Tag: Dalit Woman

  • ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಜೀವಾವಧಿ ಶಿಕ್ಷೆ

    ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಜೀವಾವಧಿ ಶಿಕ್ಷೆ

    ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಜಿಲ್ಲಾ ಸತ್ರ ನ್ಯಾಯಾಲಯವು 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಿ ತೀರ್ಪು ನೀಡಿದೆ.

    ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ದೋಷಿ ಎಂದು ಕೋರ್ಟ್ ಆದೇಶಿಸಿತ್ತು. ಇದೀಗ ಕೋರ್ಟ್ 21 ಮಂದಿಗೂ ಜೀವಾವಧಿ ಶಿಕ್ಷೆ ವಿಧಿಸಿದ್ದು, ಒಟ್ಟು 2,83,200 ರೂ. ದಂಡ ವಿಧಿಸಿದೆ. ಅಂದರೆ ತಲಾ ಒಬ್ಬರಿಗೆ 13,500 ದಂಡ ವಿಧಿಸಿದೆ.ಇದನ್ನೂ ಓದಿ: ಕೊಪ್ಪಳ | 6 ತಿಂಗಳಿಂದ ಪಡಿತರ ಪಡೆಯದ 5,779 ಬಿಪಿಎಲ್ ಕಾರ್ಡ್‌ ರದ್ದು

    ಒಟ್ಟು 21 ದೋಷಿಗಳ ಪೈಕಿ ಇಬ್ಬರು ಮಹಿಳೆಯರು, 19 ಜನ ಪುರುಷರಿದ್ದಾರೆ. ಆಗಿನ ಡಿವೈಎಸ್‌ಪಿ ಶಿವರುದ್ರಸ್ವಾಮಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ನಾಗಿರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಘಟನೆ ಏನು?
    ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರ ಜೂನ್ 20ರಂದು ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.ಇದನ್ನೂ ಓದಿ: ಆಮೀರ್ ಖಾನ್ ಜೊತೆಗಿನ ಸುದೀಪ್ ಫೋಟೋ ವೈರಲ್- ಸಿನಿಮಾ ಬಗ್ಗೆ ಸಿಗಲಿದ್ಯಾ ಗುಡ್‌ ನ್ಯೂಸ್?

  • Tumakuru| ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟ

    Tumakuru| ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟ

    ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ (Dalit Woman) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ 21 ಆರೋಪಿಗಳಿಗೆ ಇಂದು ನ್ಯಾಯಾಲಯ (Court) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

    ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಇದನ್ನೂ ಓದಿ: ರೇಷನ್ ಕಾರ್ಡ್ ಗೊಂದಲಕ್ಕೆ ನಾನೇ ಹೊಣೆ, 7 ವಾರದೊಳಗೆ ಅದೇ ಐಡಿಯಲ್ಲಿ ಬಿಪಿಎಲ್‌ ಕಾರ್ಡ್‌ : ಮುನಿಯಪ್ಪ

    ಚಿಕ್ಕನಾಯಕನಹಳ್ಳಿ (Chikkanayakana Halli) ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್‌

  • ಸಾರ್ವಜನಿಕರ ಮುಂದೆಯೇ ಮಹಿಳೆಗೆ ದೊಣ್ಣೆಯಿಂದ ಥಳಿಸಿದ ಪೊಲೀಸ್-‌ ಭಾರೀ ಆಕ್ರೋಶ

    ಸಾರ್ವಜನಿಕರ ಮುಂದೆಯೇ ಮಹಿಳೆಗೆ ದೊಣ್ಣೆಯಿಂದ ಥಳಿಸಿದ ಪೊಲೀಸ್-‌ ಭಾರೀ ಆಕ್ರೋಶ

    ಪಾಟ್ನಾ: ಸಾರ್ವಜನಿಕರ ಮುಂದೆಯೇ ಪೊಲೀಸರು (Police) ದಲಿತ ಮಹಿಳೆಯೊಬ್ಬರನ್ನು ಥಳಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

    ಈ ಘಟನೆ ಬಿಹಾರದ ಸೀತಾಮರ್ಹಿಯಲ್ಲಿ ನಡೆದಿದೆ. ಸಮವಸ್ತ್ರದಲ್ಲಿಯೇ ಪೋಲೀಸರು ಹೊಡೆಯುತ್ತಿರುವುದನ್ನು ಅಲ್ಲೇ ಇದ್ದ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ವೀಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋವನ್ನು ವೀಕ್ಷಿಸಿದ ನೆಟ್ಟಿಗರು, ಪೊಲೀಸರ ವರ್ತನೆಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿ ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯನ್ನು ಥಳಿಸಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

    ಇತ್ತ ಪ್ರಕರಣ ವಿವಾದದ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆಯೇ ಪೊಲೀಸರು ಸಮಜಾಯಿಷಿ ನೀಡಿದ್ದಾರೆ. ಅಪಹರಣ ಪ್ರಕರಣದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ಯುವತಿ ಆತ್ಮಹತ್ಯೆ ಕೇಸ್‍ಗೆ ಟ್ವಿಸ್ಟ್- ಫೋಟೋಶೂಟ್‍ಗೆ ಬಿಡದಿದ್ದಕ್ಕೆ ಸೂಸೈಡ್

    ಏನಿದು ಘಟನೆ..?: ಸುರಸಂದ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜ್‌ಕಿಶೋರ್ ಸಿಂಗ್ ಮಹಿಳೆಯನ್ನು ರಸ್ತೆಯಲ್ಲಿಯೇ ದೊಣ್ಣೆಯಿಂದ ಥಳಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ನಡೆದ ಗಲಾಟೆಯಿಂದ ಕೋಪಗೊಂಡ ಪೊಲೀಸ್ ಅಧಿಕಾರಿ, ಮಹಿಳೆಯನ್ನು ಅನೇಕ ಬಾರಿ ದೊಣ್ಣೆಯಿಂದ ಥಳಿಸಿದ್ದಾರೆ.‌ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಸೀತಾಮರ್ಹಿ ಪೊಲೀಸರು ಹೇಳಿದ್ದು, ರಸ್ತೆಯಲ್ಲಿ ಜಗಳವಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬೇರ್ಪಡಿಸುವ ಉದ್ದೇಶದಿಂದ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ.

    ಬಾಲಕಿಯನ್ನು ರಕ್ಷಿಸಲಾಯಿತು. ಆದರೆ ಎರಡೂ ಕಡೆಯವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಠಾಣೆ ಆವರಣದಲ್ಲಿ ತಮ್ಮತಮ್ಮಲ್ಲೇ ಜಗಳವಾಡಿದರು. ಇದರಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು ಎಂದು ಸ್ಪಷ್ಟಪಡಿಸಿದರು.

  • ಜಾತಿ, ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ: ಮಂತ್ರಿ ಸ್ಥಾನಕ್ಕೆ ದಲಿತ ನಾಯಕಿ ರಾಜೀನಾಮೆ

    ಜಾತಿ, ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ: ಮಂತ್ರಿ ಸ್ಥಾನಕ್ಕೆ ದಲಿತ ನಾಯಕಿ ರಾಜೀನಾಮೆ

    ಪುದುಚೇರಿ: ಪುದುಚೇರಿ ಸಾರಿಗೆ (Puducherry Transport Minister) ಸಚಿವೆ ಚಂದ್ರ ಪ್ರಿಯಾಂಕಾ (Chandra Priyanka) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿಯಾಗಿ ಅನುಭವಿಸಿದ ಸಮಸ್ಯೆಗಳು ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

    ಚಂದ್ರ ಪ್ರಿಯಾಂಕಾ ( ಅವರು ಅಖಿಲ ಭಾರತ NR ಕಾಂಗ್ರೆಸ್‌ನಿಂದ ಸಚಿವರಾಗಿದ್ದರು. ಅವರು ಕೇಂದ್ರಾಡಳಿತ ಪ್ರದೇಶದ 41 ವರ್ಷಗಳ ಇತಿಹಾಸದಲ್ಲಿ ಎರಡನೇ ಮಹಿಳಾ ಸಚಿವರಾಗಿದ್ದರು. ಪ್ರಬಲ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸಿ ಸಚಿವೆಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂಬುದನ್ನು ಮನಗಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಚಂದ್ರ ಪ್ರಿಯಾಂಕಾ ಕಾರೈಕಲ್‌ನ ಮೊದಲ ಮಹಿಳಾ ಸಚಿವೆ. ಇವರು ಪುದುಚೇರಿಯ ಮಾಜಿ ಸಚಿವ ಚಂದ್ರಕಾಸು ಅವರ ಪುತ್ರಿ. ಸಿಎಂಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಜನರ ಬೆಂಬಲವಿದ್ದರೂ ವಿಧಾನಸಭೆಯಲ್ಲಿ ಪ್ರಚಲಿತದಲ್ಲಿರುವ ವಂಚನೆಯ ರಾಜಕಾರಣ ಮತ್ತು ಸಂಪತ್ತಿನ ಅಸಾಧಾರಣ ಹಿಡಿತವನ್ನು ಎದುರಿಸುವುದು ಸವಾಲಿನ ಸಂಗತಿ ಎಂಬುದನ್ನು ನಾನು ಅರಿತುಕೊಂಡಿದ್ದೇನೆ. ನಾನು ಆಗಾಗ್ಗೆ ಜಾತಿ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

    2016 ರಲ್ಲಿ ನೆಡುಂಗಾಡು ಕ್ಷೇತ್ರದಿಂದ ಪುದುಚೇರಿ ಅಸೆಂಬ್ಲಿಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2021 ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಅವರು ಅದೇ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಎ ಮಾರಿಮುತ್ತು ಅವರನ್ನು ಸೋಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಚ್ಚಿನ ಹಣ ಕೊಡಲು ನಿರಾಕರಿಸಿದ ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

    ಹೆಚ್ಚಿನ ಹಣ ಕೊಡಲು ನಿರಾಕರಿಸಿದ ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

    ಪಾಟ್ನಾ: ತಂದೆ-ಮಗ ದಲಿತ ಮಹಿಳೆಯ (Dalit Woman) ಬಳಿ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ, ಮೂತ್ರ (Urine) ಕುಡಿಸಿದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.

    ಘಟನೆಯಿಂದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರ ಪ್ರಕಾರ, ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಮಗ ಅಂಶು ಮತ್ತು ಇತರ ನಾಲ್ವರು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ದಲಿತ ಮಹಿಳೆಯ ಮನೆಗೆ ನುಗ್ಗಿ ಬಲವಂತವಾಗಿ ಆಕೆಯನ್ನು ತಮ್ಮ ಮನೆಗೆ ಒಯ್ದಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಬಳಿಕ ಆಕೆಯ ಮೇಲೆ ಕ್ರೂರ ರೀತಿಯಲ್ಲಿ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿದ್ದು, ಕೋಲಿನಿಂದ ಹೊಡೆದಿದ್ದಾರೆ. ಬಳಿಕ ಪ್ರಮೋದ್ ಸಿಂಗ್ ತನ್ನ ಮಗನಿಗೆ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾನೆ. ನಂತರ ಸಂತ್ರಸ್ತೆ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ತನ್ನ ಮನೆಗೆ ಮರಳಿದ್ದಾಳೆ. ಇದನ್ನೂ ಓದಿ: ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಷ ಸೇವಿಸಿ ದಂಪತಿ ಆತ್ಮಹತ್ಯೆ

    ದಲಿತ ಮಹಿಳೆ ಕೆಲ ತಿಂಗಳ ಹಿಂದೆ ಪ್ರಮೋದ್ ಸಿಂಗ್‌ನಿಂದ ಬಡ್ಡಿಗೆ 1,500 ರೂ. ಸಾಲ (Loan) ಪಡೆದಿದ್ದು, ಬಡ್ಡಿ ಸಮೇತ ಹಣವನ್ನು ಮರುಪಾವತಿ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದಾಗಿಯೂ ಆರೋಪಿ ಆಕೆಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅದನ್ನು ನೀಡಲು ಮಹಿಳೆ ನಿರಾಕರಿಸಿದ್ದಾಳೆ. ಹೆಚ್ಚಿನ ಹಣ ನೀಡದಿದ್ದರೇ ಮಹಿಳೆಯನ್ನು ವಿವಸ್ತ್ರ ಮಾಡಿ ಊರೂರು ಅಲೆಯುವಂತೆ ಮಾಡುವುದಾಗಿ ಪ್ರಮೋದ್ ಮಹಿಳೆಗೆ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಐಫೋನ್‌ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ

    ಬೆದರಿಕೆಯ ಕುರಿತು ಮಹಿಳೆ ಈ ಹಿಂದೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಅಶಾಂತಿ ಉಂಟಾಗಿದ್ದು, ಸಂತ್ರಸ್ತ ಕುಟುಂಬ ಹಾಗೂ ದಲಿತ ಸಮುದಾಯದವರು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಘಟನೆ ಬಳಿಕ ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್‌ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧಿ!

    ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್‌ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧಿ!

    ಚಾಮರಾಜನಗರ: ದಲಿತ ಮಹಿಳೆ (Dalit Woman) ತೊಂಬೆ (ಟ್ಯಾಂಕ್‌) ನೀರು (Water) ಕುಡಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತೊಂಬೆಯ ನೀರು ಖಾಲಿ ಮಾಡಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ವೀರಶೈವ ಬೀದಿಯಲ್ಲಿ ದಲಿತ ಮಹಿಳೆಯೊಬ್ಬರು ರಸ್ತೆ ಬದಿ ಇದ್ದ ತೊಂಬೆಯಲ್ಲಿ ನೀರು ಕುಡಿದಿದ್ದರು. ಈ ಕಾರಣಕ್ಕೆ ನೀರನ್ನು ಖಾಲಿ ಮಾಡಿ, ತೊಂಬೆಗೆ ಗೋಮೂತ್ರ ಸಿಂಪಡಿಸಿ ಸ್ವಚ್ಛ ಮಾಡಿದ್ದಾರೆ ಎಂದು ಬರೆದು ಪೋಸ್ಟ್‌ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ದೂರು ನೀಡಿದರೂ ಕ್ರಮ ಕೈಗೊಳ್ಳದ ಇನ್ಸ್‌ಪೆಕ್ಟರ್‌ ನಾಸಿರ್ ಹುಸೇನ್

    ವೀಡಿಯೋ ವೈರಲ್ ಆಗುತ್ತಿದ್ದಂತೆ ಈ ಘಟನೆಯ ಕುರಿತಾಗಿ ಪರಿಶೀಲನೆ ನಡೆಸಲು ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯ ಗ್ರಾಮಕ್ಕೆ RI ಮತ್ತು VA ಅವರನ್ನು ಕಳುಹಿಸಿ ವರದಿ ತರಿಸಿಕೊಂಡ ತಹಶೀಲ್ದಾರ್, ನಾಳೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಅಧಿಕಾರಿಗಳು ಕೊಟ್ಟ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಘಟನೆ ನಿಜವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಎಫ್‍ಐಆರ್ (FIR) ದಾಖಲು ಮಾಡಲಾಗುತ್ತದೆ ಎಂದು ಚಾಮರಾಜನಗರ ತಹಶೀಲ್ದಾರ್ ಬಸವರಾಜ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದುವೆಗೆ ಯೋಧರನ್ನು ಆಹ್ವಾನಿಸಿದ ಜೋಡಿ – ಕರೆಯೋಲೆ ಕಂಡು ಖುಷಿ ಪಟ್ಟ ಇಂಡಿಯನ್ ಆರ್ಮಿ

    Live Tv
    [brid partner=56869869 player=32851 video=960834 autoplay=true]

  • ದಲಿತ ಪಂಚಾಯ್ತಿ ಅಧ್ಯಕ್ಷೆಯನ್ನು ನೆಲೆದ ಮೇಲೆ ಕೂರಿಸಿ ಸಭೆ – ಫೋಟೋ ವೈರಲ್

    ದಲಿತ ಪಂಚಾಯ್ತಿ ಅಧ್ಯಕ್ಷೆಯನ್ನು ನೆಲೆದ ಮೇಲೆ ಕೂರಿಸಿ ಸಭೆ – ಫೋಟೋ ವೈರಲ್

    – ಧ್ವಜರೋಹಣ ಮಾಡಲು ಅವಕಾಶ ನೀಡದ ಉಪಾಧ್ಯಕ್ಷ

    ಚೆನ್ನೈ: ಗ್ರಾಮ ಪಂಚಾಯಿತಿ ದಲಿತ ಮಹಿಳೆಯನ್ನು ನೆಲೆದ ಮೇಲೆ ಕೂರಿಸಿ ಸಭೆ ನಡೆಸಿರುವ ಅಮಾನವೀಯ ಘಟನೆ ಚೆನ್ನೈನ ಕಡಲೂರು ಜಿಲ್ಲೆಯ ತೆರ್ಕುಟ್ಟಿಟ್ಟೈ ಗ್ರಾಮದಲ್ಲಿ ನಡೆದಿದೆ.

    ತೆರ್ಕುಟ್ಟಿಟ್ಟೈ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಎಸ್ ರಾಜೇಶ್ವರಿಯವರನ್ನು ಮೇಲ್ಜಾತಿಯ ಉಪಾಧ್ಯಕ್ಷ ಮೋಹನ್ ರಾಜನ್ ಸಭೆಯಲ್ಲಿ ಕೆಳಗೆ ಕೂರಿಸಿದ್ದಾನೆ. 2020ರ ಜುಲೈನಲ್ಲಿ ಈ ಘಟನೆ ನಡೆದಿದ್ದು, ಈಗ ಈ ಫೋಟೋಗಳು ವೈರಲ್ ಆಗಿವೆ. ಈ ಕೃತ್ಯದ ವಿರುದ್ಧ ರಾಜೇಶ್ವರಿಯವರು ಕಡಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಜುಲೈನಲ್ಲಿ ನಡೆದ ಸಭೆಯಲ್ಲಿ ರಾಜೇಶ್ವರಿಯವರನ್ನು ಕೆಳಜಾತಿಯವರು ಎಂಬ ಕಾರಣಕ್ಕೆ ನೆಲದ ಮೇಲೆ ಕೂರಿಸಲಾಗಿದೆ. ಜೊತೆಗೆ ಉಳಿದ ಎಲ್ಲ ಪಂಚಾಯತ್ ಸದಸ್ಯರುಗಳು ಕುರ್ಚಿ ಮೇಲೆ ಕುಳಿತುಕೊಂಡಿದ್ದಾರೆ. ಇದರ ವಿರುದ್ಧ ಕ್ರಮ ತೆಗೆದುಕೊಂಡಿರುವ ಕಡಲೂರು ಜಿಲ್ಲಾಧಿಕಾರಿ, ಉಪಾಧ್ಯಕ್ಷ ಮೋಹನ್ ರಾಜನ್ ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಮಾನತು ಮಾಡಿ, ತನಿಖೆಗೆ ಆದೇಶ ನೀಡಿದ್ದಾರೆ.

    ಈ ಘಟನೆಯ ಬಗ್ಗೆ ಮಾತನಾಡಿರುವ ರಾಜೇಶ್ವರಿಯವರು, ಸಭೆಯ ವೇಳೆ ನಾನು ಮಾತನಾಡಬಾರದು ಎಂದು ಮೋಹನ್ ರಾಜನ್ ಅವರು ಹೇಳಿದ್ದರು. ಜೊತೆಗೆ ನೀನು ನಮ್ಮ ಜೊತೆ ಕುಳಿತುಕೊಳ್ಳಬೇಡ ನೆಲದ ಮೇಲೆ ಕುಳಿತುಕೊಳ್ಳಲು ಸೂಚಿದರು. ಗ್ರಾಮಗಳ ಸಮಸ್ಯೆ ಬಗ್ಗೆ ನಾವು ಮಾತನಾಡಿ ಪರಿಹಾರ ಕಂಡುಕೊಳ್ಳುತ್ತೇವೆ. ನೀನು ಏನೂ ಮಾತನಾಡುವುದು ಬೇಡ ಎಂದು ಹೇಳಿದ್ದರು. ನನ್ನ ಅಧ್ಯಕ್ಷೆ ಸ್ಥಾನಕ್ಕೂ ಗೌರವ ನೀಡದೆ ನನಗೆ ಅವಮಾನ ಮಾಡಿದರು ಎಂದು ಹೇಳಿದ್ದಾರೆ.

    ನಾನು ಈ ವರ್ಷದ ಜನವರಿಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಆಗಿದ್ದೇನೆ. ಜನವರಿಯಿಂದಲೂ ನನಗೆ ಈ ರೀತಿಯ ಹಲವರು ಅವಮಾನ ಮಾಡಿದ್ದಾರೆ. ಕಳೆದ ಆಗಸ್ಟ್ 15ರಂದು ನನಗೆ ಧ್ವಜರೋಹಣ ಮಾಡಲು ಅವಕಾಶ ನೀಡಿಲ್ಲ. ನಾನು ಮಾಡಬೇಕಾದ ಧ್ವಜರೋಹಣವನ್ನು ಉಪಾಧ್ಯಕ್ಷ ಮೋಹನ್ ರಾಜನ್, ಅವರ ತಂದೆಯ ಕೈಯಲ್ಲಿ ಮಾಡಿಸಿದರು ಎಂದು ರಾಜೇಶ್ವರಿಯವರು ತಿಳಿಸಿದ್ದಾರೆ.

    ತೆರ್ಕುಟ್ಟಿಟ್ಟೈ ಪಂಚಾಯತಿ ವ್ಯಾಪ್ತಿಯಲ್ಲಿ ಆರು ವಾರ್ಡಿನ ಸದಸ್ಯರು ಇದ್ದಾರೆ. ಅವರಲ್ಲಿ ನಾಲ್ವರು ಹಿಂದೂ ಜಾತಿಗೆ ಸೇರಿದ್ದವರಾಗಿದ್ದಾರೆ ಮತ್ತು ಇಬ್ಬರು ಹಿಂದೂಳಿದ ಆದಿ-ದ್ರಾವಿಡ ಸಮುದಾಯಕ್ಕೆ ಸೇರಿದ್ದಾರೆ. ರಾಜೇಶ್ವರಿ ಅವರ ಪ್ರಕಾರ, ಇನ್ನೊಬ್ಬ ದಲಿತ ವಾರ್ಡಿನ ಸದಸ್ಯೆ ಸುಗಂತಿ ಅವರನ್ನು ಕೂಡ ಸಭೆಗಳಲ್ಲಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರು ಎಂದು ಹೇಳಿದ್ದಾರೆ.