– 10 ದಿನಗಳ ಬಳಿಕ ಭೂಮಿಗೆ ಅಪ್ಪಳಿಸಿದ ಸೈಕ್ಲೋನ್ – 90 ಸಾವಿರ ಮಂದಿ ಸ್ಥಳಾಂತರ
ಗಾಂಧಿನಗರ: ಬಿಪರ್‌ಜಾಯ್ ಚಂಡಮಾರುತ (Cyclone Biparjoy) ಗುರುವಾರ ಸಂಜೆ 6:40ರ ವೇಳೆ ಗುಜರಾತಿನ (Gujarat) ಕಛ್ ತೀರದ ಲಖಪತ್ ಬಳಿ ಅಪ್ಪಳಿಸಿದ್ದು, ಅರಬ್ಬಿ ಸಮುದ್ರ (Arabian Sea) ತೀರ ಪ್ರದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.
ಸುಮಾರು 10 ದಿನಗಳ ಕಾಲ ಸಮುದ್ರದಲ್ಲಿ ಸಂಚರಿಸಿದ್ದ ಚಂಡಮಾರುತ ಇದೇ ಮೊದಲ ದಾರಿಗೆ ಭೂಭಾಗಕ್ಕೆ ಅಪ್ಪಳಿಸಿದೆ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಿದ್ದರಿಂದ ವಿದ್ಯುತ್ ತಂತಿಗಳು, ಕಂಬಗಳು ಮುರಿದುಬಿದ್ದಿದೆ. 45ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸಮಸ್ಯೆಯಾಗಿದೆ. ವಿವಿಧ ಸ್ಥಳಗಳಲ್ಲಿ 524 ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ. ಸುಮಾರು 940 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ಕರಾವಳಿ ಮತ್ತು ತಗ್ಗು ಪ್ರದೇಶಗಳಿಂದ ಸುಮಾರು 94 ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ತಾತ್ಕಾಲಿಕವಾಗಿ 99 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಿಧನವಾಗಿ ಚಂಡಮಾರುತದ ಅಬ್ಬರ ಕಡಿಮೆಯಾಗುತ್ತಿದ್ದು ಈಗ ಗಂಟೆಗೆ 105-115 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ಚಂಡಮಾರುತ ಇಂದು ಮತ್ತಷ್ಟು ದುರ್ಬಲವಾಗಲಿದೆ. ಚಂಡ ಮಾರುತ ರಾಜಸ್ಥಾನ ಕಡೆ ಚಲಿಸುತ್ತಿರುವುದರಿಂದ ಇಂದು ಮತ್ತು ನಾಳೆ ರಾಜಸ್ಥಾನದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
– ಗಂಟೆಗೆ 150 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಅಬ್ಬರ – ಗುಜರಾತಿನ 8 ಜಿಲ್ಲೆಗಳಲ್ಲಿ ಹೈಅಲರ್ಟ್
ನವದೆಹಲಿ: ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್‌ಜಾಯ್ ಚಂಡಮಾರುತ (Cyclone Biparjoy) ಇಂದು ಸಂಜೆ ಗುಜರಾತ್‍ನ ಕಛ್ (Gujarat Kutch) ತೀರಕ್ಕೆ ಅಪ್ಪಳಿಸಲಿದೆ.
ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ (Pakistan) ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೊಡ್ಡ ಚಂಡಮಾರುತ ಇದಾಗಿದ್ದು ಅರಬ್ಬಿ ಸಮುದ್ರದ ಸಮೀಪದ ಪ್ರದೇಶಗಳಲ್ಲಿ (Arabian Sea) ಭಾರೀ ಅನಾಹುತ ಸೃಷ್ಟಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
In a nerve-racking mission, @IndiaCoastGuard Ship Shoor & ALH Mk-III (CG 858) augmented for evacuation of 50 personnel from Jack up rig “Key Singapore” off #Okha, #Gujarat. All 50 crew (26 crew on 12th Jun and 24 crew today) evacuated safely. pic.twitter.com/JYbTsn8GbJ
— Indian Coast Guard (@IndiaCoastGuard) June 13, 2023
ಪಶ್ಚಿಮ ರೈಲ್ವೇ 76 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಳಿಯ ವೇಗ ಗಂಟೆಗೆ 125 ರಿಂದ 150 ಕಿ.ಮೀ ಇರಲಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
#WATCH | Gujarat: Mandvi witnesses rough sea conditions and strong winds under the influence of #CycloneBiporjoy
As per IMD's latest update, VSCS (very severe cyclonic storm) Biparjoy to cross Saurashtra & Kutch & adjoining Pakistan coasts b/w Mandvi & Karachi near Jakhau Port… pic.twitter.com/QmebPZCsKQ
18 ಎನ್‍ಡಿಆರ್‌ಎಫ್,12 ಎಸ್‌ಡಿಆರ್‌ಎಫ್, 115 ರಾಜ್ಯ ರಸ್ತೆ ಹಾಗೂ ನಿರ್ಮಾಣ ಕೇಂದ್ರ ತಂಡಗಳು, 397 ವಿದ್ಯುತ್ ಇಲಾಖೆಯ ತಂಡಗಳನ್ನು ರಕ್ಷಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ವಾಯುಪಡೆ, ನೌಕಾಪಡೆಗೆ ಯಾವುದಕ್ಕೂ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ.
ಬಿರುಗಾಳಿಯಿಂದ ಈಗಾಗಲೇ ಗುಜರಾತ್ ತೀರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೊಬೈಲ್ ಹಾಗೂ ಸ್ಥಿರ ದೂರವಾಣಿಯಲ್ಲಿ ಸಂಪರ್ಕ ವ್ಯತ್ಯಯವಾಗಲಿರುವ ಕಾರಣ ರಕ್ಷಣಾ ತಂಡಗಳಿಗೆ ಸ್ಯಾಟಲೈಟ್ ಫೋನ್‌ಗಳನ್ನು ನೀಡಲಾಗಿದೆ. ಶಾಲೆ ಮತ್ತು ಇತರ ಸಭಾಭವನದಂತಹ ದೊಡ್ಡ ಕಟ್ಟಡಗಳಲ್ಲಿ ತಾತ್ಕಾಲಿಕ ಆಶ್ರಯ ಶಿಬಿರ ನಿರ್ಮಾಣ ಮಾಡಲಾಗಿದೆ.
ಚಂಡಮಾರುತರದಿಂದ ಸಮುದ್ರ ಪ್ರಕ್ಷುಬ್ಧವಾಗಿದು ಸೌರಾಷ್ಟ್ರ ಮತ್ತು ಕಛ್ ತೀರದಲ್ಲಿ 6 ಅಡಿ ಎತ್ತರದ ಅಲೆಗಳು ಏಳಲು ಆರಂಭಿಸಿದೆ. ಇಂದು ಅಲೆಗಳ ಎತ್ತರ 9 ಅಡಿಗೆ ಹೋಗಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಗುಜರಾತ್ ಜೊತೆಗೆ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ತೀರದ ಮೇಲೂ ನಿಗಾ ಇಡಲಾಗಿದೆ.
– ಗುರುವಾರ ಮಧ್ಯಾಹ್ನ ಗುಜರಾತ್ ತೀರಕ್ಕೆ ಅಪ್ಪಳಿಸಲಿದೆ ಚಂಡಮಾರುತ – ಗುಜರಾತ್, ಪಾಕಿಸ್ತಾನ ತೀರದಲ್ಲಿ ಭಾರೀ ವಿನಾಶ ಸಾಧ್ಯತೆ – 67 ರೈಲುಗಳ ಸಂಚಾರ ರದ್ದು
ನವದೆಹಲಿ: ಅರಬ್ಬೀ ಸಮುದ್ರದ ತೀರ ಪ್ರದೇಶಗಳಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಬಿಪರ್‌ಜಾಯ್ ಚಂಡಮಾರುತ (Cyclone Biparjoy) ಗುರುವಾರ ಮಧ್ಯಾಹ್ನ ಗುಜರಾತ್ ತೀರಕ್ಕೆ (Gujarat Coast) ಅಪ್ಪಳಿಸುವ ಸಾಧ್ಯತೆಯಿದ್ದು, ಈಗಾಗಲೇ ಸುಮಾರು 7,500 ಜನರನ್ನು ಸ್ಥಳಾಂತರ ಮಾಡಲಾಗಿದೆ.
ಗಂಟೆಗೆ 150 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಚಂಡಮಾರುತ ಅಪ್ಪಳಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಗುಜರಾತ್ ಮತ್ತು ಪಾಕಿಸ್ತಾನದ (Pakistan) ಸಮುದ್ರ ತೀರದ ಪ್ರದೇಶಗಳಲ್ಲಿ ಭಾರೀ ವಿನಾಶ ಸೃಷ್ಟಿಸುವ ಆಂತಕ ಎದುರಾಗಿದೆ. ಗುಜರಾತ್‌ನ ಜಖೌ ಬಂದರಿನ ಬಳಿ ಗುರುವಾರ ಮಧ್ಯಾಹ್ನದ ವೇಳೆಗೆ ಅತ್ಯಂತ ತೀವ್ರವಾಗಿ ಚಂಡಮಾರುತ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.
— Indian Coast Guard (@IndiaCoastGuard) June 12, 2023
ಅರಬ್ಬೀ ಸಮುದ್ರದಲ್ಲಿ 58 ವರ್ಷಗಳಲ್ಲಿ ಜೂನ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ಮೂರನೇ ಶಕ್ತಿಶಾಲಿ ಸೈಕ್ಲೋನ್ ಇದಾಗಿದ್ದು, 25 ವರ್ಷಗಳ ಬಳಿಕ ಜೂನ್‌ನಲ್ಲಿ ಗುಜರಾತ್ ಸಮುದ್ರ ತೀರಕ್ಕೆ ಅಪ್ಪಳಿಸುತ್ತಿರುವ ಚಂಡಮಾರುತ ಇದಾಗಿದೆ. ಭಾರೀ ಹಾನಿ ಮಾಡುವ ಸಾಧ್ಯತೆ ಇರುವ ಕಾರಣ ಪಶ್ಚಿಮ ರೈಲ್ವೇ ಒಟ್ಟು 67 ರೈಲುಗಳ ಸಂಚಾರವನ್ನು ರದ್ದು ಮಾಡಿದೆ.
ಕಛ್ (Kutch) ಮತ್ತು ಸೌರಾಷ್ಟ್ರ (Sourashtra) ಜಿಲ್ಲೆಯಲ್ಲಿ ಈಗಾಗಲೇ ಸರ್ಕಾರಿ ಅಧಿಕಾರಿಗಳು ಜನರನ್ನು ಸ್ಥಳಾಂತರ ಮಾಡುವ ಕೆಲಸ ಆರಂಭಿಸಿದ್ದಾರೆ. ಎರಡು ಜಿಲ್ಲೆಗಳಲ್ಲಿ ಸಮುದ್ರ ತೀರದಿಂದ 10 ಕಿ.ಮೀ ದೂರದವರೆಗೆ ನೆಲೆಸಿರುವ ಸುಮಾರು 7,500 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಇಂದು ಮತ್ತಷ್ಟು ಜನರನ್ನು ಸ್ಥಳಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು
#WATCH | Indian Coast Guard ships are patrolling off the coast of Gujarat, in view of the cyclone 'Biparjoy'
ಪ್ರಧಾನಿ ನರೇಂದ್ರ ಮೋದಿ ಸೂಚನೆ ಹಿನ್ನಲೆಯಲ್ಲಿ19 ಎನ್‌ಡಿಆರ್‌ಎಫ್ ತಂಡಗಳನ್ನು ಸಿದ್ದವಾಗಿಡಲಾಗಿದೆ. ಪರಿಸ್ಥಿತಿ ಕೈಮೀರಿದರೆ ಸೇನೆ, ನೌಕಾ ಪಡೆಗೆ ಸನ್ನದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.
ಗುಜರಾತ್ ಸರ್ಕಾರವು ಮುಂಜಾಗ್ರತೆಯಾಗಿ ಕರಾವಳಿ ಕಛ್, ಜಾಮ್‌ನಗರ, ದೇವಭೂಮಿ ದ್ವಾರಕಾ ಮತ್ತು ಜುನಾಗಢ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿದೆ.
ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಳ್ಳುತ್ತಿವೆ. ಈಗಾಗಲೇ ಸಭೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅಪಾಯಗಳನ್ನು ತಡೆಯುವಂತೆ ಸೂಚನೆ ನೀಡಿದ್ದು ಸ್ಥಳೀಯ ಆಡಳಿತಗಳು ತೀರ ಪ್ರದೇಶಗಳಿಗೆ ಜನರ ಪ್ರವೇಶ ನಿಷೇಧಿಸಿವೆ. ಬಿಪರ್‌ಜಾಯ್ ತೀವ್ರತೆ ಏನು, ಇದು ಮಾಡಬಹುದಾದ ಹಾನಿಗಳೇನು ಎನ್ನುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಅಧ್ಯಯನಗಳನ್ನು ನಡೆಸುತ್ತಿದ್ದು ಸರ್ಕಾರಕ್ಕೆ ನಿರಂತರ ಎಚ್ಚರಿಕೆ ಸಂದೇಶಗಳನ್ನು ನೀಡುತ್ತಿದೆ.
ಮೋದಿ ಸಭೆ:
ಈ ಅಪಾಯಕಾರಿ ಚಂಡಮಾರುತದ ಹಿನ್ನೆಲೆ ಪ್ರಧಾನಿ ಮೋದಿ ಸುಮಾರು 1 ಗಂಟೆಗೂ ಅಧಿಕ ಕಾಲ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಸಚಿವಾಲಯದ ಅಧಿಕಾರಿಗಳು ಹಾಗೂ ಗೃಹ ಸಚಿವಾಲಯದ ಅಧಿಕಾರಿಗಳು ಕೂಡ ಉಪಸ್ಥಿತರಿದ್ದರು.
ಪ್ರಧಾನಮಂತ್ರಿಗಳ ಸಭೆಯಲ್ಲಿ, ಹವಾಮಾನ ಇಲಾಖೆಯ ಅಧಿಕಾರಿಗಳು ಗುರುವಾರ ಮಧ್ಯಾಹ್ನ ಗುಜರಾತ್ ತೀರಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ 125-130 ಕಿ.ಮೀ ನಡುವೆ ವೇಗವಾಗಿ ಗಾಳಿ ಬೀಸಲಿದ್ದು, ಇದು 150 ಕಿ.ಮೀ ವರೆಗೆ ಹೆಚ್ಚಾಗಬಹುದು ಎಂದು ಅವರು ಹೇಳಿದ್ದಾರೆ. ಜೂನ್ 14-15 ರಂದು ಸೌರಾಷ್ಟ್ರ, ಕಚ್‌ನಲ್ಲಿ ಭಾರೀ ಮಳೆಯಾಗಲಿದೆ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಹಾನಿಯ ಸಂದರ್ಭದಲ್ಲಿ, ತಕ್ಷಣದ ಸಹಾಯಕ್ಕಾಗಿ ಸನ್ನದ್ಧತೆಯೊಂದಿಗೆ ವಿದ್ಯುತ್, ದೂರಸಂಪರ್ಕ, ಆರೋಗ್ಯ, ಕುಡಿಯುವ ನೀರು ಮುಂತಾದ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವುಗಳಿಗೆ ಹಾನಿಯಾದ ಸಂದರ್ಭದಲ್ಲಿ ಅವುಗಳನ್ನು ತಕ್ಷಣವೇ ಮರುಸ್ಥಾಪಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳನ್ನು ಸಿದ್ದವಿಡುವಂತೆ, ಅಗತ್ಯ ಪ್ರದೇಶಗಳಲ್ಲಿ ಜನರನ್ನು ಸ್ಥಳಾಂತರ ಮಾಡಲು ಮತ್ತು ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
ನವದೆಹಲಿ: ಅರಬ್ಬೀ ಸಮುದ್ರದ (Arabian Sea) ಕರಾವಳಿ (Coastal) ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ (Cyclone Biparjoy) ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ.
ಪ್ರಸ್ತುತ ಚಂಡಮಾರುತ ಗೋವಾದಿಂದ (Goa) ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿಯನ್ನು ಉಂಟುಮಾಡುತ್ತದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಶನಿವಾರ ಹಾಗೂ ಭಾನುವಾರ ಬಿಪರ್ಜೋಯ್ ಚಂಡಮಾರುತದ ಅಬ್ಬರ ಜೋರಾಗಲಿದೆ. ಗುಜರಾತ್, ಮಹಾರಾಷ್ಟ್ರದ ಕರಾವಳಿಯಲ್ಲಿ ಉಬ್ಬರದ ಭೀತಿಯಿದೆ. ರಾಜ್ಯ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಪ್ರಭಾವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಶಕ್ತಿ ಯೋಜನೆಗೆ ಭಾನುವಾರ ಚಾಲನೆ- ಬಸ್ ಕಂಡಕ್ಟರ್ ಆಗಲಿದ್ದಾರೆ ಸಿದ್ದರಾಮಯ್ಯ
ಚಂಡಮಾರುತದಿಂದಾಗಿ ಜೂನ್ 10, 11 ಹಾಗೂ 12ರಂದು ಗಾಳಿಯ ವೇಗ ಗಂಟೆಗೆ 45-55 ಕಿ.ಮೀಗೆ ಏರುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಲಘು ಮಳೆ ಹಾಗೂ ಗುಡುಗು ಸಹಿತ ಮಳೆ ಸುರಿಯಬಹುದು. ಇದನ್ನೂ ಓದಿ: ಉಡುಪಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ