ಭುವನೇಶ್ವರ/ಕೋಲ್ಕತ್ತಾ: ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ (Cyclone Dana) ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ (Odisha Coast) ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ.
ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ (West Bengal) ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.
#WATCH | Odisha: Turbulent sea, gusty winds and rainfall hit Dhamra, Bhadrak as an impact of #CycloneDana.
Around 5.84 lakh people have been evacuated till now to shelters, as per Chief Minister Mohan Charan Majhi. pic.twitter.com/RzdewkYhje
ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದೆ. ವಿಮಾನ ನಿಲ್ದಾಣವನ್ನು ಬಂದ್ ಮಾಡಿದ ಪರಿಣಾಮ ಸುಮಾರು 40 ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.
#WATCH | Odisha: Gusty winds and heavy downpour cause destruction in Dhamra, Bhadrak
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 400ಕ್ಕೂ ಹೆಚ್ಚು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಒಡಿಶಾದಲ್ಲಿ ಸುಮಾರು 6 ಲಕ್ಷ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
– ಕೋಲ್ಕತ್ತಾ, ಭುವನೇಶ್ವರ್ ಏರ್ಪೋಟ್ 16 ಗಂಟೆ ಬಂದ್
– 13 ಲಕ್ಷಕ್ಕೂ ಹೆಚ್ಚು ಮಂದಿ ಸ್ಥಳಾಂತರ
ಭುವನೇಶ್ವರ: ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ (Cyclone Dana) ತೀವ್ರ ಸ್ವರೂಪ ಪಡೆದಿದೆ.
ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಜೋರು ಗಾಳಿ ಸಹಿತ ಮಳೆ ಆಗ್ತಿದೆ. ಸಮುದ್ರ ಪ್ರಕ್ಷುಬ್ಧವಾಗಿದೆ. ಅತ್ಯಂತ ವೇಗದಲ್ಲಿ ಉತ್ತರ ವಾಯುವ್ಯ ದಿಕ್ಕಿನತ್ತ ತೂಫಾನ್ ಚಲಿಸ್ತಿದೆ. ಶುಕ್ರವಾರ ನಸುಕಿನ ಜಾವ ಬಿಟಾರ್ಕನಿಕಾ ನ್ಯಾಷನಲ್ ಪಾರ್ಕ್ ಮತ್ತು ಧಮ್ರಾ ಬಂದರು ನಡುವೆ ತೀರವನ್ನು ದಾನಾ ಚಂಡಮಾರುತ ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ವೇಳೆ ಗಂಟೆಗೆ 120 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಮುಂಜಾಗ್ರತಾ ಕ್ರಮವಾಗಿ ಕೊಲ್ಕೋತ್ತಾ ಮತ್ತು ಭುವನೇಶ್ವರ್ ಏರ್‌ಪೋರ್ಟ್‌ಗಳನ್ನು ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೂ ಬಂದ್ ಮಾಡಲಾಗಿದೆ. ಒಡಿಶಾ, ಬಂಗಾಳದಲ್ಲಿಯೂ ಹೈ ಅಲರ್ಟ್ ಪ್ರಕಟಿಸಲಾಗಿದೆ. 13 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸರ್ಕಾರ ಶಿಫ್ಟ್ ಮಾಡಿದೆ. 300ಕ್ಕೂ ಹೆಚ್ಚು ರೈಲುಗಳ ಸೇವೆಗಳಲ್ಲಿ ವ್ಯತ್ಯಯವಾಗ್ತಿದೆ.
ಪಶ್ಚಿಮ ಬಂಗಾಳ ಕಂಟ್ರೋಲ್ ರೂಮ್‌ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ನಿಗಾ ವಹಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕೋಲ್ಕತ್ತಾ: ಡಾನಾ ಚಂಡಮಾರುತದಿಂದ (Cyclone Dana) ಈಗ ಪಶ್ಚಿಮ ಬಂಗಾಳ (West Bengal) ಮತ್ತು ಒಡಿಶಾದಲ್ಲಿ (Odisha) ಬಲವಾದ ಗಾಳಿ ಬೀಸುತ್ತಿದೆ. ಬಲವಾಗಿ ಬೀಸುತ್ತಿರುವ ಗಾಳಿಯಿಂದ ರೈಲುಗಳು ಹಳಿಯಿಂದ ಜಾರದಂತೆ ಸರಪಳಿ ಮತ್ತು ಬೀಗಗಳ ಸಹಾಯದಿಂದ ರೈಲನ್ನು ಹಳಿಗೆ ಕಟ್ಟಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ರೈಲನ್ನು ಹಳಿಗೆ ಕಟ್ಟುತ್ತಿರುವ ವಿಡಿಯೋ ಲಭ್ಯವಾಗಿದೆ.
#WATCH | ‘Cyclone Dana’ | Howrah, West Bengal: As a precautionary measure, trains at the Shalimar railway station were tied to the railway track with the help of chains and locks to keep the trains from sliding away due to strong winds. pic.twitter.com/kEIpx0ILTi
ಕಟ್ಟಿದ್ದು ಯಾಕೆ?
ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಷ್ಟೊಂದು ವೇಗದಲ್ಲಿ ಗಾಳಿ ಬೀಸುವುದರಿಂದ ಬೋಗಿಗಳು ವಾಲುವ ಸಾಧ್ಯತೆ ಜಾಸ್ತಿ ಇರುತ್ತದೆ. ಜಾಸ್ತಿ ವಾಲಿದಾಗ ಚಕ್ರಗಳು ಸರಿದು ಪಲ್ಟಿಯಾಗುತ್ತದೆ. ಈ ರೀತಿ ಆಗದೇ ಇರಲು ಚಂಡಮಾರುತದ ಸಂರ್ಭದಲ್ಲಿ ರೈಲನ್ನು ಹಳಿಗೆ ಕಟ್ಟಲಾಗುತ್ತದೆ.
ಡಾನಾ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 300ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ (Express Trains) ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ (Indian Railways) ರದ್ದುಗೊಳಿಸಿದೆ. ಇದನ್ನೂ ಓದಿ: Dana Cyclone | ಒಡಿಶಾ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ 10 ಲಕ್ಷ ಜನರ ಸ್ಥಳಾಂತರ
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 23 ಮತ್ತು ಅಕ್ಟೋಬರ್ 25 ರ ನಡುವೆ ಸಂಚರಿಸುವ ರೈಲುಗಳನ್ನು ರದ್ದುಗೊಳಿಸುವುದಾಗಿ ಆಗ್ನೇಯ ರೈಲ್ವೆ ವಲಯದ (SER) ಪ್ರಕಟಿಸಿದೆ.
ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋದರೆ ಆಗ್ನೇಯ ರೈಲ್ವೆ ವಲಯದ ಮತ್ತಷ್ಟು ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ಪೂರ್ವ ರೈಲ್ವೆ ಅಕ್ಟೋಬರ್ 24 ರಿಂದ 25 ರವರೆಗೆ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ (Bay of engal) ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.
ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಪುರಿ ಮತ್ತು ಸಾಗರ್ ದ್ವೀಪದ ನಡುವೆ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತದಿಂದ (Cyclone Dana) ಆಂಧ್ರಪ್ರದೇಶ (Andhra Pradesh), ಒಡಿಶಾ (Odisha), ಪಶ್ಚಿಮ ಬಂಗಾಳ (West Bengal) ಮತ್ತು ತಮಿಳುನಾಡಿಗೆ (Tamil Nadu) ಅಪಾಯವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚಂಡಮಾರುತವಾಗಿ ಬದಲಾಗಿರುವ ಡಾನಾ ಗುರುವಾರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ರಾತ್ರಿ ವೇಳೆಗೆ ಒಡಿಶಾದ ಪುರಿ ಮತ್ತು ಬಂಗಾಳದ ಸಾಗರ ದ್ವೀಪದ ನಡ್ವೆ ತೀರ ದಾಟಬಹುದು ಎಂದು ಅಂದಾಜಿಸಲಾಗಿದೆ. ಒಂದೊಮ್ಮೆ ಚಂಡಮಾರುತ ಪಥ ಬದಲಿಸಿದರೆ ಬಾಂಗ್ಲಾ ದೇಶಕ್ಕೆ ಅಪಾಯ ಎದುರಾಗಬಹುದು ಎನ್ನಲಾಗಿದೆ.
ಒಡಿಶಾ, ಆಂಧ್ರ, ಬಂಗಾಳ ಮತ್ತು ತಮಿಳುನಾಡಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 40ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. 200ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಿಸಲಾಗಿದೆ.
ಒಡಿಶಾದಲ್ಲಿ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ತಮಿಳುನಾಡಿನಲ್ಲಿ ಈಶಾನ್ಯ ಮಾರುತಗಳು ಚುರುಕಾಗಿ ಚಲಿಸುತ್ತಿರುವುದರಿಂದ ಕರ್ನಾಟಕ ಸೇರಿ ವಿವಿಧೆಡೆ ಮಳೆಯಾಗುತ್ತಿದೆ.
ಕೋಲ್ಕತ್ತಾ: ಡಾನಾ ಚಂಡಮಾರುತ (Cyclone Dana ) ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ (Odisha) ಮತ್ತು ಪಶ್ಚಿಮ ಬಂಗಾಳದ (West Bengal) ಕರಾವಳಿ ಭಾಗದಲ್ಲಿ ಸಂಚರಿಸುವ 150 ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ (Express Trains) ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ (Indian Railways) ರದ್ದುಗೊಳಿಸಿದೆ.
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 23 ಮತ್ತು ಅಕ್ಟೋಬರ್ 25 ರ ನಡುವೆ ಸಂಚರಿಸುವ ರೈಲುಗಳನ್ನು ರದ್ದುಗೊಳಿಸುವುದಾಗಿ ಆಗ್ನೇಯ ರೈಲ್ವೆ ವಲಯದ (SER) ಪ್ರಕಟಿಸಿದೆ. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ನಡೆಯಲಿದೆ ಮೋದಿ-ಜಿನ್‌ಪಿಂಗ್ ದ್ವಿಪಕ್ಷೀಯ ಸಭೆ
ಬಂಗಾಳ ಕೊಲ್ಲಿಯಲ್ಲಿ (Bay of engal) ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: THAAD ಎಂದರೇನು? ಇಸ್ರೇಲ್‌ಗೆ ಅಮೆರಿಕ ಕಳುಹಿಸಿದ್ದು ಯಾಕೆ?
ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.
ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಪುರಿ ಮತ್ತು ಸಾಗರ್ ದ್ವೀಪದ ನಡುವೆ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ.
– ಏನಿದು ಡಾನಾ ಚಂಡಮಾರುತ? – ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು?
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರ ಪ್ರದೇಶಗಳಿಗೆ ʻಡಾನಾʼ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂಗಾರು ಮಳೆ ಋತುವಿನ ನಂತರ ಉಷ್ಣವಲಯದ ಮೊದಲ ಚಂಡಮಾರುತ ಇದಾಗಿದೆ.
ಪೂರ್ವ– ಮಧ್ಯ ಬಂಗಾಳಕೊಲ್ಲಿ (Bengal) ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅಂದ್ರೆ ಅಕ್ಟೋಬರ್ 23ರ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ. ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ (ಅ.24) ರಾತ್ರಿ ಅಥವಾ ಶುಕ್ರವಾರ (ಅ.25) ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ವರ್ಗೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಮತ್ತು ಬಂಗಾಳದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಿದೆ. ಹಲವೆಡೆ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತವನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಸಕಲ ತಯಾರಿ ಮಾಕೊಳ್ಳುತ್ತಿದೆ. ಅಷ್ಟಕ್ಕೂ ಡಾನಾ ಚಂಡ ಮಾರುತ ಎಂದರೇನು? ಡಾನಾ ಹೆಸರು ಬಂದಿದ್ದು ಹೇಗೆ? ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು? ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ… ಅದಕ್ಕೂ ಮುನ್ನ ʻಚಂಡಮಾರುತʼ ಎಂದರೇನು? ಎಂಬುದನ್ನು ನೋಡೋಣ….
ಚಂಡಮಾರುತ ಎಂದರೇನು?
ಚಂಡಮಾರುತ ಎಂಬುದು ಹವಾಮಾನಕ್ಕೆ ಸಂಬಂಧಿಸಿದ ಒಂದು ವಿದ್ಯಮಾನ. ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗಾಳಿ ಜೋರಾಗಿ ಪ್ರದಕ್ಷಿಣೆ ಇಲ್ಲವೇ ಅಪ್ರದಕ್ಷಿಣಾ ಪಥದಲ್ಲಿ ಸುರುಳಿ ಸುತ್ತುತ್ತಾ ಕಡಿಮೆ ಒತ್ತಡ ಇರುವ ಪ್ರದೇಶದತ್ತ ಮುನ್ನುಗ್ಗುವುದೇ ಚಂಡಮಾರುತ.
ʻಡಾನಾʼ ಎಂದರೇನು?
ಡಾನಾ ಎಂಬುದು ಅರೇಬಿಕ್ ಪದವಾಗಿದೆ. ಡಾನಾ ಎಂದರೆ ಅಮೂಲ್ಯ ಮತ್ತು ಸುಂದರವಾದ ಮುತ್ತು ಎಂದು ಹೆಸರು. ಈ ಹೆಸರನ್ನು ಪರ್ಷಿಯನ್ ಮತ್ತು ಕೊಲ್ಲಿಯ ಅರಬ್ ರಾಷ್ಟ್ರಗಳಲ್ಲಿ ಬಳಸಲಾಗುತ್ತದೆ. ಅಲ್ಲಿ ಪರ್ಲ್ ಡೈವಿಂಗ್ (ಸಮುದ್ರದಾಳದಲ್ಲಿ ಮುತ್ತು ಹುಡುಕುವ ಕೆಲಸ) ಮಹತ್ವದ ವೃತ್ತಿಯಾಗಿದೆ. ಪರ್ಷಿಯನ್ ಭಾಷೆಯಲ್ಲಿ ʻಡಾನಾʼ ಎಂದರೆ ದಾನಾ, ಅನುದಾನ, ಮುಂತಾದ ಅರ್ಥಗಳನ್ನು ಸೂಚಿಸುತ್ತದೆ. ಉಷ್ಣವಲಯದ ಚಂಡಮಾರುತಗಳಿಗೆ ಅಂತಾರಾಷ್ಟ್ರೀಯವಾಗಿ ಹೆಸರಿಸುವ ವ್ಯವಸ್ಥೆಯ ಭಾಗವಾಗಿ ಕತಾರ್ ಈ ಹೆಸರನ್ನಿಟ್ಟಿದೆ.
ಚಂಡಮಾರುತಗಳಿಗೆ ಹೆಸರಿಡಲು ಕಾರಣ ಏನು?
ಹಿಂದೂ ಮಹಾಸಾಗರದಲ್ಲಿ ಹುಟ್ಟುವ ಚಂಡಮಾರುತಗಳಿಗೆ ಹೆಸರಿಡುವ ಪ್ರಕ್ರಿಯೆ ಆರಂಭವಾಗಿದ್ದು 2000ನೇ ಇಸವಿಯಿಂದ. 2000ನೇ ಇಸವಿಯಲ್ಲಿ ಬಾಂಗ್ಲಾದೇಶ, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ಒಮನ್, ಪಾಕಿಸ್ತಾನ, ಶ್ರೀಲಂಕಾ ಮತ್ತು ಥೈಲ್ಯಾಂಡ್ ದೇಶಗಳನ್ನು ಒಳಗೊಂಡ WMO/ESCAP (ವಿಶ್ವ ಹವಾಮಾನ ಸಂಸ್ಥೆ/ಯುನೈಟೆಡ್ ನೇಷನ್ಸ್ ಎಕನಾಮಿಕ್ ಅಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಮತ್ತು ಪೆಸಿಫಿಕ್) ಎಂಬ ಗುಂಪು ಚಂಡಮಾರುತಗಳಿಗೆ ಹೆಸರಿಡಲು ಪ್ರಾರಂಭಿಸಿತು. 2018ರಲ್ಲಿ WMO/ESCAP ಗುಂಪು ವಿಸ್ತರಿಸಿದ್ದರಿಂದ ಈ ಒಕ್ಕೂಟಕ್ಕೆ ಇರಾನ್, ಕತಾರ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯೆಮೆನ್ ರಾಷ್ಟ್ರಗಳು ಸೇರ್ಪಡೆಯಾದವು. ಈ ಗುಂಪಿನ 13 ರಾಷ್ಟ್ರಗಳು ತಲಾ 13 ಹೆಸರುಗಳನ್ನ ಪಟ್ಟಿ ಮಾಡಿ ಸಲಹೆ ರೂಪದಲ್ಲಿ ಕಳುಹಿಸಿದ ನಂತರ WMO/ESCAP ಪ್ಯಾನೆಲ್ ಆನ್ ಟ್ರಾಪಿಕಲ್ ಸೈಕ್ಲೋನ್ಸ್ (PTC) ಪಟ್ಟಿಯನ್ನು ಅಂತಿಮಗೊಳಿಸಿತು. ಬಳಿಕ 2020ರ ಏಪ್ರಿಲ್‌ನಲ್ಲಿ ಭಾರತೀಯ ಹಮಾವಾನ ಇಲಾಖೆ 169 ಚಂಡಮಾರುತ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.
ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು?
ಚಂಡಮಾರುತಗಳಿಗೆ ಹೆಸರಿಡುವುದರಿಂದ ಸುಲಭವಾಗಿ ಗುರುತಿಸಬಹುದು. ಚಂಡಮಾರುತಗಳನ್ನು ಸುಲಭವಾಗಿ ಗುರುತಿಸಲು ಮತ್ತು ಹವಾಮಾನ-ಸಂಬಂಧಿತ ಅಪಾಯಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಸಹಾಯಕವಾಗುತ್ತದೆ. ವಿಪತ್ತು ನಿರ್ವಹಣೆ, ವೈಜ್ಞಾನಿಕ ವಿಷಯಗಳನ್ನ ಸರಳವಾಗಿ ಅರ್ಥೈಸಿಕೊಂಡು ವಿಪತ್ತು ನಿರ್ವಹಣೆಗೆ ಪೂರಕವಾಗಿ ಕೆಲಸ ಮಾಡಬಹುದು.
ಚಂಡಮಾರುತ ಎದುರಿಸಲು ಒಡಿಶಾ ಸರ್ಕಾರ ಕೈಗೊಂಡಿರುವ ಕ್ರಮಗಳೇನು?
1. ಪ್ರವಾಸಿಗಳು ಮತ್ತು ಯಾತ್ರಾರ್ಥಿಗಳಿಗೆ ಅಕ್ಟೋಬರ್ 23ಕ್ಕೆ ಮುಂಚಿತವಾಗಿ ಪುರಿಯಿಂದ ಹೊರಡುವಂತೆ ಸೂಚನೆ ನೀಡಲಾಗಿದೆ.
2. ಅ.23 ರಿಂದ 25ರ ವರೆಗೆ ಮುನ್ನೆರಿಕಾ ಕ್ರಮವಾಗಿ 14 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
3. ಅಕ್ಟೋಬರ್ 23 ರಿಂದ 25ರ ವರೆಗೆ ಎಲ್ಲಾ ರಕ್ಷಣಾ ಸಿಬ್ಬಂದಿಗೆ ರಜೆ ಕಡಿತಗೊಳಿಸಿದೆ
4. ಅಣುಕು ಕಾರ್ಯಾಚರಣೆ ಮೂಲಕ ಜಾಗೃತಿ ಮೂಡಿಸುತ್ತಿದೆ
5. ಡಾನಾ ಚಂಡಮಾರುತಕ್ಕೆ ತುತ್ತಾಗುವ ಸಂಭಾವ್ಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
6. 10 ಜಿಲ್ಲೆಗಳಲ್ಲಿ ಒಟ್ಟು 17 ಒಡಿಆರ್‌ಎಎಫ್ ತಂಡಗಳನ್ನು ನಿಯೋಜಿಸಲು ಮುಂದಾಗಿದೆ. ಜೊತೆಗೆ ಮೂರು ODRAF ತಂಡಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗುತ್ತಿದೆ.
7. ಪಶ್ಚಿಮ ಬಂಗಾಳದಲ್ಲೂ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಸೇನೆಯ ರಕ್ಷಣಾ ತಂಡ, ಕೋಸ್ಟ್ ಗಾರ್ಡ್ ತಂಡಗಳೂ ಫೀಲ್ಡಿಗಿಳಿದಿವೆ.
800ಕ್ಕೂ ಹೆಚ್ಚು ಪರಿಹಾರ ಕೇಂದ್ರ ಸ್ಥಾಪನೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೀವ್ರ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು 250ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ್ದು, ರಕ್ಷಣಾ ಸಿಬ್ಬಂದಿ ಹಾಗೂ ನೌಕರರಿಗೆ ಅಗತ್ಯ ಸೂಚನೆಗಳನ್ನು ಕೊಟ್ಟಿದ್ದಾರೆ.
ಒಡಿಶಾ, ಬಂಗಾಳದಲ್ಲಿ ಸರ್ಕಾರಗಳು ಫುಲ್ ಅಲರ್ಟ್
ಎರಡೂ ರಾಜ್ಯಗಳು ಚಂಡಮಾರುತ ಎದುರಿಸಲು ನಾನಾ ಕ್ರಮಗಳನ್ನು ಕೈಗೊಂಡಿವೆ. ಈಗಾಗಲೇ ಕರಾವಳಿ ಪ್ರದೇಶಗಳಲ್ಲಿರುವ ಜನರನ್ನು ಸ್ಥಳಾಂತರಿಸಲು ಮುಂದಾಗಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿವೆ. ಗಂಜಾಂ, ಪುರಿ, ಜಗತ್‌ಸಿಂಗ್‌ಪುರ್, ಕೇಂದ್ರಪಾರ, ಭದ್ರಕ್, ಬಾಲಸೋರ್, ಮಯೂರ್‌ಭಂಜ್, ಕಿಯೋಂಜರ್, ಧೆಂಕನಲ್, ಜಾಜ್‌ಪುರ್, ಅಂಗುಲ್, ಖೋರ್ಧಾ, ನಯಾಗರ್ ಮತ್ತು ಕಟಕ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಕರಾವಳಿ ಪ್ರದೇಶಗಳಲ್ಲಿ ಹೆದ್ದಾರಿ ಮತ್ತು ರೈಲು ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.
ಗುರುವಾರ ಒಡಿಶಾದ ಪುರಿ, ಖುರ್ದಾ, ಗಂಜಾಂ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷನೆ ಮಾಡಿದೆ. ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್ ಮತ್ತು ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ಬುಧವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಸ್ಥಳಾಂತರಗೊಂಡ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಪ್ರಮಾಣದ ದಾಸ್ತಾನು, ನೀರು ಇತ್ಯಾದಿ ಸೌಲಭ್ಯಗಳನ್ನು ಸೈಕ್ಲೋನ್ ಶೆಲ್ಟರ್‌ಗಳಲ್ಲಿ ಸಂಗ್ರಹಿಸಿಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಶೂನ್ಯ ಅಪಘಾತ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಗಣ್ಯರ ಭೇಟಿಯೂ ರದ್ದು
ಡಾನಾ ಚಂಡಮಾರುತ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೂರು ದಿನಗಳ ಒಡಿಶಾ ಭೇಟಿಯು ರದ್ದಾಗಿದೆ. ರಾಷ್ಟ್ರಪತಿಗಳು ಒಡಿಶಾದ ಬಂಗ್ರಿಪೋಸಿ, ಉಪರಬೇಡ, ರಾಯರಂಗಪುರ, ಪುರಿ ಮತ್ತು ಭುವನೇಶ್ವರಕ್ಕೆ ಭೇಟಿ ನೀಡಬೇಕಿತ್ತು. ಜೊತೆಗೆ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 450 ಕೋಟಿ ರೂಪಾಯಿ ವೆಚ್ಚದ ಆಧುನಿಕ ಪ್ರಯಾಣಿಕ ಟರ್ಮಿನಲ್ ಅನ್ನು ಉದ್ಘಾಟಿಸಲು ಬುಧವಾರ ಪಶ್ಚಿಮ ಬಂಗಾಳದ ಪೆಟ್ರಾಪೋಲ್‌ಗೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಕೂಡ ಚಂಡಮಾರುತದಿಂದಾಗಿ ರದ್ದಾಗಿದೆ.
– ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ ಸಾಧ್ಯತೆ – 14 ಎನ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಿದ ಕೇಂದ್ರ
ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ (Bay of engal) ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.
ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.
ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ (Odisha Puri) ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ರಷ್ಯಾವನ್ನು ಹಾಡಿ ಹೊಗಳಿ ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್
ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ವರ್ಗೀಕರಿಸಲಾಗಿದೆ.
ಪುರಿ, ಭುವನೇಶ್ವರ, ಜಗತ್‌ಸಿಂಗ್‌ಪುರ, ಕೇಂದ್ರಪಾರಾ, ಭದ್ರಕ್, ಬಾಲಸೋರ್, ಜಾಜ್‌ಪುರ್, ಧೆಂಕನಲ್, ಕೆಂದುಜಾರ್ ಮತ್ತು ಮಯೂರ್‌ಭಂಜ್ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ರಕ್ಷಣಾ ಮತ್ತು ಪರಿಹಾರ ಸಿದ್ಧತೆಗಳನ್ನು ಪರಿಶೀಲಿಸಲು ಸಭೆಯನ್ನು ಕರೆದಿದೆ.
ಸಂಭಾವ್ಯ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಒಟ್ಟು 14 NDRF ತಂಡಗಳನ್ನು ಪಶ್ಚಿಮ ಬಂಗಾಳದಲ್ಲಿ ಮತ್ತು 11 ಒಡಿಶಾದಲ್ಲಿ ನಿಯೋಜಿಸಲಾಗಿದೆ. ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರು ಆಸ್ತಿ, ಪಾಸ್ತಿ ನಷ್ಟವನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎರಡೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.