ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯ ವೈಭವವನ್ನು ಕೋಟ್ಯಂತರ ಜನರು ಕಣ್ತುಂಬಿಕೊಂಡರು. ಚಿನ್ನದಂಬಾರಿ ಹೊತ್ತು ಗಜಪಡೆ ಕ್ಯಾಪ್ಟನ್ ಅಭಿಮನ್ಯು ‘ರಾಜಪಥ’ದಲ್ಲಿ ಹೆಜ್ಜೆ ಹಾಕಿದ. ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು..












ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯ ವೈಭವವನ್ನು ಕೋಟ್ಯಂತರ ಜನರು ಕಣ್ತುಂಬಿಕೊಂಡರು. ಚಿನ್ನದಂಬಾರಿ ಹೊತ್ತು ಗಜಪಡೆ ಕ್ಯಾಪ್ಟನ್ ಅಭಿಮನ್ಯು ‘ರಾಜಪಥ’ದಲ್ಲಿ ಹೆಜ್ಜೆ ಹಾಕಿದ. ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು..












– ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ
– 750 ಕೆ.ಜಿ ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು
– ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ
ಮೈಸೂರು: ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿತು. ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.

750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಅರಮನೆ ಆವರಣದಲ್ಲಿ ಅಭಿಮನ್ಯು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಸರ್ವಾಲಂಕಾರ ಭೂಷಿತಳಾಗಿ ನಾಡ ಅಧಿದೇವತೆ ಚಾಮುಂಡೇಶ್ವರಿ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದನ್ನು ಕಂಡು ಜನರು ಹರ್ಷೋದ್ಘಾರ ವ್ಯಕ್ತಪಡಿಸಿದರು. ‘ಜೈ ಚಾಮುಂಡೇಶ್ವರಿ..’ ಎಂದು ಕೂಗಿ ಭಕ್ತಿ-ಭಾವ ಮೆರೆದರು. ಇದನ್ನೂ ಓದಿ: ದಸರಾ ಸಂಭ್ರಮದ ನಡುವೆ ವರುಣ ಎಂಟ್ರಿ – ಮಳೆಯ ನಡುವೆಯೂ ಜನರ ಸಂಭ್ರಮ
ಸತತ 5ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಪುಷ್ಪಾರ್ಚನೆ ಸ್ಥಳಕ್ಕೆ ಸುಮಾರು 400 ಮೀ. ಸಾಗಿದ. ಅಭಿಮನ್ಯು ಎಡಬಲದಲ್ಲಿ ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದವು. ಸಂಜೆ 5:02 ಕ್ಕೆ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ ಜಂಬೂಸವಾರಿಗೆ (Jamboo Savari) ಸಿಎಂ ಸಿದ್ದರಾಮಯ್ಯ (Siddaramaiah) ಪುಷ್ಪಾರ್ಚನೆ ಮಾಡಿದರು. ಅರ್ಧ ಗಂಟೆ ತಡವಾಗಿ ಪುಷ್ಪಾರ್ಚನೆ ನೆರವೇರಿಸಲಾಯಿತು. ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಸಾಥ್ ನೀಡಿದರು. ಪುಷ್ಪಾರ್ಚನೆ ಬಳಿಕ ರಾಷ್ಟ್ರಗೀತೆಗೆ ಎಲ್ಲರೂ ಗೌರವ ಸಲ್ಲಿಸಿದರು.
ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಸಾಗಿದ್ದಾನೆ. ನೌಫತ್ ಆನೆಯಾಗಿ ಗೋಪಿ ಹೆಜ್ಜೆ ಹಾಕಿದ್ದಾನೆ. ಮೆರವಣಿಗೆಯುದ್ಧಕ್ಕೂ ಜಾನಪದ ಕಲಾತಂಡಗಳ ವೈಭವ ಸಾಗಿದೆ. 50ಕ್ಕೂ ಹೆಚ್ಚು ಸ್ತಬ್ದಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಉತ್ತರ ದ್ವಾರದ ಮೂಲಕ ತೆರಳಿರುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪ ಪಂಜಿನ ಕವಾಯತು ಮೈದಾನ ತಲುಪಲಿದೆ. ಇದನ್ನೂ ಓದಿ: Mysuru Dasara| ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

– 5ನೇ ಬಾರಿಗೆ ಚಿನ್ನದಂಬಾರಿ ಹೊರಲಿದ್ದಾನೆ ಅಭಿಮನ್ಯು
– ಜಂಬೂಸವಾರಿ ಮೆರವಣಿಗೆಯಲ್ಲಿ 52 ಕಲಾತಂಡಗಳು ಭಾಗಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದಂಬಾರಿಯಲ್ಲಿ ವಿರಾಜಮಾನವಾಗಿ ಮೆರವಣಿಗೆ ಸಾಗುವ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ಕಾತರರಾಗಿದ್ದಾರೆ. ಜೊತೆಗೆ ಜಂಬೂಸವಾರಿ (Jamboo Savari) ಮೆರವಣಿಗೆ ಸೊಬಗನ್ನು ನೋಡಲು ದೇಶ-ವಿದೇಶದ ಪ್ರವಾಸಿಗರು ಕಾದಿದ್ದಾರೆ.
ಶನಿವಾರ ಜರುಗುವ ಅದ್ದೂರಿ ಜಂಬೂಸವಾರಿ ಮೆರವಣಿಗೆ ಹೇಗಿರುತ್ತೆ? ವಿಶೇಷತೆಗಳೇನು? ವಿಜಯದಶಮಿಯ ಪ್ರಮುಖ ದಿನದಂದು ಏನೇನು ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.. ಇದನ್ನೂ ಓದಿ: Mysuru Dasara | ಜಂಬೂ ಸವಾರಿ ರೂಟ್ ಮ್ಯಾಪ್ ಹೇಗಿದೆ?

ನಂದಿಧ್ವಜ ಪೂಜೆ
ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ನೀಡುವುದು ಪದ್ಧತಿ. ಅದರಂತೆ ಶನಿವಾರ ಮಧ್ಯಾಹ್ನ 1:41 ರಿಂದ 2:10 ರ ವರೆಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿಧ್ವಜ ಪೂಜೆ ನೆರವೇರಿಸಿ ಚಾಲನೆ ಕೊಡಲಿದ್ದಾರೆ. ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಕೆ ಆಗಲಿದೆ. ಬಳಿಕ ನಂದಿಧ್ವಜವನ್ನು ಹಿಡಿದು ಕಲಾವಿದರು ಜಂಬೂಸವಾರಿ ಮೆರವಣಿಗೆ ಜೊತೆಗೆ ಸಾಗಲಿದ್ದಾರೆ. ಜಂಬೂಸವಾರಿಗೆ ಮೆರವಣಿಗೆಯಲ್ಲಿ ಮೊದಲು ಸಾಗುವುದೇ ನಂದಿಧ್ವಜ ಕಲಾತಂಡ.
ಜಂಬೂಸವಾರಿ ಮೆರವಣಿಗೆ
ನಂದಿಧ್ವಜ ಪೂಜೆ ಬಳಿಕ ಇತ್ತ ಅರಮನೆ ಒಳಗಡೆ ಚಿನ್ನದಂಬಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಶನಿವಾರ ಸಂಜೆ 4 ರಿಂದ 4:30ರ ವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆ ಆವರಣದಲ್ಲಿ ಅಭಿಮನ್ಯು ಹೊರುವ 750 ಕೆಜಿ ತೂಕದ ಚಿನ್ನದಂಬಾರಿಯಲ್ಲಿ ವಿರಾಜಮಾನಗೊಂಡ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುವುದು. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಹಾಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್, ಮೈಸೂರು ಜಿಲ್ಲಾಧಿಕಾರಿ ಪಾಲ್ಗೊಳ್ಳಲಿದ್ದಾರೆ. ಅರಮನೆ ಆವರಣದಲ್ಲಿ ಗಣ್ಯರು, ಆಹ್ವಾನಿತರು, ಗೋಲ್ಡ್ ಕಾರ್ಡ್, ಟಿಕೆಟ್ ಇರುವವರಿಗೆ ಆಸನ ವ್ಯವಸ್ಥೆ ಇರಲಿದೆ. ಅರಮನೆಯಿಂದ ಬನ್ನಿಮಂಟಪದ ವರೆಗೆ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಲಿದೆ. ಇದನ್ನೂ ಓದಿ: ದಸರಾ ಸಂಭ್ರಮದಲ್ಲಿದ್ದ ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

52 ಕಲಾತಂಡ ಭಾಗಿ
ಜಂಬೂಸವಾರಿ ಮೆರವಣಿಗೆಯಲ್ಲಿ ನಾದಸ್ವರ, ವೀರಗಾಸೆ, ಕಂಸಾಳೆ, ಕೋಲಾಟ, ತಮಟೆ ನಗಾರಿ, ಯಕ್ಷಗಾನ, ಹಲಗೆ ಮೇಳ, ಕಣಿ ವಾದನ, ಹೂವಿನ ನೃತ್ಯ, ಹೆಜ್ಜೆ ಮೇಳ, ಚಿಟ್ ಮೇಳ, ಡೊಳ್ಳು ಕುಣಿತ, ಕೀಲು ಕುದುರೆ, ಬೊಂಬೆಗಳ ವೇಷ ಮೊದಲಾದ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಒಟ್ಟು 52 ಕಲಾತಂಡಗಳು ಭಾಗಿಯಾಗಲಿವೆ. ಪೊಲೀಸ್ ತುಕಡಿಗಳು, ಸ್ತಬ್ದಚಿತ್ರಗಳು, ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯು 5 ಕಿಮೀ ಸಾಗಿ ಬನ್ನಿಮಂಟಪಕ್ಕೆ ತಲುಪಲಿದೆ.
ಮೆರವಣಿಗೆ ಸಾಗುವ ಮಾರ್ಗ
ದಸರಾ ಜಂಬೂಸವಾರಿ ಮೆರವಣಿಗೆಯು ಅರಮನೆಯ ಬಲರಾಮ ದ್ವಾರದಿಂದ ಹೊರಟು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಕೆ.ಆರ್.ಆಸ್ಪತ್ರೆ, ಬಂಬೂಬಜಾರ್, ಹೈವೇ ವೃತ್ತದ ಮೂಲಕ ಸಾಗುತ್ತದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಮೆರವಣಿಗೆ ಕೊನೆಗೊಳ್ಳಲಿದೆ. ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿರುತ್ತಾರೆ. ಕಲಾತಂಡಗಳು ಹಾಗೂ ಗಜಪಡೆ, ಚಿನ್ನದಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಇದನ್ನೂ ಓದಿ: ನವರಾತ್ರಿಯ 9ನೇ ದಿನ ಆಯುಧ ಪೂಜೆ – ಖಾಸಾ ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ

ಜಂಬೂಸವಾರಿ ಮೆರವಣಿಗೆ ಮುನ್ನಡೆಸುತ್ತಾನೆ ‘ಧನಂಜಯ’
ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆ ಮುನ್ನಡೆಸುವ ಜವಾಬ್ದಾರಿಯನ್ನು ಧನಂಜಯ ಆನೆ ನಿಭಾಯಿಸಲಿದೆ. ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಎಲ್ಲರಿಗಿಂತ ಮುಂಚೂಣಿಯಲ್ಲಿ ಧನಂಜಯ ಸಾಗಲಿದ್ದಾನೆ. ಕಳೆದ ವರ್ಷ ದಸರಾದಲ್ಲಿ ನಿಶಾನೆ ಆನೆಯಾಗಿ ಅರ್ಜುನ ಮೆರವಣಿಗೆ ಮುನ್ನಡೆಸಿದ್ದ. ಆದರೆ ಅರ್ಜುನನ ಅಕಾಲಿಕ ಸಾವಿನಿಂದಾಗಿ, ಆ ಜವಾಬ್ದಾರಿಯನ್ನು ಈ ಬಾರಿ ಧನಂಜಯನಿಗೆ ಹೊರಲಿಸಲಾಗಿದೆ.
5ನೇ ಬಾರಿ ಚಿನ್ನದಂಬಾರಿ ಹೊರುತ್ತಾನೆ ಅಭಿಮನ್ಯು
ನಾಳೆ ನಡೆಯಲಿರುವ ವಿಜಯದಶಮಿ ಜಂಬೂಸವಾರಿಯಲ್ಲಿ ಅಭಿಮನ್ಯು ಚಿನ್ನದ ಅಂಬಾರಿ ಹೊರಲಿದ್ದಾನೆ. ಅಭಿಮನ್ಯುವಿನ ಎಡಬಲದಲ್ಲಿ ಹಿರಣ್ಯ ಹಾಗೂ ಲಕ್ಷ್ಮಿ ಕುಮ್ಕಿ ಆನೆಗಳಾಗಿ ಸಾಥ್ ನೀಡಲಿವೆ. ನೌಫತ್ ಆನೆಯಾಗಿ ಗೋಪಿ ಸಾಗಲಿದ್ದಾನೆ. ಇದನ್ನೂ ಓದಿ: ಮೈಸೂರು ದಸರಾ – ನಾಡದೇವಿ ಚಾಮುಂಡಿಯ ಅಂಬಾರಿಯ ಇತಿಹಾಸ

ಅಭಿಮನ್ಯು ಆನೆ ಬಗ್ಗೆ ಒಂದಷ್ಟು ಮಾಹಿತಿ
ಅಭಿಮನ್ಯು ಆನೆಯನ್ನು 1970ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಯಿತು. ಅಭಿಮನ್ಯುವಿನ ವಿಶೇಷ ಗುಣವೆಂದರೆ, ಕಾಡಾನೆಗಳನ್ನು ಸೆರೆ ಹಿಡಿಯುವ, ಪಳಗಿಸುವ ಮತ್ತು ಚಿಕಿತ್ಸೆ ನೀಡುವ ಕೆಲಸದಲ್ಲಿ ಸಾಮರ್ಥ್ಯವನ್ನು ಹೊಂದಿರುತ್ತದೆ. ಅಭಿಮನ್ಯು ಈವರೆಗೆ ಸುಮಾರು 140 ರಿಂದ 150 ಕಾಡಾನೆಗಳನ್ನು, 40 ರಿಂದ 50 ಹುಲಿಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾನೆ. 2012ರಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, 2015ರ ವರೆಗೂ ನಾಡಹಬ್ಬ ಮೈಸೂರು ದಸರಾದಲ್ಲಿ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿಯನ್ನು ಎಳೆಯುವ ಜವಾಬ್ದಾರಿ ನಿವರ್ಹಿಸಿದ್ದಾನೆ. ಕಳೆದ 4 ವರ್ಷಗಳಿಂದ ಚಿನ್ನದ ಅಂಬಾರಿಯನ್ನು ಹೊಂದಿರುವ ಜವಾಬ್ದಾರಿಯುತ ಕೆಲಸ ನಿರ್ವಹಿಸುತ್ತಿದ್ದಾನೆ ಅಭಿಮನ್ಯು. ಈ ಬಾರಿಯ ದಸರಾದಲ್ಲಿ 5ನೇ ಸಲ ಚಿನ್ನದಂಬಾರಿ ಹೊರಲು ಅಭಿಮನ್ಯು ಸಜ್ಜಾಗಿದ್ದಾನೆ.

ಪಂಜಿನ ಕವಾಯತು ಆಕರ್ಷಣೆ
ಜಂಬೂಸವಾರಿ ಪೂರ್ಣಗೊಂಡ ಬಳಿಕ ಬನ್ನಿಮಂಟಪ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತಿನಲ್ಲಿ ಬೈಕ್‌ಗಳಲ್ಲಿ ವಿವಿಧ ಸ್ಟಂಟ್‌ಗಳ ಪ್ರದರ್ಶನ ಇರಲಿದೆ. ಬೈಕ್ ಸ್ಟಂಟ್‌ಗಳು ಮೈ ಜುಮ್ಮೆನಿಸುವಂತಿರುತ್ತದೆ. ಬೈಕ್‌ಗಳಲ್ಲಿ ಸಿಬ್ಬಂದಿ ನಿಂತು ಪಿರಮಿಡ್ ಮಾದರಿಯಲ್ಲಿ ಸಾಗುತ್ತಾರೆ. ಫೈರ್ ಜಂಪ್, ಶ್ವೇತ ಅಶ್ವ ಜಂಪ್, ಟ್ಯೂಬ್ ಲೈಟ್ ಜಂಪ್, ಸರ್ಕಲ್ ಎಕ್ಸ್‌ಸೈಜ್, ಓಪನಿಂಗ್ ಕ್ರಾಸಿಂಗ್, ಪ್ಯಾರಲ್ ಕ್ರಾಸಿಂಗ್, ಗ್ರೂಪ್ ಈವೆಂಟ್ ಸೇರಿದಂತೆ ವಿವಿಧ ಕಸರತ್ತು ಪ್ರದರ್ಶನ ಇರಲಿದೆ. ಇದನ್ನೂ ಓದಿ: ರಾಜ, ರಾಜಕಾರಣಿಯಾಗಿ ಮೈಸೂರು ದಸರಾದಲ್ಲಿ ಭಾಗಿ – ಪರಂಪರೆ ಮುಂದುವರಿಸಿದ ಯದುವೀರ್
ಮೈ ಜುಮ್ಮೆನಿಸೋ ಸ್ಟಂಟ್
ಬುಲೆಟ್ ಮೇಲೆ ನಿಂತು, ಮಲಗಿ ಸಾಗುವುದು, ಬೈಕ್ ಚಲಿಸುವಾಗಲೇ ಅದರ ಸೀಟ್ ಮೇಲೆ ಮಲಗಿ ಈಜಾಡುವಂತೆ ಮಾಡುವುದು, ಚಲಿಸುವ ಬೈಕ್ ಮೇಲೆ ನಿಂತು ಸೆಲ್ಯೂಟ್ ಹೊಡೆಯುವುದು, ಬೈಕ್ ಚಲಿಸುವಾಗಲೇ ಏಣಿ ಏರುವುದು ಹೀಗೆ ಹಲವಾರು ಸ್ಟಂಟ್‌ಗಳು ಇರಲಿವೆ. ಇದರ ಜೊತೆಗೆ ವಿವಿಧ ಕಲಾತಂಡಗಳಿಂದ ನೃತ್ಯ ಪ್ರದರ್ಶನ ಕೂಡ ನಡೆಯಲಿದೆ.

– ಮೈನವಿರೇಳಿಸುವ ಬೈಕ್ ಸಾಹಸ.. ನಿಬ್ಬೆರಗಾಗಿಸುವ ಅಶ್ವರೋಹಿ ಪಡೆ.. ಆಕಾಶದಲ್ಲಿ ಚುಕ್ಕೆ ಚಿತ್ರ ಚಮತ್ಕಾರ
ಮೈಸೂರು: ಮೈನವಿರೇಳಿಸುವ ಬೈಕ್ ಸಾಹಸ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ನೂರಾರು ಕಲಾವಿದರ ಚಿತ್ತಾಕರ್ಷಕ ನೃತ್ಯ ವೈಭವದ ಸಂಗಮ ಮೈಸೂರು ದಸರಾಗೆ ವರ್ಣರಂಜಿತ ತೆರೆ ಎಳೆಯಿತು.

ಆಕಾಶದಲ್ಲಿ ಮೂಡಿದ ‘ಹ್ಯಾಪಿ ದಸರಾ’ ಸಾಲು, ಕರ್ನಾಟಕ ಮ್ಯಾಪ್, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಕೃತಿ, ಗಂಡುಬೇರುಂಡ ಚಿತ್ರ, ಮೈಸೂರು ಅರಮನೆ, ಚಾಮುಂಡಿಬೆಟ್ಟದ ನಂದಿ, ದಸರಾ ಅಂಬಾರಿ.. ಚುಕ್ಕಿ ಬೆಳಕಿನ ಚಿತ್ರಗಳು ನೋಡುಗರಿಗೆ ಮನಸ್ಸಿಗೆ ಮುದ ನೀಡಿದವು. ಕೊನೆಯಲ್ಲಿ ‘ಸಿ ಯು ಇನ್ 2024’ (2024 ಕ್ಕೆ ಮತ್ತೆ ಭೇಟಿಯಾಗೋಣ) ಸಾಲು, ಅಯ್ಯೋ.. ಇಷ್ಟು ಬೇಗ ದಸರಾ ಮುಗಿಯಿತೇ!? ಮತ್ತೆ ಬೇಗ ದಸರಾ ಬರಲಿ ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡಿತು. ಇದನ್ನೂ ಓದಿ: ಬರದ ನಡುವೆಯೂ ಬತ್ತದ ಜನೋತ್ಸಾಹ; ಲಕ್ಷಾಂತರ ಮಂದಿ ಸಾಕ್ಷಿಯಾದ ದಸರಾಗೆ ತೆರೆ

ಜಂಬೂಸವಾರಿ ಬಳಿಕ ಮೈಸೂರಿನ ಬನ್ನಿಮಂಟಪದಲ್ಲಿ ಕಂಡುಬಂದ ದೃಶ್ಯಗಳಿವು. ಬನ್ನಿಮಂಟಪದಲ್ಲಿ ನಡೆದ ಪಂಚಿನ ಕವಾಯತು ಮೂಲಕ ಈ ಬಾರಿ ದಸರಾಗೆ ತೆರೆ ಎಳೆಯಲಾಯಿತು. ಜಂಬೂಸವಾರಿಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ್ದ ಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಅವರಿಗೆ ಪೊಲೀಸ್ ಇಲಾಖೆ ಗೌರವ ವಂದನೆ ಸಲ್ಲಿಸಿತು.

ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಟೆಂಟ್ ಪೆಗ್ಗಿಂಗ್, ಶ್ವೇತಾಶ್ವ ಪಡೆಯ ಬೈಕ್ ಸ್ಟಂಟ್‌ಗೆ ಮೈಸೂರಿಗರು ಮನಸೋತರು. ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಅಶ್ವಾರೋಹಿ ದಳ ಸೇರಿದಂತೆ ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನದ ಜೊತೆಗೆ ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಯಿತು. 300 ಜನ ಕಲಾವಿದರು ನೃತ್ಯ ಪ್ರದರ್ಶನ ಮಾಡಿದರು. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನಿಂದ ಅಮೋಘ ನೃತ್ಯ ಪ್ರದರ್ಶನ ಕೂಡ ನಡೆಯಿತು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು
ಅಂತಿಮವಾಗಿ ಪಂಜು ಹಿಡಿದು ಚಿತ್ತಾಕರ್ಷಕ ಆಕೃತಿಗಳನ್ನ ಮೂಡಿಸುವ ಮೂಲಕ ಪೊಲೀಸರ ತಂಡ ಪಂಜಿನ ಕವಾಯತು ತಾಲೀಮು ಮುಗಿಸಿದರು. ಇನ್ನೂ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸಚಿವ ಕೆ. ವೆಂಕಟೇಶ್ ಸೇರಿದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ (Dasara Jamboo Savari) ಮೆರವಣಿಗೆಗೆ ಇಂದು (ಮಂಗಳವಾರ) ಚಾಲನೆ ನೀಡಲಾಯಿತು. ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಐತಿಹಾಸಿಕ ದಸರಾ ವೈಭವ ಕಳೆಗಟ್ಟಿತ್ತು. ಅರಮನೆಯಲ್ಲಿ ರಾಜವೈಭೋಗ ಮರುಕಳಿಸಿತ್ತು. ಮಂಗಳವಾರ ಸಂಜೆ 4.40 ರಿಂದ 5 ಗಂಟೆಯ ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಅಂಬಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಈ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar), ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ (H.C.Mahadevappa), ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್ ಶಿವಕುಮಾರ್ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಸಿಎಂಗೆ ಸಾಥ್ ನೀಡಿದರು. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?

ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವ ವೇಳೆ 21 ಕುಶಾಲತೋಪು ಸಿಡಿಸಲಾಯಿತು. ರಾಷ್ಟ್ರಗೀತೆ ವೇಳೆ ಜನರು ಎದ್ದು ನಿಂತು ಗೌರವ ಸಲ್ಲಿಸಿದರು. ಅಲ್ಲದೇ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 30 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಹೆಜ್ಜೆ ಹಾಕಿದ. ನೌಫತ್ ಮತ್ತು ಸಾಲಾನೆಗಳಾಗಿ ಭೀಮ, ಗೋಪಿ, ಧನಂಜಯ, ಮಹೇಂದ್ರ, ಪ್ರಶಾಂತ್ ಆನೆಗಳು ಸಾಗಿದವು. ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಜೊತೆ ಕುಮ್ಕಿ ಆನೆಗಳಾಗಿ ವಿಜಯಾ, ವರಲಕ್ಷ್ಮಿ ಸಾಗಿದವು.

ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡಿದವು. ರಾಜ್ಯದ ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಇಸ್ರೋ ಯಶಸ್ವಿ ಚಂದ್ರಯಾನ-3 ಯೋಜನೆಗೆ ಸಂಬಂಧಿಸಿದ ಸ್ತಬ್ಧಚಿತ್ರ ಗಮನ ಸೆಳೆಯಿತು. ಅಲ್ಲದೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧಚಿತ್ರ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು. ಜೊತೆಗೆ ಡೊಳ್ಳು ಕುಣಿತ, ವೀರಗಾಸೆ, ಪಟ ಕುಣಿತ ಹೀಗೆ ಅನೇಕ ಜನಪದ ಕಲಾತಂಡಗಳು ಮೆರವಣಿಗೆ ಉದ್ದಕ್ಕೂ ಸಾಗಿ ಜನರನ್ನು ರಂಜಿಸಿದವು. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರ
ಇದಕ್ಕೂ ಮುನ್ನ ಮಧ್ಯಾಹ್ನ 1:46 ರಿಂದ 2:08 ರ ವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿಸಲಾಯಿತು. ಅರಮನೆ ಬಲರಾಮ ದ್ವಾರಕ್ಕೆ ಐರಾವತ ಬಸ್‌ನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಂದಿಧ್ವಜ ಪೂಜೆ ನೆರವೇರಿಸಿದರು. ಪೂಜೆ ಬಳಿಕ ಸಿಎಂ ಹಾಗೂ ಡಿಸಿಎಂಗೆ ಕಲಾವಿದ ರಾಜೇಶ್ ವಿಶೇಷ ಗಿಫ್ಟ್ ನೀಡಿದರು. ಸಿಎಂಗೆ 3ಡಿ ಪಂಚಲೋಹದ ರಾಕೇಶ್ ಸಿದ್ದರಾಮಯ್ಯ ಭಾವಚಿತ್ರ ಹಾಗೂ ಡಿಸಿಎಂಗೆ ತಂದೆ ಕೆಂಪೇಗೌಡರ ಭಾವಚಿತ್ರ ಉಡುಗೊರೆ ನೀಡಲಾಯಿತು. ನಂದಿಧ್ವಜ ಪೂಜೆ ಬಳಿಕ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆಗೆ ಸಿಎಂ ಚಾಲನೆ ನೀಡಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]