Tag: Cylinder explosion

  • ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

    ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

    ಬೆಂಗಳೂರು: ಭೀಕರ ಸಿಲಿಂಡರ್‌ ಸ್ಫೋಟಕ್ಕೆ (Cylinder Blast )ಬೃಹತ್‌ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಕೆ.ಆರ್‌ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ.

    ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

    ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್‌ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್‌ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ. ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.

  • ಬೆಂಗಳೂರು |  ಆಕಸ್ಮಿಕ ಅಗ್ನಿ ಅವಘಡ – ಮೂರು ಗಂಟೆಗಳ ಕಾಲ ಹೊತ್ತಿ ಉರಿದ ಗೋಡೌನ್‌

    ಬೆಂಗಳೂರು | ಆಕಸ್ಮಿಕ ಅಗ್ನಿ ಅವಘಡ – ಮೂರು ಗಂಟೆಗಳ ಕಾಲ ಹೊತ್ತಿ ಉರಿದ ಗೋಡೌನ್‌

    ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಮೂರು ಗಂಟೆಗಳ ಕಾಲ ಸ್ರ್ಯಾಪ್ ಗೋಡೌನ್‌ ಹೊತ್ತಿ ಉರಿದ (Fire Accident) ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ.

    ಆರಂಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಗೋಡೌನ್‌ಗೆ ಹಬ್ಬಿದೆ ಎನ್ನಲಾಗಿತ್ತು. ಆದರೆ ಈಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂಬುದು ಗೊತ್ತಾಗಿದೆ. ಪೇಪರ್ ಮತ್ತು ಕಾಟನ್ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಡೀ ಗೋಡೌನ್‌ ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳದಲ್ಲಿ 4 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದ್ದು ಬೆಂಕಿ ನಿಂತ್ರಣಕ್ಕೆ ಬಂದಿದೆ. ಇದನ್ನೂ ಓದಿ: ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಅದೃಷ್ಟವಶಾತ್‌ ಬೆಂಕಿ ಅವಗಡದಿಂದ ಯಾವುದೇ ಸಿಲಿಂಡರ್ ಸ್ಪೋಟಿಸಿಲ್ಲ. ಇದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಲಕ್ಷಾಂತರ ರೂ. ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

  • ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಬೆಂಗಳೂರು: ನಗರದ (Bengaluru) ಆಡಗೊಡಿಯಲ್ಲಿ (Adugodi) ಸಂಭವಿಸಿದ ಸ್ಫೋಟದಲ್ಲಿ (Cylinder Explosion) ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

    ಸಿದ್ದರಾಮಯ್ಯ ಅವರು ಸ್ಪೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಮೇಲ್ನೋಟಕ್ಕೆ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದೆ. ಕಸ್ತೂರಮ್ಮ ಎಂಬುವರ ಮನೇಲಿ ಈ ಸ್ಫೋಟ ಸಂಭವಿಸಿದೆ. ವರಾಂಡ ರೀತಿಯ ಮನೆ ಆಗಿದ್ದರಿಂದ ಎಲ್ಲಾ ಮನೆಗಳು ಬಿದ್ದಿವೆ. ಹಾನಿಯಾದ ಮನೆ ರಿಪೇರಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮುಬಾರಕ್ ಎಂಬ ಹುಡುಗ ಸಾವನ್ನಪ್ಪಿದ್ದಾನೆ. 9 ಜನರಿಗೆ ಗಾಯಗಳಾಗಿವೆ. ಕಸ್ತೂರಮ್ಮಗೆ ಜಾಸ್ತಿ ಸುಟ್ಟ ಗಾಯಗಳಾಗಿದ್ದು, ಆಕೆಯ ಚಿಕಿತ್ಸೆಯನ್ನು ಸರ್ಕಾರ ಭರಿಸುತ್ತದೆ. ಪಕ್ಕದ ಮನೆಯವರ ಕಟ್ಟಡಗಳಿಗೂ ಹಾನಿಯಾಗಿದೆ. ಇದರ ಬಗ್ಗೆಯೂ ಗಮನಹರಿಸಲಾಗುತ್ತದೆ ಎಂದರು.

    ಘಟನೆಗೆ ಅಸಲಿ ಕಾರಣ ಗೊತ್ತಾಗಿಲ್ಲ. ಸಿಲಿಂಡರ್ ಬ್ಲಾಸ್ಟ್ ಎನ್ನಲಾಗ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ

  • ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

    – 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ 

    ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು (Cylinder Explosion) ಬಾಲಕ ಸಾವನ್ನಪ್ಪಿದ ಘಟನೆ ನಗರದ (Bengaluru) ಆಡುಗೊಡಿಯಲ್ಲಿ (Adugodi) ನಡೆದಿದೆ. ಘಟನೆಯಲ್ಲಿ 8 ಜನ ಗಾಯಗೊಂಡಿದ್ದಾರೆ. ಅದರಲ್ಲಿ ಮೂವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ.

    ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದನ್ನೂ ರಜೆ: ರೇಣುಕಾ ಕೊಲೆ ಹಠಾತ್‌ ಪ್ರಚೋದನೆಯಿಂದಾಗಿಲ್ಲ, ಪೂರ್ವಯೋಜಿತ – ದರ್ಶನ್‌ ಪಾತ್ರದ ಬಗ್ಗೆ ಸುಪ್ರೀಂ ಅಭಿಪ್ರಾಯ

    ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇಡೀ ರಾತ್ರಿ ಗ್ಯಾಸ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಸ್ಫೋಟ ಸಂಭವಿಸಿರಬಹುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇದನ್ನೂ ರಜೆ: 3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್‌

  • ಸಿಲಿಂಡರ್ ಸ್ಫೋಟ – ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

    ಸಿಲಿಂಡರ್ ಸ್ಫೋಟ – ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

    ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Explosion) ಮನೆಯಲ್ಲಿದ್ದ 2 ಲಕ್ಷ ರೂ. ನಗದು (Money) ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಹೊಲಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟದಿಂದಾಗಿ ಮನೆ ಹೊತ್ತಿ (Fire Accident) ಉರಿದಿದ್ದು, ಮನೆಯಲ್ಲಿದ್ದ ವಸ್ತುಗಳು ಸೇರಿದಂತೆ 2 ಲಕ್ಷ ರೂ. ಹಣ ಸೇರಿದಂತೆ ಚಿನ್ನದ ಆಭರಣಗಳು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಹಾಸ್ಟೆಲ್‍ಗೆ ತೆರಳುವಾಗ ಅಪಘಾತವಾಗಿ 8 ವಿದ್ಯಾರ್ಥಿಗಳಿಗೆ ಗಾಯ – ಕ್ಯಾಂಪಸ್‍ನಲ್ಲೇ ವಸತಿನಿಲಯಕ್ಕೆ ಆಗ್ರಹ

    ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

    ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್&ರನ್‌ಗೆ ವೃದ್ಧೆ ಬಲಿ

  • ಸಿಲಿಂಡರ್ ಸ್ಪೋಟ – ಮನೆ ಬೆಂಕಿಗಾಹುತಿ

    ಸಿಲಿಂಡರ್ ಸ್ಪೋಟ – ಮನೆ ಬೆಂಕಿಗಾಹುತಿ

    ಹಾಸನ: ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ.

    ಮನ್ಸೂರ್ ಎಂಬವರಿಗೆ ಸೇರಿದ ಮನೆ ಸಿಲಿಂಡರ್ ಸ್ಪೋಟದಿಂದ ಸುಟ್ಟು ಹೋಗಿದೆ. ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆ ಮನ್ಸೂರ್ ಮನೆಯವರು ಮನೆಯಿಂದ ಹೊರಗಡೆ ಓಡಿ ಬಂದ ಪರಿಣಾಮ, ಭಾರೀ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ಅಲ್ಪ ಸಂಖ್ಯಾಂತರನ್ನ ಮುಂದಿಟ್ಟುಕೊಂಡು ಸಮಾಜ ವಿಭಜನೆ ಬೇಡ: ಯು.ಟಿ.ಖಾದರ್

    ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಮಾಲೀಕ ಮನ್ಸೂರ್ ಎಲೆಕ್ಟ್ರಾನಿಕ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಇದೀಗ ಮನೆ ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ದಿನಬಳಕೆಯ ವಸ್ತುಗಳೂ ಕೂಡ ಸುಟ್ಟು ಕರಕಲಾಗಿದೆ. ಪರಿಣಾಮ ಆ ಕುಟುಂಬದವರ ಜೀವನ ನಿರ್ವಹಣೆಯೇ ಕಷ್ಟದಲ್ಲಿ ಸಿಲುಕುವಂತೆ ಆಗಿದೆ. ಮನೆ ಸುಟ್ಟು ಹೋಗಿರುವುದರಿಂದ ಮುಂದೇನು ಮಾಡಬೇಕೆಂದು ತಿಳಿಯದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ.

  • ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ಬೆಂಗಳೂರು: ನಗರದಲ್ಲಿ ಸರಣಿ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಇದನ್ನೂ ಓದಿ: ಸೊಸೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಮಾವ!

    ಪಟಾಕಿ ಅಂಗಡಿ, ಶ್ರೀ ಪತ್ರ ಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿಯಲ್ಲಿ ಪಟಾಕಿ ಸ್ಫೋಟ ಹಾಗೂ ಪಂಕ್ಚರ್ ಅಂಗಡಿಯಲ್ಲಿ ಹೈಡ್ರೋಲಿಕ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ನಗರ್ತರಪೇಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ, ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸಸ್ ಗೋಡೌನ್‍ನಲ್ಲಿ ಪಟಾಕಿ ಸ್ಫೋಟಗೊಂಡು ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಪಟಾಕಿ ಸ್ಫೋಟದಿಂದ ಮೃತರ ದೇಹ ಛಿದ್ರ ಛಿದ್ರಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಇದೀಗ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

    Cylinder Explosion

    ಮೃತರನ್ನು ಅಸ್ಲಾಂ, ಫಯಾಜ್, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: 17 ವರ್ಷದ ದಾಂಪತ್ಯ ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ ಮಹಿಳೆ

    ಈ ಸಂಬಂಧ ಡಿಸಿಪಿ ಮಾತನಾಡಿ, ಬ್ಲಾಸ್ಟ್ ಆಗಿರೋದು ಸಿಲಿಂಡರ್, ಶಾರ್ಟ್ ಸರ್ಕ್ಯೂಟ್ ಅಲ್ಲ. ಎಫ್ ಎಸ್ ಎಲ್ ಅಧಿಕಾರಿಗಳು ಬರುತ್ತಾರೆ ಎಂದು ತಿಳಿಸಿದ್ದಾರೆ.

  • ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

    ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

    ಚಾಮರಾಜನಗರ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗ-ಧಗಿಸಿ ಹೊತ್ತಿ ಉರಿದಿದ್ದು, ಈ ವೇಳೆ ಮೊಮ್ಮಗಳ ಸಮಯ ಪ್ರಜ್ಞೆಯಿಂದ ಅಜ್ಜಿಯ ಜೀವ ಉಳಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.

    ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದ ನಿವಾಸಿ 75 ವರ್ಷದ ಲಕ್ಷ್ಮಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಮೊಮ್ಮಗಳು ಮೇಘನಾ(17) ತಕ್ಷಣ ಲಕ್ಷ್ಮಮ್ಮ ಅವರನ್ನು ಹೊರಗೆ ಕರೆತಂದಿದ್ದಾರೆ. ಅಜ್ಜಿ-ಮೊಮ್ಮಗಳು ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ಇದನ್ನೂ ಓದಿ: ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಈ ಅವಘಡದ ವೇಳೆ ಲಕ್ಷ್ಮಮ್ಮ ಅವರ ಮಗ ವೆಂಕಟೇಶ್ ಹಾಗೂ ಮೊಮ್ಮಗ ಅಂಗಡಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಇಂಗ್ಲಿಷ್ ವ್ಯಾಮೋಹ ಕನ್ನಡ ಭಾಷಾಭಿವೃದ್ಧಿಗೆ ದೊಡ್ಡ ಸವಾಲು: ಡಿ.ಎಸ್.ಅರುಣ್

    ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಸಿಲಿಂಡರ್ ಸ್ಫೋಟ – ರೈತನ ಮನೆ, 21 ಸಾವಿರ ಕೊಬ್ಬರಿ ಬೆಂಕಿಗಾಹುತಿ

    ಸಿಲಿಂಡರ್ ಸ್ಫೋಟ – ರೈತನ ಮನೆ, 21 ಸಾವಿರ ಕೊಬ್ಬರಿ ಬೆಂಕಿಗಾಹುತಿ

    ಹಾಸನ: ಮೊದಲೇ ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ರೈತರೊಬ್ಬರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆ ಮತ್ತು ಸುಮಾರು 3.5 ಲಕ್ಷ ರೂ. ಬೆಲೆ ಬಾಳುವ 21 ಸಾವಿರ ಕೊಬ್ಬರಿ ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಭಸ್ಮವಾಗಿದೆ.

    ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ರೈತ ರಮೇಶ್ ಅವರ ಮನೆಯಲ್ಲಿ ಇಂದು ಸಿಲಿಂಡರ್ ಸ್ಫೋಟವಾಗಿದೆ. ಪರಿಣಾಮ ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ 21 ಸಾವಿರ ಕೊಬ್ಬರಿ ಬೆಂಕಿಗಾಹುತಿಯಾಗಿದೆ. ಸಿಲಿಂಡರ್ ಸ್ಫೋಟದ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಮೊದಲೇ ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತ ಇದೀಗ ಮನೆ ಮತ್ತು ದುಡಿಮೆಗೆ ಆಧಾರವಾಗಿದ್ದ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ಕಳೆದುಕೊಂಡು ಕಂಗಾಲಾಗಿದ್ದಾರೆ. ಸರ್ಕಾರ ಆದಷ್ಟು ಬೇಗ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದಾರೆ.

  • ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ – ವೃದ್ಧೆ ಸ್ಥಿತಿ ಗಂಭೀರ

    ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ – ವೃದ್ಧೆ ಸ್ಥಿತಿ ಗಂಭೀರ

    ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಾಮಾಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ.

    ಶಿವಮ್ಮ(60) ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ವೃದ್ಧೆ. ಮಧ್ಯ ರಾತ್ರಿ ಅಡುಗೆ ಸಿಲಿಂಡರ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಸ್ಫೋಟಗೊಂಡಿದೆ. ಮನೆಯಲ್ಲಿದ್ದ ಶಿವಮ್ಮ ಸ್ಫೋಟದಿಂದ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

    ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆ ಘಟನಾ ಸ್ಥಳದ ಸುತ್ತಮುತ್ತ ಮನೆಯವರಲ್ಲಿ ಭಯದ ವಾತವರಣ ಸೃಷ್ಟಿಸಿತ್ತು. ಸಿಲಿಂಡರ್ ಸ್ಫೋಟಕ್ಕೆ ಭಾಗಶಃ ಮನೆಗೆ ಹಾನಿ ಆಗಿದ್ದು, ಮನೆ ಗೋಡೆ ಹಾಗೂ ಸಾಮಾಗ್ರಿಗಳು ಹಾಳಾಗಿದೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಈ ಬಗ್ಗೆ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿದ ಬೆಂಕಿ ನಂದಿಸಿದರು.