Tag: daali pictures

  • ಶುರುವಾಯ್ತು ‘ವಿದ್ಯಾಪತಿಗೆ’ ಶೂಟಿಂಗ್-ಹೊಸ ಅವತಾರದಲ್ಲಿ ನಾಗಭೂಷಣ್,ರಂಗಾಯಣ ರಘು

    ಶುರುವಾಯ್ತು ‘ವಿದ್ಯಾಪತಿಗೆ’ ಶೂಟಿಂಗ್-ಹೊಸ ಅವತಾರದಲ್ಲಿ ನಾಗಭೂಷಣ್,ರಂಗಾಯಣ ರಘು

    ಪ್ರತಿಭಾನ್ವಿತ ನಿರ್ದೇಶಕರಿಗೆ ವೇದಿಕೆಯಾಗಿರುವ ಡಾಲಿ ಪಿಕ್ಚರ್ಸ್ ಮತ್ತೊಂದು ಹೊಸ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಡಾಲಿ ಪಿಕ್ಚರ್ಸ್ 4ನೇ ಕೊಡುಗೆ ನಾಗಭೂಷಣ್‌ ನಟನೆಯ ‘ವಿದ್ಯಾಪತಿ’ (Vidyapati Film) ಶೂಟಿಂಗ್‌ಗೆ ಕಿಕ್ ಸ್ಟಾರ್ಟ್ ಸಿಕ್ಕಿದೆ. ಅದ್ಧೂರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗ್ತಿದೆ.

    ವಿದ್ಯಾಪತಿಯಾಗಿ ನಾಗಭೂಷಣ್ (Nagabhushan) ಬಣ್ಣ ಹಚ್ಚಿದ್ದು, ಅವರು ಕರಾಟೆ ಕಿಂಗ್ ಅವತಾರ ತಾಳಿದ್ದಾರೆ. ರಂಗಾಯಣ ರಘು ಕೂಡ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವಿದ್ಯಾಪತಿ ಶೂಟಿಂಗ್ ಮೇಕಿಂಗ್ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. 1 ನಿಮಿಷ ಮೇಕಿಂಗ್ ಝಲಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇದನ್ನೂ ಓದಿ:ಬೇಸಿಗೆಯಲ್ಲಿ ಪುಟ್ಟಗೌರಿ ಮತ್ತಷ್ಟು ಹಾಟ್: ಕೂರ್ಗಿನಲ್ಲಿ ಸಾನ್ಯಾ ಅಯ್ಯರ್

     

    View this post on Instagram

     

    A post shared by Daali Pictures (@daalipictures)

    ಇಕ್ಕಟ್ ಕಥೆ ಹೇಳಿದ್ದ ಇಶಾಂ ಮತ್ತು ಹಸೀಂ ಖಾನ್ ‘ವಿದ್ಯಾಪತಿ’ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೇ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಆ್ಯಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಗಭೂಷಣ್‌ಗೆ ನಾಯಕಿಯಾಗಿ ‘ಉಪಾಧ್ಯಕ್ಷ’ ಬ್ಯೂಟಿ ಮಲೈಕಾ ವಸೂಪಾಲ್ (Malaika Vasupal) ಕಾಣಿಸಿಕೊಳ್ಳಲಿದ್ದಾರೆ.

    ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ‘ವಿದ್ಯಾಪತಿ’ ಸಿನಿಮಾಕ್ಕಿದೆ. ‘ಟಗರು ಪಲ್ಯ’ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಮತ್ತೊಮ್ಮೆ ಡಾಲಿ ಜೊತೆ ಕೈ ಜೋಡಿಸಿದ್ದಾರೆ.

  • ಬಣ್ಣದ ಲೋಕಕ್ಕೆ ಡಾ ಬ್ರೋ- ‘ಡೇರ್ ಡೆವಿಲ್ ಮುಸ್ತಾಫಾ’ಗೆ ಬೆಂಬಲ

    ಬಣ್ಣದ ಲೋಕಕ್ಕೆ ಡಾ ಬ್ರೋ- ‘ಡೇರ್ ಡೆವಿಲ್ ಮುಸ್ತಾಫಾ’ಗೆ ಬೆಂಬಲ

    ಯೂಟ್ಯೂಬರ್ ಡಾ ಬ್ರೊ (Dr Bro) ಅಭಿಮಾನಿಗಳಿಗೆ ಇದು ನಿಜಕ್ಕೂ ಸಿಹಿಸುದ್ದಿ. ಕನ್ನಡದ ಫೇಮಸ್ ಯೂಟ್ಯೂಬರ್ ಇದೀಗ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ನಟಿಸುವ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಬದಲಿಗೆ, ಹೊಸ ತಂಡವೊಂದರ ಸಿನಿಮಾಗೆ ಹಿನ್ನೆಲೆ ಧ್ವನಿ ನೀಡಿ ಸಾಥ್ ನೀಡಿದ್ದಾರೆ.

    ಪೂರ್ಣಚಂದ್ರ ತೇಜಸ್ವಿ (Poornachandra Tejasvi) ಅವರ ‘ಡೇರ್ ಡೆವಿಲ್ ಮುಸ್ತಾಫಾ’ (Daredevil Musthafa) ಕತೆಯನ್ನು ಅದೇ ಹೆಸರಿನಲ್ಲಿ ಸಿನಿಮಾ ತೆರೆಯ ಮೇಲೆ ತರಲಾಗುತ್ತಿದ್ದು, ಹೊಸಬರೇ ಮಾಡಿರುವ ಈ ಪ್ರಯತ್ನಕ್ಕೆ ಡಾ ಬ್ರೋ ಬೆಂಬಲ ನೀಡಿದ್ದಾರೆ. ಡಾಲಿ ಪಿಕ್ಚರ್ಸ್ ವತಿಯಿಂದ ಪ್ರೆಸೆಂಟ್ ಮಾಡಲಾಗುತ್ತಿದೆ.ಸದ್ಯ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ ಟ್ರೈಲರ್‌ ಬಿಡುಗಡೆ ಆಗಿದ್ದು, ಟ್ರೈಲರ್‌ನಲ್ಲಿ  ಪಾತ್ರಗಳ ಪರಿಚಯ, ಸ್ಥಳದ ಪರಿಚಯ ಹಾಗೂ ಕತೆ ಬಗ್ಗೆ ಡಾ ಬ್ರೋ ಹಿನ್ನೆಲೆ ಧ್ವನಿ ನೀಡಿದ್ದಾರೆ. ಮೂರು ನಿಮಿಷದ ಟ್ರೈಲರ್‌ನಲ್ಲಿ ಹಲವು ಭಾರಿ ಡಾ ಬ್ರೋ ಧ್ವನಿ ಕೇಳಿ ಬರುತ್ತದೆ.

    ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾದ ಟ್ರೈಲರ್‌ ಎಲ್ಲರ ಗಮನ ಸೆಳೆಯುತ್ತಿದೆ. ರೆಟ್ರೊ ಮಾದರಿಯ ಕತೆಯನ್ನು ಆಹ್ಲಾದಕರ ರೀತಿಯಲ್ಲಿ ತೆರೆಗೆ ತಂದಿರುವ ಕುರುಹು ಟ್ರೈಲರ್‌ನಲ್ಲಿ ಎದ್ದು ಕಾಣುತ್ತದೆ. ಈ ತಂಡ ಪೂರ್ಣಚಂದ್ರ ತೇಜಸ್ವಿಯವರ ಡೇರ್ ಡೆವಿಲ್ ಮುಸ್ತಾಫಾ ಕತೆಯನ್ನು ಆಧುನಿಕ ಸಿನಿಮಾ ವ್ಯಾಕರಣಕ್ಕೆ ಒಗ್ಗುವಂತೆ ಕಮರ್ಷಿಯಲ್ ಮಾದರಿಯಲ್ಲಿಯೇ ಸೊಗಸಾಗಿ ನಿರ್ದೇಶಕ ಶಶಾಂಕ್ ಸೋಗಲ್ (Director Shashank Sogal) ಕಟ್ಟಿದ್ದಾರೆ. ಇದನ್ನೂ ಓದಿ:ಹೊಸ ಪ್ರಾಜೆಕ್ಟ್‌ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಸಮಂತಾ- ಅನುಷ್ಕಾ ಶರ್ಮಾ

    ರಾಹುಲ್ ರಾಯ್ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್ ಶ್ಯಾಮ್ ಸಂಗೀತವಿದೆ. ಶಿಶಿರ್ ಬೈಕಾಡಿ, ಆದಿತ್ಯ ಅಶ್ರೀ, ಅಭಯ್, ಸುಪ್ರೀತ್ ಭಾರದ್ವಾಜ್, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್. ಉಮೇಶ್, ಮಂಡ್ಯ ರಮೇಶ್, ಮೈಸೂರ್ ಆನಂದ್, ಸುಂದರ್ ವೀಣಾ, ನಾಗಭೂಷಣ್, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ‘ಡೇರ್ ಡೆವಿಲ್ ಮುಸ್ತಾಫಾ’ ನಿರ್ಮಾಣವಾಗಿದೆ. ಕನ್ನಡ ಚಿತ್ರರಸಿಕರನ್ನು ಬೇರೇ ಪ್ರಪಂಚಕ್ಕೆ ಕರೆದುಕೊಂಡು ಹೋಗಲು ಹೊಸ ಉತ್ಸಾಹಿ ಯುವಕರೇ ಕೂಡಿರುವ ಇಡೀ ಚಿತ್ರ ತಂಡ ಅತ್ಯಂತ ಫ್ಯಾಷನೆಟೇಡ್ ಆಗಿ ಕೆಲಸ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.