Tag: Dare Devil Mustafa

  • ಪುಸ್ತಕದಲ್ಲೂ ನೋಡಿ ‘ಡೇರ್ ಡೆವಿಲ್‍ ಮುಸ್ತಾಫಾ’ ಸಿನಿಮಾ

    ಪುಸ್ತಕದಲ್ಲೂ ನೋಡಿ ‘ಡೇರ್ ಡೆವಿಲ್‍ ಮುಸ್ತಾಫಾ’ ಸಿನಿಮಾ

    ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ ಡೇರ್ ಡೆವಿಲ್ ಮುಸ್ತಾಫಾ (Dare Devil Mustafa). ಕಳೆದ ವರ್ಷ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಪ್ರೀತಿ ಪಡೆದಿತ್ತು. ಶಶಾಂಕ ಸೋಗಾಲ್  (Shashank Sogal) ನಿರ್ದೇಶನದಲ್ಲಿ ಮೂಡಿಬಂದಿದ್ದ ಡೇರ್ ಡೆವಿಲ್ ಮುಸ್ತಾಫಾ ಚಿತ್ರವೀಗ ಪುಸ್ತಕ ರೂಪ ಪಡೆದಿದೆ.

    ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಕಂ ನಟಿ ಸಿಂಧು ಎಸ್ ಮೂರ್ತಿ, ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ  ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶ. ಸಹಪಾಠಿಗಳ ನಡುವೆ ನಡೆಯುವ ಸಣ್ಣ ಪುಟ್ಟ ಜಗಳ, ಹಾಗು ಧರ್ಮಕ್ಕೂ ಮಿಗಿಲಾದದ್ದು ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜೊತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ. ಒಂದು ಸಣ್ಣ ಕಥೆ ಎತ್ತಿಕೊಂಡು ಸ್ಕ್ರೀನ್ ಪ್ಲೇ, ಕಥೆ ಡೈಲಾಗ್ ಬರೆದು ದೃಶ್ಯ ರೂಪಕ್ಕೆ ಹೇಗೆ ಇಳಿಸಲಾಯಿತು.? ಸಣ್ಣ ಕಥೆ ಚಿತ್ರ ಕಥೆ ಆಗಿದ್ದೇಗೆ? ಕಥೆ ಸಿನಿಮಾವಾಗಿದ್ದೇಗೆ ಎಂಬ ವಿಷಯಗಳು ಈ  ಪುಸ್ತಕ ಓದಿದರೆ ತಿಳಿಯುತ್ತದೆ.

     

    ಸಿನಿಮಾ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳ ಕೊರತೆ ಇದೆ.‌ಅದರಲ್ಲಿಯೂ ಇಂಗ್ಲೀಷ್ ಭಾಷೆಯಲ್ಲಿ ಕಥೆ ಬರೆದು ಸಿನಿಮಾ ಮಾಡುವವರು ಹೆಚ್ಚಿರುವಾಗ ಕನ್ನಡದಲ್ಲಿ ಸ್ಕ್ರೀಪ್ಟ್ ಬರೆದು ಸಿನಿಮಾ ಮಾಡಿದ್ದೇವೆ ಅನ್ನೋದನ್ನು ಡೇರ್ ಡೆವಿಲ್ ಮುಸ್ತಾಫಾ ಪುಸ್ತಕದಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದ ಸದ್ಯದ ಸಿನಿಮಾರಂಗ ಇರುವ ಪರಿಸ್ಥಿತಿಯಲ್ಲಿ ಸಿನಿಮಾ ಸೂಕ್ಷ್ಮಗಳ ಬಗ್ಗೆ ಅರಿವು ಹುಟ್ಟಿಸಬಲ್ಲ ಇಂಥ ಕೃತಿಗಳ ಅಗತ್ಯ ಖಂಡಿತ ಇದೆ.

  • Karnataka Budget 2024- ಬಜೆಟ್ ನಲ್ಲಿ ಬಂಗಾರದ ಮನುಷ್ಯ, ಡೇರ್ ಡೆವಿಲ್ ಮುಸ್ತಾಫಾ

    Karnataka Budget 2024- ಬಜೆಟ್ ನಲ್ಲಿ ಬಂಗಾರದ ಮನುಷ್ಯ, ಡೇರ್ ಡೆವಿಲ್ ಮುಸ್ತಾಫಾ

    ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ 2024-25ರಲ್ಲಿ (Karnataka Budget 2024) ಕನ್ನಡ ಸಿನಿಮಾಗಳನ್ನು ಉಲ್ಲೇಖಿಸಿ, ತಮ್ಮ ಬಜೆಟ್ ಹಿರಿಮೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯೋಜನೆಗಳನ್ನು ಪ್ರಸ್ತಾಪಿಸುವಾಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ ಡೈಲಾಗ್ ಅನ್ನು ನೆನಪಿಸಿಕೊಂಡಿದ್ದಾರೆ.

    ಖ್ಯಾತ ಸಾಹಿತಿ  ಪೂರ್ಣಚಂದ್ರ ತೇಜಸ್ವಿ ಅವರ ಕೃತಿಯನ್ನು ಆಧರಿಸಿ, ಶಶಾಂಕ್ ನಿರ್ದೇಶನ ಮಾಡಿದ್ದ ಡೇರ್ ಡೆವಿಲ್ ಮುಸ್ತಾಫಾ (Dare Devil Mustafa) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಈ ಸಿನಿಮಾ ಕುರಿತಂತೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು. ಈ ವರ್ಷದಲ್ಲಿ ಚಿತ್ರಕ್ಕೆ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಕೂಡ ಪ್ರಶಸ್ತಿ ನೀಡಿತ್ತು. ಈ ಚಿತ್ರದ ‘ಒಂದು ತೋಟದಲ್ಲಿ ನೂರು ಹೂವು ಅರಳಿ. ಎಲ್ಲಾ ಕೂಡಿ ಆಡುವಂಥ ಗಾಳಿ ಬೀಸಲಿ’ ಎನ್ನುವ ಸಂಭಾಷಣೆಯನ್ನು ಬಜೆಟ್ ನಲ್ಲಿ ಮುದ್ರಿಸಲಾಗಿದೆ.

    ಇದೇ ಬಜೆಟ್ ನಲ್ಲೇ ಡಾ.ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ (Bangarada Manushya) ಸಿನಿಮಾವನ್ನೂ ಉಲ್ಲೇಖಿಸಿದ್ದಾರೆ ಸಿಎಂ ಸಿದ್ಧರಾಮಯ್ಯ. ಅಲ್ಪ ಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ್ದಾರೆ ಸಿಎಂ.

    ಬಜೆಟ್ ಆರಂಭದಲ್ಲಿ ವಿರೋಧ ಪಕ್ಷದ ನಾಯಕರು ಉಪೇಂದ್ರ ನಟನೆಯ ‘ಏನಿಲ್ಲ ಏನಿಲ್ಲ..’ ಹಾಡನ್ನು ನೆನಪಿಸಿಕೊಂಡರು. ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂಬ ಹಾಡನ್ನು ಗುನುಗುವ ಮೂಲಕ ಬಜೆಟ್ ಬಗ್ಗೆ ಕಾಮೆಂಟ್ ಕೂಡ ಮಾಡಿದ್ದಾರೆ.

  • ‘ಡೇರ್ ಡೆವಿಲ್ ಮುಸ್ತಾಫಾ’ಗೆ 50ರ ಸಂಭ್ರಮ: ಬಿರಿಯಾನಿ-ಪುಳಿಯೋಗರೆ ಪಾರ್ಟಿ

    ‘ಡೇರ್ ಡೆವಿಲ್ ಮುಸ್ತಾಫಾ’ಗೆ 50ರ ಸಂಭ್ರಮ: ಬಿರಿಯಾನಿ-ಪುಳಿಯೋಗರೆ ಪಾರ್ಟಿ

    ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂದರೆ ಬರೀ ವಾರ, ತಿಂಗಳ ಸುತ್ತ ಬಂಧಿಯಾಗುವ ಕಾಲಮಾನ. ಇಂಥ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 50 ದಿನ (50th Celebration) ಪೂರೈಸಿದರೆ ಬರೀ ಚಿತ್ರತಂಡ ಮಾತ್ರವಲ್ಲ ಒಂದಿಡಿ ಚಿತ್ರರಂಗವೇ ಖುಷಿಪಡುವ ಸಂಗತಿ. ಅಂತಹ ಯಶಸ್ಸಿಗೆ ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಡೇರ್ ಡೆವಿಲ್ ಮುಸ್ತಾಫಾ (Dare Devil Mustafa) ಸಿನಿಮಾ ಸಾಕ್ಷಿಯಾಗಿದೆ.

    ಭರ್ಜರಿಯಾಗಿ ಐವತ್ತು ದಿನ ಪೂರೈಸಿ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿಯೂ ಭರಪೂರ ಮೆಚ್ಚುಗೆ ಪಡೆಯುತ್ತಿರುವ ಖುಷಿ ಕ್ಷಣಗಳನ್ನು ಚಿತ್ರತಂಡ ಸೆಲೆಬ್ರೆಟ್ ಮಾಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ನಡೆದ ಐವತ್ತು ದಿನದ ಸಂಭ್ರಮಾಚರಣೆಯಲ್ಲಿ ಇಡೀ ತಂಡಕ್ಕೆ ಗೆಲುವಿನ ಪಾರಿತೋಷಕ ನೀಡಿ ಗೌರವಿಸಲಾಯಿತು. ಜೊತೆಗೆ ಬಿರಿಯಾನಿ ಪುಳಿಯೊಗರೆ ಪಾರ್ಟಿ ಮಾಡಿ ಇಡೀ ಡೇರ್ ಡೆವಿಲ್ ಮುಸ್ತಾಫ್ ಬಳಗ ಖುಷಿಪಟ್ಟಿತು.  ಇದನ್ನೂ ಓದಿ:ಮತ್ತೆ ತಂದೆ ಖುಷಿಯಲ್ಲಿ ‘ಅಗ್ನಿಸಾಕ್ಷಿ’ ವಿಜಯ್‌ ಸೂರ್ಯ

    ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿರುವ ಧನಂಜಯ್ (Dolly Dhananjay) ಮಾತನಾಡಿ, ನಾನು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ ಭಾಗವಾಗಿರುವುದು ನನಗೆ ಖುಷಿ. ಶಶಾಂಕ್ ಕಾಲೇಜ್ ನಲ್ಲಿ ನನಗೆ ಜ್ಯೂನಿಯರ್. ಅಲ್ಲಿಂದನೂ ನೋಡ್ತಾ ಇದ್ದೆ. ತುಂಬಾ ಜನ ನಿರ್ದೇಶಕರು ಆಗಬೇಕು ಅಂತಾ ಬರುತ್ತಾರೆ. ನಾನು ಕಥೆ ಮಾಡಿದ್ದೇನೆ ಇನ್ವೆಸ್ಟ್ ಮಾಡಿ ಅಂತಾರೇ. ನಾನು ಅವರಿಗೆ ಶಶಾಂಕ್ ಎಕ್ಸಾಂಪಲ್ ಕೊಟ್ಟು ಕಳಿಸುತ್ತೇನೆ.‌‌ ಕೆಲಸ ಮಾಡುತ್ತಾ ಮಾಡುತ್ತಾ ಕಲಿಯುವುದು. ಸೀದಾ ಬಂದು ಕಥೆ ಮಾಡಿದ್ದೇನೆ ಕೋಟ್ಯಾಂತರ ರೂಪಾಯಿ ದುಡ್ಡು ಹಾಕಿ ಎಂದರೆ ಕಷ್ಟವಾಗುತ್ತದೆ. ಡೇರ್ ಡೆವಿಲ್ ಮುಸ್ತಾಫಾ ಮಾಸ್ ಸಿನಿಮಾ ಅಂತಾನೇ ಕರೆಯುತ್ತೇನೆ. ಥಿಯೇಟರ್ ನಲ್ಲಿ‌ ಕುಳಿತು ನೋಡಿ ಸೆಲಬ್ರೆಟ್ ಮಾಡುವ ಸಿನಿಮಾ. ಹಳೆ ಬೇರು ಹೊಸ ಚಿಗರು ಕೂಡಿರಲು ಮರ ಸೊಬಗು ಎನ್ನುವಂತೆ ಹಿರಿಯರು ಹಾಗೂ ಕಿರಿಯರು ಎಲ್ಲರೂ ಇಟ್ಟುಕೊಂಡು ಸಿನಿಮಾವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ ಎಂದರು.

    ಒಳ್ಳೆಯ ಸಿನಿಮಾಗಳು ಬಂದಾಗ ಜನರು ಖಂಡಿತವಾಗಿಯೂ ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಅದು ‘ಡೇರ್ಡೆವಿಲ್ ಮುಸ್ತಾಫಾ’ ವಿಚಾರದಲ್ಲಿ ನಿಜವಾಗಿದೆ. ಇದು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಾಣ ಮಾಡಿರುವ ಸಿನಿಮಾ. ಅನಂತ ಶಾಂತಯ್ಯ ಜೊತೆಗೂಡಿ ಚಿತ್ರಕಥೆ ಬರೆದಿರುವ ಶಶಾಂಕ್ ಸೋಗಾಲ್ (Shashank Sogal)  ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

     

    ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ವಾಟ್ಸಪ್ ಯೂನಿವರ್ಸಿಟಿ’ ಟೀ ಶರ್ಟ್ ಧರಿಸಿ ‘ಮುಸ್ತಾಫಾ’ ಸಿನಿಮಾ ನೋಡಿದ ಪ್ರಕಾಶ್ ರೈ

    ‘ವಾಟ್ಸಪ್ ಯೂನಿವರ್ಸಿಟಿ’ ಟೀ ಶರ್ಟ್ ಧರಿಸಿ ‘ಮುಸ್ತಾಫಾ’ ಸಿನಿಮಾ ನೋಡಿದ ಪ್ರಕಾಶ್ ರೈ

    ಘೀರ ಸಿನಿಮಾದ ಚಿತ್ರೀಕರಣಕ್ಕಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದ ಕನ್ನಡದ ಹೆಮ್ಮೆಯ ನಟ ಪ್ರಕಾಶ್ ರೈ (Prakash Raj) ಮೊನ್ನೆಯಷ್ಟೇ ಡೇರ್ ಡೆವಿಲ್ ಮುಸ್ತಾಫಾ (Dare Devil Mustafa) ಸಿನಿಮಾ ನೋಡಿದ್ದಾರೆ. ಈ ಸಿನಿಮಾ ವೀಕ್ಷಣೆಗೆ ಬಂದಾಗ ‘ವಾಟ್ಸಪ್ ಯೂನಿವರ್ಸಿಟಿ’ (Whatsapp University) ಎಂದು ಎದೆಯ ಮೇಲೆ ಬರೆಯಲಾಗಿದ್ದ ಟೀ ಶರ್ಟ್ ಧರಿಸಿಕೊಂಡು ಬಂದಿದ್ದಾರೆ. ಇದೀಗ ಆ ಫೋಟೋ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.

    ಬಿಜೆಪಿ ಮತ್ತು ಅಂಗ ಸಂಸ್ಥೆಗಳ ಪರವಾಗಿ ಮಾತನಾಡುವವರನ್ನು ಮತ್ತು ಹಿಂದೂಪರ ಹೋರಾಟಗಾರರ ಬಗ್ಗೆ ಮಾತನಾಡುವವರಿಗೆ ವಾಟ್ಸಪ್ ಯೂನಿವರ್ಸಿಟಿ ಸ್ಟೂಡೆಂಟ್ ಎಂದು ಗೇಲಿ ಮಾಡಲಾಗುತ್ತಿದೆ. ಇವರನ್ನು ಗೇಲಿ ಮಾಡಲೆಂದೇ ಪ್ರಕಾಶ್ ರೈ ಆ ರೀತಿಯ ಟೀ ಶರ್ಟ್ ಧರಿಸುತ್ತಾರೆ. ಸಿನಿಮಾ ನೋಡಲು ಬಂದಾಗಲೂ ಅದೇ ಟೀ ಶರ್ಟ್ ಧರಿಸಿ ಬಂದಿದ್ದರು. ಇದೀಗ  ಆ ಫೋಟೋ ವೈರಲ್ ಕೂಡ ಆಗಿದೆ.

    ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ನೋಡಿದ ನಂತರ ಚಿತ್ರತಂಡವನ್ನು ಪ್ರಕಾಶ್ ರೈ ಹಾಡಿ ಹೊಗಳಿದ್ದಾರೆ. ಕಲಾವಿದರನ್ನು ತಬ್ಬಿಕೊಂಡು ಅಭಿನಂದಿಸಿದ್ದಾರೆ. ಜನರ ಮನಸ್ಸು ಬೆಸೆಯುವಂತಹ ಇಂತಹ ಚಿತ್ರಗಳು ಇನ್ನೂ ಅನೇಕ ಬರಲಿ ಎಂದು ಮಾತನಾಡಿದ್ದಾರೆ. ಇಷ್ಟೆಲ್ಲ ಮಾತುಗಳನ್ನು ಹೇಳಿದ ಪ್ರಕಾಶ್ ರೈ ಅವರ ಟೀ ಶರ್ಟ್ ಮಾತ್ರ  ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ಗೆ ಗುರಿಯಾಗಿದೆ. ಇದನ್ನೂ ಓದಿ:ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಸ್ಯಾಂಡಲ್‌ವುಡ್‌ಗೆ ಎಂಟ್ರಿ

    ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ (Shashank Sogal) ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ.

    ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.