Tag: Darling Krishna

  • ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ

    ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ

    ದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ʻಬ್ರ್ಯಾಟ್ʼ (BRAT) ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ ʻನಾನೇ ನೀನಂತೆʼ ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

    ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡನ್ನು ಜನಪ್ರಿಯ ಗಾಯಕ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್ ʻಸರಿಗಮಪʼ ಖ್ಯಾತಿಯ ಲಹರಿ ಮಹೇಶ್ ಹಾಡಿದ್ದಾರೆ. ಉಳಿದ ನಾಲ್ಕು ಭಾಷೆಗಳಲ್ಲಿ ಫೀಮೇಲ್ ವರ್ಷನ್ ಸಿರೀಶ ಹಾಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತವ್ರು ಹಾಗೂ ತೆಲುಗು – ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ. ಇದನ್ನೂ ಓದಿ: 200 ಕೋಟಿ ಕ್ಲಬ್ ಸೇರಿದ ಸೆನ್ಸೇಷನ್ `ಸೈಯಾರ’

    ಈ ಹಿಂದೆ ಶಶಾಂಕ್, ಅರ್ಜುನ್ ಜನ್ಯ ಹಾಗೂ ಸಿದ್ ಶ್ರೀರಾಮ್ ಅವರ ಕಾಂಬಿನೇಶನ್ ನಲ್ಲಿ ಲವ್ 360 ಚಿತ್ರದ ʻಜಗವೇ ನೀನು ಗೆಳತಿಯೇʼ ಹಾಡು ಭರ್ಜರಿ ಯಶಸ್ಸು ಕಂಡಿತ್ತು‌. ಈಗ ಈ ಹಾಡಿಗೂ ಎಲ್ಲಾ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯೂ ಆಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ʻಕೌಸಲ್ಯ ಸುಪ್ರಜಾ ರಾಮʼ ಚಿತ್ರದ ನಂತರ ನನ್ನ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರ ಬ್ರ್ಯಾಟ್. ನನ್ನ ಈ ಚಿತ್ರದ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣರಾದ ನಿರ್ದೇಶಕ ಶಶಾಂಕ್ ಹಾಗೂ ತಂಡಕ್ಕೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಿದ್ ಶ್ರೀರಾಮ್ ಹಾಗೂ ಲಹರಿ ಅವರ ಗಾಯನ ಹಾಡಿಗೆ ಪೂರಕವಾಗಿದೆ. ಮುಂದಿನ ತಿಂಗಳು ಚಿತ್ರದ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಆ ಹಾಡಂತೂ ನನ್ನ ಮಗಳಿಗೆ ಬಹಳ ಇಷ್ಟ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

    ನನ್ನ ಹಾಗೂ ಅರ್ಜುನ್ ಜನ್ಯ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಅತೀ ಹೆಚ್ಚು ಜನಪ್ರಿಯವಾಗಿದೆ. ಈಗ ಆ ಸಾಲಿಗೆ ʻನಾನೇ ನೀನಂತೆʼ ಹಾಡು ಕೂಡ ಸೇರಲಿದೆ. ನನ್ನ ಸಿನಿ ಜರ್ನಿಯಲ್ಲೇ ಅತೀ ಹೆಚ್ಚು ವೆಚ್ಚದಲ್ಲಿ ಮೂಡಿಬಂದಿರುವ ಹಾಡಿದು. ಈ ಹಾಡಿನ ಟ್ಯೂನ್ ಅಂತಿಮಗೊಳಿಸಲು ಸುಮಾರು 6 ತಿಂಗಳ ಸಮಯ ಬೇಕಾಯಿತು. ನಿರ್ಮಾಪಕ ಮಂಜುನಾಥ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ.

    ಕನ್ನಡ ಹಾಗೂ ತೆಲುಗಿನಲ್ಲಿ ಸಿದ್ ಶ್ರೀರಾಮ್ ಅವರ ಧ್ವನಿಯಂತೂ ಹೇಳಿ ಮಾಡಿಸಿದ ಹಾಗಿದೆ. ಹಿಂದಿಯಲ್ಲಿ ಕನ್ನಡದ ಹುಡುಗ ನಹಾಲ್ ತವ್ರು, ತಮಿಳು, ಮಲೆಯಾಳಂ ನಲ್ಲಿ ಶ್ರೀಕಾಂತ್ ಹರಿಹರನ್ ಈ ಹಾಡನ್ನು ಹಾಡಿದ್ದಾರೆ‌. ಕನ್ನಡದಲ್ಲಿ ಫೀಮೇಲ್ ವರ್ಷನ್ ಲಹರಿ ಮಹೇಶ್ ಹಾಡಿದ್ದು , ಉಳಿದ ನಾಲ್ಕು ಭಾಷೆಗಳಲ್ಲಿ ಹೆಣ್ಣು ಧ್ವನಿ ಸಿರೀಶ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಈ ಹಾಡನ್ನು ನಾನೇ ಬರೆದಿದ್ದೇನೆ. ಆನಂದ್ ಆಡಿಯೋ ಮೂಲಕ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದೆ. ಸದ್ಯದಲ್ಲೇ ಉಳಿದ ಹಾಡುಗಳು ಸಹ ಬಿಡುಗಡೆಯಾಗಲಿದೆ. ಅಂದುಕೊಂಡ ಹಾಗೆ ಆದರೆ ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದರು.

     ನಮ್ಮ ಮೊದಲ ನಿರ್ಮಾಣದ ʻಫಸ್ಟ್ ರ‍್ಯಾಂಕ್ ರಾಜುʼ ಚಿತ್ರದ ಗೆಲುವಿಗೆ ನೀವೆಲ್ಲಾ ನೀಡಿದ ಪ್ರೋತ್ಸಾಹವೇ ಕಾರಣ. ಇದು ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸುಮಧುರವಾಗಿದೆ‌. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

    ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ ʻನಾನೇ ನೀನಂತೆʼ ನನ್ನ ಇಷ್ಟದ ಹಾಡು ಎಂದರು ನಾಯಕಿ ಮನಿಶಾ ಕಂದಕೂರ್.

    ಗಾಯಕಿ ಲಹರಿ, ಆನಂದ್ ಆಡಿಯೋ ಶ್ಯಾಮ್, ನೃತ್ಯ ನಿರ್ದೇಶಕ‌ ಕಲೈ ಮಾಸ್ಟರ್ ಹಾಗೂ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಸಹ ʻನಾನೇ ನೀನಂತೆʼ ಹಾಡಿನ ಕುರಿತು ಮಾತನಾಡಿದರು.

  • ಮಗಳ ಜೊತೆಗಿನ ಮುದ್ದಾದ ವಿಡಿಯೋ ಹಂಚಿಕೊಂಡ ಮಿಲನಾ ನಾಗರಾಜ್‌

    ಮಗಳ ಜೊತೆಗಿನ ಮುದ್ದಾದ ವಿಡಿಯೋ ಹಂಚಿಕೊಂಡ ಮಿಲನಾ ನಾಗರಾಜ್‌

    ನ್ನಡದ ನಟಿ ಮಿಲನಾ ನಾಗರಾಜ್ (Milana Nagaraj) ಅವರು ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಂತ ಸಿನಿಮಾದಿಂದ ಅವರು ಅಂತರ ಕಾಯ್ದುಕೊಂಡಿಲ್ಲ. ಬದಲಾಗಿ ಎರಡನ್ನು ನಿಭಾಯಿಸುತ್ತಿದ್ದಾರೆ. ಇದೀಗ ಮಗಳ ಜೊತೆಗಿನ ಮುದ್ದಾದ ವಿಡಿಯೋವೊಂದನ್ನು ನಟಿ ಶೇರ್‌ ಮಾಡಿದ್ದಾರೆ. ಮಿಲನಾ ಮಗಳ ತುಂಟಾಟ ನೋಡಿ ಫ್ಯಾನ್ಸ್‌ ಕ್ಯೂಟ್‌ ಎಂದಿದ್ದಾರೆ.

    ಇಂದಿಗೆ ಮಿಲನಾ ಪುತ್ರಿ ಜನಿಸಿ 4 ತಿಂಗಳು ಕಳೆದಿದೆ. ಇದೇ ಖುಷಿಯಲ್ಲಿ ಮಗಳ ಕ್ಯೂಟ್ ವಿಡಿಯೋವನ್ನು ಹಂಚಿಕೊಂಡು ನಟಿ ಸಂಭ್ರಮಿಸಿದ್ದಾರೆ. ನಿನ್ನ ನಗುವಿನಿಂದ ನಮ್ಮ ಜಗತ್ತು ಬೆಳಗುತ್ತಿದೆ ಎಂದು ನಟಿ ಅಡಿಬರಹ ನೀಡಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ಸಿನಿಮಾ ನೋಡಲು ಕಾಯುತ್ತಿದ್ದೇವೆ: ರಾಮ್ ಚರಣ್

     

    View this post on Instagram

     

    A post shared by Darling Krishna (@darling_krishnaa)

    ಅಂದಹಾಗೆ, ಕಳೆದ ಸೆ.5ರಂದು ನಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗಳಿಗೆ ಡಾರ್ಲಿಂಗ್ ಕೃಷ್ಣ ಗ್ರ್ಯಾಂಡ್ ಆಗಿ ಸ್ವಾಗತಿಸಿದ್ದರು. ಮಗಳಿಗೆ ಪರಿ ಎಂದು ಮಿಲನಾ ದಂಪತಿ ಹೆಸರಿಟ್ಟಿದ್ದಾರೆ.

    ಇನ್ನೂ 2021ರಲ್ಲಿ ಫೆ.14ರಂದು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ಬೆಂಗಳೂರಿನಲ್ಲಿ ಹಸೆಮಣೆ ಏರಿದ್ದರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.

  • ಮಗಳೊಂದಿಗಿನ ಮುದ್ದಾದ ಫೋಟೋ ಹಂಚಿಕೊಂಡ ಮಿಲನಾ

    ಮಗಳೊಂದಿಗಿನ ಮುದ್ದಾದ ಫೋಟೋ ಹಂಚಿಕೊಂಡ ಮಿಲನಾ

    ‘ಲವ್ ಮಾಕ್ಟೈಲ್‌’ ಬೆಡಗಿ ಮಿಲನಾ ನಾಗರಾಜ್ (Milana Nagaraj) ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಬ್ರೇಕ್ ಸಿಕ್ಕ ಬೆನ್ನಲ್ಲೇ ಮಗಳ ಜೊತೆ ಮುದ್ದಾದ ಫೋಟೋವೊಂದನ್ನು ಮಾಡಿಸಿದ್ದಾರೆ. ಮಗಳು ‘ಪರಿ’ ಜೊತೆಗಿನ ಚೆಂದದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

    ಮಗಳ ಕೆನ್ನೆ ಮೇಲೆ ಮಿಲನಾ ಮುಖವಿಟ್ಟು ಮುದ್ದಾದ ನಗು ಬೀರಿದ್ದಾರೆ. ಸದ್ಯ ಮಗಳ ಜೊತೆಗಿನ ಹಂಚಿಕೊಂಡಿರುವ ನಟಿಯ ಫೋಟೋ ನೋಡಿ, ‘ನಿಮ್ಮ ಮಗಳಿಗೆ ದೃಷ್ಟಿ ತೆಗೆಯಿರಿ’ ಎಂದು ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

     

    View this post on Instagram

     

    A post shared by Milana Nagaraj (@milananagaraj)

    ಇನ್ನೂ ಸೆಪ್ಟೆಂಬರ್‌ನಲ್ಲಿ ಮುದ್ದಾದ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಮಗಳಿಗೆ ‘ಪರಿ’ (Pari) ಎಂದು ಮಿಲನಾ ದಂಪತಿ ಹೆಸರಿಟ್ಟಿದ್ದಾರೆ.

    ಅಂದಹಾಗೆ, ಹಲವು ವರ್ಷಗಳು ಪ್ರೀತಿಸಿ 2021ರಲ್ಲಿ ಡಾರ್ಲಿಂಗ್ ಕೃಷ್ಣ (Darlinga Krishna) ಮತ್ತು ಮಿಲನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಫೆ.14ರಂದು ಮದುವೆಯಾದರು.

    ಇನ್ನೂ ಚಾರ್ಲಿ, ಮಿಸ್ಟರ್ ಬ್ಯಾಚುಲರ್, ನಮ್ ದುನಿಯಾ ನಮ್ ಸ್ಟೈಲ್, ಲವ್ ಬರ್ಡ್ಸ್, ಕೌಸಲ್ಯ ಸುಪ್ರಜಾ ರಾಮ, ‘ಲವ್ ಮಾಕ್ಟೈಲ್‌’, ‘ಲವ್ ಮಾಕ್ಟೈಲ್‌ 2′ ಸಿನಿಮಾಗಳಲ್ಲಿ ಮಿಲನಾ ಮತ್ತು ಡಾರ್ಲಿಂಗ್ ಕೃಷ್ಣ ಜೊತೆಯಾಗಿ ನಟಿಸಿದ್ದಾರೆ. `’ಲವ್ ಮಾಕ್ಟೈಲ್‌ 3’ ಸಿನಿಮಾ ಬಗ್ಗೆ ಸದ್ಯದಲ್ಲೇ ಅಪ್‌ಡೇಟ್ ಸಿಗಲಿದೆ.

  • ಮಾತಿನ ಭಾಗದ ಶೂಟಿಂಗ್ ಮುಗಿಸಿದ  ಫಾದರ್

    ಮಾತಿನ ಭಾಗದ ಶೂಟಿಂಗ್ ಮುಗಿಸಿದ ಫಾದರ್

    ನ್ನಡ ಚಿತ್ರರಂಗದಲ್ಲಿ ಹಲವು ಹೊಸತುಗಳಿಗೆ ನಾಂದಿ ಹಾಡಿರುವ ಆರ್ ಚಂದ್ರು (R. Chandru) ಅವರು ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿ, ಆ ಮೂಲಕ ಐದು ಚಿತ್ರಗಳ ಶೀರ್ಷಿಕೆಯನ್ನು ಏಕಕಾಲಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಅನಾವರಣ ಮಾಡಿಸಿದ್ದರು.

    ಆ ಪೈಕಿ ಮೊದಲ ಚಿತ್ರವಾಗಿ ರಾಜ್ ಮೋಹನ್ ಅವರ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ (Darling Krishna) ಹಾಗೂ ಖ್ಯಾತ ನಟ ಪ್ರಕಾಶ್ ರೈ  (Prakash Raj)ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ “ಫಾದರ್”  (Father) ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಪ್ರಸ್ತುತ “ಫಾದರ್” ಚಿತ್ರಕ್ಕೆ  ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಆನೇಕಲ್, ಚನ್ನಪಟ್ಟಣ, ಮಂಗಳೂರು, ಧರ್ಮಸ್ಥಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

    ಬಾಕಿಯಿರುವ ಎರಡು ಹಾಡುಗಳ ಚಿತ್ರೀಕರಣವನ್ನು ಸದ್ಯದಲ್ಲೇ ಪೂರ್ಣಗೊಳಿಸಿ, ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿರುವ ಆರ್ ಚಂದ್ರು, ಶೀಘ್ರದಲ್ಲೇ ಉಳಿದ ನಾಲ್ಕು ಚಿತ್ರಗಳಿಗೂ ಚಾಲನೆ ನೀಡುವುದಾಗಿ ಹೇಳಿದ್ದಾರೆ.

    ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ಸುಜ್ಞಾನಮೂರ್ತಿ ಅವರ ಛಾಯಾಗ್ರಹಣ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

  • ‘ಕಟ್ಲೆ’ ಸಿನಿಮಾದ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ

    ‘ಕಟ್ಲೆ’ ಸಿನಿಮಾದ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ

    ರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ (Kempegowda)ಪ್ರಮುಖಪಾತ್ರದಲ್ಲಿ ನಟಿಸಿರುವ “ಕಟ್ಲೆ” (Katle) ಚಿತ್ರದ ಮೊದಲ ಹಾಡನ್ನು (Song) ನಟ ಡಾರ್ಲಿಂಗ್ ಕೃಷ್ಣ (Darling Krishna)  ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ” ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು “ಕಟ್ಲೆ” ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು.

    ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ‌ ಅವರು. ಅವರು ನಮ್ಮ‌ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ‌ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ.  ಸದ್ಯದಲ್ಲೇ “ಕಟ್ಲೆ” ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.

    ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಭರತ್ ಗೌಡ ಹೇಳಿದರು‌. ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಮಾಹಿತಿ ನೀಡಿದರು. ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು “ಕಟ್ಲೆ” ಬಗ್ಗೆ ಮಾತನಾಡಿದರು.

  • ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ಸ್ಯಾಂಡಲ್‌ವುಡ್ ನಟಿ ಮಿಲನಾ (Milana Nagaraj) ಇತ್ತೀಚೆಗೆ ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದರು. ಇದೀಗ ಮುದ್ದು ಮಗಳನ್ನು ಮನೆ ತುಂಬಿಸಿಕೊಂಡಿದ್ದಾರೆ. ಇನ್ನೂ ಮಗಳನ್ನು ಬರಮಾಡಿಕೊಳ್ಳುತ್ತಿರುವ ವಿಶೇಷ ವಿಡಿಯೋವನ್ನು ಮಿಲನಾ ದಂಪತಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಗಳ ಮುಖವನ್ನು ಮೊದಲ ಬಾರಿಗೆ ರಿವೀಲ್ ಮಾಡಿದ್ದಾರೆ.

    ನಮ್ಮ ಪುಟ್ಟ ಪ್ರಪಂಚಕ್ಕೆ ಸ್ವಾಗತ ‘ಪರಿ’ (Pari) ಎಂದು ಅಡಿಬರಹ ನೀಡಿ ಮಗಳ ಸ್ಪೆಷಲ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ (Darling Krishna) ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಪತ್ನಿ ಮಿಲನಾ ಜೊತೆಗೆ ಮನೆಯೊಳಗೆ ಕಾಲಿಟ್ಟಿದ್ದಾರೆ. ಈ ವೇಳೆ, ಮನೆಯ ತುಂಬಾ ಬಲೂನ್‌ಗಳಿಂದ ಅಲಂಕಾರ ಮಾಡಲಾಗಿದೆ. ಬಳಿಕ ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ಗೆ ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಎಂಟ್ರಿ

     

    View this post on Instagram

     

    A post shared by Darling Krishna (@darling_krishnaa)

    ಡಾರ್ಲಿಂಗ್ ಕೃಷ್ಣ ಅವರು ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ಜೊತೆಗೆ ‘ಪರಿ’ ಎಂದು ಮಗಳಿಗೆ ಚೆಂದದ ಹೆಸರನ್ನು ಇಟ್ಟಿದ್ದಾರೆ. ಇನ್ನೂ ಹಿಂದಿ ಭಾಷೆಯಲ್ಲಿ ‘ಪರಿ’ ಅಂದರೆ ಅಪ್ಸರೆ ಎಂದರ್ಥವಾಗಿದೆ. ಒಟ್ನಲ್ಲಿ ಮಗುವಿನ ಮುಖ ನೋಡಿ ಫ್ಯಾನ್ಸ್‌ ಖುಷಿಪಟ್ಟಿದ್ದಾರೆ. ಮಗುವಿನ ಆಗಮನದ ಖುಷಿಯಲ್ಲಿರುವ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ.

    ಅಂದಹಾಗೆ, ಕೃಷ್ಣ ಮತ್ತು ಮಿಲನಾ ಜೋಡಿ ಹಲವು ವರ್ಷಗಳ ಪ್ರೀತಿಗೆ 2021ರಲ್ಲಿ ಮದುವೆಯ ಮುದ್ರೆ ಒತ್ತಿದ್ದರು.

  • ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್

    ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್

    -ಲವ್ ಮಾಕ್ಟೇಲ್ ಜೋಡಿ ಮನೆಗೆ ‘ನಿಧಿ’ ಆಗಮನ                                     
    – ಹೆಣ್ಣು ಮಗು ಜನಿಸಿರೋದಕ್ಕೆ ನಾನೊಬ್ಬ ಅದೃಷ್ಟವಂತ ತಂದೆ ಎಂದ ಡಾರ್ಲಿಂಗ್ ಕೃಷ್ಣ

    ಲವ್‌ಮಾಕ್ಟೇಲ್ (Love Mocktail) ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ (Milana Nagaraj) ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ (Darling Krishna) ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

    ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ.ಇದನ್ನೂ ಓದಿ: ನಾವು ಕೆಲಸ ಮಾಡುವ ಜಾಗದಲ್ಲಿ ಆತಂಕ ಇರಬಾರದು: ಕಾಸ್ಟಿಂಗ್ ಕೌಚ್ ಬಗ್ಗೆ ಹಿತಾ ಮಾತು

     

    View this post on Instagram

     

    A post shared by Darling Krishna (@darling_krishnaa)

    ಈ ಜರ್ನಿಯಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಈ ಜರ್ನಿಯಲ್ಲಿ ಸಾಗುವ ಎಲ್ಲ ತಾಯಂದಿರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ದುಪ್ಪಟ್ಟಾಗಿದೆ. ಇಂದು ಮಗಳು ಜನಿಸಿರೋದು ನನಗೆ ಹೆಮ್ಮೆಯಿದೆ. ನಾನೊಬ್ಬ ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಝೈದ್ ಖಾನ್‌ಗೆ ಮಲೈಕಾ ವಸುಪಾಲ್ ಹೀರೋಯಿನ್

     

  • ಪ್ಯಾನ್ ಇಂಡಿಯಾ ಚಿತ್ರಕ್ಕಾಗಿ 5ನೇ ಬಾರಿ ಒಂದಾದ ಶಶಾಂಕ್, ಅರ್ಜುನ್ ಜನ್ಯ

    ಪ್ಯಾನ್ ಇಂಡಿಯಾ ಚಿತ್ರಕ್ಕಾಗಿ 5ನೇ ಬಾರಿ ಒಂದಾದ ಶಶಾಂಕ್, ಅರ್ಜುನ್ ಜನ್ಯ

    ಸ್ಯಾಂಡಲ್‌ವುಡ್ ನಿರ್ದೇಶಕ ಶಶಾಂಕ್ (Shashank) ಈಗ ಪ್ಯಾನ್ ಇಂಡಿಯಾ ಚಿತ್ರಕ್ಕೆ ಕೈಹಾಕಿದ್ದಾರೆ. ಈ ಚಿತ್ರಕ್ಕಾಗಿ 5ನೇ ಬಾರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಜೊತೆ ಶಶಾಂಕ್ ಕೈಜೋಡಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಶಶಾಂಕ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:‘ಕಾಟೇರ’ ಡೈರೆಕ್ಟರ್ ತರುಣ್ ಜೊತೆ ಸೋನಲ್ ಮದುವೆ ಡೇಟ್ ಫಿಕ್ಸ್

    ಡಾರ್ಲಿಂಗ್ ಕೃಷ್ಣ (Darling Krishna) ನಾಯಕನಾಗಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಶಶಾಂಕ್ ಡೈರೆಕ್ಷನ್ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟಕ್ಕೆ ಈ ಚಿತ್ರ ರೆಡಿ ಆಗುತ್ತಿದೆ. ಈ ಸಿನಿಮಾಗಾಗಿ 5ನೇ ಬಾರಿ ಅರ್ಜುನ್‌ ಜನ್ಯ ಜೊತೆ ಒಂದಾಗುತ್ತಿರೋದಾಗಿ ಶಶಾಂಕ್ ತಿಳಿಸಿದ್ದಾರೆ. ಈ ಚಿತ್ರಕ್ಕೆ ಸದ್ಯ DKS -02 ಅಂತ ಹೆಸರಿಡಲಾಗಿದೆ. ಈ ಮೂಲಕ ಸಂಗೀತ ಸಂಯೋಜನೆಯ ಕೆಲಸ ಶುರು ಆಗಿದೆ ಅನ್ನೋದನ್ನ ಡೈರೆಕ್ಟರ್ ಶಶಾಂಕ್ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

    ಸಿನಿಮಾದ ಟೈಟಲ್ ಶೀಘ್ರದಲ್ಲಿಯೇ ಅನೌನ್ಸ್ ಮಾಡುವ ಪ್ಲ್ಯಾನ್ ಕೂಡ ಹಾಕಲಾಗಿದೆ. ಆ ವಿಷಯನ್ನ ಕೂಡ ಇದೀಗ ವಿಡಿಯೋ ಮೂಲಕವೇ ಹೇಳಿದ್ದಾರೆ. ಡಾಲ್ಫಿನ್ ಸಂಸ್ಥೆ ಮೂಲಕ ಮಂಜುನಾಥ್ ಕಂದಕೂರು ಈ ಚಿತ್ರವನ್ನ ನಿರ್ಮಿಸೋಕೆ ಸಾಥ್‌ ನೀಡಿದ್ದಾರೆ.

    ಇನ್ನೂ ಈ ಹಿಂದೆ ಮುಂಗಾರು ಮಳೆ 2, ಜರಾಸಂಧ, ಲವ್ 360, ಕೌಸಲ್ಯ ಸುಪ್ರಜಾ ರಾಮ ಚಿತ್ರಕ್ಕಾಗಿ ಶಶಾಂಕ್‌ ಜೊತೆ ಅರ್ಜುನ್‌ ಜನ್ಯ ಕೆಲಸ ಮಾಡಿದ್ದಾರೆ. ಈಗ ಹೊಸ ಪ್ರಾಜೆಕ್ಟ್ ಮೂಲಕ ಬರುತ್ತಿರೋದ್ರಿಂದ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ನಿರೀಕ್ಷೆ ಹೆಚ್ಚಿಸಿದೆ.

  • ಬೇಬಿ ಬಂಪ್ ಫೋಟೋ ಹಂಚಿಕೊಂಡ ಮಿಲನಾ ನಾಗರಾಜ್

    ಬೇಬಿ ಬಂಪ್ ಫೋಟೋ ಹಂಚಿಕೊಂಡ ಮಿಲನಾ ನಾಗರಾಜ್

    ಸ್ಯಾಂಡಲ್‌ವುಡ್ ಬೆಸ್ಟ್ ಜೋಡಿಗಳಲ್ಲಿ ಒಂದಾಗಿರುವ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಾಗರಾಜ್ (Milana Nagaraj) ಇದೀಗ ಚೊಚ್ಚಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಇದೀಗ ನಟಿ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಹೊಸ ಸಿನಿಮಾ ಘೋಷಿಸಿದ ಸನ್ನಿ ಡಿಯೋಲ್

    ಪತಿ ಡಾರ್ಲಿಂಗ್ ಕೃಷ್ಣ ಜೊತೆ ವಿವಿಧ ಭಂಗಿಯಲ್ಲಿ ನಟಿ ಮಿಲನಾ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಹಳದಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮಿಂಚಿದ್ದಾರೆ. ಮೊದಲ ಬಾರಿಗೆ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ‌ಪೋಷಕರಾಗುತ್ತಿರುವ ‘ಲವ್‌ ಮಾಕ್ಟೈಲ್’ (Love Mocktail Film) ಜೋಡಿಗೆ ಅಭಿಮಾನಿಗಳು ಬಗೆ ಬಗೆಯ ಕಾಮೆಂಟ್‌ಗಳ ಮೂಲಕ ವಿಶ್ ಮಾಡಿದ್ದಾರೆ.

     

    View this post on Instagram

     

    A post shared by Darling Krishna (@darling_krishnaa)

    ಅಂದಹಾಗೆ, ಮಾರ್ಚ್ 8ರಂದು ತಾಯಿಯಾಗ್ತಿರುವ ಬಗ್ಗೆ ನಟಿ ಗುಡ್ ನ್ಯೂಸ್ ಹಂಚಿಕೊಂಡಿದ್ದರು. ನಮಗೆ ಹಾರೈಸಿ ಎಂದು ಅಡಿಬರಹ ನೀಡಿ ಸಿಹಿಸುದ್ದಿ ತಿಳಿಸಿದ್ದರು.

    2021ರಲ್ಲಿ ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ಹೊಸ ಬಾಳಿಗೆ ಕಾಲಿಟ್ಟರು. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು.

  • ಮತ್ತೆ ಡೈರೆಕ್ಟರ್‌ ಶಶಾಂಕ್‌ ಜೊತೆ ಕೈಜೋಡಿಸಿದ ಡಾರ್ಲಿಂಗ್ ಕೃಷ್ಣ

    ಮತ್ತೆ ಡೈರೆಕ್ಟರ್‌ ಶಶಾಂಕ್‌ ಜೊತೆ ಕೈಜೋಡಿಸಿದ ಡಾರ್ಲಿಂಗ್ ಕೃಷ್ಣ

    ಸ್ಯಾಂಡಲ್‌ವುಡ್ ನಟ ಡಾರ್ಲಿಂಗ್ ಕೃಷ್ಣ (Darling Krishna) ‘ಹಲಗಲಿ’ ಸಿನಿಮಾದಿಂದ ಹೊರಬಂದ ಬೆನ್ನಲ್ಲೇ ಮುಂದಿನ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮತ್ತೊಮ್ಮೆ ಡೈರೆಕ್ಟರ್ ಶಶಾಂಕ್  (Director Shashank) ಜೊತೆ ಸಿನಿಮಾ ಮಾಡಲು ಕೃಷ್ಣ ಕೈಜೋಡಿಸಿದ್ದಾರೆ.

    ಇತ್ತೀಚೆಗೆ ತೆರೆಕಂಡ ‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ಶಶಾಂಕ್ ಆ್ಯಕ್ಷನ್ ಕಟ್ ಹೇಳಿದ್ದರು. ಕೃಷ್ಣಗೆ ಬೃಂದಾ ಆಚಾರ್ಯ ಮತ್ತು ಮಿಲನಾ ನಾಗರಾಜ್ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ:ರೇವ್ ಪಾರ್ಟಿ ಪ್ರಕರಣ: ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್

    ಆದರೆ, ಈ ಬಾರಿ ಕೃಷ್ಣ ಅವರಿಗಾಗಿ ಥ್ರಿಲ್ಲಿಂಗ್ ಚಿತ್ರ ಮಾಡಲು ಮುಂದಾಗಿದ್ದಾರೆ. ಹೊಸ ಬಗೆಯ ಕಥೆಯನ್ನು ತೋರಿಸಲು ಶಶಾಂಕ್‌ ಮತ್ತು ಡಾರ್ಲಿಂಗ್‌ ಕೃಷ್ಣ ರೆಡಿಯಾಗಿದ್ದಾರೆ. ಇದನ್ನೂ ಓದಿ:ನಿರ್ದೇಶನದತ್ತ ‘ರಂಗಿತರಂಗ’ ಚಿತ್ರದ ನಟ ನಿರೂಪ್ ಭಂಡಾರಿ

    ಅಂದಹಾಗೆ, ಕೃಷ್ಣ ಆರ್‌ಸಿ ಸ್ಟುಡಿಯೋಸ್ ನಿರ್ಮಾಣದ ‘ಫಾದರ್’ (Father)  ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದರಲ್ಲಿ ಪ್ರಕಾಶ್ ರಾಜ್ ಮತ್ತು ತೆಲುಗು ನಟ ಸುನೀಲ್ ಸಹ ನಟಿಸಿದ್ದಾರೆ. ಜುಲೈನಲ್ಲಿ ‘ಫಾದರ್’ ಚಿತ್ರೀಕರಣವನ್ನು ಪೂರ್ಣಗೊಳಿಸುವನಿರೀಕ್ಷೆಯಿದ್ದು, ಶೀಘ್ರದಲ್ಲೇ ಶಶಾಂಕ್ ಅವರ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಸಾಥ್ ನೀಡಲಿದ್ದಾರೆ. ಆಗಸ್ಟ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.