Tag: cylinder blast

  • ಕಿತ್ತಗಾನಹಳ್ಳಿ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಓರ್ವ ಚಿಕಿತ್ಸೆ ಫಲಿಸದೇ ಸಾವು

    ಕಿತ್ತಗಾನಹಳ್ಳಿ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಓರ್ವ ಚಿಕಿತ್ಸೆ ಫಲಿಸದೇ ಸಾವು

    ಆನೇಕಲ್: ಇಲ್ಲಿನ ಕಿತ್ತಗಾನಹಳ್ಳಿಯಲ್ಲಿ (Kittaganahalli) ನಡೆದಿದ್ದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಗೊಂಡಿದ್ದ ಓರ್ವ ವ್ಯಕ್ತಿ ಇಂದು (ಜ.10) ಸಾವನ್ನಪ್ಪಿದ್ದಾನೆ.

    ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ವಿಷ್ಣು ಜಯರಾಜ್(30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಆತ್ಮಹತ್ಯೆ

    ಸಿಲಿಂಡರ್ ಸ್ಫೋಟದ ವೇಳೆ ಮನೆಯಲ್ಲಿ ವಾಸವಾಗಿದ್ದ ಇಬ್ಬರು ಗಾಯಗೊಂಡಿದ್ದರು. ಇಬ್ಬರ ಪೈಕಿ ಓರ್ವ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ. ಗಾಯಾಳುಗಳಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಷ್ಣು ದೇಹದ ಬಹುತೇಕ ಭಾಗಗಳಿಗೆ ಗಾಯವಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಘಟನೆ ಏನು?
    ಜ.06 ರಂದು ಬೊಮ್ಮಸಂದ್ರ (Bommasandra) ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರವಾಗಿತ್ತು. ಜಯನಗರ ಮೂಲದ ಸುನಿಲ್ ಎಂಬವರಿಗೆ ಸೇರಿದ್ದ ಕಟ್ಟಡದಲ್ಲಿ ಇಬ್ಬರು ವಾಸವಾಗಿದ್ದರು. ಕೆಲಸಕ್ಕೆ ಹೋಗಲು ಒಬ್ಬರು ಸ್ನಾನ ಮಾಡುತ್ತಿದ್ದರಂತೆ. ಇದೇ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಇನ್ನೋರ್ವ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದ. ಸ್ಫೋಟದ ತೀವ್ರತೆಗೆ ಕಟ್ಟಡದ ಹಾಲೋ ಬ್ಲಾಕ್‌ಗಳು ಹಾರಿಹೋಗಿದ್ದವು. ಜೊತೆಗೆ ಬಿಲ್ಡಿಂಗ್ ನಾಲ್ಕು ಪಿಲ್ಲರ್‌ಗಳು ಕೂಡ ಛಿದ್ರಗೊಂಡಿದ್ದವು. ಇದರ ಪರಿಣಾಮ ನಾಲ್ಕು ಬಿಲ್ಡಿಂಗ್, 3 ಕಾರು, 6 ದ್ವಿಚಕ್ರ ವಾಹನಗಳು ಹಾನಿಗೊಳಗಾಗಿದ್ದವು.ಇದನ್ನೂ ಓದಿ: ವೈಕುಂಠ ಏಕಾದಶಿ- ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

     

  • ಗಂಗಾವತಿಯಲ್ಲಿ ಬೆಂಕಿ ಅವಘಡ – ನಾಲ್ವರ ಜೀವ ಉಳಿಸಿದ ಸಾಕು ನಾಯಿ

    ಗಂಗಾವತಿಯಲ್ಲಿ ಬೆಂಕಿ ಅವಘಡ – ನಾಲ್ವರ ಜೀವ ಉಳಿಸಿದ ಸಾಕು ನಾಯಿ

    ಕೊಪ್ಪಳ: ಇಲ್ಲಿನ ಗಂಗಾವತಿಯಲ್ಲಿ (Gangavathi) ಬೆಂಕಿ ಅವಘಡ ಸಂಭವಿಸಿದ್ದು, ಈ ವೇಳೆ ಸಾಕು ನಾಯಿ ನಾಲ್ವರ ಜೀವ ಉಳಿಸಿದ ಘಟನೆ ಮಹಾವೀರ ಸರ್ಕಲ್ ಸಮೀಪದ ಅಂಗಡಿಯಲ್ಲಿ ಸಂಭವಿಸಿದೆ.

    ಅಗ್ನಿ ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದು, ಸುತ್ತಮುತ್ತಲಿನ ನಾಲ್ಕೈದು ಅಂಗಡಿಗಳು ಬೆಂಕಿಗಾಹುತಿಯಾಗಿವೆ.ಇದನ್ನೂ ಓದಿ:  ರಿಯಲ್ ಎಸ್ಟೇಟ್ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸೊಲ್ಲ- ಸಿಎಂ ಎಚ್ಚರಿಕೆ

    ಚಿನಿವಾಲರ ಆಸ್ಪತ್ರೆಯ ಎದುರುಗಡೆ ಇರುವ ಹೋಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನಂದಿಸಲು ಸಾಧ್ಯವಾಗಿಲ್ಲ. ಇದರಿಂದ ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದ ಮನೆಗೂ ಕೂಡ ಆವರಿಸಿದೆ. ಈ ವೇಳೆ ಸಾಕಿದ್ದ ನಾಯಿ ಜೋರಾಗಿ ಬೊಗಳುವ ಮೂಲಕ ಮಾಲೀಕರನ್ನು ಎಬ್ಬಿಸಿ ಪ್ರಾಣಾಪಾಯದಿಂದ ಪಾರು ಮಾಡಿದೆ.

    ಇದೇ ವೇಳೆ ಬೆಂಕಿಯಿಂದಾಗಿ ಹೋಟೆಲ್‌ನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಹೋಟೆಲ್, ಮನೆಯಲ್ಲಿರುವ ಧಾನ್ಯಗಳು, ಬಟ್ಟೆಗಳು ಹಾಗೂ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸಲು ಮುಂದಾಗಿದ್ದಾರೆ.

    ಸಿಲಿಂಡರ್ ಸ್ಫೋಟಗೊಂಡಿದ್ದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಗಾವತಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಅವಿವಾಹಿತ ಜೋಡಿಗೆ ಓಯೋ ರೂಮ್‌ ನಿರ್ಬಂಧ – ಬೆಂಗಳೂರಲ್ಲೂ ನಿಯಮ ಜಾರಿಗೆ ಬಜರಂಗದಳ ಮನವಿ

     

  • ಆನೇಕಲ್‌ನಲ್ಲಿ ಸಿಲಿಂಡರ್ ಸ್ಫೋಟ – ತೀವ್ರತೆಗೆ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರ

    ಆನೇಕಲ್‌ನಲ್ಲಿ ಸಿಲಿಂಡರ್ ಸ್ಫೋಟ – ತೀವ್ರತೆಗೆ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರ

    – ನಾಲ್ಕು ಬಿಲ್ಡಿಂಗ್, 3 ಕಾರು, 6 ದ್ವಿಚಕ್ರವಾಹನಗಳಿಗೆ ಹಾನಿ

    ಆನೇಕಲ್: ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರವಾಗಿರುವ ಘಟನೆ ಬೊಮ್ಮಸಂದ್ರ (Bommasandra) ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ನಡೆದಿದೆ.

    ಗಾಯಾಳುಗಳನ್ನು ಕೇರಳ ಮೂಲದ ವಿಶ್ವ ಹಾಗೂ ತಮಿಳುನಾಡು ಮೂಲದ ಸುನಿಲ್ ಜಾದವ್ ಎಂದು ಗುರುತಿಸಲಾಗಿದ್ದು, ನಾರಾಯಣ ಹೃದಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಯಶ್ ಫ್ಯಾನ್ಸ್‌ಗೆ ಸರ್ಪ್ರೈಸ್- ‘ಟಾಕ್ಸಿಕ್’ ಟೀಮ್‌ನಿಂದ ಸಿಕ್ತು ಸಿಹಿ ಸುದ್ದಿ

    ಇಂದು (ಜ.06 ) 8:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಜಯನಗರ ಮೂಲದ ಸುನಿಲ್ ಎಂಬುವವರಿಗೆ ಸೇರಿದ್ದ ಕಟ್ಟಡದಲ್ಲಿ ಇಬ್ಬರು ವಾಸವಾಗಿದ್ದರು. ಕೆಲಸಕ್ಕೆ ಹೋಗಲು ಒಬ್ಬರು ಸ್ನಾನ ಮಾಡುತ್ತಿದ್ದರಂತೆ. ಇದೇ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಇನ್ನೋರ್ವ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದಾನೆ. ಸ್ಫೋಟದ ತೀವ್ರತೆಗೆ ಕಟ್ಟಡದ ಹಾಲೋ ಬ್ಲಾಕ್‌ಗಳು ಹಾರಿಹೋಗಿವೆ. ಬಿಲ್ಡಿಂಗ್ ನಾಲ್ಕು ಪಿಲ್ಲರ್‌ಗಳು ಕೂಡ ಛಿದ್ರಗೊಂಡಿವೆ. ಇದರ ಪರಿಣಾಮ ನಾಲ್ಕು ಬಿಲ್ಡಿಂಗ್, 3 ಕಾರು, 6 ದ್ವಿಚಕ್ರವಾಹನಗಳು ಹಾನಿಗೊಳಗಾಗಿವೆ.

    ಸದ್ಯ ಗಾಯಾಳುಗಳನ್ನ ಸ್ಥಳೀಯ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗಿದೆ. ಬೆಳಗ್ಗೆ ಲೈಟ್ ಹಾಕಿದಾಗ ಸ್ಫೋಟ ಆಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, 15ಕ್ಕೂ ಹೆಚ್ಚು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: 2 ಬಡಾವಣೆ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಅಕ್ರಮ ಕಟ್ಟಡ ಕಟ್ಟಲು ಆರಂಭಿಸಿದ ಭೂ ಮಾಲೀಕರು

  • 8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು (Cylinder Blast) 8 ಮಂದಿ ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ (Relief) ಘೋಷಿಸಲಾಗಿದೆ.

    ಎಂಟು ಜನರಿಗೆ ಪರಿಹಾರ ನೀಡಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santhosh Lad) ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಲಾಡ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಗಣರಾಜ್ಯೋತ್ಸವಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ – ವಿಶೇಷತೆ ಏನು?

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಘೋಷಣೆ ಮಾಡಲಾಗಿದೆ. ಸಂತೋಷ್ ಲಾಡ್ ಫೌಂಡೇಶನ್‌ನಿಂದಲೂ ಮೃತರ ಕುಟುಂಬಕ್ಕೆ ಧನ ಸಹಾಯ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದ ಜನತೆಗೆ ಗ್ಯಾರಂಟಿ ಶಾಕ್ – ದರ ಏರಿಕೆಗೆ ಸರ್ಕಾರ ಹೇಳೋದು ಏನು?

    ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಅಶೋಕ್ ಕಿಡಿ

  • ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    – ಕಿಮ್ಸ್‌ಗೆ ಸಚಿವ ಸಂತೋಷ್‌ ಲಾಡ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ (Cylinder Blast) ಗಂಭೀರ ಗಾಯಗೊಂಡಿದ್ದ 9 ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿ ಮೃತರ ಕುಟುಂಬಸ್ಥರನ್ನು ಸಂತೈಸಿದರು. ಈ ವೇಳೆ ಸಚಿವರ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಾಡ್, ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ್ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರನ್ನ ಬದುಕಿಸಲು ಪ್ರಯತ್ನ ಮಾಡಿದೆವು. 4 ನುರಿತ ವೈದ್ಯರನ್ನು ಕರೆಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದರೆ ಇದನ್ನು ಮೀರಿ ಸುಟ್ಟ ಪ್ರಮಾಣ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ – ಆಪ್‌ ಬಂಡಾಯ!

     

    ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನೂ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದರು. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್‌ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ

    ಸದ್ಯ ಕಿಮ್ಸ್ ಶವಾಗಾರದಿಂದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಅಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ರವಾನಿಸಲಾಗಿದೆ. ಸಂಜಯ್ ಸವದತ್ತಿ ಅಂತ್ಯಕ್ರಿಯೆ ವಿದ್ಯಾನಗರದ ರುದ್ರಭೂಮಿಯಲ್ಲಿ ನಡೆಯಲಿದ್ದು, ನಿಜಲಿಂಗಪ್ಪ ಅವರ ಅಂತ್ಯಸಂಸ್ಕಾರ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ

  • Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

    Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

    ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು (Cylinder Blast) 9 ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.

    ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ (Hubballi) ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ಮಾಲಾಧಾರಿಗಳ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಾರಿಗಳು ಸೇರಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆ ಮಕ್ಕಳನ್ನ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ದೇಶ ಸೇವೆ ಕನಸು ಹೊತ್ತು ಸೇನೆಗೆ ಸೇರ್ಪಡೆ – 7 ವರ್ಷಗಳ ಸೇವೆ ವೀರ ಮರಣದಲ್ಲಿ ಅಂತ್ಯ

  • Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ (Gas Leakage) ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ 3 ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಡಿಜೆ ಹಳ್ಳಿಯ (DJ Halli) ಆನಂದ್ ಥಿಯೇಟರ್ ಬಳಿ ನಡೆದಿದೆ.

    ಶನಿವಾರ ಬೆಳಗ್ಗೆ 11:30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಪತಿ ನಾಜೀರ್, ಪತ್ನಿ ಕುಲ್ಸುಮ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಜೀರ್ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದರು. ಸ್ಫೋಟದ ತೀವ್ರತೆಗೆ ಮೂರೂ ಮನೆಗಳು ಪುಡಿಪುಡಿಯಾಗಿವೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಲೀಕೇಜ್ ಆಗಿದೆ. ರೆಗ್ಯುಲೇಟರ್ 2016ರಲ್ಲೇ ಡೇಟ್ ಬಾರ್ ಆಗಿದೆ. ಅದರಿಂದಲೇ ಗ್ಯಾಸ್ ಲೀಕೇಜ್ ಆಗಿ ಮನೆ ತುಂಬ ಆವರಿಸಿದೆ. ಶನಿವಾರ ಬೆಳಗ್ಗೆ 11:30ಕ್ಕೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಜೆ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

  • ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ – 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ!

    ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ – 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ!

    ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು (LPG Cylinder Blast) ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ (UttaraKannada) ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.

    ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಘಟನೆಯಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಇದನ್ನೂ ಓದಿ: ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ʼಕೈʼ ಸರ್ಕಾರ ಆದೇಶ ನೀಡಲಿ: ಅಶೋಕ್ ಆಗ್ರಹ

    ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮನೆ ಮಾಲೀಕ ನಿಲೇಶ್ ತಾಳೇಕರ್‌ ಗಾಯಗೊಂಡಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ (Fire Department) ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು 

  • ಸಿಲಿಂಡರ್ ಸ್ಫೋಟ – ಕಾರ್ಮಿಕರ ಕಾಲೋನಿ ಮನೆಗಳಿಗೆ ಬೆಂಕಿ

    ಸಿಲಿಂಡರ್ ಸ್ಫೋಟ – ಕಾರ್ಮಿಕರ ಕಾಲೋನಿ ಮನೆಗಳಿಗೆ ಬೆಂಕಿ

    ಕಾರವಾರ: ಸಿಲಿಂಡರ್ ಸ್ಫೋಟಗೊಂಡು (Cylinder Blast) ಕಾರ್ಮಿಕರ ಕಾಲೋನಿ (Labor colony)  ಮನೆಗಳಿಗೆ ಬೆಂಕಿ (Fire) ತಗುಲಿದ ಘಟನೆ ಕಾರವಾರದ (Karwar) ಮುದಗಾ ನೌಕಾನೆಲೆ ಲೇಬರ್ ಕಾಲೋನಿಯಲ್ಲಿ ನಡೆದಿದೆ.

    ಸಿಲಿಂಡರ್ ಬಾಸ್ಟ್ ಆದ ಪರಿಣಾಮ ನೌಕಾನೆಲೆಯ ಎನ್‌ಸಿಸಿ ಗುತ್ತಿಗೆ ಕಂಪನಿ ಶೆಡ್‌ಗಳು ಹೊತ್ತಿ ಉರಿದಿವೆ. ಅಡುಗೆ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಒಂದು ಸಾಲಿನ ನಾಲ್ಕೈದು ಶೆಡ್‌ಗಳಿಗೆ ಬೆಂಕಿ ವ್ಯಾಪಿಸಿದೆ. ಘಟನೆ ಹಿನ್ನೆಲೆ ಕಾರ್ಮಿಕರು ಶೆಡ್ ಬಿಟ್ಟು ಹೊರಗೆ ಓಡಿದ್ದಾರೆ.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಕಲಬುರಗಿಯಲ್ಲೇ ಬೀಡುಬಿಟ್ಟಿರೋ NIA

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ತಾಲೂಕಿನಲ್ಲಿರುವ ಈ ಕಾಲೋನಿಯಲ್ಲಿ ಸುಮಾರು 150ಕ್ಕೂ ಅಧಿಕ ಶೆಡ್‌ಗಳಿವೆ. ಘಟನೆಯ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.  ಇದನ್ನೂ ಓದಿ: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಬ್ಯಾನ್?-ನಾಳೆ ಅಧಿಕೃತ ಆದೇಶ ಸಾಧ್ಯತೆ

  • ಬೆಂಗ್ಳೂರಿನ ಮನೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ – 8 ಮಂದಿಗೆ ಗಂಭೀರ ಗಾಯ

    ಬೆಂಗ್ಳೂರಿನ ಮನೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ – 8 ಮಂದಿಗೆ ಗಂಭೀರ ಗಾಯ

    ಬೆಂಗಳೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಮಂಗಳವಾರ) ಮುಂಜಾನೆ ಯಲಹಂಕದ ಎಲ್‌ಬಿಎಸ್‌ನಲ್ಲಿ ನಡೆದಿದೆ.

    ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

    ಸಿಲಿಂಡರ್ ಸ್ಫೋಟದಿಂದಾಗಿ ಒಬ್ಬರಿಗೆ 60% ರಷ್ಟು ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಉಳಿದವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

    ಗಾಯಾಳುಗಳನ್ನು ಕಂಡ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಮನೆಯ ಅವಶೇಷಗಳನ್ನು ಕಂಡು ಗಾಬರಿಯಲ್ಲಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಫುಡ್‌ ಡೆಲಿವರಿ ಬಾಯ್‌ ಬಲಿ

    ಒಂದು ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರವಾಗಿದೆ. ಪಕ್ಕದ ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಕಿಟಕಿಗಳು, ಬಾಗಿಲುಗಳು ಪೀಸ್ ಪೀಸ್ ಆಗಿವೆ. ಮನೆಯಲ್ಲಿನ ವಿದ್ಯುತ್ ಮೀಟರ್ ಬಾಕ್ಸ್ಗಳಿಗೂ ಹಾನಿಯಾಗಿದೆ.

    ವಿದ್ಯುತ್ ಕೇಬಲ್‌ಗಳಿಗೂ ಹಾನಿಯಾಗಿದ್ದು, ತಕ್ಷಣಕ್ಕೆ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳು ಶೇಕ್ ಆಗಿವೆ. ಒಟ್ಟು 5 ಮನೆಗಳಿರೋ ಜಾಗ ಇದು.