ಕನ್ನಡದ ನಟರಾಕ್ಷಸ ಡಾಲಿ ಧನಂಜಯ (Daali Dhananjay) ಸದ್ಯ ನಟ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲ ಪರಭಾಷೆಯ ಸಿನಿಮಾಗಳಲ್ಲಿ ಕೂಡ ಕಾಣಿಸಿಕೊಳ್ತಿದ್ದಾರೆ. ಸಂದರ್ಶನವೊಂದರಲ್ಲಿ ತಮಿಳು ನಟ ಸೂರ್ಯ (Suriya) ಸಿನಿಮಾಗೆ ಆಫರ್ ಬಂದಿದ್ದರ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರವನ್ನು ಕೈಬಿಟ್ಟಿದ್ದೇಕೆ ಎಂದು ಡಾಲಿ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಅಜಿತ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್- ‘ಕೆಜಿಎಫ್ 3’ಗೆ ಕನೆಕ್ಟ್ ಆಗಲಿದೆ ಈ ಚಿತ್ರ
ಡೈರೆಕ್ಟರ್ ಕಾರ್ತಿಕ್ ಸುಬ್ಬರಾಜು ಅವರು ಸೂರ್ಯ 44ನೇ (Suriya 44) ಸಿನಿಮಾದಲ್ಲಿ ನಟಿಸೋಕೆ ಹೇಳಿದರು. ಆದರೆ, ಡೇಟ್ಸ್ ಮ್ಯಾನೇಜ್ ಮಾಡೋಕೆ ಆಗಿಲ್ಲ. ನನಗೆ ಆ ಸಿನಿಮಾ ಮಾಡಬೇಕಿತ್ತು. ಸೂರ್ಯ ಹಾಗೂ ಕಾರ್ತಿಕ್ ಸುಬ್ಬರಾಜು ಜೊತೆ ಕೆಲಸ ಮಾಡಬೇಕು ಎನ್ನುವ ಹಂಬಲ ಇತ್ತು. ಡೇಟ್ಸ್ ಹೊಂದಾಣಿಕೆ ಆಗದೇ ಮಾಡಲು ಆಗಿಲ್ಲ ಎಂದು ಡಾಲಿ ಧನಂಜಯ ಹೇಳಿದ್ದಾರೆ. ನನಗೆ ದೊಡ್ಡ ಸ್ಟಾರ್‌ಗಳ ಜೊತೆ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ ಮಾಡುವ ಆಸಕ್ತಿಯಿದೆ ಎಂದಿದ್ದಾರೆ.
ಅಂದಹಾಗೆ, ಸೂರ್ಯ ಮತ್ತು ಸುಬ್ಬರಾಜು ಕಾಂಬಿನೇಷನ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗ್ಯಾಂಗ್‌ಸ್ಟರ್ ಅವತಾರದಲ್ಲಿ ಸೂರ್ಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಮೊದಲ ಝಲಕ್‌ಗೆ ಫ್ಯಾನ್ಸ್ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ.
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅಜ್ಜಿ ಮಲ್ಲಮ್ಮ (Mallamma) ಅವರು 95ನೇ ವಯಸ್ಸಿಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಜ್ಜಿ ಮಲ್ಲಮ್ಮಗೆ 5 ಜನ ಮಕ್ಕಳಿದ್ದರು. ಅದರಲ್ಲಿ ಡಾಲಿ ಅವರ ತಂದೆ ಅಡವಿಸ್ವಾಮಿ ಎರಡನೇಯವರಾಗಿದ್ದಾರೆ. ಇದೀಗ ವಯೋಸಹಜ ಕಾಯಿಲೆಯಿಂದ ಮಲ್ಲಮ್ಮ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇದನ್ನೂ ಓದಿ:ಡಿಕೆಶಿ ಭೇಟಿಯಾದ ವಿಜಯಲಕ್ಷ್ಮಿ ದರ್ಶನ್
ಅಂದಹಾಗೆ, ಅಜ್ಜಿ ಜೊತೆ ಡಾಲಿ ಅಟ್ಯಾಚ್ ಆಗಿದ್ದರು. ಇನ್ನೂ ‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರಲ್ಲಿ ಮಲ್ಲಮ್ಮ ಕೂಡ ಬಂದಿದ್ದರು. ಆಗ ಮೊಮ್ಮಗ ಡಾಲಿಯ ಮದುವೆ ಬಗ್ಗೆ ಮಾತನಾಡಿದ್ದರು. ಧನಂಜಯಗೆ ಬೇಗ ಮದುವೆ ಮಾಡಿಸಬೇಕು ಎಂದು ಅಜ್ಜಿ ಹೇಳಿದ್ದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಖ್ಯಾತ ನಟ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದ ಕುರಿತು ಸ್ಯಾಂಡಲ್‌ವುಡ್ ನಟ, ನಟಿಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸದ್ಯ ಡಾಲಿ ಧನಂಜಯ (Dali Dhananjay) ಪ್ರತಿಕ್ರಿಯೆ ನೀಡಿದ್ದು, ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ. ತಪ್ಪು ಮಾಡಿದ್ರೆ ಖಂಡಿತಾ ಶಿಕ್ಷೆಯಾಗಲಿ ಎಂದಿದ್ದಾರೆ.
ದರ್ಶನ್ ಪ್ರಕರಣದ ಕುರಿತು ಡಾಲಿ ಮಾತನಾಡಿ, ಅಲ್ಲಿ ಒಂದು ದುರಂತ ಆಗಿದೆ. ಜೀವ ಹೋಗಿದೆ. ಆ ವ್ಯಕ್ತಿಯ ಪೋಷಕರು ಮತ್ತು ಹೆಂಡತಿನಾ ನೋಡಿದಾಗ ಬೇಜರಾಗುತ್ತದೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಆ ಜೀವಕ್ಕೆ ಏನು ನ್ಯಾಯ ಸಿಗಬೇಕೋ, ಆ ನ್ಯಾಯ ಸಿಗಲೇಬೇಕು. ಹಾಗೆಯೇ ಆರೋಪಿ ಸ್ಥಾನದಲ್ಲಿರುವವರು ನಮ್ಮವರೇ ಆಗಿದ್ದಾಗ ನಿಜಕ್ಕೂ ಬೇಜಾರಾಗುತ್ತೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಶ್ರೀಲಂಕಾದಲ್ಲಿ ವಿಜಯ್ ದೇವರಕೊಂಡ- ಅಭಿಮಾನಿಗಳಿಂದ ಸರ್ಪ್ರೈಸ್
ಈ ಸುದ್ದಿ ಕೇಳಿದಾಗ ಶಾಕ್ ಆಯ್ತು. ಈ ಪ್ರಕರಣದಲ್ಲಿ ನಾವು ಪ್ರೀತಿಸಿದ ವ್ಯಕ್ತಿಯ ಹೆಸರು ಬಂದಾಗ ಬೇಜಾರಾಯಿತು. ಇಲ್ಲಿ ಯಾವುದನ್ನು ನಾವು ಸಮರ್ಥನೆ ಮಾಡಿಕೊಳ್ಳೋಕೆ ಆಗಲ್ಲ. ಎಲ್ಲದಕ್ಕೂ ಇಲ್ಲಿ ಕಾನೂನು ಇದೆ. ಅದಕ್ಕಿಂತ ದೊಡ್ಡವರು ಯಾರು ಇಲ್ಲ. ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ. ತಪ್ಪು ಮಾಡಿದ್ರೆ ಖಂಡಿತಾ ಶಿಕ್ಷೆಯಾಗಲಿ. ಅಲ್ಲಿ ನಿಜಕ್ಕೂ ಏನು ಆಗಿದೆ ನಮಗೆ ಗೊತ್ತಿಲ್ಲ. ಕೆಲವೊಂದನ್ನು ನಾವು ಒಂಟಿಯಾಗಿಯೇ ಫೈಟ್ ಮಾಡಬೇಕಾಗುತ್ತದೆ ಎಂದು ಡಾಲಿ ಧನಂಜಯ ಮಾತನಾಡಿದ್ದಾರೆ.
ಅಲ್ಲಿ ಏನು ಆಗಿದೆ ನಾವು ಸಮರ್ಥನೆ ಮಾಡೋಕೆ ಆಗಲ್ಲ. ಜಾಸ್ತಿ ಅಂದರೆ ನಾವು ಖಂಡಿಸಬಹುದು ಅಷ್ಟೇ. ಬದುಕು ಅವಕಾಶಗಳನ್ನು ಕೊಟ್ಟೇ ಕೊಡುತ್ತೆ. ಆ ಘಟನೆಗಳಿಂದ ದೂರ ಇದ್ದು, ಮತ್ತೆ ಪ್ರೇಕ್ಷಕರನ್ನು ರಂಜಿಸಲಿ ಎಂದು ದರ್ಶನ್ ಕುರಿತು ಡಾಲಿ ಮಾತನಾಡಿದ್ದಾರೆ.
ಬಹುನಿರೀಕ್ಷಿತ ಐತಿಹಾಸಿಕ ಚಿತ್ರ ‘ನಾಡಪ್ರಭು ಕೆಂಪೇಗೌಡ’ (Nadaprabhu Kempegowda Film) ಇದೀಗ ತನ್ನ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡುತ್ತಿದೆ. ಡಾಲಿ ಧನಂಜಯ (Daali Dhananjay) ಈಗ ಕೆಂಪೇಗೌಡ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್
ಮೇರು ಯೋಧ ಮತ್ತು ಬೆಂಗಳೂರಿನ ಕಾರಣಿಕ, ಕೆಂಪೇಗೌಡರ ಜೀವನ ಚರಿತ್ರೆಯನ್ನು ಹೇಳುವ ಕಥೆ ನಾಡಪ್ರಭು ಕೆಂಪೇಗೌಡ (Nadaprabhu Kempegowda) ಆಗಿದ್ದು, ಇದನ್ನು ಖ್ಯಾತ ನಿರ್ದೇಶಕ ಡಾ.ಟಿ.ಎಸ್.ನಾಗಾಭರಣ (T.S Nagabharana) ನಿರ್ದೇಶಿಸಲಿದ್ದಾರೆ. ಈ ಚಿತ್ರದಲ್ಲಿ ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್‌ನಲ್ಲಿ, ಧನಂಜಯ ಅವರ ಐತಿಹಾಸಿಕ ಲುಕ್ ಎಲ್ಲರ ಗಮನ ಸೆಳೆದಿದೆ.
ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಈ ಚಿತ್ರವನ್ನು ಡಾ.ಎಂ.ಎನ್.ಶಿವರುದ್ರಪ್ಪ ಮತ್ತು ಶುಭಂ ಗುಂಡಲ ಈಶ್ವರ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.
ಬಂಗಾರದ ಜಿಂಕೆ, ಜನುಮದ ಜೋಡಿ, ಕಲ್ಲರಳಿ ಹೂವಾಗಿ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳನ್ನು ನೀಡಿದ ಮೇರು ನಿರ್ದೇಶಕ ಡಾ.ಟಿ.ಎಸ್ ನಾಗಾಭರಣ ಅವರ ಎರಡು ದಶಕಗಳ ಕನಸಿನ ಕೂಸಾದ ‘ನಾಡಪ್ರಭು ಕೆಂಪೇಗೌಡ’, ಕನ್ನಡ ಚಿತ್ರರಂಗದಲ್ಲಿ ಬಹಳಷ್ಟು ಸದ್ದು ಮಾಡಿರುವ ಜೀವನ ಚರಿತ್ರೆಯ ಕಥನವಾಗಿದೆ.
ಹಲವಾರು ವರ್ಷಗಳ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳಲು ಹೊರಟಿರುವ ನಾಗಾಭರಣಗೆ ಈ ಚಿತ್ರವು ಕಮ್ ಬ್ಯಾಕ್ ಆಗಲಿದೆ.
ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೋಟಿ’ (Kotee Film) ಸಿನಿಮಾ ಅಬ್ಬರ ಇಂದಿನಿಂದ ಶುರುವಾಗಿದೆ. ‘ಕೋಟಿ’ ಎಂಬ ಮಿಡಲ್ ಕ್ಲಾಸ್ ಹುಡುಗ ನಿಷ್ಠೆಯಿಂದ ಕೋಟಿ ರೂಪಾಯಿ ಗಳಿಸಬೇಕು ಎಂಬ ಗುರಿ ಇಟ್ಟುಕೊಂಡಿರುತ್ತಾನೆ. ಆ ಕನಸಿನ ಹಾದಿಯಲ್ಲಿ ಬರುವ ಸವಾಲುಗಳು ಹೇಗಿರುತ್ತದೆ ಎಂಬುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ. ಆದರೆ ಚಿತ್ರದ ಇಂಟ್ರಸ್ಟಿಂಗ್ ವಿಚಾರಗಳನ್ನು ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ (HR Ranganath) ಜೊತೆ ನಟರಾಕ್ಷಸ ಡಾಲಿ ಹಂಚಿಕೊಂಡಿದ್ದಾರೆ. ‘ಕೋಟಿ’ ಕನಸುಗಳನ್ನು ಡಾಲಿ ಬಿಚ್ಚಿಟ್ಟಿದ್ದಾರೆ.
‘ಕೋಟಿ’ ಸಿನಿಮಾ ಒಪ್ಪಿಕೊಳ್ಳೋಕೆ ಕಾರಣ ಏನು ಎಂಬುದನ್ನು ಡಾಲಿ ಮುಕ್ತವಾಗಿ ಮಾತನಾಡಿದ್ದಾರೆ. ಪರಮ್ ಅವರು ನನಗೆ ‘ಬಡವ ರಾಸ್ಕಲ್’ ಸಿನಿಮಾ ಸಮಯದಲ್ಲಿ ಪರಿಚಯ ಆಗಿದ್ದು, ತುಂಬಾ ಹತ್ತಿರದಿಂದ ನೋಡಿದ್ದೇನೆ. ನಮ್ಮೀಬ್ಬರಿಗೂ ಒಳ್ಳೆಯ ಕನೆಕ್ಷನ್ ಇತ್ತು. ಅವರು ಕಥೆ ಹೇಳಿದಾಗ ನನಗೆ ತುಂಬಾ ಕ್ಯೂರಿಯಾಸಿಟಿ ಇತ್ತು. ಇವರು ಕಿರುತೆರೆಯಲ್ಲಿ ಕೆಲಸ ಮಾಡಿದವರು. ಸಿನಿಮಾಗೆ ಹೇಗೆ ಬರೆದಿರುತ್ತಾರೆ ಏನೋ ಅಂತ ಭಾವಿಸಿದ್ದೆ, ಆದರೆ ಪರಮ್ ಕಥೆ ಹೇಳಿದಾಗ ಇಲ್ಲ ಅನ್ನೋಕೆ ಮನಸ್ಸು ಬರಲಿಲ್ಲ. ಈ ಕಥೆ ನನಗೆ ಕಾಡ್ತಾ ಇತ್ತು ಎಂದು ಡಾಲಿ ಮಾತನಾಡಿದರು. ಇದನ್ನೂ ಓದಿ:ಇಂದಿನಿಂದ ಡಾಲಿ ನಟನೆಯ ‘ಕೋಟಿ’ ಸಿನಿಮಾ ಅಬ್ಬರ
ನೀವು ಫ್ರೆಂಡ್‌ಶಿಪ್‌ಗಾಗಿ ಸಿನಿಮಾ ಓಕೆ ಹೇಳಬೇಡಿ. ಚೆನ್ನಾಗಿಲ್ಲ ಅಂದರೆ ಚೆನ್ನಾಗಿಲ್ಲ ಅಂತಲೇ ಹೇಳಿ ಎಂದಿದ್ದರು. ಅವರು ಸಖತ್ ಆಗಿಯೇ ಕಥೆ ಬರೆದಿದ್ದರು. ಒಂದು ಚಾನಲ್ ಕಟ್ಟಿ ಅಷ್ಟು ಸಕ್ಸಸ್ ಕಂಡಿರೋರು. ಒಂದು ಸಿನಿಮಾಗೆ ಕಥೆ ಕಟ್ಟುವ ತಾಕತ್ತು ಇದೆ ಎನ್ನುವ ನಂಬಿಕೆ ನನಗಿತ್ತು ಹಾಗಾಗಿ ಕೋಟಿ ಸಿನಿಮಾ ಮಾಡಲು ಒಪ್ಪಿಕೊಂಡೆ ಎಂದು ಡಾಲಿ ಮಾತನಾಡಿದರು. ಕೋಟಿ ಸಿನಿಮಾ ನಿಜಕ್ಕೂ ವರ್ಕೌಟ್ ಆಗಿದೆ. ಜನರಿಗೆ ಇಷ್ಟವಾಗುತ್ತೆ ಎನ್ನುವ ಭರವಸೆ ಇದೆ ಎಂದು ಮಾತನಾಡಿದರು.
ಅಂದಹಾಗೆ, ‘ಕೋಟಿ’ (Kotee Film) ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ (Daali Dhananjay) ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ (Moksha Kushal) ನಟಿಸಿದ್ದಾರೆ. ಖಳನಾಯಕನಾಗಿ ರಮೇಶ್ ಇಂದಿರಾ ಅಬ್ಬರಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜೊತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
‘ಕೋಟಿ’ ಚಿತ್ರದಲ್ಲಿ ಐದು ಹಾಡುಗಳಿದ್ದು, ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು’ 777 ಚಾರ್ಲಿ’ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ.
ಡಾಲಿ ಧನಂಜಯ (Daali Dhananjay) ಅಭಿನಯದ ‘ಕೋಟಿ’ (Kotee Film) ಸಿನಿಮಾದ ಪ್ರೀಮಿಯರ್ ಶೋ ಓರಾಯನ್ ಮಾಲ್‌ನಲ್ಲಿ ಜೂನ್ 12ರ ಸಂಜೆ ಅದ್ಧೂರಿಯಾಗಿ ನಡೆಯಿತು. ಇಡೀ ಟಿವಿ ಮತ್ತು ಚಿತ್ರರಂಗವೇ ಸಿನಿಮಾ ನೋಡಲು ಆಗಮಿಸಿತ್ತು. ಇದಕ್ಕೆ ಕಾರಣ ಚಿತ್ರದ ನಿರ್ದೇಶಕ ಪರಮ್. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲೆಸಿದ್ದ ಇವರಿಗೆ ಕಿರುತೆರೆ ಮತ್ತು ಹಿರಿತೆರೆ ಎಲ್ಲೆಡೆ ಸ್ನೇಹಿತರಿದ್ದಾರೆ. ತಾರೆಗಳಿಗಾಗಿಯೇ ಎರಡು ಪ್ರೀಮಿಯರ್ ಶೋಗಳನ್ನು ಆಯೋಜಿಸಿದ್ದೆ ಇದಕ್ಕೆ ಸಾಕ್ಷಿ. ಸಾರ್ವಜನಿಕರಿಗೆ ಪೇಯ್ಡ್ ಪ್ರೀಮಿಯರ್ ಸೇರಿ ಓರಾಯನ್‌ನ ಮೂರು ಪರದೆಗಳು ಹೌಸ್‌ಫುಲ್ ಆಗಿದ್ದವು. ಸಾವಿರಕ್ಕಿಂತಲೂ ಹೆಚ್ಚು ಜನರು ಸಿನಿಮಾ ವೀಕ್ಷಿಸಿದರು.
‘ಕೋಟಿ’ ಸಿನಿಮಾ ನೋಡಿದ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಯಿತು. ಧನಂಜಯ ಅವರ ಎಂಟ್ರಿಗೆ ಶಿಳ್ಳೆ, ಕೇಕೆಗಳು ಮುಗಿಲ ಮುಟ್ಟಿದ್ದವು. ಇಡೀ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ದೊರೆಯಿತು. ಸಿನಿಮಾದಲ್ಲಿ ಬರುವ ಒಂದು ಕ್ಯಾಮಿಯೋಗೆ ಇಡೀ ಚಿತ್ರಮಂದಿರವೇ ಹರ್ಷೋದ್ಗಾರ ಮಾಡಿದರೆ, ಕ್ಲೈಮ್ಯಾಕ್ಸ್ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕೂರಿಸಿತ್ತು. ಸಿನಿಮಾ ಮುಗಿಯುತ್ತಿದ್ದಂತೆ ಮುಖ್ಯ ಪರದೆಯಲ್ಲಿ ಪ್ರೇಕ್ಷಕರೊಬ್ಬರು ಓಡಿ ಬಂದು ನಿರ್ದೇಶಕರನ್ನು ತಬ್ಬಿಕೊಂಡು ಹರ್ಷ ವ್ಯಕ್ತಪಡಿಸಿದರು. ಸಿನಿಮಾ ಮೆಚ್ಚಿದ ಟಿವಿ ಮತ್ತು ಸಿನಿಮಾ ಮಂದಿ ತಂಡಕ್ಕೆ ಶುಭ ಕೋರಿದರು.
ಇನ್ನೂ ಕನ್ನಡ ಕಿರುತೆರೆ ಮತ್ತು ಹಿರಿತೆರೆಯ ನೂರಾರು ತಾರೆಗಳು ಪ್ರೀಮಿಯರ್ ಶೋಗೆ ಆಗಮಿಸಿ ಕಾರ್ಯಕ್ರಮಕ್ಕೆ ವಿಶೇಷ ರಂಗು ತಂದಿದ್ದರು. ಟಿ.ಎನ್ ಸೀತಾರಾಂ, ಹೇಮಂತ್ ರಾವ್, ಕಿರಣ್ ರಾಜ್, ಆರ್.ಚಂದ್ರು, ಸತೀಶ್ ನೀನಾಸಂ, ನವೀನ್ ಶಂಕರ್, ಮಂಜು ಪಾವಗಡ, ಬಿಗ್ ಬಾಸ್ ವಿನ್ನರ್ ಕಾರ್ತಿಕ್, ದಿವ್ಯಾ ಉರುಡುಗ (Divya Uruduga), ಅರವಿಂದ ಕೆ.ಪಿ, ಶೈನ್ ಶೆಟ್ಟಿ (Shine Shetty) ಸೇರಿ ಸುಮಾರು ಆರುನೂರಕ್ಕೂ ಅಧಿಕ ಟಿವಿ ಮತ್ತು ಸಿನಿಮಾ ಸೆಲೆಬ್ರಿಟಿಗಳು ಆಗಮಿಸಿದ್ದರು. ಮಾಧ್ಯಮ ಮಿತ್ರರಿಂದ ಕನ್ನಡ ಸಿನಿಮಾವೊಂದರ ಅತಿದೊಡ್ಡ ಪ್ರೀಮಿಯರ್ ಶೋ ಎಂಬ ಮಾತುಗಳು ಕೇಳಿಬಂದವು. ಇದನ್ನೂ ಓದಿ:‘ಕಲ್ಕಿ’ಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ದಿಶಾ ಪಟಾನಿ
‘ಕೋಟಿ’ಯ ಬುಕಿಂಗ್ಸ್ ಈಗ ಓಪನ್ ಆಗಿದ್ದು ಜೂನ್ 13ರಂದು ಮೈಸೂರು ಮತ್ತು ಶಿವಮೊಗ್ಗದಲ್ಲಿ ಪ್ರೀಮಿಯರ್ ಶೋ ನಡೆಯಲಿದೆ. ಧನಂಜಯ್ ಮತ್ತು ಸಿನಿಮಾ ತಂಡ ಮೈಸೂರಿನ ಸಿನಿಪ್ರೇಮಿಗಳ ಜೊತೆ ‘ಕೋಟಿ’ ಸಿನಿಮಾ ನೋಡಲಿದೆ. ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.
ಸಾಕಷ್ಟು ಸದ್ದು ಮಾಡುತ್ತಿರುವ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಸೋತಿರುವ ಕನ್ನಡ ಇಂಡಸ್ಟ್ರಿಗೆ ಗೆಲ್ಲುವ ಭರವಸೆಯಾಗಿ ಕಂಡಿದೆ. ‘ಕೋಟಿ’ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ‘777 ಚಾರ್ಲಿ’ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ‘ಕಾಂತಾರ’ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.
ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್ ಅವರು ಬರೆದು ನಿರ್ದೇಶಿಸಿದ್ದಾರೆ. ಜೂನ್ 14ರಂದು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಚಿತ್ರ ಬಿಡುಗಡೆಯಾಗಲಿದೆ.
ಡಾಲಿ ಧನಂಜಯ ನಟನೆಯ ಕೋಟಿ ಸಿನಿಮಾದ ‘ಮನ ಮನ’ (Mana Mana Song) ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ. ಥ್ರಿಲ್ಲರ್ ಡ್ರಾಮಾ ಜಾನರ್‌ನ ಈ ಸಿನಿಮಾದಲ್ಲಿ ಡಾಲಿ ‘ಕೋಟಿ’ (Kotee) ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಹೊಂದಿರುವ ಪಾತ್ರವಾಗಿದೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ.
‘ಮನ ಮನ’ ಹಾಡಿನ ಲಿರಿಕಲ್ ವಿಡಿಯೋದಲ್ಲಿ ಬರುವ ವಿಡಿಯೋ ತುಣುಕು ಇನ್ಸ್ಟಾಗ್ರಾಂ ರೀಲ್, ವಾಟ್ಸಾಪ್ ಸ್ಟೋರಿಯಾಗಿ ಎಲ್ಲೆಡೆ ಓಡಾಡ್ತಾ ಇದೆ. ಇಬ್ಬರ ನಡುವೆ ಪ್ರೀತಿ ಅರಳಿ ನಿಂತಾಗ ಬಹುವಚನದಿಂದ ಏಕವಚನಕ್ಕೆ ಬರುವ ಒಂದು ಸಂದರ್ಭ ಬಂದೇ ಬರುತ್ತದೆ. ‘ನೀವು’ ಅಂತ ಕರೆಯುತ್ತಿದ್ದವರು ‘ನೀನು’ ಅಂತ ಕರೆಯುವ ಸಮಯವದು. ಕೋಟಿಯ ಲೈಫಲ್ಲಿ ಬಂದ ಆ ಸಮಯ ಈ ವಿಡಿಯೋದಲ್ಲಿದೆ. ಎಲ್ಲರ ಲೈಫಲ್ಲೂ ಆಗಿರಬಹುದಾದ ಈ ಸಣ್ಣ ಕ್ಯೂಟ್ ಘಟನೆ ಈ ಹಾಡಿನಲ್ಲಿ ತೋರಿಸಲಾಗಿದ್ದು, ಎಲ್ಲರಿಗೂ ಕನೆಕ್ಟ್ ಆಗುತ್ತಿದೆ.
ನಿರ್ದೇಶಕರಾದ ಪರಮ್ ಅವರು ಹುಡುಗಿಯೊಬ್ಬಳು ನೀವು ಅಂತ ಕರೆಯಬೇಡ ಅಂತ ತಾಕೀತು ಮಾಡಿದಾಗ ಸಾಮಾನ್ಯ ಹುಡುಗನೊಬ್ಬ ಎದುರಿಸಬಹುದಾದ ಸಂಕೋಚವನ್ನು ಧನಂಜಯ ಅಭಿನಯಿಸಿರುವ ರೀತಿ ನಿಮಗೆ ಇಷ್ಟ ಆಗಬಹುದು ಎಂದು ಹೇಳಿದರು. ಇದನ್ನೂ ಓದಿ:ಹಾಟ್ ಆದ ಮೃಣಾಲ್- ನಟಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ
ಕೋಟಿ ಸಿನಿಮಾದ ಬುಕಿಂಗ್ಸ್ ಈಗ ಓಪನ್ ಆಗಿದೆ. ಜೂನ್ 12ರ ಸಂಜೆ ಟಿವಿ ಮತ್ತು ಸಿನಿಮಾ ತಾರೆಗಳಿಗೆ ಪ್ರೀಮಿಯರ್ ಶೋ ನಡೆಯಲಿದೆ. ಅದರ ಜೊತೆ ಸಾರ್ವಜನಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳಿವೆ. ಜೂನ್ 13ರಂದು ಮೈಸೂರಿನಲ್ಲೂ ಪೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿದ್ದು, ಡಾಲಿ ಮತ್ತು ಸಿನಿಮಾತಂಡ ಮೈಸೂರಿನ ಸಿನಿಪ್ರೇಮಿಗಳ ಜೊತೆ ‘ಕೋಟಿ’ ಸಿನಿಮಾ ನೋಡಲಿದೆ. ಜೂನ್ 14ರಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿ’ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.
ಸಾಕಷ್ಟು ಸದ್ದು ಮಾಡುತ್ತಿರುವ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಸೋತಿರುವ ಕನ್ನಡ ಇಂಡಸ್ಟ್ರಿಗೆ ಗೆಲ್ಲುವ ಭರವಸೆಯಾಗಿ ಕಂಡಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜೊತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.
ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್ ಅವರು ಬರೆದು ನಿರ್ದೇಶಿಸಿದ್ದಾರೆ. `ಕೋಟಿ’ ಜೂನ್ 14ರ ಶುಕ್ರವಾರ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಡಾಲಿ ಧನಂಜಯ (Daali Dhananjay) ಅಭಿನಯದ ‘ಕೋಟಿ’ (Kotee Film) ಸಿನಿಮಾ ಜೂನ್ 14ಕ್ಕೆ ಅದ್ಧೂರಿಯಾಗಿ ರಿಲೀಸ್ ಆಗುತ್ತಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದ್ದು, ಜೂನ್ 11ರಿಂದ ಟಿಕೆಟ್ ಬುಕ್ಕಿಂಗ್ ಕೂಡ ಓಪನ್ ಆಗಿದೆ.
ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ. ‘ಕೋಟಿ’ ತಂಡ ನಿರಂತರವಾಗಿ ಸಿನಿಮಾ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಮೆಟ್ರೋ, ಬಸ್, ಟಿವಿ, ಯೂಟ್ಯೂಬ್, ಇನ್ಸ್ಟಾಗ್ರಾಂ ಎಲ್ಲಾ ಕಡೆ ಕೋಟಿ ಸಿನಿಮಾ ಸದ್ದು ಮಾಡ್ತಾ ಇದೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ಮಯೂರಿ
ಇತ್ತೀಚೆಗೆ ಅದ್ದೂರಿಯಾಗಿ ನಡೆದ ‘ಕೋಟಿ’ ಸಿನಿಮಾದ ಪ್ರಿ-ರಿಲೀಸ್ ವಿಶೇಷ ಟಿವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿದ್ದರು. ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು, ತಂಡಕ್ಕೆ ಶುಭ ಹಾರೈಸಿದರು. ಬಳಿಕ ಸುದೀಪ್‌ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್ ನೀಡಿತ್ತು. ಹತ್ತಾರು ವರ್ಷ ಟಿವಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿರುವ ಪರಮ್ ಅವರಿಗೆ ಎಲ್ಲೆಡೆ ಸ್ನೇಹಿತರಿದ್ದಾರೆ. ಇದೇ ಜೂನ್ 12ರಂದು ‘ಕೋಟಿ’ ತಂಡ ಸಿನಿಮಾತಾರೆಗಳಿಗೆ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಿದೆ. ದೊಡ್ಡ ಸಂಖ್ಯೆಯಲ್ಲಿ ತಾರೆಗಳು ಸೇರುವ ನಿರೀಕ್ಷೆ ಇದೆ. ಇದರ ಜೊತೆಗೆ ಸಿನಿರಸಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋ ಕೂಡ ಇದೆ.
ಜೂನ್ 13ರಂದು ಮೈಸೂರಿನಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳಿದ್ದು, ಧನಂಜಯ ಮತ್ತು ಚಿತ್ರತಂಡ ಮೈಸೂರಿನ ಸಿನಿರಸಿಕರ ಜೊತೆ ಸಿನಿಮಾ ನೋಡಲಿದ್ದಾರೆ. ‘ಕೋಟಿ’ ಸಿನಿಮಾ ಜೂನ್ 14ರಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.
ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಸೋತಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ. ‘ಕೋಟಿ’ ಚಿತ್ರದ ತಾರಾಗಣದಲ್ಲಿ ಡಾಲಿ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ನಟಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜೊತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
‘ಕೋಟಿ’ ಚಿತ್ರದಲ್ಲಿ ಐದು ಹಾಡುಗಳಿವೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ‘777 ಚಾರ್ಲಿ’ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ‘ಕಾಂತಾರ’ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ‘ಕೋಟಿ’ಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಪರಮ್ ನಿರ್ದೇಶನದ ‘ಕೋಟಿ’ ಜೂನ್ 14ರಂದು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಸ್ಯಾಂಡಲ್‌ವುಡ್ ನಟ ಡಾಲಿಗೆ (Daali) ಕನ್ನಡ ಮಾತ್ರವಲ್ಲ ಪರಭಾಷೆಯಲ್ಲೂ ಭಾರೀ ಬೇಡಿಕೆ ಇದೆ. ಸದ್ಯ ಕನ್ನಡದ ‘ಕೋಟಿ’ ಸಿನಿಮಾದ ಪ್ರಚಾರ ಕಾರ್ಯದ ವೇಳೆ, ಮದುವೆ ಬಗ್ಗೆ ಎದುರಾದ ಪ್ರಶ್ನೆ ಧನಂಜಯ ರಿಯಾಕ್ಟ್ ಮಾಡಿದ್ದಾರೆ. ‘ಕೋಟಿ’ (Kotee) ಚಿತ್ರ ಸಕ್ಸಸ್ ಆದ್ಮೇಲೆ ಮದುವೆ (Wedding) ಆಗ್ತೀನಿ ಎಂದು ಡಾಲಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬದಂದು ಗುಡ್ ನ್ಯೂಸ್ ಕೊಟ್ಟ ರಕ್ಷಿತ್ ಶೆಟ್ಟಿ
ಎಲ್ಲೇ ಹೋದರೂ ಎದುರಾಗುವ ಪ್ರಶ್ನೆ, ನಿಮ್ಮ ಮದುವೆ ಯಾವಾಗ ಎಂದು ಹಾಗಾಗಿ ಈ ಬಗ್ಗೆ ಧನಂಜಯ ಪ್ರತಿಕ್ರಿಯೆ ನೀಡಿದ್ದಾರೆ. ವರ್ಷಗಳು ಹೋಗುತ್ತಾ ಇರುತ್ತದೆ. ಅದು ಗೊತ್ತಾಗುವುದೇ ಇಲ್ಲ. ಸಿನಿಮಾದವರಿಗೆ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದು ಗೊತ್ತಾಗಲ್ಲ. ಒಂದು ಸಿನಿಮಾ ಮಾಡೋದರ ಒಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ ಎಂದು ಡಾಲಿ ತಮಾಷೆಯಾಗಿ ಉತ್ತರಿಸಿದ್ದಾರೆ.
ಪ್ರಮಾಣ ಮಾಡಿದ್ದೀನಿ. ‘ಕೋಟಿ’ ಸಿನಿಮಾ ಚೆನ್ನಾಗಿ ಆದರೆ ಪಕ್ಕಾ ಮದುವೆ. ಚೆನ್ನಾಗಿ ಆಗಿಲ್ಲ ಅಂದರೂ ಬಿಡಲ್ಲ, ತಾರಮ್ಮನೇ ಮದುವೆ ಮಾಡಿಸಿ ಬಿಡುತ್ತಾರೆ. ‘ಕೋಟಿ’ ಸಿನಿಮಾ ಹಿಟ್ ಆಗುತ್ತದೆ. ಯಾಕೆಂದರೆ ಈ ಸಿನಿಮಾ ತುಂಬಾ ಚೆನ್ನಾಗಿದೆ ಎಂದು ಡಾಲಿ ಮಾತನಾಡಿದ್ದಾರೆ.
ಅಂದಹಾಗೆ, ‘ಕೋಟಿ’ (Kotee Film) ಸಿನಿಮಾ ಇದೇ ಜೂನ್ 14ಕ್ಕೆ ರಿಲೀಸ್ ಆಗುತ್ತಿದೆ. ಧನಂಜಯಗೆ ನಾಯಕಿಯಾಗಿ ಮೋಕ್ಷಾ ಕುಶಾಲ್ (Moksha Kushal) ನಟಿಸಿದ್ದಾರೆ. ಈ ಚಿತ್ರವನ್ನು ಪರಮ್ ನಿರ್ದೇಶನ ಮಾಡಿದ್ದಾರೆ.
ಡಾಲಿ ಧನಂಜಯ ಅಭಿನಯದ ‘ಕೋಟಿ’ (Kotee Film) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಧನಂಜಯ ಅವರು ಕೋಟಿ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಇದೇ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
ಧನಂಜಯ (Dhananjay) ಅವರ ಸಾಮಾನ್ಯ ವ್ಯಕ್ತಿಯ ಗೆಟಪ್, ರಮೇಶ್ ಇಂದಿರಾ ಅವರ ನಟೋರಿಯಸ್ ವಿಲನ್ ಪಾತ್ರ, ತಾರಾ ಅವರ ತಾಯಿಯ ಪಾತ್ರ, ಕ್ವಾಲಿಟಿ ವಿಶುವಲ್ಸ್, ಮತ್ತೆ ಮತ್ತೆ ಕೇಳಬೇಕೆನಿಸುವ ಹಿನ್ನೆಲೆ ಸಂಗೀತ, ಹುಲಿವೇಷ ಇವೆಲ್ಲವು ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ನೆರೆದಿದ್ದವರ ಗಮನ ಸೆಳೆಯಿತು. ಇದನ್ನೂ ಓದಿ:ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ
ನಾಯಕ ನಟ ಡಾಲಿ ಧನಂಜಯ ಇದೊಂದು ಮಿಡಲ್ ಕ್ಲಾಸ್ ಸಾಮಾನ್ಯ ವ್ಯಕ್ತಿಯ ಕತೆ. ಇದು ಎಲ್ಲರಿಗೂ ಕನೆಕ್ಟ್ ಆಗುವ ಫ್ಯಾಮಿಲಿ ಕಥೆ ಎಂದು ತಿಳಿಸಿದರು. ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಪರಮ್, ಇದೊಂದು ಕಂಟೆಂಟ್ ಇರುವ ಕಮರ್ಷಿಯಲ್ ಸಿನಿಮಾ. ಒಂದೊಳ್ಳೆ ಕತೆ, ಒಳ್ಳೆಯ ಮನರಂಜನೆ ಗ್ಯಾರಂಟಿ ಎಂದರು.
ಅಪ್ಪಟ ಕನ್ನಡ ಮಣ್ಣಿನ ಕತೆಯಾದ ಕೋಟಿ ಈಗಾಗಲೇ ಟೀಸರ್ ಮತ್ತು ಹಾಡುಗಳ ಮುಖಾಂತರ ಸದ್ದು ಮಾಡುತ್ತಿದೆ. ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ (Moksha Kushal) ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ (Ramesh Indira) ನಟಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜೊತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ‘777 ಚಾರ್ಲಿ’ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ‘ಕಾಂತಾರ’ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ‘ಕೋಟಿ’ಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಪರಮ್ ಅವರು ಬರೆದು ನಿರ್ದೇಶಿಸಿದ್ದಾರೆ. ‘ಕೋಟಿʼ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.