Tag: dakshina kannada

  • ಮಂಗಳೂರು | ಗೆಳತಿಯ ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ಹಂಚಿಕೊಂಡಿದ್ದ ಯುವತಿ ಅರೆಸ್ಟ್‌

    ಮಂಗಳೂರು | ಗೆಳತಿಯ ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ಹಂಚಿಕೊಂಡಿದ್ದ ಯುವತಿ ಅರೆಸ್ಟ್‌

    – ಯುವಕನ ಡೆತ್‌ನೋಟ್‌ನಲ್ಲಿ ಬಯಲಾಯ್ತು ರಹಸ್ಯ
    – ವಾಟ್ಸಪ್‌ ಗ್ರೂಪ್‌ನಲ್ಲಿ ವಿಡಿಯೋ ಹರಿಬಿಟ್ಟ ಬಳಿಕ ದೂರು

    ಮಂಗಳೂರು: ಒಂದೇ ಮನೆಯಲ್ಲಿ ವಾಸವಿದ್ದ ಸಂದರ್ಭದಲ್ಲಿ, ಯುವತಿಯರಿಬ್ಬರ ಖಾಸಗಿ ವಿಡಿಯೊವನ್ನ ಇನ್ನೊಬ್ಬಾಕೆ ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವತಿಯೊಬ್ಬಳನ್ನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆಯ ಕಲಶದ ನಿರೀಕ್ಷಾ ಬಂಧಿತ ಯುವತಿ. ಮಂಗಳೂರಿನ ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗೆಳತಿ ಜೊತೆ ವಾಸವಿದ್ದ ನಿರೀಕ್ಷಾ ಉದ್ಯೋಗ ಮಾಡಿಕೊಂಡಿದ್ದಳು. ಈ ವೇಳೆ ಗೆಳತಿಯ ಖಾಸಗಿ ದೃಶ್ಯವನ್ನ ವಿಡಿಯೊ ಮಾಡಿಟ್ಟುಕೊಂಡಿದ್ದಳು. ಆ ವಿಡಿಯೊ ಈಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

    ಯುವತಿಯರು ಬಟ್ಟೆ ಬದಲಿಸುವ ವಿಡಿಯೋ ಮಾಡಿಟ್ಟುಕೊಂಡಿದ್ದ ಆರೋಪಿ ನಿರೀಕ್ಷಾ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಅಭಿಷೇಕ್ ಎಂಬಾತನಿಗೆ ಕಳುಹಿಸಿದ್ದಳಂತೆ. ಅಭಿಷೇಕ್ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದ. ಆದ್ರೆ ಕಳೆದ ಅಕ್ಟೋಬರ್‌ 9ರಂದು ಕಾರ್ಕಳದಲ್ಲಿ ಅಭಿಷೇಕ್‌ ಸುಧೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್‌ನೋಟ್‌ನಲ್ಲಿ ನಿರೀಕ್ಷಾ ಹಾಗೂ ಇತರರ ವಿರುದ್ಧ ಮೃತ ಅಭಿಷೇಕ್‌ ಹನಿಟ್ರ್ಯಾಪ್‌ ಆರೋಪ ಮಾಡಿದ್ದ.

    ನಿರೀಕ್ಷಾ ತನ್ನ ರೂಮಿನಲ್ಲಿದ್ದ ಇಬ್ಬರು ಯುವತಿಯರ ವಿಡಿಯೋ ಮಾಡಿ ವೈರಲ್ ಮಾಡಿದ್ದ ಬಗ್ಗೆಯೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ. ಸಾಯುವ ಮುನ್ನ truth group ಹೆಸರಿನ ವಾಟ್ಸಪ್‌ ಗ್ರೂಪ್‌ ಮಾಡಿ ಅದರಲ್ಲಿ ಕೆಲ ವಿಡಿಯೋಗಳನ್ನೂ ಹರಿಬಿಟ್ಟಿದ್ದ. ಅದರಲ್ಲಿ ಈ ಇಬ್ಬರ ಯುವತಿಯರ ವಿಡಿಯೋ ಕೂಡ ಇದ್ದ ಹಿನ್ನೆಲೆ ಕದ್ರಿ ಠಾಣೆಗೆ ಸಂತ್ರಸ್ತೆಯರು ದೂರು ನೀಡಿದ್ದರು.

    ಒಂದು ವರ್ಷದ ಹಿಂದೆಯೇ ವಿಡಿಯೋ ಮಾಡಿರುವ ಸಾಧ್ಯತೆಗಳಿದೆ ಎನ್ನಲಾಗಿದೆ. ಸದ್ಯ ನಿರೀಕ್ಷಾಳನ್ನು ಬಂಧಿಸಿರುವ ಕದ್ರಿ ಪೊಲೀಸರು ಬಿಎನ್ ಎಸ್ 77, 78(2), 294(2)(ಚಿ) ಅಡಿ ದಾಖಲಾಗಿದ್ದ ಪ್ರಕರಣ ದಾಖಲಿಸಿದ್ದಾರೆ. ಅತ್ತ ಉಡುಪಿಯ ಕಾರ್ಕಳ ಪೊಲೀಸರು ಈಗಾಗಲೇ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

  • Rain Alert | ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ – ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್

    Rain Alert | ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ – ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.

    ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗೆ ಆರೆಂಜ್​ ಅಲರ್ಟ್​ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡಕ್ಕೂ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್- ನಿಕೋಬಾರ್, ಕೇರಳ, ಲಕ್ಷದ್ವೀಪ, ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

  • ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಮಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಹಿಳೆಯರು ಮಕ್ಕಳು ಸೇರಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

    ಹೌದು. ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಕ್ರೀಡಾಂಗಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆಲೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದೆ.

    ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.

  • ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ

    ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ

    – ಯಾವ ಧರ್ಮವೂ ಇನ್ನೊಬ್ಬರನ್ನ ದ್ವೇಷ ಮಾಡಿ ಅಂತ ಹೇಳಲ್ಲ
    – ಸೌಹಾರ್ದತೆಯ ಪಾಠ ಹೇಳಿದ ಸಿಎಂ

    ಮಂಗಳೂರು: ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು. ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ ಎಂದು ಪುತ್ತೂರು ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah,) ಹೇಳಿದರು.

    ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಜನರಿಗೆ ಸೌಹಾರ್ದತೆಯ ಪಾಠ ಮಾಡಿದರು. ಇದನ್ನೂ ಓದಿ: ಮೊದಲ ದಿನ ಸಾಧ್ಯವಾಗದ ಹಾಸನಾಂಬೆ ದರ್ಶನ – ಇಂದು ಮತ್ತೆ ದೇವಾಲಯಕ್ಕೆ ಬಂದ ಸುಳ್ಯ ಶಾಸಕಿ

    ಕೆಲವರು 5 ಗ್ಯಾರಂಟಿ ಯೋಜನೆ (Guarantee Scheme) ಟೀಕೆ ಮಾಡ್ತಾರೆ. ಸರ್ಕಾರದ ಬಳಿ ದುಡ್ಡಿಲ್ಲ ಅಂತ, ದುಡ್ಡಿಲ್ಲದಿದ್ದರೆ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡೋಕೆ ಆಗ್ತಿತ್ತಾ? ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂಬರ್ ವನ್ ಇತ್ತು. ಆದರೆ ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ. ಏಕೆಂದ್ರೆ ಎತ್ತಿಕಟ್ಟೋರ ಮಕ್ಕಳು ಯಾರೂ ಈ ಜಗಳದಲ್ಲಿ ಇರಲ್ಲ. ಮೇಲ್ಜಾತಿ, ಶ್ರೀಮಂತರ ಮಕ್ಕಳು ಯಾರೂ ಸಾಯಲ್ಲ. ನಾನು ಯಾರ ಮಾತನ್ನೂ ಕೇಳಿಲ್ಲ, ಕಮಿಷನರ್, ಎಸ್ಪಿ ದಕ್ಷರನ್ನ ನೇಮಕ ಮಾಡಿದೆ. ಈಗ ಸುಧಾರಣೆ ಆಗಿಲ್ವಾ? ದಕ್ಷ ಅಧಿಕಾರಿಗಳು ಇದ್ರೆ ಬದಲಾವಣೆ ಸಾಧ್ಯ. ಯಾವತ್ತಿಗೂ ನಾವು ಅಮಾಯಕರ ಮಕ್ಕಳನ್ನ ಸಾಯಿಸೋ ಕೆಲಸ ಮಾಡಬಾರದು. ಬೇರೆ ಧರ್ಮದವರನ್ನ ದ್ವೇಷ ಮಾಡೋ ಕೆಲಸ ಮಾಡಬಾರದು, ಹಾಗಾಗಿ ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್‌.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    ಅಶೋಕ್ ರೈ ಶಾಸಕರಾಗಿ ಬಹಳ ಉತ್ತಮ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಜೊತೆಯಲ್ಲಿ ಟ್ರಸ್ಟ್ ವತಿಯಿಂದ ದೀಪಾವಳಿ ಸಂಧರ್ಭದಲ್ಲಿ ವಸ್ತ್ರದಾನ ಮಾಡ್ತಾ ಇದ್ದಾರೆ. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಇವತ್ತು ಒಂದು ಲಕ್ಷ ಜನರಿಗೆ ದಾನ ಮಾಡ್ತಾ ಇದ್ದಾರೆ. ಅಶೋಕ್ ರೈ ಸಮಾಜದ ಶ್ರೀಮಂತ ಜನರಿಗೆ ಮಾರ್ಗದರ್ಶಕರಾಗಲಿ, ಮನುಷ್ಯ ತಾನು ಗಳಿಸಿದ್ದನ್ನ ನಿರ್ಗತಿಕರಿಗೆ ಹಂಚುವುದು ಬಹಳ ಒಳ್ಳೆಯ ಕೆಲಸ. ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದು ತಿಳಿಸಿದರು. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ

    ಯಾವ ಧರ್ಮವೂ ದ್ವೇಷಿಸಿ ಅನ್ನಲ್ಲ
    ನಮ್ಮ ಸಮಾಜದಲ್ಲಿ ಅನೇಕ ಜಾತಿ ಮತ್ತು ಧರ್ಮಗಳಿವೆ. ಯಾವ ಧರ್ಮವೂ ದ್ವೇಷ ಮಾಡಿ ಅಂತ ಯಾರಿಗೂ ಹೇಳಲ್ಲ. ಪ್ರತಿಯೊಬ್ಬನ ಪ್ರೀತಿಸಿ ಅಂತ ಹೇಳುತ್ತೆ, ವೈವಿಧ್ಯತೆಯಲ್ಲಿ ಏಕತೆ ಮಾಡಿಕೊಳ್ಳಬೇಕು. ಧರ್ಮದ ತತ್ವ, ಆದರ್ಶ ಪಾಲನೆ ಮಾಡಲಿ, ಸರ್ವ ಜನಾಂಗದ ಶಾಂತಿಯ ತೋಟದ ಬದಲು ದ್ವೇಷ, ಕಚ್ಚಾಟ ಇರಬಾರದು ಎಂದು ಹೇಳಿದರು.

  • ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮುಂದುವರಿಸಿದೆ. ಇದೀಗ ಬಹುಭಾಷಾ ನಟ, ನಿರ್ದೇಶಕನ ಸಹೋದರನಿಗೆ ಎಸ್‌ಐಟಿ (SIT) ನೋಟಿಸ್ ನೀಡಲು ಮುಂದಾಗಿದೆ.

    ಧರ್ಮಸ್ಥಳ (Dharmasthala) ಬುರುಡೆ ಫೈಲ್ಸ್ ವಿಚಾರದಲ್ಲಿ ದಿನೇ ದಿನೇ ಹೊಸ ಬೆಳವಣಿಗೆಗಳಾಗುತ್ತಲೇ ಇದೆ. ಈ ಮೊದಲು ಅನನ್ಯಾ ಭಟ್ ಬಗ್ಗೆ ಕಟ್ಟುಕತೆ ಕಟ್ಟಿ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಇದೀಗ ಅನನ್ಯಾ ಭಟ್ ಕೇಸ್ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ.ಇದನ್ನೂ ಓದಿ: Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    ವಾಸಂತಿ ಕೇಸ್ ಬಗ್ಗೆ ತನಿಖೆಗಿಳಿದಾಗ ಎಸ್‌ಐಟಿಗೆ ಬಹುಭಾಷಾ ನಟನ ಸಹೋದರನ ಹೆಸರು ಕೇಳಿಬಂದಿದೆ. ನಟನ ಸಹೋದರ ಕೂಡ ಕಾಲಿವುಡ್ ನಟನಾಗಿದ್ದು, ವಾಸಂತಿ ಗಂಡನ ಗೆಳೆಯ ಎಂದು ತಿಳಿದುಬಂದಿದೆ. ಸದ್ಯ ಕಾಲಿವುಡ್ ನಟ ಚೆನ್ನೈನಲ್ಲಿರುವುದಾಗಿ ಮಾಹಿತಿಯಿದ್ದು, ಆತನ ವಿಳಾಸ ಪತ್ತೆ ಮಾಡುವಲ್ಲಿ ಎಸ್‌ಐಟಿ ಕಾರ್ಯನಿರತವಾಗಿದೆ. ವಿಳಾಸ ಸಿಗದ ಹಿನ್ನೆಲೆ ನೋಟಿಸ್ ನೀಡಲು ವಿಳಂಬವಾಗಿದೆ.

    ಇನ್ನೂ ಬುರುಡೆ ಫೈಲ್ಸ್ ಪ್ರಕರಣದಲ್ಲಿ ಏಳು ಅಸ್ಥಿಪಂಜರ ಸಿಕ್ಕ ಬಂಗ್ಲೆಗುಡ್ಡ ಜಾಗದ ಸರ್ವೇಗಾಗಿ ಅರಣ್ಯಾಧಿಕಾರಿಗಳ ತಂಡವೊಂದು ಆಗಮಿಸಿದೆ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಏಳು ಅಸ್ಥಿಪಂಜರ ಸಿಕ್ಕಿದೆ ಎಂದು ದೃಢಪಡಿಸಲು ಸರ್ವೇ ಕಾರ್ಯನಡೆಸಿದೆ.ಇದನ್ನೂ ಓದಿ: ಬುರುಡೆ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

     

     

  • ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ಬೆಂಗಳೂರು/ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ಮತ್ತೊಂದು ಮುಖವಾಡ ಕಳಚಿಬಿದ್ದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಛೀಮಾರಿ ಹಾಕಿಸಿಕೊಂಡಿದ್ದ ಗ್ಯಾಂಗ್‌, ತಮಗಾದ ಹಿನ್ನಡೆಯನ್ನು ಮುಚ್ಚಿಟ್ಟು ದಕ್ಷಿಣ ಕನ್ನಡ (Dakshina Kannada) ಎಸ್ಪಿಗೆ ದೂರು ನೀಡಿದ್ದ ಸತ್ಯ ಈಗ ಬಟಾಬಯಲಾಗಿದೆ.

    ಸುಪ್ರೀಂ (Supreme Court) ಆದೇಶವನ್ನ ಮುಚ್ಚಿಚ್ಚು ರಾಜ್ಯ ಸರ್ಕಾರವನ್ನೇ (Karnataka Government) ಈ ಬುರುಡೆ ಗ್ಯಾಂಗ್‌ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್‌ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಡಿಪಾರು ಆದೇಶ ಬಳಿಕ ತಿಮರೋಡಿ ಅಜ್ಞಾತ – ಇತ್ತ ಚಿನ್ನಯ್ಯನ 15, 16ನೇ ವಿಡಿಯೋ ರಿಲೀಸ್

    ಸುಪ್ರೀಂ ಕೋರ್ಟ್ ಆದೇಶ ಮುಚ್ಚಿಟ್ಟು ಮೋಸ
    ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್‌

    ಎಸ್‌ಐಟಿ ರಚನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದ ಗ್ಯಾಂಗ್‌
    ಕಳೆದ ಏಪ್ರಿಲ್‌ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್‌ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್‌ ಬುರುಡೆ ಗ್ಯಾಂಗ್‌ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್‌ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು.

    ಇದೆಲ್ಲವನ್ನೂ ಮುಚ್ಚಿಟ್ಟಿದ್ದ ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬಳಿಕ ಎಸ್ಪಿಗೂ ದೂರು ನೀಡಿ ಪ್ರಕರಣ ಮುನ್ನೆಲೆಗೆ ತಂದಿದೆ ಅನ್ನೋದು ಈಗ ಬಯಲಾಗಿದೆ. ಇದನ್ನೂ ಓದಿ: ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

  • ಗಡಿಪಾರು ಆದೇಶ ಬಳಿಕ ತಿಮರೋಡಿ ಅಜ್ಞಾತ – ಇತ್ತ ಚಿನ್ನಯ್ಯನ 15, 16ನೇ ವಿಡಿಯೋ ರಿಲೀಸ್

    ಗಡಿಪಾರು ಆದೇಶ ಬಳಿಕ ತಿಮರೋಡಿ ಅಜ್ಞಾತ – ಇತ್ತ ಚಿನ್ನಯ್ಯನ 15, 16ನೇ ವಿಡಿಯೋ ರಿಲೀಸ್

    ದಕ್ಷಿಣ ಕನ್ನಡ/ರಾಯಚೂರು: ಧರ್ಮಸ್ಥಳ ಬುರುಡೆ ಗ್ಯಾಂಗ್ ಲೀಡರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿದ್ದು, ಇತ್ತ ಬುರುಡೆ ಗ್ಯಾಂಗ್‌ನಿಂದ 15 & 16ನೇ ವಿಡಿಯೋ ರಿಲೀಸ್ ಆಗಿದೆ.

    ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿದ್ದು, ಇದುವರೆಗೆ ಆತನ ಸುಳಿವು ಸಿಕ್ಕಿಲ್ಲ. ಪ್ರತಿ 7 ದಿನಗಳಿಗೊಮ್ಮೆ ಮಾನ್ವಿ ಠಾಣೆಯ ಅಧಿಕಾರಿ ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಮಾನ್ವಿ (Manvi) ತಾಲೂಕಿಗೆ ತಿಮರೋಡಿಯನ್ನು (Mahesh Shetty Timarody) ಗಡಿಪಾರು ಮಾಡಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ನಮ್ಮ ಜಿಲ್ಲೆಗೆ ಬೇಡ, ಯಾವುದಾದರೂ ಕಾಡಿಗೆ ಕಳುಹಿಸಿ ಎಂದು ದಲಿತ ಸೇನೆ ಹಾಗೂ ಸಮಾನ ಮನಸ್ಕರ ವೇದಿಕೆ ಪ್ರತಿಭಟನೆ ನಡೆಸಿದೆ. ರಾಜಕೀಯ ನಾಯಕರನ್ನು ಕೀಳಾಗಿ ನಿಂದಿಸಿದ್ದೇ ಗಡಿಪಾರಿಗೆ ಪ್ರಮುಖ ಕಾರಣವಾಗಿದೆ.ಇದನ್ನೂ ಓದಿ: ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರು ಕಾಡಿಗೆ ಕಳಿಸಿ: ತಿಮರೋಡಿ ಗಡಿಪಾರಿಗೆ ಆಕ್ಷೇಪ

    ಬುರುಡೆ ಗ್ಯಾಂಗ್‌ನಿಂದ 15 & 16ನೇ ವಿಡಿಯೋ ರಿಲೀಸ್ ಆಗಿದೆ. 2023ರ ಆಗಸ್ಟ್‌ನಲ್ಲಿ ಮಾಡಿದ ವಿಡಿಯೋ ಇದಾಗಿದ್ದು, ತಿಮರೋಡಿ ಮನೆಗೆ ಚಿನ್ನಯ್ಯ ಮೊದಲ ಭಾರೀ ಭೇಟಿ ನೀಡಿದ್ದಾಗ ಚೆನ್ನೈ ಮೂಲದ ಸ್ವಾಮೀಜಿ, ಸೌಜನ್ಯ ಕೇಸ್, ಮಹಿಳೆಯರ ಕೊಲೆಗಳ ಬಗ್ಗೆ ಚರ್ಚೆ ಆಗಿದೆ. ಪಾಯಿಂಟ್ ನಂ.16ರಲ್ಲಿ ಅನಾಥ ಶವ ಹೂತಿರೋ ಬಗ್ಗೆಯೂ ಚಿನ್ನಯ್ಯ ಹೇಳಿದ್ದಾನೆ. ಕೋರ್ಟ್ನಲ್ಲಿ ಚಿನ್ನಯ್ಯ 183 ಸ್ವಇಚ್ಛಾ ಹೇಳಿಕೆ ಪೂರ್ಣವಾಗದಿದ್ದರಿಂದ ನಾಳೆ ಮತ್ತೆ ಹೇಳಿಕೆ ದಾಖಲಿಸಲಿದೆ.

    ಈ ಮಧ್ಯೆ, ತಿಮರೋಡಿ ಮನೆಗೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿ, ಹಣ ವರ್ಗಾವಣೆ ಬಗ್ಗೆ ಪತ್ನಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ:ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು

  • ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು

    ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು

    ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಯನ್ನು (Mahesh Shetty Thimarodi) ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ.

    ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ಗೆ ಫಂಡಿಂಗ್ – 11 ಮಂದಿಗೆ ಎಸ್‌ಐಟಿ ನೋಟಿಸ್

    ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ.

    ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ತಿಮರೋಡಿ ಆಶ್ರಯ‌ ನೀಡಿದ್ದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಪ್ರಕರಣ – ಇಂದು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾನೆ ಚಿನ್ನಯ್ಯ

  • ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

    ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

    – 2023ರಲ್ಲೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ.

    2 ವರ್ಷಗಳ ಹಿಂದೆ 2023ರ ಆಗಸ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್ ನಂ.17ರ ಬಗ್ಗೆ ಮಾತನಾಡಿದ್ದಾನೆ. ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್‌ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ. ಅದು ಸ್ಮಶಾನ ಅಲ್ಲ, ಬಸ್ ಸ್ಟ್ಯಾಂಡ್‌ನಿಂದ ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕುತ್ತಿದ್ದೆ. ಯಾವ ನೆಲ ಒಣಗಿರುತ್ತೋ ಅದನ್ನು ತೆಗೆದು ಹೂತು ಹಾಕುತ್ತಿದ್ದೆ. ಇನ್ನೂ ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ.ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಏನಾಯ್ತು ಅಂತಾ ಗೊತ್ತಿಲ್ಲ. ನೇತ್ರಾವತಿಯಲ್ಲಿ ಒಂದು ಹೆಣ ತೆಗೆದಿದ್ದೆ. ಅದೇ ದಿನ ಪೊಲೀಸರು ನನಗೆ ಭಟ್ರ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಳು ಎಂದಿದ್ದರು. ನಾನು ಹೆಣ ಮೇಲೆ ಹಾಕಿ ವಾಪಾಸ್ ಬಂದೆ. ಜೊತೆಗೆ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣವೊಂದನ್ನು ಹೂತು ಹಾಕಿದ್ದೇನೆ ಎಂದಿದ್ದಾನೆ.

    ವಿಡಿಯೋದ ಮೊದಲ ಭಾಗದಲ್ಲೇನಿದೆ?
    ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಾಂಪೌಂಡರ್ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ.

    ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ರೂ. ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ.ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

    2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
    ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲ್ಯಾನ್‌ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.

    ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟಿಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

    ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್‌ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

     

  • ದ.ಕ.-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ‘ಮಾಸ್ಟರ್ ಪ್ಲಾನ್’!

    ದ.ಕ.-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ‘ಮಾಸ್ಟರ್ ಪ್ಲಾನ್’!

    -ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ

    ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು (Manjunath Bhandari) ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಯ ಪ್ರವಾಸಿ ತಾಣಗಳ (Tourist Place) ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು, ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು.

    ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು ʼರಿವರ್ ಫೆಸ್ಟ್ರವಲ್ʼ ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.

    ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆ‌ರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ.

    ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ರಸ್ತೆ ಬದಿ ಸೌಲಭ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಟಿಒಆರ್ 56 ಟಿಡಿಪಿ 2025, 23-07-2025 ಘೋಷಣೆಯನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಗೆ ತಾತ್ವಿಕ ಅನುಮೋದನೆ ನೀಡಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಣ್ಣೀರುಬಾವಿ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಸಮಾಲೋಚಕ ಸಂಸ್ಥೆಯನ್ನು ಆಯ್ಕೆ ಮಾಡಲು ಟೆಂಡರ್ ಪ್ರಕಟಿಸಲಾಗಿದ್ದು, ಸದರಿ ಟೆಂಡರ್ನ ತಾಂತ್ರಿಕ ಬಿಡ್ಡನ್ನು ದಿನಾಂಕ ಆ.7 ರಂದು ತೆರೆಯಲಾಗಿದ್ದು, ಸದರಿ ಟೆಂಡರ್ ನಲ್ಲಿ 3 ಬಿಡ್ಡುದಾರರು ಭಾಗವಹಿಸಿದ್ದು, ಸದರಿ ಬಿಡ್ಡುದಾರರಿಗೆ ತಾಂತ್ರಿಕ ಪ್ರಾತ್ಯಕ್ಷಿಕೆ ಆ.29 ರಂದು ಆಯೋಜಿಸಿದ್ದು, ಸದರಿ ಬಿಡ್ ಪರಿಶೀಲನಾ ಹಂತದಲ್ಲಿರುತ್ತದೆ.

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕೋಡಿಕಲ್, ಗುರುಪುರ ನದಿ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ರವರೊಂದಿಗೆ ಏಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ ನ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡ‌ರ್ ಅನ್ನು ಪ್ರಕಟಿಸಿರುವಂತೆ ಬಿಡ್ಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡ‌ರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ (Open Tender) ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್‌ನ ತಾಂತ್ರಿಕ ಬಿಡ್ಡನ್ನು ಸೆ.12ರಂದು ತೆರೆಯಲಾಗುವುದು.

    ಉಡುಪಿ ಜಿಲ್ಲೆಯ ಸದರಿ ಮೂರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ಎಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡ‌ರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ (Open Tender) ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್ ತಾಂತ್ರಿಕ ಬಿಡ್ಡನ್ನು ಸೆ.12ರಂದು ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವರು ತಿಳಿಸಿದ್ದಾರೆ.