Tag: DATIA

  • ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳಲ್ಲಿ ಓರ್ವ ಬಿಜೆಪಿ ನಾಯಕನ ಮಗ!

    ಭೋಪಾಲ್: ಮಧ್ಯ ಪ್ರದೇಶದ (Madhya Pradesh) ದತಿಯಾ (Datia) ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ (Student) ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿ, ಆಕೆಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮಧ್ಯಪ್ರದೇಶ ಬಿಜೆಪಿ ನಾಯಕನ (BJP Leader) ಮಗನೂ ಸೇರಿದ್ದಾನೆ ಎಂದು ವರದಿಗಳು ತಿಳಿಸಿವೆ.

    ಘಟನೆಯ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಳ್ಳಲು ಯತ್ನಿಸಿದ್ದು, ಆಕೆಯನ್ನು ಆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾಗಿದ್ದು, ಸಂತ್ರಸ್ತರ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಸಿಟ್ಟಿನಿಂದ ಮಾವನನ್ನು ಗೋಡೆಗೆ ತಳ್ಳಿ ಕೊಂದ ಅಳಿಯ!

    ಸಂತ್ರಸ್ತ ವಿದ್ಯಾರ್ಥಿನಿಯರು ಅಲ್ಲದೇ ನಾಲ್ವರು ಆರೋಪಿಗಳು ಸಹ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸಂಬಂಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ವಿಚ್ಛೇದನಕ್ಕೆ ಒಪ್ಪದ ಪತ್ನಿಯ ಕೊಲೆಗೆ ಸ್ಕೆಚ್- ಅಪಘಾತಕ್ಕೆ ಯತ್ನಿಸಿ ಸಿಕ್ಕಿಬಿದ್ದ ಪತಿ

    ಅತ್ಯಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂಗಿ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾಳೆ. ಆಕೆ ನೀಡಿದ ದೂರಿನಲ್ಲಿ, ನಾನು ಮತ್ತು ನನ್ನ ಅಕ್ಕನನ್ನು ನಾಲ್ವರು ಆರೋಪಿಗಳು ಅಪಹರಿಸಿ ಅವರ ಮನೆಗೆ ಕರೆದೊಯ್ದು ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

    ಘಟನೆಯ ಬಳಿಕ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಮನೆಗೆ ಮರಳಿದ್ದು, ಅಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಆಕೆಯನ್ನು ನೆರೆಯ ಉತ್ತರ ಪ್ರದೇಶದ (Uttar Pradesh) ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತವರು ಮನೆ ಸೇರಿದ್ದ ಪತ್ನಿಯನ್ನು ಚುಚ್ಚಿ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]