Tag: Darling Krishna

  • ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್

    ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್

    ಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ(Darling Krishna) – ಮಿಲನ ನಾಗರಾಜ್ (Milana Nagaraj) ನಾಯಕ, ನಾಯಕಿಯಾಗಿ ನಟಿಸಿರುವ ‘ಲವ್ ಬರ್ಡ್ಸ್’ (Lovebirds) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ ‘ಲವ್ ಬರ್ಡ್ಸ್’ ಚಿತ್ರದ ಟೀಸರ್ (Teaser) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

    ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರ ಮಾಡುವುದಿಲ್ಲ. ಬೇರೆಬೇರೆ ರೀತಿಯ ಚಿತ್ರ ಮಾಡುತ್ತಿರುತ್ತೇನೆ. ಲಾಕ್ ಡೌನ್ ಸಮಯದಲ್ಲಿ ಬರೆದ ಕಥೆಯಿದು. ಮದುವೆಯಾದ ನನ್ನ ಸ್ನೇಹಿತರು ಹಂಚಿಕೊಳ್ಳುತ್ತಿದ್ದ ಕೆಲವು ವಿಷಯಗಳು ಈ ಕಥೆ ಬರೆಯಲು ಸ್ಪೂರ್ತಿ. ಕಥೆ ಬರೆಯಬೇಕಾದರೆ ಕೃಷ್ಣ – ಮಿಲನ ನಾಗರಾಜ್ ಅವರೆ ನಾಯಕ-ನಾಯಕಿ ಅಂತ ನಿರ್ಧರಿಸಿದ್ದೆ. ಆನಂತರ ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಅವರು ಚಿತ್ರ ಮಾಡಲು ಮುಂದಾದರು.  ಚಿತ್ರತಂಡದ ಸಹಕಾರದಿಂದ “ಲವ್ ಬರ್ಡ್ಸ್” ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಪಿ.ಸಿ.ಶೇಖರ್. ಇದನ್ನೂ ಓದಿ: ಮದುವೆ ಬಗ್ಗೆ ನಟಿ ರಚಿತಾ ರಾಮ್ ಮನದಾಳದ ಮಾತು

    ಚಿತ್ರ ಚೆನ್ನಾಗಿ ಬಂದಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ವಿಜಯ ರಾಘವೇಂದ್ರ – ಅಜಯ್ ರಾವ್ ಅವರಿಗೆ ಧನ್ಯವಾದ. ಮುಂದಿನವಾರ ಚಿತ್ರದ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಕಡ್ಡಿಪುಡಿ ಚಂದ್ರು ತಿಳಿಸಿದರು. ನಾನು ಹಾಗೂ ಮಿಲನ ನಾಗರಾಜ್ “ಲವ್ ಮಾಕ್ಟೇಲ್” ಚಿತ್ರದ ನಂತರ ಮಾಡಿರುವ ಚಿತ್ರವಿದು. ಅದರಲ್ಲಿ ಆದಿ ಹಾಗೂ ನಿಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆವು. ಇದರಲ್ಲಿ ದೀಪಕ್ – ಪೂಜಾ ಪಾತ್ರದಲ್ಲಿ ಅಭಿನಯಿಸಿದ್ದೇವೆ. ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳು ಚೆನ್ನಾಗಿದೆ. ನಿರ್ದೇಶಕ ಪಿ.ಸಿ.ಶೇಖರ್ ಚಿತ್ರವನ್ನು ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕ ಚಂದ್ರು ಅವರಿಗೆ ಧನ್ಯವಾದ ಎಂದರು ಡಾರ್ಲಿಂಗ್ ಕೃಷ್ಣ.

    ನಿರ್ಮಾಪಕ ಚಂದ್ರು ಅವರು ತುಂಬಾ ಫಾಸ್ಟ್. ನಾನಿದ್ದ ಜಾಗಕ್ಕೆ ಬಂದು ಈ ಚಿತ್ರದ ಕುರಿತು ಹೇಳಿದರು. ಕಥೆ ಇಷ್ಟವಾಯಿತು. ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ. “ಲವ್ ಬರ್ಡ್ಸ್” ಚಿತ್ರದಲ್ಲಿ ಲವ್ ಅಷ್ಟೇ ಅಲ್ಲ. ಬೇರೆ ವಿಷಯಗಳು ಇದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದು ಮಿಲನ ನಾಗರಾಜ್ ಹೇಳಿದರು. ಹೊಸಪ್ರತಿಭೆ ಗೌರವ್ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

     

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಲವ್ ಬರ್ಡ್ಸ್’ ಚಿತ್ರದಲ್ಲಿ ಮಿಲನಾ ನಾಗರಾಜ್: ಸಿನಿಮಾದ ಫಸ್ಟ್ ಲುಕ್ ಔಟ್

    `ಲವ್ ಬರ್ಡ್ಸ್’ ಚಿತ್ರದಲ್ಲಿ ಮಿಲನಾ ನಾಗರಾಜ್: ಸಿನಿಮಾದ ಫಸ್ಟ್ ಲುಕ್ ಔಟ್

    `ಲವ್ ಮಾಕ್ಟೈಲ್‌ʼ (Love Mocktail) ಸಿನಿಮಾದ  ಸೂಪರ್ ಸಕ್ಸಸ್ ನಂತರ `ಲವ್ ಬರ್ಡ್ಸ್’ (Love Birds) ಆಗಿ ಮಿಂಚಲು ಕೃಷ್ಣ ಮತ್ತು ಮಿಲನಾ ರೆಡಿಯಾಗಿದ್ದಾರೆ. ಇದೀಗ ಮಿಲನಾ ಅವರ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.

     

    View this post on Instagram

     

    A post shared by Milana Nagaraj (@milananagaraj)

    ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಾಗರಾಜ್ (Milana Nagaraj) ಜೋಡಿ `ಲವ್ ಬರ್ಡ್ಸ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿರುವ ಬಗ್ಗೆ ಈ ಹಿಂದೆ ಸುದ್ದಿಯಾಗಿತ್ತು. ಈಗ ಈ ಸಿನಿಮಾದ ಮಿಲನಾ ನಾಗರಾಜ್ ಪಾತ್ರದ ಲುಕ್ ಬಿಡುಗಡೆ ಆಗಿದೆ. ಮಿಲನಾ ಈ ಸಿನಿಮಾದಲ್ಲಿ ಫ್ಯಾಷನ್ ಡಿಸೈನರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

     

    View this post on Instagram

     

    A post shared by Milana Nagaraj (@milananagaraj)

    ಸ್ಯಾಂಡಲ್‌ವುಡ್‌ನ ರಿಯಲ್ ಲವ್ ಬರ್ಡ್ಸ್ ಎಂದೇ ಕರೆಯಲ್ಪಡುವ ಕ್ರಿಸ್‌ಮಿ ಜೋಡಿ ಲವ್ ಮಾಕ್ಟೈಲ್, ಲವ್ ಮಾಕ್ಟೈಲ್‌ 2, ಮಿ.ಬ್ಯಾಚುಲರ್ ಸಿನಿಮಾಗಳ ನಂತರ `ಲವ್ ಬರ್ಡ್ಸ್’ ಆಗಿ ಮಿಂಚಲು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಶೇ. 80ರಷ್ಟು ಚಿತ್ರಿಕರಣ ಕಂಪ್ಲೀಟ್ ಆಗಿದೆ.

     

    View this post on Instagram

     

    A post shared by Milana Nagaraj (@milananagaraj)

    `ಲವ್ ಬರ್ಡ್ಸ್’ ಸಿನಿಮಾದಲ್ಲಿ ಗಂಡ ಹೆಂಡತಿ ಸಂಬಂಧದ ಬಗೆಗಿನ ಕಥೆ ಇದೆ. ಮದುವೆಯನ್ನು ಹೇಗೆ ಸುಂದರಗೊಳಿಸಬಹುದು ಎಂಬ ಬಗ್ಗೆ ತೆರೆಯ ಮೇಲೆ ತೋರಿಸಲು ನಿರ್ದೇಶಕ ಪಿ.ಸಿ ಶೇಖರ್ (Director Pc Shekar) ಹೊರಟಿದ್ದಾರೆ. ಮಿಲನಾ ನಾಗರಾಜ್ ಫ್ಯಾಷನ್ ಡಿಸೈನರ್ (Fashion Designer) ಆಗಿ ಸಖತ್ ಬೋಲ್ಡ್ ಕ್ಯಾರೆಕ್ಟರ್‌ನಲ್ಲಿ ಕಾಣಿಸಿಕೊಂಡಿರುವ ಅವರು ಇಂಡಿಪೆಂಡೆಂಟ್ ಯುವತಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಡಾರ್ಲಿಂಗ್ ಕೃಷ್ಣ ಕೂಡ ಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಅಖಾಡಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

     

    View this post on Instagram

     

    A post shared by Milana Nagaraj (@milananagaraj)

    ಸದ್ಯ ಈ ಚಿತ್ರದ ಮಿಲನಾ ಲುಕ್ ಏಲ್ಲೆಡೆ ಸದ್ದು ಮಾಡುತ್ತಿದೆ. ನಟಿಯ ಮೊದಲ ಲುಕ್ ನೆಟ್ಟಿಗರ ಗಮನ ಸೆಳೆದಿದೆ. ಸದ್ಯದಲ್ಲೇ ಸಿನಿಮಾ ತೆರೆಗೆ ಅಬ್ಬರಿಸಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಿವರಾಜ್ ಸಕ್ರೆ ನಿರ್ದೇಶನದ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಸಾಥ್

    ಶಿವರಾಜ್ ಸಕ್ರೆ ನಿರ್ದೇಶನದ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಸಾಥ್

    ಡುಂಬಾ’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಶಿವರಾಜ್ ಸಕ್ರೆ (Shivaraj Sakre) ಹೊಸದೊಂದು ಸಬ್ಜೆಕ್ಟ್ ಹೊತ್ತು ನಿರ್ದೇಶನಕ್ಕೆ ರೆಡಿಯಾಗಿದ್ದಾರೆ. ಥ್ರಿಲ್ಲರ್ ಜಾನರ್ ಒಳಗೊಂಡ ಈ ಚಿತ್ರದ ಟೈಟಲ್ ಹೊಸ ವರ್ಷದಂದು ರಿವೀಲ್ ಆಗಿದೆ. ನಟ ಡಾರ್ಲಿಂಗ್ ಕೃಷ್ಣ (Darling Krishna) ಟೈಟಲ್ ರಿವೀಲ್ ಮಾಡುವ ಮೂಲಕ ಶಿವರಾಜ್ ಸಕ್ರೆ ಸೆಕೆಂಡ್ ವೆಂಚರ್ ಗೆ ಶುಭ ಹಾರೈಸಿದ್ದಾರೆ. ‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ (Shadakshari S/O Panchakshari) ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

    ‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ ಚಿತ್ರ ಥ್ರಿಲ್ಲರ್ ಜಾನರ್ ಒಳಗೊಂಡಿದ್ದು, ಪಕ್ಕಾ ಕಮರ್ಶಿಯಲ್ ಹಾದಿಯಲ್ಲಿ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಉಡುಂಬಾ ಸಿನಿಮಾ ನಂತರ ಥ್ರಿಲ್ಲರ್ ಜಾನರ್ ಕಥೆ ಹೆಣೆದು ಒಂದಿಷ್ಟು ಹೊಸತನದೊಂದಿಗೆ ನಿರ್ದೇಶಕ ಶಿವರಾಜ್ ಸಕ್ರೆ ಕಂ ಬ್ಯಾಕ್ ಮಾಡ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯನ್ನು ನಿಭಾಯಿಸಿ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಜನವರಿ 28ಕ್ಕೆ ಸಿನಿಮಾ ಸೆಟ್ಟೇರಲಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಚಿತ್ರದಲ್ಲಿ ಕಿಶೋರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ‘ಐ1’ ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟ ಕಿಶೋರ್ ಗಿದು ಎರಡನೇ ಸಿನಿಮಾ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಸದ್ಯದಲ್ಲೇ ಚಿತ್ರತಂಡ ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ. ರಂಗಾಯಣ ರಘು, ಸುಜಯ್ ಶಾಸ್ತ್ರಿ, ತೆಲುಗು ಹಾಗೂ ತಮಿಳು ಸಿನಿಮಾ ಖ್ಯಾತಿಯ ಮಧುಸೂದನ್ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಝೀ ವಾಹಿನಿಯ ಸರಿಗಮಪ ಮೆಂಟರ್ ಸುಚೇತನ್ ರಂಗಸ್ವಾಮಿ ಸಂಗೀತ ನಿರ್ದೇಶನ, ಕಬ್ಜ, ಮಾರ್ಟಿನ್, ನಟ ಸಾರ್ವಭೌಮ ಖ್ಯಾತಿಯ ಮಹೇಶ್ ರೆಡ್ಡಿ ಸಂಕಲನ ಚಿತ್ರಕ್ಕಿದೆ. ಭರ್ಜರಿ ಚೇತನ್, ಜೋಗಿ ಪ್ರೇಮ್, ಅಲೆಮಾರಿ ಸಂತು ಹಾಗೂ ಹೊಸ ಪ್ರತಿಭೆ ಸಂತೋಷ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.  ಎಸ್. ಪಿ ಪಿಕ್ಚರ್ಸ್ ಬ್ಯಾನರ್ ನಡಿ ಶೈಲಜಾ ಪ್ರಕಾಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ‘ಐ 1’, ‘ಮೃತ್ಯುಂಜಯ’ ಸಿನಿಮಾ ನಂತರ ಎಸ್ ಪಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಐದನೇ ಸಿನಿಮಾ ಇದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಾರ್ಟಿ ಪ್ರಿಯರಿಗಾಗಿ ‘ಶುಗರ್ ಫ್ಯಾಕ್ಟರಿ’ಯಲ್ಲಿ ಒಂದು ಸಾಂಗ್

    ಪಾರ್ಟಿ ಪ್ರಿಯರಿಗಾಗಿ ‘ಶುಗರ್ ಫ್ಯಾಕ್ಟರಿ’ಯಲ್ಲಿ ಒಂದು ಸಾಂಗ್

    ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ  ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.  ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು ಬರೆದು ಹಾಡಿದ್ದಾರೆ. ರುಚಿರ ವೈದ್ಯ English rap ಗೆ ದ್ವನಿಯಾಗಿದ್ದಾರೆ.  ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ನಟಿ ಅಮೂಲ್ಯ, ಜಗದೀಶ್ (ಅಮೂಲ್ಯ ಪತಿ) ಹಾಗೂ ರಾಜಕೀಯ ಮುಖಂಡರಾದ ರಾಮಚಂದ್ರಪ್ಪ ಅವರು ಸಮಾರಂಭಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದರು.

    ಇದು ನನ್ನ ಸಿನಿ ಜರ್ನಿಯ ಬಿಗ್ ಬಜೆಟ್ ಚಿತ್ರ ಎನ್ನಬಹುದು. ನಿಜಜೀವನದಲ್ಲಿ ಪಾರ್ಟಿ ಮಾಡದ ನನ್ನ ಹತ್ತಿರ, ಈ ಚಿತ್ರದಲ್ಲಿ ಭರ್ಜರಿ ಪಾರ್ಟಿ ಮಾಡಿಸಿ, ಸಖತಾಗಿ ಕುಣಿಸಿದ್ದಾರೆ. ಚಂದನ್ ಶೆಟ್ಟಿ ಅವರ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ. ಇದನ್ನೂ ಓದಿ:  ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

    “ಶುಗರ್ ಫ್ಯಾಕ್ಟರಿ” ಈಗಿನ‌ ಜನರೇಶನ್ ಗೆ ಹೇಳಿಮಾಡಿಸಿದ ಕಥೆ. ಕಾಲೇಜು ವಿದ್ಯಾರ್ಥಿಗಳಿಗೆ ಈ ಚಿತ್ರ ಮತ್ತಷ್ಟು ಹತ್ತಿರವಾಗಲಿದೆ. ನಾವು ಆರಂಭದಲ್ಲಿ ಅಂದು ಕೊಂಡಿದ್ದೆ ಬೇರೆ. ಈಗ ಆಗಿರುವ ಬಜೆಟ್ ಬೇರೆ. ನನ್ನ ಈ ಕನಸನ್ನು ನನಸು ಮಾಡಿದ ನಿರ್ಮಾಪಕ ಗಿರೀಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ತುಂಬು ಹೃದಯದ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಅರಸ್.

    ನಿರ್ಮಾಪಕ ಗಿರೀಶ್ ಅವರು ಹಾಡು ಹಾಗೂ ಚಿತ್ರ ಚೆನ್ನಾಗಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಕಬೀರ್ ರಫಿ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ನಾಯಕಿಯರಾದ ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ , ಶಿಲ್ಪ ಶೆಟ್ಟಿ ಮತ್ತು ಚಿತ್ರದಲ್ಲಿ ನಟಿಸಿರುವ ಶಶಿ ಹಾಗೂ ಮಹಂತೇಶ್ “ಶುಗರ್ ಫ್ಯಾಕ್ಟರಿ” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹೊಸ ಮನೆಗೆ ಕಾಲಿಟ್ಟ ಮಿಲನಾ- ಡಾರ್ಲಿಂಗ್ ಕೃಷ್ಣ ಜೋಡಿ

    ಹೊಸ ಮನೆಗೆ ಕಾಲಿಟ್ಟ ಮಿಲನಾ- ಡಾರ್ಲಿಂಗ್ ಕೃಷ್ಣ ಜೋಡಿ

    `ಲವ್ ಮಾಕ್ಟೈಲ್‌ʼ (Love Mocktail) ಸಿನಿಮಾ ಮೂಲಕ ಸಂಚಲನ ಸೃಷ್ಟಿಸಿದ್ದ ಜೋಡಿ ಮಿಲನಾ(Milana Nagraj) ಮತ್ತು ಡಾರ್ಲಿಂಗ್ ಕೃಷ್ಣ(Darling Krishna) ಇದೀಗ ಹೊಸ ಮನೆಗೆ(House Warming) ಕಾಲಿಟ್ಟಿದ್ದಾರೆ. ಸದ್ಯ ಗೃಹಪ್ರವೇಶದ ಫೋಟೋಗಳ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಡಾರ್ಲಿಂಗ್ ಕೃಷ್ಣ, ಮಿಲನಾ ನಟನೆಯ ಲವ್ ಮಾಕ್ಟೈಲ್, ಲವ್ ಮಾಕ್ಟೈಲ್ 2 ಚಿತ್ರದ ಸೂಪರ್ ಸಕ್ಸಸ್ ನಂತರ ಹೊಸ ಮನೆಗೆ ಈ ಜೋಡಿ ಕಾಲಿಟ್ಟಿದೆ. ಹಲವು ವರ್ಷಗಳಿಂದ ಈ ಜೋಡಿ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಬಳಿಕ ಗುರುಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಈಗ ಹೊಸ ಮನೆಗೆ ಕ್ರಿಸ್‌ಮಿ ಜೋಡಿ ಕಾಲಿಟ್ಟಿದ್ದಾರೆ. ಇದನ್ನೂ ಓದಿ:ಅನಾರೋಗ್ಯದ ನಡುವೆಯೂ `ಯಶೋದಾ’ ಸಿನಿಮಾ ಪ್ರಚಾರದಲ್ಲಿ ಸಮಂತಾ

     

    View this post on Instagram

     

    A post shared by Milana Nagaraj (@milananagaraj)

    ಇನ್ನೂ ತಮ್ಮ ಹೊಸ ಮನೆಗೆ ʻಕ್ರಿಸ್‌ಮಿ ನೆಸ್ಟ್ʼ ಎಂದು ಹೆಸರಿಟ್ಟಿದ್ದಾರೆ. ನೆಚ್ಚಿನ ಜೋಡಿಗೆ ಅಭಿಮಾನಿಗಳು, ಆಪ್ತರು ಶುಭಹಾರೈಸಿದ್ದಾರೆ. ಇನ್ನೂ ಮಿಲನಾ ಮತ್ತು ಕೃಷ್ಣ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ಚಿತ್ರದ ಟೈಟಲ್ ಅನಾವರಣ

    ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ಚಿತ್ರದ ಟೈಟಲ್ ಅನಾವರಣ

    ದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ (Shashank) ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ “ಕೌಸಲ್ಯಾ ಸುಪ್ರಜಾ ರಾಮ” (Kausalya Supraja Rama) ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.

    ಕೌಸಲ್ಯಾ ಸುಪ್ರಜಾ ರಾಮ” ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಹೆಸರೆ ಹೇಳುವಂತೆ ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಸೆಂಟಿಮೆಂಟ್ ಎರಡು ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ. ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ (Darling Krishna)ನಟಿಸುತ್ತಿದ್ದು, ಅವರ ತಾಯಿ – ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯತಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿರುತ್ತಾರೆ. ಅದರಲ್ಲಿ ಒಬ್ಬರು ಹೊಸಬರು.

    “ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ನಮ್ಮ ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಾನು ಬಿ.ಸಿ.ಪಾಟೀಲ್ ಅಭಿನಯದ “ಕೌರವ” ಚಿತ್ರದಲ್ಲಿ ಎಸ್ ಮಹೇಂದರ್ ಅವರ ಬಳಿ ಕೆಲಸ ಮಾಡಿದ್ದೆ. ಆಗಿನಿಂದಲೂ ಬಿ.ಸಿ.ಪಾಟೀಲ್ ಅವರು ಪರಿಚಯ. ಈಗ ಅವರ ಜೊತೆ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ ಶಶಾಂಕ್. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಸದಭಿರುಚಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಈಗ ಈಡೇರಿದೆ. “ಕೌಸಲ್ಯಾ ಸುಪ್ರಜಾ ರಾಮ” ಸುಂದರ ಶೀರ್ಷಿಕೆ. “ಲವ್ ಮಾಕ್ಟೇಲ್”, ” ಲಕ್ಕಿ ಮ್ಯಾನ್” ಸೇರಿದಂತೆ ನನ್ನ ಅನೇಕ ಚಿತ್ರಗಳ ಶೀರ್ಷಿಕೆ ಇಂಗ್ಲಿಷ್ ನಲ್ಲಿದೆ‌. ಈಗ ಇಂಗ್ಲಿಷ್ ಇಲ್ಲದ ಶೀರ್ಷಿಕೆ ಸಿಕ್ಕಿದೆ. ಕಥೆ ಹಾಗೂ ನನ್ನ ಪಾತ್ರ ತುಂಬಾ ಚೆನ್ನಾಗಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.ನಾನು ಶಶಾಂಕ್ ಅವರನ್ನು ಬಹಳ ದಿನಗಳಿಂದ ನಿಮ್ಮ ಚಿತ್ರದಲ್ಲಿ ನಟಿಸಬೇಕೆಂಬೆದು ಕೇಳುತ್ತಿದೆ‌. ಈಗ ಅವಕಾಶ ಕೊಟ್ಟಿದ್ದಾರೆ ಎಂದರು ನಿರ್ದೇಶಕ ಹಾಗೂ ನಟ ಗಿರಿರಾಜ್ (Giriraj).

    ಸಹ ನಿರ್ಮಾಪಕ ಹನುಮಂತ ರಾವ್, ಛಾಯಾಗ್ರಾಹಕ ಸುಜ್ಞಾನ್, ಶಶಾಂಕ್ ಅವರೊಂದಿಗೆ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಯದುನಂದನ್ ಹಾಗೂ ಟೈಟಲ್ ಅನಿಮೇಷನ್‌ ಮಾಡಿರುವ ಸಂತೋಷ್ ರಾಧಾಕೃಷ್ಣನ್ ಈ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಗಿರಿ ಮಹೇಶ್ ಈ ಚಿತ್ರದ ಸಂಕಲನಕಾರರು.

    Live Tv
    [brid partner=56869869 player=32851 video=960834 autoplay=true]

  • ಡಾರ್ಲಿಂಗ್ ಕೃಷ್ಣ ಮತ್ತು ಶಶಾಂಕ್ ಕಾಂಬಿನೇಷನ್ ಚಿತ್ರಕ್ಕೆ ಮುಹೂರ್ತ

    ಡಾರ್ಲಿಂಗ್ ಕೃಷ್ಣ ಮತ್ತು ಶಶಾಂಕ್ ಕಾಂಬಿನೇಷನ್ ಚಿತ್ರಕ್ಕೆ ಮುಹೂರ್ತ

    ನ್ನಡದ ಹೆಸರಾಂತ ನಿರ್ದೇಶಕ ಶಶಾಂಕ್ (Shashank) ಇದೀಗ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ವಿಜಯ ದಶಮಿಯ ದಿನದಂದು ಸದ್ದಿಲ್ಲದೇ ಈ ಚಿತ್ರಕ್ಕೆ ಮುಹೂರ್ತ ಕೂಡ ಮಾಡಿದ್ದಾರೆ. ಶಶಾಂಕ್ ಸಿನಿಮಾಸ್ ಮತ್ತು ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಈ ಸಿನಿಮಾ (New Movie) ಮೂಡಿ ಬರಲಿದ್ದು, ಡಾರ್ಲಿಂಗ್ ಕೃಷ್ಣ ಚಿತ್ರದ ನಾಯಕ.

    ಮೊನ್ನೆಯಷ್ಟೇ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ರಿಲೀಸ್ ಆಗಿದೆ. ಜನರು ಕೂಡ ಈ ಸಿನಿಮಾವನ್ನು ಇಷ್ಟಪಟ್ಟರು. ಈ ಚಿತ್ರದ ನಂತರ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗಾಗಿ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಶಶಾಂಕ್. ನನ್ನ ನಿರ್ದೇಶನದ ಹೊಸ ಚಿತ್ರದ ಮುಹೂರ್ತ ವಿಜಯ ದಶಮಿಯ ಈ ಶುಭ ದಿನದಂದು ನೆರವೇರಿತು. ಹೊಸ ಪ್ರಯತ್ನಕ್ಕೆ ನಿಮ್ಮ ಹಾರೈಕೆಗಳು ಇರಲಿ ಎಂದಿದ್ದಾರೆ. ಇದನ್ನೂ ಓದಿ: ಕಾಂತಾರ ಕಾಳಗ: ಜಾಲತಾಣಗಳಲ್ಲಿ ಸೈದ್ಧಾಂತಿಕ, ರಾಜಕೀಯ, ಪ್ರಾದೇಶಿಕ ಸೊಗಡಿನ ಚರ್ಚೆ

    ಲವ್ ಸ್ಟೋರಿ, ಸಾಹಸ ಪ್ರಧಾನ ಸಿನಿಮಾಗಳ ಮೂಲಕ ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿರುವ ಶಶಾಂಕ್, ಹೊಸ ಸಿನಿಮಾದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಷಯಗಳನ್ನು ಹಂಚಿಕೊಳ್ಳಲಿದ್ದು, ಅತೀ ಶೀಘ್ರದಲ್ಲೇ ಸಿನಿಮಾದ ಟೈಟಲ್ ಕೂಡ ಅನಾವರಣ ಮಾಡುತ್ತಾರಂತೆ. ಇದೇ ಮೊದಲ ಬಾರಿಗೆ ಶಶಾಂಕ್ ಮತ್ತು ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರುತ್ತಿರುವುದರಿಂದ ಸಹಜವಾಗಿಯೇ ಕುತೂಹಲ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಡಾರ್ಲಿಂಗ್ ಕೃಷ್ಣ ಅಭಿನಯದ ‘ದಿಲ್ ಪಸಂದ್’ ಟೀಸರ್ ಬಿಡುಗಡೆ

    ಡಾರ್ಲಿಂಗ್ ಕೃಷ್ಣ ಅಭಿನಯದ ‘ದಿಲ್ ಪಸಂದ್’ ಟೀಸರ್ ಬಿಡುಗಡೆ

    ಡಾರ್ಲಿಂಗ್ ಕೃಷ್ಣ (Darling Krishna) ಅವರು ನಾಯಕನಾಗಿ ನಟಿಸಿರುವ “ದಿಲ್ ಪಸಂದ್” (Dil Pasand) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ “ದಿಲ್ ಪಸಂದ್” ನಷ್ಟೇ ಸಿಹಿಯಾಗಿದೆ . ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ ಕ್ರಾಂತಿ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶಿವತೇಜಸ್. ‌

    ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಎಮೋಷನ್ ಹುಡುಗಿ ನಾನು. ಲವ್ ಟ್ರ್ಯಾಕ್ ಇರುವ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಕಂಪ್ಲೀಟ್ ಲವ್ ಸ್ಟೋರಿಯಳ್ಳ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ನಾನು ನಟಿಸಿರುವ ಪೂರ್ಣ ಪ್ರೇಮಕಥೆಯುಳ್ಳ ಮೊದಲ ಚಿತ್ರ  “ದಿಲ್ ಪಸಂದ್” ಎಂದು ನಿಶ್ವಿಕಾ ನಾಯ್ಡು ತಿಳಿಸಿದರು. ಈ ಚಿತ್ರದಲ್ಲಿ ಮುಗ್ದ ಹುಡುಗಿಯ ಪಾತ್ರ ನನ್ನದು. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ “ದಿಲ್ ಪಸಂದ್”. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎಂದರು ನಟಿ ಮೇಘಾ ಶೆಟ್ಟಿ. ಇದನ್ನೂ ಓದಿ:ವಿಜಯ್ ದೇವರಕೊಂಡ ಜೊತೆ ಲಿಪ್‌ಲಾಕ್ ಕಾರಣಕ್ಕಾಗಿ ಟ್ರೋಲ್ ಆದ ಬಗ್ಗೆ ರಶ್ಮಿಕಾ ಮಾತು

    ನಾನು ಕಥೆ ಕೇಳಬೇಕಾದರೆ ಸಾಕಷ್ಟು  ಖುಷಿ ಪಟ್ಟಿದೆ.  ಸಾಕಷ್ಟು ಎಂಜಾಯ್ ಮಾಡಿಕೊಂಡು ಡಬ್ಬಿಂಗ್ ಮಾಡಿದ್ದೇನೆ. ಉತ್ತಮ ಮನೋರಂಜನೆಯಿರುವ “ದಿಲ್ ಪಸಂದ್” ಎಲ್ಲರಿಗೂ ಪ್ರಿಯವಾಗಲಿದೆ.  ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.

    ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕೆಲವರು ಕಥೆ ಹೇಳುವುದೆ ಬೇರೆ. ಚಿತ್ರ ಮಾಡುವುದೇ ಬೇರೆ. ನಾನು ಇತ್ತೀಚೆಗೆ ಚಿತ್ರ ನೋಡಿದೆ.  ಶಿವತೇಜಸ್ (Shivatejas) ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ. ನಮ್ಮ”ದಿಲ್ ಪಸಂದ್” ಚಿತ್ರ ಚೆನ್ನಾಗಿದೆ. ನವೆಂಬರ್ 11 ತೆರೆಗೆ ಬರುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ಸುಮಂತ್ ಕ್ರಾಂತಿ. (Sumanth Kranti) ಕಾರ್ಯಕಾರಿ ನಿರ್ಮಾಪಕ ರಂಗಸ್ವಾಮಿ ಹಾಗೂ ಸಹ ನಿರ್ದೇಶಕ, ಮಾರ್ಕೆಟಿಂಗ್ ಹೆಡ್ ಹರೀಶ್ ದೇವಿತ್ “ದಿಲ್ ಪಸಂದ್” ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ‘ಲಕ್ಕಿಮ್ಯಾನ್’ ರಿಲೀಸ್ ಬೆನ್ನಲ್ಲೇ ಡಾರ್ಲಿಂಗ್ ಕೃಷ್ಣ ನಟನೆಯ ಮತ್ತೊಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

    ‘ಲಕ್ಕಿಮ್ಯಾನ್’ ರಿಲೀಸ್ ಬೆನ್ನಲ್ಲೇ ಡಾರ್ಲಿಂಗ್ ಕೃಷ್ಣ ನಟನೆಯ ಮತ್ತೊಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

    ಡಾರ್ಲಿಂಗ್ ಕೃಷ್ಣ (Darling Krishna) ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ” ದಿಲ್ ಪಸಂದ್” (Dil Pasand)  ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ (Sumanth Kranti) ಅವರು ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್ (Shivatejas) ನಿರ್ದೇಶಿಸಿದ್ದಾರೆ. ಪ್ರೇಮಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ  ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ.

    ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್ ಬಿಡುಗಡೆಯಾಗುವ ಸಾಧ್ಯತೆಯಿದೆ. ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ‌ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಇದನ್ನೂ ಓದಿ:ಬಿಕಿನಿಯಲ್ಲಿ `ಲೈಗರ್’ ಬ್ಯೂಟಿ ಅನನ್ಯಾ ಪಾಂಡೆ ಮಿಂಚಿಂಗ್

    ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ನಿಶ್ವಿಕಾ‌ ನಾಯ್ಡು (Nishvika Naidu) ಅಭಿನಯಿಸಿದ್ದಾರೆ. ಮೇಘ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ತಬಲ ನಾಣಿ, ಗಿರಿ, ಅರುಣಾ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾಲ್ಡೀವ್ಸ್ ಪ್ರವಾಸದಲ್ಲಿ `ಲವ್ ಮಾಕ್ಟೈಲ್’ ಜೋಡಿ

    ಮಾಲ್ಡೀವ್ಸ್ ಪ್ರವಾಸದಲ್ಲಿ `ಲವ್ ಮಾಕ್ಟೈಲ್’ ಜೋಡಿ

    ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗಾರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಪತಿ ಡಾರ್ಲಿಂಗ್ ಕೃಷ್ಣನ ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಮಾಲ್ಡೀವ್ಸ್‌ನ ಸುಂದರ ತಾಣಗಳಿಗೆ ಭೇಟಿ ಕೊಟ್ಟಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

     

    View this post on Instagram

     

    A post shared by Milana Nagaraj (@milananagaraj)

    `ಲವ್ ಮಾಕ್ಟೈಲ್’ ಮತ್ತು `ಲವ್ ಮಾಕ್ಟೈಲ್‌’ ಪಾರ್ಟ್ 2 ಚಿತ್ರದ ಮೂಲಕ ಸಿಕ್ಕಾಪಟ್ಟೆ ನೇಮ್ ಆ್ಯಂಡ್ ಫೇಮ್ ಗಿಟ್ಟಿಸಿಕೊಂಡಿರುವ ಈ ಜೋಡಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ. ಸಾಕಷ್ಟು ಸಿನಿಮಾಗಳ ಮಧ್ಯೆ ಪತಿಯ ಹುಟ್ಟುಹಬ್ಬಕ್ಕಾಗಿ ಮಾಲ್ಡೀವ್ಸ್‌ಗೆ ಈ ಜೋಡಿ ಹಾರಿದೆ. (ಜೂ.12)ರಂದು ಡಾರ್ಲಿಂಗ್ ಕೃಷ್ಣನ ಹುಟ್ಟುಹಬ್ಬವಿತ್ತು. ಪತಿಯ ಬರ್ತಡೇಯನ್ನು ವಿಶೇಷವಾಗಿ ಆಚರಿಸುವುದಕ್ಕೆ ನಟಿ ಮಿಲನಾ ಮಾಲ್ಡೀವ್ಸ್‌ಗೆ ಪ್ಲ್ಯಾನ್ ಮಾಡಿದ್ದರು.

     

    View this post on Instagram

     

    A post shared by Darling Krishna (@darling_krishnaa)

    ಕಳೆದ ಎರಡ್ಮೂರು ದಿನಗಳಿಂದ ಮಾಲ್ಡೀವ್ಸ್‌ನಲ್ಲಿ `ಲವ್ ಮಾಕ್ಟೈಲ್’ ಜೋಡಿ ಬೀಡು ಬಿಟ್ಟಿದ್ದಾರೆ. ಕಡಲ ತೀರದಲ್ಲಿ ನಟ ಕೃಷ್ಣನ ಬರ್ತಡೇಯನ್ನ ವಿಶೇಷವಾಗಿ ನಟಿ ಮಿಲನಾ ಸೆಲೆಬ್ರೇಟ್ ಮಾಡಿದ್ದಾರೆ. ಸದ್ಯ ಮಾಲ್ಡೀವ್ಸ್‌ನಲ್ಲಿರುವ ಇವರಿಬ್ಬರ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಪೊಲೀಸ್ ಠಾಣೆ ಮುಂದೆ ಗಳಗಳನೆ ಅತ್ತ ರಾಖಿ ಸಾವಂತ್, ಹೊಸ ಬಾಯ್ ಫ್ರೆಂಡ್ ಹೈರಾಣ

     

    View this post on Instagram

     

    A post shared by Milana Nagaraj (@milananagaraj)

    `ನಮ್ ದುನಿಯಾ ನಮ್ ಸ್ಟೈಲ್‌ʼ, `ಚಾರ್ಲಿ’, `ಲವ್ ಮಾಕ್ಟೈಲ್’, `ಲವ್ ಮಾಕ್ಟೈಲ್‌ 2′ ಚಿತ್ರದ ನಂತರ `ಲವ್ ಬರ್ಡ್ಸ್’ ಚಿತ್ರದ ಮೂಲಕ ಮತ್ತೆ ಐದನೇ ಬಾರಿಗೆ ತೆರೆಯ ಮೇಲೆ ಕೃಷ್ಣ ಮತ್ತು ಮಿಲನಾ ಜೋಡಿ ಒಂದಾಗುತ್ತಿದೆ. ಒಟ್ನಲ್ಲಿ ನೆಚ್ಚಿನ ಜೋಡಿಯ ಖುಷಿ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.