Tag: Dali Dhananjay

  • ‘ಕೋಟಿ’ಯಲ್ಲಿ ಮಿಂಚಲು ಸಜ್ಜಾದ ನವಪ್ರತಿಭೆಗಳು

    ‘ಕೋಟಿ’ಯಲ್ಲಿ ಮಿಂಚಲು ಸಜ್ಜಾದ ನವಪ್ರತಿಭೆಗಳು

    ಡಾಲಿ ನಟನೆಯ ಸಿದ್ಧವಿರುವ ‘ಕೋಟಿ’ (Kotee Film) ಸಿನಿಮಾ ಈಗಾಗಲೇ ಟ್ರೈಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ.

    ‘ಕೋಟಿ’ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ‘ಕೋಟಿ’ಯಲ್ಲಿ ಧನಂಜಯ್‌‌ಗೆ (Daali Dhananjay) ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ – ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ. ಇತ್ತಿಚೆಗೆ ನಡೆದ ಚಿತ್ರದ ಟ್ರೈಲರ್ ರಿಲೀಸ್ ಸಮಾರಂಭದಲ್ಲಿ ಡಾಲಿ ಧನಂಜಯ್ ಮತ್ತು ತಾರಾ ಅವರು ಈ ಹೊಸ ಪ್ರತಿಭೆಗಳ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಉದಯೋನ್ಮುಖ ‌ನಟ‌ ‘ಪೃಥ್ವಿ ಶಾಮನೂರು’ ಈಗಾಗಲೇ ಹರಿಪ್ರಸಾದ್ ಜಯಣ್ಣ ನಿರ್ದೇಶನದ ‘ಪದವಿ ಪೂರ್ವ’ದ ಮುಖಾಂತರ ತಮ್ಮ ಸಿನಿಮಾ ಪಯಣವನ್ನು ಆರಂಭಿಸಿದ್ದಾರೆ.‌ ಕೋಟಿ‌‌ ಸಿನಿಮಾದಲ್ಲಿ‌ ಇವರ ಪಾತ್ರ ನಚ್ಚಿ, ಕೋಟಿಯ ಪ್ರೀತಿಯ ತಮ್ಮ. ಯಾರಿಗೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಇವನು ಅಕ್ಕ ಅಣ್ಣಂದಿರ ಕಾಡಿಸುತ್ತ ನಗಿಸುತ್ತ ಮನೆಗೊಂದು ಕಳೆ ತರುವ ತುಂಟ.‌‌ ಹಾಗೆಯೆ ಕೋಟಿಯ ತಂಗಿ ‘ಮಹತಿ’ಯ ಪಾತ್ರದಲ್ಲಿ‌ ರಂಗಭೂಮಿ ಹಿನ್ನೆಲೆಯ ತನುಜಾ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಇವರಿಗೆ ಇದು ಚೊಚ್ಚಲ ಸಿನಿಮಾ.

    ಕೋಟಿ ಚಿತ್ರದ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಪೃಥ್ವಿ ಶಾಮನೂರು ನಚ್ಚಿ ಒಂದು ಸಣ್ಣ ಪಾತ್ರವಾದರೂ ತುಂಬಾ ಇಂಪ್ಯಾಕ್ಟ್ ಇರುವ ಪಾತ್ರ. ಇಷ್ಟು ದೊಡ್ಡ ಸಿನಿಮಾದಲ್ಲಿ ಅವಕಾಶ ಸಿಕ್ಕಿದ್ದಕ್ಕೆ‌ ತುಂಬಾ ಖುಷಿ ಇದೆ ಎಂದರು. ಕೋಟಿಯ ತಂಗಿಯ ಪಾತ್ರ‌ ಮಾಡಿರುವ ತನುಜಾ ವೆಂಕಟೇಶ್ ನಾನು ಕೋಟಿಯ‌ ತಂಗಿ ‘ಮಹತಿ’ಯಾಗಿ ಅಭಿನಯಿಸಿದೀನಿ. ಒಂದು‌ ಇಂಪಾರ್ಟೆಂಟ್ ಪಾತ್ರ. ಧನಂಜಯ್ ಅಣ್ಣ, ತಾರಮ್ಮ ಮತ್ತು ಪೃಥ್ವಿ ಅವರ ಜತೆ ಚಿತ್ರೀಕರಣದಲ್ಲಿ ಭಾಗವಹಿಸಿದ್ದು ಒಂದು ಕುಟುಂಬದ ಜತೆ‌ ಇದ್ದಂತೆ ಅನಿಸಿತು” ಎಂದು ಸಂತಸ ಹಂಚಿಕೊಂಡರು.

    ಕೋಟಿ ಚಿತ್ರದ ನಿರ್ದೇಶಕ ಪರಮ್ , ಈಗಾಗಲೇ ಹೀರೋ ಆಗಿ ‘ಪದವಿ ಪೂರ್ವ’ ಚಿತ್ರದಲ್ಲಿ ನಟಿಸಿರುವ ಪೃಥ್ವಿ ಶಾಮನೂರು ‘ನಚ್ಚಿ’ ಪಾತ್ರವನ್ನು ಇಷ್ಟಪಟ್ಟು ಒಪ್ಪಿ ನಟಿಸಿದ್ದಾರೆ. ಅವರ ಅಭಿನಯದ ಎರಡು ದೃಶ್ಯಗಳನಂತೂ ನೀವು ತುಂಬಾ ಇಷ್ಟ ಪಡುತ್ತೀರಿ. ‘ಮಹತಿ’ಯ ಪಾತ್ರ‌ ಮಾಡಿರುವ ತನುಜಾ ಅವರ ಮೊದಲ ಸಿನಿಮಾ ಇದು. ಅವರ ಅಭಿನಯದಲ್ಲಿ ತುಂಬಾ ಲೈಫ್ ಇದೆ. ಪ್ರತಿಭಾವಂತ ನಟಿ ಎಂದರು. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

    ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್. ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʻಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  • ‘ಉತ್ತರಕಾಂಡ’ ಸಿನಿಮಾದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ ಭಾಗಿ

    ‘ಉತ್ತರಕಾಂಡ’ ಸಿನಿಮಾದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ ಭಾಗಿ

    ಹಿಂದೆ ಕನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆಯು ಒಂದು ಪೋಸ್ಟರ್ ಹಂಚಿಕೊಂಡಿತ್ತು.  ಅದರಲ್ಲು ಕರ್ನಾಟಕ ಕಿಂಗ್ ಯಾರಲೇ? ಎಂದು ಪ್ರಶ್ನೆಯನ್ನು ಮಾಡಿತ್ತು. ಈ ಪೋಸ್ಟರ್ ಕುತೂಹಲಕ್ಕೂ ಕಾರಣವಾಗಿತ್ತು. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯೇನೂ ಗುಟ್ಟಾಗಿ ಉಳಿದಿರಲಿಲ್ಲ. ಜೊತೆಗೆ ಶಿವಣ್ಣನನ್ನು (Shivaraj Kumar) ಅಭಿಮಾನಿಗಳು ಕಿಂಗ್ (King) ಅಂತಾನೇ ಕರೆಯುತ್ತಾರೆ. ಶಿವಣ್ಣನ ಪೋಸ್ಟರ್ ರಿಲೀಸ್ ಮಾಡುವುದಕ್ಕಾಗಿ ಈ ಪೋಸ್ಟರ್ ರಿಲೀಸ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈಗ ಅದು ನಿಜವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಉತ್ತರಕಾಂಡ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಜೊತೆಗೆ ಪತ್ನಿ ಗೀತಾ ಕೂಡ ಹೋಗಿದ್ದಾರೆ.

    ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.

    ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.

     

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ

  • ಕುಟುಂಬ ಸಮೇತ ಬಂದು ಮತದಾನ ಮಾಡಿದ ಡಾಲಿ ಧನಂಜಯ್

    ಕುಟುಂಬ ಸಮೇತ ಬಂದು ಮತದಾನ ಮಾಡಿದ ಡಾಲಿ ಧನಂಜಯ್

    ತ್ತರಕಾಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್, ಕಳೆದ ಎರಡು ವಾರಗಳಿಂದ ಅವರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದರು. ಉತ್ತರ ಕರ್ನಾಟದಲ್ಲಿ ನಡೆಯುತ್ತಿದ್ದ ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.

    ಹೌದು, ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ ಡಾಲಿ ಧನಂಜಯ. ಪ್ರತಿ ಬಾರಿಯಂತೆ ಈ ಬಾರಿಯೂ ಕುಟುಂಬದ ಜೊತೆ ಮತದಾನ ಮಾಡಿ ಮಾದರಿಯಾಗಿದ್ದಾರೆ. ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಸ್ಟೈಲ್ ನಲ್ಲಿ ಬಂದು ಹಕ್ಕು ಚಲಾಯಿಸಿದ್ದಾರೆ.

    ಬಘೀರ ಸಿನಿಮಾದ ಶೂಟಿಂಗ್ ವೇಳೆ ಏಟು ಮಾಡಿಕೊಂಡು, ಶಸ್ತ್ರ ಚಿಕಿತ್ಸೆಯ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟ ಶ್ರೀಮುರಳಿ ತಪ್ಪದೇ ಮತಗಟ್ಟಿಗೆ ಬಂದು ಮತದಾನ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅವರು ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ. ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಮುರಳಿ, ‘ಮತದಾನ ನಮ್ಮ ಹಕ್ಕು ಮತ ಚಲಾಯಿಸಿದ್ದೇವೆ. ನಮ್ಮ ಬೂತ್ ಅಲ್ಲಿ ತುಂಬಾ ಜನ ಇದ್ರು, ನೋಡಿ ತುಂಬಾ ಖುಷಿ ಆಯ್ತು. ಹಿರಿಯ ನಾಗರೀಕರು ಬರ್ತಾ ಇದ್ದಾರೆ. ಪ್ರಜಾಪ್ರಭುತ್ವ ನಾವು ಆಯ್ಕೆ ಮಾಡಿಕೊಳ್ಳೋದು. ಯೂತ್ ಇನ್ನೂ ಬರ್ತಿಲ್ಲ ಅಂತಾ ಅಂದರೆ ಏನು ಹೇಳಬೇಕು. ಇಂತಹ ಜವಾಬ್ದಾರಿ ಮೆರೆಯಬಾರದು.  ಇಲ್ಲೇನೂ ಎಕ್ಸಾಂ ಬರೆಸಲ್ಲ ಬಂದು ಮತದಾನ ಮಾಡಿ. ನಿಮಗೆ ಬೇಕಾದ ನಾಯಕನನ್ನ ಆಯ್ಕೆ ಮಾಡಿಕೊಳ್ಳಿ. ಯಾರು ಯಾರು ಓಟ್ ಮಾಡಿಲ್ಲ ಅವರಿಗೆ ಏನು ಹೇಳಬೇಕು ಮಾಧ್ಯಮ ಮುಂದೆ ಮಾತಾಡಬಾರದು’ ಎಂದಿದ್ದಾರೆ.

    ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಒಟ್ಟಾಗಿಯೇ ಬಂದು ಮತ ಚಲಾಯಿಸಿದರು. ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್ ಕುಮಾರ್, ಅವರ ಪತ್ನಿ ಮಂಗಳ ರಾಘವೇಂದ್ರ ರಾಜ್ ಕುಮಾರ್ ಮತ್ತು ಮಕ್ಕಳಾದ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಒಟ್ಟಾಗಿ ಬಂದು ಮತದಾನ ಮಾಡಿದ್ದಾರೆ.

     

    ಮತದಾನದ ನಂತರ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ‘ಇದು ಮತದಾನ ಅಲ್ಲ, ಮತವನ್ನು ದಾನ ಮಾಡಬೇಡಿ. ಅದು ನಮ್ಮ ಹಕ್ಕು, ಹಕ್ಕನ್ನು ಎಲ್ಲರೂ ಚಲಾಯಿಸಿ ಎಂದರು. ಈ ಹಿಂದೆ ಅಪ್ಪ ಅಮ್ಮನ ಜೊತೆ ಬಂದು ವೋಟು ಮಾಡುತ್ತಿದ್ದೆವು. ಆಮೇಲೆ ಅಪ್ಪು ಜೊತೆ ಬಂದೆ. ಈಗ ಒಬ್ಬೊಬ್ಬರೆ ಹೋಗುತ್ತಿದ್ದಾರೆ. ಮುಂದಿನ ಪೀಳಿಗೆ ಮತದಾನಕ್ಕೆ ಸಜ್ಜಾಗುತ್ತಿದೆ ಎಂದರು.

  • ಲೋಕಸಭಾ ಚುನಾವಣೆಗೆ ನಟ ಧನಂಜಯ್ ಸ್ಪರ್ಧಿ: ಮಾಹಿತಿ ಇಲ್ಲವೆಂದ ಸಿಎಂ

    ಲೋಕಸಭಾ ಚುನಾವಣೆಗೆ ನಟ ಧನಂಜಯ್ ಸ್ಪರ್ಧಿ: ಮಾಹಿತಿ ಇಲ್ಲವೆಂದ ಸಿಎಂ

    ಟ ಡಾಲಿ ಧನಂಜಯ್ (Daali Dhananjay) ಈ ಬಾರಿ ಲೋಕಸಭಾ (Lok Sabha) ಚುನಾವಣೆಯ ಆಖಾಡಕ್ಕೆ ಇಳಿಯಲಿದ್ದಾರೆ ಎಂದು ಸುದ್ದಿ ಆಗಿತ್ತು. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಧನಂಜಯ್ ಅವರನ್ನು ಕಾಂಗ್ರೆಸ್ (Congress) ಕಣಕ್ಕೆ ಇಳಿಸಲಿದೆ ಎಂದು ಹೇಳಲಾಗಿತ್ತು. ಈ ಸುದ್ದಿ ಕೇವಲ ಗಾಂಧಿನಗರದಲ್ಲಿ ಮಾತ್ರವಲ್ಲ, ರಾಜಕೀಯ ವಲಯದಲ್ಲೂ ಸಂಚಲನ ಸೃಷ್ಟಿ ಮಾಡಿತ್ತು.

    ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಡಾಲಿ ಚುನಾವಣೆ ಕುರಿತಂತೆ ಮಾಧ್ಯಮಗಳು ಕೇಳಲಾದ ಪ್ರಶ್ನೆಗೆ ಉತ್ತರಿಸಿರೋ ಸಿಎಂ, ಕಾಂಗ್ರೆಸ್ ಪಕ್ಷದಲ್ಲಿ ಆ ರೀತಿ ಯಾವುದೇ ಚರ್ಚೆ ಆಗಿಲ್ಲ. ನನಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ  ಧನಂಜಯ್ ಬಗೆಗಿನ ಸುದ್ದಿಯನ್ನು ಅಲ್ಲಗಳೆದಿದ್ದಾರೆ.

     

    ಕರ್ನಾಟಕ ಸರಕಾರ ಧನಂಜಯ್ ಅವರನ್ನು ಲಿಡ್ಕರ್ ಸಂಸ್ಥೆಗೆ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಜೊತೆಗೆ ಧನಂಜಯ್ ನಿರ್ಮಾಣದ ಡೇರ್ ಡೆವಿಲ್ ಮುಸ್ತಾಫಾಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಂಸೆ ವ್ಯಕ್ತ ಪಡಿಸಿದ್ದರು. ಅಲ್ಲದೇ, ಕಾಂಗ್ರೆಸ್ ಮೆಚ್ಚುವಂತಹ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಇವೆಲ್ಲ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷದಿಂದ ಡಾಲಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು.

  • ಮಲೆಮಹಾದೇಶ್ವರ ದರ್ಶನ ಪಡೆದ ಡಾಲಿ ಧನಂಜಯ್

    ಮಲೆಮಹಾದೇಶ್ವರ ದರ್ಶನ ಪಡೆದ ಡಾಲಿ ಧನಂಜಯ್

    ನ್ನಡದ ಹೆಸರಾಂತ ನಟ ಡಾಲಿ ಧನಂಜಯ್ (Dali Dhananjay) ನಿನ್ನೆ ಸ್ನೇಹಿತರ ಜೊತೆ ಮಲೆಮಹಾದೇಶ್ವರ (Malemahadeshwar) ದೇವಾಲಯಕ್ಕೆ ಭೇಟಿಕೊಟ್ಟ ಕೊಟ್ಟಿದ್ದಾರೆ. ಟಗರುಪಲ್ಯ ಬಿಡುಗಡೆಗೂ ಮುನ್ನ ಮಲೆಮಹಾದೇಶ್ವರ ದರ್ಶನ ಮಾಡಿದ್ದರು ಧನಂಜಯ. ಸಿನಿಮಾ ಸಕ್ಸಸ್ ಆದ ನಂತರ ಮತ್ತೆ ತಂಡದೊಂದಿಗೆ ಮಲೆಮಹಾದೇಶ್ವರ ದರ್ಶನ ಮಾಡಿದ್ದಾರೆ ನಟ. ಚಿತ್ರೀಕರಣದ ಬಿಡುವಿನಲ್ಲಿ ಬೆಟ್ಟಕ್ಕೆ ಸ್ನೇಹಿತರೊಂದಿಗೆ ಬಂದ ಧನಂಜಯ ದೇವರ ದರ್ಶನ ಮಾಡಿದ್ದಾರೆ.

    ಸದ್ಯ ಡಾಲಿ ಧನಂಜಯ್ ಬಹುನಿರೀಕ್ಷಿತ ಸಿನಿಮಾ ‘ಉತ್ತರಕಾಂಡ’  (Uttarakanda Film) ಸಿನಿಮಾದ ಶೂಟಿಂಗ್‌ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷ ಅಂದರೆ, ನಟ ಶಿವಣ್ಣನ ಎಂಟ್ರಿ ಕೂಡ ಆಗಿದೆ. ರಮ್ಯಾ ಕಮ್‌ಬ್ಯಾಕ್ ಚಿತ್ರಕ್ಕೆ ಶಿವರಾಜ್‌ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಇದರ ಬಗ್ಗೆ ನಿರ್ಮಾಣ ಸಂಸ್ಥೆ ‘ಕೆಆರ್‌ಜಿ’ ಸ್ಟುಡಿಯೋ ಮಾಹಿತಿ ನೀಡಿದೆ.

    ‘ಉತ್ತರಕಾಂಡ’ (Uttarakanda) ಸಾಕಷ್ಟು ವಿಚಾರಗಳಿಂದ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ರಮ್ಯಾ ಕಮ್ ಬ್ಯಾಕ್ ಚಿತ್ರ ಎಂಬ ನಿರೀಕ್ಷೆಯ ಜೊತೆ ಹಿಟ್ ಜೋಡಿ ಡಾಲಿ- ಶಿವಣ್ಣ ಒಂದೇ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಳ್ತಿರೋದು ಮತ್ತೊಂದು ಖುಷಿ. ಸದ್ಯ ಶೂಟಿಂಗ್‌ಗೆ ಹಾಜರಿ ಹಾಕಿರುವ ಶಿವಣ್ಣಗೆ ಚಿತ್ರತಂಡ ಸ್ವಾಗತ ಕೋರಿದೆ.

    ‘ರತ್ನನ್ ಪ್ರಪಂಚ’ ಖ್ಯಾತಿಯ ನಿರ್ದೇಶಕ ರೋಹಿತ್ ಪದಕಿ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಜೈಲರ್, ಘೋಸ್ಟ್ ಚಿತ್ರದ ಸಕ್ಸಸ್ ನಂತರ ‘ಉತ್ತರಕಾಂಡ’ ಶೂಟಿಂಗ್‌ಗೆ ಎಂಟ್ರಿ ಕೊಟ್ಟಿರೋ ಶಿವರಾಜ್‌ಕುಮಾರ್‌ಗೆ ಈ ಚಿತ್ರದಲ್ಲಿ ಖಡಕ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ.

     

    ‘ಜೈಲರ್’ (Jailer) ಸಕ್ಸಸ್ ಬಳಿಕ ಶಿವಣ್ಣಗೆ ತಮಿಳಿನಿಂದ ಬಂಪರ್ ಅವಕಾಶಗಳು ಅರಸಿ ಬರುತ್ತಿವೆ. ಧನುಷ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನೂ ಶಿವಣ್ಣಗೆ ಯಾವುದೇ ಪಾತ್ರ ನೀಡಿದರೂ ತೂಕವಾಗಿ ನಟಿಸುತ್ತಾರೆ. ಹಾಗಾಗಿ ಉತ್ತರಕಾಂಡ ಚಿತ್ರದಲ್ಲಿ ಶಿವಣ್ಣಗೆ ತೂಕವಾಗಿರೋ ಪಾತ್ರವೇ ಇದೆ.

  • 7ಸ್ಟಾರ್ ಸುಲ್ತಾನನ ‘ಕುರುಬಾನಿ’ ಕೊಡದಿರಲಿ ತೀರ್ಮಾನ : ‘ಟಗರು ಪಲ್ಯ’ ಚಿತ್ರತಂಡದ ಒತ್ತಾಯಕ್ಕೆ ಮಣಿದ ಮಾಲೀಕ

    7ಸ್ಟಾರ್ ಸುಲ್ತಾನನ ‘ಕುರುಬಾನಿ’ ಕೊಡದಿರಲಿ ತೀರ್ಮಾನ : ‘ಟಗರು ಪಲ್ಯ’ ಚಿತ್ರತಂಡದ ಒತ್ತಾಯಕ್ಕೆ ಮಣಿದ ಮಾಲೀಕ

    ಡಾಲಿ ಧನಂಜಯ್ (Dali Dhananjay) ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ (Tagalu Palya). ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದು ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್ (Bakreed) ಹಬ್ಬಕ್ಕೆ ಕುರುಬಾನಿ (Kurubani) ಕೊಡಲು ಮಾಲೀಕ ತೀರ್ಮಾನಿಸಿದ್ದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು. ಅಭಿಮಾನಿಗಳು ಹಾಗೂ ಚಿತ್ರತಂಡದ ಮನವಿಗೆ ಪ್ರತಿಫಲ ಸಿಕ್ಕಿದ್ದು, 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡದಿರಲು ಮಾಲೀಕರು ತೀರ್ಮಾನ ನಡೆಸಿದ್ದಾರೆ.

    ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದ‌ ಮಾಲೀಕ ಯುನೀಸ್ ಗಡೇದ್ ಬಕ್ರೀದ್ ಹಬ್ಬಕ್ಕೆ ಕುರ್ಬಾನಿ ಕೊಡಲೆಂದೇ ಎರಡೂವರೆ ವರ್ಷದ ಹಿಂದೆ 7 ಸ್ಟಾರ್ ಸುಲ್ತಾನ್ ಟಗರನ್ನು 1 ಲಕ್ಷ 88 ಸಾವಿರದ ಐನೂರು ರೂ ಗೆ ಖರೀದಿಸಿದ್ದರು. ಆದ್ರೆ ಕುರ್ಬಾನಿಗೂ ಮುನ್ನ ಟಗರನ್ನು ಕಾಳಗಕ್ಕೆ ಇಳಿಸಲಾಗಿದ್ದು ಟಗರು ಅನೇಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ.

    ಇಲ್ಲಿಯವರೆಗೆ 34 ಕಣಗಳಲ್ಲಿ ಪ್ರಥಮ ಬಹುಮಾನ ಗಳಿಸಿದ್ದು ಸುಮಾರು 20 ಲಕ್ಷದಷ್ಟು ಹಣ, ಬೆಳ್ಳಿ, ಬಂಗಾರ, ಬೈಕ್ ಗಳನ್ನ ಗೆದ್ದು ಬೀಗಿದೆ. ಹೀಗಾಗಿ ಮಾಲೀಕ ಯುನೀಸ್ ಈ ಟಗರಿಗೆ 7 ಸ್ಟಾರ್ ಸುಲ್ತಾನ್ ಎಂದು ಹೆಸರಿಟ್ಟರು. ಆದ್ರೆ ಅಂದುಕೊಂಡಂತೆ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಈ ಟಗರನ್ನ ಕುರ್ಬಾನಿ ನೀಡಲು ನಿರ್ಧರಿಸಿದ್ದರು. ಸಾಧಕ ಟಗರನ್ನು ಕುರ್ಬಾನಿ‌ ಮಾಡದಂತೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಹೀಗಾಗಿ ಅಭಿಮಾನಿಗಳ ಒತ್ತಾಸೆಗೆ‌ ಮಣಿದು 7 ಸ್ಟಾರ್ ಸುಲ್ತಾನನ ಕುರ್ಬಾನಿ ಕೊಡದಿರಲು ಯುನೀಸ್ ನಿರ್ಧರಿಸಿದ್ದಾರೆ.

    ಯಾವಾಗ ರಿಲೀಸ್ ‘ಟಗರು ಪಲ್ಯ’?

    ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ‌ ಮೂರನೇ ಕೊಡುಗೆ ಟಗರು ಪಲ್ಯ. ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ (Nagabhushan) ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

     

    ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು (Rangayana Raghu) ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ. ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ‌ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಡಾಲಿ ಧನಂಜಯ್ ನಟನೆ ‘ಗುರುದೇವ್ ಹೊಯ್ಸಳ’ ಗೆದ್ದಿದೆ : ಕಾರ್ತಿಕ್ ಗೌಡ

    ಡಾಲಿ ಧನಂಜಯ್ ನಟನೆ ‘ಗುರುದೇವ್ ಹೊಯ್ಸಳ’ ಗೆದ್ದಿದೆ : ಕಾರ್ತಿಕ್ ಗೌಡ

    ಡಾಲಿ ಧನಂಜಯ್ (Dali Dhananjay) ನಟನೆಯ ‘ಗುರುದೇವ್ ಹೊಯ್ಸಳ’ (Gurudev Hoysala) ಸಿನಿಮಾ ಕಳೆದ ವಾರವಷ್ಟೇ ರಿಲೀಸ್ ಆಗಿದೆ. ಸಿನಿಮಾ ವೀಕ್ಷಿಸಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದರು. ಆದರೆ, ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎನ್ನುವ ಮಾತೂ ಕೇಳಿ ಬಂದಿತ್ತು. ಈ ಎಲ್ಲದರ ಕುರಿತು ಕೆ.ಆರ್.ಜಿ ನಿರ್ಮಾಣ ಸಂಸ್ಥೆ ಸುದೀರ್ಘವಾಗಿ ಪತ್ರವೊಂದನ್ನು ಬರೆದಿದೆ. ಆ ಪತ್ರ ಹೀಗಿದೆ..

    ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು, ಚಿತ್ರ ಎರಡನೆಯ ವಾರಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಚುನಾವಣೆಗಳ ಕಾವು ಮತ್ತು ಐಪಿಎಲ್ ಜ್ವರದ ನಡುವೆಯೂ ಚಿತ್ರಕ್ಕೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಡಿ ಗೆಲ್ಲಿಸಿದ್ದಾರೆ. ಈ ಪ್ರಶಂಸೆಯಿಂದ ನಮ್ಮ ತಂಡಕ್ಕೆ ಸಾರ್ಥಕ್ಯದ ಭಾವ ಮೂಡಿದೆ.

    ನಮ್ಮ ಕೆ ಆರ್ ಜಿ ಸ್ಟುಡಿಯೋಸ್ ನ ಮೊದಲ ಚಿತ್ರ ‘ರತ್ನನ್ ಪ್ರಪಂಚ’, ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲಿ ಅತ್ಯಂತ ಹೆಚ್ಚು ವೀಕ್ಷಣೆಯಾದ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಇದನ್ನೂ ಓದಿ:‘ಕೆಜಿಎಫ್’ ರೈಟರ್ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ಈಗ ನಮ್ಮ ಸಂಸ್ಥೆಯ ಎರಡನೆಯ ಚಿತ್ರಕ್ಕೂ ಜನಮನ್ನಣೆ ಸಿಕ್ಕಿರುವುದು ನಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮರ್ಯಾದೆ ಹತ್ಯೆ ಎಂಬ ಗಹನವಾದ ಸಮಸ್ಯೆಯ ಕುರಿತ ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ನಮಗೆ ಈ ತರಹದ ಇನ್ನಷ್ಟು ಸೂಕ್ಷ್ಮ ಸಂವೇದನೆಯ ಚಿತ್ರಗಳನ್ನು ನಿರ್ಮಿಸುವುದಕ್ಕೆ ಪ್ರೇರೇಪಿಸಿದೆ.

    ಈ ಎರಡೂ ಚಿತ್ರಗಳ ಯಶಸ್ಸಿನಿಂದ ಸದ್ಯದಲ್ಲೇ ನಮ್ಮ ಸಂಸ್ಥೆಯ ಮೂರನೆಯ ಪ್ರಯತ್ನವಾದ ಉತ್ತರಕಾಂಡ ಚಿತ್ರವನ್ನು ಸದ್ಯದಲ್ಲೇ ಶುರು ಮಾಡಲಿದ್ದೇವೆ. ಉತ್ತರ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಡೆಯುವ ಈ ಕಥೆಯಲ್ಲೂ ಧನಂಜಯ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನಷ್ಟು ಚಿತ್ರಗಳನ್ನು ನಮ್ಮ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ಘೋಷಣೆಯಾಗಲಿದೆ.

    ನಮ್ಮ ಈ ಗೆಲುವಿನಲ್ಲಿ ಸಿನಿಮಾ ಪ್ರೇಮಿಗಳು ಮತ್ತು ಮಾಧ್ಯಮದವರ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಮುಂದಿನ ಕನಸುಗಳಿಗೆ ಅವರೇ ಸ್ಫೂರ್ತಿ ಎಂದರೆ ತಪ್ಪಿಲ್ಲ. ಜತೆಗೆ ವಿಮರ್ಶಕರು, ಸೋಷಿಯಲ್ ಮೀಡಿಯಾದ ಇನ್ಫ್ಲೂಯೆನ್ಸ್ ಪ್ರೋತ್ಸಾಹ ಮತ್ತು ಸಿನಿಮಾ ಪ್ರೀತಿ ಮರೆಯುವುದಕ್ಕೆ ಸಾಧ್ಯವೇ ಇಲ್ಲ.

    ನಮಗೆ ಸಲಹೆ, ಸೂಚನೆ ಮತ್ತು ಅಪರಿಮಿತ ಪ್ರೀತಿ ತೋರಿಸುತ್ತಾ ಬಂದಿರುವ ಸಹೋದರರಾದ ವಿಜಯ್ ಕಿರಗಂದೂರು ಮತ್ತು ನನ್ನ ಎಲ್ಲ ಹಿತೈಷಿಗಳಿಗೂ ನಾನು ಚಿರಋಣಿ. ಇಂದು ಕೆ ಆರ್ ಜಿ ಸ್ಟುಡಿಯೋಸ್ ಮತ್ತು ಕೆ ಆರ್ ಜಿ ಕನೆಕ್ಟ್ಸ್ ಈ ಹಂತಕ್ಕೆ ಬೆಳೆಯುತ್ತಿರುವುದಕ್ಕೆ ನಮ್ಮ ತಂಡದ ಪ್ರೀತಿ ಮತ್ತು ಪರಿಶ್ರಮ ಸಹ ಕಾರಣ. ಮುಂದಿನ ದಿನಗಳಲ್ಲಿ ನಿಮ್ಮನ್ನು ಇನ್ನಷ್ಟು ಮನರಂಜಿಸುವುದಕ್ಕೆ ಉತ್ಸುಕರಾಗಿದ್ದೇವೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ (Karthik Gowda)  ಹಾಗೂ ಯೋಗಿ ಜಿ ರಾಜ್ (Yogi G Raj) ತಿಳಿಸಿದ್ದಾರೆ.

  • ಡಾಲಿ ನಟನೆಯ `ಹೊಯ್ಸಳ’ ಚಿತ್ರದ ಟೈಟಲ್ ಬದಲಾಗಿದ್ದೇಕೆ?

    ಡಾಲಿ ನಟನೆಯ `ಹೊಯ್ಸಳ’ ಚಿತ್ರದ ಟೈಟಲ್ ಬದಲಾಗಿದ್ದೇಕೆ?

    ನಂಜಯ ನಟನೆಯ ಬಹುನಿರೀಕ್ಷಿತ ಸಿನಿಮಾ `ಹೊಯ್ಸಳ’ (Hoysala) ಇದೇ ಮಾರ್ಚ್ 30ಕ್ಕೆ ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. ಚಿತ್ರ ರಿಲೀಸ್‌ಗೆ ರೆಡಿಯಾಗಿರುವ ಬೆನ್ನಲ್ಲೇ ಸಿನಿಮಾದ ಟೈಟಲ್ ಬದಲಾವಣೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ.

    ಡಾಲಿ- ಅಮೃತಾ ಅಯ್ಯಂಗಾರ್ (Amrutha Iyengar) ಜೋಡಿ `ಹೊಯ್ಸಳ’ ಚಿತ್ರದ ಮೂಲಕ 3ನೇ ಬಾರಿ ಒಂದಾಗುತ್ತಿದ್ದಾರೆ. ಈ ಚಿತ್ರವನ್ನು ʻಕೆಆರ್‌ಜಿ ಸ್ಟುಡಿಯೋʼ (KRG Studios) ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಚಿತ್ರದ ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ `ಹೊಯ್ಸಳ’ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಇವರೇ ಕಾರಣವೆಂದು ಸೂಸೈಡ್‌ ನೋಟ್‌ ಬರೆದಿಟ್ಟ ʻವರ್ಷಧಾರೆʼ ನಟಿ ಪಾಯಲ್‌

    ಈ ಸಿನಿಮಾದಲ್ಲಿ ಧನಂಜಯ ಅವರು `ಗುರುದೇವ ಹೊಯ್ಸಳ’ (Gurudeva Hoysala) ಎಂಬ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೀರ್ಷಿಕೆಯನ್ನು ರಾಮು ಫಿಲ್ಮ್ಸ್ ಜೊತೆ ಮಾತನಾಡಿ ಪಡೆದುಕೊಂಡಿದ್ದರು. `ಹೊಯ್ಸಳ’ ಶೀರ್ಷಿಕೆ ಅವರ ಬಳಿ ಇತ್ತು. ಆದರೆ ಈಗ ಇದೇ ಹೆಸರಿನಲ್ಲಿ ಮತ್ತೊಂದು ಸಿನಿಮಾ ಸೆನ್ಸಾರ್ ಆಗಿದೆಯಂತೆ. ಹಾಗಾಗಿ, ಈ ಸಿನಿಮಾದಲ್ಲಿ ನಾಯಕ ಡಾಲಿ `ಗುರುದತ್ ಹೊಯ್ಸಳ’ ಪಾತ್ರದ ಹೆಸರನ್ನೇ ಶೀರ್ಷಿಕೆ ಮಾಡಿ, ಅದೇ ಹೆಸರಿನಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದ್ದಾರೆ.

    `ಗುಳ್ಟು’ ಹೀರೋ ನವೀನ್ ಶಂಕರ್ (Naveen Shankar) ಅವರು ಈ ಚಿತ್ರದಲ್ಲಿ ಡಾಲಿ (Dali) ಮುಂದೆ ಖಳನಾಯಕನಾಗಿ ನಟಿಸಿದ್ದಾರೆ. ರಗಡ್ ಲುಕ್‌ನಲ್ಲಿ ನವೀನ್ ಕಾಣಿಸಿಕೊಂಡಿದ್ದಾರೆ. `ಗುರುದತ್ ಹೊಯ್ಸಳ’ ಚಿತ್ರದ ಮೂಲಕ ಭಿನ್ನ ಕಥೆಯನ್ನೇ ತೆರೆಯ ಮೇಲೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಮಾರ್ಚ್ ಅಂತ್ಯದಲ್ಲಿ ತೆರೆಗೆ ಬರಲಿದ್ದಾರೆ.

  • ಡಾಲಿ ಧನಂಜಯ್ ಜೊತೆ ರಮ್ಯಾ ಮಾತ್ರವಲ್ಲ, ‘ಕಾಂತಾರ’ ಸಪ್ತಮಿ ಕೂಡ ಡುಯೆಟ್

    ಡಾಲಿ ಧನಂಜಯ್ ಜೊತೆ ರಮ್ಯಾ ಮಾತ್ರವಲ್ಲ, ‘ಕಾಂತಾರ’ ಸಪ್ತಮಿ ಕೂಡ ಡುಯೆಟ್

    ಕಾಂತಾರ ಸಿನಿಮಾದ ನಾಯಕಿ ಸಪ್ತಮಿ ಗೌಡ (Sapthami Gowda) ಇದೀಗ ಸಿನಿಮಾ ರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಆಗುತ್ತಿದ್ದಾರೆ. ಸ್ಯಾಂಡಲ್ ವುಡ್ ನಿಂದ ಮಾತ್ರವಲ್ಲ, ಪರಭಾಷೆಯಿಂದಲೂ ಅವರನ್ನು ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಈಗಾಗಲೇ ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಸಿನಿಮಾದಲ್ಲಿ ನಟಿಸಲು ಸಪ್ತಮಿ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿಹಿ ಸುದ್ದಿಯ ಬೆನ್ನಲ್ಲೆ ಮತ್ತೊಂದು ಸಂಭ‍್ರಮದ ವಿಷಯ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಡಾಲಿ ಜೊತೆಯೂ ಸಪ್ತಮಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಮೊನ್ನೆಯಷ್ಟೇ ಡಾಲಿ ಧನಂಜಯ್ (Dali Dhananjay) ಮತ್ತು ರಮ್ಯಾ (Ramya) ಕಾಂಬಿನೇಷನ್ ನ ‘ಉತ್ತರಕಾಂಡ’ ಸಿನಿಮಾದ ಮುಹೂರ್ತವಾಗಿದೆ. ಈ ಸಿನಿಮಾದ ಮೂಲಕ ರಮ್ಯಾ ಮತ್ತೆ ಸಿನಿಮಾ ರಂಗವನ್ನು ಪ್ರವೇಶ ಮಾಡುತ್ತಿದ್ದಾರೆ. ಮುಂದಿನ ತಿಂಗಳಿಂದ ಈ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲಾಗುತ್ತಿದೆ. ಈ ಚಿತ್ರದಲ್ಲಿ ಡಾಲಿ ಜೊತೆ ಸಪ್ತಮಿ ಗೌಡ ಕೂಡ ನಟಿಸುತ್ತಿದ್ದಾರಂತೆ. ಅದೂ ರಗಡ್ ರೀತಿಯ ಪಾತ್ರದಲ್ಲಿ ಎನ್ನುವುದು ವಿಶೇಷ. ಇದನ್ನೂ ಓದಿ: ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ರಮ್ಯಾ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ಈ ಸಿನಿಮಾದ ಬಗ್ಗೆ ಶೂಟಿಂಗ್ ಮುಂಚೆನೇ ಕುತೂಹಲ ಮೂಡಿಸಿತ್ತು. ಈಗ ಕಾಂತಾರದ ಬೆಡಗಿ ಕೂಡ ಜೊತೆಯಾಗಿರುವುದರಿಂದ ನಿರೀಕ್ಷೆ ಇಮ್ಮಡಿಯಾಗಲಿದೆ. ಅಧಿಕೃತವಾಗಿ ಈ ಸುದ್ದಿಯನ್ನು ಸಿನಿಮಾ ಟೀಮ್ ಆಗಲಿ, ಸಪ್ತಮಿ ಗೌಡ ಆಗಲಿ ಹಂಚಿಕೊಳ್ಳದೇ ಇದ್ದರೂ, ಗಾಂಧಿನಗರದಲ್ಲಿ ಹರಡಿರುವ ಈ ಸುದ್ದಿ ಸುಳ್ಳಾಗದು. ಯಾಕೆಂದರೆ, ಸಪ್ತಮಿ ಗೌಡ ಈಗಾಗಲೇ ಡಾಲಿ ಮತ್ತು ರಮ್ಯಾ ಜೊತೆ ಹಲವು ಸಿನಿಮಾಗಳ ಪ್ರಮೋಷನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಣ್ಣದೊಂದು ಸುಳಿವು ಕೂಡ ನೀಡಿದ್ದಾರೆ.


    Live Tv

    [brid partner=56869869 player=32851 video=960834 autoplay=true]

  • ಡಾಲಿ ಧನಂಜಯ್ ಹೊಸ ಸಿನಿಮಾಗೆ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ನಾಯಕಿ

    ಡಾಲಿ ಧನಂಜಯ್ ಹೊಸ ಸಿನಿಮಾಗೆ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ನಾಯಕಿ

    ಡಾಲಿ ಧನಂಜಯ್, ಸತ್ಯ ದೇವ್ (Satya Dev) ನಟನೆಯ ಕನ್ನಡ (Kannada) ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ಸಿನಿ ಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರ ಧನಂಜಯ್ ಹಾಗೂ ತೆಲುಗು (Telugu) ನಟ ಸತ್ಯದೇವ್ ಇಬ್ಬರ ಸಿನಿ ಕೆರಿಯರ್ ನ 26ನೇ ಸಿನಿಮಾವಾಗಿದ್ದು, ಸದ್ಯದಲ್ಲೇ ಸಿನಿಮಾ ಟೈಟಲ್ ರಿವೀಲ್ ಆಗಲಿದೆ. ಚಿತ್ರೀಕರಣದಲ್ಲಿ ನಿರತವಾಗಿರುವ ಚಿತ್ರತಂಡದಿಂದ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದ್ದು, ಚಿತ್ರತಂಡವನ್ನು ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ಸೇರಿಕೊಂಡಿದ್ದಾರೆ.

    ಹೌದು, ಧನಂಜಯ್ (Dali Dhananjay), ಸತ್ಯದೇವ್ ಸಿನಿಮಾಗೆ ನಾಯಕಿಯರ ಹುಡುಕಾಟದಲ್ಲಿ ಚಿತ್ರತಂಡವಿತ್ತು ಇದೀಗ ಪ್ರಿಯಾ ಭವಾನಿ ಶಂಕರ್ (Priya Bhavani Shankar) ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಓಹ್ ಮನಪೆಣ್ಣೆ’, ‘ಬ್ಲಡ್ ಮನಿ’, ‘ತಿರುಚಿತ್ರಬಾಲಂ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ಪ್ರಿಯಾ ಭವಾನಿ ಶಂಕರ್ ಗಿದು ತೆಲುಗಿನಲ್ಲಿ ಮೊದಲ ಸಿನಿಮಾವಾಗಿದೆ. ಚಿತ್ರದಲ್ಲಿ ಫ್ಯಾಶನ್ ಡಿಸೈನರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಪ್ರಿಯಾ. ಚಿತ್ರದ ಇನೊಬ್ಬ ನಟಿಯನ್ನು ಸದ್ಯದಲ್ಲೇ ಪರಿಚಯಿಸಲಿದೆ ಚಿತ್ರತಂಡ.

    ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ನಿರ್ದೇಶಿಸಿದ್ದ ಈಶ್ವರ್ ಕಾರ್ತಿಕ್ ಡಾಲಿ-ಸತ್ಯದೇವ್ ಬಣ್ಣ ಹಚ್ಚಿರುವ 26ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ.  ಕ್ರೈಮ್ ಆಕ್ಷನ್ ಎಂಟಟೈನರ್ ಕಥಾಹಂದರ ಒಳಗೊಂಡಿದ್ದು, ಓಲ್ಡ್ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾ ಇದಾಗಿದೆ.  ಇದನ್ನೂ ಓದಿ:ನಯನತಾರಾ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಕೇಸ್‌ಗೆ ಬಿಗ್ ಟ್ವಿಸ್ಟ್

    ಟಗರು ಸಿನಿಮಾ ಖ್ಯಾತಿಯ ಚರಣ್ ರಾಜ್ ಸಂಗೀತ, ಮಣಿಕಂಠನ್ ಕೃಷ್ಣಮಾಚಾರಿ ಛಾಯಾಗ್ರಹಣ, ಅನಿಲ್ ಕ್ರಿಶ್ ಸಂಕಲನ, ಸುಬ್ಬು ಸಾಹಸ ಚಿತ್ರಕ್ಕಿದೆ. ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸಿನಿಮಾತಂಡ ಸದ್ಯದಲ್ಲೇ ಸಿನಿಮಾ ಟೈಟಲ್ ರಿವೀಲ್ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]