ಬೆಂಗಳೂರು: ದೇವರಾಜ ಅರಸು (D Devaraj Urs) ಅವರು ಕಾಂಗ್ರೆಸ್ (Congress) ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದ್ದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ದೇವರಾಜ ಅರಸು ಅವರು ಒಬ್ಬ ಜಾತ್ಯತೀತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತಿ ಮುಖ್ಯವಾಹಿನಿಗೆ ತರಲು ಪ್ರಯತ್ನ ಮಾಡಿದ್ದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಏಕೀಕರಣದ ನಂತರ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ವರ್ಷ ಅದರ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಅರಸು ಅವರು ಬಡವರ, ಶೋಷಿತರ, ಸಾಮಾಜಿಕ ನ್ಯಾಯದ ಪರವಾಗಿದ್ದ ನಾಯಕರು. ಅದಕ್ಕೇ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು ಉಳುವವನೇ ಒಡೆಯ ಎಂದು ಘೋಷಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದರು.
ಕಾಂಗ್ರೆಸ್‌ನಿಂದ ಮಾತ್ರ ಸಾಮಾಜಿಕ ನ್ಯಾಯ ಪಾಲನೆ
ದೇವರಾಜ ಅರಸು ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಎಂಟು ವರ್ಷಗಳ ಕಾಲ ಸಾಮಾಜಿಕ ನ್ಯಾಯದ ಅಡಿಪಾಯ ಹಾಕಿದರು. ಅದರ ಬುನಾದಿಯ ಮೇಲೆ ಸಾಮಾಜಿಕ ನ್ಯಾಯ ಕರ್ನಾಟಕದಲ್ಲಿ ಮುಂದುವರೆದಿದೆ ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ಇತರೆ ಪಕ್ಷಗಳಿಗೆ ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲ. ಬದಲಿಗೆ ಅದರ ವಿರುದ್ಧವಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ನಿರಪರಾಧಿ, ಸ್ವಯಂಪ್ರೇರಿತನಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ: ನಾಗೇಂದ್ರ
ರಾಜ್ಯ ರಾಜ್ಯಕೀಯದಲ್ಲಿ (Karnataka Politics) ಮಹತ್ತರ ಬದಲಾವಣೆಗಳು ಸಂಭವಿಸಿವೆ. ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ಕ್ರೆಡಿಟ್ ವಾರ್ ನಡುವೆ ಮಂಡ್ಯ ಸಂಸದೆ ಸುಮಲತಾ (Sumalatha), ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಣೆ ಮಾಡಿರುವುದು ಮಂಡ್ಯ ರಾಜಕೀಯ ಬೆಳವಣಿಗೆಯಲ್ಲಿ ಬಹುದೊಡ್ಡ ತಿರುವು ಪಡೆದುಕೊಂಡಿದೆ. ಮತ್ತೊಂದೆಡೆ, ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ಪ್ರಮುಖ ನಾಯಕರೇ ಪಕ್ಷಾಂತರ ಹಾದಿ ಹಿಡಿದಿದ್ದಾರೆ. ಕರ್ನಾಟಕ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳು 2023ರಲ್ಲಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ಪಣ ತೊಟ್ಟಿವೆ.
ಎಸ್. ನಿಜಲಿಂಗಪ್ಪ (S Nijalingappa) [1962-68], ಡಿ. ದೇವರಾಜ ಅರಸು (D Devaraj Urs) [1972-77] ಹಾಗೂ ಸಿದ್ದರಾಮಯ್ಯ (Siddaramaiah) [2013-2018] ಈ ಮೂವರಷ್ಟೇ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಪೂರ್ಣಾವಧಿ ಆಡಳಿತ ಪೂರೈಸಿದ ಮುಖ್ಯಮಂತ್ರಿಗಳಾಗಿದ್ದಾರೆ. ಬಿಜೆಪಿ (BJP) ಹಾಗೂ ಜೆಡಿಎಸ್‌ನ (JDS) ಮುಖ್ಯಮಂತ್ರಿಗಳು ಯಾರೂ 5 ವರ್ಷ ಅವಧಿ ಪೂರೈಸಲು ಸಾಧ್ಯವಾಗಿಲ್ಲ.
1999ರ ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಎಸ್.ಎಂ. ಕೃಷ್ಣ (SM Krishna) ನೇತೃತ್ವದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿ ಸರ್ಕಾರ ರಚಿಸಿ, ಉತ್ತಮ ಆಡಳಿತ ನೀಡಿತ್ತು. ಆದರೆ ಇನ್ನೇನು ಪೂರ್ಣಾವಧಿ ಮುಗಿಸಲು ಕೇವಲ 5 ತಿಂಗಳು ಇದೆ ಎನ್ನುವಾಗಲೇ ಲೋಕಸಭಾ ಚುನಾವಣೆ ಎದುರಾಗಿತ್ತು. ಹೀಗಾಗಿ ವಿಧಾನಸಭೆ ಚುನಾವಣೆಯೂ (Karnataka Assembly Election) ಒಟ್ಟಿಗೇ ನಡೆಯಲಿ ಎನ್ನುವ ಉದ್ದೇಶದಿಂದ ಮಾಜಿ ಸಿಎಂ ಎಸ್. ಎಂ ಕೃಷ್ಣ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಹೀಗಾಗಿ ಪೂರ್ಣಾವಧಿ ಸಿಎಂ ಪಟ್ಟಿಗೆ ಎಸ್‌ಎಂಕೆ ಹೆಸರು ಸೇರ್ಪಡೆಯಾಗಲಿಲ್ಲ. ಇದನ್ನೂ ಓದಿ: ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡರ ಬಗ್ಗೆ ಉಲ್ಲೇಖ – ರಾಜಕೀಯ ವಾದಕ್ಕೆ ಪುಷ್ಟಿ
ಫ್ರೆಬ್ರವರಿ 2006ರಿಂದ 2007ರ ಅವಧಿಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರದ ಆವಧಿಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಮೊದಲಬಾರಿಗೆ ಮುಖ್ಯಮಂತ್ರಿ ಆಗಿದ್ದರು. ಅವರ ಮೊದಲ ಅವಧಿ 2 ವರ್ಷಗಳಿಗಿಂತಲೂ ಕಡಿಮೆಯಿತ್ತು. ಆದರೆ ಅಧಿಕಾರ ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಮನಸ್ಥಾಪ ಏರ್ಪಟ್ಟಿತ್ತು. ಇದರಿಂದ ಕೇಸರಿ ಪಾಳಯ ಬೆಂಬಲ ವಾಪಸ್ ಪಡೆದಿದ್ದರಿಂದ ಮೈತ್ರಿ ಸರ್ಕಾರ ಅಂತ್ಯಗೊಂಡಿತ್ತು. ಆ ನಂತರ ಕುಮಾರಸ್ವಾಮಿ 2018ರಲ್ಲಿ ಮತ್ತೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದಲ್ಲಿ 14 ತಿಂಗಳು ವರ್ಷ ಸಿಎಂ ಆಗಿದ್ದರು. ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ಸರ್ಕಾರ ಪತನಗೊಂಡಿತು.
ಕೇಸರಿ ಪಾಳಯದಲ್ಲಿ ನೋಡುವುದಾದರೆ, 2007ರಲ್ಲಿ ಕುಮಾರಸ್ವಾಮಿಯ ನಂತರ ಬಿಜೆಪಿಯಿಂದ ಬಿ.ಎಸ್ ಯಡಿಯೂರಪ್ಪ ಮೊಟ್ಟಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆದರು. ಈ ವೇಳೆ ಜೆಡಿಎಸ್ ಮೈತ್ರಿ ಮುರಿದುಕೊಂಡಿದ್ದರಿಂದ 7 ದಿನಗಳಲ್ಲೇ ಬಿಎಸ್‌ವೈ ರಾಜೀನಾಮೆ ನೀಡಿದ ಪರಿಣಾಮ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿತು.
2008ರಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿದ ನಂತರ ಯಡಿಯೂರಪ್ಪ ಮತ್ತೆ ಸಿಎಂ ಅದರು. ಆದ್ರೆ ಭ್ರಷ್ಟಾಚಾರ ಆರೋಪದಿಂದಾಗಿ 2011ರ ಜುಲೈನಲ್ಲಿ ರಾಜೀನಾಮೆ ನೀಡಬೇಕಾಯಿತು. 2018ರ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ಸ್ಥಾಪನೆಯಾಗುವುದಕ್ಕೂ ಮುನ್ನವೇ ಮತ್ತೆ ಬಿಎಸ್‌ವೈ ಸಿಎಂ ಆಗಿ ಪ್ರಮಾಣವಚನ ಸಹ ಸ್ವೀಕರಿಸಿದ್ದರು. ಆದರೆ ಬಹುಮತ ಸಾಬೀತುಪಡಿಲಾಗದ ಹಿನ್ನೆಲೆಯಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದರು. ಮತ್ತೊಮ್ಮೆ 14 ತಿಂಗಳ ಬಳಿಕ 17 ಅತೃಪ್ತ ಶಾಸಕರ ವಲಸೆಯಿಂದಾಗಿ ಬಿಎಸ್‌ವೈ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು.
1956ರಲ್ಲಿ ರಾಜ್ಯವಾಗಿ ರೂಪುಗೊಂಡ ಕರ್ನಾಟಕ ಈವರೆಗೆ 26 ಮುಖ್ಯಮಂತ್ರಿಗಳನ್ನು ಕಂಡಿದೆ. ಹಲವಾರು ಮಂದಿ ಅವಧಿ ಪೂರೈಸುವ ವೇಳೆಗೆ ಅಧಿಕಾರದಿಂದ ಕೆಳಗಿಳಿಯಬೇಕಾದ ಅನಿವಾರ್ಯತೆ ಬಂದೊದಗಿದೆ. ಕೆಲವರು ಅವಧಿ ಪೂರೈಸುವುದಕ್ಕೂ ಮುನ್ನವೇ ಚುನಾವಣಾ ದಿನಾಂಕ ಘೋಷಣೆಯಾದ ಕಾರಣ ಈ ಅವಕಾಶದಿಂದ ವಂಚಿತರಾಗಿದ್ದಾರೆ. ಅದೇನಿದ್ದರೂ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಮಿಂಚಿದ ನಾಯಕರಲ್ಲಿ ಕಾಂಗ್ರೆಸ್ ಮುಖಂಡರ ಸಂಖ್ಯೆ ಹೆಚ್ಚು ಎಂಬುವುದು ಇತಿಹಾಸ.
ಪೂರ್ಣವಧಿ ಅಂದರೆ ಏನು?
ರಾಜ್ಯ ವಿಧಾನಸಭೆಯ ಆಡಳಿತಾವಧಿ 5 ವರ್ಷ. ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಪಕ್ಷದ ಮುಖ್ಯಮಂತ್ರಿಗೆ 5 ವರ್ಷಗಳವರೆಗೆ ಅಧಿಕಾರ ನಡೆಸಲು ಅವಕಾಶವಿದೆ. ಈ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದಾಗ ಮಾತ್ರ ಪೂರ್ಣಾವಧಿ ಮುಖ್ಯಮಂತ್ರಿ ಎಂಬ ಕೀರ್ತಿಗೆ ಭಾಜನರಾಗುತ್ತಾರೆ.
ವಿಶೇಷ ಸೂಚನೆ: ಎರಡು, ಮೂರು ಅಥವಾ ನಾಲ್ಕು ಬಾರಿ ಸಿಎಂ ಆಗಿದ್ದನ್ನು ಲೆಕ್ಕಕ್ಕೆ ಪರಿಗಣಿಸಿಲ್ಲ. ಅಲ್ಲದೇ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಇದ್ದದ್ದನ್ನೂ ಪರಿಗಣಿಸಿಲ್ಲ. ಕರ್ನಾಟಕದಲ್ಲಿ ಸಿಎಂ ಆಗಿದ್ದವರು ಎಂದು ಪರಿಗಣಿಸಿದರೆ 25 ಮಂದಿಯಾಗಿದ್ದಾರೆ.
ಬೆಂಗಳೂರು: ಬರೋಬ್ಬರಿ 48 ವರ್ಷ ಕಳೆದರೂ ಜನಪ್ರಿಯ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಬಳಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಲಕ ಲಕ ಹೊಳೆಯುತ್ತಿದೆ. ಕಾರನ್ನು ಕಂಡ ಹಲವರು ಬೆರಗುಗಣ್ಣಿನಿಂದ ನೋಡುತ್ತಿದ್ದಾರೆ.
ಇಂದು ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಹಿನ್ನೆಲೆ ಅರಸು ಬಳಸುತ್ತಿದ್ದ ಎಂಇಒ 777 ನೋಂದಣಿ ಸಂಖ್ಯೆಯ ಮರ್ಸಿಡಿಸ್ ಬೆಂಜ್ ಕಾರು ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. 1972ರ ಚುನಾವಣೆಯಲ್ಲಿ ದೇವರಾಜ ಅರಸು ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದರು. ಇದರಿಂದಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಂತೋಷಗೊಂಡಿದ್ದರು. ಬಳಿಕ ವಿದೇಶದಿಂದ ಮರ್ಸಿಡಿಸ್ ಬೆಂಜ್ ಕಾರ್ ತರಿಸಿ ಸರ್ಕಾರಕ್ಕೆ ಕೊಡುಗೆಯಾಗಿ ನೀಡಿದ್ದರು. ಇದನ್ನೂ ಓದಿ: ಭಾರೀ ಮೊತ್ತಕ್ಕೆ ಕೆಜಿಎಫ್ ಸ್ಯಾಟಲೈಟ್ ಹಕ್ಕು ಖರೀದಿಸಿದ ಜೀ ಸ್ಟುಡಿಯೋಸ್
ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ನಿತ್ಯ ಈ ಬ್ಲ್ಯಾಕ್ ಬ್ಯೂಟಿಯನ್ನು ಬಳಸುತ್ತಿದ್ದರು. 10 ವರ್ಷಗಳ ಕಾಲ ಬ್ಲ್ಯಾಕ್ ಬ್ಯೂಟಿಯ ಜೊತೆಗೆ ಅರಸು ಓಡಾಟ ನಡೆಸಿದ್ದರು. ಬಳಿಕ ಹರಾಜು ಪ್ರಕ್ರಿಯೆಯಲ್ಲಿ ಅರಸು ಅವರ ಆಪ್ತ ಜಿ.ಎಂ.ಬಾಬು ಕಾರನ್ನು ಖರೀದಿಸಿ ಕಾಪಾಡುತ್ತಿದ್ದಾರೆ. ಈ ಕಾರ್ ಇಂದಿಗೂ ಫುಲ್ ಕಂಡೀಷನ್ ನಲ್ಲಿದೆ. ಅವರ ಜನ್ಮದಿನಾಚರಣೆ ಹಿನ್ನೆಲೆ ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಮುಂದೆ ಕಾರಿನ್ನು ಪ್ರದರ್ಶಿಸಲಾಗುತ್ತಿದೆ. ಪ್ರತಿ ವರ್ಷ ಅರಸು ಜನ್ಮದಿನದಂದು ಈ ಕಾರು ವಿಧಾನಸೌಧಕ್ಕೆ ಎಂಟ್ರಿ ಕೊಡತ್ತದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇದೇ ಕಾರಿನಲ್ಲಿ ವಿಧಾನಸೌಧವನ್ನು ಸುತ್ತು ಹಾಕಿ, ಸಂತಸ ವ್ಯಕ್ತಪಡಿಸಿದ್ದರು. ಈ ಕಾರ್ ಬಗ್ಗೆ ಹಲವರಿಗೆ ಕ್ರೇಜ್ ಇದೆ. ಅದರಲ್ಲೂ ದೇವರಾಜ್ ಅರಸು ಬಳಸಿದ್ದು ಎನ್ನುವ ಕಾರಣಕ್ಕೆ ಇನ್ನೂ ಹೆಚ್ಚು ಪ್ರಸಿದ್ಧಿ ಪಡೆದಿದೆ.