Tag: Davanagere Court

  • ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಕಾಮುಕನಿಗೆ 21 ವರ್ಷ ಜೈಲು

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಕಾಮುಕನಿಗೆ 21 ವರ್ಷ ಜೈಲು

    ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು ಬಲಾತ್ಕಾರ ಮಾಡಿದ್ದ ವ್ಯಕ್ತಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ (Davanagere) ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್ ಸಿ-1 ನ್ಯಾಯಾಲಯ (Court) ಆದೇಶಿಸಿದೆ.

    ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸಂತೋಷ್ ಅಲಿಯಾಸ್ ಶಾಂತಕುಮಾರ್‌ (35) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಆತ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. 2 ತಿಂಗಳ ನಂತರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಶಿವಮೊಗ್ಗದ ವೈದ್ಯರ ಬಳಿ ಕರೆದೊಯ್ದು ಪರೀಕ್ಷಿಸಿದಾಗ ಆಕೆ 2 ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿತ್ತು.

    ವೈದ್ಯರ ಸೂಚನೆ ಮೇರೆಗೆ ಬಾಲಕಿಯನ್ನು ಶಿವಮೊಗ್ಗ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿರುವ ಸಖಿ ಕೇಂದ್ರಕ್ಕೆ ದಾಖಲಿಸಲಾಗಿತ್ತು. ನಂತರ ಆಕೆ ನೀಡಿದ ದೂರಿನ ಮೇರೆಗೆ ಹೊನ್ನಾಳಿ ಪೊಲೀಸ್ (Police) ಠಾಣೆಯಲ್ಲಿ ಸಂತೋಷ್ ವಿರುದ್ಧ ಪೋಕ್ಸೋ ಪ್ರಕರಣ (POCSO Case) ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ಟಿ.ವಿ.ದೇವರಾಜ್, ಸಂತೋಷ್‌ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಶ್ರೀರಾಮ ನಾರಾಯಣ ಹೆಗಡೆಯವರಿದ್ದ ಏಕಸದಸ್ಯ ಪೀಠ, ಆಪರಾಧಿಯ ಆರೋಪ ಸಾಬೀತಾಗಿದ್ದರಿಂದ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ವಸೂಲು ಮಾಡಿದ ದಂಡದ ಒಟ್ಟು ಮೊತ್ತ 30,000 ರೂ.ಗಳನ್ನು ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

  • 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

    1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

    ದಾವಣಗೆರೆ: ಹೊನ್ನಾಳಿ (Honnalli) ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ(MP Renukacharya) ಸಹೋದರನ ಪುತ್ರನ ಸಾವು ಪ್ರಕರಣ ಕೊನೆಗೂ ಫೈನಲ್‌ ಟಚ್‌ ಪಡೆದುಕೊಂಡಿದೆ.

    ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಕೊನೆಗೂ ಅಂತ್ಯಕಂಡಿದೆ.

    ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್

    ಕಳೆದ ನವೆಂಬರ್‌ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ (Chandrashekhar) ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.

    ಎಫ್‌ಎಸ್‌ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ