Tag: dattajayanti

  • ಮುಸ್ಲಿಮರನ್ನು ಅವರಂತೆ ಹೆದರಿಸದಿದ್ರೆ ಜಗತ್ತಿನ ಎಲ್ಲಾ ಸಂಸ್ಕೃತಿಗಳು ನಾಶವಾಗಲಿವೆ: ಸಿ.ಟಿ ರವಿ

    ಮುಸ್ಲಿಮರನ್ನು ಅವರಂತೆ ಹೆದರಿಸದಿದ್ರೆ ಜಗತ್ತಿನ ಎಲ್ಲಾ ಸಂಸ್ಕೃತಿಗಳು ನಾಶವಾಗಲಿವೆ: ಸಿ.ಟಿ ರವಿ

    – ದತ್ತ ಮಾಲಾಧಾರಣೆ ಮಾಡಿದ ನೂರಾರು ಭಕ್ತರು

    ಚಿಕ್ಕಮಗಳೂರು: ಕಾಫಿನಾಡಲ್ಲಿ (Chikkamagaluru) ಇಂದಿನಿಂದ ದತ್ತಜಯಂತಿ (Dattajayanti) ಸಂಭ್ರಮ ಮನೆ ಮಾಡಿದ್ದು, ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಸಚಿವ ಸಿ.ಟಿ ರವಿ (C.T Ravi) ದತ್ತ ಮಾಲಾಧಾರಣೆ (Dattamala )ಮಾಡಿದ್ದಾರೆ.

    ಸಿ.ಟಿ ರವಿಯವರ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ 100ಕ್ಕೂ ಹೆಚ್ಚು ದತ್ತ ಭಕ್ತರಿಂದ ಮಾಲಾಧಾರಣೆ ಮಾಡಲಾಗಿದೆ. ಇಂದಿನಿಂದ 9 ದಿನಗಳ ಕಾಲ ವ್ರತದಲ್ಲಿ ಇರುವ ದತ್ತಭಕ್ತರು, ಡಿಸೆಂಬರ್ 14 ರಂದು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಮಾಡಲಿದ್ದಾರೆ. 12ರಂದು ಅನಸೂಯ ಜಯಂತಿ, 13 ರಂದು ಬೃಹತ್ ಶೋಭಾಯಾತ್ರೆ ನಡೆಯಲಿದೆ. 14 ರಂದು 25,000ಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ಮಾಡಲಿದ್ದಾರೆ.

    ಮಾಲಾಧಾರಣೆ ಬಳಿಕ ಮಾತಾಡಿದ ಸಿ.ಟಿ ರವಿಯವರು, ರಾಜ್ಯದ ಉದ್ದಗಲಕ್ಕೂ ವಕ್ಫ್ ಬೋರ್ಡ್ ಗಲಾಟೆ ಇದೆ. ವಕ್ಫ್ ಬೋರ್ಡಿಗೆ ಕಾಫಿನಾಡಲ್ಲಿ ಮೊದಲ ಬಲಿಯೇ ದತ್ತಪೀಠ, ದತ್ತಾತ್ರೇಯ ದೇವರು. 1973-74ರಲ್ಲಿ ಮೂಲ ದಾಖಲೆ ಪರಿಶೀಲಿಸದೆ ದತ್ತಪೀಠವನ್ನೂ ಸೇರಿಸಿ ವಕ್ಫ್ ಬೋರ್ಡ್ ಗೆಜೆಟ್ ನೋಟಿಫಿಕೇಶನ್ ಮಾಡಿದ್ದರು. ದತ್ತಪೀಠವನ್ನ ಉಳಿಸಿಕೊಳ್ಳಲು ಜನಾಂದೋಲನ ಮಾಡಿ, ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಯಿತು. ಜನಾಂದೋಲನ ಪ್ರಭಾವ ಬೀರಿದೆ, ನ್ಯಾಯಾಲಯದ ಹೋರಾಟದಲ್ಲಿ ಅರ್ಧ ನ್ಯಾಯ ಸಿಕ್ಕಿದೆ. ಬಾಂಗ್ಲಾ ಬೆಳವಣಿಗೆ ಗಮನಿಸಿದ್ರೆ ಇಸ್ಲಾಂ ಡಿಎನ್‍ಎಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಡ ಎಂಬಂತೆ ಇದೆ ಎಂದಿದ್ದಾರೆ.

    ಇಸ್ಲಾಂ ಹೆಸರಿನ ಕ್ರೌರ್ಯ, ನರಮೇಧ, ಸಂಸ್ಕೃತಿ ನಾಶಕ್ಕೆ ಸಾಕ್ಷಿ ಬೇಕಿಲ್ಲ. ಅವರನ್ನು ಅವರದ್ದೇ ರೀತಿಯಲ್ಲಿ ಹೆದರಿಸದೇ ಇದ್ದರೆ ಜಗತ್ತಿನ ಎಲ್ಲಾ ಸಂಸ್ಕೃತಿ, ಪರಂಪರೆ, ಭಾಷೆ ನಾಶವಾಗುತ್ತದೆ. ಬಾಂಗ್ಲಾದಲ್ಲಿ 90% ರಷ್ಟು ಮುಸ್ಲಿಮರು ಎಂದು ಹೇಳುತ್ತಿದ್ದಾರೆ. ನೂರು ವರ್ಷಗಳ ಹಿಂದೆ 1% ಮುಸ್ಲಿಮರು ಇರಲಿಲ್ಲ. ಅಖಂಡ ಭಾರತದಲ್ಲೇ ಮುಸ್ಲಿಮರು ಇರಲಿಲ್ಲ ಎಂದಿದ್ದಾರೆ.

    ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಪೂಜೆ ನಡೆಯುವುದರಿಂದ 9 ದಿನಗಳ ಕಾಲ ಜಿಲ್ಲಾದ್ಯಂತ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಂಡಿದ್ದಾರೆ.

  • ದತ್ತಜಯಂತಿ – 4 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

    ದತ್ತಜಯಂತಿ – 4 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

    ಚಿಕ್ಕಮಗಳೂರು: ಮುಳ್ಳಯ್ಯನಗಿರಿ (Mullayanagiri) ಭಾಗದ ದತ್ತಪೀಠದಲ್ಲಿ (Dattapeeta) ದತ್ತಜಯಂತಿ (Dattajayanti) ಪ್ರಯುಕ್ತ ಡಿ.11 ರಿಂದ 14ರ ವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

    ಡಿ.11 ರ ಬೆಳಗ್ಗೆ 6 ಗಂಟೆಯಿಂದ ಡಿ.15ರ ಬೆಳಗ್ಗೆ 10 ಗಂಟೆವರೆಗೂ ಜಿಲ್ಲಾಡಳಿತ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ. ಈ ನಾಲ್ಕು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಂಪೂರ್ಣ ನಿರ್ಬಂಧ  ಹೇರಿದೆ.

    ದತ್ತಪೀಠದಲ್ಲಿ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ 9 ದಿನಗಳ ಕಾಲ ದತ್ತಜಯಂತಿ ನಡೆಯಲಿದೆ. ಅದರಲ್ಲಿ 12-13-14 ಈ ಮೂರು ದಿನಗಳು ಸೂಕ್ಷ್ಮ ದಿನಗಳು. ಈ ಮೂರು ದಿನವೂ ದತ್ತಪೀಠದಲ್ಲಿ ನಾನಾ ಕಾರ್ಯಕ್ರಮಗಳು ನಡೆಯಲಿವೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಪ್ರವಾಸಿಗರ ವಾಹನ ಹಾಗೂ ದತ್ತ ಮಾಲಾಧಾರಿಗಳ ವಾಹನಗಳಿಂದ ಟ್ರಾಫಿಕ್ ಜಾಮ್ ಆಗಿ ಸಮಸ್ಯೆ ಆಗಬಾರದು. ಅಲ್ಲದೇ ಭದ್ರತೆಯ ದೃಷ್ಠಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

    ಡಿ.12ರಂದು ಸಾವಿರಾರು ಮಹಿಳೆಯರು ನಗರದಲ್ಲಿ ಅನುಸೂಯ ಜಯಂತಿ, ದತ್ತಪೀಠದಲ್ಲಿ ಹೋಮ-ಹವನ ಮಾಡಲಿದ್ದಾರೆ. 13ರಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರು ಸೇರಿ 20,000ಕ್ಕೂ ಅಧಿಕ ಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. 14ರಂದು ರಾಜ್ಯದ ವಿವಿಧ ಭಾಗಗಳಿಂದ ಬರುವಂತಹ 25,000ಕ್ಕೂ ಅಧಿಕ ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಕಾರ್ಯಕ್ರಮ ಮುಗಿಯುವ ವರೆಗೂ 5,000ಕ್ಕೂ ಅಧಿಕ ಪೊಲೀಸರು ದತ್ತಪೀಠ ಸೇರಿ ಜಿಲ್ಲಾದ್ಯಂತ ಹದ್ದಿನ ಕಣ್ಣಿಡಲಿದ್ದಾರೆ.

    ಡಿ.15ರ ಭಾನುವಾರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಮುಕ್ತವಾಗಲಿದೆ.

  • ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

    ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

    ಚಿಕ್ಕಮಗಳೂರು: ದತ್ತಜಯಂತಿ (Dattajayanthi) ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ (CT Ravi) ಮನೆ ಮನೆಗೆ ತೆರಳಿ ಭಿಕ್ಷಾಟನೆ ಆರಂಭಿಸಿದ್ದಾರೆ.

    ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ಕಾರ್ಯ ನಡೆಯುತ್ತಿದೆ. ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ ಹಾಗೂ ಬೆಲ್ಲವನ್ನು ಸ್ಥಳೀಯರು ನೀಡಿದ್ದಾರೆ. ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ. ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ.

    ಇತ್ತ ಬಿಜೆಪಿ (BJP) ನಾಯಕರ ಹೆಸರಿಗೆ ಮುಸ್ಲಿಂ (Muslim) ಹೆಸರನ್ನು ಹಾಕಿ ಟ್ವೀಟ್ ಮಾಡ್ತಿರೋ ವಿಚಾರ ಸಂಬಂಧ ಕಾಂಗ್ರೆಸ್ ಟ್ವೀಟ್ ಗೆ ಸಿ.ಟಿ ರವಿ ವ್ಯಂಗ್ಯವಾಡಿದರು. ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ದರೆ ಕಾಂಗ್ರೆಸ್‍ನವರು ಖಂಡಿತಾ ಕರೆಯಲಿ. ನನ್ನ ಸ್ವಭಾವ ಕುಂಕುಮ ಕಂಡರೆ ಆಗದಿದ್ರೆ, ಕೇಸರಿ ನೋಡಿದ್ರೆ ಆಗದಿದ್ರೆ, ಮುಲ್ಲಾಗಳ ಮೇಲೆ ಪ್ರೀತಿ ಜಾಸ್ತಿ ಇದ್ರೆ ಖಂಡಿತಾ ಕರೆಯಬಹುದು. ನನ್ನ ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು ಎಂದರು.

    ನನ್ನ ಮುಲ್ಲಾ ಅಂತ ಕರೆದ್ರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ. ಪರ್ಷಿಯನ್ ಭಾಷೆಯನ್ನ ಆಡಳಿತ ಭಾಷೆಯನ್ನಾಗಿ ಮಾಡಿದವನನ್ನ ಕನ್ನಡ ಪ್ರೇಮಿ ಅಂತ ಹೇಳಕ್ಕಾಗುತ್ತಾ.? ಹಾಗೆ ಹೇಳಿದ್ರೆ ಅದಕ್ಕಿಂತ ಅಪಪ್ರಚಾರ ಬೇರೆ ಏನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ – ರಸ್ತೆಯುದ್ದಕ್ಕೂ ಮೊಳೆಗಳನ್ನು ಹಾಕಿದ ಕಿಡಿಗೇಡಿಗಳು

    ಮುಲ್ಲಾ ಅನ್ನೋ ಹೆಸರು ಯಾರಿಗೆ ಕನೆಕ್ಟ್ ಆಗುತ್ತೆ ಅಂದ್ರೆ, ಶಾದಿ ಭಾಗ್ಯ, ದೇ ಆರ್ ಆಲ್ ಮೈ ಬ್ರದರ್ಸ್ ಅನ್ನೋರಿಗೆ ಕನೆಕ್ಟ್ ಆಗುತ್ತೆ. ಬೆಂಕಿ ಹಾಕಿದ್ರು ಕೂಡ ಅಮಾಯಕರು ಅನ್ನೋರಿಗೆ ಕನೆಕ್ಟ್ ಆಗುತ್ತೆ. ಕೇಸರಿ, ಕುಂಕುಮವನ್ನ ದೂಡಿ ಟೋಪಿಯನ್ನ ಪ್ರೀತಿಯಿಂದ ಹಾಕಿಕೊಳ್ಳುವವರಿಗೆ ಕನೆಕ್ಟ್ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೆಸರೇಳದೆ ಸಿ.ಟಿ. ರವಿ ಕುಟುಕಿದರು.

    Live Tv
    [brid partner=56869869 player=32851 video=960834 autoplay=true]