Tag: Cylinder explosion

  • ಸಿಲಿಂಡರ್ ಸ್ಫೋಟದಿಂದ ಅವಘಡ – ಬೀದಿಗೆ ಬಂದ ಇಪ್ಪತ್ತು ಕುಟುಂಬಗಳು

    ಸಿಲಿಂಡರ್ ಸ್ಫೋಟದಿಂದ ಅವಘಡ – ಬೀದಿಗೆ ಬಂದ ಇಪ್ಪತ್ತು ಕುಟುಂಬಗಳು

    ಚಿತ್ರದುರ್ಗ: ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ 20 ಗುಡಿಸಲುಗಳು ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡವಾಣೆಯಲ್ಲಿ ನಡೆದಿದೆ.

    ಕಡು ಬಡವರೇ ಹೆಚ್ಚು ವಾಸವಾಗಿರುವ ಈ ಬಡಾವಣೆಯಲ್ಲಿ ಎಲ್ಲರೂ ಬಹುತೇಕ ಮಂದಿ ಕೂಲಿಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಾರೆ. ಇಂದು ಅವರೆಲ್ಲ ಕೆಲಸಕ್ಕೆ ತೆರಳಿರುವ ವೇಳೆ ಅವಘಡ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳು, ಮನೆಯಲ್ಲಿ ಇಟ್ಟಿದ್ದ ಬಂಗಾರ, ಬಟ್ಟೆ ಹಾಗು ದಿನ ಬಳಕೆ ಪದಾರ್ಥಗಳು ಸುಟ್ಟು ಕರಕಲಾಗಿವೆ.

    ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಸರಿಯಾದ ಸಮಯಕ್ಕೆ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಸುತ್ತಮುತ್ತಲಿನ ಬೇರೆ ಪ್ರದೇಶಗಳಿಗೆ ಹರಡಿ ಹೆಚ್ಚಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರ ವಹಸಿ ಬೆಂಕಿ ನಂದಿಸಿದ್ದಾರೆ.

    ಘಟನೆಯಿಂದಾಗಿ ಸುಮಾರು ಇಪ್ಪತ್ತು ಕುಟುಂಬಗಳು ಸೂರಿಲ್ಲದೇ ಬೀದಿಗೆ ಬೀಳುವಂತಾಗಿದ್ದೂ, ಆಶ್ರಯದ ನೆರವು ಕೋರಿದ್ದಾರೆ. ಈ ಘಟನೆ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಸಿಬಿ ಕಾರ್ಯಾಚರಣೆ ವೇಳೆ ಕೇಳಿತು ಮಗು ಅಳೋ ಸದ್ದು – ಸಾವು ಗೆದ್ದು ಬಂದಳು 3 ವರ್ಷದ ಸಂಜನಾ

    ಜೆಸಿಬಿ ಕಾರ್ಯಾಚರಣೆ ವೇಳೆ ಕೇಳಿತು ಮಗು ಅಳೋ ಸದ್ದು – ಸಾವು ಗೆದ್ದು ಬಂದಳು 3 ವರ್ಷದ ಸಂಜನಾ

    ಬೆಂಗಳೂರು: ಈಜೀಪುರದಲ್ಲಿ ಕುಸಿದು ಬಿದ್ದಿದ್ದ ಕಟ್ಟಡದ ಅವಶೇಷಗಳಡಿಯಿಂದ 3 ವರ್ಷದ ಹೆಣ್ಣು ಮಗುವೊಂದು ಪವಾಡಸದೃಶವಾಗಿ ಬದುಕುಳಿದಿದೆ. 3 ವರ್ಷದ ಸಂಜನಾ ಸಾವನ್ನೇ ಗೆದ್ದು ಬಂದ ಮಗು.

    ಮಗುವನ್ನು ಕಟ್ಟಡದ ಅವಶೇಷಗಳಡಿಯಿಂದ ಮಗುವನ್ನು ಹೊರಗೆ ತೆಗೆಯುತ್ತಿದ್ದಂತೆಯೇ ಅಲ್ಲಿ ಸೇರಿದ್ದವರು ಶಿಳ್ಳೆ ಹಾಗೂ ಕರತಾಡನಗಳ ಮೂಲಕ ಶ್ಲಾಘಿಸಿದರು. ಇಂದು ಬೆಳಗ್ಗೆ ಕುಸಿದು ಬಿದ್ದ ಕಟ್ಟಡದ ತೆರವಿಗೆ ಜೆಸಿಬಿ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಅವಶೇಷಗಳಡಿಯಿಂದ ಮಗು ಅಳುತ್ತಿರುವ ಸದ್ದು ಕೇಳಿಸಿದೆ. ತಕ್ಷಣ ಜೆಸಿಬಿ ಮೂಲಕ ನಡೆಸುತ್ತಿದ್ದ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬ್ಬಂದಿ ನಿಲ್ಲಿಸಿದ್ದಾರೆ. ಬಳಿಕ ತಾವೇ ಸ್ವತಃ ಒಂದೊಂದೇ ಕಲ್ಲು, ಇಟ್ಟಿಗೆಗಳನ್ನು ತೆಗೆಯುತ್ತಿದ್ದಾಗ ಸಂಜನಾ ಅಗ್ನಿಶಾಮಕ ಸಿಬ್ಬಂದಿ ಕೈಗೆ ಸಿಕ್ಕಿದ್ದಾಳೆ. ಮಗುವನ್ನು ಅಂಬುಲೆನ್ಸ್ ನಲ್ಲಿ ಸಮೀಪದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ.

    ಏನಾಗಿತ್ತು?: ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 2 ಅಂತಸ್ತಿನ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಗರ್ಭಿಣಿಯೊಬ್ಬರು ಇನ್ನೂ ಅವಶೇಷದಡಿ ಸಿಲುಕಿದ್ದಾರೆ ಎನ್ನಲಾಗುತ್ತಿದ್ದು, ಇವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಗ್ರೀನ್‍ವ್ಯೂ ಹೋಟೆಲ್ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಹಾಗೂ ಕಲಾವತಿ ಹಾಗೂ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ 7.10ಕ್ಕೆ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸುಮಾರು 7.15ಕ್ಕೆ ಕಟ್ಟಡ ಕುಸಿದಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳ ಸಿಬ್ಬಂದಿಯ ಮೇಲೂ ಗೋಡೆ ಕುಸಿದಿದ್ದು ಸುರೇಶ್, ಸುಬಾನ್, ಸೋಮಶೇಖರ್ ಎಂಬವರಿಗೆ ಗಾಯವಾಗಿದೆ. ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿಚಂದ್ರ ಹಾಗೂ ಕಲಾವತಿ ಎಂಬವರು ಮೇಲಿನ ಮನೆಯಲ್ಲಿದ್ದರು. ಕೆಳಗಿನ ಮನೆಯಲ್ಲಿದ್ದ ಎಂಟು ತಿಂಗಳ ಗರ್ಭಿಣಿ ಅಶ್ವಿನಿ ಹಾಗೂ ಇಬ್ಬರು ಮಕ್ಕಳು ಒಳಗೆ ಸಿಲುಕಿದ್ದರು. ಅಶ್ವಿನಿ ಅವರ ಗಂಡ ನೀರು ತರಲು ಹೊರಗೆ ಬಂದ ವೇಳೆ ಈ ಅವಘಡ ಸಂಭವಿಸಿದೆ. ಸುಮಾರು 20 ವರ್ಷ ಹಳೆಯ ಕಟ್ಟಡ ಇದಾಗಿದ್ದು, ಬ್ಯಾಚುಲರ್ಸ್ ಸುಮಾರು 5-6 ವರ್ಷದಿಂದ ಈ ಕಟ್ಟಡದಲ್ಲಿ ನೆಲೆಸಿದ್ದರು. ಘಟನೆಯಿಂದಾಗಿ ಅಕ್ಕಪಕ್ಕದ ಮನೆಗಳೂ ಕೂಡ ಬಿರುಕುಬಿಟ್ಟಿವೆ ಎಂದು ತಿಳಿದುಬಂದಿದೆ.

    https://youtu.be/Ybpd5J__WuM

  • ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ವೇಳೆ ಸ್ಫೋಟ – ತಪ್ಪಿದ ಬಾರೀ ಅನಾಹುತ

    ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ವೇಳೆ ಸ್ಫೋಟ – ತಪ್ಪಿದ ಬಾರೀ ಅನಾಹುತ

    ಬೆಂಗಳೂರು: ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ.

    ಪೀಣ್ಯ ಎನ್.ಟಿಟಿ.ಎಫ್ ಬಳಿ ಇರುವ ಮನೆಯ ಎರಡನೇ ಮಹಡಿಯಲ್ಲಿ ಅಕ್ರಮವಾಗಿ ಸಿಲಿಂಡರ್ ರೀಫಿಲ್ಲಿಂಗ್ ನಡೆಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮನೆಯಲ್ಲಿ ಸುಮಾರು 15 ಕ್ಕೂ ಹೆಚ್ಚು ಸಿಲಿಂಡರ್‍ಗಳಿದ್ದವು. ಆದರೆ ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

    ಘಟನೆ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ದಳದ ವಾಹನದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

  • ಸಿಲಿಂಡರ್ ಸ್ಫೋಟ- ಮೂರು ಮನೆಗಳ ಮೇಲ್ಚಾವಣಿ ಕುಸಿತ

    ಸಿಲಿಂಡರ್ ಸ್ಫೋಟ- ಮೂರು ಮನೆಗಳ ಮೇಲ್ಚಾವಣಿ ಕುಸಿತ

    ಚಿಕ್ಕಬಳ್ಳಾಪುರ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಗಳ ಮೇಲ್ಚಾವಣಿ ಕುಸಿದಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ.

    ನಾಗರತ್ನಮ್ಮ ಎಂಬವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಗಳಲ್ಲಿದ್ದ ಎಲ್ಲಾ ವಸ್ತುಗಳು ಜಖಂಗೊಂಡಿವೆ. ನಾಗರತ್ನಮ್ಮರ ಮನೆ ಸೇರಿದಂತೆ ಅಕ್ಕಪಕ್ಕದ ಎರಡು ಮನೆಗಳ ಮೇಲ್ಚಾವಣಿ ಕುಸಿದಿವೆ.

    ಮನೆಯ ಸದಸ್ಯರು ಹೊರಗಡೆ ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.