Tag: Dakshin Kannada

  • ಬಿಜೆಪಿಗೆ ಎರಡನೇ ಗೆಲುವಿನ ಕೊಡುಗೆ ನೀಡಲಿದೆಯೇ ಮೂಡುಬಿದಿರೆ ಕ್ಷೇತ್ರ?

    ಬಿಜೆಪಿಗೆ ಎರಡನೇ ಗೆಲುವಿನ ಕೊಡುಗೆ ನೀಡಲಿದೆಯೇ ಮೂಡುಬಿದಿರೆ ಕ್ಷೇತ್ರ?

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ (BJP) ಗೆಲ್ಲಲಾಗದ ಕ್ಷೇತ್ರ ಇದ್ದುದ್ದು ಮೂಡುಬಿದಿರೆ (Moodbidri). ಜೈನ ಕಾಶಿ, ಶಿಕ್ಷಣ ಕಾಶಿ ಎಂದೆಲ್ಲ ಖ್ಯಾತಿವೆತ್ತ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2018ರಲ್ಲಿ ಖಾತೆ ತೆರೆದ ಬಿಜೆಪಿ ಈ ಬಾರಿ ಅದನ್ನು ಉಳಿಸಿಕೊಳ್ಳುವ ಸವಾಲು ಎದುರಿಸುತ್ತಿದೆ.

    ಹಿಂದುತ್ವ, ಮೋದಿ ಅಲೆಯ ನೆರವಿನೊಂದಿಗೆ ಬಿಜೆಪಿಯಿಂದ ಉಮಾನಾಥ ಕೋಟ್ಯಾನ್ 29,799 ಮತಗಳ ಬಾರಿ ಅಂತರದಿಂದ ಕಾಂಗ್ರೆಸ್‌ನ (Congress) ಅಭಯಚಂದ್ರ ಜೈನ್ ಅವರನ್ನು ಸೋಲಿಸಿದ್ದರು. ಸತತ 4 ಬಾರಿ ಗೆದ್ದು ಸಚಿವರೂ ಆಗಿದ್ದ ಅಭಯಚಂದ್ರರಿಗೆ ಈ ಸೋಲಿನೊಂದಿಗೆ ಮರ್ಮಾಘಾತವಾಗಿತ್ತು. ಗೆದ್ದು ಬೀಗಿದ ಉಮಾನಾಥ ಕೋಟ್ಯಾನ್ ತಮ್ಮ ಅಧಿಕಾರಯುತ ಶೈಲಿಯ ಆಡಳಿತದಿಂದ ಜನಮೆಚ್ಚುಗೆ ಗಳಿಸಿದ್ದಾರೆ. ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ ಎಂಬ ಅಭಿಪ್ರಾಯ ಕ್ಷೇತ್ರದಲ್ಲಿದೆ. ಇವು ಕೈಹಿಡಿಯಬಹುದು ಎಂಬುದು ಕೋಟ್ಯಾನ್ ನಿರೀಕ್ಷೆ.

    ಈ ನಡುವೆ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಸುದರ್ಶನ ಮೂಡುಬಿದ್ರೆ ಕಳೆದ ಬಾರಿಯಂತೆ ಈ ಸಲವೂ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕ್ಷೇತ್ರದಲ್ಲಿ ಅವರ ಓಡಾಟ ಹೆಚ್ಚಾಗಿದ್ದು, ಮೂಲೆ ಮೂಲೆಗಳಿಗೂ ಸುತ್ತಿ ಯುವಕರನ್ನು ಸಂಘಟಿಸುತ್ತಿದ್ದಾರೆ. ಇವರಿಬ್ಬರನ್ನು ಬಿಟ್ಟರೆ ಕ್ಷೇತ್ರದಿಂದ ಸ್ಪರ್ಧೆಗೆ ತೀವ್ರ ಆಸಕ್ತಿ ಹೊಂದಿರುವವರು ಯಾರೂ ಇದ್ದಂತಿಲ್ಲ. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಜಗದೀಶ್‌ ಅಧಿಕಾರಿ ವಿವಾದಗಳಿಂದಾಗಿ ಹಿಂದೆ ಬಿದ್ದಿದ್ದಾರೆ.

    ಕಳೆದ ಚುನಾವಣೆಗೂ ಮೊದಲೇ ಅಭಯಚಂದ್ರ ಜೈನ್ (Abhay Chandra Jain) ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿದ್ದರು. ಮಿಥುನ್ ರೈ ಉತ್ತರಾಧಿಕಾರಿ ಎಂದೂ ಹೇಳಿದ್ದರು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಕ್ಷೇತ್ರಕ್ಕೆ ಐವನ್ ಡಿಸೋಜ ಪ್ರವೇಶವಾಗಿ ಗಲಾಟೆ ಗೌಜಿಗಳು ಗೊಂದಲಗಳು ನಡೆದಿದ್ದವು. ರಾಜ್ಯ ನಾಯಕರ 2 ಬಣಗಳ ನಡುವಿನ ಮೇಲಾಟವಾಗಿಯೂ ಚಿತ್ರಣ ಬದಲಾಗಿತ್ತು. ಕೊನೆಗೆ ವರಿಷ್ಠರ ಒತ್ತಡಕ್ಕೆ ಮಣಿದು ಅಭಯಚಂದ್ರ ಜೈನ್ ಸ್ಪರ್ಧಿಸಿದರೂ ಗೆಲುವು ಸಾಧ್ಯವಾಗಲಿಲ್ಲ. ಈ ಬಾರಿಯಂತೂ ಮಿಥುನ್ ರೈಯೇ ಅಭ್ಯರ್ಥಿ ಎಂದು ಜೈನ್ ಪಕ್ಷದ ವೇದಿಕೆಗಳಲ್ಲಿ ಹೇಳುತ್ತಿದ್ದಾರೆ. ಅಂತೆಯೇ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತವಲಯದ ಮಿಥುನ್ ರೈಗೆ ಟಿಕೆಟ್ ನೀಡಿದೆ. ಇದನ್ನೂ ಓದಿ: ಕರ್ಪೂರ ಬೆಳಗಿ, ಈಡುಗಾಯಿ ಹೊಡೆದು ಸರ್ಕಾರಿ ವಾಹನ ಬೀಳ್ಕೊಟ್ಟ ಸಚಿವ ನಾರಾಯಣಗೌಡ

    ಮೂಡುಬಿದಿರೆ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 1,96,832. ಬಿಲ್ಲವ ಸಮುದಾಯದ ಅತಿ ಹೆಚ್ಚು ಮತದಾರರು ಇರುವ ಕ್ಷೇತ್ರಗಳಲ್ಲಿ ಇದೂ ಒಂದು. ಮುಸ್ಲಿಂ ಮತದಾರರ ಸಂಖ್ಯೆ ಆಸುಪಾಸು 40 ಸಾವಿರ. ಸುಮಾರು 30 ಸಾವಿರ ಕ್ರಿಶ್ಚಿಯನ್ ವೋಟುಗಳಿವೆ. ಜೈನ ಸಮುದಾಯದವರ ಸಂಖ್ಯೆಯೂ ಗಮನಾರ್ಹ. ಹಾಗಾಗಿ ಕಾಂಗ್ರೆಸ್-ಬಿಜೆಪಿಯಿಂದ ಯಾರು ನಿಂತರೂ ಜಾತಿ ವಿಚಾರ ಒಂದಷ್ಟು ಪ್ರಭಾವ ಬಿದ್ದೇ ಬೀರುತ್ತದೆ. ಕಾಂಗ್ರೆಸ್ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿ ಬಿಲ್ಲವ ಸಮುದಾಯದ ಉಮಾನಾಥ್ ಕೋಟ್ಯಾನ್ ಅವರನ್ನೇ ಕಣಕ್ಕಿಳಿಸುತ್ತಾ, ಬೇರೇನಾದರೂ ತಂತ್ರ ಹೆಣೆಯುತ್ತಾ ಎನ್ನುವುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ

  • ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

    ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

    ನವದೆಹಲಿ: ನಿನ್ನೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾ‌ಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಅವರು ಮಂಗಳೂರಿನ ಜನರ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ತಿಳಿಸಿರುವ ಅವರು, ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

    ಶುಕ್ರವಾರ ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನಡೆಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು. ಡಬಲ್ ಎಂಜಿನ್ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಮಿಷನ್ ಎಲೆಕ್ಷನ್ – ಮಂಗಳೂರಿನಲ್ಲಿ ನಾಯಕರಿಗೆ ಮೋದಿಯಿಂದ ಸ್ಪೆಷಲ್ ಕ್ಲಾಸ್

    ಕರ್ನಾಟಕದ ಪಶ್ಚಿಮ ಘಟ್ಟ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಮಂಗಳೂರು ಬಂದರುಗಳಿಗೆ ಕ್ರೂಸ್ ಶಿಪ್ ಬರಬೇಕು. ವಿದೇಶಿ ಪ್ರವಾಸಿಗರು ಆಗಮಿಸಿದರೆ ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ. ಪ್ರವಾಸೋದ್ಯಮ ಹೆಚ್ಚಾದರೆ ಗ್ರಾಮದ್ಯೋಗ, ಆಟೋರಿಕ್ಷಾ ಚಾಲಕರಿಗೆ ಎಲ್ಲರಿಗೂ ಲಾಭ ಸಿಗಲಿದೆ ಎಂದು ಭರವಸೆ ನೀಡಿದ್ದರು. ಇದನ್ನೂ ಓದಿ: ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು: ಮೋದಿ

    Live Tv
    [brid partner=56869869 player=32851 video=960834 autoplay=true]

  • ತುಂಬಿ ಹರಿದ ಪಯಸ್ವಿನಿ ನದಿ- ಸಂಪಾಜೆ ಸಮೀಪದ ರಸ್ತೆ ಜಲಾವೃತ, ಅಂಗಡಿಗಳಿಗೆ ನುಗ್ಗಿತು ನೀರು

    ತುಂಬಿ ಹರಿದ ಪಯಸ್ವಿನಿ ನದಿ- ಸಂಪಾಜೆ ಸಮೀಪದ ರಸ್ತೆ ಜಲಾವೃತ, ಅಂಗಡಿಗಳಿಗೆ ನುಗ್ಗಿತು ನೀರು

    ಮಡಿಕೇರಿ: ರಣಭೀಕರ ಮಳೆಗೆ ಕೊಡಗು ಜಿಲ್ಲೆ ತತ್ತರಿಸಿ ಹೋಗಿದೆ. ಸಾಲು ಸಾಲು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಪರಿಣಾಮ ಜಿಲ್ಲೆಯ ಗಡಿಭಾಗವಾದ ದಕ್ಷಿಣ ಕನ್ನಡ ಹಾಗೂ ಸಂಪಾಜೆ ಗ್ರಾಮದಲ್ಲಿ ಮಳೆ ಅವಾಂತರಗಳಿಂದ ಗ್ರಾಮದ ಜನರು ಬೆಚ್ಚಿಬಿಳುತ್ತಿದ್ದಾರೆ.

    ಗಡಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗ್ರಾಮಸ್ಥರಿಗೆ ಜಲ ಸಂಕಷ್ಟ ಎದುರಾಗಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪಯಸ್ವಿನಿ ನದಿ ತುಂಬಿ ಹರಿದು ಸಂಪಾಜೆ ಸಮೀಪದ ಕಲ್ಲುಗುಂಡಿ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಯಿತು.

    ಅಕ್ಕಪಕ್ಕದ ಅಂಗಡಿ, ಮುಂಗಟ್ಟು, ಮನೆಗಳಿಗೂ ನೀರು ನುಗ್ಗಿದೆ. ವರ್ತಕರಿಗೆ ಅಪಾರ ನಷ್ಟ ಉಂಟಾಗಿದೆ. ನೋಡುತ್ತಿದಂತೆ ಕಲ್ಲುಗುಂಡಿಯಲ್ಲಿ ಪಯಸ್ವಿನಿ ನದಿಯ ಉಪನದಿಯ ನೀರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿದ ಪರಿಣಾಮದಿಂದ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು. ಅಷ್ಟೇ ಅಲ್ಲದೇ ಹೆದ್ದಾರಿ ಪಕ್ಕದಲ್ಲಿ ಇರುವ ಸುಮಾರು 50 ಅಂಗಡಿ ಮುಗ್ಗಟ್ಟುಗಳಿಗೆ ಹಾನಿಯಾಗಿದೆ.

    ಅಷ್ಟೇ ಅಲ್ಲದೇ ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲೂ ಮಳೆಯಿಂದ ಪ್ರವಾಹ ಏರ್ಪಟ್ಟಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ಇಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟೆಯಲ್ಲಿ ಮರದ ದಿಮ್ಮಿಗಳು ಕೊಚ್ಚಿ ಬಂದು ನಿಂತ ಪರಿಣಾಮ ಅಪಾಯದ ಮಟ್ಟ ಮೀರಿ ಹರಿದ ನದಿಯ ನೀರು ಸುತ್ತಮುತ್ತಲ ಮನೆಗಳನ್ನು ಆವರಿಸಿದೆ. ಪಕ್ಕದಲ್ಲೇ ಇರುವ ನಿವಾಸಿಗಳು ರಾತ್ರೋರಾತ್ರಿ ಮನೆ ಖಾಲಿ ಮಾಡಿದರು. ಹಲವು ಕುಟುಂಬಗಳನ್ನು ಕೊಯನಾಡಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಅಷ್ಟೇ ಅಲ್ಲದೇ ಈ ಗ್ರಾಮದಲ್ಲಿ ಇರುವ ಸರ್ಕಾರಿ ಶಾಲೆಗೂ ಬೃಹತ್ ಗುಡ್ಡ ಕುಸಿದು ಶಾಲೆಗೆ ಮತ್ತಷ್ಟು ಹಾನಿಯಾಗಿದು ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

    ಪ್ರವಾಹದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೊಯನಾಡಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದರು. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಳಜಿ ಕೇಂದ್ರದಲ್ಲಿರುವ ಕುಟುಂಬಗಳಿಗೆ ಧೈರ್ಯ ತುಂಬಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಕೊಯನಾಡು ಹಾಗೂ ಸಂಪಾಜೆ ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿದರು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಯನಾಡು ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

    ಈ ವೇಳೆ ಸಂಪಾಜೆ ಬಳಿ ಒಂದು ಮನೆ ತೀವ್ರ ಹಾನಿಯಾಗಿದೆ. ಈ 5 ಮನೆಗಳಲ್ಲಿ ಒಂದು ಮನೆಗೆ ಹೆಚ್ಚಿನ ಹಾನಿಯಾಗಿದ್ದು, 4 ಮನೆಗಳು ಸಾಧಾರಣ ಹಾನಿಯಾಗಿದೆ. ಈ ಹಿನ್ನೆಲೆ ಕೊಯನಾಡು ದೇವಸ್ಥಾನ ಕಲಾ ಮಂದಿರಕ್ಕೆ 5 ಕುಟುಂಬಗಳ 21 ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಂದಾಯ ನಿರೀಕ್ಷಕರಾದ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ಬಗ್ಗೆ ಆತಂಕ ಬೇಡ, ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ: ಸುಧಾಕರ್

    ಒಟ್ಟಿನಲ್ಲಿ ಮಹಾಮಳೆಯ ರುದ್ರವಾತಾರಕ್ಕೆ ಜಿಲ್ಲೆಯ ಜನರು ಬೆಚ್ಚಿ ಬೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಅಗಸ್ಟ್ ತಿಂಗಳು ಮತ್ತಷ್ಟು ಮಳೆ ಅಗುವ ಸಾದ್ಯತೆ ಇರುವುದರಿಂದ 2018ರ ಕರಾಳ ದಿನಗಳು ಮತ್ತೆ ಮರುಕಳಿಸುವ ಸೂಚನೆ ಇದೀಗ ಪ್ರಕೃತಿ ನೀಡುತ್ತಿದೆ ಎಂದು ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಇದನ್ನೂ ಓದಿ: ಅಹಂಕಾರದಿಂದ ಕುರುಡಾಗಿರುವ ಸರ್ಕಾರಕ್ಕೆ ಹಣದುಬ್ಬರ ಎಲ್ಲಿ ಕಾಣಿಸುತ್ತದೆ: ರಾಹುಲ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ದಾವಣಗೆರೆ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಇದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಒತ್ತಾಯಿಸಿದರು.

    ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೋಸ್ಕರ ಕೊಲೆ ಮಾಡುತ್ತಿರುವುದು ತಪ್ಪು, ಅದು ದುರ್ದೈವ. ಮಂಗಳೂರಿನಲ್ಲಿ ನಡೆದಂತ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಅದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು. ಇದನ್ನು ಉಲ್ಬಣ ಆಗಲು ಬಿಡಬಾರದು ಎಂದರು.

    ಮಂಗಳೂರಿನಲ್ಲಿ ನಡೆದ ಘಟನೆ ಸರ್ಕಾರ ಸಹಿಸುವುದಿಲ್ಲ. ಪರಿಸ್ಥಿತಿ ತಿಳಿ ಮಾಡಲಿಲ್ಲ ಅಂದರೆ ತಪಾತ್ರೆಯ ಕಟ್ಟಿಟ್ಟ ಬುತ್ತಿ, ಹತ್ಯೆ ಮಾಡುವ ಹಂತಕ್ಕೆ ಯಾರು ಹೋಗಬಾರದು. ಆದರೆ ಪ್ರವೀಣ್ ಹತ್ಯೆ ಮಾಡಿದವರು, ಅವರ ಅಂಗಡಿಯಲ್ಲೇ ಕೆಲಸ ಮಾಡುವವರೆಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪಿಎಫ್‍ಐ ಸಂಘಟನೆ ನಿಷೇಧ: ಮಂಗಳೂರಿನಲ್ಲಿ ನಡೆದ ಹತ್ಯೆ ಬಗ್ಗೆ ಪಿಎಫ್‍ಐ ಕೈವಾಡ ಇದೆ ಎನ್ನುವುದರ ಬಗ್ಗೆ ಆಧಾರ ಇಲ್ಲದೆ ಮಾತನಾಡಲು ಬರುವುದಿಲ್ಲ. ಅವರು ಈ ಹತ್ಯೆಗಳ ಹಿಂದಿದ್ದರೆ ಅನುಭವಿಸುತ್ತಾರೆ. ಪಿಎಫ್‍ಐ ಅವರ ಬಗ್ಗೆ ಬಿಜೆಪಿ, ಕಾಂಗ್ರೆಸ್‍ನವರ ಬಳಿ ದಾಕ್ಷಿಣ್ಯ ಇಲ್ಲ. ಪಿಎಫ್‍ಐ ವಿರುದ್ಧ ತನಿಖೆ ಮಾಡಲು ಆಧಾರ ಸಾಕ್ಷಿಗಳು ಬೇಕಾಗುತ್ತದೆ ಎಂದು ಹೇಳಿದರು.

    ಏಕಾಏಕಿ ಮತ್ತೊಬ್ಬರ ಕಡೆ ಬೊಟ್ಟು ಮಾಡಿ ತೋರಿಸಲು ಬರುವುದಿಲ್ಲ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಒಂದು ಹಂತಕ್ಕೆ ತಂದೇ ತರುತ್ತೇವೆ. ಯಾರು ಹುಡುಗಾಟ ಆಡಲು ಬರುವುದಿಲ್ಲ, ಮಂಗಳೂರಲ್ಲಿ ನಡೆದಿರುವ ಹತ್ಯೆಗಳು ನಿರೀಕ್ಷೆ ಮಾಡಿದ್ದಲ್ಲ. ಸರ್ಕಾರದ ವಿರುದ್ಧ ಕಾರ್ಯಕರ್ತರು ಮುನಿಸುಕೊಳ್ಳಬಾರದು. ಇದಕ್ಕೆ ಕಾರಣೀಕರ್ತರನ್ನು ಹುಡುಕಿ ತಾಕೀತು ಮಾಡಿ ಶಿಕ್ಷೆಗೊಳಪಡಿಸುತ್ತೇವೆ ಎಂದು ಮನವಿ ಮಾಡಿದರು.

    ಪ್ರವೀಣ್, ಫಾಝಿಲ್ ಹತ್ಯೆ ವಿಚಾರ: ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆಗೆ ಲಿಂಕ್ ಆಗಿರುವುದು ತಪ್ಪು. ಕೆಲವರು ಮಾತನಾಡುತ್ತಿರುವುದು ಕೂಡ ತಪ್ಪು. ವಿರೋಧ ಪಕ್ಷದವರು ಪ್ರವೀಣ್ ಹಾಗೂ ಫಾಝಿಲ್ ಕೊಲೆಗೆ ಲಿಂಕ್ ಮಾಡ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿರುವ ವಿಚಾರ ಎಂದರು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಇನ್ನು ಫಾಝಿಲ್ ಹತ್ಯೆಯಾದಾಗ ಸಿಎಂ ಆಗಲಿ ಸಚಿವರಾಗಲಿ ಮನೆಯ ಹತ್ತಿರ ಹೋಗದೆ ಇರಲು ಕಾರಣ ಇದೆ. ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಅವರು ಫಾಝಿಲ್ ಕೊಲೆಯಾದಾಗ ಅವರು ಏರ್ ಕ್ರಾಪ್ಟ್‌ನಲ್ಲಿದ್ದರು. ಅಲ್ಲಿಂದ ಅವರು ಬೆಂಗಳೂರು ಕಡೆಗೆ ತಮ್ಮ ಪ್ರಯಾಣ ಬೆಳೆಸಿದ್ದರು. ಆದ್ದರಿಂದ ಅವರು ಫಾಝಿಲ್ ಮನೆಗೆ ಹೋಗಲು ಆಗಲಿಲ್ಲ ಎಂದು ಸಮರ್ಥಿಕೊಂಡರು.

    ಉತ್ತರ ಪ್ರದೇಶ ಮಾದರಿ ಅಳವಡಿಸಲು ಚಿಂತನೆ ಇಲ್ಲ: ರಾಜ್ಯದಲ್ಲಿ ಯುಪಿ ಮಾದರಿ ತರಲು ಮಾಧ್ಯಮದವರು ಒತ್ತಾಯಿಸಿದ್ದಕ್ಕಾಗಿ ಸಿಎಂ ಬೊಮ್ಮಾಯಿರವರು ಯುಪಿನೇ ಬೇರೆ, ಕರ್ನಾಟಕ ರಾಜ್ಯನೇ ಬೇರೆ. ಅಲ್ಲಿನ ಸಮಸ್ಯೆಗೂ ಇಲ್ಲಿ ಸಮಸ್ಯೆಗೂ ವ್ಯತ್ಯಾಸ ಇದೆ ಎಂದು ಈಗಾಗಲೇ ತಿಳಿಸಿದ್ದಾರೆ. ಆದರೆ ಮಾಧ್ಯಮದವರು ಕೆಲ ದಿನಗಳ ಹಿಂದೆ ಒತ್ತಿ ಒತ್ತಿ ಕೇಳಿದಕ್ಕಾಗಿ ಸಿಎಂ ಬೊಮ್ಮಾಯಿರವರು ಕರ್ನಾಟಕದಲ್ಲೂ ಯುಪಿ ಮಾದರಿ ಆಗಬಹುದು ಎಂದಿದ್ದರು, ಆದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ

    ಯಡಿಯೂರಪ್ಪನವರೇ ನಮ್ಮ ಲೀಡರ್: ಯಡಿಯೂರಪ್ಪನವರೇ ನಮ್ಮ ಲೀಡರ್. ಅದರಲ್ಲಿ ಎರಡು ಮಾತಿಲ್ಲ, ಅವರನ್ನು ಮೂಲೆ ಗುಂಪು ಮಾಡಬೇಕೆಂಬುದು ಇಡೀ ಬಿಜೆಪಿಯಲ್ಲಿ ಯಾರೊಬ್ಬರ ತಲೆಯಲ್ಲಿಲ್ಲ, ಒಂದು ಪಕ್ಷ ಅಂದರೆ ಕಾರ್ಯಕರ್ತರು ಸಂಘಟನೆ ಮಾಡಿಕೊಂಡು ಪ್ರವಾಸ ಮಾಡಬೇಕಾಗುತ್ತದೆ. ಯಡಿಯೂರಪ್ಪನವರು ಒಬ್ಬರೇ ಮಾಡಲು ಆಗುತ್ತಾ ಆಗಲ್ಲ, ಇನ್ನು ಬೇರೆ ಬೇರೆ ಘಟನೆ ಜರುಗಿದ್ದರಿಂದ ವಿಜಯೋತ್ಸವವನ್ನು ರದ್ದು ಮಾಡಿದ್ದೇವೆ. ಆದರೆ ಯಡಿಯೂರಪ್ಪನವರನ್ನು ಸಂಘಟನೆ ಮಾಡುವ ವಿಚಾರದಲ್ಲಿ ಯಾರು ತಡಿಯಲ್ಲ, ಯಾರು ತಡಿಯಲು ಆಗುವುದಿಲ್ಲ ಎಂದು ತಿಳಿಸಿದರು.

    ರನ್ನಿಂಗ್ ರೇಸ್‍ನಲ್ಲಿ ಗೆಲಲ್ಲುತ್ತೇವೆ ಎಂದು ಓಡ್ತಾರೆ, ಓಡ್ಲಿ ಬಿಡಿ ಜನ ಅಲ್ವಾ ತೀರ್ಮಾನ ಮಾಡೋದು ಎಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡಿದ್ರೇ ರಾಜ್ಯದಲ್ಲಿ ಗೆದ್ದು ಬಿಡ್ತಾರ ಎಂದು ಪ್ರಶ್ನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು

    ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು

    ಬೆಂಗಳೂರು: ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಯರ್ತರು ಹೋಂ ಮಿನಿಸ್ಟರ್ ಮನೆಗೆ ಮುತ್ತಿಗೆ ಹಾಕಿದ ಘಟನೆ ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ಮೊನ್ನೆಯಷ್ಟೇ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಮತ್ತೊಂದು ಸಂಘಟನೆಯೇ ಸಿಡಿದೆದ್ದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಇಲಾಖೆಯನ್ನು ನಿಭಾಯಿಸುವುದರಲ್ಲಿ ಆರಗ ಜ್ಞಾನೇಂದ್ರ ಅವರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ವಿಫಲರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇದರ ಜೊತೆಗೆ ಎಸ್‍ಡಿಪಿಐ, ಪಿಎಫ್‍ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗಿದ್ದಾರೆ. ಈ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಎಬಿವಿಪಿ ಕಾರ್ಯಕರ್ತರು ಗೇಟ್ ಹಾರಿ ಗೃಹ ಸಚಿವರ ನಿವಾಸಕ್ಕೆ ನುಗ್ಗಿದ್ದಾರೆ. ಇದನ್ನೂ ಓದಿ: ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ

    ಈ ವೇಳೆ ಅಲ್ಲಿದ್ದ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ಬಾಗಿಲ ಬಳಿ ತಡೆದಿದ್ದಾರೆ. ಆದರೆ ಪೊಲೀಸರ ಮಾತಿಗೆ ಜಗ್ಗದ ಎಬಿವಿಪಿ ಕಾರ್ಯಕರರ್ತರು ಮನೆಯೊಳಗೆ ನುಗ್ಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗ ಜಿಲ್ಲೆಯಲ್ಲಿ ಇದ್ದಾರೆ. ಇದನ್ನೂ ಓದಿ: ಚುನಾವಣೆ ವರ್ಷ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: ಎಚ್‍ಡಿಕೆ

    Live Tv
    [brid partner=56869869 player=32851 video=960834 autoplay=true]

  • ಕುಕ್ಕೆ ದೇವಸ್ಥಾನ ಮಂಡಳಿ ಉಪವಾಸ ಕೈಬಿಡುವಂತೆ ಸುಬ್ರಹ್ಮಣ್ಯ ಸ್ವಾಮೀಜಿಗಳ ಮನವೊಲಿಸಲಿ: ಪೇಜಾವರ ಶ್ರೀ

    ಕುಕ್ಕೆ ದೇವಸ್ಥಾನ ಮಂಡಳಿ ಉಪವಾಸ ಕೈಬಿಡುವಂತೆ ಸುಬ್ರಹ್ಮಣ್ಯ ಸ್ವಾಮೀಜಿಗಳ ಮನವೊಲಿಸಲಿ: ಪೇಜಾವರ ಶ್ರೀ

    ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಠಕ್ಕೂ ದೇವಾಲಯಕ್ಕೂ ನಡುವೆ ಕಾಣಿಸಿಕೊಂಡಿರುವ ಭಿನ್ನಮತ ತಾರಕ್ಕೇರಿದ್ದು, ಈ ವಿವಾದವನ್ನು ಬಗೆಹರಿಸಲು ಜಿಲ್ಲೆಯ ಅಷ್ಟಮಠ ಮಧ್ಯಪ್ರವೇಶ ಮಾಡಿದೆ.

    ಉಡುಪಿ ಕೃಷ್ಣಮಠಕ್ಕೆ ಸಂಬಂಧಿಸಿದಂತೆ ಅಷ್ಟಮಠಾಧೀಶರು ಈ ವಿಚಾರದಲ್ಲಿ ಸುಬ್ರಹ್ಮಣ್ಯ ಸ್ವಾಮೀಜಿಗಳ ಬೆಂಬಲಕ್ಕೆ ನಿಂತಿದ್ದಾರೆ. ಸುಬ್ರಹ್ಮಣ್ಯ ಮಠವು ಮಧ್ವ ಮತಕ್ಕೆ ಸಂಬಂಧಪಟ್ಟ ಧಾರ್ಮಿಕ ಕೇಂದ್ರವಾದ ಕಾರಣ ಪೇಜಾವರ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥರಿಗೆ ಅನಗತ್ಯ ಹಿಂಸೆ ನೀಡಬಾರದು ಎಂದು ಅಷ್ಟಮಠಾಧೀಶರು ಒತ್ತಾಯ ಮಾಡಿದ್ದಾರೆ.

    ಮಠ ಹಾಗೂ ದೇವಾಲಯ ಸಂಘರ್ಷದ ಕುರಿತು ಪ್ರತಿಕ್ರಿಯಿಸಿದ ಪೇಜಾವರ ಶ್ರೀಗಳು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಸುಬ್ರಹ್ಮಣ್ಯ ಮಠಕ್ಕೆ ಅನೇಕ ಸಮಸ್ಯೆಯಾಗಿದೆ. ಸುಬ್ರಹ್ಮಣ್ಯ ಮಠಾಧೀಶರಿಗೆ ದೇವಸ್ಥಾನದ ಆಡಳಿತ ಮಂಡಳಿ ನಿರಂತರ ಕಿರುಕುಳ ನೀಡುತ್ತಿದೆ. ಉಡುಪಿಯ ಅಷ್ಟಮಠಾಧೀಶರಿಗೆ ಈ ಬಗ್ಗೆ ಅತೀವ ಕಳವಳವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಮಠ ಜನರಿಗೆ ಹಾನಿಕಾರಕವಾಗಿ ವರ್ತಿಸುತ್ತಿಲ್ಲ. ಕುಕ್ಕೆ ದೇವಸ್ಥಾನ ಹಾಗೂ ಮಠದ ಸಂಘರ್ಷ ಸರಿಯಲ್ಲ. ಈ ವಿಚಾರದಲ್ಲಿ ದೇವಸ್ಥಾನಕ್ಕೆ ಭಿನ್ನಾಭಿಪ್ರಾಯ ಇದ್ದರೆ ಮಾತುಕತೆ ಮಾಡೋಣ. ಸುಬ್ರಹ್ಮಣ್ಯ ಮಠದಿಂದ ತೊಂದರೆಯಾದರೆ ಸರಿಪಡಿಸೋಣ. ಸುಬ್ರಹ್ಮಣ್ಯ ಶ್ರೀಗಳ ಜೊತೆ ಮಾತಮಾಡುತ್ತೇನೆ ನಾನೇ ಮಧ್ಯಸ್ಥಿಕೆ ವಹಿಸುತ್ತೇನೆ ಎಂದು ಹೇಳಿದರು.

    ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಠಕ್ಕೆ ಗೌರವ ಸಿಗುತ್ತಿಲ್ಲ. ವಿದ್ಯಾಭೂಷಣ ಶ್ರೀ ಇದ್ದಾಗ ಇದ್ದ ಗೌರವವಾದ್ರೂ ಸಿಗಬೇಕು. ದೇವಸ್ಥಾನ, ಮಠ ಸ್ವತಂತ್ರವಾಗಿ ನಡೆಯಬೇಕು. ಎಲ್ಲಾ ಪಕ್ಷಗಳು, ಎಲ್ಲಾ ಜನರ ಸಹಕಾರ ಬೇಕು. ಸುಬ್ರಹ್ಮಣ್ಯ ಶ್ರೀಗಳು ಉಪವಾಸ ಕೈ ಬಿಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಬೇಕು. ಉಪವಾಸ ಕೈಬಿಡುವಂತೆ ಸುಬ್ರಹ್ಮಣ್ಯ ಸ್ವಾಮಿಗಳ ಮನ ಒಲಿಸಬೇಕು ಎಂದು ತಿಳಿಸಿದರು.

    ಪರ್ಯಾಯ ಪಲಿಮಾರು ಸ್ವಾಮೀಜಿ, ಕಾಣಿಯೂರು ಮಠಾಧೀಶರ ಹಾಗೂ ಸೋದೆ ಮಠಾಧೀಶರು ಜೊತೆಯಾಗಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿ, ದೇವಸ್ಥಾನದವರು ಮಠಕ್ಕೆ ಅನಾವಶ್ಯಕ ತೊಂದರೆ ಕೊಟ್ಟರೆ ನಾವು ಸಹಿಸಲ್ಲ. ಮಠದ ಗೋಶಾಲೆಗೆ ಬರುವ ನೀರನ್ನು ದೇವಸ್ಥಾನ ಸ್ಥಗಿತಗೊಳಿಸಿದೆ. ಧ್ವನಿವರ್ಧಕವನ್ನು ಮಠದ ಕಡೆಗೆ ಮುಖ ಮಾಡಿ ಇಟ್ಟು ಪೂಜೆಗೆ ಅಡ್ಡಿ ಪಡಿಸಲಾಗುತ್ತಿದೆ. ಸರ್ಪ ಸಂಸ್ಕಾರಕ್ಕೆ ಮಠದಲ್ಲಿ ಮಾಡಲು ಯಾವುದೇ ನಿರ್ಬಂಧ ಇಲ್ಲ. ಮಠದ ವಿರೋಧಿ ವರ್ಗದ ಈ ನಿಲುವು ಸರಿಯಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಮಂಗಳೂರಿನ ಹಲವೆಡೆ ಬಸ್ಸುಗಳ ಮೇಲೆ ಕಲ್ಲು ತೂರಾಟ

    ಮಂಗಳೂರಿನ ಹಲವೆಡೆ ಬಸ್ಸುಗಳ ಮೇಲೆ ಕಲ್ಲು ತೂರಾಟ

    ಮಂಗಳೂರು: ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ದಾಂದಲೆ ನಡೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ವರದಿಯಾಗಿದೆ.

    ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳಿಗೆ ಕದ್ರಿ ಠಾಣೆಯ ಮುಂಭಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ದಾಂದಲೆ ನಡೆಸಿ, ಜ್ಯೋತಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹೊತ್ತಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಇದಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಕೋಡಾಜೆಯಲ್ಲಿನ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಂಚಿ ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ.

    ಮಂಗಳೂರಿನ ಕದ್ರಿ ಶಿವಭಾಗ್ ನಲ್ಲಿ ಬಂದ್ ನಡುವೆಯೂ ಸೇವೆ ನೀಡುತ್ತಿದ್ದ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಯೋರ್ವ ಮುಖಕ್ಕೆ ಹೆಲ್ಮೆಟ್ ಧರಿಸಿ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾನೆ. ಕಲ್ಲು ತೂರಾಟ ನಡೆಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಭಾರತ್ ಬಂದ್‍ಗೆ ವರ್ತಕರು ಹಾಗೂ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಸೋಮವಾರದ ಬಂದ್ ದಿನ ಎಲ್ಲಾ ಅಂಗಡಿಗಳು 1 ಗಂಟೆ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವುದರ ಬಗ್ಗೆ ಪೋಸ್ಟರ್ ಗಳನ್ನು ಹಾಕಿಕೊಂಡಿದ್ದರು. ಹೀಗಾಗಿ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.

    ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಬಂದೋಬಸ್ತ್ ಕಲ್ಪಿಸಿಕೊಡಲಾಗಿದೆ. ಅಲ್ಲದೇ ಖಾಸಗಿ ಸೇರಿದಂತೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಕಲ್ಲಡ್ಕದಲ್ಲಿ ಟೈರ್ ಹೊತ್ತಿಸಿ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದವರನ್ನು ಚದುರಿಸಿ, ಉರಿಯುತ್ತಿದ್ದ ಟೈರ್ ಬೆಂಕಿಯನ್ನು ಪೋಲಿಸರು ನಂದಿಸಿದ್ದಾರೆ. ಕುಲಶೇಖರ್ ಬಳಿಯು ಟೈರ್ ಗೆ ಬೆಂಕಿ ಹತ್ತಿಸುವ ಯತ್ನವನ್ನು ವಿಫಲಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಉದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv