Tag: Cyclone Fengal

  • Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    – 500ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
    – ವಿಮಾನ, ರೈಲು ಸಂಚಾರದಲ್ಲಿ ವಿಳಂಬ

    ಚೆನ್ನೈ: ತಮಿಳುನಾಡಿಗೆ (Tamil Nadu) ಅಪ್ಪಳಿಸಿರುವ ಫೆಂಗಲ್‌ ಚಂಡಮಾರುತ ಹಲವು ಅವಾಂತರಗಳನ್ನ ತಂದೊಡ್ಡಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆ ಉಂಟಾಗಿದೆ, ಇದರಿಂದ ಹಲವು ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದೆ. ಅಲ್ಲದೇ ವಿಮಾನ, ರೈಲು, ಬಸ್‌ ಸೇರಿದಂತೆ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡಿದೆ. ಚೆನ್ನೈ ಏರ್‌ಪೋರ್ಟ್‌ನಲ್ಲಿ (Chennai Airport) ವಿಮಾನವೊಂದು ಲ್ಯಾಂಡಿಂಗ್‌ಗಾಗಿ ಪರದಾಡಿದ ಪ್ರಸಂಗವೂ ಕಂಡುಬಂದಿದೆ.

    ಚೆನ್ನೈನಲ್ಲಿ ಸಂಭವಿಸಿದ ಮಳೆಯಿಂದಾಗಿ ವಿವಿಧೆಡೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮೂವರಲ್ಲಿ ಓರ್ವ ವಲಸೆ ಕಾರ್ಮಿಕ ಮತ್ತೊಬ್ಬರು ಎಟಿಎಂನಿಂದ (ATM) ಹಣ ಡ್ರಾ ಮಾಡಲು ಹೋದಾಗ, ಮತ್ತೊಬ್ಬರು ಹೆಣವಾಗಿ ತೇಲುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    ಎಲ್ಲೆಲ್ಲಿ ಎಷ್ಟು ಮಳೆ?
    ಕೇಂದ್ರಾಡಳಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 8.30ರಿಂದ ಸಂಜೆ 6ರ ವರೆಗೆ ಸುಮಾರು 10 ಸೆಂ.ಮೀ ಮಳೆ ದಾಖಲಾಗಿದೆ. ಇನ್ನೂ ಪ್ರದೇಶವಾರು ನೋಡುವುದಾದರೆ ವಿಲ್ಲುಪುರಂ – ಮೈಲಾಮ್‌ನಲ್ಲಿ 498 ಎಂ.ಎಂ, ಪಾಂಡೀಚೇರಿ – 469 ಎಂಎಂ, ಕೂಡ್ಲೂರೆ – 179 ಎಂಎಂ, ತಿರುವಣ್ಣಾಮಲೈ – ತಿರುವಣ್ಣಾಮಲೈ ಇಸ್ರೋ – 176 ಎಂಎಂ, ತಿರುವಣ್ಣಾಮಲೈ – ಚೆಯ್ಯರ್ – 160 ಎಂಎಂ, ತಿರುವಳ್ಳುವರ್ – ಆರ್‌ಕೆ ಪೇಟೆ – 124 ಎಂಎಂ, ತಿರುವಳ್ಳುವರ್ – ಕೊಲ್ಲಪಕ್ಕಂ – 120 ಎಂಎಂ ಮಳೆಯಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

    100ಕ್ಕೂ ಅಧಿಕ ಜನರ ರಕ್ಷಣೆ:
    ಮಳೆಯ ಅವಾಂತರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೇರಿಯ ಕೃಷ್ಣನಗರದ ಕೆಲವು ಪ್ರದೇಶಗಳಲ್ಲಿ 5 ಅಡಿಗಳಷ್ಟು ಎತ್ತರಕ್ಕೆ ನೀರು ಹರಿಯುತ್ತಿದ್ದು, ಸುಮಾರು 500 ಮನೆಗಳು ಜಲಾವೃತವಾಗಿವೆ. ಇದರಿಂದ ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಭಾರತೀಯ ಸೇನೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ ಭಾರತೀಯ ಸೇನೆ 100ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದೆ ಎಂದು ವರದಿ ಹೇಳಿದೆ.

    ಸಿಎಂ, ಡಿಸಿಎಂ ಮೇಲ್ವಿಚಾರಣೆ:
    ಇನ್ನೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಅನುಷ್ಠಾನಗೊಳಿಸುತ್ತಿರುವ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ‌, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರವಾಹ ಪರಿಸ್ಥಿತಿಯ ನಗ್ಗೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳ ಉನ್ನತಮಟ್ಟದ ಸಭೆ ಕರೆಯಲಾಗಿದೆ. ಇದನ್ನೂ ಓದಿ: ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

  • ಫೆಂಗಲ್‌ ಅಬ್ಬರ; ಚೆನ್ನೈನ ಎಟಿಎಂ ಬಳಿ ವಿದ್ಯುತ್‌ ಪ್ರವಹಿಸಿ ವ್ಯಕ್ತಿ ಸಾವು – ಪ್ರವಾಹದ ನೀರಿನಲ್ಲಿ ತೇಲಿದ ಶವ

    ಫೆಂಗಲ್‌ ಅಬ್ಬರ; ಚೆನ್ನೈನ ಎಟಿಎಂ ಬಳಿ ವಿದ್ಯುತ್‌ ಪ್ರವಹಿಸಿ ವ್ಯಕ್ತಿ ಸಾವು – ಪ್ರವಾಹದ ನೀರಿನಲ್ಲಿ ತೇಲಿದ ಶವ

    ಚೆನ್ನೈ: ಪ್ರವಾಹಕ್ಕೆ ಸಿಲುಕಿದ ಚೆನ್ನೈನ (Chennai) ಎಟಿಎಂ ಬಳಿ ವಿದ್ಯುತ್‌ ಪ್ರವಹಿಸಿ ವ್ಯಕ್ತಿಯ ಶವ ತೇಲುತ್ತಿರುವುದು ಪತ್ತೆಯಾಗಿದೆ.

    ಮೃತದೇಹವೊಂದು ತೇಲುತ್ತಿತ್ತು. ಕೆಲವರು ಮೃತದೇಹವನ್ನು ಮರದ ಕಂಬದಿಂದ ದೂಡಿದರು. ನಂತರ ಚೆನ್ನೈನ ಎಟಿಎಂನ ಹೊರಗೆ ಪ್ರವಾಹದ ನೀರಿನಿಂದ ದೇಹವನ್ನು ಹೊರತೆಗೆಯಲಾಯಿತು. ಈ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: Cyclone Fengal | ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು

    ಇದುವರೆಗೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

    ಫೆಂಗಲ್‌ ಎಂಬ ಪ್ರಬಲ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ವಾರದ ಆರಂಭದಲ್ಲಿ ಶ್ರೀಲಂಕಾದ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತದಿಂದ ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಬಲಿಯಾಗಿದ್ದಾರೆ.

    ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಜೆ 7 ಗಂಟೆಯ ವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ನಗರದ ಹಲವೆಡೆ ಜಲಾವೃತವಾಗಿರುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    – ಶಾಲಾ, ಕಾಲೇಜುಗಳು ಬಂದ್‌
    – 2,229 ಪರಿಹಾರ ಕೇಂದ್ರಗಳ ಸ್ಥಾಪನೆ
    – ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತ (Cyclone Fengal) ತೀವ್ರತೆ ಪಡೆದಿದ್ದು, ಶನಿವಾರ (ಇಂದು) ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು (Tamil Nadu) ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

    ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೊತೆಗೆ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಅದಾನಿ ಬಂಧನಕ್ಕೆ ಅಮೆರಿಕದಿಂದ ಯಾವುದೇ ವಿನಂತಿ ಸ್ವೀಕರಿಸಿಲ್ಲ: ಕೇಂದ್ರ

    ಅಲ್ಲದೇ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ಅನುದಾನ ಕೋರಿದ ಡಿಕೆಶಿ: ಏನೇನು ಮನವಿ ಮಾಡಲಾಗಿದೆ?

    ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್‌ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ. ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

    2,229ರ ಪರಿಹಾರ ಶಿಬಿರ ಸ್ಥಾಪನೆ:
    ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ. ಸಂಭವನೀಯ ಪ್ರವಾಹದ ನಿರೀಕ್ಷೆಯಲ್ಲಿ ಸ್ಥಳೀಯ ಅಧಿಕಾರಿಗಳು ಮೋಟಾರ್‌ ಪಂಪ್‌ಗಳು, ಜನರೇಟರ್‌ಗಳು ಮತ್ತು ದೋಣಿಗಳು ಸೇರಿದಂತೆ ಅಗತ್ಯ ಸಾಧನಗಳನ್ನು ಚೆನ್ನೈ, ಕಡಲೂರು ಮತ್ತು ಮೈಲಾಡುತುರೈ ಮುಂತಾದ ಪೀಡಿತ ಪ್ರದೇಶಗಳಿಗೆ ನಿಯೋಜಿಸಿದ್ದಾರೆ.

    ಶ್ರೀಲಂಕಾದಲ್ಲಿ 12 ಸಾವು:
    ಶ್ರೀಲಂಕಾದಲ್ಲೂ ಫೆಂಗಲ್‌ ಹಾವಳಿಗೆ ಜನರು ತತ್ತರಿಸಿದ್ದು, 3 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಮಳೆ ಸಂಬಂಧಿತ ದುರ್ಘ‌ಟನೆಗಳಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹೈಕೋರ್ಟ್‌ಗೆ ತೆರಳುವಂತೆ ಶಾಹಿ ಈದ್ಗಾ ಸಮಿತಿಗೆ ಸೂಚನೆ; ʻಹೈʼಆದೇಶ ಬರೋವರೆಗೆ ಮಸೀದಿ ಸಮೀಕ್ಷೆಗೆ ಸುಪ್ರೀಂ ತಡೆ