಿಯೋ, ಏರ್‌ಟೆಲ್‌ ಒಪ್ಪಂದ

    ಪೂರ್ವ ಕರಾವಳಿಯ ಮೀನುಗಾರರು ಪರಿಸ್ಥಿತಿ ಸ್ಥಿರವಾಗುವವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪೂರ್ವ ಕರಾವಳಿಯಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಾರ್ಚ್ 15ರ ನಂತರ ಚಂಡಮಾರುತದ ಪರಿಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಗಾಂಜಾ ಸಾಗಾಟ – 14 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

  • Cyclone Effect: ತಮಿಳುನಾಡಿನಲ್ಲಿ 2 ದಿನ ಮಳೆ ಸಾಧ್ಯತೆ

    Cyclone Effect: ತಮಿಳುನಾಡಿನಲ್ಲಿ 2 ದಿನ ಮಳೆ ಸಾಧ್ಯತೆ

    ಚೆನ್ನೈ: ಚಂಡಮಾರುತ (Cyclone) ಪ್ರಭಾವದಿಂದ ತಮಿಳುನಾಡಿನಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

    ಉತ್ತರ ತಮಿಳುನಾಡು (Tamil Nadu) ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧತೆ ಇದೆ. ಕಳೆದ 24 ಗಂಟೆಗಳಲ್ಲಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

    ಕವಲಿ ಮತ್ತು ಒಂಗೋಲೆಯಲ್ಲಿ ಕ್ರಮವಾಗಿ 67ಮಿ.ಮೀ ಹಾಗೂ 63ಮಿ.ಮೀ ಮಳೆ ದಾಖಲಾಗಿದೆ. ಮಿನಂಬಕ್ಕಂ, ನುಂಗಂಬಾಕ್ಕಂ, ಪುದುಚೇರಿ ಮತ್ತು ಕಡಲೂರುಗಳಲ್ಲಿ 15ಮಿ.ಮೀ ಮಳೆಯಾಗಿದೆ. ದಕ್ಷಿಣ ಕರಾವಳಿ ತಮಿಳುನಾಡು ಮತ್ತು ರಾಜ್ಯದ ಒಳಭಾಗಗಳಲ್ಲಿ ಅಲ್ಪ ಪ್ರಮಾಣದ ಸುರಿದಿದೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ಮುಂದಿನ 48 ಗಂಟೆಗಳಲ್ಲಿ ಬಾಪಟ್ಲಾ, ಕವಾಲಿ, ಒಂಗೋಲ್, ನೆಲ್ಲೂರು, ಶ್ರೀಹರಿಕೋಟಾ, ಚೆನ್ನೈ (Chennai), ಕಾಂಚೀಪುರಂ, ತಾಂಬರಂ, ಪುದುಚೇರಿ, ಕಡಲೂರು ಮತ್ತು ಕಾರೈಕಲ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಬಂಗಾಳ ಕೊಲ್ಲಿಯ ಮೇಲಿನ ಕಡಿಮೆ ಒತ್ತಡದ ವ್ಯವಸ್ಥೆಯು ಈ ಮಳೆಗೆ ಕಾರಣವಾಗಿದೆ. ಇದು ವಿಶೇಷವಾಗಿ ತಮಿಳುನಾಡಿನ ಕರಾವಳಿ ಜಿಲ್ಲೆಗಳು ಮತ್ತು ಚೆನ್ನೈ ಮೇಲೆ ಪರಿಣಾಮ ಬೀರುತ್ತದೆ. ಈ ಹವಾಮಾನ ವ್ಯವಸ್ಥೆಯಿಂದ ನ.16 ರ ತನಕ ರಾಜ್ಯದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದಂತೆ ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಯ್ತು: ಪ್ರಿಯಾಂಕಾ ಗಾಂಧಿ

  • ಚೆನ್ನೈ ಚಂಡಮಾರುತ ಎಫೆಕ್ಟ್ – ಕೋಲಾರದಲ್ಲಿ ಜಡಿಮಳೆ

    ಚೆನ್ನೈ ಚಂಡಮಾರುತ ಎಫೆಕ್ಟ್ – ಕೋಲಾರದಲ್ಲಿ ಜಡಿಮಳೆ

    ಕೋಲಾರ: ತಮಿಳುನಾಡಿನ (Tamil Nadu) ಚೆನ್ನೈನಲ್ಲಿ ಚಂಡಮಾರುತ (Chennai Cyclone) ಎದ್ದಿರುವ ಪರಿಣಾಮ ಕೋಲಾರ ಜಿಲ್ಲೆಯಲ್ಲಿ ಜಡಿಮಳೆಯಾಗುತ್ತಿದೆ.

    ಚೆನ್ನೈನಲ್ಲಿ ಚಂಡಮಾರುತದ ಅಬ್ಬರ ಜೋರಾದ ಹಿನ್ನೆಲೆ ಗುರುವಾರ ಮುಂಜಾನೆಯಿಂದ ಕೋಲಾರ (Kolar) ಜಿಲ್ಲೆಯ ಹಲವೆಡೆ ಜಡಿ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ಮಳೆಯ (Rain) ಸಿಂಚನವಾಗುತ್ತಿದೆ. ಆದರೆ ಇಂದು ಮುಂಜಾನೆಯಿಂದ ಜಿಲ್ಲೆಯಲ್ಲಿ ಜೋರು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ನಾಗ್ಪುರ-ಕೋಲ್ಕತ್ತಾ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ – ಓರ್ವನ ಬಂಧನ

    ಇನ್ನೂ ನೀರು ಹರಿದು ಬರುವಂತಹ ಜೋರು ಮಳೆಯಾಗಿಲ್ಲವಾದರೂ ತೇವಾಂಶ ಹೆಚ್ಚಾಗಿ ತೋಟಗಾರಿಕೆ ಬೆಳೆಗಳು ಸೇರಿದಂತೆ ರಾಗಿ ಭತ್ತ ಕೊಯ್ಲಿಗೆ ಇದು ಕಂಟಕವಾಗಲಿದೆ. ಕೋಲಾರ ಜಿಲ್ಲೆಯಾದ್ಯಂತ ಮಳೆಯ ಸಿಂಚನ ಮೂಡಿರುವುದು ಸದ್ಯ ಮೇವಿನ ಬವಣೆ ನೀಗಿದೆ. ಇನ್ನೂ ಎರಡು ದಿನ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು

  • ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಭುವನೇಶ್ವರ/ಕೋಲ್ಕತ್ತಾ: ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ (Cyclone Dana) ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ (Odisha Coast) ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ.

    ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ (West Bengal) ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.

    ನೆರೆಯ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಮತ್ತು ಕೋಲ್ಕತ್ತಾದಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ (Rain) ಸುರಿಯುತ್ತಿದೆ. ಇದನ್ನೂ ಓದಿ: ಮುಡಾ ಕೇಸ್; ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಮೊರೆ

    ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.


    ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದೆ. ವಿಮಾನ ನಿಲ್ದಾಣವನ್ನು ಬಂದ್‌ ಮಾಡಿದ ಪರಿಣಾಮ ಸುಮಾರು 40 ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.

    ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 400ಕ್ಕೂ ಹೆಚ್ಚು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಒಡಿಶಾದಲ್ಲಿ ಸುಮಾರು 6 ಲಕ್ಷ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

     

  • ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್- ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ

    ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್- ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತದ (Cyclone) ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ. 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ

    ಕೋಲಾರ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ ಬೀದರ್, ಧಾರವಾಡ,ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ನಿಷೇಧ

  • ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

    ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

    ಮಂಗಳೂರು: ರಾಜ್ಯದಲ್ಲಿ ಇನ್ನೂ ಮಳೆ ಬಿರುಸು ಪಡೆದಿಲ್ಲ. ಆದರೆ ಕರಾವಳಿಯಲ್ಲಿ ಬಿಪರ್‌ಜಾಯ್‌ ಚಂಡಮಾರುತದ (Biparjoy Cyclone) ಅಬ್ಬರಕ್ಕೆ ಕಡಲ್ಕೊರೆತ ತೀವ್ರಗೊಂಡಿದೆ. ಮಳೆ ಬರುವುದಕ್ಕೆ ಮೊದಲೇ ಚಂಡಮಾರುತ ಕಾಣಿಸಿದ್ದರಿಂದ ಕಡಲು ಅಬ್ಬರಿಸತೊಡಗಿದ್ದು ತೀರ ಪ್ರದೇಶದ ನಿವಾಸಿಗಳು ಆತಂಕದಲ್ಲಿ ಕಾಲ ತಳ್ಳುತ್ತಿದ್ದಾರೆ.

    ಅರಬ್ಬೀ ಸಮುದ್ರದಲ್ಲಿ (Arabian Sea) ಎದ್ದಿರುವ ಚಂಡಮಾರುತದ ಪರಿಣಾಮ ಕಡಲು ಮಾತ್ರ ಭೋರ್ಗರೆಯುತ್ತ ಬರುತ್ತಿದ್ದು ರಕ್ಕಸ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಇದರಿಂದಾಗಿ ಮಂಗಳೂರು (Mangaluru) ಹೊರವಲಯದ ಉಳ್ಳಾಲದ ಬಟ್ಟಂಪಾಡಿ, ಉಚ್ಚಿಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ತೀರದಲ್ಲಿರುವ ಮನೆಗಳು ಸಮುದ್ರ ಸೇರುತ್ತಿವೆ. ನೂರಾರು ತೆಂಗಿನ ಮರಗಳು ಧರಾಶಾಯಿ ಆಗಿದ್ದು ತೀರ ಪ್ರದೇಶದ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ಫೋಟೋ ಲೀಕ್- ಸಚಿವ ಜಮೀರ್‌ಗೆ ಸುರ್ಜೇವಾಲ ಕ್ಲಾಸ್

    ಈ ಭಾಗದಲ್ಲಿ ಕಡಲ್ಕೊರೆತ ಪ್ರತಿ ಬಾರಿ ಕಾಣಿಸಿಕೊಳ್ಳುವ ಸಮಸ್ಯೆ. ಮಳೆ ಜೋರಾದರೆ, ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಂಡರೆ, ಕರಾವಳಿಯ ಕೆಲವು ಪ್ರದೇಶಗಳು ಟಾರ್ಗೆಟ್ ಆಗುತ್ತವೆ. ಕಡಲ ರಾಜನ ಅಬ್ಬರಕ್ಕೆ ಭೂಪ್ರದೇಶ ಕೊಚ್ಚಿ ಹೋಗುತ್ತಿದ್ದು, ಅಲ್ಲಿನ ಮನೆಗಳು ಸಮುದ್ರಕ್ಕೆ ಆಹುತಿಯಾಗುತ್ತವೆ. ಈ ಸಮಸ್ಯೆಗೆ ಪ್ರತಿ ಬಾರಿ ರಾಜಕಾರಣಿಗಳು ಶಾಶ್ವತ ಕಾಮಗಾರಿಯ ಭರವಸೆ ನೀಡಿದರೂ, ಅದು ಭರವಸೆಗಷ್ಟೇ ಸೀಮಿತವಾಗಿವೆ.

    ಕಳೆದ ಬಾರಿಯೂ ಮೀನುಗಾರಿಕೆ ಸಚಿವರಾಗಿದ್ದ ಎಸ್. ಅಂಗಾರ ಕೇರಳದ ಮಾದರಿ ಶಾಶ್ವತ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಹೇಳಿದ್ದರು. ಆದರೆ ಕಾಮಗಾರಿಗೆ ಅನುದಾನವನ್ನೇ ಬಿಡುಗಡೆ ಮಾಡಿರಲಿಲ್ಲ. ಇದೀಗ ರಾಜ್ಯದಲ್ಲಿ ಸರಕಾರ ಬದಲಾಗಿದ್ದು, ಮತ್ತೆ ಕಡಲ್ಕೊರೆತಕ್ಕೆ ಶಾಶ್ವತ ಕಾಮಗಾರಿ ಆಗಬೇಕು ಇಲ್ಲವೇ ಈ ಭಾಗದ ಜನರನ್ನು ಸ್ಥಳಾಂತರಿಸಿ ಪುನರ್ವಸತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

    ಒಂದೆಡೆ ಕಡಲು ಆಕ್ರಮಿಸಿಕೊಂಡು ಬರುತ್ತಿದ್ದರೆ, ಮತ್ತೊಂದೆಡೆ ಕಡಲಿಗೆ ಕಲ್ಲು ಹಾಕುವ ಕೆಲಸ ನಡೆಯುತ್ತಲೇ ಇದೆ. ಈ ರೀತಿ ಕಲ್ಲುಗಳನ್ನು ಸುರಿದರೆ, ಅದು ಪೂರ್ತಿಯಾಗಿ ಕಡಲಿನ ಒಳ ಸೇರುತ್ತವೆ. ಹತ್ತಾರು ವರ್ಷಗಳಿಂದಲೂ ಇದೇ ರೀತಿ ಆಗಿರುವುದರಿಂದ ಜನರು ಇಂತಹ ಅರೆಬರೆ ಕಾಮಗಾರಿಯ ನಾಟಕ ಬೇಡ ಎನ್ನುತ್ತಾರೆ. ಒಟ್ಟಿನಲ್ಲಿ ಮಳೆ ಬಿರುಸು ಪಡೆಯುವ ಮೊದಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿದ್ದು ಇನ್ನು ಮಳೆ ಜೋರಾದಲ್ಲಿ ಪರಿಸ್ಥಿತಿ ಹೇಗಿರಬಹುದು ಎನ್ನುವ ಆತಂಕ ಸ್ಥಳೀಯರಲ್ಲಿದೆ.

  • ತೀವ್ರ ಸ್ವರೂಪ ತಾಳಿದ ಮೋಚಾ ಚಂಡಮಾರುತ – ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

    ತೀವ್ರ ಸ್ವರೂಪ ತಾಳಿದ ಮೋಚಾ ಚಂಡಮಾರುತ – ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

    ನವದೆಹಲಿ: ಆಗ್ನೇಯ ಬಂಗಾಳಕೊಲ್ಲಿಯಲ್ಲಿ (Bay of Bengal) ಸೃಷ್ಟಿಯಾಗಿರುವ ಮೋಚಾ ಚಂಡಮಾರುತ (Cyclone Mocha) ಅತ್ಯಂತ ತೀವ್ರ ಸ್ವರೂಪ ತಾಳಿದೆ. ಪ್ರಸ್ತುತ ಚಂಡಮಾರುತ ಪೋರ್ಟ್‌ಬ್ಲೇರ್‌ನಿಂದ 520 ಕಿ.ಮೀ ದೂರದ ಆಗ್ನೇಯ ದಿಕ್ಕಿನಲ್ಲಿ ಚಲಿಸುತ್ತಿದೆ.

    ಮೋಚಾ ಚಂಡಮಾರುತ ಜನತೆಯನ್ನು ಭೀತಿಗೆ ತಳ್ಳಿದೆ. ಇದು ಕರಾವಳಿ ಭಾಗದಲ್ಲಿ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಬಂಗಾಳ (West Bengal) ಸೇರಿ ಹಲವೆಡೆ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: 115-120 ಸೀಟ್‌ ಗೆಲ್ತೀವಿ – ಹೋಟೆಲಿನಲ್ಲಿ ದೋಸೆ ಸವಿದ ಬಿಜೆಪಿ ನಾಯಕರು

    ಶನಿವಾರ ತ್ರಿಪುರಾ, ಮಿಜೋರಾಂ ಮತ್ತು ಬಂಗಾಳದಲ್ಲಿ ಭಾರೀ ಮಳೆಯಾಗಲಿದೆ. ಭಾನುವಾರ ನಾಗಾಲ್ಯಾಂಡ್, ಮಣಿಪುರ, ಅಸ್ಸಾಂನಲ್ಲಿ ರಣಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಮೋಚಾ ಚಂಡಮಾರುತ ಬಳಿಕ ಬಾಂಗ್ಲಾದೇಶ ಮತ್ತು ಮಯನ್ಮಾರ್ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಆದೇಶ

  • ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ

    ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ

    ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ (Cyclone) ‘ಮೋಚಾ’ (Mocha) ಒಡಿಶಾಗೆ (Odisha) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಚುನಾವಣೆಯ ಕಾವಿನಲ್ಲಿರುವ ಕರ್ನಾಟಕಕ್ಕೂ ಮೋಚಾ ಚಂಡಮಾರುತದ ಎಫೆಕ್ಟ್ ಇರಲಿದೆ ಎನ್ನಲಾಗಿದೆ.

    ಐಎಂಡಿ ಮುನ್ಸೂಚನೆ ಪ್ರಕಾರ ಮೇ 6ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ. ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ ಸುಮಾರು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿ ಸಾಕ್ಷ್ಯಾಚಿತ್ರ ಪ್ರಕರಣ – ಬಿಬಿಸಿಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್

    ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ. ಕರಾವಳಿ ತೀರಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ. ಚಂಡಮಾರುತದ ಬಗ್ಗೆ ಭಯ ಬೇಡ, ಆದರೆ ಯಾವುದೇ ಘಟನೆಗಳನ್ನು ಎದುರಿಸಲು ಸಿದ್ಧರಾಗಿರಿ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೋಹಾಪಾತ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಛತ್ತಿಸ್‌ಗಢದಲ್ಲಿ ಎಸ್‌ಯುವಿ, ಟ್ರಕ್ ಮುಖಾಮುಖಿ ಡಿಕ್ಕಿ – 11 ಮಂದಿ ಸಾವು