Tag: Darshan Gowda

  • PSI ನೇಮಕಾತಿಯಲ್ಲಿ ಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

    PSI ನೇಮಕಾತಿಯಲ್ಲಿ ಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

    ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಲೆಕ್ಷನ್ ಲಿಸ್ಟ್‌ನಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

    ಪಿಎಸ್‌ಐ ನೇಮಕಾತಿ ಪರೀಕ್ಷೆಯ ಆಯ್ಕೆ ಪಟ್ಟಿಯಲ್ಲಿ ಫಸ್ಟ್‌ ರ‍್ಯಾಂಕ್‌ ಬಂದಿದ್ದ ಮಾಗಡಿ ತಾಲ್ಲೂಕಿನ ನಿವಾಸಿ ಜೆ.ಕುಶಾಲ್‌ಕುಮಾರ್ ನನ್ನು ಪೊಲೀಸರು ಬಂಧಿಸಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಫೈಟ್‍ನಲ್ಲಿ ಟ್ವಿಸ್ಟ್ – ಕಾಂಗ್ರೆಸ್, ಜೆಡಿಎಸ್ ಮಧ್ಯೆ ‘ಆತ್ಮಸಾಕ್ಷಿ’ ಫೈಟ್

    ಬಂಧಿತ ಆರೋಪಿ ಪ್ರಮುಖ ರಾಜಕಾರಣಿಯೊಬ್ಬರ ಮಗ ಎನ್ನಲಾಗಿದೆ. ಈತ 200 ಅಂಕಗಳಿಗೆ 168 ಅಂಕ ಪಡೆಯುವ ಮೂಲಕ 545 ಅಭ್ಯರ್ಥಿಗಳ ಆಯ್ಕೆಯಪಟ್ಟಿಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ. ಈತ ಪ್ರಮುಖ ಆರೋಪಿ ದರ್ಶನ್‌ಗೌಡ ಜೊತೆ ಸ್ನೇಹ ಹೊಂದಿದ್ದ. ಇಂದು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

    ಪಿಎಸ್‌ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್ ಗೌಡನನ್ನು ಈಚೆಗಷ್ಟೇ ಪೊಲೀಸರು ಬಂಧಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್‌ಸ್ಟೇಬಲ್‌ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 3 ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆಗಳು ಬರುತ್ತಿದೆ: ಮುತಾಲಿಕ್

    ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬೆಂಗಳೂರಿನ ರಾಮಮೂರ್ತಿನಗರ, ಕೋರಮಂಗಲ ಠಾಣೆ, ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರತ್ಯೇಕ ಕೇಸ್ ದಾಖಲಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

  • ಪಿಎಸ್‍ಐ ಹಗರಣ – ಆರೋಪಿ ದರ್ಶನ್ ಗೌಡ ಅರೆಸ್ಟ್

    ಪಿಎಸ್‍ಐ ಹಗರಣ – ಆರೋಪಿ ದರ್ಶನ್ ಗೌಡ ಅರೆಸ್ಟ್

    ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ.

    ಪಿಎಸ್‍ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್‍ಗೌಡನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್‌ಸ್ಟೇಬಲ್‌ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್‍ನನ್ನು ಬಂಧಿಸಿದ್ದಾರೆ.

    ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬೆಂಗಳೂರಿನ ರಾಮಮೂರ್ತಿನಗರ, ಕೋರಮಂಗಲ ಠಾಣೆ, ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರತ್ಯೇಕ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ:  PSI ಹಗರಣದಲ್ಲಿ ಸಚಿವರ ಹೆಸರು ಥಳಕು – 80 ಲಕ್ಷ ಲಂಚ ಪಡೆದಿದ್ರಾ ಅಶ್ವತ್ಥ್ ನಾರಾಯಣ್ ಸಹೋದರ?

    ಪರೀಕ್ಷೆಯಲ್ಲಿ 9ನೇ ರ‍್ಯಾಂಕ್ ಪಡೆದಿದ್ದ ದರ್ಶನ್ ಗೌಡ ಈ ಹಿಂದಿನ ವಿಚಾರಣೆಯಲ್ಲಿ ಸಚಿವ ಅಶ್ವಥ್ ನಾರಾಯಯಣ ಸಹೋದರ ಸತೀಶ್ ಅವರ ಹೆಸರನ್ನು ಹೇಳಿದ್ದ ಎಂದು ವರದಿಯಾಗಿತ್ತು. ಈ ವಿಚಾರ ಬೆಳಕಿಗೆ ಬಂದಂತೆ ಕಾಂಗ್ರೆಸ್ ನಾಯಕರು ಅಶ್ವಥ್ ನಾರಾಯಣ ಮೇಲೆ ಮುಗಿಬಿದ್ದು ಟೀಕೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ