Tag: dalit women

  • ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

    ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

    – ಮಕ್ಕಳಿಗೆ ಟಿಸಿ ಕೊಡಿಸಿ ಬೇರೆಡೆ ಸೇರಿಸುತ್ತಿರುವ ಪೋಷಕರು
    – ಆ ಶಾಲೆಯಲ್ಲೀಗ ಒಬ್ಬನೇ ವಿದ್ಯಾರ್ಥಿ

    ಚಾಮರಾಜನಗರ: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ (Dalit Women) ನೇಮಕಕ್ಕೆ ಅಸಮಾಧಾನ ವ್ಯಕ್ತವಾಗಿದೆ.

    ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪೋಷಕರು ತಮ್ಮ ಮಕ್ಕಳ ಟಿಸಿ ಪಡೆದು ಬೇರೆ ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: `ಕೈ’ ಕಂಪನ ಸಂಕಟ: 2 ವರ್ಷ ಗ್ಯಾರಂಟಿ ಪಿರಿಯೆಡ್, ವೇಯ್ಟಿಂಗ್ ಪಿರಿಯೆಡ್ ಮುಗಿತು, ಇನ್ನೇನಿದ್ರೂ ಫೈಟಿಂಗ್ ಪಿರಿಯೆಡ್!

    ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಮಕ್ಕಳ ಟಿಸಿ ಪಡೆದು ಬೇರೆಡೆ ಸೇರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಲು ಪೋಷಕರ ನಿರಾಕರಿಸಿದ್ದಾರೆ. ಸದ್ಯ ಶಾಲೆಗೆ ಒಬ್ಬ ವಿದ್ಯಾರ್ಥಿ ಮಾತ್ರ ದಾಖಲಾಗಿದ್ದಾನೆ.

    2024-25 ನೇ ಸಾಲಿನಲ್ಲಿ ಶಾಲೆಯಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ 12 ಮಕ್ಕಳು ಟಿಸಿ ಪಡೆದಿದ್ದಾರೆ. ಉಳಿದವರಿಂದಲೂ ಟಿಸಿ ಪಡೆಯಲು ಅರ್ಜಿ ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳಿಲ್ಲದೆ ಶಾಲೆ ಬಿಕೋ ಎನ್ನುತ್ತಿದೆ. ಇದನ್ನೂ ಓದಿ: ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

    ಈ ಶಾಲೆಯಲ್ಲೀಗ ಕೇವಲ ಒಬ್ಬ ವಿದ್ಯಾರ್ಥಿ, ಇಬ್ಬರು ಶಿಕ್ಷಕರು ಇದ್ದಾರೆ. ಆ ಒಬ್ಬ ವಿದ್ಯಾರ್ಥಿಯನ್ನೂ ಬೇರೆಡೆ ಸೇರಿಸಲು ಪೋಷಕರು ಟಿಸಿ ಕೇಳಿದ್ದಾರೆ. ಹಿಂದೆ ಶಿಕ್ಷಕರು ಸರಿಯಾಗಿ ಪಾಠಪ್ರವಚನ ಮಾಡುತ್ತಿಲ್ಲ ಎಂದು ಪೋಷಕರು ಪ್ರತಿಭಟಿಸಿದ್ದರು. ಆ ವೇಳೆ ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರಿಸಿತ್ತು. ಇದೀಗ ಶಾಲೆಯಲ್ಲಿ ಮತ್ತೊಂದು ಸಮಸ್ಯೆ ಉದ್ಭವವಾಗಿದೆ.

  • ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ಆಗ್ರಾ: ದಲಿತ ಯುವತಿಯ (Dalit Women) ಮೇಲೆ ಪೊಲೀಸ್ ಪೇದೆಯೊಬ್ಬ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಯುವತಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಕಾನ್‌ಸ್ಟೇಬಲ್ ರಾಘವೇಂದ್ರ ಸಿಂಗ್ (27) ನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆರ್‌ಕೆ ಸಿಂಗ್ ತಿಳಿಸಿದ್ದಾರೆ.

    25 ವರ್ಷದ ಮೃತ ಯುವತಿಯ ಗುರುತು ಮುಚ್ಚಿಡಲಾಗಿದ್ದು, ಕಾನ್‌ಸ್ಟೇಬಲ್ ರಾಘವೇಂದ್ರ ಸಿಂಗ್ (27) ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ನೇಣು ಬಿಗಿದುಕೊಂಡಿರುವುದು ಸಾವಿಗೆ ಕಾರಣ ಎಂದು ದೃಢಪಡಿಸಿದೆ. ಇದನ್ನೂ ಓದಿ: ಅದಾನಿ ಕೇಸ್‌ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ – ಪತ್ರಿಕೆಯ ವರದಿಯನ್ನು ಅವಲಂಬಿಸಬೇಡಿ : ಸುಪ್ರೀಂ ಹೇಳಿದ್ದೇನು?

    ಮೂಲಗಳ ಪ್ರಕಾರ ಗುರುಗ್ರಾಮ್‌ನ ಕಿಡ್ನಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವತಿ ಮತ್ತು ಕಾನ್‌ಸ್ಟೇಬಲ್ ರಾಘವೇಂದ್ರ ಸಿಂಗ್ ಪರಸ್ಪರ ಪರಿಚಯಸ್ಥರು. ಇಬ್ಬರು ಝಾನ್ಸಿಯಲ್ಲಿ ನರ್ಸಿಂಗ್ ತರಬೇತಿ ಪಡೆದಿದ್ದರು ಮತ್ತು ಅಂದಿನಿಂದ ಸಂಪರ್ಕದಲ್ಲಿದ್ದರು. ಕೆಲ ದಿನಗಳ ಹಿಂದೆ ಯುವತಿಯ ಸಹೋದರ ರಾಘವೇಂದ್ರ ಸಿಂಗ್ ಮನೆಗೆ ಭೇಟಿ ನೀಡಿದ್ದರು. ಬಳಿಕ ರಾಘವೇಂದ್ರ ಅವರ ಮದುವೆ ಪ್ರಸ್ತಾಪವನ್ನು ಯುವತಿಯ ಕುಟುಂಬವು ನಿರಾಕರಿಸಿತು. ಅದಾಗ್ಯೂ ರಾಘವೇಂದ್ರ ಸಿಂಗ್ ಯುವತಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

    ಘಟನೆ ನಡೆಯುವ ಒಂದು ದಿನ ಮೊದಲು ಯುವತಿಯು ಕಾನ್‌ಸ್ಟೇಬಲ್‌ನ ಬಾಡಿಗೆ ಕೊಠಡಿಗೆ ಭೇಟಿ ನೀಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕಾನ್ಸ್‌ಟೇಬಲ್ ರಾಘವೇಂದ್ರ ಸಿಂಗ್ ಝಾನ್ಸಿ ಮೂಲದವರಾಗಿದ್ದು, ಬೆಳಂಗಂಜ್‌ನಲ್ಲಿ ಬಾಡಿಗೆಗೆ ವಾಸವಾಗಿದ್ದರು. ಘಟನೆಯ ದಿನ, ರಾಘವೇಂದ್ರ ಸಿಂಗ್ ತಮ್ಮ ಕಚೇರಿಗೆ ಬಂದಿದ್ದರು. ಆದರೆ ಬೇಗ ಹೊರಟರು, ಬಳಿಕ ಘಟನೆಯ ಬಗ್ಗೆ ತನ್ನ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಸ್, ಟ್ರಕ್ ನಡುವೆ ಅಪಘಾತ 12 ಮಂದಿ ದುರ್ಮರಣ

  • ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಕೊಲೆ

    ಜೈಪುರ: ದಲಿತ ಮಹಿಳೆ (Dalit Woman) ಮೇಲೆ ಅತ್ಯಾಚಾರ (Rape) ನಡೆಸಿ ಬೆಂಕಿ (Fire) ಹಚ್ಚಿ ಕೊಲೆಗೈದಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ (Rajasthan) ಬಾರ್ಮರ್ (Barmer) ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿಯನ್ನು ಶಕೂರ್ ಎಂದು ಗುರುತಿಸಲಾಗಿದೆ. ಗುರುವಾರ ಈ ಘಟನೆ ನಡೆದಿದ್ದು, 30 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಮೈಮೇಲೆ ರಾಸಾನಿಕಗಳನ್ನು (Chemicals) ಸುರಿದು ನಂತರ ಬೆಂಕಿ ಹಚ್ಚಿದ್ದಾನೆ ಎಂದು ಪಚ್ಪದ್ರಾ ಪೊಲೀಸ್ ಠಾಣೆ ಎಸ್‌ಹೆಚ್‌ಓ (SHO) ರಾಜೇಂದ್ರ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಠಾಣೆಗೆ ನುಗ್ಗಿದ 60 ಮಂದಿ ಗುಂಪು – ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಡಕಾಯಿತನ ರಿಲೀಸ್ 

    ಆರೋಪಿ ಶಕೂರ್ ಸಂತ್ರಸ್ತೆಯ ಮನೆ ಸಮೀಪ ವಾಸಿಸುತ್ತಿದ್ದು, ಆತನನ್ನು ಬಂಧಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಆತ ಆಕೆಯನ್ನು ಅತ್ಯಾಚಾರ ಮಾಡಿ ಮೈಮೇಲೆ ರಾಸಾಯನಿಕ ಸುರಿದು ನಂತರ ಬೆಂಕಿ ಹಚ್ಚಿದ್ದಾನೆ. ಬೆಂಕಿಯಿಂದ ಶೇ. 40ರಷ್ಟು ಸುಟ್ಟ ಗಾಯಗಳಾಗಿರುವ ಮಹಿಳೆಗೆ ಜೋಧ್‌ಪುರದ (Jodhpur) ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಕೆ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ: ಬೋನಿ ಕಪೂರ್ ಕುಟುಂಬಕ್ಕೆ ಸೇರಿದ 39 ಲಕ್ಷ ಮೌಲ್ಯದ ಬೆಳ್ಳಿ ವಶ 

    ಭಾರತೀಯ ದಂಡ ಸಂಹಿತೆ (IPC) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಿಷೇಧಿತ ಪಿಎಫ್‍ಐನ ಇಬ್ಬರು ಮುಖಂಡರ ಬಂಧನ

  • ಪರಿಶಿಷ್ಟ ಜಾತಿಗೆ ಸೇರಿದವಳೆಂದು ತಿಳಿದು ಆಕೆ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ: ಕೋರ್ಟ್‌

    ಪರಿಶಿಷ್ಟ ಜಾತಿಗೆ ಸೇರಿದವಳೆಂದು ತಿಳಿದು ಆಕೆ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ: ಕೋರ್ಟ್‌

    ತಿರುವನಂತಪುರಂ: ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ತಿಳಿದು ಆಕೆಯ ದೇಹವನ್ನು ಮುಟ್ಟುತ್ತಾನೆ ಎಂಬುದು ನಂಬಲಾಗದ ಸಂಗತಿ ಎಂದು ಕೋಯಿಕ್ಕೋಡ್‌ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಹೇಳಿದೆ.

    ಬರಹಗಾರ, ಸಾಮಾಜಿಕ ಕಾರ್ಯಕರ್ತ ಸಿವಿಕ್‌ ಚಂದ್ರನ್‌ ಅವರ ಮೇಲೆ 30 ವರ್ಷ ವಯಸ್ಸಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್‌, ಐಪಿಸಿ ಸೆಕ್ಷನ್‌ 354ಎ (ಒತ್ತಾಯಪೂರ್ವಕ ಲೈಂಗಿಕ ದೌರ್ಜನ್ಯ) ಅಡಿ ಆರೋಪಿಯ ಅಪರಾಧವು ಮೇಲ್ನೋಟಕ್ಕೆ ಸಾಬೀತಾಗಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿ ವಜಾ – ಅತ್ಯಾಚಾರ ಪ್ರಕರಣ ದಾಖಲಿಸಲು ಹೈಕೋರ್ಟ್‌ ಸೂಚನೆ

    CRIME COURT

    ಸಂತ್ರಸ್ತೆಯು ಎಸ್‌ಸಿ/ಎಸ್‌ಟಿಗೆ ಸೇರಿದವಳು ಎಂಬ ಅರಿವಿದ್ದೇ ಹೀಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಕೋರ್ಟ್‌ ತಿಳಿಸಿದೆ.

    74 ವಯಸ್ಸಿನ ವ್ಯಕ್ತಿ ಲೈಂಗಿಕ ಕಿರುಕುಳ ನೀಡುವಷ್ಟು ಸಮರ್ಥರಾಗಿರುವುದಿಲ್ಲ. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿರುವ ವ್ಯಕ್ತಿ ವಿರುದ್ಧ ದೂರು ನೀಡಿದ್ದು ದುರಾದೃಷ್ಟಕರ ಎಂದು ನಿನ್ನೆ ಕೋರ್ಟ್‌ ಹೇಳಿತ್ತು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ – ಪ್ರತಿಪಕ್ಷಗಳ ಆಕ್ರೋಶ

    ಇದು ಚಂದ್ರನ್‌ ಅವರ ವಿರುದ್ಧದ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ. ದಲಿತ ಲೇಖಕಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಅವರು 2022ರ ಏಪ್ರಿಲ್‌ನಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

    ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

    ಬೀದರ್: 12ನೇ ಶತಮಾನದಲ್ಲಿ ಬಸವಾದಿ ಶರಣರು ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನೆಲದಲ್ಲೇ ಇನ್ನೂ ಕೂಡ ಅಸ್ಪೃಶ್ಯತೆ ಜೀವಂತವಾಗಿದೆ.

    ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಅಂಗನವಾಡಿಗೆ ದಲಿತ ಮಹಿಳೆಯರು ನೇಮಕವಾಗಿರುವ ಹಿನ್ನೆಲೆ ಮೇಲ್ಜಾತಿ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೌರಿಂಗ್, ಲೇಡಿ ಕರ್ಜನ್ ಆಸ್ಪತ್ರೆಗೆ ವಕ್ಫ್ ಮಹಿಳಾ ಪರಿಷತ್ತಿನಿಂದ 5 ಲಕ್ಷ ಸಹಾಯಧನ

    ಅಂಗನವಾಡಿ ಶಿಕ್ಷಕಿಯಾಗಿ ದಲಿತ ಸಮುದಾಯದ ಸುಮಿತ್ರಾ ಬಾಯಿ ನೇಮಕವಾಗಿದ್ದರೆ, ಶಾಲೆಯ ಸಹಾಯಕಿಯೂ ದಳಿತ ಮಹಿಳೆಯಾಗಿದ್ದಾರೆ. ಈ ಹಿನ್ನೆಲೆ ಮೇಲ್ಜಾತಿಯ ಜನರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ.

    ಗ್ರಾಮದ 3 ಅಂಗನವಾಡಿ ಕೇಂದ್ರಗಳ ಪೈಕಿ 2 ಅಂಗನವಾಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಆದರೆ ಸಾಮಾನ್ಯ ವಾರ್ಡಿನ ಅಂಗನವಾಡಿ ಕೇಂದ್ರ ಅಸ್ಪೃಶ್ಯತೆಯ ವಿವಾದಕ್ಕೀಡಾಗಿದೆ. 2 ವರ್ಷಗಳಿಂದ ಕೋವಿಡ್ ಕಾರಣದಿಂದ ಬಂದ್ ಆಗಿದ್ದ ಅಂನವಾಡಿ ಇದೀಗ ಅಸ್ಪೃಶ್ಯತೆ ಕಾರಣಕ್ಕೆ ಮಕ್ಕಳೇ ಮರಳದಂತಾಗಿದೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    Live Tv

  • 150 ಪೊಲೀಸರ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ 5 ದಲಿತ ಮಹಿಳೆಯರು

    150 ಪೊಲೀಸರ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ 5 ದಲಿತ ಮಹಿಳೆಯರು

    ಯಾದಗಿರಿ: 150ಕ್ಕೂ ಹೆಚ್ಚು ಪೊಲೀಸರ ಭದ್ರತೆಯಲ್ಲಿ 5 ಮಂದಿ ದಲಿತ ಮಹಿಳೆಯರು ದೇವಾಲಯವನ್ನು ಪ್ರವೇಶಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಜಿಲ್ಲೆಯ ಸುರಪುರ ತಾಲೂಕಿನ ಅಂಬಲಿಹಾಳ ಗ್ರಾಮದ ಆಂಜನೇಯ ದೇವಾಲಯಕ್ಕೆ ಪೊಲೀಸ್ ಬಿಗಿ ಭದ್ರತೆಯಲ್ಲಿ ದಲಿತ ಮಹಿಳೆಯರು ಪ್ರವೇಶ ಮಾಡಿದ್ದಾರೆ.

    ಎಸ್‌ಪಿ ಡಾ. ಸಿಬಿ ವೇದಮೂರ್ತಿ ಹಾಗೂ ಸಹಾಯಕ ಆಯುಕ್ತ ಶಾಲಂ ಹುಸೇನ್ ನೇತೃತ್ವದಲ್ಲಿ ಮಹಿಳೆಯರು ಪೊಲೀಸ್ ವಾಹನದಲ್ಲಿ ದೇವಾಯಕ್ಕೆ ಆಗಮಿಸಿದರು. ಬಳಿಕ ಆಂಜನೇಯ ದೇಗುಲ ಪ್ರವೇಶಿಸಿದ ಮಹಿಳೆಯರು ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ಮೂಲತಃ ಅಂಬಲಿಹಾಳ ಗ್ರಾಮದ ದಲಿತ ಮಹಿಳೆಯರು ಸುಮಾರು ವರ್ಷಗಳಿಂದ ಮಾವಿನಹಾಳ ಗ್ರಾಮದಲ್ಲಿ ವಾಸವಿದ್ದರು. ಆಂಜನೇಯ ಭಕ್ತರೂ ಆಗಿದ್ದ ಮಹಿಳೆಯರು, ಇತ್ತೀಚೆಗೆ ಆಂಜನೇಯ ಗುಡಿಗೆ ಪ್ರವೇಶ ಮಾಡಿ ಜಾತ್ರೆ ಮಾಡುತ್ತೇವೆ ಎಂದಿದ್ದರು. ಇದಕ್ಕೆ ಅಂಬಲಿಹಾಳ ಗ್ರಾಮದ ಮೇಲ್ವರ್ಗದ ಜನರು ವಿರೋಧ ವ್ಯಕ್ತಪಡಿಸಿದ್ದರು.

    ಶನಿವಾರ ಅಮಾವಾಸ್ಯೆ ಹಾಗೂ ವಿವಿಧ ಕಾರ್ಯಕ್ರಮದ ವೇಳೆ ದೇಗುಲದಲ್ಲಿ ದಲಿತ ಮಹಿಳೆಯರು ದರ್ಶನ ಪಡೆಯಲು ಮುಂದಾಗಿದ್ದರು. ಆದರೆ ಇದಕ್ಕೆ ಮೇಲ್ವರ್ಗದ ಜನರು ವಿರೋಧ ಮಾಡಿದ ಹಿನ್ನೆಲೆ ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಕಾರದೊಂದಿಗೆ ದೇಗುಲ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ಗ್ರಾಮದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ ಆರೋಪ

    ಖಾಕಿ ಕಟ್ಟೆಚ್ಚೆರ:
    ದಲಿತ ಮಹಿಳೆಯರು ದೇಗುಲ ಪ್ರವೇಶ ಮಾಡಿದ ಹಿನ್ನೆಲೆ, ಅಂಬಲಿಹಾಳ ಹಾಗೂ ಹೂವಿನಹಳ್ಳಿ ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ್ದ ಕೆಂಡದಂತಾಗಿದೆ.  ಮೇಲ್ವರ್ಗದ ಜನರು ಗಲಾಟೆ ಮಾಡುವ ಸಾಧ್ಯತೆ ಇದ್ದು, ಅಂಬಲಿಹಾಳ ಹಾಗೂ ಹೂವಿನಹಳ್ಳಿ ಗ್ರಾಮಕ್ಕೆ ಪೊಲೀಸ್ ಭದ್ರತೆ ಇರಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 2 ಕೆಎಸ್‌ಆರ್‌ಪಿಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿದೆ.

  • ನಾಪತ್ತೆಯಾಗಿದ್ದ ದಲಿತ ಮಹಿಳೆ ಶವವಾಗಿ ಹೂತಿಟ್ಟ ಸ್ಥಿತಿಯಲ್ಲಿ ಮಾಜಿ ಸಚಿವನ ಆಶ್ರಮದ ಬಳಿ ಪತ್ತೆ!

    ನಾಪತ್ತೆಯಾಗಿದ್ದ ದಲಿತ ಮಹಿಳೆ ಶವವಾಗಿ ಹೂತಿಟ್ಟ ಸ್ಥಿತಿಯಲ್ಲಿ ಮಾಜಿ ಸಚಿವನ ಆಶ್ರಮದ ಬಳಿ ಪತ್ತೆ!

    ಲಕ್ನೋ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ 22 ವರ್ಷ ವಯಸ್ಸಿನ ದಲಿತ ಮಹಿಳೆ ಶವವು ಸಮಾಧಿಯಾಗಿದ್ದ ಸ್ಥಿತಿಯಲ್ಲಿ ಸಮಾಜವಾದಿ ಪಕ್ಷದ ಮಾಜಿ ಸಚಿವನ ಆಶ್ರಮದ ಬಳಿ ಪತ್ತೆಯಾಗಿದೆ.

    ಉತ್ತರ ಪ್ರದೇಶದ ಉನ್ನಾವೊದ ದಲಿತ ಮಹಿಳೆ ನಾಪತ್ತೆಯಾಗಿದ್ದರು. ಹೂತಿಟ್ಟಿದ್ದ ಕೊಳೆತ ಸ್ಥಿತಿಯಲ್ಲಿದ್ದ ಆಕೆಯ ಮೃತದೇಹವನ್ನು, ಮಾಜಿ ಸಚಿವ ಫತೇಹ್‌ ಬಹದ್ದೂರ್‌ ಸಿಂಗ್‌ ನಿರ್ಮಿಸಿರುವ ಆಶ್ರಮದ ಬಳಿಯ ಖಾಲಿ ಜಾಗದಿಂದ ಹೊರತೆಗೆದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಮೆಗಾ ಹರಾಜಿಗೆ ಬೆಂಗಳೂರು ಸಜ್ಜು – ಸ್ಟಾರ್ ಆಟಗಾರರ ಮೇಲೆ ಫ್ರಾಂಚೈಸಿಗಳ ಕಣ್ಣು

    ಫತೇಹ್‌ ಬಹದ್ದೂರ್‌ ಪುತ್ರ ರಾಜೋಲ್‌ ಸಿಂಗ್‌ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ರಾಜೋಲ್‌ ಸಿಂಗ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ನಂತರ ಎಸ್‌ಒಜಿ ತಂಡ ಗುರುವಾರ ಮಹಿಳೆಯ ದೇಹವನ್ನು ಹೊರತೆಗೆದಿದೆ. ಮೃತದೇಹವನ್ನು ಆಶ್ರಮದ ಬಳಿಯ ಜಾಗದಲ್ಲಿ ಹೂಳಲಾಗಿತ್ತು. ಶವವನ್ನು ಹೂತಿಟ್ಟ ಸ್ಥಳವನ್ನು ಗುರುತಿಸಲು ನಾವು ಗುಪ್ತಚರ ಮತ್ತು ಮೊಬೈಲ್‌ ಕಣ್ಗಾವಲು ಬಳಸಿದ್ದೇವೆ ಎಂದು ಉನ್ನಾವೊ ಎಎಸ್‌ಪಿ ಶಶಿ ಶೇಖರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ

    ಅಕ್ರಮ ಸಂಬಂಧ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

    POLICE JEEP

    ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಪ್ರಕರಣ ಕುರಿತು ಪ್ರತಿಕ್ರಿಯಿಸಿದ್ದು, ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ತಪ್ಪಿತಸ್ಥರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾವು ಕಬ್ಬಿನ ಬಗ್ಗೆ ಮಾತಾಡಿದ್ರೆ, ಅವ್ರು ಜಿನ್ನಾ ಕುರಿತು ಮಾತನಾಡ್ತಾರೆ: ಕಾಂಗ್ರೆಸ್‌ ವಿರುದ್ಧ ಯೋಗಿ ವಾಗ್ದಾಳಿ

    ಡಿ.8 ರಂದು ಮಹಿಳೆ ಕಾಣೆಯಾಗಿದ್ದರು. ನನ್ನ ಮಗಳನ್ನು ಮಾಜಿ ಸಚಿವರ ಮಗ ರಾಜೋಲ್‌ ಸಿಂಗ್‌ ಅಪಹರಣ ಮಾಡಿದ್ದಾನೆ ಎಂದು ಮಹಿಳೆ ತಾಯಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.