Tag: D K Sivakumar

  • ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ನ.26ಕ್ಕೆ ಉದ್ಘಾಟನೆ

    ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ನ.26ಕ್ಕೆ ಉದ್ಘಾಟನೆ

    ಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ನಾಳೆ ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Sivakumar) ಅವರು ಪಶು ಆಸ್ಪತ್ರೆಯನ್ನು (Hospital) ಉದ್ಘಾಟಿಸಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ  ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ.

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಪ್ರಕಟಿಸಿದೆ.

    ಲೀಲಾವತಿ ಅವರ ಆರೋಗ್ಯಕ್ಕಾಗಿ ಸರ್ಜಾ ಪ್ರಾರ್ಥನೆ

    ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ.

    ವಯಸ್ಸಿನ ಕಾರಣದಿಂದಾಗಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೀಗ ಅರ್ಜುನ್ ಸರ್ಜಾ ಕೂಡ ಅದೇ ಕೆಲಸ ಮಾಡಿದ್ದಾರೆ. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ.

     

    ತಾಯಿಯ ಆರೋಗ್ಯ ವಿಚಾರಿಸುವಾಗ ಲೀಲಾವತಿ ಪುತ್ರ ವಿನೋದ್ ರಾಜ್(Vinod Raj)ಕಣ್ಣೀರಿಟ್ಟಿದ್ದಾರೆ. ಆನಂತರ ಲೀಲಾವತಿಯವರು ಬೇಗ ಆರೋಗ್ಯ ಸುಧಾರಿಸಲು ಭಗವಂತ ಹನುಮಂತನಲ್ಲಿ ಪ್ರಾರ್ಥಿಸುವುದಾಗಿ ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ. ದೊಡ್ಡ ಹನುಮಂತನ ದೇವಾಲಯ ಕಟ್ಟಿಸಿದ್ದು ಅಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದರು ಅರ್ಜುನ್ ಸರ್ಜಾ.

  • ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಪತ್ರ ಬರೆದ ನಿರ್ದೇಶಕ ಶಶಾಂಕ್: ಏನಿದೆ ಪತ್ರದಲ್ಲಿ?

    ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಪತ್ರ ಬರೆದ ನಿರ್ದೇಶಕ ಶಶಾಂಕ್: ಏನಿದೆ ಪತ್ರದಲ್ಲಿ?

    ನ್ನಡದ ಖ್ಯಾತ ನಿರ್ದೇಶಕ ಶಶಾಂಕ್ (Shashank), ಬೆಂಗಳೂರು ಅಭಿವೃದ್ಧಿ ಕುರಿತಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ತುರ್ತಾಗಿ ಬೆಂಗಳೂರಿಗೆ ಆಗಬೇಕಾಗಿದ್ದೇನು ಎನ್ನುವುದನ್ನು ಆ ಪತ್ರದಲ್ಲಿ ತಿಳಿಸಿದ್ದಾರೆ. ಆ ಪತ್ರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶಶಾಂಕ್ ಪತ್ರಕ್ಕೆ ಬೆಂಗಳೂರಿಗರು ಮೆಚ್ಚುಗೆ ಸೂಚಿಸಿದ್ದಾರೆ.

    ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ ‘ನಮ್ಮೆಲ್ಲರ ಹೆಮ್ಮೆಯ ಬೆಂಗಳೂರು ನಗರ, ಹಲವಾರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವುದು ತಮಗೆ ಗೊತ್ತೇ ಇದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇದರ ನಿವಾರಣೆಯ ಕುರಿತಾಗಿ ಕಾರ್ಯಪ್ರವೃತ್ತರಾಗಿರುವುದು ನಿಜಕ್ಕೂ ಶ್ಲ್ಯಾಘನೀಯ. ಇದೀಗ, ಕನ್ನಡಿಗರು ಅತ್ಯಂತ ತುರ್ತಾಗಿ ಎದುರು ನೋಡುತ್ತಿರುವ ಎರಡು ಯೋಜನೆಗಳನ್ನು ನಿಮ್ಮ ಗಮನಕ್ಕೆ ತರುವುದು ನನ್ನ ಈ ಪತ್ರದ ಮೂಲಕ ಉದ್ದೇಶ’ ಎಂದು ಶಶಾಂತ್ ಪತ್ರ ಶುರು ಮಾಡಿದ್ದಾರೆ. ಇದನ್ನೂ ಓದಿ:ಖ್ಯಾತ ಕಥೆಗಾರ ಟಿ.ಕೆ. ದಯಾನಂದ್ ಬರೆದ ಕಥೆಯೇ ‘ಟೋಬಿ’ ಸಿನಿಮಾ

    ಮುಂದುವರೆದು, ‘ಮೊದಲನೆಯದು- ನೆಲಮಂಗಲ ರಸ್ತೆಯ ಗೊರಗುಂಟೆ ಪಾಳ್ಯ ಜಂಕ್ಷನ್. ರಾಜಧಾನಿಯಿಂದ ಮುಕ್ಕಾಲು ಭಾಗ ಕರ್ನಾಟಕಕ್ಕೆ ಹೋಗಲು, ಇದೇ ಹೆಬ್ಬಾಗಿಲು. ಹಲವಾರು ವರ್ಷಗಳಿಂದ ಇಲ್ಲಿ ಆಗುತ್ತಿರುವುದು ಟ್ರಾಫಿಕ್ ಜಾಮ್. ಅಸಹನೀಯವಾಗಿದೆ. ಶೀಘ್ರವೇ ಇದಕ್ಕೆ ಪರಿಹಾರ ಕಲ್ಪಿಸಿ’ ಎಂದು ಮೊದಲ ಬೇಡಿಕೆಯನ್ನು ಇಟ್ಟಿದ್ದು, ನಂತರ ಮತ್ತೊಂದು ಮಹತ್ವದ ಯೋಜನೆ ಬಗ್ಗೆಯೂ ಬರೆದುಕೊಂಡಿದ್ದಾರೆ.

    ಎರಡನೆಯದು ‘ ನೆಲಮಂಗಲ ಫ್ಲೈ ಓವರ್ ಮೇಲಿನ ಹೊರೆತಗ್ಗಿಸಲು ಅಭಿವೃದ್ಧಿಪಡಿಸಲಾಗುತ್ತಿರುವ ಮಾಗಡಿ ರಸ್ತೆ ವಿಚಾರ. ಒಮ್ಮೆ ಈಗಿನ ರಸ್ತೆ ಕಾಮಗಾರಿ ಪೂರ್ತಿಯಾಗಿ ಸಂಚಾರಕ್ಕೆ ಮುಕ್ತಗೊಂಡರೆ, ಅದೇ ರಸ್ತೆಯಲ್ಲಿರುವ ಸುಂಕದಕಟ್ಟಿ ಈಗಿನ ಗೊರಗುಂಟೆ ಪಾಳ್ಯ ಜಂಕ್ಷನಂತೆ ಮುಂದಿನ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆಗಳನ್ನು ಸೃಷ್ಟಿಸುವುದು ಪಕ್ಕಾ. ಆದ್ದರಿಂದ ಈಗಲೇ ಅದಕ್ಕೆ ಪರಿಹಾರ   ಕಂಡುಕೊಳ್ಳುವುದು ಸೂಕ್ತ. ಈ ಎರಡೂ ಯೋಜನೆಗಳು ರಾಜಧಾನಿಯನ್ನು ಬಹುತೇಕ ಕರ್ನಾಟಕಕ್ಕೆ ಸಂಪರ್ಕಿಸುವ ಮತ್ತು  ಕನ್ನಡಿಗರು ಅತೀ ಹೆಚ್ಚು ವಾಸವಿರುವ ಭಾಗಗಳು. ಇವುಗಳ ಅನುಷ್ಠಾನ, ಆ ಭಾಗದ ಕನ್ನಡಿಗರಿಗೆ ನೀವು ನೀಡುವ ಉತ್ತಮ ಕಾಣಿಕೆಯಾಗುತ್ತವೆ’ ಎಂದು ಶಶಾಂಕ್ ಪತ್ರದಲ್ಲಿ ಬರೆದಿದ್ದಾರೆ.

  • ಡಿಕೆಶಿ ಜೊತೆ ಕೊತ್ವಾಲ್ ಮಾತನಾಡುತ್ತಿದ್ದರು: ವೀಕೆಂಡ್ ಶೋನಲ್ಲಿ ಕೊತ್ವಾಲ್ ಮಾತು

    ಡಿಕೆಶಿ ಜೊತೆ ಕೊತ್ವಾಲ್ ಮಾತನಾಡುತ್ತಿದ್ದರು: ವೀಕೆಂಡ್ ಶೋನಲ್ಲಿ ಕೊತ್ವಾಲ್ ಮಾತು

    ಬೆಂಗಳೂರಿನ ಭೂಗತ ದೊರೆ ಎಂದೇ ಬಿಂಬಿತವಾಗಿದ್ದ ಕೊತ್ವಾಲ್ ರಾಮಚಂದ್ರಪ್ಪ (Kotwal Ramachandrappa)ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ (D.K.Shivakumar)ಅವರ ನಡುವೆ ಬಾಂಧವ್ಯವಿತ್ತು. ಡಿಕೆಶಿ ಅವರು ಕೊತ್ವಾಲ್ ಶಿಷ್ಯ ಎಂದು ಹಲವಾರು ಬಾರಿ, ಅನೇಕ ರಾಜಕಾರಣಿಗಳು ಆಡಿದ್ದು ಇದೆ. ಹೀಗಾಗಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ಕುರಿತು ಪ್ರಸ್ತಾಪ ಆಗಬಹುದೆ? ಎನ್ನುವ ಪ್ರಶ್ನೆ ಉದ್ಭವವಾಗಿತ್ತು. ಕೊತ್ವಾಲ್ ಮತ್ತು ಡಿಕೆಶಿ ನಡುವಿನ ಸಂಬಂಧ ಯಾವ ರೀತಿಯದ್ದು ಎನ್ನುವ ಕುತೂಹಲ ಕೂಡ ವ್ಯಕ್ತವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದ ಪರಮೇಶ್ ಎನ್ನುವವರು ಈ ಕುರಿತು ನೆನಪುಗಳನ್ನು ಹೊರಹಾಕಿದರು. ಡಿ.ಕೆ.ಶಿವಕುಮಾರ್ ಬಗ್ಗೆ ಏನೇನೋ ಮಾತಾಡ್ತಾರೆ. ರೌಡಿ ಎಂದೆಲ್ಲ ಹೇಳುತ್ತಾರೆ. ಅದೆಲ್ಲವೂ ಸುಳ್ಳು. ಜನರಲ್ ಹಾಸ್ಟೇಲ್ ನಲ್ಲಿ ಎಲ್.ಎನ್. ಮೂರ್ತಿ ಅವರು ಇರುತ್ತಿದ್ದರು. ನಾವೆಲ್ಲ ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೆವು. ಆಗಾಗ್ಗೆ ಅಲ್ಲಿಗೆ ಕೊತ್ವಾಲ ಕೂಡ ಬರುತ್ತಿದ್ದರು. ಆಗ ಮಾತನಾಡಿಸುತ್ತಿದ್ದರು. ಸ್ವತಃ ಅವರೇ ನಮಗೆ ಹೇಳುವವರು, ನೀವು ನಾಯಕರಾಗುವವರು, ನಮ್ಮಂಥವರೊಟ್ಟಿಗೆ ಕಾಣಿಸಿಕೊಳ್ಳಬೇಡಿ ಎನ್ನುತ್ತಿದ್ದರು’ ಎಂದು ಹೇಳಿದ್ದಾರೆ.

    ಡಿ.ಕೆ. ಶಿವಕುಮಾರ್ ಹತ್ತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಆಹಾರ ಕ್ರಮ ಮತ್ತು ತಮಗಿಷ್ಟವಾದ ಊಟದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಡಿಕೆಶಿ ಇದೀಗ ಅಪ್ಪಟ ಸಸ್ಯಹಾರಿಯಂತೆ. ಜೈಲಿನಿಂದ ಬಂದ ನಂತರ ನಾನ್ ವೆಜ್ ತ್ಯೆಜಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ ತಿಳಿಸಿದ್ದಾರೆ.  ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಶಿಕ್ಷಣ ಮತ್ತು ರಾಜಕಾರಣದ ಬಗ್ಗೆಯೂ ಅವರು ಮಾತನಾಡಿದ್ದು, ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಈ ಶನಿವಾರ- ಭಾನುವಾರ ಪ್ರಸಾರವಾದರೆ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ  ಈ ಸೀಸನ್ ಮುಗಿಯಲಿದೆ.

     

    ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ.  ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

  • ಸಿದ್ದು, ಡಿಕೆಶಿಯನ್ನು ತೆಗಳಿ, ಖರ್ಗೆ, ಹರಿಪ್ರಸಾದ್‌ರನ್ನು ಹೊಗಳಿದ  ಈಶ್ವರಪ್ಪ

    ಸಿದ್ದು, ಡಿಕೆಶಿಯನ್ನು ತೆಗಳಿ, ಖರ್ಗೆ, ಹರಿಪ್ರಸಾದ್‌ರನ್ನು ಹೊಗಳಿದ ಈಶ್ವರಪ್ಪ

    ಮೈಸೂರು: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಸೇರಿ ಕಾಂಗ್ರೆಸ್‍ಗೆ ಜಾತಿಯ ಕೆಸರು ಅಂಟಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ

    ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತಸಾಗರ ಹರಿದು ಬರುತ್ತಿದೆ. ಈ ನಡುವೆ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಸೇರಿ ಕಾಂಗ್ರೆಸ್‍ಗೆ ಜಾತಿ ಪಟ್ಟ ಅಂಟಿಸಿದ್ದಾರೆ. ಡಿ.ಕೆ.ಶಿವಕುಮಾರ್ ಒಬ್ಬ ಒಳ್ಳೆಯ ನಾಯಕ ಅಂದುಕೊಂಡಿದೆ. ತಾನು ಸಿಎಂ ಆಗಲು ತನ್ನ ಸಮುದಾಯ ತನ್ನ ಬೆನ್ನಿಗೆ ಬರಬೇಕು ಎಂದು ಹೇಳುವ ಮೂಲಕ ಡಿಕೆಶಿ ಜಾತಿವಾದಿ ಆಗಿದ್ದಾರೆ. ಸಿದ್ದರಾಮಯ್ಯ ಕುರುಬರ ನಾಯಕ ಎಂದು ಹೇಳುವ ಮೂಲಕ ಅವರು ಸಹ ಜಾತಿವಾದಿಯಾಗಿದ್ದಾರೆ. ಇವರಿಬ್ಬರು ಸೇರಿ ಕಾಂಗ್ರೆಸ್‍ಗೆ ಜಾತಿಯ ಕೆಸರು ಅಂಟಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಹರಿಪ್ರಸಾದ್ ಈ ವಿಚಾರದಲ್ಲಿನ ಹೇಳಿಕೆಗಳಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.. ಅವರಿಬ್ಬರು ಮಾತ್ರ ಕಾಂಗ್ರೆಸ್ ಗೌರವ ತರುವ ಮಾತನಾಡಿದ್ದಾರೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಈ ಏರಿಯಾದಲ್ಲಿ ಗಂಡಿಗೆ ಹೆಣ್ಣು, ಹೆಣ್ಣಿಗೆ ಗಂಡು ಸಿಕ್ತಿಲ್ಲ

    ಮೂರು ತಲೆಮಾರಿಗೆ ಆಗುವಷ್ಟು ಹಣ ಸಂಪಾದಿಸಿದ್ದೇವೆ ಎಂಬ ರಮೇಶ್ ಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಭ್ರಷ್ಟತನ ಬಯಲಾಗಿದೆ. ರಮೇಶ್ ಕುಮಾರ್ ಸತ್ಯವನ್ನೇ ಹೇಳಿದ್ದಾರೆ. ಇಂತಹ ಕಾಂಗ್ರೆಸ್ ನಮ್ಮ ಸರ್ಕಾರ ಮೇಲೆ 40% ಲಂಚದ ಆರೋಪ ಮಾಡುತ್ತದೆ. ನಮ್ಮ ಸರ್ಕಾರದ ಯಾವ ಸಚಿವರು ಮೇಲೂ ಒಂದೇ ಒಂದು ಲಂಚದ ನಿರ್ದಿಷ್ಟ ಪ್ರಕರಣ ಇಲ್ಲ. 40% ಆರೋಪ ಮಾಡುವ ಕಾಂಗ್ರೆಸ್ ಒಂದೇ ಒಂದು ಕೇಸ್ ಎತ್ತಿ ತೋರಿಸಲಿ. ಯಾರೋ ಹೇಳಿದ ಹೇಳಿಕೆ ಹಿಡಿದುಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜಕೀಯ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಬಿ ರಿಪೋರ್ಟ್ ವಿಚಾರವಾಗಿ ಮಾತನಾಡಿದ ಅವರು, ನನಗೆ ಮೊದಲ ದಿನವೇ ಈ ಪ್ರಕರಣದಿಂದ ಆರೋಪ ಮುಕ್ತನಾಗಿ ಬರುತ್ತೇನೆಂದು ಗೊತ್ತಿತ್ತು. ನಾನು ಈ ಪ್ರಕರಣದಲ್ಲಿ ಯಾವ ತಪ್ಪು ಮಾಡಿಲ್ಲ. ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ಕೊಟ್ಟಿದೆ. ತನಿಖೆ ಮೂಲಕ ಈಗ ಸಂಪೂರ್ಣ ಆರೋಪ ಮುಕ್ತನಾಗಿದ್ದೇನೆ. ಪ್ರಕರಣದಿಂದ ಪಕ್ಷಕ್ಕೆ ಇದ್ದ ಮುಜುಗರ ನಿವಾರಣೆಯಾಗಿದೆ. ಬಿ ರಿಪೋರ್ಟ್ ಆದರೂ ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿರುವುದು ಬೇಸರ ತರಿಸಿದೆ. ಸಿಎಂ ಆಗಿದ್ದ ಸಿದ್ದರಾಮಯ್ಯನವರಿಗೆ ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತದೆ ಎಂದು ಗೊತ್ತಿದ್ದರು ಬಿ ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದು ಬೇಸರ ಮೂಡಿಸಿದೆ. ಸಿದ್ದರಾಮಯ್ಯ ಕಾನೂನು ಪಂಡಿತರ ಆಗಿದ್ದಾರೆ. ಸುಮ್ಮನೆ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    Live Tv
    [brid partner=56869869 player=32851 video=960834 autoplay=true]

  • ಡಿಕೆಶಿಗೆ ಕೆಪಿಸಿಸಿ ಪಟ್ಟ – ತಾಯಿ ಗೌರಮ್ಮರಿಂದ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ

    ಡಿಕೆಶಿಗೆ ಕೆಪಿಸಿಸಿ ಪಟ್ಟ – ತಾಯಿ ಗೌರಮ್ಮರಿಂದ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ

    ರಾಮನಗರ: ಮಾಜಿ ಸಚಿವ, ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಡಿಕೆಶಿ ಬೆಂಬಲಿಗರಲ್ಲಿ ಸಂತೋಷ ಮನೆ ಮಾಡಿದರೆ, ಇತ್ತ ಡಿಕೆಶಿ ತಾಯಿ ಗೌರಮ್ಮ ಶಕ್ತಿದೇವತೆ ಕಬ್ಬಾಳಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿನ ಶಕ್ತಿದೇವತೆ ಕಬ್ಬಾಳಮ್ಮ ದೇವಿಗೆ ಡಿಕೆಶಿ ತಾಯಿ ಗೌರಮ್ಮ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಹೆಚ್ಚು ನಂಬಿರುವ ಕಬ್ಬಾಳಮ್ಮ ದೇವಿಗೆ ತಮ್ಮ ಕುಟುಂಬದಲ್ಲಿ ಏನೇ ವಿಶೇಷವಿದ್ದರೂ ಸಹ ಡಿಕೆಶಿ ಕುಟುಂಬದವರು ಪೂಜೆ ಸಲ್ಲಿಸುತ್ತಲೇ ಬಂದಿದ್ದಾರೆ. ಇದೀಗ ತಮ್ಮ ಮಗ ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ ಒಲಿಯುತ್ತಿರುವ ಹಿನ್ನೆಲೆಯಲ್ಲಿ ಗೌರಮ್ಮನವರು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ತಮ್ಮ ಮಕ್ಕಳ ಹೆಸರಿನಲ್ಲಿ ಅರ್ಚನೆ ಮಾಡಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಡಿಕೆಶಿ ಸಹ ಯಾವುದೇ ಕಾರ್ಯ ಮಾಡಬೇಕಿದ್ರೂ ಸಹ ಈ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಕೆ ದಿನ, ಚುನಾವಣೆ ಫಲಿತಾಂಶ, ಅಧಿಕಾರ ಸ್ವೀಕಾರ ಪಡೆಯುವ ವೇಳೆಯಲ್ಲಿ ಅಲ್ಲದೇ ಕಳೆದ ವರ್ಷ ತಿಹಾರ್ ಜೈಲಿನಿಂದ ಹೊರಬಂದ ಸಂದರ್ಭದಲ್ಲಿಯೂ ಸಹ ಪೂಜೆ ಸಲ್ಲಿಸಿದ್ದರು.

  • ಕನಕಪುರದ ಬಂಡೆಗೆ ಡೈನಾಮೈಟ್ ಪ್ರಶ್ನೆಗಳು-ಮತ್ತೋರ್ವ ವ್ಯಕ್ತಿಗೆ ಇಡಿ ಸಮನ್ಸ್

    ಕನಕಪುರದ ಬಂಡೆಗೆ ಡೈನಾಮೈಟ್ ಪ್ರಶ್ನೆಗಳು-ಮತ್ತೋರ್ವ ವ್ಯಕ್ತಿಗೆ ಇಡಿ ಸಮನ್ಸ್

    -ಕ್ರಾಸ್ ಚೆಕ್ಕಿಂಗ್ ನಲ್ಲಿ ಸಿಕ್ಕಿ ಹಾಕಿಕೊಳ್ತಾರಾ ಡಿಕೆಶಿ?

    ನವದೆಹಲಿ: ಕನಕಪುರದ ಬಂಡೆ , ಟ್ರಬಲ್ ಶೂಟರ್, ಹಂಟರ್ ಅಂತೆಲ್ಲ ಬಿರುದು ಪಡೆದುಕೊಂಡಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅಕ್ಷರ ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಇಡಿ ಅಧಿಕಾರಿಗಳ ವಿಚಾರಣೆ ಸ್ಟೈಲ್ ಗೆ ಬೆಸ್ತು ಬಿದ್ದಿದ್ದಾರೆ. ಇಡಿ ಅಧಿಕಾರಿಗಳು ಕೇಳುತ್ತಿರುವ ಡೈನಾಮೈಟ್ ನಂತಹ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಕನಕಪುರದ ಬಂಡೆ ಶೇಕ್ ಆಗುತ್ತಿದೆ ಎನ್ನಲಾಗುತ್ತಿದೆ.

    ಕಳೆದ ಶುಕ್ರವಾರ ಮತ್ತು ಶನಿವಾರ ವಿಚಾರಣೆ ನಡೆಸಿದ್ದ ಇಡಿ ಹಬ್ಬದ ದಿನವಾದ ಸೋಮವಾರ ಕೂಡಾ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿತ್ತು. ಗಣೇಶ ಚತುರ್ಥಿ ಲೆಕ್ಕಿಸದೇ ಹಿರಿಯರಿಗೆ ಎಡೆ ಇಡಬೇಕು ಅನ್ನೋ ಡಿಕೆ ಶಿವಕುಮಾರ್ ಭಾವನಾತ್ಮಕ ಮನವಿಗೂ ಬಗ್ಗದೇ ನಿನ್ನೆ ಇಡೀ ದಿನಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬೆಳಗ್ಗೆ ಕಣ್ಣೀರು ಹಾಕುತ್ತಲೇ ವಿಚಾರಣೆಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಇಂದು ವಿಚಾರಣೆಗಿಂದು ಮುಕ್ತಿ ಸಿಗಬಹುದು ಎಂದು ನಿರೀಕ್ಷೆ ಮಾಡಿದರು. ಆದರೆ ಡಿಕೆಶಿ ನೀರಿಕ್ಷೆ ಹುಸಿಯಾಗಿದ್ದು ನಿನ್ನೆ ಇಡಿ ಡ್ರಿಲ್ ಮಾಡಿ ಮತ್ತೆ ಇಂದು ಕೂಡಾ ಬೆಳಗ್ಗೆ ಹನ್ನೊಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

    ಡಿಕೆಶಿಗೆ ಮತ್ತೊಂದು ಶಾಕ್: ಕನಕಪುರದ ಬಂಡೆ ಮುಂದೆ ಇಡಿ ಅಧಿಕಾರಿಗಳು ಇಡುತ್ತಿರುವ ಡೈನಾಮೈಟ್ ನಂತಹ ಪ್ರಶ್ನೆಗಳಿಗೆ ಡಿಕೆ ಬೆಚ್ಚಿ ಬೀಳುತ್ತಿದ್ದಾರೆ. ಈ ಶಾಕ್ ನಡುವೆ ಡಿಕೆಶಿ ಇಂದು ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಕರಣದ ಮತ್ತೊಬ್ಬ ಆರೋಪಿಗೆ ಇಡಿ ಸಮನ್ಸ್ ನೀಡಿದೆ ಎನ್ನಲಾಗಿದೆ. ಆದರೆ ಯಾರಿಗೆ ಸಮನ್ಸ್ ನೀಡಿದೆ ಎಂದು ಇಡಿ ಗುಟ್ಟು ಬಿಟ್ಟುಕೊಟ್ಟಿಲ್ಲ.

    ದೆಹಲಿಯ ನಿವಾಸದಲ್ಲಿ ಸಿಕ್ಕ ಹಣಕ್ಕೂ ಡಿಕೆಶಿಗೂ ಆ ವ್ಯಕ್ತಿಗೂ ಸಂಬಂಧ ಇದೆ ಎನ್ನಲಾಗಿದ್ದು, ಆ ವ್ಯಕ್ತಿ ವಿಚಾರಣೆ ಹಾಜರಾದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ. ಪರಸ್ಪರ ಇಬ್ಬರು ಆರೋಪಿಗಳನ್ನು ಎದುರು ಬದರು ಕೂರಿಸಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದು, ಎಂಟೂವರೆ ಕೋಟಿ ಹಣ ಬುಡಕ್ಕೆ ಇಡಿ ಅಧಿಕಾರಿಗಳು ಕೈ ಹಾಕಲಿದ್ದಾರಂತೆ. ಹಾಗಾಗಿ ಈ ಪ್ರಕರಣ ನಾಲ್ಕು ದಿನದಲ್ಲ ಎಂಟು ದಿನವೂ ವಿಚಾರಣೆ ನಡೆಯಬಹುದು ಇಡಿ ಮೂಲಗಳಿಂದ ತಿಳಿದು ಬಂದಿದೆ.

    ತನ್ನ ಮೂಲಗಳಿಂದ ಮಾಹಿತಿ ಸಂಗ್ರಹಿಸಿರುವ ಇಡಿ ಅಧಿಕಾರಿಗಳು ಡಿಕೆಶಿಯಿಂದ ಕಳೆದ ಮೂರು ದಿನಗಳಿಂದ ಹೇಳಿಕೆ ಪಡೆದುಕೊಂಡಿದೆ. ಈ ಹೇಳಿಕೆಗೂ ದಾಖಲೆಗೂ ಮ್ಯಾಚ್ ಮಾಡಲಿದ್ದು ಇಂದು ಮತ್ತಷ್ಟು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಇಡಿ ಕ್ರಾಸ್ ಚೆಕ್ಕಿಂಗ್ ವೇಳೆ ಸಿಕ್ಕಿಹಾಕಿಕೊಳ್ಳಬಹುದು ಒಂದಿಷ್ಟು ಸಾಕ್ಷಿ ಸಿಗಬಹುದು ಎಂದು ಇಡಿ ಪ್ರಯತ್ನ ಮಾಡ್ತಿದೆ ಎನ್ನಲಾಗಿದೆ.

    ಇಡಿ ಅಧಿಕಾರಿಗಳ ಸೈಲೆಂಟ್ ಕಿಲ್ಲಿಂಗ್ ಸ್ಟೈಲ್:
    ಮೂರು ದಿನಗಳಿಂದ ಬರೋಬ್ಬರಿ 23 ಗಂಟೆ ವಶದಲ್ಲಿಟ್ಟುಕೊಂಡಿದ್ದ ಇಡಿ ಅಧಿಕಾರಿಗಳು ಕೇವಲ ದಿನಕ್ಕೆ ಎರಡು ಮೂರು ಗಂಟೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಬಾಕಿ ಸಮಯದಲ್ಲಿ ಸಿಂಗಲ್ ರೂಂ ನಲ್ಲಿ ಕನಕಪುರದ ಬಂಡೆಯನ್ನು ಕೂರಿಸುತ್ತಿದ್ದು ಸದಾ ಕಾರ್ಯಕರ್ತರ ಮಧ್ಯ ಇದ್ದ ಡಿಕೆಗೆ ಇಡಿ ಸೈಲೆಂಟ್ ಕಿಲ್ಲಿಂಗ್ ಸ್ಟೈಲ್ ಫಾಲೋ ಮಾಡುತ್ತಿದೆ. ನಿರಂತರವಾಗಿ ಶಿವಕುಮಾರ್ ನ್ನ ಒಂಟಿಯಾಗಿಸಿ ಅವರನ್ನ ಮಾನಸಿಕವಾಗಿ ಕುಗ್ಗಿಸಿ ಉತ್ತರ ಪಡೆಯುವ ಪ್ರಯತ್ನ ಮಾಡ್ತಿದ್ದೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಯಾವ ಪ್ಲಾನ್ ಕೂಡಾ ವಕೌರ್ಟ್ ಆಗ್ತಿಲ್ಲ ಎನ್ನಲಾಗಿದ್ದು, ಕೇಳಿದಕ್ಕೆ ಉತ್ತರಿಸಿ ಬಾಕಿ ಟೈಂ ನಲ್ಲಿ ಡಿಕೆ ಸೈಲೆಂಟ್ ಮೂಡ್ ಗೆ ಹೋಗ್ತಿದ್ದಾರಂತೆ. ಆದರೆ ಡಿಕೆ ಸ್ಟೈಲ್ ಗೆ ಜಗ್ಗದ ಅಧಿಕಾರಿಗಳ ನಿರಂತರ ವಿಚಾರಣೆ ಒಳಪಡಿಸುವ ಕೆಲಸ ಮಾಡುತ್ತಿದ್ದಾರೆ.

    ಒಂದು ಕಡೆ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ವಿಚಾರಣೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಕಾರ್ಯಕರ್ತರ ದಂಡು ಡಿಕೆ ನೋಡಲು ಬರುತ್ತಿದೆ. ನೆಚ್ಚಿನ ನಾಯಕ ಸಂಕಷ್ಟ ಬೇಗ ನಿವಾರಣೆ ಆಗಲಿ ಅಂತಾ ಹಾರೈಸುತ್ತಿದ್ದಾರೆ.