Tag: Darling Krishna

  • ‘ಹಲಗಲಿ’ ಚಿತ್ರದಿಂದ ಹೊರಬಂದಿದ್ದೇಕೆ? ಕಾರಣ ತಿಳಿಸಿದ ಡಾರ್ಲಿಂಗ್ ಕೃಷ್ಣ

    ‘ಹಲಗಲಿ’ ಚಿತ್ರದಿಂದ ಹೊರಬಂದಿದ್ದೇಕೆ? ಕಾರಣ ತಿಳಿಸಿದ ಡಾರ್ಲಿಂಗ್ ಕೃಷ್ಣ

    ಸ್ಯಾಂಡಲ್‌ವುಡ್ ನಟ ಡಾರ್ಲಿಂಗ್ ಕೃಷ್ಣ (Darling Krishna) ತಮ್ಮ ಮೊದಲ ಪ್ಯಾನ್ ಇಂಡಿಯಾ ಚಿತ್ರ ಹಲಗಲಿ ಸಿನಿಮಾದಿಂದ ಹೊರಬಂದಿದ್ದಾರೆ. ಒಂದೇ ಚಿತ್ರಕ್ಕೆ 3 ವರ್ಷ ಡೇಟ್ಸ್ ಕೊಡೋಕೆ ಆಗಲ್ಲ ಅಂತ ಚಿತ್ರತಂಡ ಡಾರ್ಲಿಂಗ್ ಕೃಷ್ಣ ಹೊರನಡೆದಿದ್ದಾರೆ. ಈ ಚಿತ್ರದ ಕುರಿತು ಕೃಷ್ಣ ಮಾತನಾಡಿದ್ದಾರೆ. ಇದನ್ನೂ ಓದಿ:‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್

    ‘ಹಲಗಲಿ’ (Halagali Film) ಸಿನಿಮಾ ಅತೀ ದೊಡ್ಡ ಪ್ರಾಜೆಕ್ಟ್ ಆದರೆ ಬೇರೆ ಸಿನಿಮಾಗಳಲ್ಲಿ ನಟಿಸುತ್ತಾ ಈ ಚಿತ್ರದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ರೆಡಿ ಇದ್ದರು. ಆದರೆ ಚಿತ್ರತಂಡ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಮೂರು ವರ್ಷ ಬೇರೆ ಸಿನಿಮಾದಲ್ಲಿ ನಟಿಸದೇ ಈ ಸಿನಿಮಾಗಾಗಿ ಮೀಸಲಿಡಲು ಸಾಧ್ಯವಿಲ್ಲ ಎಂದು ಕೃಷ್ಣ ಸಿನಿಮಾದಿಂದ ಹೊರಬಂದಿರುವ ಬಗ್ಗೆ ತಿಳಿಸಿದ್ದಾರೆ.

    ‘ಹಲಗಲಿ’ ಸಿನಿಮಾಗಾಗಿ ಕಳೆದ 6 ತಿಂಗಳಿಂದ ಬೇರೆ ಯಾವುದೇ ಸಿನಿಮಾವನ್ನು ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗೆ ಫಾದರ್ ಸಿನಿಮಾದ ಆಫರ್ ಸಿಕ್ಕಿದೆ. ಇದಾದ ನಂತರ ಮತ್ತೆ ನಿರ್ದೇಶಕ ಶಶಾಂಕ್ ಜೊತೆ ಹೊಸ ಸಿನಿಮಾ ಮಾಡುವ ಬಗ್ಗೆ ಕೃಷ್ಣ ತಿಳಿಸಿದ್ದರು. ಆದರೆ ‘ಹಲಗಲಿ’ ಚಿತ್ರತಂಡ 3 ವರ್ಷದ ಕಮೀಟ್‌ಮೆಂಟ್ ಕೇಳಿದ್ರಿಂದ ಚಿತ್ರ ಕೈಬೀಡಬೇಕಾಯ್ತು ಎಂದು ಬೇರೆ ಏನು ವೈಯಕ್ತಿಕ ಕಾರಣ ಇಲ್ಲ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ.

    ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಗೆರಿಲ್ಲಾ ವಾರ್ ಮಾಡುವ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಹಲಗಲಿ ಬೇಡರ ಕಥೆಯನ್ನು ಸಿನಿಮಾ ನಿರ್ದೇಶಕ ಸುಕೇಶ್ ಡಿ.ಕೆ. ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಮತ್ತು ಆ ಕಾಲ ಘಟ್ಟವನ್ನು ಕಟ್ಟಿ ಕೊಡಬೇಕಾಗಿದ್ದರಿಂದ ಬರೋಬ್ಬರಿ 80 ಕೋಟಿ ರೂಪಾಯಿಯನ್ನು ಈ ಸಿನಿಮಾಗಾಗಿ ಖರ್ಚು ಮಾಡುತ್ತಿದ್ದಾರೆ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಳ್ಯ. ಇದೊಂದು ಅಪರೂಪದ ಕಥನವಾಗಿದ್ದರಿಂದ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

  • ‘ಹಲಗಲಿ’ ಸಿನಿಮಾದಿಂದ ಹೊರ ಬಂದ ಡಾರ್ಲಿಂಗ್ ಕೃಷ್ಣ

    ‘ಹಲಗಲಿ’ ಸಿನಿಮಾದಿಂದ ಹೊರ ಬಂದ ಡಾರ್ಲಿಂಗ್ ಕೃಷ್ಣ

    ನ್ನಡದಲ್ಲಿ ಮತ್ತೊಂದು ಐತಿಹಾಸಿಕ ಸಿನಿಮಾ ಮೂಡಿ ಬರುತ್ತಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆರಿಲ್ಲಾ ವಾರ್ ಮಾಡುವ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಹಲಗಲಿ ಬೇಡರ (Halagali Bedru) ಕಥೆಯನ್ನು ಸಿನಿಮಾ ಮಾಡುತ್ತಿದ್ದಾರೆ ನಿರ್ದೇಶಕ ಸುಕೇಶ್ ಡಿ.ಕೆ. ಈ ಸಿನಿಮಾಗೆ ಡಾರ್ಲಿಂಗ್ ಕೃಷ್ಣ (Darling Krishna) ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಈಗ ಈ ಸಿನಿಮಾದಿಂದ ಅವರು ಆಚೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಡೇಟ್‍ ಸಮಸ್ಯೆಯ ಕಾರಣದಿಂದಾಗಿ ಕೃಷ್ಣ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರಂತೆ.

    ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಮತ್ತು ಆ ಕಾಲ ಘಟ್ಟವನ್ನು ಕಟ್ಟಿ ಕೊಡಬೇಕಾಗಿದ್ದರಿಂದ ಬರೋಬ್ಬರಿ 80 ಕೋಟಿ ರೂಪಾಯಿಯನ್ನು ಈ ಸಿನಿಮಾಗಾಗಿ ಖರ್ಚು ಮಾಡುತ್ತಿದ್ದಾರೆ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಳ್ಯ. ಇದೊಂದು ಅಪರೂಪದ ಕಥನವಾಗಿದ್ದರಿಂದ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಯೋಧನೊಬ್ಬನ ಪಾತ್ರವನ್ನು ನಿರ್ವಹಿಸಬೇಕಿದ್ದರಿಂದ ಸಖತ್ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದರು. ಅಷ್ಟರಲ್ಲಿ ಇಂಥದ್ದೊಂದು ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಸದ್ದಿಲ್ಲದೇ ಚಿತ್ರಕ್ಕೆ ಮುಹೂರ್ತ ಕೂಡ ನಡೆದಿದೆ. ಜೊತೆಗೆ ಮೊದಲ ಹಂತದ ಶೂಟಿಂಗ್ ಕೂಡ ಮಾಡುತ್ತಿದ್ದಾರಂತೆ ನಿರ್ದೇಶಕರು. ಅಮೆರಿಕಾ ಹಾಗೂ ರಷ್ಯನ್ ಕಲಾವಿದರು ಮೊದಲ ದಿನದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

    ನಿರ್ದೇಶಕ ಸುಕೇಶ್ ಈ ಹಿಂದೆ ಕೃಷ್ಣ ತುಳಿಸಿ ಚಿತ್ರ ಮಾಡಿದವರು. ಸಂಚಾರಿ ವಿಜಯ್ ಈ ಸಿನಿಮಾದ ಹೀರೋ. ಅಂದು ಲವ್ ಸ್ಟೋರಿ ಕೊಟ್ಟಿದ್ದ ಸುಕೇಶ್ ಇಂದು ಐತಿಹಾಸಿಕ ಚಿತ್ರಕ್ಕೆ ಕೈ ಹಾಕಿದ್ದಾರೆ.

  • ತಾಯಿಯಾಗುತ್ತಿರುವ ಗುಡ್ ನ್ಯೂಸ್ ಕೊಟ್ಟ ಬೆನ್ನಲ್ಲೇ ವಿದೇಶಕ್ಕೆ ಹಾರಿದ ಮಿಲನಾ ದಂಪತಿ

    ತಾಯಿಯಾಗುತ್ತಿರುವ ಗುಡ್ ನ್ಯೂಸ್ ಕೊಟ್ಟ ಬೆನ್ನಲ್ಲೇ ವಿದೇಶಕ್ಕೆ ಹಾರಿದ ಮಿಲನಾ ದಂಪತಿ

    ಸ್ಯಾಂಡಲ್‌ವುಡ್ ನಟ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ (Milana) ದಂಪತಿ ಸದ್ಯ ಪೋಷಕರಾಗುತ್ತಿರುವ ಸಂತಸದಲ್ಲಿದ್ದಾರೆ. ಈ ಬೆನ್ನಲ್ಲೇ ದೂರದ ವಿದೇಶಕ್ಕೆ ಮಿಲನಾ, ಕೃಷ್ಣ ತೆರಳಿದ್ದಾರೆ. ಜೋಡಿಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಮಾರ್ಚ್ 7ರಂದು ಮಿಲನಾ ತಾಯಿಯಾಗುತ್ತಿರುವ ಸಿಹಿಸುದ್ದಿ ನೀಡಿದ್ದರು. ಈಗ ಈ ಜೋಡಿ ಟ್ರಾವೆಲ್ ಮೂಡ್‌ನಲ್ಲಿದ್ದಾರೆ. ಥೈಲ್ಯಾಂಡ್ ಮತ್ತು ಬಾಲಿಗೆ ಕೃಷ್ಣ ಮತ್ತು ಮಿಲನಾ ತೆರಳಿದ್ದಾರೆ. ಅಲ್ಲಿನ ಸುಂದರ ತಾಣಗಳಲ್ಲಿ ಮಿಲನಾ ಜೋಡಿ ಭೇಟಿ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಥೈಲ್ಯಾಂಡ್‌ ಫೋಟೋ ನೋಡಿ ಮಿಲನಾಗೆ ‘ತಾಯಿ ಲ್ಯಾಂಡ್‌’ ಎಂದು ಫ್ಯಾನ್ಸ್‌ ಕಾಮೆಂಟ್‌ ಮಾಡುತ್ತಿದ್ದಾರೆ.

    ಕಡೆಯದಾಗಿ ಈ ಜೋಡಿ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನ ಮಾಡಿದ್ದರು. ಇದನ್ನೂ ಓದಿ:ಕಾಮಾಕ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

    ಸದ್ಯ ‘ಲವ್ ಮಾಕ್ಟೈಲ್ ಪಾರ್ಟ್ 3’ಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಈ ಚಿತ್ರದ ಕಥೆ ಕೂಡ ಸಿದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಮಾಹಿತಿ ಸಿಗಲಿದೆ.

  • ಆರ್.ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಅದ್ದೂರಿ ಮುಹೂರ್ತ

    ಆರ್.ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಅದ್ದೂರಿ ಮುಹೂರ್ತ

    ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ‌ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ‘ಫಾದರ್’ ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ (Muhurta) ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ  ಫಾದರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು.ರಾಜಕೀಯ ಮುಖಂಡ ಎಚ್.ಎಂ.ರೇವಣ್ಣ, ಶಾಸಕ ಪ್ರದೀಪ್ ಈಶ್ವರ್, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಬಹದ್ದೂರ್ ಚೇತನ್ ಕುಮಾರ್, ಮಂಜುನಾಥ್, ಮಮತ ದೇವರಾಜ್, ಮಂಜುನಾಥ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

    ಆರ್ ಚಂದ್ರು ನನ್ನ ಆತ್ಮೀಯರು. ಸಿನಿಮಾವನ್ನು ಹೆಚ್ಚಾಗಿ ಪ್ರೀತಿಸುತ್ತಾರೆ. ಆರ್ ಸಿ ಸ್ಟುಡಿಯೋಸ್ ಮೂಲಕ ಮೊದಲ ಚಿತ್ರವಾಗಿ  ಫಾದರ್ (Father) ಚಿತ್ರ ಆರಂಭಿಸಿದ್ದಾರೆ. ಚಂದ್ರು (R. Chandru) ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭವಾಗಲಿ ಎಂದು ಶಿವರಾಜಕುಮಾರ್ ಹಾರೈಸಿದರು.

    ನನ್ನ ಚಾರ್ ಮಿನಾರ್ ಚಿತ್ರ ಆರಂಭವಾದಗಿನಿಂದ ಹಿಡಿದು ಈವರೆಗೂ ನನಗೆ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಚುನಾವಣೆ ಸಮಯ. ಆದರೂ ಇಂದು ಇಲ್ಲಿಗೆ ಆಗಮಿಸಿ, ನಮ್ಮ ಫಾದರ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಅವರಿಗೆ ಹಾಗೂ ಆಗಮಿಸಿರುವ ಎಲ್ಲಾ ಗಣ್ಯರಿಗೂ ಧನ್ಯವಾದ ತಿಳಿಸುತ್ತೇನೆ. ಕೆಲವು ದಿನಗಳ ಮುಂಚೆ ನಮ್ಮ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಸಂಸ್ಥೆಯಿಂದ ಒಂದು ವರ್ಷದಲ್ಲಿ  ಐದು ಸಿನಿಮಾಗಳನ್ನು ನಿರ್ಮಿಸುವುದಾಗಿ ಹೇಳಿದ್ದೆ. ಅದರ ಮೊದಲ ಹೆಜ್ಜೆಯಾಗಿ ಇಂದು “ಫಾದರ್” ಚಿತ್ರ ಆರಂಭವಾಗಿದೆ. ಶಿವಣ್ಣ ಅವರ ಭೈರಾಗಿ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರಾಜ್ ಮೋಹನ್ ಈ ಚಿತ್ರದ ನಿರ್ದೇಶಕರು. ಡಾರ್ಲಿಂಗ್ ಕೃಷ್ಣ ನಾಯಕರಾಗಿ, ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಕಾಶ್ ರೈ, ಸುನೀಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಂಬೈನ ಆನಂದ್ ಪಂಡಿತ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.  ಹನುಮಾನ್ ಚಿತ್ರದ ಖ್ಯಾತಿಯ ಹರಿ ಸಂಗೀತ ನೀಡುತ್ತಿದ್ದಾರೆ.  ನಮ್ಮ ಫಾದರ್ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಆರ್. ಚಂದ್ರು ತಿಳಿಸಿದರು.

    ಇದೊಂದು ತಂದೆ – ಮಗನ ಬಾಂಧವ್ಯದ ಚಿತ್ರ. ಕಥೆ ತುಂಬಾ ಚೆನ್ನಾಗಿದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಫಾದರ್ ಚಿತ್ರದಲ್ಲಿದೆ ಎಂದರು ನಿರ್ದೇಶಕ ರಾಜ್ ಮೋಹನ್.   ನಿರ್ದೇಶಕರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ಆರ್ ಚಂದ್ರು ಅವರ ಜೊತೆಗೆ ಇದು ನನ್ನ ಮೊದಲ ಚಿತ್ರ ಎಂದು ನಾಯಕ ಡಾರ್ಲಿಂಗ್ ಕೃಷ್ಣ (Darling Krishna) ತಿಳಿಸಿದರು.

    ಕಥೆ ಹಾಗೂ ನನ್ನ ಪಾತ್ರ ಎರಡು ತುಂಬಾ ಚೆನ್ನಾಗಿದೆ ಎಂದರು ನಾಯಕಿ ಅಮೃತ ಅಯ್ಯಂಗಾರ್. ಸಂಗೀತ ನಿರ್ದೇಶಕ ಹರಿ ಸೇರಿದಂತೆ ಅನೇಕರು ಚಿತ್ರದ ಕುರಿತು ಮಾತನಾಡಿದರು.

  • ಡಾರ್ಲಿಂಗ್ ಕೃಷ್ಣಗೆ 2ನೇ ಬಾರಿ ನಾಯಕಿಯಾದ ಅಮೃತಾ ಅಯ್ಯಂಗಾರ್

    ಡಾರ್ಲಿಂಗ್ ಕೃಷ್ಣಗೆ 2ನೇ ಬಾರಿ ನಾಯಕಿಯಾದ ಅಮೃತಾ ಅಯ್ಯಂಗಾರ್

    ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಅಮೃತಾ ಅಯ್ಯಂಗಾರ್ (Amrutha iyengar). ಈ ನಟನ ಜೊತೆ ಎರಡನೇ ಬಾರಿ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೊಂದು ವಿಶೇಷ ಪಾತ್ರವಾಗಿದ್ದು, ಚಿತ್ರದುದ್ದಕ್ಕೂ ಮೇಕಪ್ ಇಲ್ಲದೇ ನಟಿಸುವಂತಹ ಪಾತ್ರ ಅದಾಗಿದೆ ಎಂದಿದ್ದಾರೆ. ಇಂಥದ್ದೊಂದು ಪಾತ್ರ ಸಿಕ್ಕಿರೋದಕ್ಕೆ ಖುಷಿಯಾಗುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ರ್.ಸಿ. ಸ್ಟುಡಿಯೋಸ್‌. ಇದು ಆರ್‌ ಚಂದ್ರು (R. Chandru) ಅವರ ಬಹುದೊಡ್ಡ ಕನಸು. ಇದೊಂದು ಪ್ಯಾನ್‌ ಇಂಡಿಯಾ ಬ್ಯಾನರ್.‌ ಕನ್ನಡಕ್ಕೆ ಸೀಮಿತವಾಗಿದ್ದ ಶ್ರೀ ಸಿದ್ದೇಶ್ವರ ಮೂವೀಸ್‌ ಬ್ಯಾನರ್‌ ಅನ್ನು ಸೇರಿಸಿಕೊಂಡೇ ಆರ್.ಸಿ. ಸ್ಟುಡಿಯೋಸ್‌ ಹುಟ್ಟು ಕಂಡಿದೆ. ಈವರೆಗೆ ಸ್ಟಾರ್‌ ನಟರ ಐದು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಆರ್.ಚಂದ್ರು, ಈಗ ಆರ್.ಸಿ. ಸ್ಟುಡಿಯೋಸ್‌ ಸಂಸ್ಥೆ ಮೂಲಕ ಒಟ್ಟಾರೆ ಆರು ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಅನೌನ್ಸ್‌ ಮಾಡಿದ್ದಾರೆ. ಅವೆಲ್ಲವೂ ಬಿಗ್‌ ಬಜೆಟ್‌ ಸಿನಿಮಾಗಳು, ಬಿಗ್‌ ಸ್ಟಾರ್ಸ್‌ ಸಿನಿಮಾಗಳು ಅನ್ನೋದು ವಿಶೇಷ. ಆ ಸಾಲಿನಲ್ಲಿರುವ ಸಿನಿಮಾಗಳ ಪೈಕಿ ‘ಫಾದರ್‌’ (Father) ಎಂಬ ಆರನೇ ಸಿನಿಮಾ ಏಪ್ರಿಲ್‌ 27ರಂದು ಅದ್ಧೂರಿಯಾಗಿ  ಮುಹೂರ್ತ ನೆರವೇರುತ್ತಿದೆ. ಹುಡುಗಿಯರ ಪಾಲಿನ ಪ್ರೀತಿಯ ಡಾರ್ಲಿಂಗ್‌ ಎನಿಸಿಕೊಂಡಿರುವ ಡಾರ್ಲಿಂಗ್‌ ಕೃಷ್ಣ (Darling Krishna) ಮತ್ತು ಪಂಚಭಾಷೆ ನಟ ಪ್ರಕಾರ್‌ ರೈ (Prakash Raj) ಈ ಚಿತ್ರದ ಮುಖ್ಯ ಆಕರ್ಷಣೆ.

    ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪ- ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿರುವ ಸಿನಿಮಾ. ಅಪ್ಪನ ಮೌಲ್ಯ ಸಾರಿದ್ದ ಆರ್.‌ ಚಂದ್ರು ಅವರ ಮೊದಲ ಸೂಪರ್‌ ಹಿಟ್‌ ಸಿನಿಮಾ ತಾಜ್‌ ಮಹಲ್‌ ಇಂದಿಗೂ ಕಾಡುತ್ತೆ. ಫಾದರ್‌ ಕೂಡ ಅಂಥದ್ದೇ ಕಂಟೆಂಟ್‌ ಹೊಂದಿರುವ ಸಿನಿಮಾ ಅನ್ನೋ ಫೀಲ್‌ ಹೆಸರಲ್ಲೇ ಇದೆ. ಮೊದಲಿಂದಲೂ ಆರ್. ಚಂದ್ರು ಕಂಟೆಂಟ್‌ಗೆ ಒತ್ತು ಕೊಟ್ಟವರು. ಈ ಫಾದರ್‌ ಕೂಡ ಅದಕ್ಕೆ ಹೊರತಾಗಿರಲ್ಲ ಎಂಬ ಭಾವನೆ ನಮ್ಮದು. ಸದ್ಯಕ್ಕೆ ಫಾದರ್‌ ಏಪ್ರಿಲ್‌ 27 ರಂದು ಸೆಟ್ಟೇರುತ್ತಿದೆ. ಅಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ಸಿಗಲಿದೆ.

    ಸಿನಿಮಾ ಅನ್ನೋದಕ್ಕೆ ದೊಡ್ಡ ಶಕ್ತಿ ಇದೆ. ಅಳು-ನಗುವಿನ ಸಂಕೇತವಿದ್ದರೂ ಅಲ್ಲೆಲ್ಲೋ ಒಂದು ಕಡೆ ಆಪ್ತವೆನಿಸೋ ಅಂಶಗಳು ನೋಡುಗರನ್ನು ಬಿಗಿದಪ್ಪುತ್ತವೆ. ಈ ಫಾದರ್‌ ಸಿನಿಮಾ ಕೂಡ ಎದೆ ಭಾರವೆನಿಸುವ ಚಿತ್ರ. ಮನಸ್ಸಿಗೆ ಖುಷಿ ಕೊಡುವ, ಕಣ್ಣಲ್ಲಿ ಆನಂದಭಾಷ್ಪ ತರುವ ಮತ್ತೆ ಮತ್ತೆ ಕಾಡುವ, ಏನೋ ಕಳೆದುಕೊಂಡ ಸಂಕಟ, ಇನ್ನೇನ್ನನ್ನೋ ಪಡೆಯಬೇಕೆಂಬ ಹಂಬಲ, ಮತ್ತೇನೋ ಉಳಿಸಿಕೊಳ್ಳಬೇಕೆಂಬ ಹಠ ಇವೆಲ್ಲದರ ಸಮ್ಮಿಶ್ರಣವೇ ಫಾದರ್ ಅಂತೆ.

    ಇಲ್ಲಿ ನೋವಿದೆ, ನಲಿವಿದೆ. ಬಾಂಧವ್ಯದ ಹೂರಣವಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಸ್ತವದ ತಿರುಳಿದೆ. ಪ್ರತಿಯೊಬ್ಬರ ಮನಸ್ಸಿಗೂ ನಾಟುವ ಅಂಶವಿದೆ. ಕಣ್ಣಿಗೆ ಕಟ್ಟುವ ಚಿತ್ರಣವೂ ಇರಲಿದೆ. ಫಾದರ್‌ ಪ್ರತಿಯೊಬ್ಬರ ಮನಸ್ಸನ್ನು ಹಗುರಾಗಿಸೋ ಚಿತ್ರವಾದರೂ, ಏನೋ ಒಂದು ಮಿಸ್‌ ಆಯ್ತು ಅನ್ನೋ ಭಾವನೆಯ ಚಿತ್ರ ಇದಾಗಲಿದೆ. ಆರ್.ಸಿ. ಸ್ಟುಡಿಯೋದ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ ಇದಾಗಿರುವುದರಿಂದ ಸ್ಟುಡಿಯೋ ಮುಖ್ಯಸ್ಥ ಆರ್.ಚಂದ್ರು ಒಂದೊಳ್ಳೆಯ ಕಂಟೆಂಟ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಜಗತ್ತಿನಲ್ಲಿ ಅಪ್ಪನ ಸ್ಥಾನ ತುಂಬೋಕೆ ಯಾರಿಂದಲೂ ಸಾಧ್ಯವಿಲ್ಲ. ಅಪ್ಪ ಅನ್ನೋದು ಆಕಾಶಕ್ಕಿಂತಲೂ ಮಿಗಿಲು. ಅಪ್ಪನ ಬಿಸಿಯುಸಿರು, ಅಪ್ಪನ ಅಪ್ಪುಗೆ, ಅಪ್ಪನ ನೋವು, ಅಪ್ಪನ ಬೆವರು, ಅಪ್ಪನ ಕಾತರ, ಆತುರ, ಚಡಪಡಿಕೆ, ಆಸೆ, ಜವಾಬ್ದಾರಿ ಇತ್ಯಾದಿಗಳ ರೂಪವೇ ಈ ಫಾದರ್‌ ಅಂತಂದುಕೊಂಡರೂ ಅದಕ್ಕಿಂತಲೂ ಮಿಗಿಲಾಗಿದ್ದು ಈ ಫಾದರ್‌ ಒಳಗಿದೆ. ಇದು ಎಲ್ಲರಿಗೂ ಇಷ್ಟವಾಗುವ ಚಿತ್ರವಾಗುತ್ತೆ ಎಂಬ ಭರವಸೆ ಆರ್ ಸಿ ಸ್ಟುಡಿಯೋದ್ದು.

  • ಡಾರ್ಲಿಂಗ್ ಕೃಷ್ಣ ನಟನೆಯ ‘ಫಾದರ್’ ಚಿತ್ರಕ್ಕೆ ಏಪ್ರಿಲ್ 27ರಂದು ಮುಹೂರ್ತ

    ಡಾರ್ಲಿಂಗ್ ಕೃಷ್ಣ ನಟನೆಯ ‘ಫಾದರ್’ ಚಿತ್ರಕ್ಕೆ ಏಪ್ರಿಲ್ 27ರಂದು ಮುಹೂರ್ತ

    ಇನ್ನು ಚಂದ್ರು ಕಂಟೆಂಟ್‌ಗೆ ಬೆಲೆ ಕೊಡ್ತಾರೆ. ಆ ಕಾರಣಕ್ಕೆ ಬಿಗ್‌ ಬಜೆಟ್‌ ಆಗಿದ್ದರೂ,  ನಿರ್ದೇಶಕ ರಾಜ ಮೋಹನ್‌ ಎಂಬುವವರನ್ನು ಕನ್ನಡಕ್ಕೆ ಕರೆದು ಅವಕಾಶ ಕೊಡುತ್ತಿದ್ದಾರೆ. ಆ ನಿರ್ದೇಶಕನಿಗೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಲು ಅವಕಾಶ ಕೊಟ್ಟ ಚಂದ್ರು ಕೂಡ ಸಿನಿಮಾದ ಗಾಡ್‌ ಫಾದರ್‌ ಇದ್ದಂತೆ. ಈ ಮಾತು ಅತಿಶಯೋಕ್ತಿಯಲ್ಲ.

  • ಕನ್ನಡ ಕಿರುತೆರೆಗೆ ಕಮ್‌ಬ್ಯಾಕ್ ಮಾಡಿದ ‘ಕೃಷ್ಣ ರುಕ್ಮಿಣಿ’ ನಟಿ

    ಕನ್ನಡ ಕಿರುತೆರೆಗೆ ಕಮ್‌ಬ್ಯಾಕ್ ಮಾಡಿದ ‘ಕೃಷ್ಣ ರುಕ್ಮಿಣಿ’ ನಟಿ

    ನ್ನಡ ಕಿರುತೆರೆಯಲ್ಲಿ ‘ಕೃಷ್ಣ ರುಕ್ಮಿಣಿ’ (Krishna Rukmini) ಸೀರಿಯಲ್ ಭಾರೀ ಮೆಚ್ಚುಗೆ ಗಳಿಸಿತ್ತು. ನಾಯಕಿಯಾಗಿ ರುಕ್ಮಿಣಿ ಪಾತ್ರಧಾರಿ ಕೂಡ ಸೈ ಎನಿಸಿಕೊಂಡಿದ್ದರು. ಹಲವು ವರ್ಷಗಳ ನಂತರ ರುಕ್ಮಿಣಿ ಪಾತ್ರಧಾರಿ ಅಂಜನಾ ಶ್ರೀನಿವಾಸ್ (Anjana Srinivas) ಕನ್ನಡ ಕಿರುತೆರೆಗೆ ಕಮ್‌ಬ್ಯಾಕ್ ಆಗಿದ್ದಾರೆ.

    2011ರಲ್ಲಿ ‘ಕೃಷ್ಣ ರುಕ್ಮಿಣಿ’ ಸೀರಿಯಲ್ ಪ್ರಸಾರವಾಗುತ್ತಿತ್ತು. ಅದರಲ್ಲಿ ಡಾರ್ಲಿಂಗ್ ಕೃಷ್ಣ (Darling Krishna) ಹೀರೋ ಆಗಿದ್ರೆ, ನಾಯಕಿಯಾಗಿ ಅಂಜನಾ ನಟಿಸಿದ್ದರು. ಕಿರುತೆರೆಯಲ್ಲಿ ಬೆಸ್ಟ್ ಜೋಡಿ ಎಂದೇ ಅಂದು ಫೇಮಸ್ ಆಗಿದ್ದರು. ಈ ಸೀರಿಯಲ್ ನಂತರ ಪರಭಾಷೆಯ ಸೀರಿಯಲ್‌ನಲ್ಲಿ ನಟಿ ಬ್ಯುಸಿಯಾಗಿದ್ದರು. ಈಗ ಮತ್ತೆ ಕನ್ನಡದ ‘ಜಾನಕಿ ಸಂಸಾರ’ ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. ಇದನ್ನೂ ಓದಿ:ಮಗಳ ಹೆಸರು ಬದಲಿಸಿದ ದುನಿಯಾ ವಿಜಯ್

    ‘ಜಾನಕಿ ಸಂಸಾರ’ ಸೀರಿಯಲ್‌ನಲ್ಲಿ ನಾಯಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ವಾಹಿನಿಯು ಸುಂದರವಾದ ಪ್ರೋಮೋ ರಿಲೀಸ್ ಮಾಡಿ ಮಾಹಿತಿ ನೀಡಿದೆ. ಕೂಡು ಕುಟುಂಬದ ಕಥೆ ಈ ಧಾರಾವಾಹಿಯಲ್ಲಿದೆ. ಅಂಜನಾ ಅವರು ಜಾನಕಿ ಪಾತ್ರ ಮಾಡುತ್ತಿದ್ದು, ಜಾನಕಿಗೆ ಮಗು ಕೂಡ ಇದೆ. ಸೂರಜ್ ಹೊಳ್ಳ ಅವರು ಈ ಧಾರಾವಾಹಿಯ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

    ಅಂದಹಾಗೆ, 17ನೇ ವಯಸ್ಸಿಗೆ ಕೃಷ್ಣ ರುಕ್ಮಿಣಿ ಸೀರಿಯಲ್‌ಗೆ ನಾಯಕಿಯಾಗಿ ಆಯ್ಕೆ ಆದರು. ಬಳಿಕ ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ 7 ಸೀರಿಯಲ್‌ನಲ್ಲಿ ನಟಿಸಿದ್ದಾರೆ.

  • ಏಪ್ರಿಲ್ ಕೊನೆಯ ವಾರದಲ್ಲಿ ‘ಫಾದರ್’ ಚಿತ್ರದ ಶೂಟಿಂಗ್ ಶುರು

    ಏಪ್ರಿಲ್ ಕೊನೆಯ ವಾರದಲ್ಲಿ ‘ಫಾದರ್’ ಚಿತ್ರದ ಶೂಟಿಂಗ್ ಶುರು

    ನ್ನಡದ ಹೆಸರಾಂತ ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು (R. Chandru) ಕಳೆದ ತಿಂಗಳವಷ್ಟೇ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಮೊದಲ ಚಿತ್ರವಾಗಿ ಫಾದರ್ (Father) ಸೆಟ್ಟೇರಲಿದೆ. ಏಪ್ರಿಲ್ ತಿಂಗಳ ಕೊನೆಯಲ್ಲಿ ವಾರದಿಂದ ಚಿತ್ರೀಕರಣವನ್ನು (Shooting) ಆರಂಭಿಸುವುದಾಗಿ ಚಿತ್ರತಂಡ ಹೇಳಿದೆ. ಆರಂಭವಾಗಲಿರುವ ಈ ಚಿತ್ರದಲ್ಲಿ ಹೆಸರಾಂತ ತಾರಾ ಬಳಗವೇ ಇದೆ.

    ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದರೆ, ತಂದೆಯ ಪಾತ್ರದಲ್ಲಿ ಹೆಸರಾಂತ ನಟ ಪ್ರಕಾಶ್ ರೈ (Prakash Rai) ಅಭಿನಯಿಸುತ್ತಿದ್ದಾರೆ. ಅಪ್ಪ – ಮಗನ ಬಾಂಧವ್ಯದ ಚಿತ್ರವಿದು. ತೆಲುಗಿನ ಸುನೀಲ್ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಒಟ್ಟಿನಲ್ಲಿ ಇದೇ ವರ್ಷ ಐದು ಚಿತ್ರಗಳಿಗೂ ಚಾಲನೆ ಸಿಗಲಿದೆ ಎನ್ನುವುದು ಚಂದ್ರು ಮಾತು.

    ಡಾರ್ಲಿಂಗ್ ಕೃಷ್ಣ ಮತ್ತು ಪ್ರಕಾಶ್ ರೈ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಪರಿಕಲ್ಪನೆಯಲ್ಲಿ ಮೂಡಿ ಬರಲಿದೆ. ಸದ್ಯಕ್ಕೆ ಇಷ್ಟೇ ಮಾಹಿತಿಯನ್ನು ನೀಡಿರುವ ಚಂದ್ರು, ಮುಂದಿನ ದಿನಗಳಲ್ಲಿ ನಾಯಕಿ ಮತ್ತು ತಂತ್ರಜ್ಞರ ವಿವರನ್ನು ನೀಡಲಿದ್ದಾರಂತೆ.

    ಈ ಸಿನಿಮಾದ ನಂತರ ಚಂದ್ರು ಮತ್ತೊಂದು ಮೆಗಾ ಪ್ರಾಜೆಕ್ಟ್ ಅನ್ನು ಕೈಗೆತ್ತಿಕೊಳ್ಳಲಿದ್ದಾರೆ. ಅದು ಕೂಡ ಭಾರೀ ಬಜೆಟ್ ಅನ್ನು ಹೊಂದಿರುವ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಕೆಲಸದಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ.

  • ಮಹಿಳಾ ದಿನಾಚರಣೆ ದಿನದಂದು ಗುಡ್ ನ್ಯೂಸ್ ಕೊಟ್ಟ ನಟಿ ಮಿಲನಾ

    ಮಹಿಳಾ ದಿನಾಚರಣೆ ದಿನದಂದು ಗುಡ್ ನ್ಯೂಸ್ ಕೊಟ್ಟ ನಟಿ ಮಿಲನಾ

    ಟಿ ಮಿಲನಾ ನಾಗರಾಜ್ (Milana Nagaraj) ಮಹಿಳಾ ದಿನಾಚರಣೆ ದಿನದಂದು ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ ನಲ್ಲಿ ತಮ್ಮ ಮನೆಗೆ ಹೊಸ ಅತಿಥಿ ಬರುತ್ತಿರುವುದಾಗಿ ಬರೆದುಕೊಂಡಿದ್ದಾರೆ.

    ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ (Darling Krishna) ಸಿನಿಮಾ ರಂಗದ ಅಪರೂಪದ ಜೋಡಿ. ಒಟ್ಟಿಗೆ ಸಿನಿಮಾದಲ್ಲಿ ನಟಿಸುತ್ತಲೇ ಪ್ರೀತಿಗೆ ಬಿದ್ದವರು. ಆನಂತರ ಮನೆಯವರ ಒಪ್ಪಿಗೆ ಪಡೆದುಕೊಂಡು ಮದುವೆಯಾದವರು. ಮದುವೆ ನಂತರವೂ ಇಬ್ಬರೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ಜೊತೆಗೆ ಸಿನಿಮಾದಲ್ಲಿ ನಟನೆ, ನಿರ್ಮಾಣ ಮತ್ತು ನಿರ್ದೇಶನವನ್ನೂ ಮಾಡಿದ್ದಾರೆ.

    ಇಂಥದ್ದೊಂದು ಜೋಡಿಯು ಈಗ ಹೊಸ ಅತಿಥಿಯ ಆಗಮನಕ್ಕೆ ಕಾಯುತ್ತಿದೆ. ಈ ಖುಷಿಯನ್ನು ಅವರು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ‘ಬೇಬಿ ಕ್ರಿಸ್ಮಿ’ ಎನ್ನುವ ಸುಂದರವಾದ ಪೋಸ್ಟ್ ರೆಡಿ ಮಾಡಿಸಿ ಅದನ್ನು ಮಿಲನಾ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಅಭಿಮಾನಿಗಳು ಶುಭ ಹಾರೈಸಿದ್ದಾರೆ.

  • ‘ಹಲಗಲಿ ಬೇಡರ’ ಕಥೆ ಹೇಳೋಕೆ ಬರ್ತಿದ್ದಾರೆ ಡಾರ್ಲಿಂಗ್ ಕೃಷ್ಣ

    ‘ಹಲಗಲಿ ಬೇಡರ’ ಕಥೆ ಹೇಳೋಕೆ ಬರ್ತಿದ್ದಾರೆ ಡಾರ್ಲಿಂಗ್ ಕೃಷ್ಣ

    ನ್ನಡದಲ್ಲಿ ಮತ್ತೊಂದು ಐತಿಹಾಸಿಕ ಸಿನಿಮಾ ಮೂಡಿ ಬರುತ್ತಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆರಿಲ್ಲಾ ವಾರ್ ಮಾಡುವ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಹಲಗಲಿ ಬೇಡರ (Halagali Bedru) ಕಥೆಯನ್ನು ಸಿನಿಮಾ ಮಾಡುತ್ತಿದ್ದಾರೆ ನಿರ್ದೇಶಕ ಸುಕೇಶ್ ಡಿ.ಕೆ. ಈ ಸಿನಿಮಾಗೆ ಡಾರ್ಲಿಂಗ್ ಕೃಷ್ಣ (Darling Krishna) ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

    ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಮತ್ತು ಆ ಕಾಲ ಘಟ್ಟವನ್ನು ಕಟ್ಟಿ ಕೊಡಬೇಕಾಗಿದ್ದರಿಂದ ಬರೋಬ್ಬರಿ 80 ಕೋಟಿ ರೂಪಾಯಿಯನ್ನು ಈ ಸಿನಿಮಾಗಾಗಿ ಖರ್ಚು ಮಾಡುತ್ತಿದ್ದಾರೆ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಳ್ಯ. ಇದೊಂದು ಅಪರೂಪದ ಕಥನವಾಗಿದ್ದರಿಂದ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಯೋಧನೊಬ್ಬನ ಪಾತ್ರವನ್ನು ನಿರ್ವಹಿಸಬೇಕಿದ್ದರಿಂದ ಸಖತ್ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರಂತೆ. ಈಗಾಗಲೇ ಸದ್ದಿಲ್ಲದೇ ಚಿತ್ರಕ್ಕೆ ಮುಹೂರ್ತ ಕೂಡ ನಡೆದಿದೆ. ಜೊತೆಗೆ ಮೊದಲ ಹಂತದ ಶೂಟಿಂಗ್ ಕೂಡ ಮಾಡುತ್ತಿದ್ದಾರಂತೆ ನಿರ್ದೇಶಕರು. ಅಮೆರಿಕಾ ಹಾಗೂ ರಷ್ಯನ್ ಕಲಾವಿದರು ಮೊದಲ ದಿನದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

    ನಿರ್ದೇಶಕ ಸುಕೇಶ್ ಈ ಹಿಂದೆ ಕೃಷ್ಣ ತುಳಿಸಿ ಚಿತ್ರ ಮಾಡಿದವರು. ಸಂಚಾರಿ ವಿಜಯ್ ಈ ಸಿನಿಮಾದ ಹೀರೋ. ಅಂದು ಲವ್ ಸ್ಟೋರಿ ಕೊಟ್ಟಿದ್ದ ಸುಕೇಶ್ ಇಂದು ಐತಿಹಾಸಿಕ ಚಿತ್ರಕ್ಕೆ ಕೈ ಹಾಕಿದ್ದಾರೆ.